Tag: Vijay Nirani

  • ಮಾಜಿ ಸಚಿವ ಮುರುಗೇಶ್‌ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಸೂಚನೆ

    ಮಾಜಿ ಸಚಿವ ಮುರುಗೇಶ್‌ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಸೂಚನೆ

    ನವದೆಹಲಿ: ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ಹಾಗೂ ಉದ್ಯಮಿ ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

    ಕಾನೂನು ಪ್ರಕಾರ ತನಿಖೆ ನಡೆಸುವಂತೆ ಸುಪ್ರೀಂ ಸೂಚಿಸಿದೆ. ತ್ಯಾಜ್ಯ ಘಟಕವೊಂದರಲ್ಲಿ ಸಂಭವಿಸಿದ ಅಪಘಾತದಲ್ಲಿ ಅರು ಮಂದಿ ಮೃತಪಟ್ಟಿದ್ದರು. ಇದೇ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ನಡೆಸದಂತೆ ಕರ್ನಾಟಕ ಹೈಕೋರ್ಟ್ ಎರಡು ವರ್ಷಗಳ ಹಿಂದೆ ಆದೇಶಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ತಳ್ಳಿ ಹಾಕಿದೆ. ನ್ಯಾ. ಸಂಜಯ್ ಕರೋಲ್ ಹಾಗೂ ಸಂದೀಪ್ ಮೆಹ್ತಾ ಅವರ ಪೀಠದಿಂದ ಆದೇಶ ಹೊರಬಂದಿದೆ.

    ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿದ್ದಾರೆ ವಿಜಯ್ ನಿರಾಣಿ. ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್‌‌ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು ಸ್ಥಾಪಿಸಿದ್ದರು. ಆ ಘಟಕಕ್ಕೆ ಅನುಮತಿ ಪಡೆದಿರಲಿಲ್ಲ. ಘಟಕದಲ್ಲಿ 2018ರ ಡಿ. 16ರಂದು ಬಾಯ್ಲರ್ ಸ್ಫೋಟಗೊಂಡಿತ್ತು. ದುರ್ಘಟನೆಯಲ್ಲಿ ಆರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.

    ಪ್ರಾಥಮಿಕ ತನಿಖೆ ನಡೆಸಿದ್ದ ಪೊಲೀಸರು ವಿಜಯ್ ನಿರಾಣಿಯವರ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿತ್ತು.

  • ಏಷ್ಯಾದಲ್ಲೇ ಅತಿ ಹೆಚ್ಚು ಎಥೆನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ: ವಿಜಯ್ ನಿರಾಣಿ

    ಏಷ್ಯಾದಲ್ಲೇ ಅತಿ ಹೆಚ್ಚು ಎಥೆನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ: ವಿಜಯ್ ನಿರಾಣಿ

    ಬೆಂಗಳೂರು: ಏಷ್ಯಾದಲ್ಲೇ (Asia) ಅತಿ ಹೆಚ್ಚು ಎಥೆನಾಲ್ (Ethanol) ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ (Karnataka). ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಸಾಕಷ್ಟು ಅವಕಾಶಗಳಿದ್ದು, ಉದ್ಯಮಿಗಳು ಮುಂದೆ ಬರಬೇಕು ಎಂದು ಎಂಆರ್‌ಎನ್‌ (MNR Group) ಸಮೂಹದ ವ್ಯವಸ್ಥಾಪಕ ನಿದೇರ್ಶಕ ವಿಜಯ್ ಎಂ.ನಿರಾಣಿ (Vijay Nirani)  ಕರೆ ನೀಡಿದ್ದಾರೆ.

    ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka)  ಗುರುವಾರ ಇಂಧನ ಕ್ಷೇತ್ರ ಕುರಿತ ಸಂವಾದಲ್ಲಿ ಪಾಲ್ಗೊಂಡು ಮಾತನಾಡಿದ ವಿಜಯ್ ನಿರಾಣಿ, ಏಷ್ಯಾದಲ್ಲೇ ಅತಿ ಹೆಚ್ಚು ಎಥೆನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಪವನ ಹಾಗೂ ಸೌರ ವಿದ್ಯುತ್ ಉತ್ಪಾದನೆ ಯೋಜನೆಯನ್ನು ಅಭಿವೃದ್ಧಿಪಡಿಸಿ, ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸಲು ಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ಡೀಸೆಲ್ ಮತ್ತು ಪೆಟ್ರೋಲ್ ದರ ದಿನೇದಿನೇ ಹೆಚ್ಚುತ್ತಿದ್ದು, ಈ ತೈಲಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು. ಅದಕ್ಕಿರುವ ಪರ್ಯಾಯ ಮಾರ್ಗ ಎಥೆನಾಲ್ ಬಳಕೆ. ಪರಿಸರ ಸ್ನೇಹಿ ಎಥೆನಾಲ್ ಹೆಚ್ಚುತ್ತಿರುವ ಜಾಗತಿಕ ತಾಪಮಾನ ತಡೆಗಟ್ಟಲು ಸಹಕಾರಿ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಜಯ್ ನಿರಾಣಿ, ರಾಜ್ಯದಲ್ಲಿ ಎಥೆನಾಲ್‌ನಂತಹ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಸಾಕಷ್ಟು ಅವಕಾಶವಿದೆ. ಕಬ್ಬಿನಿಂದ ಸಕ್ಕರೆ ಉತ್ಪಾದನೆ ಮಾತ್ರವಲ್ಲದೇ, ಎಥೆನಾಲ್ ಸೇರಿದಂತೆ ಕಬ್ಬಿನ ಹಲವಾರು ಉಪ ಉತ್ಪನ್ನಗಳನ್ನು ತಯಾರಿಸಬಹುದು. ಪೆಟ್ರೋಲ್, ಡೀಸೆಲ್ ಜೊತೆಗೆ 20 ಪ್ರತಿಶತ ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುವ ಮೋದಿಯವರ ಆಶಯವನ್ನು ನಾವು ಈಗಾಗಲೇ ಸಾಧಿಸಿದ್ದೇವೆ. ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಪೂರೈಸುವ ಸಾಮರ್ಥ್ಯವನ್ನು ಗಳಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ರೈತರ ಆದಾಯವನ್ನು ದ್ವಿಗುಣಗೊಳಿಸುವ ಮೋದಿಯವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಎಂಆರ್‌ಎನ್‌ ಸಮೂಹ ಕೆಲಸ ಮಾಡುತ್ತಿದೆ. ಕಬ್ಬಿನ ಉಪ ಉತ್ಪನ್ನಗಳ ಸಮಪರ್ಕ ಬಳಕೆ, ಕೃಷಿ ಆಧಾರಿತ ಉದ್ಯಮಕ್ಕೆ ಒತ್ತು ನೀಡಿದ್ದೇವೆ. ಜೊತೆಗೆ, ಡೀಸೆಲ್ ಇಂಜಿನ್‍ಗಳನ್ನು ಬಯೋ-ಸಿಎನ್‍ಜಿ ಇಂಜಿನ್ ಟ್ರ್ಯಾಕ್ಟರ್‌ಗಳಾಗಿ ಪರಿವರ್ತಿಸುವ ಮೂಲಕ ಅವರ ರೈತರ ಆರ್ಥಿಕ ಹೊರೆ ತಗ್ಗಿಸುವಲ್ಲಿ ನೆರವಾಗುತ್ತಿದ್ದೇವೆ. ಜಾಗತಿಕವಾಗಿ ಬ್ರ್ಯಾಂಡ್ ಇಂಡಿಯಾಗೆ ಕರ್ನಾಟಕವು ಅತಿದೊಡ್ಡ ಕೊಡುಗೆಯನ್ನು ನೀಡಿದೆ. ವಿಶೇಷವಾಗಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಸ್ಥಾನಗಿಟ್ಟಿಸಿಕೊಂಡಿದೆ. ಮುಂಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ವಸ್ತು ರಫ್ತು ಮಾಡುವಲ್ಲಿ ಭಾರತ ಮುಂಚೂಣಿಗೆ ಬರುವ ಕನಸು ನನಸು ಆಗುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ. ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್ ವಸ್ತುಗಳ ಆಮದನ್ನು ತಗ್ಗಿಸುವುದು ನಮ್ಮ ಮುಂದಿನ ಗುರಿಯಾಗಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕಾಶಿ ದರ್ಶನ ಮೊದಲ ಟ್ರಿಪ್‌ನ ಎಲ್ಲಾ ಸೀಟ್‌ ಭರ್ತಿ – ನ. 23ಕ್ಕೆ ಎರಡನೇ ಪ್ರವಾಸ

    ಈ ಮೊದಲು ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ನಿರೀಕ್ಷೆ ಇತ್ತು. ಈಗ ನಮ್ಮ ನಿರೀಕ್ಷೆಗೂ ಮೀರಿ ಮೊತ್ತ ದುಪ್ಪಟ್ಟಾಗುವ ಸಾಧ್ಯತೆ ಇದೆ. ಇದರಿಂದ ಕರ್ನಾಟಕ ಉದ್ಯಮ ಸ್ನೇಹಿ ರಾಜ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಗ್ರಮಾನ್ಯ ಉದ್ಯಮಿಗಳನ್ನು ಒಂದೇ ವೇದಿಕೆಯಡಿ ಕರೆ ತರುವಲ್ಲಿ ಈ ಸಮಾವೇಶ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಂವಾದದಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್, ಪೆಟ್ರೋನಸ್ ಹೈಡ್ರೋಜನ್ ಕಂಪನಿ ಸಿಇಓ ಅದ್ಲಾನ್ ಅಹ್ಮದ್, ಹಿಟಾಚಿ ಎನರ್ಜಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ವೇಣು ನುಗೂರಿ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಕ್ಕೆ ವಂಚನೆ ಮಾಡಿಲ್ಲ, ಕ್ಷಮೆ ಕೇಳದಿದ್ದರೆ, ಕಾನೂನು ಹೋರಾಟದ ಎಚ್ಚರಿಕೆ: ವಿಜಯ್ ನಿರಾಣಿ ಸ್ಪಷ್ಟನೆ

    ಸರ್ಕಾರಕ್ಕೆ ವಂಚನೆ ಮಾಡಿಲ್ಲ, ಕ್ಷಮೆ ಕೇಳದಿದ್ದರೆ, ಕಾನೂನು ಹೋರಾಟದ ಎಚ್ಚರಿಕೆ: ವಿಜಯ್ ನಿರಾಣಿ ಸ್ಪಷ್ಟನೆ

    ಬೆಂಗಳೂರು: ಸರ್ಕಾರಕ್ಕೆ ಯಾವುದೇ ರೀತಿಯಲ್ಲೂ ವಂಚನೆಮಾಡದೆ, ಕಾನೂನಿನ ಪ್ರಕಾರವೇ ಕಾರ್ಮಿಕರಿಗೆ ಸಕಾಲಕ್ಕೆ ಸರಿಯಾಗಿ ತಿಂಗಳ ವೇತನ, ರೈತರಿಗೆ ಹಣ ಪಾವತಿ ಹಾಗೂ ಶಾಸನಬದ್ಧವಾಗಿ ಶುಲ್ಕವನ್ನು ಭರಿಸಿದ್ದೇವೆ ಎಂದು ನಿರಾಣಿ ಶುಗಸ್9 ನ ವ್ಯವಸ್ಥಾಪಕ ನಿದೇರ್ಶಕ ವಿಜಯ್ ನಿರಾಣಿ ಅವರು ತಮ್ಮ ಸಂಸ್ಥೆ ಮೇಲೆ ಕೇಳಿ ಬಂದಿರುವ ಆರೋಪವನ್ನುಸರಾಸಾಗಾಟಾಗೆ ನಿರಾಕಾರಿಸಿದ್ದಾರೆ.

    ಸಾಮಾಜಿಕ ಕಾರ್ಯಕರ್ತ ಡಾ.ಹೆಚ್.ಎನ್. ರವೀಂದ್ರ ಅವರು, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ವಂಚನೆ ಮಾಡಲಾಗಿದೆ ಎಂದು ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಕ್ಕೆ ದೂರು ನೀಡಿರುವ ಸಂಬಂಧ ಸುಧೀರ್ಘ ಸೃಷ್ಟನೆ ನೀಡಿರುವ ವಿಜಯ್ ನಿರಾಣಿ ಅವರು, ಕಾನೂನು ಬದ್ಧವಾಗಿಯೇ ವ್ಯವಹಾರ ನಡೆಸುತ್ತಿದ್ದು ಎಲ್ಲಿಯೂ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

    ನಷ್ಟಕ್ಕೆ ಸಿಲುಕಿದ್ದ ಕಾರ್ಖಾನೆಯನ್ನು ಕೊವಿಡ್ ಸಂಕಷ್ಟದ ನಡುವೆಯೂ ಅತಿ ಕಡಿಮೆ ಅವಧಿಯಲ್ಲಿ ಮರುಪ್ರಾರಂಭಿಸಿದ್ದೇವೆ. ಸುಖಾಸುಮ್ಮನೆ ತಮ್ಮ ಹಾಗೂ ನಿರಾಣಿ ಶುಗಸ್9 ಮೇಲೆ ಸುಳ್ಳು ಆರೋಪ ಮಾಡಿರುವ ಡಾ.ರವೀಂದ್ರ ಕೂಡಲೇ ಕ್ಷೆಮೆಯಾಚಿಸಬೇಕು ಇಲ್ಲದಿದ್ದರೆ, ಕಾನೂನು ಕ್ರಮಜರುಗುಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಯಾವುದೇ ಸಂಸ್ಥೆ ಇಲ್ಲವೇ ವ್ಯಕ್ತಿಯೊಬ್ಬರ ಬಗ್ಗೆ ಸತ್ಯಾಸತ್ಯತೆಯನ್ನು ಅರಿತು ಡಾ.ರವೀಂದ್ರ ಅವರು ಮಾತನಾಡಬೇಕು. ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದು ಆಧಾರರಹಿತವಾಗಿ ಆರೋಪ ಮಾಡುವುದು ತಪ್ಪು. ಈ ಕೂಡಲೇ ತಮ್ಮ ಸಂಸ್ಥೆ ವಿರುದ್ಧ ನೀಡಿರುವ ಹೇಳಿಕೆಯನ್ನು ಸಾರ್ವಜನಿಕವಾಗಿ ಹಿಂಪಡೆದು ಕ್ಷಮಾಪಣೆ ಕೇಳಬೇಕು. ಇಲ್ಲವಾದಲ್ಲಿ ಅವರ ಮೇಲೆ ಮಾನನಷ್ಟ ಮೊಕದ್ದಮೆಹೂಡಲಾಗುವುದು ಎಂದು ಎಚ್ಚರಿಸಿದ್ದಾರೆ.

    ಸರ್ಕಾರಕ್ಕೆ ವಂಚನೆ ಮಾಡುವ ಪ್ರಮೇಯವೇ ಬರುವುದಿಲ್ಲ. ಏಕೆಂದರೆ ನಾವು ಕಾನೂನಿನ ಪ್ರಕಾರವೇ ಎಲ್ಲಾ ಪ್ರಕ್ರಿಯೆಗಳನ್ನು ನಡೆಸುತ್ತಿದ್ದೇವೆ. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಡಾ.ರವೀಂದ್ರ ಆರೋಪ ಮಾಡಿ ಎಸಿಬಿಗೆ ದೂರು ಸಲ್ಲಿಸಿದ್ದು, ಅವೆಲ್ಲವೂ ನಿರಾಧಾರವಾಗಿವೆ. ನಮ್ಮ ಏಳ್ಗೆಯನ್ನು ಸಹಿಸದೆ ನಿರಾಣಿ ಸಮೂಹದ ಮೇಲೆ ಕೇವಲ ಬಿಟ್ಟಿ ಪ್ರಚಾರ ಪಡೆಯುವದುರುದ್ದೇಶದಿಂದ ಅವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸ್ಥಗಿತಗೊಂಡಿದ್ದ ಕಾರ್ಖಾನೆಯನ್ನು ಗುತ್ತಿಗೆ ಪಡೆದು ಕೋವಿಡ್ ಲೆಕ್ಕಿಸದೇ ಅತ್ಯಂತ ಕಡಿಮೆ ಅವಧಿಯಲ್ಲಿ ಪುನರುಜ್ಜೀವನಗೊಳಿಸಿ ಕಾರ್ಖಾನೆ ಪ್ರಾರಂಭಿಸಿ, ಸ್ಥಳೀಯರಿಗೆ ಹೆಚ್ಚಿನ ಪ್ರಮಾಣದಲ್ಲಿಉದ್ಯೋಗಗಳನ್ನು ನೀಡಲಾಗಿದೆ. ಕಾರ್ಮಿಕರ ವೇತನ, ರೈತರ ಬಿಲ್ ಪಾವತಿ, ಗುತ್ತಿಗೆದಾರರು, ಕಬ್ಬು ಕಟಾವುದಾರರು, ವಾಹನ ಬಾಡಿಗೆದಾರರ ಹಣ ಎಲ್ಲವನ್ನು ಸಕಾಲಕ್ಕೆ ನಿಯಮಿತವಾಗಿ ನೀಡುತ್ತಾ ಬಂದಿದ್ದೇವೆ ಎಂದು ಹೇಳಿದ್ದಾರೆ.

    ಕಳೆದ ವರ್ಷ ಟ್ರಯಲ್ ಅವಧಿಯಲ್ಲಿ 8 ಕೋಟಿ ರೂ. ನಷ್ಟ ಅನುಭವಿಸಿದರೂ ಸಕಾಲಕ್ಕೆ ರೈತರ ಬಿಲ್ ಪಾವತಿ ಮಾಡಲಾಗಿದೆ. ಎಲ್ಲಾ ಶಾಸನಬದ್ಧ ಶುಲ್ಕಗಳನ್ನು ನಿಯಮಿತವಾಗಿಪಾವತಿಸಿದ್ದೇವೆ. ಕಾರ್ಖಾನೆ ವಿಸ್ತರಣೆಗೆ 5 ವರ್ಷಗಳ ಕಾಲಮಿತಿ ಇದ್ದರೂ, ಶಾಸನಬದ್ದವಾಗಿ ಹಸ್ತಾಂತರವಾಗದಿದ್ದರೂ ಕಾರ್ಖಾನೆ ಸುಸ್ಥಿರವಾಗಿ ನಡೆಯಬೇಕು ಎಂಬ ಸದುದ್ದೇಶದಿಂದ 50 ಕೋಟಿ ರೂ. ಹಣ ಹೂಡಿಕೆ ಮಾಡಿ ಕೇವಲ ಒಂದೇ ವರ್ಷದಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ 3,500 ಟಿಸಿಡಿಯಿಂದ 5,000 ಟಿಸಿಡಿ ಮೇಲ್ದರ್ಜೆಗೆ ಏರಿಸಿದ್ದೇವೆ ವಿಜಯ್ ನಿರಾಣಿ ಅವರು ತಿಳಿಸಿದ್ದಾರೆ.

    ಕಾರ್ಖಾನೆಯಲ್ಲಿದ್ದ ಎಲ್ಲ ನಿರಪಯುಕ್ತ (ಸ್ಕ್ರ್ಯಾಪ್) ವಸ್ತು ಮಾರಿದ್ದಕ್ಕೂ ಪ್ರತ್ಯೇಕವಾಗಿ ಲೆಕ್ಕ ಇಡಲಾಗಿದೆ. ಡಿಸ್ಟಿಲರಿ ಘಟಕಸ್ಥಾಪನೆಗೆ ಎಲ್ಲ ಯೋಜನೆ ಹಾಕಿಕೊಂಡಿದ್ದೂ ಸರ್ಕಾರ ಸ್ಥಳ ಗುರುತಿಸಿ ಕೊಟ್ಟರೇ ಶೀಘ್ರವೇ ಕೆಲಸ ಪ್ರಾರಂಭವಾಗುತ್ತದೆ. ಕಾರ್ಮಿಕ ಹಾಗೂ ರೈತ ಸ್ನೇಹಿಯಾಗಿ ಕಾರ್ಖಾನೆಯನ್ನು ನಡೆಸಬೇಕು ಎಂಬ ಒಂದೇ ಉದ್ದೇಶದಿಂದ ಇದನ್ನು ಮಾಡಲಾಗಿದೆ. ರೈತರು ಹಾಗೂ ಕಾರ್ಮಿಕರ ಬಗ್ಗೆ ತಮಗಿರುವ ಬದ್ಧತೆಯನ್ನು ಇದು ತೋರಿಸುತ್ತದೆ ಎಂದಿದ್ದಾರೆ.

    ದೀರ್ಘ ಕಾಲದ ಗುತ್ತಿಗೆಯ ಅವಧಿಯನ್ನು ಪ್ರಶ್ನೆ ಮಾಡುತ್ತಿರುವಅವರಿಗೆ ಅದೊಂದು ಸರ್ಕಾರದ ನಿರ್ಧಾರ ಎಂಬ ಕನಿಷ್ಠ ಜ್ಞಾನವೂ ರವೀಂದ್ರ ಅವರಿಗೆ ಇಲ್ಲ ತಿರುಗೇಟು ನೀಡಿದ್ದಾರೆ. ಗುತ್ತಿಗೆಯನ್ನು ಸಹಕಾರಿ ಸಕ್ಕರೆ ಕಾರ್ಖಾನೆಗಳ ಇತಿಹಾಸದಲ್ಲೆ ಅತಿಹೆಚ್ಚು ಬೆಲೆಗೆ ಬಿಡ್ ಮಾಡಿ ಸರ್ಕಾರದ ಕರಾರಿನಂತೆ ಲೀಜ್ಪಡೆಯಲಾಗಿದೆ. 1 ಕೋಟಿ ರೂ. ಇ.ಎಂ.ಡಿ ಹಾಗೂ ಭದ್ರತಾ ಠೇವಣಿ5 ಕೋಟಿ ರೂ.ಯನ್ನು ಈಗಾಗಲೇ ಸಂದಾಯ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ

    ಮೊದಲ ಕಂತಿನ 20 ಕೋಟಿ ರೂ. ಹಣ ಕಟ್ಟಲು ಪ್ರಾರಂಭದ ದಿನದಿಂದಲೂ ಇಂದಿನವರೆಗೂ ನಾವು ಸಿದ್ಧರಿದ್ದೇವೆ. ಆದರೆ 20 ಕೋಟಿ ರೂ. ಹಣವನ್ನು ಸರ್ಕಾರಕ್ಕೆ ಕಟ್ಟುವ ಕುರಿತು ಮಾತನಾಡುವ ಮುನ್ನ ಗುತ್ತಿಗೆ ಕರಾರು ಪತ್ರವನ್ನು ಒಮ್ಮೆ ಸರಿಯಾಗಿ ಓದಿಕೊಂಡು ನಮ್ಮ ಮೇಲೆ ಆರೋಪ ಮಾಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

    ಗುತ್ತಿಗೆ ಪಡೆಯುವ ಮೊದಲು ಕಾರ್ಖಾನೆಯ ಮೇಲೆ ವಿವಿಧ ಹಣಕಾಸು ಸಂಸ್ಥೆಗಳ ಋಣಭಾರವಿತ್ತು. ಈ ಋಣಭಾರವನ್ನು ಸರ್ಕಾರ ತೆರೆವುಗೊಳಿಸಿದ ಕೊಟ್ಟ ನಂತರ ಮೊದಲ ಕಂತಿನ ಹಣವನ್ನು ಪಾವತಿಸಬೇಕು ಎಂದು ನಿಬಂಧನೆಯಿದೆ. ಈ ಕುರಿತು ಸದರಿ ಋಣಭಾರಗಳನ್ನು ತೆರವುಗೊಳಿಸಿ ಕೊಡಲು ಸರ್ಕಾರಕ್ಕೆ ಪ್ರಾರಂಭದ ದಿನದಿಂದಲೂ ಅನೇಕ ಬಾರಿ ವಿನಂತಿ ಮಾಡಿಕೊಂಡಿದ್ದೇವೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ

    ಸರ್ಕಾರ ಋಣಭಾರ ತೆರವುಗೊಳಿಸದಿದ್ದರಿಂದ ಹಣ ಕಟ್ಟಿಲ್ಲ. ಸರ್ಕಾರದ ಈ ವಿಳಂಬದಿಂದ ನಮಗೂ ತೊಂದರೆಯಾಗಿದೆ. ಬೇರೆ ಹಣಕಾಸು ಸಂಸ್ಥೆಗಳ ಋಣಭಾರ ಇರುವುದರಿಂದ ನಮಗೂ ಹಣಕಾಸಿನ ಸೌಲಭ್ಯ ದೊರೆಯುತ್ತಿಲ್ಲ ಹಾಗೂ ಶಾಸನಬದ್ದವಾಗಿಹಸ್ತಾಂತರ ಪ್ರಕ್ರಿಯೆ ಸಾಧ್ಯವಾಗುತ್ತಿಲ್ಲ ಎಂದು ಈಗಿರುವಪರಿಸ್ಥಿತಿಯನ್ನು ತೆರೆದಿಟ್ಟಿದ್ದಾರೆ.

    ಹೊಸ ಕಾರ್ಖಾನೆ ಸ್ಥಾಪಿಸುವವರಿಗೆ ನೊಂದಣಿ ಸಮಯದಲ್ಲಿ ಮುದ್ರಾಂಕ ಶುಲ್ಕ ವಿನಾಯತಿ ಸೌಲಭ್ಯವಿದೆ. ಆದರೆ ಸ್ಥಗಿತಗೊಂಡ ಕಾರ್ಖಾನೆ ಮರುಪ್ರಾರಂಭಿಸುವವರಿಗೆ ಈ ಸೌಲಭ್ಯ ದೊರೆಯುತ್ತಿಲ್ಲ. ಈ ಕುರಿತು ಆರ್ಥಿಕ ಇಲಾಖೆಗೆ ಮನವಿ ಮಾಡಿಕೊಳ್ಳಲಾಗಿದೆ. ಇಲಾಖೆಯ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಮುದ್ರಾಂಕ ಶುಲ್ಕ ವಿನಾಯಿತಿ ಸಿಕ್ಕರೆ 405 ಕೋಟಿ ಒಟ್ಟು ಮೊತ್ತಕ್ಕೆ ಕಟ್ಟಬೇಕಾದ 26 ಕೋಟಿ ಮುದ್ರಾಂಕಶುಲ್ಕದ ಹೊರೆ ಕಡಿಮೆಯಾಗುತ್ತದೆ.

    21 ಜನ ಉದ್ಯೋಗಿಗಳನ್ನು ಕೆಲಸದಿಂದ ನಾವು ಬಿಡುಗಡೆಗೊಳಿಸಿಲ್ಲ. ಅದು ಪಿ.ಎಸ್.ಎಸ್.ಕೆ ಆಡಳಿತ ಮಂಡಳಿ ನಿರ್ಧಾರ. ಅದಕ್ಕೂ ನಮಗೂ ಸಂಬಂಧವಿಲ್ಲ. ಕಾರ್ಖಾನೆಯ ಎಲ್ಲ ಹಳೆಯ ಉದ್ಯೋಗಿಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ದೂರಿನಲ್ಲಿರುವ ಆರೋಪವನ್ನು ನಿರಾಕರಿಸಿದ್ದಾರೆ

    ಕಾರ್ಖಾನೆ ಪ್ರಾರಂಭಿಸುವ ಮೊದಲೇ ಅವರಿಗೆ ಶೇ. 25 ವೇತನಬಡ್ತಿ ನೀಡಿದ್ದೇವೆ. ಮಂಡ್ಯ ಭಾಗದ 350 ನಿರುದ್ಯೋಗಿಯುವಕರಿಗೆ ಹೊಸ ಉದ್ಯೋಗ ನೀಡಿದ್ದೇವೆ. ತಿಂಗಳ ಮೊದಲವಾರದಲ್ಲಿಯೇ ನಿಯಮಿತವಾಗಿ ವೇತನ ನೀಡಲಾಗುತ್ತದೆ. ಐತಿಹಾಸಿಕ ಹಿನ್ನೆಲೆ ಹೊಂದಿದ ಒಂದು ಕಾರ್ಖಾನೆ ರೋಗಗ್ರಸ್ತವಾಗಿ ಸ್ಥಗಿತಗೊಂಡಾಗ ಸಾಮಾಜಿಕ ಕಳಕಳಿಯಿಂದನಿರಾಣಿ ಸಮೂಹ ಕಾರ್ಖಾನೆಯನ್ನು ಲೀಜ್ ಪಡೆದಿದೆ ಎಂದು ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ

    ನಾವು ತೆಗೆದುಕೊಂಡ ತೀರ್ಮಾನದ ಫಲವಾಗಿ ಪಿಎಸ್‍ಎಸ್‍ಕೆ ಇಂದು ಸುಸ್ಥಿರವಾಗಿದ್ದು, ಮಂಡ್ಯ ಹಾಗೂ ಮೈಸೂರು ಭಾಗದ ರೈತರ ಬೆಳೆಗೆ ನಿಶ್ಚಿತ ಮಾರುಕಟ್ಟೆ ಹಾಗೂ ನಿಶ್ಚಿತ ಬೆಲೆ ದೊರಕಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿದೆ ಎಂದು ಹೇಳಿದ್ದಾರೆ.

    ಕೊವಿಡ್‍ನಂತಹ ಸಂಕಷ್ಟದ ದಿನಗಳಲ್ಲಿಯೂ ಸ್ಥಗಿತಗೊಂಡ ಕಾರ್ಖಾನೆ ಸುಸ್ಥಿರವಾಗಿ ನಡೆಯುತ್ತಿರುವುದನ್ನು ನೋಡಿ ಸ್ವಾಭಿಮಾನಿ ಮಂಡ್ಯ ರೈತರು ಸಂತಸ ಪಡುತ್ತಿದ್ದಾರೆ. ಇದನ್ನು ಸಹಿಸದೇ ಅಪಪ್ರಚಾರ ಮಾಡುವುದು ಮೂರ್ಖತನದ ಪರಮಾವಧಿ ಎಂದು ಟೀಕಿಸಿದ್ದಾರೆ.

    ಮತ್ತೊಬ್ಬರ ಮೇಲೆ ಆರೋಪ ಹೊರಿಸುವ ಬದಲು ಸಾಮರ್ಥ್ಯವಿದ್ದರೆ ತಾವೇ ಮುಂದೆ ಬಂದು ಕಾರ್ಖಾನೆನಡೆಸಬಹುದು. ಎಂದು ವಿಜಯ ನಿರಾಣಿ ಅವರು ಡಾ.ರವೀಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.