Tag: vijayapura

  • ವಿಜಯಪುರ | ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

    ವಿಜಯಪುರ | ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

    ವಿಜಯಪುರ: ಪ್ರಚೋದನಕಾರಿ ಭಾಷಣ ಹಿನ್ನೆಲೆ ಕನ್ನೇರಿ (Kanneri) ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ (Vijayapura) ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಆನಂದ.ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.

    ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕನ್ನೇರಿ ಶ್ರೀಗಳು ಗುಡುಗಿದ್ದರು. ಭಾಷಣ ವೇಳೆ ಸಿಎಂ ಸಿದ್ದರಾಮಯ್ಯ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಭಾಷಣ ಮಾಡಿದ್ದರು. ಅಲ್ಲದೇ ಲಿಂಗಾಯತ ಮಠಾಧೀಶರ ಕುರಿತು ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿ ಕೆ.ಆನಂದ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದು, ಎರಡು ತಿಂಗಳುಗಳ ಕಾಲ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್‌| ಇನ್ನೂ ಅಂತಿಮಗೊಳ್ಳದ ಸೀಟ್‌ ಹಂಚಿಕೆ – ಲಾಲೂಗೆ ರಾಹುಲ್‌ ಕರೆ

    ಇಂದಿನಿಂದ (ಅ.16) ಡಿಸೆಂಬರ್ 15ರವರೆಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನೂ ಇಂದು ಹಾಗೂ ನಾಳೆ (ಅ.17) ಬಸವನ ಬಾಗೇವಾಡಿಯಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ಸಪ್ತಾಹ ಕಾರ್ಯಕ್ರಮಕ್ಕೆ ಬರುವುದಾಗಿ ಕನ್ಹೇರಿ ಶ್ರೀಗಳು ಹೇಳಿದ್ದರು. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಆನಂದ.ಕೆ ಅವರು ಈ ಕ್ರಮ ಕೈಗೊಂಡಿದ್ದಾರೆ.

  • ವಿಜಯಪುರ | ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್ – ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

    ವಿಜಯಪುರ | ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್ – ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

    ವಿಜಯಪುರ: ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

    ಅಕ್ಷಯ್ ಜುಲಜುಲೆ ಬಂಧಿತ ಆರೋಪಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಭಾನುವಾರ (ಅ.12) ರಾತ್ರಿ ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬ ಇಬ್ಬರ ಹತ್ಯೆ ನಡೆದಿತ್ತು. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು 5 ಜನ ಆರೋಪಿಗಳನ್ನ ಸೆರೆಹಿಡಿಯಲು ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.

    ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸದ್ಯ ಆರೋಪಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    ಇನ್ನೂ 2023ರಲ್ಲಿ ಈರಣ್ಣಗೌಡ ಎಂಬಾತನ ಮೇಲೆ ಈಗ ಮೃತ ಸಾಗರ್ ಹಾಗೂ ಇಸಾಕ್ ಟೈಲ್ಸ್‌ನಿಂದ ಹಲ್ಲೆ ನಡೆಸಿದ್ದರು. ಈರಣ್ಣಗೌಡ 8 ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ನಂತರ ಮೃತಪಟ್ಟಿದ್ದ. ಇದೇ ದ್ವೇಷದಿಂದಲೇ ಸದ್ಯ ಅಕ್ಷಯ್ ಹಾಗೂ ಈರಣ್ಣಗೌಡ ಮಕ್ಕಳು ಸೇರಿ ಸಾಗರ್, ಇಸಾಕ್‌ನ್ನು ಹತ್ಯೆ ಮಾಡಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು

  • ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು

    ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು

    – ನಗುವಿನ ನಶೆ ಬಿತ್ತಿ ಹೋದ `ಕಲಿಯುಗದ ಕುಡುಕ’

    ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು ಇಡೀ ಹಾಸ್ಯ ರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಇಡೀ ಚಿತ್ರರಂಗ ಸೇರಿ, ವೃತ್ತಿ ರಂಗ ಭೂಮಿ ಇವರಿಗೆ ಅಂತಿಮ ನಮನ ಸಲ್ಲಿಸಲಾಯಿತು.

    ರಂಗನಾಯಕ ಡಾ. ರಾಜು ತಾಳಿಕೋಟೆ ಇನ್ನಿಲ್ಲ ಎಂಬುದು ಇಡೀ ನಾಟಕರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ʻಕಲಿಯುಗದ ಕುಡುಕʼನೇಎಂದೇ ಖ್ಯಾತಿಗಳಿಸಿದ್ದ ಹಿರಿಯ ನಟ, ನಿರ್ದೇಶಕ ಡಾ. ರಾಜು ತಾಳಿಕೋಟೆ ಬದುಕಿನ ನಾಟಕಕ್ಕೆ ವಿದಾಯ ಹೇಳಿದ್ದಾರೆ. ವಿಶಿಷ್ಟ ಶೈಲಿಯ ಮಾತುಗಾರ ರಾಜು ನಿನ್ನೆ ಹೃದಯಘಾತದಿಮದ ನಿಧನರಾಗಿದ್ದರೆ. ನಿನ್ನೆ ಶೈನ್ ಶೆಟ್ಟಿ ನಟನೆಯ ಶಂಕರಾಭರಣ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿ ಸಂಜೆ ವಿಶ್ರಾಂತಿ ಪಡೆಯುವ ವೇಳೆ ಹಠತ್‌ನೆ ಹೃದಯಾಘಾತ ಸಂಭವಿಸಿ ಕೊನೆ ಉಸಿರೆಳೆದಿದ್ದಾರೆ.

    ರಾಜು ತಾಳಿಕೋಟೆ ಜೀವನವೇ ಒಂದು ಅಚ್ಚರಿಯ ಬದುಕು. ಬಹಳ ಸರಳ ಸಹಜವಾಗಿ ಬದುಕಿದ್ದ ರಾಜುಕೋಟೆಯ ನಿಜ ನಾಮ ರಾಜೇಸಾಬ್ ಮುಕ್ತಂ ಸಾಬ್ ಯಂಕಂಚಿ. ಮುಕ್ತಂ ಮತ್ತು ಮೆಹಬೂಬ್ ದಂಪತಿಯ ಪುತ್ರ. ಇಸ್ಲಾಂ ಧರ್ಮದವರಾದರೂ, ರಾಜು ಎಂದೇ ಪ್ರಖ್ಯಾತಿ ಪಡೆದಿದ್ದರು. ಇದೀಗ ಇಬ್ಬರು ಪತ್ನಿಯರು, ಐವರು ಮಕ್ಕಳನ್ನು ತ್ಯಜಿಸಿ ಹೊರಟಿದ್ದಾರೆ.

    ಪಾರ್ಥಿವ ಶರೀರದ ಮುಂದೆ ಬಿಕ್ಕಳಿಸಿದ ಸಹ ಕಲಾವಿದರು
    ಯುವ ಪೀಳಿಗೆಗೆ ನಾಟಕದ ಅಭಿರುಚಿ ಹೆಚ್ಚಿಸಲು ಸ್ವತಃ ರಂಗಮಂದಿರವನ್ನು ಕಟ್ಟಿದವರು. ಧಾರವಾಡದ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಇಡೀ ರಾಜ್ಯಾದ್ಯಂತ ಸುತ್ತಿ ಹೊಸ ತಂಡವನ್ನ ರಚಿಸಿ ನಾಟಕ ಅಭಿನಯ ಮಾಡಿಸುತ್ತಿದ್ದವರು. ಇವರು ಕೇವಲ ರಂಗಭೂಮಿ ಅಷ್ಟೇ ಅಲ್ಲದೆ ಸಿನಿಮಾ ರಂಗದಲ್ಲೂ ಅಭಿಮಯಿಸಿ ಸೈ ಎನಿಸಿಕೊಂಡಿದ್ದವರು. (ಸಿನಿಮಾ ಡೈಲಾಗ್ ಪ್ಲೋ) ಇವರ ನಟನೆಗೆ ಹಾಸ್ಯ ರತ್ನಾಕರ, ಹಾಸ್ಯ ಸಾಮ್ರಾಟ, ಕಾಮಿಡ್ ಕಿಂಗ್, ಕೆಸೇಟ್ ಕಿಂಗ್ ಎಂಬೆಲ್ಲಾ ಬಿರುದುಗಳನ್ನು ಮುಡಿಗೇರಿಸಿಕೊಂಡಿದ್ದವರು.

    ಸಂಜು ಬಸಯ್ಯ ಕಣ್ಣೀರು
    ಇನ್ನು ಹಾಸ್ಯನಟ, ರಂಗಾಯಣ ನಿರ್ದೆಶಕ ರಾಜು ತಾಳಿಕೋಟಿಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ರಾಜು ತಾಳಿಕೋಟೆ ಅಂತಿಮ ದರ್ಶನವನ್ನು ಧಾರವಾಡ ಜಿಲ್ಲಾಧಿಕಾರಿ, ಸಿಇಓ ಸೇರಿ ಅನೇಕ ಕಲಾವಿದರು ಅಂತಿಮ ದರ್ಶನ ಪಡೆದುಕೊಂಡರು. ಇನ್ನು ಪಾರ್ಥಿವ ಶರೀರದ ಎದುರು ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಿಕ್ಕಿ ಬಿಕ್ಕಿ ಕಣ್ಣಿರು ಹಾಕಿದರು.

    ಇನ್ನು ತಾಳಿಕೋಟೆಯ ಧಾರವಾಡದಿಂದ ವಿಜಯಪುರಕ್ಕೆ ಕೊಂಡೋಯ್ದು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಂದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆ ವೇಳೆ ಮೃತ ಕುಟುಂಬಸ್ಥರ ಕಣ್ಣೀರು ಮುಗಿಲು ಮುಟ್ಟಿತ್ತು.

    ಒಟ್ಟಾರೆ ಇಡೀ ಕನ್ನಡ ಚಿತ್ರರಂಗವನ್ನು ಮತ್ತು ರಂಗಭೂಮಿಯನ್ನು ನಗುವಿನ ನಶೆಯಲ್ಲಿ ತೇಲಿಸುತ್ತಿದ್ದ ರಾಜೂ ತಾಳಿಕೋಟೆಯ ಸಾವು ನಿಜಕ್ಕೂ ಬರಸಿಡಿಲು ಬಡಿದಂತಾಗಿದೆ. ರಂಗಭೂಮಿಗೆ ಇವರ ಸಾವು ತುಂಬಲಾರದ ನಷ್ಟವಾಗಿದೆ.

  • ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ವಿಜಯಪುರ: ಜಿಲ್ಲೆಯಲ್ಲಿ ಜೋಡಿ ಕೊಲೆ ಆಗಿವೆ. ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.

    ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬುವವರ ಕೊಲೆಯಾಗಿದ್ದಾರೆ. ಇನ್ನು ಅಪರಿಚಿತರಿಂದ ಈ ಕೃತ್ಯ ನಡೆದಿದ್ದು, ಹತ್ಯೆಯ ನಂತರ ಹಂತಕರು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಇಬ್ಬರನ್ನು ಕೊಲೆಗೈದಿರೋ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: RSS ನಿಷೇಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ – ಸರ್ಕಾರದ ನಡೆಯ ಮೇಲೆ ನಿಗಾ ಇಡಲು ಬಿಜೆಪಿ ಸಮಿತಿ ರಚನೆ

    ಎರಡು ವರ್ಷಗಳ ಹಿಂದೆ ಈರನಗೌಡ ಎಂಬಾತನ ಮೇಲೆ ಇಸಾಕ್ ಖರೇಷಿ ಹಾಗೂ ಸಾಗರ ತೀವ್ರ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರಣಗೌಡ ಮೃತಪಟ್ಟಿದ್ದನಂತೆ. ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ ಸಂಶಯ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರವಾರ | ಮೆಡಿಕಲ್‌ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ

  • ವಿಜಯಪುರದ ಹಲವೆಡೆ ಭೂಕಂಪನ – ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನ

    ವಿಜಯಪುರದ ಹಲವೆಡೆ ಭೂಕಂಪನ – ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನ

    ವಿಜಯಪುರ: ತಿಕೋಟ (Tikota) ಹಾಗೂ ವಿಜಯಪುರ (Vijayapura) ತಾಲೂಕಿನ ಹಲವೆಡೆ ಭೂಕಂಪನದ (Earthquake) ಅನುಭವವಾಗಿದೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ.

    ಶುಕ್ರವಾರ ರಾತ್ರಿ 10:01 ಕ್ಕೆ ಭೂಕಂಪನ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವ ಆಗಿದೆ. ಇದನ್ನೂ ಓದಿ: ಕೊಡಗಿನ ಹಲವೆಡೆ ಭೂಕಂಪನ – ಬೆಚ್ಚಿದ ಜನ

    ಭೂಕಂಪನ ಆ್ಯಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ ಮೇಲೆ ಇಂತಹ ಅನುಭವ ಆಗುತ್ತಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ.

    ಕಳೆದ ತಿಂಗಳು ಸಿಂದಗಿ ಪಟ್ಟಣದಲ್ಲಿ ಕೂಡ ಸರಣಿ ಭೂಕಂಪನ ಅನುಭವವಾಗಿತ್ತು. ಈಗ ನಗರ ಭಾಗದಲ್ಲಿ ಕಂಪನದ ಅನುಭವ ಆಗಿ ಹೆಚ್ವಿನ ಆತಂಕ ಮೂಡಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಆಗಾಗ್ಗೆ ಭೂಕಂಪನಕ್ಕೆ ಕಾರಣವೇನು?

  • ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

    ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

    – ವಿಜಯಪುರ ಜಿಲ್ಲಾ ಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದ ಕಲಬುರಗಿ ಹೈಕೋರ್ಟ್‌

    ವಿಜಯಪುರ: ಮರ್ಯಾದೆ ಹತ್ಯೆಗೈದ (Honor killing) ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಿ ಕಲಬುರಗಿ ಹೈಕೋರ್ಟ್ (Gulbarga High Court) ದ್ವಿ ಸದಸ್ಯ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.

    ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ ಲಾರಿ ಚಾಲಕ ಅಕ್ಬರ್ (28) ಮರಣ ದಂಡನೆ ಶಿಕ್ಷೆಗೋಳಗದವರು. ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ದಲಿತ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಅಣ್ಣತಮ್ಮಂದಿರಿಬ್ಬರು ತಮ್ಮ ತಂಗಿಯನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದರು.

    ಸಾಯಿಬಣ್ಣ ಎನ್ನುವ ದಲಿತ ಯುವಕನ ಜೊತೆ ಬಾನು ಬೇಗಂ ಪ್ರೀತಿಸಿ ಮದುವೆಯಾಗಿದ್ದಳು. ಇದನ್ನ ಸಹಿಸದ ಸಹೋದರರು ಬಾನು ಬೇಗಂ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದ ಸಂರ್ಭದಲ್ಲಿ ಆಕೆಗೆ ಬೆಂಕಿ ಹಚ್ಚಿ ಸಜೀವವಾಗಿ ಕೊಂದು ಹಾಕಿದ್ದರು. ಇನ್ನು ಈ 2017 ರಲ್ಲಿ ವಿಜಯಪುರದಲ್ಲಿ ನಡೆದ ಕೊಲೆ ಪ್ರಕರಣ ನಡೆದಿತ್ತು. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ – ಚಿಕಿತ್ಸೆ ಫಲಿಸದೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

    ಈ ಮೊದಲು ವಿಚಾರಣೆ ನಡೆಸಿದ್ದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣದಂಡನ ಶಿಕ್ಷೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಈ ತೀರ್ಪುನ್ನು ಮಾನ್ಯ ಮಾಡಿದೆ. ಕೊಲೆಯಾದ ಬಾನು ಬೇಗಂನ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

  • ವಿಜಯಪುರ | SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌

    ವಿಜಯಪುರ | SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌

    ವಿಜಯಪುರ: ಜಿಲ್ಲೆಯ ಚಡಚಣ ಶಾಖೆಯ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣದ (Bank Robbery Case) ಆರೋಪಿಗಳನ್ನ ಬಂಧಿಸುವಲ್ಲಿ ವಿಜಯಪುರ ಪೋಲಿಸರು ಯಶಸ್ವಿಯಾಗಿದ್ದರೆ.

    ಒಟ್ಟು ನಾಲ್ವರು ಆರೋಪಿಗಳನ್ನ ಪೊಲೀಸರು (Chadchan Police) ಬಂಧಿಸಿದ್ದಾರೆ. ಬಿಹಾರ ರಾಜ್ಯದ ರಾಕೇಶ ಕುಮಾರ್‌ ಸಹಾನಿ, ರಾಜಕುಮಾರ ಪಾಸ್ವಾನ, ರಕ್ಷಕ ಕುಮಾರ್ ಮಾತೋ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿರೆಲ್ಲರೂ 21, 22 ವಯಸ್ಸಿನ ಯುವಕರು. ಇದನ್ನೂ ಓದಿ: ವಿಜಯಪುರ| ಎಸ್‌ಬಿಐ ಬ್ಯಾಂಕ್ ದರೋಡೆ ಕೇಸ್ – 3 ತಿಂಗಳು ರಜೆಯಲ್ಲಿದ್ದ ಸೆಕ್ಯುರಿಟಿ ಗಾರ್ಡ್‌; ಚಿನ್ನಾಭರಣ ಇಟ್ಟ ಗ್ರಾಹಕರು ಕಂಗಾಲು

    Robbery of Rs 8 crore cash 50 kg gold jewellery at gunpoint to SBI staff chadchana Vijayapur

    ಈಗ ಬಂಧಿಸ‌ಲಾ ಮೂವರು ಆರೋಪಿಗಳು ಅಕ್ರಮವಾಗಿ ಪಿಸ್ತೂಲ್ ಪೂರೈಕೆ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ್ದರು. ಮತ್ತೋರ್ವ ಆರೋಪಿ ಮಹಾರಾಷ್ಟ್ರ ರಾಜ್ಯದ ಪ್ರಮುಖ ಆರೋಪಿಯಾಗಿದ್ದು, ಅ.7ರಂದೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು. ಆದ್ರೆ ಆತನ ಹೆಸರನ್ನ ಬಹಿರಂಗಪಡಿಸಿಲ್ಲ.

    ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಈವರೆಗೆ 9.1 ಕೆಜಿ ಚಿನ್ನ, 86,31,220 ರೂ. ನಗದು ಜಪ್ತಿ ಮಾಡಲಾಗಿದೆ. ಚಡಚಣ ಬ್ಯಾಂಕ್ ದರೋಡೆಯಲ್ಲಿ ಒಟ್ಟು ನಾಲ್ವರ ಬಂಧನವಾಗಿದ್ದು, ತನಿಖೆ ಮುಂದುವರೆದಿದೆ ಅಂತಾ ಎಡಿಜಿಪಿ ಆರ್ ಹಿತೇಂದ್ರ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ 

    vijayapura SBI bank robbery

    ಏನಿದು ಕೇಸ್‌?
    ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ 1 ಕೋಟಿ ರೂ. ನಗದು, 12 ರಿಂದ 13 ಕೆ.ಜಿ ಚಿನ್ನ ದರೋಡೆಯಾಗಿದೆ. ಸಾಲಕ್ಕಾಗಿ ಅಡವಿಟ್ಟಿದ್ದ 12-13 ಕೆಜಿ ಚಿನ್ನ ದರೋಡೆಯಾಗಿರುವುದಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಾಥಮಿಕ ಮಾಹಿತಿ ನೀಡಿದ್ದರು.

    ಐದಕ್ಕೂ ಹೆಚ್ಚು ಮಂದಿ ಮುಸುಕುಧಾರಿ ದರೋಡೆಕೋರರಿಂದ ಕೃತ್ಯ ನಡೆದಿತ್ತು. ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿನ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿ ದರೋಡೆ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಬ್ಯಾಂಕ್‌ನಲ್ಲಿದ್ದ ಸಿಸಿಟಿವಿ ಕ್ಯಾಮೆರಾ, ಹಾರ್ಡ್ ಡಿಸ್ಕ್ ವಶಕ್ಕೆ ಪಡೆದು ತೀವ್ರ ತಪಾಸಣೆ ನಡೆಸಿದ್ದರು. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

  • ಕಿದ್ವಾಯಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿ ವಿಜಯಪುರದಲ್ಲಿ ಅರೆಸ್ಟ್

    ಕಿದ್ವಾಯಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿ ವಿಜಯಪುರದಲ್ಲಿ ಅರೆಸ್ಟ್

    ಬೆಂಗಳೂರು/ವಿಜಯಪುರ: ಚಿಕಿತ್ಸೆಗೆಂದು ಬಂದಿದ್ದ ವೇಳೆ ಕಿದ್ವಾಯಿ ಆಸ್ಪತ್ರೆಯಿಂದ (Kidwai Hospital) ಪರಾರಿಯಾಗಿದ್ದ ಕೈದಿಯನ್ನು ಸಿದ್ದಾಪುರ ಪೊಲೀಸರು (Siddapura Police) ವಿಜಯಪುರದಲ್ಲಿ (Vijayapura) ಬಂಧಿಸಿದ್ದಾರೆ.

    ಕೈದಿ ಚೇತನ್ ಕಲ್ಯಾಣಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಸಜಾ ಕೈದಿಯನ್ನ ಬಿಜಾಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಾಯಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅಪರಾಧಿಯನ್ನ ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು ಸಿಬ್ಬಂದಿ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಆಸ್ಪತ್ರೆ ಸಿಬ್ಬಂದಿ ಹಿಡಿಯಲು ಪ್ರಯತ್ನಿಸಿದರೂ ಸಿಗದೇ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಕಿದ್ವಾಯಿ ಆಸ್ಪತ್ರೆಯಿಂದ ಸಜಾ ಕೈದಿ ಪರಾರಿ – ಕ್ಯಾನ್ಸರ್ ಟ್ರೀಟ್‌ಮೆಂಟ್‌ಗೆ ಬಂದು ಎಸ್ಕೇಪ್

    ಕಳೆದ ಆಗಸ್ಟ್ 21ರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಜಾ ಕೈದಿ ಚೇತನ್ ಸೆ.8ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದ.
  • ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್

    ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್

    ವಿಜಯಪುರ: ಮಹಾರಾಷ್ಟ್ರದಲ್ಲಿ ಮಳೆ (Maharashtra Rains) ಎಫೆಕ್ಟ್‌ ಹಿನ್ನೆಲೆ ಜಯಪುರದಲ್ಲಿ ಭೀಮಾನದಿ‌ ಪ್ರವಾಹ ಉಂಟಾಗಿದೆ. ಹೀಗಾಗಿ ಈ ಭಾಗದ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ಅಧಿಕಾರಿಗಳು ಮಧ್ಯದಲ್ಲೇ ಲಾಕ್ ಆದ ಘಟನೆ ನಡೆದಿದೆ.

    ನೀರಿದ್ದ ಕಾರಣ ಸೇತುವೆ (Bridge) ಮೇಲೆ ವಾಹನ ಕೆಟ್ಟು ಅಧಿಕಾರಿಗಳು ಸಮಸ್ಯೆ ಅನುಭವಿಸಿದ್ದಾರೆ. ಪಿಡಬ್ಲ್ಯೂಡಿ ಅಧಿಕಾರಿಗಳು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ಭೀಮಾ ನದಿ (Bheema River) ಪಾತ್ರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

    ಪ್ರವಾಹದಿಂದ ಅಧಿಕ ನೀರು ಬಂದಿದ್ದು, ರಸ್ತೆಯ ಮೇಲೆ ಸಂಚಾರ ಮಾಡುವಾಗ ವಾಹನ ಕೈಕೊಟ್ಟಿದೆ. ಕೊನೆಗೆ ನೀರಿನಲ್ಲೇ ನಡೆದುಕೊಂಡು ಅಧಿಕಾರಿಗಳು ಸಾಗಿದ್ದಾರೆ.

  • ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ – ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರ

    ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ – ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರ

    ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಂತೂ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯ÷ಸ್ತವಾಗಿದ್ದು, ನಿರಂತರ ಮಳೆಗೆ ಕಲ್ಯಾಣ ಕರ್ನಾಟಕ ತತ್ತರಿಸಿದೆ.

    ಕಾಗಿಣಾ ನದಿ ಪ್ರವಾಹಕ್ಕೆ ಸೇಡಂ ತಾಲೂಕಿನ ಮಳಖೇಡ ತಾಂಡಾದ ಹಲವು ಮನೆಗಳಿಗೆ ನೀರು ನುಗ್ಗಿದೆ. ಒಂದು ತಿಂಗಳ ಕಂದಮನನ್ನು ಹೊತ್ತು ಎರಡು ದಿನಗಳಿಂದ ಛಾವಣಿ ಮೇಲೆ ತಾಯಿ ಆಶ್ರಯ ಪಡೆದಿದ್ದಾಳೆ. ಜೇವರ್ಗಿ ತಾಲೂಕಿನ ಮಾಹೂರ ಗ್ರಾಮ ನಡುಗಡ್ಡೆಯಾಗಿದೆ. ಶಾಸಕ ಡಾ.ಅಜಯ್ ಸಿಂಗ್ ಬೋಟ್‌ನಲ್ಲಿ ಮಾಹೂರ ಗ್ರಾಮಕ್ಕೆ ಭೇಟಿ ನೀಡಿ, ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಚಿಂಚೋಳಿ ತಾಲೂಕಿನ ಜೆಟ್ಟೂರ್ ಗ್ರಾಮದಲ್ಲಿ ಹಳ್ಳದ ನೀರು ಕೊಟ್ಟಿಗೆ ನುಗ್ಗಿ 42 ಎತ್ತುಗಳು ಮೃತಪಟ್ಟಿದ್ದು, 5 ಜಾನುವಾರು ನೀರು ಪಾಲಾಗಿವೆ.ಇದನ್ನೂ ಓದಿ:ಬಾಗಲ ಕೋಟೆ| ಭಾರೀ ಮಳೆಗೆ ಜಿಲ್ಲೆಯಲ್ಲಿ 321 ಮನೆ ಕುಸಿತ

    ಭೀಮಾ ನದಿಯ ಅಬ್ಬರಕ್ಕೆ ಯಾದಗಿರಿ ನಗರದಲ್ಲಿನ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ನಗರದ ಹಲವು ಪ್ರಮುಖ ರಸ್ತೆಗಳು ಬಂದ್ ಆಗಿರುವುದರಿಂದ ಜನ ಪರದಾಟ ನಡೆಸಿದ್ದಾರೆ. ಹೀರೇಹಳ್ಳದ ಸೇತುವೆ ಮುಳುಗಡೆಯಿಂದ ಯಾದಗಿರಿ-ಕಲಬುರಗಿ ರಸ್ತೆ ಮಾರ್ಗ ಬಂದ್ ಆಗಿದೆ. ಇನ್ನೂ ಗಡಿಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆಯಾಗಿದೆ. ಭಾಲ್ಕಿಯ ಎಡದಂಡೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಸಾವಿರಾರು ಎಕರೆ ಬೆಳೆ ನೀರುಪಾಲಾದ್ರೆ ಕಟ್ಟಿತೂಗಾಂವ್ ಗ್ರಾಮದ ಮಹಾದೇವ ದೇವಸ್ಥಾನ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ.

    ವಿಜಯಪುರ ಜಿಲ್ಲೆಯಲ್ಲೂ ಪ್ರವಾಹ ಸೃಷ್ಟಿಸಿದೆ. `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿದ್ದಾರೆ. ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ. ಮಳೆ ಸಂಬಂಧ ಭಾನುವಾರ (ಸೆ.28) ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ಕೃಷ್ಣೆ ಮತ್ತು ಭೀಮಾ ನದಿ ತೀರದಲ್ಲಿ ಪ್ರವಾಹದ ಸ್ಥಿತಿ ಹಿನ್ನೆಲೆ ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು