ಕಿಚ್ಚ ಸುದೀಪ್ (Sudeep) ನಟಿಸುತ್ತಿರುವ ಬಹುನಿರೀಕ್ಷಿತ ಮಾರ್ಕ್ (Mark) ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಅನೂಪ್ ಭಂಡಾರಿ (Anup Bhandari) ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ವಿಜಯ್ ಪ್ರಕಾಶ್, ಅಜನೀಶ್ ಲೋಕನಾಥ್ ಹಾಗೂ ಅನಿರುದ್ಧ ಶಾಸ್ತ್ರಿ ಕಂಠ ಕುಣಿಸಿದ್ದಾರೆ.
ಸಾಂಗ್ ರಿಲೀಸ್ ಆದ ಬೆನ್ನಲ್ಲೇ ಮಾರ್ಕ್ ಸಿನಿಮಾ ತಂಡ ಸಿನಿಮಾ ಪ್ರೇಮಿಗಳಿಗೆ ಹುಕ್‌ಸ್ಟೆಪ್ ಡ್ಯಾನ್ಸ್ ಚಾಲೆಂಜ್ ನೀಡಿದೆ. ಈ ಸಾಂಗ್ ಪ್ಲೇ ಮಾಡಿಕೊಂಡು, ಹುಕ್ ಸ್ಟೆಪ್ ಹಾಕಬೇಕು. ಕಿಚ್ಚ ಸುದೀಪ್ ಅವರು ಸಾಂಗ್‌ನಲ್ಲಿ ಹಾಕಿದ ಸ್ಟೆಪ್‌ಗಳಲ್ಲಿ ಯಾವುದಾದರೂ ಆಯ್ಕೆ ಮಾಡಿಕೊಂಡು ನೀವೂ ಡ್ಯಾನ್ಸ್ ಮಾಡಬೇಕು. ಬಳಿಕ ಇದನ್ನ ನಿಮ್ಮ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಹ್ಯಾಷ್‌ಟ್ಯಾಗ್ ಜೊತೆ ಪೋಸ್ಟ್ ಮಾಡಬೇಕು. ಅತ್ಯುತ್ತಮ ರೀಲ್ಸ್ ಚಿತ್ರತಂಡದ ಆಫಿಷಿಯಲ್ ಇನ್‌ಸ್ಟಾ ಪೇಜ್‌ನಲ್ಲಿ ಶೇರ್ ಮಾಡಿ ಅವರಿಗೆ ಬಹುಮಾನ ನೀಡಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ. ಇದನ್ನೂ ಓದಿ: ನಟಿಗೆ ಕಿರುಕುಳ – ನಿರ್ಮಾಪಕ ಹೇಮಂತ್ ಕುಮಾರ್ ಅರೆಸ್ಟ್
ನಿರ್ದೇಶಕ ಯೋಗರಾಜ್ ಭಟ್, ಶ್ರೀನಿಧಿ ಹಾಗೂ ಪ್ರಸನ್ನ ಅವರು ನಿರ್ಮಿಸಿರುವ, ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ (Sanjan Kaje) ನಾಯಕನಾಗಿ ನಿಧಿ ಸುಬ್ಬಯ್ಯ (Nidhi Subbaiah), ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) “ಮತ್ತೆ ಮೊದಲಿಂದ” ಬಿಡುಗಡೆಯಾಗಿದೆ. ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ.
ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ ʼಮತ್ತೆ ಮೊದಲಿಂದʼ ಆಲ್ಬಂನ ಮೊದಲ ಹಾಡು ” ಮೋಹದ ಬಣ್ಣ ನೀಲಿ” ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಸಂಗೀತ ನೀಡಿದ್ದಾರೆ.
ಶೀರ್ಷಿಕೆಯನ್ನು ಪರಿಚಯಿಸಿದ ಯೋಗರಾಜ್ ಭಟ್ ಅವರು ಇನ್ನಷ್ಟು ವಿವರ ನೀಡುತ್ತಾ, ಈ ಆಲ್ಬಂನಲ್ಲಿ ನಾಲ್ಕು ಗೀತೆಗಳಿದ್ದು, ನಾಲ್ಕು ಸಂಗೀತ ನಿರ್ದೇಶಕರು, ನಾಲ್ಕು ಗಾಯಕರು, ನಾಲ್ಕು ನಾಯಕಿಯರು ಇರುವುದು ವಿಶೇಷ. ಜೊತೆಗೆ ನವ ಪ್ರತಿಭೆ ಸಂಜನ್ ಕಜೆ ಹೆಸರಿನ ಅಪ್ಪಟ ಕನ್ನಡದ ಕರಾವಳಿ ಮೂಲದ ಯುವ ಪ್ರತಿಭಾನ್ವಿತ ನಟನನ್ನು ಪರಿಚಯಿಸುತ್ತಿದ್ದೇನೆ ಎಂದರು. ಇದನ್ನೂ ಓದಿ: ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ !
ನಾಲ್ಕೂ ಗೀತೆಗಳಿಗೆ ಭಟ್ರ ಸಾಹಿತ್ಯ ಮತ್ತು ನಿರ್ದೇಶನ ಇದ್ದು ಸಂಗೀತ ನಿರ್ದೇಶಕರಾಗಿ ಮನೋ ಮೂರ್ತಿ, ವಿ. ಹರಿಕೃಷ್ಣ, ಚೇತನ್-ಡ್ಯಾವಿ, ಅನಿರುದ್ಧ ಶಾಸ್ತ್ರಿ ಇದ್ದಾರೆ. ವಿಜಯ ಪ್ರಕಾಶ್, ಚೇತನ್ ಸೋಸ್ಕ, ವಾಸುಕಿ ವೈಭವ್, ಅದಿತಿ ಖಂಡೇಗಲ ರವರ ಗಾಯನ ಇದೆ. ನಾಲ್ಕು ಗೀತೆಗಳ ವೀಡಿಯೋದಲ್ಲಿ ಸಂಜನ್ ಕಜೆ ಜೊತೆ ನಿಧಿ ಸುಬ್ಬಯ್ಯ, ಅಮೀತ ಎಸ್. ಕುಲಾಲ್, ದೇವಿಕಾ ಶಿಂಧೆ, ಅಂಜಲಿ ಗೌಡ ನಾಯಕಿಯರಾಗಿ ಜೊತೆಯಾಗಿದ್ದಾರೆ. ಪ್ರಸ್ತುತ ಮೊದಲ ಹಾಡಾಗಿ “ಮೋಹದ ಬಣ್ಣ ನೀಲಿ” ಬಿಡುಗಡೆಯಾಗಿದೆ ಎಂದು ಹೇಳಿದರು.
ಇತ್ತೀಚಿನ ಸುಂದರ ಸಂಜೆಯಲ್ಲಿ ಖ್ಯಾತ ಲೇಖಕರು, ಇತಿಹಾಸ ತಜ್ಞರೂ ಆದ ಧರ್ಮೇಂದ್ರ ಕುಮಾರ್ ಆರೇನಹಳ್ಳಿ ಅವರು ಮೊದಲ ಗೀತೆಯಾದ ʼನಿನ್ನ ಕಣ್ಣು ನೀಲಿʼ (ಮೋಹದ ಬಣ್ಣ ನೀಲಿ) ಹಾಡನ್ನು ಪಂಚರಂಗಿ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿ ಸುಗಮ ಸಂಗೀತ, ಭಾವಗೀತೆಗಳು ವಿರಳವಾಗಿರುವ ಈ ಸಂದರ್ಭದಲ್ಲಿ ಇದೊಂದು ಶ್ಲಾಘನೀಯ ಪ್ರಯತ್ನ ಎಂದು ಯೋಗರಾಜ್ ಭಟ್ಟರನ್ನು ಪ್ರಶಂಶಿಸಿದರು. ತಮ್ಮ ಬಾಲ್ಯದ ದಿನಗಳಲ್ಲಿ ಮೈಸೂರು ಅನಂತಸ್ವಾಮಿಯವರ ಗೀತೆಗಳನ್ನು ಮೈಸೂರಿನಲ್ಲಿ ಕೇಳುತ್ತಿದ್ದದ್ದನ್ನು ನೆನಪು ಮಾಡಿಕೊಳ್ಳುತ್ತಾ ಭಾವಗೀತೆಗಳು ಕನ್ನಡ ನೆಲದ ಸೊಗಡು, ಇದನ್ನು ಉಳಿಸಿ ಬೆಳಸುವುದು ಸಾಹಿತಿಗಳ ಕರ್ತವ್ಯ. ಬಹಳ ವರ್ಷಗಳ ನಂತರ ಅದೇ ರೀತಿಯ ಗೀತೆಯನ್ನು ಕೇಳಿ ತುಂಬಾ ಸಂತೋಷವಾಯಿತು ಎನ್ನುತ್ತಾ ಈ ಗೀತೆಯನ್ನು ಮಾಧುರ್ಯವಾಗಿ ಹಾಡಿದ ವಿಜಯ ಪ್ರಕಾಶ್ ರವರನ್ನು ಪ್ರಶಂಶಿಸುತ್ತಲೇ ಅಭಿನಂದಿಸಿದರು. ಇದನ್ನೂ ಓದಿ: ಮಹಿಳೆಗೆ ಕಾರುಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್
ವಿಜಯ ಪ್ರಕಾಶ್ ರವರು ಮಾತನಾಡುತ್ತಾ ಈ ಗೀತೆಯನ್ನು ಹಾಡಲು ಚಿತ್ರಗೀತೆಗಳಿಗಿಂತ ಹೆಚ್ಚು ಮುತುವರ್ಜಿ ವಹಿಸಿದ್ದಾಗಿ ಹೇಳುತ್ತಾ ರೇಕಾರ್ಡಿಂಗೆ ಬಂದರೂ ಹಾಡದೆ ಗೀತೆಯನ್ನು ಗಂಟೆಗಟ್ಟಲೆ ಕೇಳಿ ಮರುದಿನ ಬಂದು ಹಾಡಿದ್ದಾಗಿ ಹೇಳಿದರು. ಅದಕ್ಕೆ ಕಾರಣ ಈ ಗೀತೆಯಲ್ಲಿನ ವಿಶೇಷತೆ ಮತ್ತು ಸಾಹಿತ್ಯ ಸಾಲುಗಳಲ್ಲಿರುವ ಸೂಕ್ಷ್ಮತೆ. ಹಾಗು ಭಾವಗೀತೆಗಳಿಗಳ ಬಗ್ಗೆ ತಮಗಿರುವ ಅಪಾರ ಗೌರವ, ಪ್ರೀತಿ, ಭಟ್ಟರ ಜೊತೆಗಿನ ಸ್ನೇಹ ಎಲ್ಲವೂ ಸೇರಿ ಗೀತೆಯನ್ನು ಎದೆ ತುಂಬಿ ಮನಸಾರೆ ಹಾಡಿದ್ದಾಗಿ ಹೇಳಿದರು.
ಈ ಗೀತೆಯ ಸಂಗೀತ ನಿರ್ದೇಶಕ ಅನಿರುದ್ಧ ಶಾಸ್ತ್ರಿ ಮಾತನಾಡಿ ಯೋಗರಾಜ್ ಭಟ್ಟರ ಜೊತೆಗಿನ ಸಾಂಗತ್ಯದಲ್ಲಿ ಇದು ನನ್ನ ಚೊಚ್ಚಲ ಸಂಗೀತ ಸಂಯೋಜನೆ. ಇದು ನನಗೆ ತುಂಬಾ ಖುಷಿಕೊಟ್ಟಿದೆ. ಹಿರಿಯ ಮತ್ತು ಖ್ಯಾತ ಸಂಗೀತ ನಿರ್ದೇಶಕರುಗಳ ಸಂಗೀತ ಸಂಯೋಜನೆ ಈ ಆಲ್ಬಂನಲ್ಲಿದ್ದದ್ದು ನನಗೆ ಸವಾಲಿನ ವಿಷಯವಾಗಿತ್ತು ಅದನ್ನು ಸಮರ್ಪಕವಾಗಿ ನಿಭಾಹಿಸಲು ಅವರ ಮತ್ತು ಯೋಗರಾಜ್ ಸರ್ ರವರ ಸಹಕಾರ ಕಾರಣ ಎಂದು ಎಲ್ಲರನ್ನೂ ಸ್ಮರಿಸುತ್ತಾ ಧನ್ಯವಾದ ಹೇಳಿದರು.
ಇನ್ನು ನಾಯಕ ನಟ ಸಂಜನ್ ಕಜೆ ಮಾತನಾಡಿ ನಟನಾ ಕ್ಷೇತ್ರಕ್ಕೆ ನನ್ನನ್ನು ಪರಿಚಯಿಸುತ್ತಿರುವ ಯೋಗರಾಜ್ ಭಟ್ ಸರ್ ರವರಿಗೆ ಅನಂತಾನಂತ ಧನ್ಯವಾದಗಳನ್ನು ಹೇಳಿ ಇಷ್ಟು ದೊಡ್ಡ ವೇದಿಕೆಯನ್ನು ಸೃಷ್ಠಿಸಿಕೊಟ್ಟಿದ್ದಕ್ಕೆ ಸದಾ ಚಿರರುಣಿಯಾಗಿರುತ್ತೇನೆ. ಮುಂದೆ ಸಿನಿಮಾ ಕ್ಷೇತ್ರದಲ್ಲಿ ಯೋಗರಾಜ್ ಭಟ್ಟರ ಮಾರ್ಗದರ್ಶನದೊಂದಿದೆ ಪ್ರಾಮಾಣಿಕವಾಗಿ ಉತ್ತಮ ನಟನಾಗಿ ಸಿನಿ ಪ್ರಿಯರ ಮುಂದೆ ಬರುತ್ತೇನೆ. ಎಲ್ಲಾ ಸಿನಿ ರಸಿಕರ ಆಶೀರ್ವಾದ ಕೋರುತ್ತೇನೆ. ಎಂದು ಹೇಳಿ ಆಲ್ಬಂನ ಎಲ್ಲಾ ಸಂಗೀತ ನಿರ್ದೇಶಕರನ್ನು, ಗಾಯಕರನ್ನು ಸ್ಮರಿಸಿ ಧನ್ಯವಾದ ಹೇಳಿದರು.
ಯೋಗರಾಜ್ ಭಟ್, ಶ್ರೀನಿಧಿ, ಪ್ರಸನ್ನ ರವರು ಮತ್ತೆ ಮೊದಲಿಂದ ಆಲ್ಬಂನ ನಿರ್ಮಾಪರಾಗಿದ್ದಾರೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇನ್ನುಳಿದ ಮೂರು ಗೀತೆಯನ್ನು ಬಿಡುಗಡೆ ಮಾಡುವುದಾಗಿ ಯೋಗರಾಜ್ ಭಟ್ ಮತ್ತು ತಂಡ ಹೇಳಿಕೊಂಡಿದೆ.
ಶುಕ್ರವಾರ ಅದ್ದೂರಿಯಾಗಿ ಆರತಕ್ಷತೆ ಸಮಾರಂಭ ನಡೆಯಿತು. ರಿಸೆಪ್ಷನ್‌ಗೆ ಗಾಯಕ ವಿಜಯ್ ಪ್ರಕಾಶ್, ನಿರೂಪಕಿ ಅನುಶ್ರೀ, ಬಿಗ್ ಬಾಸ್ ಖ್ಯಾತಿ ಮೋಕ್ಷಿತಾ ಪೈ, ಬಿಗ್‌ಬಾಸ್ ಸೀಸನ್ 11ರ ವಿನ್ನರ್ ಹನುಮಂತ ಲಮಾಣಿ, ಪ್ರಥಮ್, ಸಿಂಗರ್ ಸುನೀಲ್ ಹಾಗೂ ಸರಿಗಮಪ ಸ್ಪರ್ಧಿಗಳು ಕೂಡ ಆಗಮಿಸಿದ್ದರು.
ಪೋಷಕರ ವಿರೋಧದ ನಡುವೆಯೂ ಪೃಥ್ವಿ ಭಟ್ ಅವರು ಮಾ.27 ರಂದು ದೇವಾಲಯವೊಂದರಲ್ಲಿ ಅಭಿಷೇಕ್ ಎಂಬ ಹುಡುಗನ ಜೊತೆ ವಿವಾಹವಾದರು. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಅವರನ್ನು ಪ್ರೀತಿಸಿ ಗಾಯಕಿ ಮದುವೆಯಾಗಿದ್ದರು.
ಪುತ್ರಿ ಪೃಥ್ವಿ ಮದುವೆಗೆ ತಂದೆ ಶಿವಪ್ರಸಾದ್ ವಿರೋಧ ವ್ಯಕ್ತಪಡಿಸಿದ್ದರು. ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದೀಗ ಗಾಯಕಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದಾರೆ.
ಕನ್ನಡದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ (Vijay Prakash) ಗೌರವ ಡಾಕ್ಟರೇಟ್ (Honorary Doctorate)ಗೆ ಪಾತ್ರರಾಗಿದ್ದಾರೆ. ಅವರ ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಕೆನಡಾದ ಗ್ಯಾಬ್ರಿಯಲ್ ವಿಶ್ವ ವಿದ್ಯಾಲಯವು ವಿಜಯ್ ಪ್ರಕಾಶ್ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ.
ಮೂಲತಃ ಮೈಸೂರಿನವರಾದ ವಿಜಯ್ ಪ್ರಕಾಶ್, ಮುಂಬೈನಲ್ಲಿ ನೆಲೆಸಿ, ಎ.ಆರ್ ರೆಹಮಾನ್ ಕಂಪೋಸ್ ಮಾಡಿದ್ದ ಜೈ ಹೋ ಹಾಡಿನ ಮೂಲಕ ಮನೆಮಾತದವರು. ಆನಂತರ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಹಾಡುಗಳನ್ನು ಹಾಡಿದ ಹೆಗ್ಗಳಿಕೆ ಅವರದ್ದು.
ನಾನಾ ಭಾಷೆಗಳ ರಿಯಾಲಿಟಿ ಶೋಗಳಿಗೆ ತೀರ್ಪುಗಾರರಾಗಿ, ಗಾಯಕರಾಗಿ, ಸಂಗೀತ ಸಂಯೋಜಕರಾಗಿ ವಿಜಯ್ ಪ್ರಕಾಶ್ ಕೆಲಸ ಮಾಡಿದ್ದಾರೆ.
ಕನ್ನಡದ ಮೊಟ್ಟ ಮೊದಲ ಪ್ಯಾರಲಲ್ ಸ್ಟೋರಿ ಮೂವಿ ಎಂಬ ಹೆಗ್ಗಳಿಕೆಯೊಂದಿಗೆ ತೆರೆಗೆ ಬರಲು ಸಿದ್ದವಾಗಿದೆ ಹೆಜ್ಜಾರು (Hejjaru) ಸಿನಿಮಾ. ಚಿತ್ರ ತಂಡ ಈಗ ತನ್ನ ಸಿನಿಮಾದ ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸಿದೆ. ಅದರ ಮೊದಲ ಹಂತವಾಗಿ ಚಿತ್ರದ ಮೊದಲನೇ ಹಾಡನ್ನು ಬಿಡುಗಡೆಗೊಳಿಸಿದ್ದು, ಬಿಡುಗಡೆಗೊಂಡ ಕಡಿಮೆ ಸಮಯದಲ್ಲೇ ಅದು ಹಿಟ್ ಲಿಸ್ಟ್ ಸೇರಿರುವ ಸಂಭ್ರಮದಲ್ಲಿದೆ ಚಿತ್ರತಂಡ. ‘ನೀನೇ ಸಾಕಿದಾ ಗಿಣಿ’ ಹಾಡಿನಿಂದ (Song) ‘ಹಂಗೋ ಹಿಂಗೋ ಇದ್ದೇ ನಾನು’ ಹಾಡಿನವರೆಗೂ ಹಿಟ್ ಆಗಿರುವ ಲೆಜೆಂಡರಿ ಬ್ರೇಕಪ್ ಹಾಡುಗಳ ಸಾಲಿಗೆ ‘ಏನೇ ಸಿಕ್ತು ಮಳ್ಳಿ ನಿಂಗೆ?’ ಕೂಡ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ನಿರ್ದೇಶಕ ಹರ್ಷಪ್ರಿಯ (Harshapriya) ಅವರ ಅಭಿಪ್ರಾಯ.
ಪೂರ್ಣಚಂದ್ರ ತೇಜಸ್ವಿ (Poorchandra Tejaswi) ಅವರು ಕಥೆಯ ಇನ್ಟೆನ್ಸಿಟಿ ಬೇಡುವ ವಿಶೇಷ ರೀತಿಯ ಹಾಡುಗಳನ್ನು ಕಂಪೋಸ್ ಮಾಡಿದ್ದು ಈ ಹಾಡಿಗಾಗಿ ತಾವು ಪಟ್ಟ ಪರಿಶ್ರಮ ಈಗ ಫಲ ಕೊಟ್ಟಿರುವುದಕ್ಕೆ ಕೇಳುಗರಿಗೆ ಧನ್ಯವಾದ ತಿಳಿಸಿದ್ದಾರೆ, ಹಿಟ್ ಸಾಂಗ್ಗಳ ಸರದಾರ ವಿಜಯ್ ಪ್ರಕಾಶ್ (Vijay Prakash) ಅವರ ಧ್ವನಿ ಈ ಹಾಡಿಗಿದೆ. ಇನ್ನು ಕಿರುತೆರೆಯ ಪುಟ್ಟಗೌರಿ ಮದುವೆ, ಅಕ್ಕ, ಗೀತಾ, ನಾಗಿಣಿ 2. ರಾಣಿ, ರಾಮಾಚಾರಿ ಮೊದಲಾದ ಯಶಸ್ವೀ ಧಾರಾವಾಹಿಗಳನ್ನು ನಿರ್ಮಿಸಿ ನಿರ್ದೇಶಿಸಿರುವ ಕೆ ಎಸ್ ರಾಮ್ ಜೀ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಭಜರಂಗಿ ಮೋಹನ್ ಕೊರಿಯಾಗ್ರಫಿಯಲ್ಲಿ ಮೂಡಿ ಬಂದಿರುವ ಹುಕ್ ಸ್ಟೆಪ್ಗಳು ಈಗಿನ್ ರೀಲ್ಸ್ ಪ್ರಿಯರಿಗೆ ಹಬ್ಬವಾಗಿವೆ.
ಮೊದಲ ಬಾರಿ ಹಿರಿತೆರೆಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಭಗತ್ ಆಳ್ವಾ ತಮ್ಮ ಮೊದಲ ಚಿತ್ರದಲ್ಲೇ ಇಂತಹದ್ದೊಂದು ಮಾಸ್ ಸಾಂಗಿಗೆ ಹೆಜ್ಜೆ ಹಾಕುವ ಅವಕಾಶ ಸಿಕ್ಕಿದ ಖುಶಿಯಲ್ಲಿದ್ದು ಜನರ ಪ್ರತಿಕ್ರಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಖಾಸಗಿ ಪುಟಗಳು ಚಿತ್ರದಿಂದ ಪರಿಚಿತರಾಗಿರುವ ಲಿಯೋನಿಲ್ಲ ಶ್ವೇತಾ ಡಿಸೋಜಾ ಹೆಜ್ಜಾರು ಚಿತ್ರದ ನಾಯಕ ನಟಿಯಾಗಿದ್ದು , ವಿಶಿಷ್ಟ ಪಾತ್ರಕ್ಕೆ ಜೀವತುಂಬಿದ್ದಾರೆ. ಹತ್ತಾರು ಹಿಟ್ ಧಾರಾವಾಹಿಗಳು ಮತ್ತು ಸಿನೆಮಾಗಳ ಗೀತರಚನಕಾರರಾಗಿ ಜನಪ್ರಿಯರಾಗಿದ್ದ ಹರ್ಷಪ್ರಿಯ ಅವರು ಹೆಜ್ಜಾರು ಚಿತ್ರದ ಮೂಲಕ ನಿರ್ದೇಶಕರಾಗಿದ್ದು, ಸಿನೆಮಾದ ಎಲ್ಲ ಹಾಡುಗಳನ್ನೂ ಅವರೇ ಬರೆದಿದ್ದಾರೆ.
ತಮ್ಮ ಗರಡಿಯಲ್ಲಿ ಪಳಗಿದ ಹರ್ಷಪ್ರಿಯ ಅವರ ಈ ಗೀತೆಯನ್ನು ಮೆಚ್ಚಿರುವ ಪ್ರೇಮಕವಿ ಕಲ್ಯಾಣ್ ತಮ್ಮ ಶಿಷ್ಯನ ಮೊದಲ ಚಿತ್ರಕ್ಕೆ ಶುಭಕೋರಿದ್ದಾರೆ. ಜೊತೆಗೆ ಕನ್ನಡದ ಹಿರಿಯ ನಿರ್ದೇಶಕರುಗಳಾದ ಪ್ರೇಮ್ ಮತ್ತು ಶಶಾಂಕ್ ರವರು ಹಾಡಿನ ಬಗ್ಗೆ ಮೆಚ್ಚುಗೆಯ ಮಾತಾಡಿದ್ದು, ಸಿನೆಮಾ ಬಗ್ಗೆ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
ಚಿತ್ರದ ಕಾನ್ಸೆಪ್ಟ್ ಹೊಸದಾಗಿದ್ದು, ಪೋಸ್ಟರ್, ಪ್ರೊಮೋಷನಲ್ ಪ್ರೋಮೋಗಳಲ್ಲೂ ಚಿತ್ರತಂಡ ಹೊಸ ಹೊಸ ರೀತಿಯ ಪ್ರಯೋಗ ಮಾಡುತ್ತಿದೆ. ಭರವಸೆಯ ಪೋಷಕ ನಟ ಗೋಪಾಲ್ ದೇಶಪಾಂಡೆ ಪ್ರಮುಖ ಪಾತ್ರದಲ್ಲಿದ್ದಾರೆ. ಮತ್ತು ನಾಯಕ, ನಿರ್ದೇಶಕ ನವೀನ್ ಕ್ರಷ್ಣ ಮೊದಲ ಬಾರಿಗೆ ನೆಗಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅರುಣಾ ಬಾಲರಾಜ್ ಕೂಡ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖಾಕಿ ತೊಟ್ಟು ಎಷ್ಟೊಂದು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರೂ ಹೆಜ್ಜಾರುವಿನ ಪಾತ್ರ ಹೊಸ ಬಗೆಯದು ಅಂತ ನಟ ಮುನಿ ಹೇಳಿಕೊಂಡಿದ್ದಾರೆ. ಕ್ಯಾಮೆರಾ ಹಿಂದೆಯೇ ಬಿಸಿಯಾಗಿದ್ದ ವಿನೋದ್ ಭಾರತಿ ನಿರ್ದೇಶಕರ ಕೋರಿಕೆಗೆ ಒಪ್ಪಿ ಕ್ಯಾಮೆರಾ ಮುಂದೆ ಬಂದಿದ್ದು ಇವರೊಂದಿಗೆ ಬಹಳಷ್ಟು ರಂಗಭೂಮಿಯ ಹೊಸ ಕಲಾವಿದರನ್ನು ಈ ಚಿತ್ರದಲ್ಲಿ ಕಾಣಬಹುದಾಗಿದೆ.
ಈಗಾಗಲೇ ಚಿತ್ರ ಫೂಟೇಜ್ ನೋಡಿರುವವರು ಅಮರ್ ಗೌಡ ಅವರ ಕ್ಯಾಮೆರಾ ಕೈಚಳಕವನ್ನು ಮೆಚ್ಚಿದ್ದು ಮಲೆನಾಡಿನ ಮಳೆಯನ್ನು ಅವರು ಸೆರೆ ಹಿಡಿದಿರುವ ರೀತಿ ನೋಡುಗರಿಗೆ ಖಂಡಿತಾ ಇಷ್ಟವಾಗುತ್ತದೆ ಎನ್ನುತ್ತಿದ್ದಾರೆ. ಚಿತ್ರಕ್ಕೆ ಕಾರ್ತಿಕ್ ಭಟ್ ಸಂಭಾಷಣೆ ಬರೆದಿದ್ದು ನರಸಿಂಹ ಸಾಹಸ ಸಂಯೋಚನೆ ಮಾಡಿದ್ದಾರೆ. ಗಿರೀಶ್ ಕನಕಪುರ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸ್ ಆಗುವುದರ ಜೊತೆಗೆ ಕಲಾ ವಿಭಾಗವನ್ನೂ ನಿಭಾಯಿಸಿದ್ದಾರೆ, ಅಜಿತ್ ಡ್ರಾಕುಲಾ ಸಂಕಲನ ಮಾಡಿದ್ದು.. ದಯಾನಂದ್ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಅದ್ಭುತ ಕಂಠದಿಂದಾಗಿ ವಿಶ್ವದಾದ್ಯಂತ ಜನಪ್ರಿಯರಾಗಿರುವ ಗಾಯಕ ವಿಜಯ್ ಪ್ರಕಾಶ್ (Vijay Prakash), ‘ಗನ್ಸ್ ಆ್ಯಂಡ್ ರೋಸಸ್’ (Guns and Roses) ಚಿತ್ರದ ಹಾಡೊಂದನ್ನು (Song) ಹಾಡಿದ್ದಾರೆ. ಶರಣ್ ಕುಮಾರ್ ಬರೆದಿರುವ ‘108 ಗೆ ಫೋನ್ ಮಾಡೊ ಶಿಷ್ಯ. ಸಾವು ಬದುಕಿನ ಮಧ್ಯೆ ಹೋರಾಡೊ ವಿಷ್ಯ’ ಎಂಬ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದು, ಇತ್ತೀಚೆಗೆ ಹೊಸಕೆರೆಹಳ್ಳಿಯ ದ್ವಾರ ಸ್ಟುಡಿಯೋದಲ್ಲಿ ಧ್ವನಿಮುದ್ರವಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್. ಆರ್. ನಟರಾಜ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಹೆಚ್.ಎಸ್. ಶ್ರೀನಿವಾಸ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಶರತ್. ಎಸ್ ಅವರದು. ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಶೋಭ್ ರಾಜ್, ಅವಿನಾಶ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ, ಅಯೋಗ್ಯ ಸಿನಿಮಾದ ‘ಏನಮ್ಮಿ ಏನಮ್ಮಿ’ ಹಾಡು 108 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿತ್ತು. ಇದೀಗ ಮತ್ತೆ ಈ ಜೋಡಿಯ ‘ಸಂಜೆ ಮೇಲೆ ಸುಮ್ನೆ ಹಂಗೆ’ (Sanje Mele) ಹಾಡು ವೈರಲ್ ಆಗಿದೆ. ನಿನ್ನೆಯಷ್ಟೇ ರಿಲೀಸ್ ಆಗಿರುವ ‘ಮ್ಯಾಟ್ನಿ’ (Matinee) ಸಿನಿಮಾದ ಈ ಗೀತೆ ಕಡಿಮೆ ಅವಧಿಯಲ್ಲೇ ಆರು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ವೈರಲ್ ಆಗುತ್ತಿದೆ.
ಪೂರ್ಣಚಂದ್ರ ತೇಜಸ್ವಿ (Purnachandra Tejaswi) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಗೀತೆಗೆ ವಿಜಯ್ ಪ್ರಕಾಶ್ (Vijay Prakash) ದನಿಯಾಗಿದ್ದಾರೆ. ಇಡೀ ಹಾಡನ್ನು ಕಲರ್ ಫುಲ್ ಸೆಟ್ ನಲ್ಲಿ ಚಿತ್ರೀಕರಿಸಿದ್ದಾರೆ ನಿರ್ದೇಶಕ ಮನೋಹರ್. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸಖತ್ತಾಗಿ ಹಾಡುಗಳಿಗೆ ಹೆಜ್ಜೆ ಹಾಕಿದ್ದ ಸತೀಶ್ ಮತ್ತು ರಚಿತಾ ರಾಮ್ ಕೂಡ ಈ ಸಿನಿಮಾದಲ್ಲಿ ಇರುವುದರಿಂದ ಹಾಡುಗಳು (Songs)ನಿರೀಕ್ಷೆ ಮೂಡಿಸಿದ್ದವು.
ಏನಮ್ಮಿ ಏನಮ್ಮಿ ಅಂತ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಜೋಡಿ ಸತೀಶ್ ನೀನಾಸಂ- ರಚಿತಾ ರಾಮ್ ಫೇರ್ ಮತ್ತೆ ಮ್ಯಾಟ್ನಿ ಸಿನಿಮಾದ ಮೂಲಕ ಒಂದಾಗಿದ್ದರಿಂದ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಮನೋಹರ್ ಕಾಂಪಳ್ಳಿ ಕೂಡ ‘ಮ್ಯಾಟ್ನಿ’ ಸಿನಿಮಾವನ್ನು ತಯಾರಿಸಿದ್ದಾರೆ ಎನ್ನುವ ಮಾತಿದೆ. ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.
‘ಮ್ಯಾಟ್ನಿ’ಯ ಟೀಸರ್ ಕಲರ್ ಫುಲ್ ಸೆಟ್, ಮನ ಸೆಳೆಯೋ ಬ್ಯಾಗ್ರೌಂಡ್ ಮ್ಯೂಸಿಕ್, ರಚ್ಚು ಲುಕ್ ಎಲ್ಲವೂ ಕಣ್ಣಿಗೆ ಹಬ್ಬ ನೀಡಿದ್ದರೆ, ಸತೀಶ್ ನೀನಾಸಂ ಪ್ರೇಮ ನಿವೇದನೆ, ಪ್ರೀತಿಯ ಸಾಲುಗಳು ಕಣ್ಮನ ಸೆಳೆದಿದ್ದವು. ಮನೋಹರ್ ಕಾಂಪಲಿ ಇಬ್ಬರು ಸ್ಟಾರ್ ಜೋಡಿಗೆ ಸರಿ ಹೊಂದುವಂತಹ ಒಂದೊಳ್ಳೆ ಕಥೆ ಹೆಣೆದಿದ್ದು ನಿರ್ದೇಶಕನಾಗಿ ತಮ್ಮನ್ನು ಸಹ ಪ್ರೂವ್ ಮಾಡಿಕೊಳ್ಳಲು ಸಕಲ ತಯಾರಿ ಮಾಡಿಕೊಂಡಿದ್ದಾರೆ.
ರೋಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಇರುವ ಮ್ಯಾಟ್ನಿ ಚಿತ್ರದಲ್ಲಿ ಸತೀಶ್ ನೀನಾಸಂ ಶ್ರೀಮಂತ ಮನೆತನದ ಹುಡುಗನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಲವರ್ ಬಾಯ್ ಅವತಾರವೆತ್ತಿದ್ದಾರೆ. ಈಗಾಗಲೇ ಅಯೋಗ್ಯ ಸಿನಿಮಾದಲ್ಲಿ ಸತೀಶ್ ಹಾಗೂ ರಚ್ಚು ಜೋಡಿ ಹಿಟ್ ನೀಡಿದ್ದು, `ಮ್ಯಾಟ್ನಿ’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಲಿದೆ ಎನ್ನುವ ನಿರೀಕ್ಷೆಯೂ ಹೆಚ್ಚಿದೆ.
ಸದ್ಯ ಇದೊಂದು ಲವ್ ಸ್ಟೋರಿ ಎಂದಿರುವ ನಿರ್ದೇಶಕರು ಸಿನಿಮಾ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಎಫ್ 3 ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪಾರ್ವತಿ ಎಸ್ ಗೌಡ ಚಿತ್ರವನ್ನು ನಿರ್ಮಿಸಿದ್ದು, ಲೂಸಿಯ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಸುಧಾಕರ್ ಸಿನಿಮಾಟೋಗ್ರಫಿ. ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.
ಸತೀಶ್ ನೀನಾಸಂಗೆ(Satish Ninasum) ರಚಿತಾ ರಾಮ್ ಮಾತ್ರ ನಾಯಕಿಯಲ್ಲ, ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ರಚಿತಾ ರಾಮ್, ಅದಿತಿ ಪಾತ್ರಕ್ಕೂ ಸಿಕ್ಕಾಪಟ್ಟೆ ಪ್ರಾಮುಖ್ಯತೆಯಿದೆ. ಮ್ಯಾಟ್ನಿ ಮೂಲಕ ಡಿಫರೆಂಟ್ ಆಗಿರೋ ಕಥೆ ಹೇಳೋದ್ದಕ್ಕೆ ಈ ಸ್ಟಾರ್ಸ್ ರೆಡಿಯಾಗಿದ್ದಾರೆ. ಮ್ಯಾಟ್ನಿ ಶೋ ಯಾವಾಗ ಎಂಬುದೇ ಈಗ ಪ್ರಶ್ನೆಯಾಗಿದೆ.
ಕೋಮಲ್ (Komal) ನಟನೆಯ ‘ಗೋವಿಂದಾಯ ನಮಃ’ ಸಿನಿಮಾ ಪ್ಯಾರ್ಗೆ ಆಗ್ಬುಟೈತಿ ಹಾಡಿನ (Song) ಮೂಲಕ ಸಖತ್ ಫೇಮಸ್ ಆಗಿತ್ತು. ಈ ಒಂದು ಹಾಡು ಇಡೀ ಸಿನಿಮಾವನ್ನು ಗೆಲುವಿನ ಅಂಚಿಗೆ ತೆಗೆದುಕೊಂಡು ಹೋಗಿತ್ತು. ಇದೀಗ ಕೋಮಲ್ ಮತ್ತೆ ಅಂಥದ್ದೊಂದು ಪ್ರಯೋಗ ಮಾಡಿದ್ದಾರೆ. ಅವರ ‘ನಮೋ ಭೂತಾತ್ಮ 2’ (Namo Bhutatma 2) ಸಿನಿಮಾದಲ್ಲೂ ಉರ್ದು ಮಿಶ್ರಿತ ಹಾಡೊಂದನ್ನು ಸೇರಿಸಿದ್ದಾರೆ. ಈ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕೇಳುಗರ ಗಮನ ಸೆಳೆದಿದೆ.
ಅಯ್ಯೋ ಅಯ್ಯೋ ಹೆಸರಿನಲ್ಲಿ ಈ ಹಾಡು ಮೂಡಿ ಬಂದಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ (Vijay Prakash) ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಅರುಣ್ ಆಂಡ್ಯೂ ಮ್ಯೂಸಿಕ್ ಮಾಡಿದ್ದಾರೆ. ಸ್ವತಃ ಮುರಳಿ (Murali) ಮಾಸ್ಟರ್ ನೃತ್ಯ ಸಂಯೋಜನೆಯ ಜೊತೆಗೆ ಅವರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು ವಿಶೇಷ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಮೊನ್ನೆಯಷ್ಟೇ ಈ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಿನಿಮಾ ಕುರಿತು ಅಂದು ಮಾತನಾಡಿದ್ದ ಕೋಮಲ್, ‘ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ ನಮೋ ಭೂತಾತ್ಮ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ ನಮೋ ಭೂತಾತ್ಮ 2 ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ’ ಎಂದಿದ್ದರು.
2014ರಲ್ಲಿ ನನಗೆ ಕೋಮಲ್ ಅವರು ನಮೋ ಭೂತಾತ್ಮ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ ನಮೋ ಭೂತಾತ್ಮ 2 ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು. ಚಿತ್ರಕ್ಕೆ ನಮೋ ಭೂತಾತ್ಮ 2 ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ. ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.
ಸಂಚಾರಿ ವಿಜಯ್ ಅಭಿನಯದ ‘6 ನೇ ಮೈಲಿ’ ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ ‘ತಲ್ವಾರ್ ಪೇಟೆ’ ಚಿತ್ರಗಳ ನಿರ್ಮಾಪಕ ಡಾ.ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಅದರ ಮೊದಲ ಹಜ್ಜೆಯಾಗಿ ‘ನೆನಪಿನ ಹಾದಿಯಲ್ಲಿ ಒಂಟಿ ಪಯಣ’ ಎಂಬ ಆಲ್ಬಂ ಸಾಂಗ್ ಬಿಡುಗಡೆ ಮಾಡಿದ್ದಾರೆ.
ಶಶಿಕಲಾ ಪುಟ್ಟಸ್ವಾಮಿ ಹಾಡನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಖ್ಯಾತ ಗಾಯಕ ವಿಜಯ ಪ್ರಕಾಶ್ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ನಟ ಪ್ರವೀಣ್ ತೇಜ್ ಹಾಗೂ ನಟಿ ಯಶಾ ಶಿವಕುಮಾರ್ ಅಭಿನಯಿಸಿದ್ದಾರೆ. ಸಾಯಿ ಶ್ರೀಕಿರಣ್ ಸಂಗೀತ ನೀಡಿದ್ದಾರೆ. ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಮಾಡಿದ್ದಾರೆ. ಧನಂಜಯ್ ನೃತ್ಯ ನಿರ್ದೇಶನ ಈ ಹಾಡಿಗಿದೆ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
ಇತ್ತೀಚೆಗೆ ‘ನೆನಪಿನ ಹಾದಿಯಲ್ಲಿ ಒಂಟಿ ಪಯಣ’ ಆಲ್ಬಂ ಸಾಂಗ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಖ್ಯಾತ ಹಾಕಿ ಆಟಗಾರ ಧನರಾಜ್ ಪಿಳ್ಳೈ, ವಿ.ನಾಗೇಂದ್ರ ಪ್ರಸಾದ್, ಲಕ್ಕಣ್ಣ ಅವರು ಸೇರಿದಂತೆ ಅನೇಕರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕ ಶೈಲೇಶ್ ಕುಮಾರ್ ಮಾತನಾಡಿ, ಹಾಡು ಚೆನ್ನಾಗಿದೆ. ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದೇವೆ. ಆ ಮೂಲಕ ಈ ಹಾಡನ್ನು ಬಿಡುಗಡೆ ಮಾಡಿದ್ದೇವೆ. ನಮ್ಮ ಹೊಸಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.
ಸಂಗೀತ ನಿರ್ದೇಶಕ ಸಾಯಿ ಶ್ರೀಕಿರಣ್ ಅವರಿಂದ ಈ ತಂಡದ ಪರಿಚಯವಾಯಿತು. ಶಶಿಕಲಾ ಅವರು ಬರೆದಿರುವ ಈ ಹಾಡು ಸುಂದರವಾಗಿದೆ. ಅಷ್ಟೇ ಚೆನ್ನಾಗಿ ನಿರ್ದೇಶನ ಕೂಡ ಮಾಡಿದ್ದಾರೆ. ಇಡೀ ತಂಡದ ಪರಿಶ್ರಮದಿಂದ ಹಾಡು ಚೆನ್ನಾಗಿ ಬಂದಿದೆ ಎಂದು ನಟ ಪ್ರವೀಣ್ ತೇಜ್ ಹೇಳಿದರು. ಇದು ನನ್ನ ಮೊದಲ ಆಲ್ಬಂ ಸಾಂಗ್. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು ನಟಿ ಯಶಾ ಶಿವಕುಮಾರ್. ಹಾಡು ಬರೆದು, ನಿರ್ದೇಶಿಸಿರುವ ಶಶಿಕಲಾ ಪುಟ್ಟಸ್ವಾಮಿ , ಛಾಯಾಗ್ರಾಹಕ ಚಂದ್ರಶೇಖರ್ ಹಾಗೂ ಸಂಗೀತ ನಿರ್ದೇಶಕ ಸಾಯಿ ಶ್ರೀಕಿರಣ್ ಹಾಡಿನ ಬಗ್ಗೆ ಮಾತನಾಡಿದರು.
Live Tv
[brid partner=56869869 player=32851 video=960834 autoplay=true]
ಬಾಲಿವುಡ್ನ ಜನಪ್ರಿಯ ಸಂಗೀತ ನಿರ್ದೇಶಕರಾದ ಸಲೀಂ-ಸುಲೇಮಾನ್ ಪ್ರತೀ ವರ್ಷ ‘ಭೂಮಿ’ ಎಂಬ ಆಲ್ಬಂ ಹೊರತರುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಆಲ್ಬಂನಲ್ಲಿ ಪರಿಸರ ಕಾಳಜಿ ಮೆರೆಯುವ ಹಲವು ಹಾಡುಗಳಿವೆ. ಸಾಮಾನ್ಯವಾಗಿ, ಇದೇ ಶೀರ್ಷಿಕೆಯಡಿ ಪ್ರತೀ ವರ್ಷ ಹಾಡುಗಳು ಮೂಡಿಬರುತ್ತಿದ್ದು, ಈ ಹಾಡುಗಳನ್ನು ದೇಶದ ಜನಪ್ರಿಯ ಗಾಯಕ-ಗಾಯಕಿಯರು ಹಾಡುತ್ತಾ ಬಂದಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ, ಕನ್ನಡದಲ್ಲಿ ಒಂದು ಹಾಡು ಮೂಡಿಬಂದಿದ್ದು, ‘ಭೂಮಿ 2022’ ಹೆಸರಿನ ಈ ಹಾಡಿಗೆ ಕನ್ನಡದ ಹೆಮ್ಮೆಯ ಗಾಯಕ ವಿಜಯಪ್ರಕಾಶ್ ಧ್ವನಿಯಾಗಿದ್ದಾರೆ.
‘ದುನಿಯಾ’ ಎಂದು ಶುರುವಾಗುವ ಈ ಹಾಡಿಗೆ ವಿಜಯಪ್ರಕಾಶ್ ಮತ್ತು ಸಲೀಮ್ ಮರ್ಚೆಂಟ್ ಧ್ವನಿಯಾಗಿದ್ದಾರೆ. ‘ಉಸಿರಿನ ಮ್ಯಾಲೆ, ಹಸಿರಿನ ಮ್ಯಾಲೆ ಪರಪಂಚ … ಕಲ್ಲುಗಳ ಮ್ಯಾಲೆ ಮಣ್ಣುಗಳ ಮ್ಯಾಲೆ ಪರಪಂಚ … ಗಾಳಿಯಾಗೇ ಭೂಮಿ ನಿಂತೈತೆ ಸೋಜಿಗ ನೋಡೋ … ಭೂಮಿಯಾಗೆ ಎಲ್ಲ ತುಂಬೈತೆ …’ ಎಂದು ಸಾಗುವ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ತೌಫೀಕ್ ಖುರೇಷಿ ಅವರು ರಿದಮ್ ವಿಭಾಗದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್
ಇತ್ತೀಚೆಗೆ ಈ ಹಾಡನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್ ಬಿಡುಗಡೆ ಮಾಡಿದ್ದಾರೆ. ಪ್ರಕೃತಿಯ ಗೀತೆಯ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದರು. ಗಾಯಕ ವಿಜಯ್ ಪ್ರಕಾಶ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಹೊಗಳಿದರು.
Live Tv
[brid partner=56869869 player=32851 video=960834 autoplay=true]