Tag: Vijaya Dashami

  • ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ನವದೆಹಲಿ: ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಜಯದಶಮಿಯ (Vijaya Dashami) ಶುಭಾಶಯ ಕೋರಿದ್ದಾರೆ.

    ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ ಯಾವಾಗಲೂ ನಮ್ಮ ಮಾರ್ಗಗಳಿಗೆ ಮಾರ್ಗದರ್ಶನ ನೀಡಲಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

    ಸಮಸ್ತ ಭಾರತೀಯರಿಗೆ ವಿಜಯ ದಶಮಿಯ ಶುಭಾಶಯಗಳು ಎಂದು ಮೋದಿ ತಿಳಿಸಿದ್ದಾರೆ.

    ಇದೇ ಸಂದರ್ಭದಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುಜರಾತ್‌ನ ಭುಜ್‌ಗೆ ಆಗಮಿಸಿ, ಸೇನಾ ನೆಲೆಯಲ್ಲಿ ಭಾರತೀಯ ಸೇನಾ ಸಿಬ್ಬಂದಿಯೊಂದಿಗೆ ದಸರಾ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

  • ವಿಜಯ ದಶಮಿ – ಲಕ್ಷ್ಮಿ ದೇವಿಗೆ ನೋಟುಗಳ ಅಲಂಕಾರ

    ವಿಜಯ ದಶಮಿ – ಲಕ್ಷ್ಮಿ ದೇವಿಗೆ ನೋಟುಗಳ ಅಲಂಕಾರ

    ಗದಗ: ಇಂದು ವಿಜಯ ದಶಮಿ (Vijaya Dashami) ಅಂಗವಾಗಿ ಗದಗ (Gadag) ನಗರದಲ್ಲಿ ಲಕ್ಷ್ಮಿ ದೇವಿಗೆ ನೋಟುಗಳಿಂದ (Note) ಅದ್ಭುತವಾಗಿ ಅಲಂಕಾರ ಮಾಡಲಾಗಿದೆ.

    ನಗರದ ಹುಡ್ಕೊ ಕಾಲೋನಿಯ ನೀಲಮ್ಮ ತಾಯಿ ಆಧ್ಯಾತ್ಮ ಆಶ್ರಮದಲ್ಲಿ ಲಕ್ಷ್ಮಿ ದೇವಿ ಪ್ರತಿಷ್ಠಾಪನೆ ಮಾಡಲಾಗಿದೆ. ನವರಾತ್ರಿ ಆರಂಭದಿಂದ ನಿತ್ಯ ವಿಭಿನ್ನವಾದ ರೀತಿಯಲ್ಲಿ ಅಲಂಕಾರ ಮಾಡಲಾಗುತ್ತಿತ್ತು. ಇಂದು 500, 100, 50, 20, 10 ರೂ. ನೋಟುಗಳಿಂದ ಅಲಂಕರಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ

    ಚಕ್ರ, ಮಾಲೆ, ತೋರಣ, ಕಮಲ ಹೀಗೆ ಅನೇಕ ರೂಪದಲ್ಲಿ ನೋಟುಗಳನ್ನು ಜೋಡಿಸಿ ಅಲಂಕಾರ ಮಾಡಲಾಗಿದೆ. ಸುಮಾರು 2 ಲಕ್ಷ 50 ಸಾವಿರ ರೂ.ಗಳಿಂದ ದೇವಿಗೆ ಶೃಂಗಾರ ಮಾಡಿ ವಿಶೇಷ ಪೂಜೆ ಮಾಡಲಾಗಿದೆ. ಆಶ್ರಮಕ್ಕೆ ಬಂದ ಭಕ್ತರು ದೇವಿಯ ವಿಭಿನ್ನವಾದ ಅಲಂಕಾರ ಕಣ್ತುಂಬಿಕೊಂಡು, ಭಕ್ತಿಯಿಂದ ಬೇಡಿಕೊಂಡು ಪುನೀತರಾಗಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿ ಸುತ್ತಮುತ್ತಲ ಪ್ರದೇಶದಲ್ಲಿ ಭೂಕಂಪನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋವಿಡ್ ಮುಂಜಾಗ್ರತೆಯೊಂದಿಗೆ ಶಿವಮೊಗ್ಗದಲ್ಲಿ ವೈಭವದ ದಸರಾ ಆಚರಣೆಗೆ ಸಿದ್ಧತೆ: ಕೆ.ಎಸ್ ಈಶ್ವರಪ್ಪ

    ಕೋವಿಡ್ ಮುಂಜಾಗ್ರತೆಯೊಂದಿಗೆ ಶಿವಮೊಗ್ಗದಲ್ಲಿ ವೈಭವದ ದಸರಾ ಆಚರಣೆಗೆ ಸಿದ್ಧತೆ: ಕೆ.ಎಸ್ ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗ್ರತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ಶಿವಮೊಗ್ಗದಲ್ಲಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರದಂತೆ ಎಲ್ಲಾ ಮುಂಜಾಗರೂಕತೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಅಸ್ಸಾಂನಿಂದ ಬರುತ್ತಿದ್ದಾರೆ ನೂರಾರು ಕೂಲಿ ಕಾರ್ಮಿಕರು – ಸ್ಥಳೀಯರ ಆತಂಕ

    9 ದಿನಗಳ ಕಾಲ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಹಿಂದೆ ವಿವಿಧ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

    ವಿಜಯ ದಶಮಿಯ ಕಡೆ ದಿನದ ಮೆರವಣಿಗೆಯನ್ನು ಸರಳವಾಗಿ, ವ್ಯವಸ್ಥಿತವಾಗಿ ನಡೆಸಲಾಗುವುದು. ಪ್ರತಿ ವರ್ಷ ನೀಡುವಂತೆ 196 ದೇವಾಲಯಗಳಿಗೆ ಪೂಜೆ ಅಲಂಕಾರಕ್ಕಾಗಿ 4 ಸಾವಿರ ರೂ. ಅನುದಾನ ಒದಗಿಸಲಾಗುವುದು. ಆದರೆ ಮೆರವಣಿಗೆಯಲ್ಲಿ ಎಲ್ಲಾ ದೇವಾಲಯಗಳು ಭಾಗವಹಿಸುವ ಅಗತ್ಯವಿಲ್ಲ. ಆಯ್ದ ಕೆಲವು ದೇವಾಲಯಗಳಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ:  ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    ದಸರಾದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ಸಹಾಯಕವಾಗುವಂತೆ ನಗರದ ವಿವಿಧೆಡೆಗಳಲ್ಲಿ ಎಲ್‍ಇಡಿ ಪರದೆಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಈ ಪರದೆಗಳ ಮೂಲಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಸಹಕರಿಸುವ ಮೂಲಕ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

    ಈ ಸುದ್ದಿಗೋಷ್ಠಿಯಲ್ಲಿ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ ವಟಾರೆ, ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

  • ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭ

    ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ಅರ್ಜುನ ಬನ್ನಿ ಮಂಟಪದತ್ತ ಹೆಜ್ಜೆ ಹಾಕುತ್ತಿದ್ದಾನೆ.

    ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದಾರೆ.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪುತ್ತದೆ. ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಆರಂಭವಾಗುತ್ತದೆ. ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸುತ್ತಾರೆ. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾಕ್ಕೆ ತೆರೆ ಬೀಳುತ್ತದೆ.