Tag: Vijay Shah

  • ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆ: ಸುಪ್ರೀಂ

    ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆ: ಸುಪ್ರೀಂ

    – ಪ್ರಾಮಾಣಿಕವಾಗಿ ಕ್ಷಮೆ ಕೇಳಲು ಏನಾಗಿತ್ತು?

    ನವದೆಹಲಿ: ಆಪರೇಷನ್‌ ಸಿಂಧೂರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್ ಖುರೇಷಿಯವರ (Colonel Qureshi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ (Madhya Pradesh) ಸಚಿವ ವಿಜಯ್ ಶಾ (Vijay Shah) ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ (Supreme Court ) ತಿರಸ್ಕರಿಸಿದೆ. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (SIT) ತನಿಖೆ ನಡೆಸಲಿ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ಏಕ ಸದಸ್ಯ ಪೀಠ ತಿಳಿಸಿದೆ.

    ವಿಜಯ್ ಶಾ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, ನೀವು ಯಾವ ರೀತಿ ಕ್ಷಮೆಯಾಚಿಸಿದ್ದೀರಿ? ಕ್ಷಮೆಯಾಚನೆಗೆ ಸ್ವಲ್ಪ ಅರ್ಥವಿದೆ. ಕೆಲವೊಮ್ಮೆ ಜನರು ವಿಚಾರಣೆಯಿಂದ ಹೊರಬರಲು ಮಾತ್ರ ಸೌಮ್ಯ ಭಾಷೆ ಬಳಸುತ್ತಾರೆ. ಅಲ್ಲದೇ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ನಿಮ್ಮದು ಯಾವ ರೀತಿಯ ಕ್ಷಮೆಯಾಚನೆ? ನ್ಯಾಯಾಲಯ ಹೇಳಿದೆ ಎಂಬ ಕಾರಣಕ್ಕೆ ಕ್ಷಮೆ ಕೇಳಿದ್ದೀರಿ, ಇಲ್ಲಿಯವರೆಗೆ ನಿಮ್ಮ ಅಸಭ್ಯ ಹೇಳಿಕೆಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸಲು ನಿಮ್ಮನ್ನು ಏನು ತಡೆದಿತ್ತು ಎಂದು ಪೀಠ ಛೀಮಾರಿ ಹಾಕಿತು. ಇದನ್ನೂ ಓದಿ: ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

    ಸಚಿವರ ವಿರುದ್ಧದ ಪ್ರಕರಣವನ್ನು ತನಿಖೆ ಮಾಡಲು ಮಂಗಳವಾರ ಬೆಳಗ್ಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು. ಅದು ಮಹಿಳಾ ಅಧಿಕಾರಿಯನ್ನು ಹೊಂದಿರಬೇಕು ಮತ್ತು ಮೇ 28 ರೊಳಗೆ ವರದಿಯನ್ನು ಸಲ್ಲಿಸಬೇಕು. ಅಲ್ಲದೇ ಅಧಿಕಾರಿಗಳು ಮಧ್ಯಪ್ರದೇಶ ಮೂಲದವರಾಗಿರಬಾರದು ಎಂದು ನ್ಯಾಯಾಲಯ ಆದೇಶದಲ್ಲಿ ಷರತ್ತು ವಿಧಿಸಿದೆ.

    ಶಾ ಬಂಧನದಿಂದ ವಿನಾಯಿತಿ ನೀಡಿದ ನ್ಯಾಯಾಲಯ, ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತು. ಅಲ್ಲದೇ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು, ಈ ಬಗ್ಗೆ ಉತ್ತರಿಸುವಂತೆ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಇದನ್ನು ಪೀಠ ಗಮನಿಸುತ್ತದೆ. ನಿಮಗೆ ಇದೊಂದು ಅಗ್ನಿ ಪರೀಕ್ಷೆ ಎಂದು ಸರ್ಕಾರಕ್ಕೆ ಸೂಚಿಸಿದೆ.

    ವಿಜಯ್ ಶಾ ಹೇಳಿದ್ದೇನು?
    ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಮಾತಾಡಿದ್ದರು. ಭಾಷಣದಲ್ಲಿ ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು. ಈ ಸಂಬಂಧ ಮಧ್ಯಪ್ರದೇಶದ ಹೈಕೋರ್ಟ್‌ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿತ್ತು. ಇದಾದ ಬೆನ್ನಲ್ಲೇ ಕರ್ನಲ್‌ ಸೋಫಿಯಾ ಜಾತಿ ಮತ್ತು ಧರ್ಮವನ್ನು ಮೀರಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ನನ್ನ ಮಾತುಗಳು ಸಮಾಜ ಮತ್ತು ಧರ್ಮಕ್ಕೆ ನೋವುಂಟು ಮಾಡಿದ್ದರೆ, ನಾನು ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧನಿದ್ದೇನೆ ಎಂದಿದ್ದರು. ಬಳಿಕ ಹೈಕೂರ್ಟ್‌ ಆದೇಶದ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಮೊದಲು ಕರ್ನಲ್ ಸೋಫಿಯಾ ಬಳಿ ಹೋಗಿ ಕ್ಷಮೆ ಕೇಳಿ: ವಿಜಯ್ ಶಾಗೆ ಸುಪ್ರೀಂ ಚಾಟಿ

  • ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

    ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ವಿಜಯ್ ಶಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

    ನವದೆಹಲಿ: ಕರ್ನಲ್ ಸೋಫಿಯಾ (Colonel Sofiya Qureshi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯ್ ಶಾ (Vijay Shah) ಅವರನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ (Jabbalpur High Court) ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದಿದೆ.ಇದನ್ನೂ ಓದಿ: ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

    ವಿಜಯ್ ಶಾ ನೀಡಿದ ಹೇಳಿಕೆಗಳನ್ನು ಟೀಕಿಸಿದ ಕೋರ್ಟ್, ದೇಶವು ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಸಚಿವರು ಜವಾಬ್ದಾರಿಯುತರಾಗಿರಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆ ಎಂದು ಒತ್ತಿ ಹೇಳಿದೆ.

    ವಿಜಯ್ ಶಾ ಹೇಳಿದ್ದೇನು?
    ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸಿದ್ದರು.

    ಭಾಷಣದಲ್ಲಿ, ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು.

    ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಳಿಕ ಜಬ್ಬಲ್ಪುರ ಹೈಕೋರ್ಟ್ ಇದನ್ನು ಅಶ್ಲೀಲ ಭಾಷೆ ಎಂದು ಪರಿಗಣಿಸಿತ್ತು. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತ್ತು.ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ ಏಟಿಗೆ ಪಾಕಿಸ್ತಾನ ಬಾಲ ಮುದುರಿದ ನಾಯಿಯಂತೆ ಓಡಿದೆ: ಪೆಂಟಗನ್‌ ಮಾಜಿ ಅಧಿಕಾರಿ ವ್ಯಂಗ್ಯ

  • 6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

    6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಕೇಳಿದ್ದ ಪ್ರಶ್ನೆಗೆ ರಾಜ್ಯ ಅರಣ್ಯ ಸಚಿವರೊಬ್ಬರು ಗರಂ ಆಗಿ, ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ (Vijay Shah) ಅವರು ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಖಾಂಡ್ವಾ ಜಿಲ್ಲೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಕಾರ್ಯಕ್ರಮದ ವೇಳೆ ಇದ್ದಕ್ಕಿದ್ದಂತೆ ಎದ್ದು ನಿಂತು ಪ್ರಶ್ನೆ ಕೇಳಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ತನ್ನ ಪತ್ನಿಗೆ ಕಳೆದ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದು ಆರೋಪಿಸಿದ್ದಾನೆ.

    ಇದರಿಂದಾಗಿ ಗರಂ ಆದ ಶಾಸಕರು ಆ ವ್ಯಕ್ತಿಯನ್ನು ಕುಡುಕನೆಂದು ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಆತನಿಗೆ ಸೊಂಟ ಮುರಿಯುವುದಾಗಿ ಎಚ್ಚರಿಕೆಯನ್ನು ನೀಡಿದ್ದು, ನಂತರ ಪೊಲೀಸರನ್ನು ಕರೆಸಿ ಆತನನ್ನು ಕಾರ್ಯಕ್ರಮದಿಂದ ಹೊರಹಾಕಿದ್ದಾರೆ.

    ಘಟನೆಗೆ ಸಂಬಂಧಿಸಿ ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದ ಸಚಿವರು, ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೇ ವಿಪಕ್ಷದವರು ಈ ರೀತಿ ಮಾಡುತ್ತಿದ್ದಾರೆ. ಆ ವ್ಯಕ್ತಿಯನ್ನು ಕಾಂಗ್ರೆಸ್‍ನವರು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು- ಹಗ್ಗ ಹಿಡಿದು ನದಿ ದಾಟಿ ಬರುತ್ತಿರೋ ಜನ

    ಮಧ್ಯಪ್ರದೇಶದಲ್ಲಿ ಅಭಿವೃದ್ಧಿಯ ಯುಗವನ್ನು ಪ್ರಾರಂಭಿಸುತ್ತಿದ್ದೇವೆ. ಆದರೆ ಇದಕ್ಕೆ ಅಡ್ಡಿ ಪಡಿಸುವರು ಯಾರೇ ಇದ್ದರೂ ಅವರ ಸೊಂಟವನ್ನು ಪೊಲೀಸರು ಮುರಿಯುತ್ತಾರೆ ಎಂದು ತಿಳಿಸಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅರಣ್ಯ ಸಚಿವರ ದರ್ಪಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ಸುಪಾರಿ – ಇಬ್ಬರು ಅರೆಸ್ಟ್, ವಿಲ್ಸನ್ ಗಾರ್ಡನ್ ನಾಗ ಪರಾರಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಚಿವರ ಭೋಜನಕೂಟ ತಿರಸ್ಕರಿಸಿದ ವಿದ್ಯಾ- ಮರುದಿನ ಅಧಿಕಾರಿಗಳಿಂದ ಶೂಟಿಂಗ್ ಸ್ಥಗಿತ

    ಸಚಿವರ ಭೋಜನಕೂಟ ತಿರಸ್ಕರಿಸಿದ ವಿದ್ಯಾ- ಮರುದಿನ ಅಧಿಕಾರಿಗಳಿಂದ ಶೂಟಿಂಗ್ ಸ್ಥಗಿತ

    ಮುಂಬೈ/ಭೋಪಾಲ್: ಅರಣ್ಯ ಸಚಿವರ ಔತನಕೂಟ ತಿರಸ್ಕರಿಸಿದ್ದಕ್ಕೆ ವಿದ್ಯಾ ಬಾಲನ್ ಸಿನಿಮಾದ ಚಿತ್ರೀಕರಣ ತಡೆಯಲಾಗಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸುತ್ತಿವೆ.

    ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ತಮ್ಮ ರಾಜ್ಯದಲ್ಲಿ ಶೂಟಿಂಗ್ ನಡೆಸುತ್ತಿರುವ ನಟಿ ವಿದ್ಯಾ ಬಾಲನ್ ಅವರನ್ನು ಊಟಕ್ಕೆ ಆಹ್ವಾನಿಸಿದ್ದರು. ಆದ್ರೆ ವಿದ್ಯಾ ಬಾಲನ್ ತಮ್ಮ ಶೆಡ್ಯೂಲ್ ಮೊದಲ ನಿಗದಿಯಾಗಿದ್ದರಿಂದ ಭೋಜನಕೂಟಕ್ಕೆ ತೆರಳಿರಲಿಲ್ಲ. ಇದರಿಂದ ಸಚಿವರು ಮರುದಿನ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣಕ್ಕೆ ತಡೆ ನೀಡಿದ್ದರು ಎನ್ನಲಾಗಿದೆ. ಕೊನೆಗೆ ಚಿತ್ರತಂಡ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ ಬಳಿಕ ಶೂಟಿಂಗ್ ನಡೆಸಲು ಅನುಮತಿ ನೀಡಲಾಗಿದೆ ಎಂದು ವರದಿ ಆಗಿದೆ.

    ವಿದ್ಯಾ ಬಾಲನ್ ನಟಿಸುತ್ತಿರುವ ‘ಶೇರರ್ನಿ’ ಚಿತ್ರೀಕರಣ ಬಾಲಾಘಾಟ್ ನಲ್ಲಿ ನಡೆಯುತ್ತಿದ್ದು, ಚಿತ್ರತಂಡ ಅಕ್ಟೋಬರ್ 20 ರಿಂದ ನವೆಂಬರ್ 21ರ ವರೆಗೆ ಜಿಲ್ಲಾಡಳಿತದಿಂದ ಅನುಮತಿ ಪಡೆದುಕೊಂಡಿತ್ತು. ಶೂಟಿಂಗ್ ಹಿನ್ನೆಲೆ ವಿದ್ಯಾ ಬಾಲನ್ ಮಹಾರಾಷ್ಟ್ರದ ಗೋಂದಿಯಾದಲ್ಲಿ ಉಳಿದುಕೊಂಡಿದ್ದರು. ಸಂಜೆ 5 ಗಂಟೆಗೆ ಸಚಿವ ವಿಜಯ್ ಶಾ ನಟಿಯನ್ನ ಔತಣಕೂಟಕ್ಕೆ ಆಹ್ವಾನಿಸಿದ್ದರು. ಆದ್ರೆ ವಿದ್ಯಾ ಬಾಲನ್ ಊಟಕ್ಕೆ ತೆರಳಿರಲಿಲ್ಲ. ಮರುದಿನ ಶೂಟಿಂಗ್ ಸ್ಥಳಕ್ಕೆ ಆಗಮಿಸಿ ಜಿಲ್ಲಾ ರಣ್ಯಾಧಿಕಾರಿಗಳು ಶೂಟಿಂಗ್ ವಾಹನಗಳನ್ನು ಅರಣ್ಯ ಪ್ರವೇಶಿಸುವದನ್ನ ತಡೆದಿದ್ದರು. ಕೆಲ ಸಮಯದ ಬಳಿಕ ಚಿತ್ರೀಕರಣಕ್ಕೆ ಅನಮತಿ ನೀಡಲಾಗಿತ್ತು.

    ವಿಜಯ್ ಶಾ ಸ್ಪಷ್ಟನೆ: ಔತಣಕೂಟವನ್ನ ಜಿಲ್ಲಾಡಳಿತ ಆಯೋಜಿಸಿತ್ತು. ಅಧಿಕಾರಿಗಳು ಶೂಟಿಂಗ್ ವಾಹನಗಳನ್ನ ತಡೆದಿರೋದು ನಿಜ. ಪ್ರತಿದಿನ ಚಿತ್ರತಂಡ ಅರಣ್ಯದೊಳಗೆ ಎರಡು ಜನರೇಟರ್ ವಾಹನಗಳನ್ನು ತೆಗೆದುಕೊಂಡು ಹೋಗುತ್ತಿತ್ತು. ಆದ್ರೆ ಅಂದು ಎರಡಕ್ಕಿಂತ ಹೆಚ್ಚು ಜನರೇಟರ್ ವಾಹನ ಅರಣ್ಯದೊಳಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಸಚಿವ ವಿಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.