ಬಳ್ಳಾರಿ: ಸಿದ್ದರಾಮಯ್ಯ (Siddaramaiah) ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಅವರು ಪಾಕಿಸ್ತಾನ (Pakistan) ಅಥವಾ ಅಫ್ಘಾನಿಸ್ತಾನ (Afghanistan), ಬಾಂಗ್ಲದೇಶಕ್ಕೆ (Bangladesh) ಹೋದರೆ ಒಳ್ಳೆಯದು ಎಂದು ಪದೇ ಪದೇ ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಕುರಿತು ಸಚಿವ ಆರ್.ಅಶೋಕ್ (R.Ashok) ಸಿದ್ದರಾಮಯ್ಯನವರ ಕಾಲೆಳೆದರು.
ಬಳ್ಳಾರಿಯಲ್ಲಿ (Ballari) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ, ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಬಾದಾಮಿ (Badami) ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ (Kolar) ಗೆಲ್ಲುವುದೂ ಕಷ್ಟವಿದೆ. ಆದ್ದರಿಂದ ಕರ್ನಾಟಕದ 224 ಕ್ಷೇತ್ರಗಳು ಸಿದ್ದರಾಮಯ್ಯನವರಿಗೆ ಒಳ್ಳೆಯದಲ್ಲ. ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು. ಇಲ್ಲಿ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್. ಡಿ.ಕೆ.ಶಿವಕುಮಾರ್ (D.K.Shivakumar) ಅವರನ್ನು ಸೋಲಿಸುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ!
ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ (Vijaya Sankalpa Yatra) ಮೂಲಕ ಜನ ಜಾಗೃತಿಯನ್ನು ಮಾಡುತ್ತಿದ್ದೇವೆ. 224 ಕ್ಷೇತ್ರಗಳಲ್ಲಿ ರಿಚ್ ಆಗಿರುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ (BJP) ಮಾತ್ರ. ಯಾಕೆಂದರೆ ನಮ್ಮಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್‌ಗೆ (Congress) ಕೇವಲ ಇಬ್ಬರು ಮಾತ್ರ ನಾಯಕರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಿಟ್ಟರೆ ಕಾಂಗ್ರೆಸ್ ಪಕ್ಷಕ್ಕೆ ಮೂರನೇ ಲೀಡರಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಲಿಲ್ಲ. ಟಿಕೆಟ್ ಹಂಚಿಕೆಯಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷ ಆಡಳಿತ ಮಾಡಿದ್ದಾರೆ. ಆದ್ದರಿಂದ ಜನ ಇವರ 50 ವರ್ಷ ನೋಡಿ ಬದಲಾವಣೆ ಮಾಡುತ್ತಾರೆ ಎಂದರು. ಇದನ್ನೂ ಓದಿ: ಜೆಡಿಎಸ್ ಒಂದು ಪುಟ್ಗೋಸಿ ಪಕ್ಷ – ಮಾಜಿ ಸಚಿವ ನರೇಂದ್ರ ಸ್ವಾಮಿ ಅವಾಜ್
ಸೋಮಣ್ಣನವರ (V.Somanna) ಸಿಟ್ಟು 100 ಪರ್ಸೆಂಟ್ ಶಮನವಾಗಿದೆ. ಯಾವುದೇ ಸಂದರ್ಭದಲ್ಲೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅದೇ ರೀತಿ ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ (N.Y.Gopalakrishna) ಅವರು ಕೂಡಾ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: Bengaluru-Mysuru Expressway ನಲ್ಲಿ ಬೇಸಿಗೆ ಮಳೆಗೇ ಅವಾಂತರ- ವಾಹನ ಸವಾರರ ಪರದಾಟ
ಉಡುಪಿ: ಫೈಟರ್ ರವಿ (Fighter Ravi) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಪರಸ್ಪರ ನಮಸ್ಕಾರ ಮಾಡಿಕೊಂಡ ಫೋಟೊ ಬಹಳಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಮನಮೋಹನ್ ಸಿಂಗ್ (Manmohan Singh) ಫೋಟೋವನ್ನು ಹೋಲಿಕೆ ಮಾಡಿ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬೆಳವಣಿಗೆಗೆ ಸಂಬಂಧಪಟ್ಟಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಪ್ರತಿಕ್ರಿಯೆ ನೀಡಿದ್ದಾರೆ.
ಮೋದಿಗೆ ಕೈ ಮುಗಿಯಬಾರದು ಎಂದು ನಾವು ಹೇಳಲು ಆಗುವುದಿಲ್ಲ. ರಾಜಕೀಯ ಪಕ್ಷದ ಕಾರ್ಯಕರ್ತನಾಗಿ ಪ್ರಧಾನ ಮಂತ್ರಿಗೆ ಕೈಮುಗಿಯುತ್ತಾರೆ. ಯಾರೇ ಕೈಮುಗಿದರೂ ವಾಪಾಸ್ ಕೈಮುಗಿಯುವುದು ಪ್ರಧಾನ ಮಂತ್ರಿಗಳು ಇಟ್ಟುಕೊಂಡ ಸಂಪ್ರದಾಯ. ಆತ ಯಾವ ವ್ಯಕ್ತಿ? ಆತನ ಹೆಸರೇನು? ಯಾವ ಸೀಟು ಎನ್ನುವುದು ಪ್ರಧಾನಿಗೆ ಗೊತ್ತಿರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಪ್ಪು ಹೆಸರಿನಲ್ಲಿ ಜೆಡಿಎಸ್, ಕಾಂಗ್ರೆಸ್ ರಾಜಕೀಯ – PSI ಮೇಲೆ ಹಲ್ಲೆ
ಭಾರತೀಯನೊಬ್ಬ ಪ್ರಧಾನಿಗೆ ಕೈಮುಗಿದಿದ್ದಾನೆ. ಆತ ರೌಡಿಶೀಟರ್ ಆಗಿದ್ದರೆ ಯಾವ ರಕ್ಷಣೆಯೂ ಇಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಏನಾದರು ಅಪರಾಧ ಮಾಡಿದರೆ ಸಂವಿಧಾನದ ಪ್ರಕಾರ ಕ್ರಮ ಆಗುತ್ತದೆ. ಬಿಜೆಪಿ (BJP) ಪಕ್ಷದ ವಿಜಯ ಸಂಕಲ್ಪ ರಥಯಾತ್ರೆಗೆ (Vijaya Sankalpa Yatra) ಅಭೂತಪೂರ್ವ ಸ್ಪಂದನೆಯನ್ನು ಜನತೆ ನೀಡಿದ್ದಾರೆ. ಯುವಕರ ರಣೋತ್ಸವ, ಕಾಯಕರ್ತರ ಉತ್ಸಾಹದಿಂದಾಗಿ ಸಾವಿರಾರು ಜನರು ರಥಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇದರ ಆಧಾರದಲ್ಲಿ ಬಿಜೆಪಿ ಪಕ್ಷವು ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುಬ್ಬಿ ಶ್ರೀನಿವಾಸ್‌ಗೆ ಆಹ್ವಾನ – ಇಬ್ರಾಹಿಂ ವಿರುದ್ಧ ಹೆಚ್‌ಡಿಕೆ ಗರಂ
ಹಳೇ ಮೈಸೂರು (Mysuru) ಭಾಗದಲ್ಲಿ ಅಭ್ಯರ್ಥಿಯ ಆಯ್ಕೆಗೂ ತಡಕಾಡುತ್ತಿದ್ದ ಕಾಲವಿತ್ತು. ಆದರೆ ಈಗ ನೂರಕ್ಕೆ ನೂರು ಶಕ್ತಿ ವೃದ್ಧಿಸಿದೆ. ಪ್ರಧಾನಿ ಮೋದಿಯವರ ಮಂಡ್ಯ (Mandya) ಭೇಟಿ ವೇಳೆ ಜನರು ತೋರಿದ ಪ್ರೀತಿಯೇ ಇದಕ್ಕೆ ಸಾಕ್ಷಿ ಎಂದರು. ಲೋಕಾಯುಕ್ತಕ್ಕೆ ಹಲ್ಲು ಕೊಟ್ಟದ್ದು ಬಿಜೆಪಿ ಸರ್ಕಾರ. ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Madal Virupakshappa) ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಪ್ರಕರಣವು ಚುನಾವಣಾ ಸನಿಹದಲ್ಲಿರುವುದರಿಂದ ಸ್ವಾಭಾವಿಕವಾಗಿ ಚರ್ಚೆಯಾಗುತ್ತದೆ. ಆದರೆ ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರಿಯ ಮಾಡಿ, ಎಸಿಬಿ ರಚಿಸಿದ್ದು ಯಾರು ಎಂಬುದು ರಾಜ್ಯದ ಜನರಿಗೆ ತಿಳಿದಿದೆ. ಲೋಕಾಯುಕ್ತಕ್ಕೆ ಮರುಜೀವ ನೀಡಿ, ಶಕ್ತಿ ಕೊಟ್ಟು, ಹಲ್ಲು ಕೊಟ್ಟಿರುವುದು ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಎಂದರು. ಇದನ್ನೂ ಓದಿ: ಬಡವರಿಗೆ ಮನೆ, ಅನಾಥಾಶ್ರಮಗಳಿಗೆ ಮಧ್ಯಾಹ್ನದ ಭೋಜನ – ಇದು ದಿನಗೂಲಿ ನೌಕರರಿಂದಲೇ ರಚನೆಯಾದ ಟ್ರಸ್ಟ್
ಪಾರದರ್ಶಕ ಆಡಳಿತ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ಸಲುವಾಗಿ ಲೋಕಾಯುಕ್ತವನ್ನು ಜಾರಿಗೆ ತಂದಿದೆ. ನಮ್ಮ ಸರ್ಕಾರ ಬಿಟ್ಟು ಬೇರೆ ಯಾವ ಸರ್ಕಾರ ಇದ್ದರೂ, ಆಡಳಿತ ಪಕ್ಷದ ಶಾಸಕನ ಮೇಲೆ ಪ್ರಕರಣ ದಾಖಲಾಗಲು ಸಾಧ್ಯವಿತ್ತೆ? ಆರೋಪವಿದೆ, ಅದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಸೋಮಣ್ಣ ಕಣ್ಣೀರು – ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ
ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಒಳ್ಳೆಯದಾಗಲಿ, ರಾಜಕೀಯವಾಗಿ ಸಿದ್ದರಾಮಯ್ಯ ಹಾಳಾಗಿ ಹೋಗಲಿ ಎಂದು ಬಿಜೆಪಿ (BJP) ನಾಯಕ ಈಶ್ವರಪ್ಪ (K.S.Eshwarappa) ದೇವರಲ್ಲಿ ಬೇಡಿಕೊಂಡಿದ್ದಾರೆ.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ (Vijaya Sankalpa Yatra) ಉಡುಪಿಗೆ ಬಂದಿದ್ದು ಕಾರ್ಕಳ ಮತ್ತು ಉಡುಪಿ (Udupi) ವಿಧಾನಸಭಾ ಕ್ಷೇತ್ರದಲ್ಲಿ ರ‍್ಯಾಲಿ ಮತ್ತು ಸಭೆಗಳನ್ನು ನಡೆಸಿದೆ. ಈ ಸಂಬಂಧ ಮಣಿಪಾಲದಲ್ಲಿ (Manipal) ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಕೃಷ್ಣ ಮಠಕ್ಕೆ (Krishna Math) ಬಾರದಿರುವ ಬಗ್ಗೆ ಗಮನ ಸೆಳೆದರು. ಇದನ್ನೂ ಓದಿ: ಸಿ.ಟಿ ರವಿಗೆ 20 ವರ್ಷ ಸಾಕಾಗಿಲ್ವಾ, ಏನು ಮಾಡಿದ್ದಾರೆ?- ಮತದಾರರಿಂದ ಕ್ಲಾಸ್
ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸಿದ್ದರಾಮಯ್ಯನವರು ಬಹಳ ಸಲ ಉಡುಪಿಗೆ ಬಂದರು. ಆದರೆ ಒಮ್ಮೆಯೂ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ. ಭಕ್ತ ಕನಕದಾಸರ ಪುತ್ಥಳಿ ಕೃಷ್ಣ ಮಠದಲ್ಲಿದೆ. ಕನಕನಿಗೂ ಕೃಷ್ಣನಿಗೂ ವಿಶೇಷವಾದ ಸಂಬಂಧವಿದೆ. ಕೃಷ್ಣನ ಸ್ಪೂರ್ತಿ ಕನಕನಿಗೆ ಸಿಕ್ಕಿತು. ಇಂತಹ ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾಕೆ ಭೇಟಿ ನೀಡಲಿಲ್ಲ? ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಕೃಷ್ಣ ಮಠಕ್ಕೆ ಬರಲಿಲ್ಲ. ಕೃಷ್ಣನ ಶಾಪದಿಂದಲೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರಿ. ಇನ್ನಾದರೂ ಕೃಷ್ಣಮಠಕ್ಕೆ ಬನ್ನಿ, ನಿಮಗೆ ಒಳ್ಳೆಯದಾಗುತ್ತದೆ ಎಂದು ಹಾರೈಸಿದರು. ಇದನ್ನೂ ಓದಿ: ಬಿಜೆಪಿ ವಕ್ರದೃಷ್ಟಿ – ಮೋದಿ ರೋಡ್‌ಶೋಗೆ ಕುಮಾರಸ್ವಾಮಿ ಒಕ್ಕಲಿಗ ಕಾರ್ಡ್ ಪ್ಲೇ
ಸಿದ್ದರಾಮಯ್ಯನವರ ಮೇಲೆ ಪ್ರೀತಿಯಿಂದ, ಅವರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳುತ್ತಿದ್ದೇನೆ. ರಾಜಕೀಯ (Politics) ಉದ್ದೇಶದಿಂದ ಈ ರೀತಿ ಹೇಳಲಿಲ್ಲ. ಪ್ರೀತಿ ಇಲ್ಲದೇ ಇದ್ದರೆ ರಾಜಕೀಯ ಮಾಡಲು ಸಾಧ್ಯವಿಲ್ಲ. ದೇಶದ್ರೋಹ ಹಾಗೂ ಧರ್ಮ ದ್ರೋಹಿಗಳನ್ನು ದ್ವೇಷಿಸಬೇಕು. ಸಿದ್ದರಾಮಯ್ಯನವರು ಎಲ್ಲಾ ಕಡೆ ದೇವಸ್ಥಾನಕ್ಕೆ ಹೋಗುತ್ತಾರೆ ಆದರೆ ಕೃಷ್ಣ ಮಠಕ್ಕೆ ಬರುವುದಿಲ್ಲ ಎಂದರು. ಇದನ್ನೂ ಓದಿ: ಮಂಡ್ಯ ಜನರ ಎದುರು ಮತ್ತೆ ಸಿಎಂ ಆಗುವ ಮಹಾದಾಸೆ ವ್ಯಕ್ತಪಡಿಸಿದ ಡಿಕೆಶಿ
ಸಿದ್ದರಾಮಯ್ಯನವರು ಮಠಗಳಿಗೆ ಹಣವನ್ನು ಕೊಡುತ್ತಾರೆ, ಮುಖ್ಯಮಂತ್ರಿ ಆಗಿದ್ದಾಗ ನನಗೂ ಹಣ ಕೊಟ್ಟಿದ್ದಾರೆ. ನನ್ನ ಕ್ಷೇತ್ರದಲ್ಲಿರುವ ದೇವಸ್ಥಾನ ಹಾಗೂ ಮಠಗಳಿಗೂ ಸಿದ್ದರಾಮಯ್ಯ ಕೊಡುಗೆಗಳನ್ನು ಕೊಟ್ಟಿದ್ದರು. ನಾನು ಮಂತ್ರಿಯಾಗಿದ್ದಾಗ ಅವರ ಬೇಡಿಕೆಗಳಿಗೂ ಸ್ಪಂದಿಸಿದ್ದೇನೆ. ನಮ್ಮಿಬ್ಬರ ನಡುವೆ ಸ್ನೇಹವಿದೆ. ನಾವಿಬ್ಬರೂ ಚೆನ್ನಾಗಿದ್ದೇವೆ. ಪಕ್ಷದ ವಿಚಾರ ಬಂದಾಗ, ಮೋದಿಯನ್ನು (Narendra Modi) ಟೀಕೆ ಮಾಡಿದಾಗ ನಾನು ಯಾವ ಭಾಷೆ ಬಳಸಿದ್ದೇನೆ ಎಂದು ನಿಮಗೆ ಗೊತ್ತು. ಮೋದಿಯನ್ನು ನರಹಂತಕ ಎಂದು ಕರೆದರೆ ಸುಮ್ಮನೆ ಬಿಡುತ್ತೇವಾ ಎಂದು ಹಾರೈಕೆಯ ಜೊತೆ ಸಿದ್ದರಾಮಯ್ಯನವರ ಕಿವಿ ಹಿಂಡಿದರು. ಇದನ್ನೂ ಓದಿ: ಮಂಡ್ಯ ಬಿಜೆಪಿಗೆ ಸುಮಲತಾ ಬೂಸ್ಟರ್- ಹಾಡಿಹೊಗಳಿದ ಬಿ.ಎಲ್ ಸಂತೋಷ್
ವಿಜಯಪುರ: ಕಾಂಗ್ರೆಸ್ (Congress) ಮತ್ತು ಜೆಡಿಎಸ್‌ನಲ್ಲಿ (JDS) ಲೀಡರ್‌ಶಿಪ್ ಡಿಎನ್‌ಎ ಮೂಲಕ ಬರುತ್ತದೆ. ಈ ಎರಡೂ ಪಕ್ಷದಲ್ಲೂ ಅನುವಂಶೀಯ ನಾಯಕತ್ವವಿದೆ. ಈ ಎರಡೂ ಪಕ್ಷಗಳಿಗೂ ಪ್ರಜಾಪ್ರಭುತ್ವದ (Democracy) ಮೇಲೆ ನಂಬಿಕೆ ಇಲ್ಲ. ಆದರೆ ಬಿಜೆಪಿಗೆ (BJP) ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿದೆ ಎಂದು ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿದರು.
ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿಯಲ್ಲಿ ಸೋಮವಾರ ಬಿಜೆಪಿ ವಿಜಯಸಂಕಲ್ಪ ಯಾತ್ರೆ (Vijaya Sankalpa Yatra) ಕೈಗೊಂಡಿದ್ದು, ಯಾತ್ರೆಗೂ ಮುನ್ನ ಬಿಜೆಪಿ ನಾಯಕರ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಬಿಜೆಪಿ ಪಕ್ಷವು ಜನ ಸಾಮಾನ್ಯರ ನೇತೃತ್ವದಿಂದ ಬೆಳೆದು ಬಂದಿದ್ದು, ನೀತಿಗೆ ಅಂಟಿಕೊಂಡಿದೆ. ರಾಜೀವ್ ಗಾಂಧಿ (Rajiv Gandhi) ಇದ್ದ ಸಂದರ್ಭದಲ್ಲಿ ಕಳ್ಳರೆಲ್ಲಾ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಇದು ರಾಜೀವ್ ಗಾಂಧಿಯವರಿಗೂ ಗೊತ್ತಿತ್ತು. ನಮಗೆ ನಿಯತ್ತಿದೆ. ನಾವು ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ಮತಗಳನ್ನು ಕೇಳುತ್ತೇವೆ. ಪ್ರಣಾಳಿಕೆಯಲ್ಲಿ ಹೇಳದೇ ಇರುವಂತಹ ಯೋಜನೆಗಳನ್ನು ನಾವು ಕೊಟ್ಟಿದ್ದೇವೆ. ಅಲ್ಲದೇ ಅದರ ಕೆಲಸಗಳನ್ನು ಯಾರಿಗೂ ಹೇಳದೆ ಮಾಡಿ ತೋರಿಸಿದ್ದೇವೆ ಎಂದರು. ಇದನ್ನೂ ಓದಿ: ಚಾರ್ಜ್ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ
ಇದೇ ವೇಳೆ ಮಾಜಿ ಸಚಿವ ಎಂ.ಬಿ ಪಾಟೀಲ್ (M.B.Patil) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಕೆರೆ ತುಂಬುವ ಯೋಜನೆಯನ್ನು ನಿಮ್ಮದೇ ಸರ್ಕಾರ ತಿರಸ್ಕಾರ ಮಾಡಿತ್ತು. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೀರಾವರಿ ಸಚಿವರಾಗಿದ್ದಾಗ ಕೆರೆ ತುಂಬುವ ಯೋಜನೆಗೆ ಅನುಮತಿ ನೀಡಿರಲಿಲ್ಲ. ಬಿಜೆಪಿ ಸರ್ಕಾರ ಕೆರೆ ತುಂಬುವ ಯೋಜನೆಯನ್ನು ಜಾರಿಗೆ ತಂದಿದೆ. ಇದೀಗ ನೀವೂ ಅದೇ ಯೋಜನೆಯ ಹೆಸರಿನಲ್ಲಿ ಫೋಟೋ ಹಾಕಿಕೊಳ್ಳುತ್ತೀರಿ ಎಂದು ಹೇಳಿದರು. ಇದನ್ನೂ ಓದಿ: Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟ್ ಅವಧಿ ಮುಗಿದಿದೆ. ಇನ್ನು ವಾರೆಂಟಿ ಕಾರ್ಡ್ ನೀಡಿ ಏನು ಪ್ರಯೋಜನ? ಎಲ್ಲಾ ಕಡೆಯೂ ಕಾಂಗ್ರೆಸ್ ಪಕ್ಷ ತಿರಸ್ಕಾರಕ್ಕೆ ಒಳಗಾಗುತ್ತಿದೆ. ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: `ಕಾಂತಾರ 2’ಗೆ ಚಾಲನೆ ಸಿಗುವ ಮುನ್ನವೇ ಹೊಸ ಸಿನಿಮಾ ನಿರ್ಮಾಣದತ್ತ ರಿಷಬ್ ಶೆಟ್ಟಿ
ಸಿದ್ದರಾಮಯ್ಯ (Siddaramaiah) ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತದೆ. ಈ ಹಿಂದೆ ಮೋದಿ ಪ್ರಧಾನಿ ಆಗುವುದಿಲ್ಲ ಎಂದಿದ್ದರು, ಆದರೆ ಮೋದಿ (Narendra Modi) ಪ್ರಧಾನಿಯಾದರು. ಯಡಿಯೂರಪ್ಪ (Yediyurappa) ಸಿಎಂ ಆಗುವುದಿಲ್ಲ ಎಂದರು, ಆದರೆ ಯಡಿಯೂರಪ್ಪ ಸಿಎಂ ಆದರು. ಹೀಗಾಗಿ ಇನ್ನುಮುಂದೆ ಸಿದ್ದರಾಮಯ್ಯನವರು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಚಾರ ಮಾಡಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಜಕೀಯದಿಂದ ದೂರವಿರಲು ಕಾರಣರಾದ ಆ ವ್ಯಕ್ತಿ ಬಗ್ಗೆ ಬಹಿರಂಗಪಡಿಸಿದ ರಜನಿಕಾಂತ್
ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ(Mandya) ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ದೆಹಲಿ ಶಾಸಕರ ಸಂಬಳ ಭರ್ಜರಿ ಹೆಚ್ಚಳ
ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಮತ್ತು ಸಿದ್ದರಾಮಯ್ಯ (Siddaramaiah) ಮನೆಗೆ ಹೋಗುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ಬೈಲಹೊಂಗಲ, ಸವದತ್ತಿಯಲ್ಲಿ ಶನಿವಾರ ಬಿಎಸ್‌ವೈ ಜೊತೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya Sankalpa Yatra) ಪಾಲ್ಗೊಂಡು ಮಾತನಾಡಿದ ಅವರು, ʼಕೈʼ ನಾಯಕರು ಎಲ್ಲೆಡೆ ಈ ಬಾರಿ ಕಾಂಗ್ರೆಸ್ ಗ್ಯಾರಂಟಿ ಅಂತಾ ಹೇಳಿಕೊಂಡು ತಿರುಗಾಡ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಮನೆಗೆ ಹೋಗುವುದು ಗ್ಯಾರಂಟಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ-ಬೆಂಗಳೂರು ನಡುವೆ ಮತ್ತೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ – ಪ್ರಹ್ಲಾದ್ ಜೋಶಿ
ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಹೋದ ಕಡೆಯಲ್ಲೆಲ್ಲಾ ಮಾತಾಡ್ತಾರೆ. ಆದರೆ ಕಾಂಗ್ರೆಸ್‌ನಲ್ಲಿ ದಲಿತ ನಾಯಕರ ಬೆಳವಣಿಗೆಯನ್ನ ಹತ್ತಿಕ್ಕುತ್ತಿರುವವರು ಇದೇ ಸಿದ್ದರಾಮಯ್ಯ. ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯ ಅವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದು ಟಾಂಗ್ ಕೊಟ್ಟರು.
ಸಿದ್ದರಾಮಯ್ಯ ಅವರು ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯ ರಾಜಕಾರಣದಿಂದ ದೂರ ಸರಿಸಿದರು. ನಂತರ ಜಿ.ಪರಮೇಶ್ವರ್ ಅವರನ್ನ ಹತ್ತಿಕ್ಕಿದರು. ಇದೀಗ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೋಗಿ ಕೆ.ಹೆಚ್.ಮುನಿಯಪ್ಪ ಅವರನ್ನ ಮುಗಿಸಲು ಹೊರಟಿದ್ದಾರೆ. ಮೂವರು ದಲಿತ ನಾಯಕರನ್ನ ಹತ್ತಿಕ್ಕಿರುವ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಟೀಕಿಸಿದರು. ಇದನ್ನೂ ಓದಿ: ಕರ್ನಾಟಕದ ಜನ ಒಳ್ಳೆಯವ್ರು, ಆದ್ರೆ ನಾಯಕರು ಕೆಟ್ಟವ್ರು – ರಾಜ್ಯವನ್ನ ಬರ್ಬಾದ್ ಮಾಡ್ತಿದ್ದಾರೆ: ಕೇಜ್ರಿವಾಲ್ ಕಿಡಿ
58 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಏನು ಮಾಡಲಿಲ್ಲ. ರೈತರ ಸಾಲ ಮನ್ನಾ ಮಾಡ್ತೀವಿ. ರೈತರ ಅಕೌಂಟ್‌ಗೆ ನೇರ ಹಣ ವರ್ಗಾವಣೆ ಮಾಡ್ತೀವಿ ಅಂತಾ ಸುಳ್ಳು ಹೇಳಿದ್ದರು. ಆದರೆ ಕಿಸಾನ್ ಸಮ್ಮಾನ್ ಮೂಲಕ ರೈತರ ಖಾತೆಗೆ 6 ಸಾವಿರ ಹಣವನ್ನು ಮೋದಿ ಅವರು ಕೊಟ್ರು. ಅಲ್ಲದೇ ರೈತ ನಾಯಕ ಬಿಎಸ್‌ವೈ 4 ಸಾವಿರ ಹೆಚ್ಚಿಗೆ ಸೇರಿಸಿ ಒಟ್ಟು 10 ಸಾವಿರ ಹಣವನ್ನು ರೈತರ ಖಾತೆಗೆ ಜಮಾ ಮಾಡಿಸಿದ್ದಾರೆ ಎಂದು ಬಣ್ಣಿಸಿದರು.
ಈಗ ಕಾಂಗ್ರೆಸ್‌ನವರು ಉಚಿತ ವಿದ್ಯುತ್ ಕೊಡ್ತೇವೆ ಅಂತಾ ಬುರುಡೆ ಬಿಡ್ತಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ ಕರೆಂಟೇ ಕೊಡ್ತಿರಲಿಲ್ಲ. ಕೇಂದ್ರದಲ್ಲಿ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ 24 ಗಂಟೆ ಕರೆಂಟ್ ಕೊಡ್ತಿದ್ದೇವೆ. ಫ್ರೀ ಕರೆಂಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ಕ್ವಾಲಿಟಿ ಕರೆಂಟ್ ಕೊಡುವ ನೀತಿ ಅನುಸರಿಸುತ್ತಿದೆ. ಜನರು ಕಾಂಗ್ರೆಸ್ ಸುಳ್ಳುಗಳಿಗೆ ಮರುಳಾಗಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಣ ಕೊಡದಿದ್ದಕ್ಕೆ ಬಿಜೆಪಿ ಬಾವುಟಕ್ಕೆ ಬೆಂಕಿ – ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ಕೊಟ್ಟ ಮುಖಂಡ
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕೇವಲ ರಾಜಕೀಯ ಮಾಡಿತು. ಗೋವಾಗೆ ಹೋಗಿ ಹನಿ ನೀರು ಕೊಡಲ್ಲ ಎಂದವರು ಸೋನಿಯಾ ಗಾಂಧಿಯವರು. ಆದರೆ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಮಹದಾಯಿ ನೀರು ಬೈಲಹೊಂಗಲ, ಸವದತ್ತಿಗೆ ತರುತ್ತಿದ್ದರೆ ಅದು ಬಿಜೆಪಿ ಅನ್ನೋದನ್ನ ಜನ ಮರೆಯಬಾರದು ಎಂದು ಒತ್ತಿ ಹೇಳಿದರು.
ಮೈಸೂರು: ವಿಜಯ ಸಂಕಲ್ಪ ಯಾತ್ರೆಗೆ (Vijaya Sankalpa Yatra) ಬಂದ ಜನರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಬಾವುಟಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರು (Mysuru) ಜಿಲ್ಲೆಯ ಕೆ.ಆರ್ ನಗರದಲ್ಲಿ ನಡೆದಿದೆ.
ಶುಕ್ರವಾರ ಕೆ.ಆರ್ ನಗರದಲ್ಲಿ (KR Nagar) ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K. S. Eshwarappa) ನೇತೃತ್ವದ ವಿಜಯ ಸಂಕಲ್ಪ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಮಾಜಿ ಸಿಎಂ ಸದಾನಂದ ಗೌಡ (D. V. Sadananda Gowda) ಸೇರಿದಂತೆ ಕೆ.ಆರ್ ನಗರ ತಾಲೂಕಿನ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಗಳು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ಯಾತ್ರೆಗೆ ಬಂದ ಜನರಿಗೆ ಆಯೋಜಕರು ಹಣ ನೀಡಿರಲಿಲ್ಲ. ಇದನ್ನೂ ಓದಿ: ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್
80 ಬೈಕ್‌ಗಳಿಗೆ ಪೆಟ್ರೋಲ್‌ಗೆ ದುಡ್ಡು ಕೊಡಲಿಲ್ಲ ಎಂದು ರೊಚ್ಚಿಗೆದ್ದ ಕಾರ್ಯಕರ್ತರು ಬಿಜೆಪಿ ಬಾವುಟಕ್ಕೆ (BJP Flag) ಬೆಂಕಿ ಹಚ್ಚಿ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡರ (Mirle Srinivas Gowda) ವಿರುದ್ಧ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ನಾಟಕ ಟಿಪ್ಪು ವಿರುದ್ಧ ಅಲ್ಲ, ತುಕ್ಡೆ ತುಕ್ಡೆ ಅನ್ನೋರ ವಿರುದ್ಧ- ಅಡ್ಡಂಡ ಕಾರ್ಯಪ್ಪ
ಬೀದರ್: ವಿಜಯ ಸಂಕಲ್ಪ ಯಾತ್ರೆಯು (Vijaya Sankalpa Yatra) ಬಡವರ ಕಲ್ಯಾಣದ ಸಂಕಲ್ಪವನ್ನು ಹೊಂದಿದೆ. ಇದು ರಾಜ್ಯದ ವಿಕಾಸದ ಸಂಕಲ್ಪದ ಯಾತ್ರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಶುಕ್ರವಾರ ವಿಶ್ಲೇಷಿಸಿದರು.
ಬೀದರ್ (Bidar) ಜಿಲ್ಲೆ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ 3ನೇ ರಥ ಯಾತ್ರೆಯನ್ನು ಉದ್ಘಾಟಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಇಲ್ಲಿನ ಯಾತ್ರೆಯು ಕಲ್ಯಾಣ ಕರ್ನಾಟಕದ ವಿವಿಧ ಕಡೆ ಸಂಚರಿಸಲಿದೆ. ಈ ಭಾಗದ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ನಮ್ಮದಾಗಬೇಕಿದೆ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು. ಇದನ್ನೂ ಓದಿ: ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಅದು ಪಕ್ಷಕ್ಕೆ ಹೇಗೆ ಬರುತ್ತದೆ – ಗೋವಿಂದ ಕಾರಜೋಳ ಪ್ರಶ್ನೆ
ರೈಲ್ವೆಯಲ್ಲಿ ಯುಪಿಎ ಸರ್ಕಾರ ಕೊಟ್ಟದ್ದಕ್ಕಿಂತ 9 ಪಟ್ಟು ಹೆಚ್ಚು ಹಣ ಕೊಡಲಾಗಿದೆ. ಲಂಬಾಣಿ ಸಮುದಾಯಕ್ಕೆ ನ್ಯಾಯ ಕೊಟ್ಟಿದ್ದೇವೆ. ಕಾಂಗ್ರೆಸ್‍ನಲ್ಲಿ ಒಂದು ಸಿಎಂ ಕುರ್ಚಿಗಾಗಿ 10 ಜನ ನಾಯಕರಿದ್ದಾರೆ. ಇವರು ಕರ್ನಾಟಕಕ್ಕೆ ಒಳಿತನ್ನು ಕೊಡಲು ಸಾಧ್ಯವೇ? ಕಾಂಗ್ರೆಸ್ ಬಳಿ ಗೆಲುವಿನ ಸೂತ್ರ ಉಳಿದಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸ್ಥಿತಿ ಕುಸಿಯುತ್ತಿದೆ. ಮೋದಿ ಅವರ ಸಾವಿಗಾಗಿ ಘೋಷಣೆ ಕೂಗುತ್ತಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಟೀಕೆಯಿಂದ ಕಮಲ ಇನ್ನಷ್ಟು ಪ್ರಬಲವಾಗಿ ಹೊರಹೊಮ್ಮಲಿದೆ. ವಿಕಾಸದ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ. ಮೋದಿಜಿ ಸಾವನ್ನು ಬಯಸುವ ಕಾಂಗ್ರೆಸ್ಸಿಗರ ಸೋಲಿಗೆ ಕಲ್ಯಾಣ ಕರ್ನಾಟಕದ ಜನತೆ ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.
ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಿಸಿದ ಬಿಜೆಪಿ, ಈ ಪ್ರದೇಶದ ಅಭಿವೃದ್ಧಿಗೆ ಬದ್ಧವಿದೆ. ಗರಿಷ್ಠ ಹಣವನ್ನೂ ಈ ಭಾಗಕ್ಕೆ ಕೊಟ್ಟಿದ್ದೇವೆ. ಸಿದ್ದರಾಮಯ್ಯ ಸರ್ಕಾರವು ಕಾಂಗ್ರೆಸ್ ಎಟಿಎಂ ಆಗಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಕುಟುಂಬವಾದವನ್ನು ಪೋಷಿಸುವ ಪಕ್ಷಗಳು. ಜೆಡಿಎಸ್‍ಗೆ ಕೊಡುವ ಮತ ಸಂಪೂರ್ಣ ಹಾಳಾಗುತ್ತದೆ. ಅದು ಕಾಂಗ್ರೆಸ್‍ಗೆ ಮತ ಕೊಟ್ಟಂತೆ. ತುಕ್ಡೇ ತುಕ್ಡೇ ಗ್ಯಾಂಗ್ ಬೆಂಬಲಿಸುವ, ಆತಂಕವಾದಕ್ಕೆ ಬೆಂಬಲ ಕೊಡುವ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡದಿರಿ ಎಂದು ತಿಳಿಸಿದರು.
10 ಕೋಟಿ ಶೌಚಾಲಯ ನೀಡಿದ್ದು, 13 ಕೋಟಿ ಜನರಿಗೆ ಸಿಲಿಂಡರ್, ವಿದ್ಯುತ್ ಇಲ್ಲದ ಮನೆಗಳಿಗೆ ವಿದ್ಯುತ್ ಕೊಡಲಾಗಿದೆ. 80 ಕೋಟಿ ಜನರಿಗೆ ಉಚಿತ ಪಡಿತರ, ಉಚಿತ ಕೋವಿಡ್ ಲಸಿಕೆ ನೀಡಲಾಗಿದೆ. ಉಚಿತ ವಿಮೆ, ಆರೋಗ್ಯ ರಕ್ಷಣೆ ಸಹ ಒದಗಿಸಲಾಗಿದೆ. ದೇಶದ ರಕ್ಷಣೆಗಾಗಿ 370ನೇ ವಿಧಿಯನ್ನು ರದ್ದು ಮಾಡಲಾಯಿತು. ಕಾಂಗ್ರೆಸ್ ಮತ ಬ್ಯಾಂಕ್ ಪರವಾಗಿದೆ. ನಾವು ಮತಬ್ಯಾಂಕಿನ ಕಡೆ ಗಮನ ಕೊಡುತ್ತಿಲ್ಲ. ನಮಗೆ ದೇಶದ ಸುರಕ್ಷತೆ ಮುಖ್ಯ. ರಾಮಮಂದಿರ ಬೇಕಿತ್ತೇ ಅಥವಾ ಬೇಡವಾಗಿತ್ತೇ? ಮಂದಿರ ವಿಚಾರವನ್ನು ವಿಳಂಬ ಮಾಡಿದ್ದೇ ಕಾಂಗ್ರೆಸ್. ಆದರೆ ಮೋದಿಜಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದರು. ಕಾಶಿ, ಕೇದಾರನಾಥ, ಸೋಮನಾಥ ಮಂದಿರದ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ 50 ಟಿಕೆಟ್ ಹೊಸಬರಿಗೆ ಫಿಕ್ಸ್?
ರಸ್ತೆ, ವಿಮಾನ ನಿಲ್ದಾಣ, ನಲ್ಲಿ ನೀರಿನ ಸಂಪರ್ಕ, ಶಿಕ್ಷಣ ಕ್ಷೇತ್ರ, ನೀರಾವರಿಗೆ ಗರಿಷ್ಠ ಹಣ ನೀಡಿದ್ದೇವೆ. ನಮ್ಮ ಕ್ಲಿನಿಕ್ ಸೇರಿ ಮನೆ, ಮನೆಗೆ ನೀರಿನ ಸೌಕರ್ಯ ಕೊಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಮೂಲಕ ಮೋದಿಜಿ- ಯಡಿಯೂರಪ್ಪ ಸರ್ಕಾರ ಹಣ ನೀಡಿತು. ಜಗಜ್ಯೋತಿ ಬಸವೇಶ್ವರರು ಪ್ರಜಾಪ್ರಭುತ್ವದ ಸಂದೇಶ ನೀಡಿದರು. ಮೋದಿಜಿ ಗೌರವಪೂರ್ಣವಾಗಿ ಇದನ್ನು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಯಡಿಯೂರಪ್ಪ- ಬೊಮ್ಮಾಯಿ ಅವರು ಇಲ್ಲಿನ ಅಭಿವೃದ್ಧಿಗೆ ಗರಿಷ್ಠ ಅನುದಾನ ಕೊಟ್ಟಿದ್ದಾರೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಕಾರಣಕರ್ತರು ಪ್ರಧಾನಿ ಮೋದಿಜಿ. ಅಮಿತ್ ಶಾ ಅವರು ಕೋವಿಡ್ ನಿಯಂತ್ರಣಕ್ಕೆ ಶ್ರಮಿಸಿದರು. ದೇಶದ ಆರ್ಥಿಕ ಸ್ಥಿತಿಯನ್ನು ಸರಿ ದಾರಿಗೆ ತಂದು ದೇಶವನ್ನು ಮುನ್ನಡೆಸಿದವರು ಮೋದಿಜಿ. ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಿದ್ದರೆ ದೇಶದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತಿತ್ತು. ಸಾವಿರಾರು ಸಾವು ಆಗುತ್ತಿತ್ತು. ಆದರೆ ಮೋದಿಜಿ ಅಧಿಕಾರದಲ್ಲಿ ಇದ್ದ ಕಾರಣ ಹಾಗಾಗಲಿಲ್ಲ ಎಂದು ವಿವರಿಸಿದರು.
ದೇಶದ ಅಮೃತ ಕಾಲಕ್ಕೆ ಭದ್ರ ಬುನಾದಿ ಹಾಕಲು 2023ರಲ್ಲಿ ಕರ್ನಾಟಕದಲ್ಲಿ ಬಿಜೆಪಿ, 2024ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರ ಪಡೆಯಬೇಕಿದೆ. ಬಿಜೆಪಿಗೆ ಮತ ಹಾಕಿ; ಮತ ಹಾಕಿಸಿ ಎಂದು ಮನವಿ ಮಾಡಿದರಲ್ಲದೇ, ಸಾಲದ ಹೊರೆ ಕೊಟ್ಟದ್ದು ಕಾಂಗ್ರೆಸ್. ಜನರಿಗೆ ಮೋಸ ಮಾಡುವುದು, ಸುಳ್ಳು, ಭ್ರಷ್ಟಾಚಾರ ಎಂದರೆ ಅದು ಕಾಂಗ್ರೆಸ್. ಜಾತಿ, ಮತಗಳನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ರಾಜ್ಯದ ಹಿನ್ನಡೆಗೆ ಕಾಂಗ್ರೆಸ್ ಕಾರಣ. ನೈಜ ಸಾಮಾಜಿಕ ನ್ಯಾಯವನ್ನು ಬಿಜೆಪಿ ಮೀಸಲಾತಿ ಮೂಲಕ ಕೊಟ್ಟಿದೆ. ಇದು ಕಾಂಗ್ರೆಸ್ ಹೊಟ್ಟೆಯಲ್ಲಿ ತಳಮಳಕ್ಕೆ ಕಾರಣವಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ನೀಡಲಾಗುತ್ತಿದೆ. ನಮ್ಮದು ಜನಸಮಸ್ಯೆಗೆ ಸ್ಪಂದಿಸುವ ಸರ್ಕಾರ. ಮತ್ತೆ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸದಿಂದ ನುಡಿದರು. ಇದನ್ನೂ ಓದಿ: ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ ಬರಲಿಲ್ಲ: ಸೋಮಶೇಖರ್ ಸ್ಪಷ್ಟನೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yediyurappa) ಮಾತನಾಡಿ, 4 ರಥಗಳು 224 ಕ್ಷೇತ್ರಗಳಿಗೆ ಭೇಟಿ ಕೊಡಲಿವೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಬೃಹತ್ ಸಭೆ ನಡೆಯಲಿದೆ. ಮಹಾನ್ ನಾಯಕ ನರೇಂದ್ರ ಮೋದಿಜಿ ಅವರು ಬರಲಿದ್ದಾರೆ. ಬಸವ ಕಲ್ಯಾಣ ಹೇಗಿತ್ತು? ಇವತ್ತು ಸಾವಿರಾರು ಕೋಟಿ ಹಣದಿಂದ ಹೇಗೆ ಅಭಿವೃದ್ಧಿ ಆಗಿದೆ ಎಂದು ಗಮನಿಸಿ. ಮೋದಿಜಿ, ಅಮಿತ್ ಶಾಜಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಅದಕ್ಕೆ ನಿಮ್ಮ ಬೆಂಬಲ ಇರಲಿ ಎಂದರಲ್ಲದೆ, ಕಾಂಗ್ರೆಸ್‍ನ ಹಣ, ತೋಳು ಬಲದ ಮೂಲಕ ಗೆಲ್ಲುವುದು ತಿರುಕನ ಕನಸಷ್ಟೇ. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾತನಾಡಿ, ಬಸವಣ್ಣನ ಕರ್ಮಭೂಮಿಯಿಂದ ಈ ಯಾತ್ರೆ ಆರಂಭವಾಗಿದೆ. ಇದಕ್ಕೆ ಬಸವಣ್ಣನ ಪ್ರೇರಣೆ ಇದೆ. ಬಸವ ಕಲ್ಯಾಣವು ಜನರ ಆಕರ್ಷಣೆಯ ಕೇಂದ್ರಬಿಂದು. ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದೆ. ನರೇಂದ್ರ ಮೋದಿಜಿ ಅವರ ಸಾಧನೆಗಳನ್ನು ಜಗತ್ತೇ ಕೊಂಡಾಡುತ್ತಿದೆ. ಕೋವಿಡ್ ನಿಯಂತ್ರಣದ ಮಹತ್ವದ ಕಾರ್ಯವನ್ನು ನಮ್ಮ ಪ್ರಧಾನಿ ಮೋದಿಜಿ ಮಾಡಿದ್ದಾರೆ. 140 ಕೋಟಿ ಜನರಿಗೆ ಉಚಿತ ಲಸಿಕೆ ನೀಡಿದ್ದಾರೆ. ಶ್ರೀಲಂಕಾ- ಪಾಕಿಸ್ತಾನಗಳು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿವೆ. ಪಾಕ್ ಜನತೆ ಮೋದಿಜಿ ಅವರಂಥ ನಾಯಕತ್ವ ಬಯಸುತ್ತಿದ್ದಾರೆ. ದೇಶದ ಸಾಧನೆ, ದೇಶ, ರಾಜ್ಯಗಳ ಅಭಿವೃದ್ಧಿಯನ್ನು ಗಮನಿಸಿ ಮತ್ತೆ ಬಿಜೆಪಿ ಆಡಳಿತಕ್ಕೆ ಅವಕಾಶ ಕೊಡಬೇಕೆಂದು ವಿನಂತಿಸಿದರು. ಇದನ್ನೂ ಓದಿ: ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ- ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್
ಸಚಿವ ಬಿ.ಶ್ರೀರಾಮುಲು, ರಾಜ್ಯದ ಸಹ ಉಸ್ತುವಾರಿ ಡಿ.ಕೆ.ಅರುಣಾ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಸಚಿವ ಪ್ರಭು ಚೌಹಾಣ್, ಸಂಸದ ಉಮೇಶ್ ಜಾಧವ್, ಶಾಸಕ ರಘುನಾಥ ಮಲ್ಕಾಪುರೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಶಾಸಕ ಶರಣು ಸಲಗರ್, ಶಾಸಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.
ಶಿವಮೊಗ್ಗ: ಕಾಂಗ್ರೆಸ್‌ನಲ್ಲಿ (Congress) ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ? ರಾಷ್ಟ್ರೀಯ ನಾಯಕರಿಲ್ಲದೆ ಕಾಂಗ್ರೆಸ್ ಪಕ್ಷವು ಸೊರಗುತ್ತಿದೆ. ನಮ್ಮಲ್ಲಿ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಕೂಡಾ ಇದ್ದಾರೆ. ರಾಜ್ಯಕ್ಕೆ ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರುತ್ತಾರೆ. ರಾಹುಲ್ ಗಾಂಧಿ (Rahul Gandhi), ಸೋನಿಯಾ (Sonia Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಸೋತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (Eshwarappa) ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.
ಪದೇ ಪದೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುವ ಬಗ್ಗೆ ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗತಿ ಇಲ್ಲದೇ ಇರುವವರು ಕಾಂಗ್ರೆಸ್ ನಲ್ಲಿ ಪ್ರಚಾರಕ್ಕೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಾತ್ರ ಎಲ್ಲೆಡೆ ಹೋಗುತ್ತಿದ್ದಾರೆ. ಅವರಿಬ್ಬರು ಸಮಾವೇಶಗಳನ್ನು ಮಾಡಿಕೊಂಡು ಬಾಯಿಗೆ ಬಂದಂತೆ ಮಾತನಾಡಿಕೊಂಡು ಓಡಾಡುತ್ತಿದ್ದಾರೆ. ಅವರಲ್ಲಿ ನಾಯಕರೇ ಇಲ್ಲ. ಹಾಗಾಗಿ ಅವರು ಯಾರೂ ರಾಜ್ಯಕ್ಕೆ ಬರುವುದಿಲ್ಲ. ಇದ್ದವರು ಬಂದರೆ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: `ಕೈ’ಗೆ ಶಾಕ್ – ಚುನಾವಣಾ ರಾಜಕೀಯದಿಂದ ಶಾಸಕ ತನ್ವೀರ್ ಸೇಠ್ ನಿವೃತ್ತಿ
ಕಾಂಗ್ರೆಸ್‌ನ ಪೇ ಸಿಎಂ ಪೋಸ್ಟರ್ ವಾರ್ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮೊದಲು ನರೇಂದ್ರ ಮೋದಿಗೆ ನರಹಂತಕ ಎಂದರು. ಬಳಿಕ ಇವರದ್ದು ಪರ್ಸಂಟೇಜ್ ವ್ಯವಹಾರ ಎಂದು ಟೀಕೆ ಮಾಡಿದರು. ಈಗ ಪೇ ಸಿಎಂ ಎಂದು ಆರೋಪ ಮಾಡುತ್ತಿದ್ದಾರೆ. ನಾವು ಏನು ಅಭಿವೃದ್ಧಿ ಮಾಡಿದ್ದೇವೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಾರೆ. ಇದಕ್ಕೆ ತಕ್ಕ ಉತ್ತರ ಚುನಾವಣೆಯಲ್ಲಿ ಕೊಡುತ್ತಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರು ಟೀಕೆ ಮಾಡುವ ಪದಗಳು ಸರಿಯಿಲ್ಲ. ನಮಗೂ ಆ ಭಾಷೆ ಬಳಸಲು ಬರುತ್ತದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಭಾಷೆಗಳ ಬಗ್ಗೆ ಹಿಡಿತವೇ ಇಲ್ಲ. ಇವರನ್ನು ಈಗಾಗಲೇ ರಾಜ್ಯದ ಜನರು ತಿರಸ್ಕಾರ ಮಾಡಿದ್ದಾರೆ. ತಿರಸ್ಕಾರ ಮಾಡಿದ ಮುಖಗಳನ್ನು ಇಟ್ಟುಕೊಂಡು ಮತ್ತೆ ಹೋದರೆ ಜನರು ಪುರಸ್ಕರಿಸುತ್ತಾರಾ ಎಂದು ಪ್ರಶ್ನಿಸಿದರು.
ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಎಂದು ಸಿದ್ದರಾಮಯ್ಯನವರಿಗೆ ಯಡಿಯೂರಪ್ಪನವರು ಹೇಳಿದ್ದರು. ಆ ಮಾತನ್ನು ಕೂಡಾ ಅವರು ಕೇಳಲಿಲ್ಲ. ಏನೋ ಹಿರಿಯರಾಗಿ ಯಡಿಯೂರಪ್ಪನವರು ಸಲಹೆಯನ್ನು ನೀಡಿದ್ದರು. ಅದನ್ನು ಕೂಡಾ ಸಿದ್ದರಾಮಯ್ಯನವರು ತಿರಸ್ಕರಿಸಿದ್ದಾರೆ. ಹಿರಿಯರ ಮಾರ್ಗದರ್ಶನ ಬೇಕು ಎಂದರೆ ಅವರ ಮಾತನ್ನು ಕೇಳಬಹುದಿತ್ತು ಎಂದರು. ಇದನ್ನೂ ಓದಿ: ಮೋದಿ ಭೇಟಿಯಿಂದ ʼಕೈʼ ನಾಯಕರಿಗೆ ಭ್ರಮನಿರಸನ: ಬೊಮ್ಮಾಯಿ
ಸಿದ್ದರಾಮಯ್ಯನವರಿಗೆ ತಮ್ಮ ಕ್ಷೇತ್ರ ಯಾವುದೆಂದೇ ಗೊತ್ತಿಲ್ಲ. ಆದರೆ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದೇ ವೇಳೆ ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವುದಾಗಿಯೂ ಹೇಳಿದ್ದಾರೆ. ಆದರೆ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸಲು ಸೂಚಿಸಿದೆಯೇ? ಯಾವುದೇ ಕಾರಣಕ್ಕೂ ಕೋಲಾರದಲ್ಲಿ ಸಿದ್ದರಾಮಯ್ಯನವರು ಸ್ಪರ್ಧಿಸುವುದೂ ಇಲ್ಲ. ಒಂದೊಮ್ಮೆ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ, ಮುನಿಯಪ್ಪನವರು ಇವರನ್ನು ಗೆಲ್ಲಲು ಬಿಡುವುದಿಲ್ಲ. ಏಕೆಂದರೆ ಇವರೆಲ್ಲರ ಸೋಲಿಗೆ ಸಿದ್ದರಾಮಯ್ಯ ಕಾರಣವಾಗಿದ್ದಾರೆ ಎಂದು ಹರಿಹಾಯ್ದರು.
ಶಿವಮೊಗ್ಗದಲ್ಲಿ ವಿಜಯ ಸಂಕಲ್ಪ ಯಾತ್ರೆ ಕುರಿತು ಮಾತನಾಡಿದ ಅವರು, ಮಾರ್ಚ್ 1ರಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ವಿಜಯ ಸಂಕಲ್ಪ ಯಾತ್ರೆ ಹೊರಡಲಿದೆ. ಒಟ್ಟು ನಾಲ್ಕು ದಿಕ್ಕುಗಳಿಂದ ಯಾತ್ರೆ ಹೊರಡಲಿದ್ದು, ಜೆ.ಪಿ.ನಡ್ಡಾ ಅವರು ಈ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆಯನ್ನು ನೀಡಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Election) ಸಮೀಪ ಬರುತ್ತಿರುವಂತೆಯೇ ರಾಜ್ಯಕ್ಕೆ ಬಿಜೆಪಿ (BJP) ವರಿಷ್ಠರ ಆಗಮನವೂ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಜ.21 ಶನಿವಾರ ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ (Vijaya Sankalpa Yatra) ಶನಿವಾರ ಜೆ.ಪಿ ನಡ್ಡಾ ಚಾಲನೆ ಕೊಡಲಿದ್ದಾರೆ. ಬೂತ್ ವಿಜಯ ಸಂಕಲ್ಪ ಅಭಿಯಾನದಲ್ಲಿ ಬೂತ್‍ಗಳ ಮಟ್ಟದಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ರಿಪೋರ್ಟ್ ಕಾರ್ಡ್ ಅನ್ನು ಜನತೆ ಮುಂದಿಡಲಾಗುತ್ತದೆ. ಆ ಮೂಲಕ ಸರ್ಕಾರದ ಕಾರ್ಯಕ್ರಮಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ. ಇದನ್ನೂ ಓದಿ: Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದ NIA
ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ. ನಾಳೆ ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನವನ್ನು ಜೆ.ಪಿ ನಡ್ಡಾ ಉದ್ಘಾಟಿಸಲಿದ್ದಾರೆ. ಆ ಬಳಿಕ ಮನೆ ಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ ನಡ್ಡಾ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ರೈತರ ಬದುಕಿನ ಅನಿಶ್ಚಿತತೆ ಹೋಗಲಾಡಿಸಲು ವೈಜ್ಞಾನಿಕ ಔಟ್‌ಲುಕ್ ವರದಿ ಅಗತ್ಯ – ಸಿಎಂ
ಬಳಿಕ ಸಿಂಧಗಿಗೆ ತೆರಳುವ ಜೆ.ಪಿ ನಡ್ಡಾ, ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಕಲಬುರಗಿಯಿಂದ ದೆಹಲಿಗೆ ಹಿಂತಿರುಗಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಉಡುಪಿ: ಜಿಲ್ಲೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ಕೊಟ್ಟರು. ಫಿರ್ ಏಕ್ ಬಾರ್ ಮೋದಿ ಸರ್ಕಾರ್ ಎನ್ನುವ ಮೂಲಕ ಭಾಷಣ ಆರಂಭಿಸಿದರು.
ಮೋದಿ ಜೊತೆ ರಾಹುಲ್ ಹೋಲಿಕೆ ಮಾಡುವುದೇ ತಪ್ಪು. ರಕ್ಷಣೆ ವಿಷಯದಲ್ಲಿ ದೇಶ ಗೌರವಪಡುವಂತೆ ನಡೆದುಕೊಂಡಿದ್ದೇವೆ. ಪುಲ್ವಾಮ ಘಟನೆಯಿಂದ ಭಾರತ ತತ್ತರಿಸಿ ಹೋಗಿತ್ತು. 12 ದಿನದಲ್ಲಿ ನಮ್ಮ ಕೆಲಸ ಮಾಡಿ ತೋರಿಸಿದ್ದೇವೆ. ಪುಲ್ವಾಮದಂತೆ ಇನ್ನೂ ಅನೇಕ ಆತ್ಮಹತ್ಯೆ ದಾಳಿ ಎಸಗುವ ಸೂಚನೆ ಇತ್ತು. ಹಾಗಾಗಿ ಅವರನ್ನು ತಡೆಯಲು ಕಾರ್ಯಾಚರಣೆ ಮಾಡಲೇಬೇಕಿತ್ತು ಎಂದು ಏರ್ ಸ್ಟ್ರೈಕ್ ಸಮರ್ಥಿಸಿದರು.
ಬೆಲೆ ಏರಿಕೆ ನಿಯಂತ್ರಣಕ್ಕೆ ತಂದಿದ್ದೇವೆ. ಭ್ರಷ್ಟಾಚಾರದ ಆರೋಪವಂತೂ ಇಲ್ಲವೇ ಇಲ್ಲ. ಬಡವರಿಗಾಗಿ ನಿರಂತರ ಹೊಸ ಕಾರ್ಯಕ್ರಮ ನೀಡಿದ್ದೇವೆ. ಕಾಂಗ್ರೆಸ್ ಬಡತನವನ್ನು ದೇಶದಲ್ಲಿ ಜೀವಂತವಾಗಿರಿಸಿತು. ಚುನಾವಣೆ ಬಂದಾಗ ಬಡತನ ನಿರ್ಮೂಲನೆಯ ಮಾತನಾಡುತ್ತಾ ಬಂತು. ಮಹಾಘಟ ಬಂಧನ್ ಮೋದಿಯನ್ನು ಕೆಳಗಿಳಿಸಲು ಹವಣಿಸುತ್ತಿದೆ. ಪ್ರಧಾನಿ ಹುದ್ದೆಗೆ ಗೌರವ ನೀಡಲು ಬರದ ರಾಹುಲ್ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಛೇಡಿಸಿದರು.
ಸುಮ್ಮನಿದ್ದರೆ ದೇಶ ನಮ್ಮನ್ನು ಕ್ಷಮಿಸುತ್ತಿರಲಿಲ್ಲ. ಭಯೋತ್ಪಾಧನಾ ಕೇಂದ್ರವನ್ನೇ ಧ್ವಂಸ ಮಾಡಿದ್ದೇವು. ಪಾಕಿಸ್ತಾನಕ್ಕೆ ಆಗದ್ದನ್ನು ಮೋದಿ ಮಾಡಿ ತೊರಿಸಿದ್ದಾರೆ. ಭಯೋತ್ಪಾದನೆ ಸಹಿಸಲು ಸಾಧ್ಯವೇ ಇಲ್ಲ ಎನ್ನುವ ಸಂದೇಶ ರವಾನೆಯಾಗಿದೆ ಎಂದು ಹೇಳಿದರು. ಸೇನೆಗೆ ಸ್ವಾತಂತ್ರ್ಯ ನೀಡಿದ್ದೇವೆ. ಮುಂಬೈ ಅಟ್ಯಾಕ್ ಆದಾಗ ಕಾಂಗ್ರೆಸ್ ಧೈರ್ಯ ತೋರಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಕುಟುಕಿದರು.
ಸೇನಾ ಮುಖ್ಯಸ್ಥರನ್ನೇ ಬೀದಿಯ ಗೂಂಡಾ ಅಂತಾರೆ. ಮೋಯ್ಲಿ ಸೈನ್ಯದ ಮುಖ್ಯಸ್ಥರನ್ನು ಸುಳ್ಳು ಎಂದು ಹೇಳುತ್ತಾರೆ. ಮಣಿ ಶಂಕರ್ ಅಯ್ಯರ್ ಪಾಕಿಸ್ತಾನದ ನೆರವು ಕೇಳ್ತಾರೆ. ಪಾಕ್ ಪ್ರಧಾನಿಗೆ ನೋಬೆಲ್ ಕೊಡಬೇಕು ಎನ್ನುವವರು ಕಾಂಗ್ರೆಸ್ ನಲ್ಲಿದ್ದಾರೆ. ಇಂತಹ ಕಾಂಗ್ರೆಸ್ ನಿಂದ ದೇಶ ಉದ್ಧಾರ ಆಗಲ್ಲ ಎಂದು ಹೇಳಿದರು.