Tag: Vijaya

  • ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

    ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

    ನ್ನಡದ ಒಟ್ಟು ಸಿನಿಮಾ ಬೆಳವಣಿಗೆ, ಇತಿಹಾಸವನ್ನು ರಾಷ್ಟ್ರೀಯ ನೆಲೆಯಲ್ಲಿ ವಿಶ್ಲೇಷಣೆ ಮಾಡುವುದು ತುರ್ತು ಅಗತ್ಯವಿದೆ ಎಂದು ಹಿರಿಯ ನಿರ್ದೇಶಕ ಪದ್ಮಶ್ರೀ ಗಿರೀಶ್ ಕಾಸರವಳ್ಳಿ ಇಂದಿಲ್ಲಿ ಹೇಳಿದರು. ‘ಸಂಸ್ಕಾರ’ , ‘ಸ್ಕೂಲ್ ಮಾಸ್ಟರ್ ‘ ರೀತಿಯ ಚಿತ್ರಗಳನ್ನು ಸರಿಯಾಗಿ ಬಿಂಬಿಸುವ ಕೆಲಸ ಆಗಿಲ್ಲ. ರೌಡಿಸಂ ಮಾದರಿಯ ಸಿನಿಮಾಗಳನ್ನು‌ ಹೆಚ್ಚು ಹೆಚ್ಚು ಪ್ರೊಜೆಕ್ಟ್ ಮಾಡಿ ರಾಜ್ಯದ ಹೊರಗೂ ಕನ್ನಡ ಚಿತ್ರಗಳ ಕುರಿತಂತೆ ನಾವೇ ತಪ್ಪು ಕಲ್ಪನೆ ಮೂಡಿಸಿದ್ದೇವೆ,  ಅದನ್ನು ಹೋಗಲಾಡಿಸುವ ಅಗತ್ಯವಿದೆ’ ಎಂದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘವನ್ನು  ಉದ್ಘಾಟಿಸಿ, ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಕನ್ನಡದ ಅಸ್ಮಿತೆ, ಕಲಾತ್ಮಕ ಹೆಗ್ಗಳಿಕೆ ತೋರಿಸಬೇಕು, ಆ ಕೆಲಸ ಆಗಬೇಕು. ಬೆಂಗಳೂರು ಅಲ್ಲದೆ ರಾಜ್ಯದ  ಆಚೆಗೂ  ಕನ್ನಡದಲ್ಲಿ ಈ ರೀತಿ ಸಾಧನೆ ಆಗಿದೆ ಎನ್ನುವುದು ತಿಳಿಸಬೇಕು’ ಎಂದು ಅವರು ಸಲಹೆ ನೀಡಿದರು.

    ‘ಕನ್ನಡದಲ್ಲಿ  ಒಳ್ಳೆಯ ಸಿನಿಮಾಗಳನ್ನು ಪ್ರೊಜೆಕ್ಟ್ ಮಾಡುತ್ತಿಲ್ಲ. ‘‌ಕಾಂತಾರ ‘ ತನ್ನ ಅಸ್ಮಿತೆಯಿಂದ ದೇಶವಿದೇಶಗಳಲ್ಲಿ ಯಶಸ್ಸು ಗಳಿಸಿತು. ಆದರೆ ‘ಕೆಜಿಎಫ್’ ಹಾಗಲ್ಲ, ಅದರ ಗೆಲುವಿಗೆ ಬೇರೆಯದೇ  ಆದ ಕಾರಣ ಇದೆ. ಕನ್ನಡದಲ್ಲಿ ಬೇರೆಯೇ ರೀತಿಯ ಚಿತ್ರಗಳು ಕಳೆದ ನಾಲ್ಕೈದು ವರ್ಷಗಳಲ್ಲಿ ಆಗಿದೆ. ‘ಬಳೆ ಕೆಂಪ’,  ‘ಪಿಂಕಿ ಎಲ್ಲಿ’, ‘ನಾನು ಕುಸುಮ’, ‘ಪೆದ್ರೋ’, ‘ಶಿವಮ್ಮ’ ಮುಂತಾದ ಚಿತ್ರಗಳು ಜಗತ್ತಿನಾದ್ಯಂತ  ಸದ್ದು ಮಾಡುತ್ತಿವೆ. ಅವುಗಳು ಜನರಿಗೆ ತಲುಪುತ್ತಿಲ್ಲ ಅಷ್ಟೇ’ ಎಂದು ಅವರು ಹೇಳಿದರು.  ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ದಲಿತ, ಬಂಡಾಯ ಸಾಹಿತ್ಯ ಕನ್ನಡ ಚಿತ್ರರಂಗದಲ್ಲಿ ಚಿತ್ರ ಗೀತೆಯಲ್ಲಿ ಬಂದಿದೆ. ಆದರೆ  ಸಿನಿಮಾದಲ್ಲಿ ಬಂದಿಲ್ಲ. ‌ಅದನ್ನು ದಾಖಲು ಮಾಡವ ಅಗತ್ಯವಿದೆ ಎಂದ ಅವರು, ‘ಕೃತಿಯನ್ನು ಸಮಾಜದ ಬೆಳವಣಿಗೆ, ಕಾಲ ಮತ್ತು ಕಾಲಾತೀತವಾಗಿ ನೋಡಬೇಕಾಗಿದೆ. ಪುಟ್ಟಣ್ಣ ಅವರು ಸಾಂಸ್ಕೃತಿಕ, ಧಾರ್ಮಿಕ ನಿಲುವು ಇಟ್ಟುಕೊಂಡು ವಿಶ್ಲೇಷಣೆ ಮಾಡಬೇಕು. ಸಿನಿಮಾ ಶೂನ್ಯದಲ್ಲಿ ಸೃಷ್ಠಿ ಆಗುವುದಿಲ್ಲ’ ಎಂದು ಹೇಳಿದರು.

    ‘ನಾನು ಚಿತ್ರರಂಗ ಪ್ರವೇಶಿಸಿದ್ದು 1975ರಲ್ಲಿ.  ಆಗ ಚಲನಚಿತ್ರ ಪತ್ರಕರ್ತಕರು ಬೆನ್ನೆಲುಬಾಗಿದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಯಿತು.  ಕೃತಿಕಾರ ಇಲ್ಲದಿದ್ದರೆ ವಿಮರ್ಶಕನ ಅಗತ್ಯವಿಲ್ಲ. ವಿಮರ್ಶಕ ಆಮ್ಲಜನಕದ ರೀತಿ ಕೆಲಸ ಮಾಡುತ್ತಾರೆ. ಸಿನಿಮಾ ವಿಮರ್ಶೆ ಮಾಡದಿದ್ದರೆ ನನ್ನನ್ನು ನಾನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಹಿಂದೆ ಪತ್ರಕರ್ತರ ಪರಿಷತ್ ಪ್ರತಿ ವಾರ ನಡೆಸುತ್ತಿದ್ದ ವಿಮರ್ಶೆಗಳ ವಿಮರ್ಶೆ ಸಂವಾದ ಕಾರ್ಯಕ್ರಮ ನಿರ್ದೇಶಕರನ್ನು ಉತ್ತೇಜಿಸುತ್ತಿದ್ದುದನ್ನು ಹೇಳಿದರು.   ‘ವಿಮರ್ಶಕರಿಂದ ಮಾಧ್ಯಮ, ಉದ್ಯಮ ಬೆಳೆಯಲಿದೆ. ಇಲ್ಲದಿದ್ದರೆ ಸ್ಥಗಿತವಾಗಲಿದೆ. ಚಲನಚಿತ್ರ  ಪತ್ರಕರ್ತರ ಸಂಘ ಮತ್ತೊಮ್ಮೆ ಉದ್ಘಾಟನೆಯಾಗಿರುವುದು ಖುಷಿಕೊಟ್ಟಿದೆ’  ಎಂದರು.

    ಹಿರಿಯ ಪರ್ತಕರ್ತೆ ಡಾ. ವಿಜಯಾ ಮಾತನಾಡಿ, ‘ಹಿಂದಿನ ಸಂಘಟನೆಗಳು, ತಮ್ಮ ವೈಯಕ್ತಿಕ ಹಿತಾಸಕಿಗಳನ್ನು ಮರೆತು,  ಚಿತ್ರರಂಗದ ಬೆಳವಣಿಗೆಯನ್ನಷ್ಟೇ ಬಯಸಿದವು, ಇಲ್ಲಿ ಹಾಗಾಗದಂತೆ ಗಮನಹರಿಸಿದ್ದೀರಿ’ ಎಂದು ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಪತ್ರಕರ್ತರ ಕೊಡುಗೆ ಮತ್ತು ವಿವಿಧ ವಿಷಯಗ‌ಳ‌ ಮೇಲೆ ಬೆಳಕು ಚೆಲ್ಲಿದರು.

    ಸಂಘದ ಅಧ್ಯಕ್ಷ ಬಾ.ನಾ. ಸುಬ್ರಹ್ಮಣ್ಯ ಸಂಘದ ಕಾರ್ಯ ಚಟುವಟಿಕೆ ಉದ್ದೇಶಗಳ ಕುರಿತು ವಿವರಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಚಲನಚಿತ್ರ ಅಕಾಡಮಿ ಅಧ್ಯಕ್ಷ ಅಶೋಕ್ ಕಶ್ಯಪ್,  ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,  ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಅರಸ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಅಖಿಲ ಬಾರತ ಕಾರ್ಯನಿರತ  ಒಕ್ಕೂಟದ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ, ಮಾಧ್ಯಮ ತಜ್ಞ ಜಿ.ಎನ್. ಮೋಹನ್,  ಹಿರಿಯ ಚಲನಚಿತ್ರ ಪತ್ರಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ಸಂಸ್ಥಾಪಕ ಆಡಳಿತ ಮಂಡಳಿ : 

    ಬಿ.ಎನ್. ಸುಬ್ರಹ್ಮಣ್ಯ – ಅಧ್ಯಕ್ಷರು

    ಸುನಯನಾ ಸುರೇಶ್ – ಉಪಾಧ್ಯಕ್ಷರು

    ನಾಡಿಗೇರ್ ಚೇತನ್ – ಕಾರ್ಯಾಧ್ಯಕ್ಷರು

    ಅರುಣ್ ಕುಮಾರ್. ಜಿ – ಪ್ರಧಾನ ಕಾರ್ಯದರ್ಶಿ

    ಜಗದೀಶ್ ಕುಮಾರ್ ಎಸ್ –  ಕಾರ್ಯದರ್ಶಿ

    ಹರೀಶ್ ಸೀನಪ್ಪ – ಸಹ ಕಾರ್ಯದರ್ಶಿ

    ಕೆ.ಎಸ್.ವಾಸು – ಖಜಾಂಚಿ

    ಕಾರ್ಯಕಾರಿ ಸಮಿತಿಯ ಸದಸ್ಯರು

    ಮನೋಹರ್‌ ಆರ್

    ಮಂಜುನಾಥ್ ಎನ್

    ದೇಶಾದ್ರಿ ಹೆಚ್

    ಲಕ್ಷ್ಮೀನಾರಾಯಣ

    ಸಿ.ಜಿ. ರಮೇಶ್

    ವಿಜಯ್ ಆರ್

    ಅವಿನಾಶ್ ಜಿ.ಆರ್

    ಹರ್ಷವರ್ಧನ್ ಎಸ್‌.ಆರ್‌

    ಮಾಲತೇಶ ಹೆಚ್. ಜಗ್ಗೇನ್

    ಶಶಿಧರ ಚಿತ್ರದುರ್ಗ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀಪು ಹರಿದು ಮನೆ ಅಂಗಳದಲ್ಲಿ ಆಡುತ್ತಿದ್ದ ಕಂದಮ್ಮ ಸಾವು!

    ಜೀಪು ಹರಿದು ಮನೆ ಅಂಗಳದಲ್ಲಿ ಆಡುತ್ತಿದ್ದ ಕಂದಮ್ಮ ಸಾವು!

    ವಿಜಯಪುರ: ಜೀಪ್ ಹತ್ತಿ ಇಳಿದ ಪರಿಣಾಮ ಮನೆಯ ಮುಂದೆ ಆಟವಾಡುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ವಿಜುಯಪುರ ನಗರ ಹೊರ ವಲಯದ ಬಾರಾಕುಟ್ರೆ ತಾಂಡಾದಲ್ಲಿ ನಡೆದಿದೆ.

    ಅಮನ್ ಕಾಂತು ರಾಠೋಡ (3) ಮೃತ ಕಂದಮ್ಮ. ತಕ್ಷಣವೇ ಚಾಲಕ ಜೀಪ್ ಸಮೇತ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ.

    ಬಾರಾಕುಟ್ರೆ ತಾಂಡದ ಅಮನ್ ತನ್ನ ಮನೆಯ ಮುಂದೆ ಆಟವಾಡುತ್ತಿದ್ದ. ಅಮನ್ ಆಟವಾಡುತ್ತಿರುವುದನ್ನು ಗಮನಿಸದ ಚಾಲಕ ಜೀಪ್ ಅಮನ್ ಮೇಲೆ ಹಾಯಿಸಿದ್ದಾನೆ. ಕೆಳಗೆ ಬಿದ್ದಿದ್ದ ಅಮನ್ ತಲೆ ಮೇಲೆ ಜೀಪ್ ಹತ್ತಿಹೋಗಿದ್ದು, ಸ್ಥಳದಲ್ಲಿ ಬಾಲಕ ಅಮನ್ ಮೃತಪಟ್ಟಿದ್ದಾನೆ. ತನ್ನ ತಪ್ಪು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಜೀಪನ್ನು ವೇಗವಾಗಿ ಚಾಲನೆ ಮಾಡಿ ಪರಾರಿಯಾಗಿದ್ದಾನೆ.

    ಘಟನೆಯು 15 ನಿಮಿಷ ತಡವಾಗಿ ಪೋಷಕರು ಗಮನಕ್ಕೆ ಬಂದಿದ್ದು, ಈ ಹೊತ್ತಿನಲ್ಲಿ ಚಾಲಕ ಪರಾರಿಯಾಗಿದ್ದ. ಈ ಕುರಿತು ಮೃತ ಅಮನ್ ಪೋಷಕರು ಜೀಪ್ ಚಾಲಕನ ವಿರುದ್ಧ ವಿಜಯಪುರ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • 80 ಮಕ್ಕಳಿದ್ದ ಶಾಲಾ ವಾಹನ ಪಲ್ಟಿ – ತಪ್ಪಿತು ಭಾರೀ ಅನಾಹುತ

    80 ಮಕ್ಕಳಿದ್ದ ಶಾಲಾ ವಾಹನ ಪಲ್ಟಿ – ತಪ್ಪಿತು ಭಾರೀ ಅನಾಹುತ

    ವಿಜಯಪುರ: ಚಲಿಸುತ್ತಿದ್ದ ಶಾಲಾ ವಾಹನದ ಟೈರ್ ಸ್ಫೋಟಗೊಂಡು ತೆರೆದ ಬಾವಿಯ ಪಕ್ಕದಲ್ಲೇ ಉರುಳಿಬಿದ್ದ ಘಟನೆ ವಿಜಯಪುರದ ಇಂಡಿ ತಾಲೂಕಿನ ಧೂಳಖೇಡ ಬಳಿ ನಡೆದಿದೆ.

    ಧೂಳಖೇಡ ಗ್ರಾಮದ ಶ್ರೀ ಕಮಲ ಪಬ್ಲಿಕ್ ಸ್ಕೂಲ್ ಗೆ ಸೇರಿದ ಶಾಲಾ ವಾಹನ ಇದಾಗಿದ್ದು, ಶಾಲೆ ಮುಗಿದ ಬಳಿಕ ಸುಮಾರು 80 ವಿದ್ಯಾರ್ಥಿಗಳನ್ನ ಮನೆಗೆ ವಾಪಸ್ ಕರೆತಂದು ಬಿಡುತ್ತಿದ್ದ ವೇಳೆ ಶಿರನಾಳ -ಮರಗೂರ ಮಧ್ಯೆ ನಡೆದಿದೆ. ವಾಹನ ಪಲ್ಟಿಯಾದ ಅಲ್ಪ ಅಂತರದಲ್ಲಿ ತೆರೆದ ಬಾವಿ ಇದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

    ಘಟನೆಗೆ ವಾಹನದ ಟೈರ್ ಸ್ಫೋಟಗೊಂಡಿದ್ದೇ ಕಾರಣ ಎನ್ನಲಾಗಿದ್ದು, ಘಟನೆ ಬಳಿಕ ವಾಹನದ ಚಾಲಕ ಮಾರುತಿ ಹೂಗಾರ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು ವಿದ್ಯಾರ್ಥಿಗಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಖಾಸಗಿ ಶಾಲೆ ಆಡಳಿತ ಮಂಡಳಿ ಹಾಗೂ ವಾಹನ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ವಿಜಯಪುರ: ವೈದ್ಯನ ಚುಚ್ಚುಮದ್ದಿಗೆ ಬಾಲಕಿ ಸಾವು

    ವಿಜಯಪುರ: ವೈದ್ಯನ ಚುಚ್ಚುಮದ್ದಿಗೆ ಬಾಲಕಿ ಸಾವು

    ವಿಜಯಪುರ: ವೈದ್ಯನ ಎಡವಟ್ಟಿನಿಂದ ಬಾಲಕಿ ಸಾನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ.

    8 ವರ್ಷದ ರೂಪಾ ರಾಮಣ್ಣ ಬಂಡಿವಡ್ಡರ ಮೃತಪಟ್ಟಿರುವ ಬಾಲಕಿ. ಅಲಮೇಲ ಪಟ್ಟಣದ ನಿವಾಸಿ ರಾಮು ಬಂಡಿವಡ್ಡರ ಎಂಬವರು ಮಗಳು. ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದಳು.

    ತೀವ್ರ ಜ್ವರದಿಂದ ಬಳಲುತ್ತಿದ್ದ ತಮ್ಮ ಮಗಳು ರೂಪಾಳನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯ ಚಂದ್ರಶೇಖರ ರೂಪಾಗೆ ಚುಚ್ಚುಮದ್ದು ನೀಡಿದ್ದಾನೆ. ಆದರೆ ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮ ಬೀರಿ ಬಾಲಕಿ ರೂಪಾ ಇಂದು ಸಾವನ್ನಪ್ಪಿದ್ದಾಳೆ. ರೂಪಾಳನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಹಿನ್ನೆಲೆಯಲ್ಲಿ ಆಲಮೇಲ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ನೀಡಲಾಗಿದೆ. ಆದರೆ ಎಡವಟ್ಟು ಮಾಡಿದ ವೈದ್ಯ ಪರಾರಿಯಾಗಿದ್ದಾನೆ.

    ಇದನ್ನು ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ರಾತ್ರಿ ಮತ್ತೊಂದು ಮಗು ಸಾವು – ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆ

  • ಕೋಕಾ ಕೋಲಾ ಫ್ರಿಡ್ಜ್ ನಲ್ಲಿಯ ಸಿಲಿಂಡರ್ ಸ್ಫೋಟ -ಇಬ್ಬರು ಮಕ್ಕಳ ಸಾವು

    ಕೋಕಾ ಕೋಲಾ ಫ್ರಿಡ್ಜ್ ನಲ್ಲಿಯ ಸಿಲಿಂಡರ್ ಸ್ಫೋಟ -ಇಬ್ಬರು ಮಕ್ಕಳ ಸಾವು

    ವಿಜಯಪುರ: ವಿಜಯಪುರ ತಾಲೂಕಿನ ಉತ್ನಾಳ ತೋಟದ ಮನೆಯೊಂದರಲ್ಲಿ ಕೋಕಾ ಕೋಲಾ ಫ್ರಿಡ್ಜ್ ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

    ಸಂಜೀವ ಕುಮಾರ್ ಹೂಗಾರ್ (11) ಹಾಗೂ ಪವನ ಪ್ರಕಾಶ್ ಹೂಗಾರ್ (5) ಮೃತ ದುರ್ದೈವಿಗಳು. ಫ್ರಿಡ್ಜ್ ನಲ್ಲಿರುವ ಸಿಲಿಂಡರ್ ನ ಗ್ಯಾಸ್ ಲೀಕ್ ಆಗಿದ್ದರಿಂದ ಸ್ಫೋಟವಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿಸಿದ್ದಾರೆ.

    ಸಿಲಿಂಡರ್ ಸ್ಫೋಟದ ತೀವ್ರತೆಗೆ ಮಕ್ಕಳಿಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಲಂಚ ಕೇಳಿದ ಪೊಲೀಸ್ ಪೇದೆಗೆ ರಸ್ತೆಯಲ್ಲಿಯೇ ಸಾರ್ವಜನಿಕರಿಂದ ಥಳಿತ

    ಲಂಚ ಕೇಳಿದ ಪೊಲೀಸ್ ಪೇದೆಗೆ ರಸ್ತೆಯಲ್ಲಿಯೇ ಸಾರ್ವಜನಿಕರಿಂದ ಥಳಿತ

    ವಿಜಯಪುರ: ಲಂಚ ಕೇಳಿದ ಪೊಲೀಸ್ ಪೇದೆಗೆ ಸಾರ್ವಜನಿಕರು ರಸ್ತೆಯಲ್ಲಿಯೇ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಇಟಗಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

    ಬಾಗಲಕೋಟೆಯ ಜಾಲಗೇರಿ ತಾಂಡ 1ರ ಕೆಲವರು ಬಾಗಲಕೋಟೆಯ ಬಸವೇಶ್ವರ ದೇವಸ್ಥಾನಕ್ಕೆ ಕ್ರೂಸರ್ ವಾಹನದಲ್ಲಿ ತೆರಳಿದ್ದರು. ಇಂದು ಬೆಳಿಗ್ಗೆ ದೇವರ ದರ್ಶನ ಮುಗಿಸಿಕೊಂಡು ಮತ್ತೆ ಹಿಂದಿರುಗಿ ಜಾಲಗೇರಿಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ವಿಜಯಪುರದ ಇಟಗಿ ಪೆಟ್ರೋಲ್ ಬಂಕ್ ಬಳಿ ಗಾಂಧಿ ಚೌಕ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಬಸವಾರಾಜ ಪುಜಾರಿ ಕ್ರೂಸರ್ ವಾಹನ ತಡೆದು 200 ರೂ. ಲಂಚ ಕೇಳಿದ್ದಾನೆ. ಆಗ ವಾಹನದಲ್ಲಿದವರು ಲಂಚ ನೀಡಲು ನಿರಾಕರಿಸಿ ಮುಂದೆ ಸಾಗಿದ್ದಾರೆ.

    ಪೊಲೀಸ್ ಪೇದೆ ಬಸವರಾಜ ಇದರಿಂದ ಕೋಪಗೊಂಡು ತನ್ನ ಬೈಕ್ ತಗೆದುಕೊಂಡು ಹೋಗಿ ಮತ್ತೆ ವಾಹನವನ್ನು ಅಡ್ಡಗಟ್ಟಿದ್ದಾನೆ. ಆಗ ವಾಹನದಲ್ಲಿದ್ದ ಬಾಲಕಿ ಅಶ್ವಿನಿಯ ತಲೆಗೆ ಪೆಟ್ಟು ಬಿದ್ದಿದೆ. ಇದರಿಂದ ಆಕ್ರೋಶಗೊಂಡ ಅಶ್ವಿನಿ ಸಂಬಂಧಿಕರು ಮತ್ತು ಸ್ಥಳದಲ್ಲಿದ್ದ ಸಾವರ್ಜನಿಕರು ಸೇರಿ ಪೇದೆಗೆ ರಸ್ತೆಯಲ್ಲಿಯೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

    ಸದ್ಯಕ್ಕೆ ಗಾಯಗೊಂಡಿರುವ ಅಶ್ವಿನಿಯನ್ನು ಹಾಗೂ ಪೇದೆ ಬಸವರಾಜು ಅವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಗಾಂಧಿ ಚೌಕ ಪೊಲೀಸ್‍ರ ಭೇಟಿ ನೀಡಿದ್ದಾರೆ.