Tag: vijayapura

  • ಟೋಲ್ ಸಿಬ್ಬಂದಿ ಮೇಲೆ ಪುತ್ರನಿಂದ ಹಲ್ಲೆ – ನನ್ನ ಮಗನ ತಪ್ಪಿದ್ದರೆ ಕ್ಷಮೆ ಕೇಳಿಸ್ತೀನಿ: ವಿಜೂಗೌಡ ಪಾಟೀಲ್‌

    ಟೋಲ್ ಸಿಬ್ಬಂದಿ ಮೇಲೆ ಪುತ್ರನಿಂದ ಹಲ್ಲೆ – ನನ್ನ ಮಗನ ತಪ್ಪಿದ್ದರೆ ಕ್ಷಮೆ ಕೇಳಿಸ್ತೀನಿ: ವಿಜೂಗೌಡ ಪಾಟೀಲ್‌

    ಬೆಂಗಳೂರು: ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನನ್ನ ಮಗನಿಂದ ತಪ್ಪಾಗಿದ್ದರೆ ಕ್ಷಮೆ ಕೇಳಿಸುತ್ತೇನೆ ಎಂದು ಬಿಜೆಪಿ (BJP) ಮುಖಂಡ ವಿಜೂಗೌಡ ಪಾಟೀಲ್ (Vijugouda Patil) ಹೇಳಿದ್ದಾರೆ.

    ವಿಜಯಪುರ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯಿರುವ ಟೋಲ್ ಬಳಿ ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಪುತ್ರ ಸಮರ್ಥಗೌಡ ಪಾಟೀಲ್ ಹಾಗೂ ಆತನ ಸ್ನೇಹಿತರು ಹಲ್ಲೆ ಮಾಡಿದ ಪ್ರಕರಣದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮಗ ಟೋಲ್ ಬಳಿ ಹೋಗಿದ್ದು ನಿಜ. ಟೋಲ್‌ನಲ್ಲಿದ್ದ ಸಿಬ್ಬಂದಿ ಯಾರ ವಾಹನ ಅಂತ ಕೇಳಿದ್ದಾರೆ. ನಾನು ವಿಜೂಗೌಡ ಅವರ ಮಗ ಅಂತ ಹೇಳಿದ್ದಾನೆ. ಯಾವ ವಿಜೂಗೌಡ? ಅವರ ಮಗ ಆದ್ರೆ ಏನಂತೆ ಟೋಲ್ ಕಟ್ಟಿ ಹೋಗಬೇಕು ಅಂತ ಹೇಳಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ವಿಜಯಪುರ | ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

    ನಾವು ಅಲ್ಲಿ ದಿನ ಹೋಗೋದು ಬರೋದು ಮಾಡುತ್ತೇವೆ. ನಮ್ಮನ್ನ ಗುರುತು ಹಿಡಿಬೇಕು ಅಂತ ಹೇಳಿದ್ದಾನೆ. ನನ್ನ ಮಗ ಹೊಡೆದಿಲ್ಲ. ಹಿಂದಿನಿಂದ ಬಂದು ಅವನ ಸ್ನೇಹಿತರೆಲ್ಲ ಸೇರಿ ಹೊಡೆದಿದ್ದಾರೆ. ನನ್ನ ಮಗ ಜಗಳ ಬಿಡಿಸಲು ಹೋಗಿದ್ದಾನೆ ಅಷ್ಟೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಎಲ್ಲರೂ ಟೋಲ್ ಕಟ್ಟಲೇಬೇಕು. ಕಟ್ಟುವುದಿಲ್ಲ ಅಂತ ನನ್ನ ಮಗ ಹೇಳಿಲ್ಲ. ಆದರೆ ಯಾರದ್ರೂ ತಂದೆ ಬಗ್ಗೆ ಮಾತನಾಡಿದರೆ ಕೋಪ ಬರುತ್ತದೆ ಅಲ್ವಾ? ಹಾಗಾಗಿ ನನ್ನ ಮಗ ಕೋಪದಿಂದ ಮಾತನಾಡಿದ್ದಾನೆ. ಈ ವಿಚಾರದಲ್ಲಿ ನಾನು ನನ್ನ ಮಗನನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ ಎಂದಿದ್ದಾರೆ.

    ಯಾರೆಲ್ಲ ಹಲ್ಲೆ ಮಾಡಿದ್ದಾರೆ ಅವರೆಲ್ಲರಿಗೂ ನಾನು ಬೈದಿದ್ದೇನೆ. ಅಲ್ಲದೇ ಕ್ಷಮಾಪಣೆ ಕೇಳಬೇಕು ಅಂತ ಹೇಳಿದ್ದೇನೆ. ಯಾರೂ ತಪ್ಪು ಮಾಡಿದ್ರೂ ಕ್ಷಮೆ ಕೇಳಬೇಕು. ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದು ತಪ್ಪು ಎಂದು ಹೇಳಿದ್ದಾರೆ.

    ಉಪ್ಪು ತಿಂದವರೂ ನೀರು ಕುಡಿಯಲೇ ಬೇಕು. ತಪ್ಪು ಯಾರೇ ಮಾಡಿದ್ರೂ ಅದು ತಪ್ಪೇ. ನನ್ನ ಮಗ ತಪ್ಪು ಮಾಡಿದ್ರೆ ಕ್ಷಮೆ ಕೇಳಿಸುತ್ತೇನೆ. ನನ್ನ ಮಗ ತಪ್ಪು ಮಾಡಿರುವ ಬಗ್ಗೆ ನನಗೆ ಇನ್ನೂ ಸಂಶಯವಿದೆ. ನಾನೇ ಖುದ್ದು ಸ್ಥಳಕ್ಕೆ ಹೋಗಿ ಯಾರು ತಪ್ಪು ಮಾಡಿದ್ದಾರೆ ಎಂದು ತಿಳಿದುಕೊಳ್ಳುತ್ತೇನೆ ಎಂದಿದ್ದಾರೆ.

  • ವಿಜಯಪುರ | ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

    ವಿಜಯಪುರ | ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರನಿಂದ ಹಲ್ಲೆ

    ವಿಜಯಪುರ: ಟೋಲ್ ಹಣ ಪಾವತಿಸಲು ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಬಿಜೆಪಿ (BJP) ಮುಖಂಡ ವಿಜೂಗೌಡ ಪಾಟೀಲ್ (Vijugouda Patil) ಪುತ್ರ ಹಲ್ಲೆ ನಡೆಸಿರುವ ಘಟನೆ ವಿಜಯಪುರ-ಕಲಬುರಗಿ ಟೋಲ್‌ನಲ್ಲಿ ನಡೆದಿದೆ.

    ಬಿಜೆಪಿ ಮುಖಂಡ ವಿಜೂಗೌಡ ಪಾಟೀಲ್ ಅವರ ಪುತ್ರ ಸಮರ್ಥಗೌಡ ಪಾಟೀಲ್ ಹಾಗೂ ಸ್ನೇಹಿತರು ವಿಜಯಪುರದಿಂದ ಕಪ್ಪು ಬಣ್ಣದ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟಿದ್ದರು. ಈ ವೇಳೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯಿರುವ ಟೋಲ್‌ನಲ್ಲಿ ಹಣ ಪಾವತಿಸಲು ಕೇಳಿದ್ದಾರೆ. ಆಗ ಸಮರ್ಥಗೌಡ ನಾನು ವಿಜೂಗೌಡ ಪಾಟೀಲ್ ಪುತ್ರ ಎಂದು ಹೇಳಿದ್ದಾನೆ. ಆಗ ಟೋಲ್ ಸಿಬ್ಬಂದಿ ಯಾವ ವಿಜೂಗೌಡ ಎಂದು ಕೇಳಿದ್ದಾರೆ. ಇದರಿಂದ ಕೋಪಗೊಂಡ ಸಮರ್ಥಗೌಡ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ.ಇದನ್ನೂ ಓದಿ: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡು ಪ್ರಮೋಷನ್: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

    ಸಮರ್ಥಗೌಡ ಮಾತ್ರವಲ್ಲದೇ ಆತನ ಸ್ನೇಹಿತರು ಕೂಡ ಹಲ್ಲೆ ನಡೆಸಿದ್ದಾರೆ. ಇದರಿಂದ ಟೋಲ್ ಸಿಬ್ಬಂದಿ ಹಣ ತೆಗೆದುಕೊಳ್ಳದೇ ಹಾಗಾಯೇ ಅವರನ್ನು ಬಿಟ್ಟು ಕಳುಹಿಸಿದ್ದಾರೆ. ಹಲ್ಲೆ ನಡೆಸಿದ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸದ್ಯ ಗಾಯಾಳು ಸಂಗಪ್ಪ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದು, ಟೋಲ್ ಸಿಬ್ಬಂದಿ ದೂರು ದಾಖಲಿಸಲು ಮುಂದಾಗಿದ್ದಾರೆ.ಇದನ್ನೂ ಓದಿ: ಚಿತ್ತಾಪುರ RSS ಪಥಸಂಚಲನ ವಿವಾದ – ನ.5ಕ್ಕೆ ಬೆಂಗಳೂರಲ್ಲಿ ಶಾಂತಿಸಭೆ, ನ.7ಕ್ಕೆ ಮತ್ತೆ ವಿಚಾರಣೆ

  • ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ನವದೆಹಲಿ/ವಿಜಯಪುರ: ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ (Kanneri Shri) ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ವಿಜಯಪುರ (Vijayapura) ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಿಚಾರಣೆ ವೇಳೆ ನ್ಯಾಯಪೀಠ ಸ್ವಾಮೀಜಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.ಇದನ್ನೂ ಓದಿ: ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು – ಎಂ.ಬಿ ಪಾಟೀಲ್ ಆಗ್ರಹ

    ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠ ವಿಚಾರಣೆ ನಡೆಸಿತು. ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ, ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ನೀವು ಒಳ್ಳೆಯ ಪ್ರಜೆಯಲ್ಲ, ಅವಹೇಳನಕಾರಿ ಭಾಷೆ ಬಳಸಿದ್ದೀರಿ, ಇದು ವಾಕ್ ಸ್ವಾತಂತ್ರ‍್ಯ ವ್ಯಾಪ್ತಿಯಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದೆ.

    ಮುಂದುವರಿದು, ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿಲ್ಲ, ಮೊದಲು ನೀವು ಮಾತನಾಡುವುದು ನಿಲ್ಲಿಸಿ, ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಸದ್ಯಕ್ಕೆ ಒಂದೆರಡು ತಿಂಗಳುಗಳ ಕಾಲ ನೀವು ವಿಜಯಪುರಕ್ಕೆ ಭೇಟಿ ನೀಡುವ ಅಗತ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

    ಗುಪ್ತಚರ ಇಲಾಖೆ ಮಾಹಿತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಧಿಕಾರಿಗಳು ನಿರ್ಬಂಧಿಸಿದ್ದರು. ಇದನ್ನು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಹೈಕೋರ್ಟ್ ಸ್ವಾಮೀಜಿ ಹೇಳಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ನಿರ್ಬಂಧ ನಿರ್ಧಾರ ಸರಿಯಾಗಿದೆ ಎಂದು ಹೇಳಿತು. ಹೈಕೋರ್ಟ್ ಕೂಡ ಅನುಮತಿ ನಿರಾಕರಿಸಿದ ಹಿನ್ನೆಲೆ ಶ್ರೀಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.ಇದನ್ನೂ ಓದಿ: ವಿಜಯಪುರ | ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

     

  • ವಿಜಯಪುರದಲ್ಲಿ ಸರಣಿ ಭೂಕಂಪನ – 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

    ವಿಜಯಪುರದಲ್ಲಿ ಸರಣಿ ಭೂಕಂಪನ – 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

    ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.

    ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಬುಧವಾರ (ಅ.29) ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ.ಇದನ್ನೂ ಓದಿ: ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    3.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸರಣಿ ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

  • ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು – ಎಂ.ಬಿ ಪಾಟೀಲ್ ಆಗ್ರಹ

    ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು – ಎಂ.ಬಿ ಪಾಟೀಲ್ ಆಗ್ರಹ

    ವಿಜಯಪುರ: ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಆಗ್ರಹಿಸಿದ್ದಾರೆ.

    ವಿಜಯಪುರದಲ್ಲಿ (Vijayapura)  ಮಾಧ್ಯಮದವರೊಂದಿಗೆ ಮಾತನಾಡಿ, ಕನ್ನೇರಿ ಶ್ರೀಗಳು (Kanneri Shri) ಸುಮ್ಮನೇ ಕ್ಷಮೆ ಕೇಳುವುದನ್ನು ಬಿಟ್ಟು ಭಂಡತನ ತೋರಿದ್ದಾರೆ. ಇದು ಸುಮ್ಮನೇ ಪೌರುಷ ತೋರಿಸಲು ಇಷ್ಟೆಲ್ಲಾ ಮಾಡಿದ್ದಾರೆ. ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್‌ನ ಆರೋಪಿ ಪ್ರದೋಷ್ ತಂದೆ ನಿಧನ – 20 ದಿನ ಮಧ್ಯಂತರ ಜಾಮೀನು ನೀಡಿದ ಕೋರ್ಟ್

    ಶ್ರೀಗಳು ಆಡುಭಾಷೆಯಲ್ಲಿ ಮಾತನಾಡಿದ್ದಾರೆ. ಆಡು ಭಾಷೆಯಲ್ಲಿ ಅನೇಕ ಶಬ್ದಗಳು ಬರುತ್ತವೆ. ನಾನು ಹಾಗೇ ಮಾತಾಡಿದ್ರೆ ಏನಾಗುತ್ತೆ. ಅಲ್ಲದೇ ಕನ್ನೇರಿ ಶ್ರೀಗಳಿಗೆ ಜಿಲ್ಲಾಪ್ರವೇಶ ನಿಷೇಧದ ಹಿಂದೆ ನಾನಿಲ್ಲ. ಅದು ಜಿಲ್ಲಾಡಳಿತ ನಿರ್ಧಾರ. ಕನ್ನೇರಿ ಶ್ರೀಗಳು ಸಿದ್ದೇಶ್ವರ ಶ್ರೀಗಳನ್ನು ನೋಡಿ ಕಲಿಯಬೇಕು. ಆಡು ಭಾಷೆಯಲ್ಲೆ ಪ್ರವಚನ ಮಾಡ್ತಿದ್ದರು. ಅವರು ಎಂದಾದರು ಈ ರೀತಿ ಮಾತನಾಡಿದ್ದಾರಾ? ಸಿದ್ದೇಶ್ವರ ಶ್ರೀಗಳು ಲಿಂಗಾಯತ ಧರ್ಮ ಒಂದು ಜಾಗತಿಕ ಧರ್ಮ ಅಂತಾ ಹೇಳಿದ್ದಾರೆ ಎಂದು ಹೇಳಿದ್ದಾರೆ.

  • ವಿಜಯಪುರ | ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

    ವಿಜಯಪುರ | ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

    ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ ದಾಖಲಾಗಿದೆ.

    ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಿದ್ದು, ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ, ಯರನಾಳ, ಹತ್ತರಕಿಹಾಳ, ನಂದ್ಯಾಳ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ.ಇದನ್ನೂ ಓದಿ: ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಮನಗೂಳಿ ಪಟ್ಟಣದಲ್ಲಿ ಭೂಮಿಯಾಳದಿಂದ ಮೂರು ಬಾರಿ ಭಾರೀ ಶಬ್ದ ಕೇಳಿಸಿದ್ದು, 2.5 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಭಾರೀ ಶಬ್ದಕ್ಕೆ ಆತಂಕಗೊಂಡ ಜನರು ಮನೆಯಿಂದ ಓಡಿ ಹೊರಬಂದಿದ್ದಾರೆ.

    ಕಡಿಮೆ ತೀವ್ರತೆಯ ಭೂಕಂಪನ ಸಂಭವಿಸಿದೆ. ಹೀಗಾಗಿ ಜನರು ಭಯಪಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.ಇದನ್ನೂ ಓದಿ: BBK 12 | ಈ ಅವಮಾನ ಯಾವತ್ತೂ ಮರೆಯೋಕಾಗಲ್ಲ; ದೊಡ್ಮನೆಯಲ್ಲಿ ಗಳಗಳನೆ ಅತ್ತ ಅಶ್ವಿನಿ ಗೌಡ

  • ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ವಿಜಯಪುರ: ಜಿಲ್ಲೆಯ ಸಿಂದಗಿ (Sindagi) ಬೈಪಾಸ್ ಬಳಿ ಸಿಂದಗಿ ಶಾಸಕ (Sindagi MLA) ಅಶೋಕ್ ಮನಗೂಳಿ (Ashok Managuli) ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ.

    ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ ವೇಳೆ KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿರುವ ಇನ್ನೋವಾ ಹೈಕ್ರಾಸ್ ಕಾರಿಗೆ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಇದನ್ನೂ ಓದಿ: ಲಾಡ್ಜ್‌ನಲ್ಲಿ ಯುವಕ ಅನುಮಾನಾಸ್ಪದ ಸಾವು ಕೇಸ್ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ಫೇಲ್ಯೂರ್ ಪತ್ತೆ

    ಕಲಬುಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

  • ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

    ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

    – ತಮ್ಮ ಮೂಲಮಠ ಮಹಾರಾಷ್ಟ್ರದ ಕನ್ನೇರಿಗೆ ತೆರಳಿದ ಸ್ವಾಮೀಜಿ

    ಬಾಗಲಕೋಟೆ/ವಿಜಯಪುರ: ಮಹಾರಾಷ್ಟ್ರದ ಕೊಲ್ಜಾಪುರದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳ (Adrushya Kadhsiddheshwar Swamiji) ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧ ವಿಚಾರ ಇದೀಗ ಮತ್ತಷ್ಟು ಜಟಿಲಗೊಂಡಿದೆ. ಜಿಲ್ಲಾಧಿಕಾರಿಗಳ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸ್ವಾಮಿಜಿಗಳಿಗೆ ಹಿನ್ನಡೆ ಆಗಿದೆ. ಇದರ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯಲ್ಲೂ ನಿರ್ಬಂಧ ಹೇರಲಾಗಿದೆ.

    ಹೌದು. ಮಹಾರಾಷ್ಟ್ರದಲ್ಲಿ ಬಸವ ಸಂಸ್ಕೃತಿ ಉತ್ಸವದಲ್ಲಿ ಭಾಗಿಯಾಗಿದ್ದ ವೇಳೆ ಲಿಂಗಾಯತ ಧರ್ಮದ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಬಾಗಲಕೋಟೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಾಗಲಕೋಟೆಯ ಬೀಳಗಿ ತಾಲೂಕಿನಲ್ಲಿರೋ ಕನ್ನೇರಿ ಶ್ರೀಗಳಿಗೆ ನಿನ್ನೆ ಜಿಲ್ಲೆ ತೊರೆಯುವಂತೆ ನೋಟಿಸ್ ನೀಡಲಾಗಿದೆ. ಈ ಬೆನ್ನೆಲ್ಲೇ ಇಂದು ನಸುಕಿನ ಜಾವವೇ ಕನ್ನೇರಿ ಸ್ವಾಮೀಜಿ. ತಮ್ಮ ಮೂಲಮಠ ಮಹಾರಾಷ್ಟ್ರದ ಕನ್ಹೇರಿಗೆ ತೆರಳಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

    ಚಿಕ್ಕಾಲಗುಂಡಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಎರಡು ದಿನದಿಂದ ವಾಸವಿದ್ದ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ಕಾನೂನು ಸವ್ಯವಸ್ಥೆ ಹದಗೆಡುವ ಸಾಧ್ಯತೆ ಹಿನ್ನೆಲೆ. ಜಿಲ್ಲೆಯಲ್ಲಿ ಇರಬಾರದು ಎಂದು ನೊಟೀಸ್ ನೀಡಲಾಗಿತ್ತು. ಈ ಬೆನ್ನಲೇ ಶ್ರೀಗಳು ನಿಮ್ಮ ಮೂಲ ಜಾಗಕ್ಕೆ ತೆರಳಿ ಎಂದು ನೊಟೀಸ್ ನೀಡಲಾಗಿತ್ತು. ತಮ್ಮ ಮೂಲಮಠ ಮಹಾರಾಷ್ಟ್ರದ ಕನ್ನೇರಿಗೆ ಹೋಗಿದ್ದಾರೆ. ಇದನ್ನೂ ಓದಿ: ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

  • ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು -‌ ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ

    ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು -‌ ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ

    ವಿಜಯಪುರ: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ.

    ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ (Encounter) ಬಲಿಯಾದ ನಟೋರಿಯಸ್‌ ರೌಡಿಯಾಗಿದ್ದಾನೆ. ಈತ ವಿಜಯಪುರ (Vijayapura) ನಗರದ ಗಾಂಧಿ ಚೌಕ್ ವ್ಯಾಪ್ತಿಯಲ್ಲಿ ಅ.17 ರಂದು ಓರ್ವನಿಗೆ ಚಾಕು ತೋರಿಸಿ 25 ಸಾವಿರ ಹಣ ದರೋಡೆ ಮಾಡಿದ್ದ. ನಂತರ ಆತನ ಸ್ಕೂಟಿಯನ್ನೇ ದರೋಡೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ವಿದ್ಯಾರ್ಥಿನಿ ಕತ್ತು ಕೊಯ್ದು ಹತ್ಯೆ ಕೇಸ್‌ – ಪಾಗಲ್‌ ಪ್ರೇಮಿ ಬಂಧನ

    ಆರೋಪಿ ಆಲಮೇಲ ತಾಲೂಕಿನ ದೇವಣಗಾಂವ್ ಗ್ರಾಮದತ್ತ ತೆರಳುತ್ತಿರೋ ಮಾಹಿತಿ ಅರಿತ ಪೊಲೀಸರು ಸೆರೆ ಹಿಡಿಯಲು ತೆರಳಿದ್ದರು. ಸಿಂದಗಿ ತಾಲೂಕಿನ ರಾಂಪುರ್ ಬಳಿ ಆರೋಪಿ ಯುನಸ್‌ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಬ್ಬರು ಕಾನ್ಸ್‌ಟೇಬಲ್‌ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಆರೋಪಿ ದಾಳಿಗೆ ಯತ್ನಿಸಿದ್ದಾನೆ. ಆಗ ಆಯತಪ್ಪಿ ಇನ್ಸ್‌ಪೆಕ್ಟರ್‌ ಪ್ರದೀಪ್ ತಳಕೇರಿ ಬಿದ್ದಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಲು ಇನ್ಸ್‌ಪೆಕ್ಟರ್‌ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಶರಣಾಗದೇ ಯುನಸ್ ಹಲ್ಲೆಗೆ ಯತ್ನಿಸಿದ್ದಾನೆ.

    ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಯುನಸ್ ಕಾಲಿಗೆ ಇನ್ಸ್‌ಪೆಕ್ಟರ್‌ ಗುಂಡು ಹಾರಿಸಿದ್ದಾರೆ. ನಂತರ ಆರೋಪಿಗೆ ಸಿಂದಗಿ ತಾಲೂಕು ಅಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯ ವೈದ್ಯರು ಆರೋಪಿ ಮೃತಪಟ್ಟಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಯುನಸ್ ಮೇಲೆ ಎರಡು ಕೊಲೆ ಪ್ರಕರಣ, ಒಂದು ಕೊಲೆ ಯತ್ನ, ಸೇರಿದಂತೆ ಒಟ್ಟು 12 ಪ್ರಕರಣಗಳಿವೆ. ಈ ಕುರಿತು ತನಿಖೆ ಮುಂದುವರಿಯುತ್ತಿದೆ. ಇದನ್ನೂ ಓದಿ: ‘ವೋಟ್ ಚೋರಿ’ ಪ್ರಕರಣ | ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ ಮನೆ, ಬಾರ್ ಮೇಲೆ ಎಸ್‌ಐಟಿ ದಾಳಿ

  • ವಿಜಯಪುರ| ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವು

    ವಿಜಯಪುರ| ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವು

    ವಿಜಯಪುರ: ಕೃಷಿ ಹೊಂಡದಲ್ಲಿ ಜಾರಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದೆ. ಓರ್ವ ಬಾಲಕ ಹಾಗೂ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ.

    ವಿಜಯಪುರ (Vijayapura) ತಾಲೂಕಿನ ಮಿಂಚನಾಳ ತಾಂಡಾದ ಮಾದೇವ ನಗರದಲ್ಲಿ ಘಟನೆ ನಡೆದಿದೆ. ಶಿವಮ್ಮ‌ ರಾಜೂ ರಾಠೋಡ್ (8), ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂ ಸ್ವಪ್ನಾ ರಾಜೂ ರಾಠೋಡ್ (12) ಮೃತ ಮಕ್ಕಳಾಗಿದ್ದಾರೆ. ಇದನ್ನೂ ಓದಿ: ಹಾರಿ ಬಂದು ಹೊಟ್ಟೆಗೆ ಚುಚ್ಚಿದ ಮೀನು – ಮೀನುಗಾರಿಕೆಗೆ ತೆರಳಿದ್ದ ಯುವಕ ದುರ್ಮರಣ

    ಕುರಿ‌ಗಳ ಜೊತೆಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ಮಕ್ಕಳು ತೆರಳಿದ್ದರು. ಆಟವಾಡೋ ವೇಳೆ‌ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ವಿಜಯಪುರ ತಹಶಿಲ್ದಾರ ಚೆನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.