Tag: vijayakanth

  • ನಟ ವಿಜಯಕಾಂತ್ ಕೊಲೆ ಆಗಿದೆ: ಗಂಭೀರ ಆರೋಪ ಮಾಡಿದ ಡೈರೆಕ್ಟರ್

    ನಟ ವಿಜಯಕಾಂತ್ ಕೊಲೆ ಆಗಿದೆ: ಗಂಭೀರ ಆರೋಪ ಮಾಡಿದ ಡೈರೆಕ್ಟರ್

    ನಿನ್ನೆಯಷ್ಟೇ ಅಸೌಖ್ಯದಿಂದ ನಿಧನರಾಗಿರುವ ನಟ, ರಾಜಕಾರಣಿ ವಿಜಯಕಾಂತ್ (Vijayakanth) ಅವರದ್ದು ಸಹಜವಾವಲ್ಲ, ಅದೊಂದು ಕೊಲೆ (Murder) ಎಂದು ಮಲಯಾಳಂನ ಖ್ಯಾತ ಸಿನಿಮಾ ನಿರ್ದೇಶಕ ಅಲ್ಪೋನ್ಸ್ ಪುತ್ರೆನ್ (Alphonse Puthren) ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಅವರು ಇನ್ಸ್ಟಾದ ಸ್ಟೋರಿ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

    ತನ್ನ ಆತಂಕವನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಲ್ಪೋನ್, ರಾಜಕಾರಣಿ ಉದಯನಿಧಿ ಸ್ಟಾಲಿನ್ ಅವರಿಗೆ ತನಿಖೆ ನಡೆಸುವಂತೆ ಮನವಿ ಕೂಡ ಮಾಡಿಕೊಂಡಿದ್ದಾರೆ. ಜೊತೆಗೆ ಜಯಲಲಿತಾ ಕೊಂದವರು ಯಾರೆಂದು ತಾವು ಕೇಳಿರುವುದಾಗಿಯೂ ತಿಳಿಸಿದ್ದಾರೆ.

    ಕ್ಯಾಪ್ಟನ್ ವಿಜಯಕಾಂತ್ ಅವರ ಕೊಲೆ ಮಾಡಿದವರನ್ನು ಪತ್ತೆ ಮಾಡಬೇಕು. ನೀವು ಅದನ್ನು ನಿರ್ಲಕ್ಷ್ಯ ಮಾಡಿದರೆ, ನಿಮ್ಮ ಹಾಗೂ ಸ್ಟಾಲಿನ್ ಅವರನ್ನು ಟಾರ್ಗೆಟ್ ಮಾಡ್ತಾರೆ. ಈಗಾಗಲೇ ಇಂಡಿಯನ್ 2 ಸೆಟ್ ನಲ್ಲಿ ಸ್ಟಾಲಿನ್ ಹಾಗೂ ಕಮಲ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದರು ಎಂದು ಪುತ್ರೆನ್ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸಾಕಷ್ಟು ವೈರಲ್ ಆಗಿದೆ.

  • ನಟ ವಿಜಯಕಾಂತ್ ನಿಧನ: ಅನಾರೋಗ್ಯದ ಜೊತೆ ಕೊರೋನಾ ಪಾಸಿಟಿವ್

    ನಟ ವಿಜಯಕಾಂತ್ ನಿಧನ: ಅನಾರೋಗ್ಯದ ಜೊತೆ ಕೊರೋನಾ ಪಾಸಿಟಿವ್

    ಮಿಳಿನ (Tamil Nadu) ಹೆಸರಾಂತ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗಷ್ಟೇ ಅವರಿಗೆ ಕೋವಿಡ್ ಪಾಸಿಟಿವ್ (Covid positive) ಆಗಿದ್ದು, ನಂತರ ತತಕ್ಷಣವೇ ಅವರನ್ನು ಐಸಿಯೂಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ತಮಿಳು ನಾಡಿನ ಡಿಎಂಡಿಕೆ (DMDK) ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್ (Vijayakanth) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ ಲೋಕಕ್ಕೆ ಹೋಗಿದ್ಧಾರೆ ಕ್ಯಾಪ್ಟನ್ ವಿಜಯಕಾಂತ್.

    ಹಲವಾರು ವರ್ಷಗಳ ಕಾಲ ನಟರಾಗಿ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿರುವ ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಗಳು ಅವರನ್ನೂ ಕಾಡುತ್ತಿದ್ದವು. ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಹೇಳುವ ಮೂಲಕ ಗೊಂದಲದ ಹೇಳಿಕೆಗಳನ್ನೂ ಪಕ್ಷ ಕೊಟ್ಟಿತ್ತು.

     

    ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದ್ದರು. ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹಾಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿತ್ತು. ಈಗ ಎಲ್ಲದಕ್ಕೂ ತೆರೆ ಎಳೆಯಲಾಗಿದೆ.

  • ನಟ ವಿಜಯಕಾಂತ್ ಆರೋಗ್ಯದಲ್ಲಿ ಅಲ್ಪ ಚೇತರಿಕೆ: ಐಸಿಯುವಿನಲ್ಲೇ ಚಿಕಿತ್ಸೆ

    ನಟ ವಿಜಯಕಾಂತ್ ಆರೋಗ್ಯದಲ್ಲಿ ಅಲ್ಪ ಚೇತರಿಕೆ: ಐಸಿಯುವಿನಲ್ಲೇ ಚಿಕಿತ್ಸೆ

    ರಡು ದಿನಗಳ ಹಿಂದೆಯಷ್ಟೇ ಅನಾರೋಗ್ಯದ ಕಾರಣದಿಂದಾಗಿ ಖಾಸಗಿ ಆಸ್ಪತ್ರೆಗೆ (Hospital)  ದಾಖಲಾಗಿದ್ದ ನಟ, ರಾಜಕಾರಣಿ ವಿಜಯಕಾಂತ್ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡುವೆ. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದಾರೆ.

    ತಮಿಳು ನಾಡಿನ ಡಿಎಂಡಿಕೆ (DMDK) ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಕಳೆದೆರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ಎರಡು ದಿನಗಳ ಹಿಂದೆ ವರದಿ ಮಾಡಿವೆ.

    ಕ್ಯಾಪ್ಟನ್ ವಿಜಯಕಾಂತ್ (Vijayakanth) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.

     

    ಹಲವಾರು ವರ್ಷಗಳ ಕಾಲ ನಟರಾಗಿ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿರುವ ಕ್ಯಾಪ್ಟನ್ ವಿಜಯಕಾಂತ್ ಅವರಿಗೆ 71 ವರ್ಷ ವಯಸ್ಸಾಗಿದೆ. ವಯೋ ಸಹಜ ಕಾಯಿಲೆಗಳು ಅವರನ್ನೂ ಕಾಡುತ್ತಿವೆ. ಎರಡು ದಿನಗಳ ಹಿಂದೆ ಅವರು ರೆಗ್ಯುಲರ್ ತಪಾಸಣೆಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲೆಯಾಗಿದ್ದಾರೆ ಎಂದು ಗೊಂದಲದ ಹೇಳಿಕೆಗಳನ್ನೂ ಪಕ್ಷ ಕೊಟ್ಟಿತ್ತು.

     

    ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ. ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹಾಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿತ್ತು.

  • ತಮಿಳು ಸ್ಟಾರ್ ಧನುಷ್ ಮನೆಗೆ ಬಾಂಬ್ ಬೆದರಿಕೆ!

    ತಮಿಳು ಸ್ಟಾರ್ ಧನುಷ್ ಮನೆಗೆ ಬಾಂಬ್ ಬೆದರಿಕೆ!

    – ರಾಜಕಾರಣಿ ವಿಜಯಕಾಂತ್‍ಗೂ ಬೆದರಿಕೆ

    ಚೆನ್ನೈ: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.

    ಬಾಂಬ್ ಬೆದರಿಕೆ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಕೂಡಲೇ ಇಬ್ಬರ ಮನೆಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿ ಏನೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಎಂದು ತಿಳಿಸಿದ್ದಾರೆ.

    ಚೆನ್ನೈನ ಧನುಷ್ ಅವರ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದರು.

    ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಈ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ಪೊಲೀಸರು ತಿಳಿದುಕೊಂಡರು. ಘಟನೆಯ ಬಳಿಕ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕಳೆದ ಎರಡು ತಿಂಗಳುಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ನಕಲಿ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

    ಜುಲೈ 18ರಂದು ನಟ ಅಜಿತ್ ಅವರ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿತ್ತು. ಕೂಡಲೇ ಪೊಲೀಸರು ಅವರ ಮನೆಗೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದರು. ಬಾಂಬ್ ಸ್ಕ್ವಾಡ್ ಅದೀಕಾರಿಗಳು ಇಡೀ ಮನೆಯನ್ನೇ ಜಾಲಾಡಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದರು.

    ಈ ಎಲ್ಲಾ ಪ್ರಕರಣಗಳು ಮಾಸುವ ಮುನ್ನವೇ ಇದೀಗ ಧನುಷ್ ಹಾಗೂ ವಿಜಯಕಾಂತ್ ಮನೆಗಳಿಗೆ ಬೆದರಿಕೆ ಕರೆ ಬಂದಿದೆ. ಆದರೆ ಈ ಕರೆಗಳನ್ನು ಓರ್ವ ವ್ಯಕ್ತಿಯೇ ಮಾಡಿದ್ದಾನೋ ಇಲ್ಲವೋ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.