Tag: vijayendra prasad

  • ಗ್ಲೋಬಲ್ ಚಿತ್ರಕ್ಕಾಗಿ ಒಂದಾದ ಸುದೀಪ್, ಆರ್.ಚಂದ್ರು ಮತ್ತು ರಾಜಮೌಳಿ ತಂದೆ

    ಗ್ಲೋಬಲ್ ಚಿತ್ರಕ್ಕಾಗಿ ಒಂದಾದ ಸುದೀಪ್, ಆರ್.ಚಂದ್ರು ಮತ್ತು ರಾಜಮೌಳಿ ತಂದೆ

    ಖ್ಯಾತ ನಿರ್ದೇಶಕ ಆರ್.ಚಂದ್ರು (R. Chandru) ಅಭಿಮಾನಿಗಳಿಗೆ ಅಚ್ಚರಿಯ ಸುದ್ದಿಯೊಂದನ್ನು ನೀಡಿದ್ದಾರೆ. ಸ್ಕ್ರಿಪ್ಟ್ ಗಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಮೌಳಿ ತಂದೆ ವಿಜಯ್ ಪ್ರಸಾದ್ (Vijayendra Prasad) ಮತ್ತು ಪ್ಯಾನ್ ಇಂಡಿಯಾ ಸ್ಟಾರ್ ಸುದೀಪ್ (Kiccha Sudeep) ಅವರನ್ನು ಒಟ್ಟಾಗಿಸಿ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಂದ್ರ ಮತ್ತೊಂದು ಹಂತವನ್ನು ದಾಟುತ್ತಿದ್ದಾರೆ.

    ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್, ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ .ಎಸ್. ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದವರು. ಇದೀಗ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್.ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದಾರೆ. ಆರ್.ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

    ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.  ಆರ್ .ಸಿ  ಸ್ಟುಡಿಯೋಸ್ (RC Studios) ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್.ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.

    ಆರ್.ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್.ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸಪೆಕ್ಟೆಡ್ ಚಿತ್ರವಾಗಿದೆ.

    ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.  ಆರ್ .ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

    ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ.  ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • RRR ಪಾರ್ಟ್ 2 ಫಿಕ್ಸ್ : ರಾಜಮೌಳಿ ನಿರ್ದೇಶನ ಅನುಮಾನ

    RRR ಪಾರ್ಟ್ 2 ಫಿಕ್ಸ್ : ರಾಜಮೌಳಿ ನಿರ್ದೇಶನ ಅನುಮಾನ

    ವಿಶ್ವವೇ ಬೆರಗಿನಿಂದ ನೋಡಿರುವ ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ಮುಂದುವರೆದ ಭಾಗ ಬರಲಿದೆ ಎಂದು ಸ್ವತಃ ರಾಜಮೌಳಿ ಅವರ ತಂದೆಯೇ (Vijayendra Prasad) ಮಾಹಿತಿಯನ್ನು ನೀಡಿದ್ದಾರೆ. ಆರ್.ಆರ್.ಆರ್ ಪಾರ್ಟ್ 2 (RRR Part 2) ಸಿನಿಮಾದ ಕಥೆಯು ಸಿದ್ದವಾಗಿದ್ದು, ಯಾರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ ಎನ್ನುವುದು ನಿಕ್ಕಿಯಾಗಿಲ್ಲ ಎಂದೂ ಅವರು ಮಾತನಾಡಿದ್ದಾರೆ.

    ರಾಮ್ ಚರಣ್ (Ram Charan), ಜ್ಯೂನಿಯರ್ ಎನ್.ಟಿ.ಆರ್ (Jr NTR) ಮತ್ತು ರಾಜಮೌಳಿ ಕಾಂಬಿನೇಷನ್ ಕಾರಣದಿಂದಾಗಿ ಆರ್.ಆರ್.ಆರ್ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೀರವಾಣಿ ಸಂಗೀತ ಈ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟಿತ್ತು. ಅಲ್ಲದೇ, ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನೂ ಈ ಸಿನಿಮಾ ಪಡೆದುಕೊಂಡಿದೆ. ಹೀಗಾಗಿ ಆರ್.ಆರ್.ಆರ್ ಸಿನಿಮಾದ ಮುಂದುವರೆದ ಭಾಗ ಬರುತ್ತದೆ ಎಂದಾಗ ಸಹಜವಾಗಿಯೇ ಕುತೂಹಲ ಮೂಡಿದೆ. ಇದನ್ನೂ ಓದಿ:ಬಿಕಿನಿ ಧರಿಸಿ ಹಾಟ್ ಆಗಿ ಕಾಣಿಸಿಕೊಂಡ ‘ಬಿಗ್ ಬಾಸ್’ ಜಯಶ್ರೀ

    ಈ ಕುರಿತು ಮಾತನಾಡಿರುವ ವಿಜಯೇಂದ್ರ ಪ್ರಸಾದ್, ‘ಕಥೆ ಸಿದ್ದವಾಗಿದೆ. ಆದರೆ, ಈ ಸಿನಿಮಾವನ್ನು ರಾಜಮೌಳಿ ಮಾಡುತ್ತಾರಾ ಅಥವಾ ಹಾಲಿವುಡ್ ನ ನಿರ್ದೇಶಕರು ಮಾಡಲಿದ್ದಾರಾ ಎನ್ನುವುದು ಫೈನಲ್ ಆಗಿಲ್ಲ. ದೊಡ್ಡ ಮಟ್ಟದಲ್ಲೇ ಈ ಸಿನಿಮಾವನ್ನು ನಿರ್ಮಾಣ ಮಾಡುವಂತಹ ತಯಾರಿ ನಡೆದಿದೆ’ ಎಂದಿದ್ದಾರೆ ರಾಜಮೌಳಿ ತಂದೆ.

    ಈಗಾಗಲೇ ರಾಜಮೌಳಿ (Rajamouli) ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ಅವರಿಗಾಗಿ ರಾಜಮೌಳಿ ಸಿನಿಮಾ ಮಾಡಬೇಕಿದೆ. ಹೀಗಾಗಿ ಸದ್ಯ ಆರ್.ಆರ್.ಆರ್ ಪಾರ್ಟ್ 2 ಬರುವುದು ಅನುಮಾನ. ಒಂದು ವೇಳೆ ಹಾಲಿವುಡ್ ನಿರ್ದೇಶಕರಿಗೆ ಅವಕಾಶ ಸಿಕ್ಕರೆ ಅತೀ ಶೀಘ್ರದಲ್ಲೇ ಈ ಸಿನಿಮಾದ ಬಗ್ಗೆ ಮತ್ತಷ್ಟು ಅಪ್ ಡೇಟ್ ಸಿಗಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಂಗನಾ ಸಿನಿಮಾ ನೋಡಿ ಕಣ್ಣೀರಿಟ್ಟ ರಾಜಮೌಳಿ ತಂದೆ

    ಕಂಗನಾ ಸಿನಿಮಾ ನೋಡಿ ಕಣ್ಣೀರಿಟ್ಟ ರಾಜಮೌಳಿ ತಂದೆ

    ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut)ಬಹುದೊಡ್ಡ ಜವಾಬ್ದಾರಿ ತಗೆದುಕೊಂಡು ‘ಎಮರ್ಜೆನ್ಸಿ’ (Emergency) ಸಿನಿಮಾ ಮಾಡಿದ್ದಾರೆ. ಈ ಸಿನಿಮಾಗೆ ಹಣ ಹಾಕಿದ್ದಲ್ಲದೇ, ನಿರ್ದೇಶಕಿಯಾಗಿ ಜೊತೆಗೆ ನಾಯಕಿಯಾಗಿ ನಟಿಸಿದ್ದಾರೆ. ಇದು ಇಂದಿರಾ ಗಾಂಧಿ (Indira Gandhi) ಅವರ ಎಮರ್ಜೆನ್ಸಿ ಕುರಿತಾದ ಸಿನಿಮಾವಾಗಿದ್ದು, ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಬಹುತೇಕ ಕೆಲಸಗಳು ಕೂಡ ಮುಗಿದಿವೆ.

    ಸಿನಿಮಾದ ಶೂಟಿಂಗ್, ಎಡಿಟಿಂಗ್, ಹಿನ್ನೆಲೆ ಸಂಗೀತ ಹೀಗೆ ಎಲ್ಲ ಕೆಲಸವನ್ನೂ ಮುಗಿಸಿರುವ ಕಂಗನಾ, ಸಿನಿಮಾ ಹೇಗೆ ಬಂದಿದೆ ಎಂದು ಸಲಹೆ ಪಡೆಯುವುದಕ್ಕಾಗಿ ಹಲವರಿಗೆ ಚಿತ್ರವನ್ನು ತೋರಿಸಿದ್ದಾರೆ. ಚಿತ್ರ ನೋಡಿದವರ ಪೈಕಿ ರಾಜಮೌಳಿ ಅವರ ತಂದೆ, ವಿಜಯೇಂದ್ರ ಪ್ರಸಾದ್ ಕೂಡ ಒಬ್ಬರು. ಭಾರತೀಯ ಸಿನಿಮಾ ರಂಗದ ಅತ್ಯುತ್ತಮ ಕಥೆಗಾರರೂ ಆಗಿರುವ ವಿಜಯೇಂದ್ರ ಪ್ರಸಾದ್ (Vijayendra Prasad) ಎಮರ್ಜಿನ್ಸಿ ಸಿನಿಮಾ ನೋಡಿ ಭಾವುಕರಾದರಂತೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕಂಗನಾ, ‘ಎಮರ್ಜೆನ್ಸಿ ಸಿನಿಮಾವನ್ನು ವಿಜಯೇಂದ್ರ ಪ್ರಸಾದ್ ಅವರು ನೋಡುತ್ತಿರುವಾಗ ನಾನು ಅವರನ್ನೇ ಗಮನಿಸುತ್ತಿದ್ದೆ. ಹಲವು ಕಡೆ ಅವರು ಭಾವುಕರಾಗಿದ್ದರು. ಕಣ್ಣುಗಳು ನೀರು ತುಂಬಿಕೊಂಡಿದ್ದವು’ ಎಂದು ಕಂಗನಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಸಿದ್ದರಾಮಯ್ಯ ಎಂಬ ನಾನು’: ಸಿದ್ದರಾಮಯ್ಯ ಕುರಿತು ಮತ್ತೊಂದು ಸಿನಿಮಾ ಘೋಷಣೆ

    ಈ ನಡುವೆ ಎಮರ್ಜೆನ್ಸಿ ಕುರಿತಾಗಿ ಸಿನಿಮಾ ಮಾಡುತ್ತಿದ್ದರು, ಅದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪ. ಅದರಲ್ಲೂ ಸಮಾಜಕ್ಕೆ ತಪ್ಪು ಸಂದೇಶಗಳನ್ನು ಕೊಡುವ ಸಿನಿಮಾಗಳಿದ್ದರೆ, ಮೊದಲು ಅದರಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಾರೆ. ಅಲ್ಲದೇ, ಕಂಗನಾ ಪಾತ್ರವು ಇಂದಿರಾ ಗಾಂಧಿ ಅವರನ್ನು ಅವಮಾನಿಸುವಂತ ರೀತಿಯಲ್ಲಿ ಇದೆ ಎಂದು ಆರೋಪಿಸಿ, ಟೀಸರ್ ಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ಕೂಡಲೇ ಈ ಸಿನಿಮಾವನ್ನು ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

  • Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ (Bangalore International Film Festival) ಇಂದಿನಿಂದ ಆರಂಭವಾಗಲಿದ್ದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಚಾಲನೆ ನೀಡಲಿದ್ದಾರೆ. ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (Vijayendra Prasad) ಮುಖ್ಯ ಅತಿಥಿಯಾಗಿ ಬರುತ್ತಿದ್ದು, ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ವಿಧಾನಸೌಧದ ಮೆಟ್ಟಿಲು ಮೇಲೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

    ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇದನ್ನೂ ಓದಿ: ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರಕ್ಕೆ ರಾಗಿಣಿ ದ್ವಿವೇದಿ ಸಾಥ್

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಈ ಬಾರಿ ಅತೀ ಹೆಚ್ಚು ಕನ್ನಡ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

    ಈ ಚಿತ್ರೋತ್ಸವದಲ್ಲಿ ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರತ್ಯೇಕವಾಗಿ ಕನ್ನಡ ವಿಭಾಗ, ಇಂಡಿಯನ್ ವಿಭಾಗ ಹಾಗೂ ಏಷಿಯನ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಕ್ರಮವಾಗಿ ಆಯಾ ವಿಭಾಗದಲ್ಲಿ ಮೂರು ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುವುದು. ಮೊದಲ ಪ್ರಶಸ್ತಿ ಬಂದ ಚಿತ್ರಕ್ಕೆ ಹತ್ತು ಲಕ್ಷ ರೂಪಾಯಿ ಬಹುಮಾನ ಕೂಡ ಇದೆ. ಚಿತ್ರೋತ್ಸವದ ಕೊನೆಯ ದಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

    ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್.

  • BIFFES 2023- ‘ಕಾಂತಾರ’ ಚಿತ್ರಕ್ಕೆ ಗೌರವ : ಚಿತ್ರೋತ್ಸವದ ಉದ್ಘಾಟನಾ ಸಿನಿಮಾವಾಗಿ ಆಯ್ಕೆ

    BIFFES 2023- ‘ಕಾಂತಾರ’ ಚಿತ್ರಕ್ಕೆ ಗೌರವ : ಚಿತ್ರೋತ್ಸವದ ಉದ್ಘಾಟನಾ ಸಿನಿಮಾವಾಗಿ ಆಯ್ಕೆ

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ (Kantara) ಸಿನಿಮಾಗೆ ಮತ್ತೊಂದು ಗೌರವ ದೊರೆತಿದೆ. ವಿಶ್ವಸಂಸ್ಥೆಯು ಜಿನಿವಾದಲ್ಲಿ ಸಿನಿಮಾ ಪ್ರದರ್ಶನ ಆಯೋಜನೆ ಮಾಡಿದ್ದ ಬೆನ್ನಲ್ಲೇ ಕರ್ನಾಟಕ ಚಲನಚಿತ್ರ ಅಕಾಡೆಮಿ ತನ್ನ ಚಿತ್ರೋತ್ಸವದ ಉದ್ಘಾಟನಾ ಸಿನಿಮಾವಾಗಿ ಆಯ್ಕೆ ಮಾಡಿಕೊಂಡಿದೆ. ನಾಳೆ 14ನೇ ಬೆಂಗಳೂರು (Bangalore) ಅಂತಾರಾಷ್ಟ್ರೀತ ಚಿತ್ರೋತ್ಸವ ಆರಂಭವಾಗಲಿದ್ದು, ಉದ್ಘಾಟನಾ ಸಿನಿಮಾವಾಗಿ ಕಾಂತರ ಆಯ್ಕೆಯಾಗಿದೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿಷಯ ಹಂಚಿಕೊಂಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ‘ವಿಶ್ವಮಟ್ಟದಲ್ಲಿ ಕಾಂತಾರ ಚಿತ್ರಕ್ಕೆ ಮನ್ನಣೆ ಸಿಕ್ಕಿದೆ. ಅದನ್ನು ಗೌರವಿಸುವ ಉದ್ದೇಶದಿಂದ ಉದ್ಘಾಟನಾ ಸಿನಿಮಾವಾಗಿ ಕಾಂತಾರವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಈ ಸಿನಿಮಾವನ್ನು ಈಗಾಗಲೇ ಬಹುತೇಕರು ನೋಡಿರಬಹುದು. ಆದರೆ, ಗೌರವ ನೀಡುವ ದೃಷ್ಟಿಯಿಂದ ಪ್ರದರ್ಶನ ಮಾಡಲಾಗುತ್ತಿದೆ’ ಎಂದರು. ಇದನ್ನೂ ಓದಿ:`ಸಾಮಿ ಸಾಮಿ’ ಹಾಡಿಗೆ ಸ್ಟೆಪ್ ಹಾಕಿ ಎಂದ ಅಭಿಮಾನಿಗೆ ನೋ ಎಂದ ರಶ್ಮಿಕಾ ಮಂದಣ್ಣ

    ನಾಳೆಯಿಂದ ನಡೆಯಲಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ ಬರಲಿದ್ದಾರೆ. ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ನಾಳೆಯಿಂದ ಚಿತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೋತ್ಸವವನ್ನು  ಉದ್ಘಾಟಿಸಲಿದ್ದಾರೆ.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

    ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

    ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್.

  • ಬೆಂಗಳೂರು ಚಿತ್ರೋತ್ಸವಕ್ಕೆ ಬರಲಿದ್ದಾರೆ ‘ಆರ್.ಆರ್.ಆರ್’ ಸಿನಿಮಾದ ಕಥೆಗಾರ

    ಬೆಂಗಳೂರು ಚಿತ್ರೋತ್ಸವಕ್ಕೆ ಬರಲಿದ್ದಾರೆ ‘ಆರ್.ಆರ್.ಆರ್’ ಸಿನಿಮಾದ ಕಥೆಗಾರ

    ನಾಳೆಯಿಂದ ಬೆಂಗಳೂರಿನಲ್ಲಿ (Bangalore) ನಡೆಯಲಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Chirotsava) ಆರ್.ಆರ್.ಆರ್ (RRR) ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (Vijayendra Prasad) ಬರಲಿದ್ದಾರೆ. ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ನಾಳೆಯಿಂದ ಚಿತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಚಿತ್ರೋತ್ಸವವನ್ನು  ಉದ್ಘಾಟಿಸಲಿದ್ದಾರೆ.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಇದನ್ನೂ ಓದಿ: ಸ್ಯಾಮ್ ಈಸ್ ಬ್ಯಾಕ್, ಹೊಸ ಫೋಟೋಶೂಟ್‌ನಲ್ಲಿ ಸಮಂತಾ ಮಿಂಚಿಂಗ್

    ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

    ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್.

  • ಆರ್.ಎಸ್.ಎಸ್ ಬಗ್ಗೆ ಸಿನಿಮಾ ಮಾಡಲಿದ್ದಾರೆ ಖ್ಯಾತ ನಿರ್ದೇಶಕ ರಾಜಮೌಳಿ ತಂದೆ

    ಆರ್.ಎಸ್.ಎಸ್ ಬಗ್ಗೆ ಸಿನಿಮಾ ಮಾಡಲಿದ್ದಾರೆ ಖ್ಯಾತ ನಿರ್ದೇಶಕ ರಾಜಮೌಳಿ ತಂದೆ

    ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ಬಾಹುಬಲಿ ಖ್ಯಾತಿಯ ಎಸ್.ಎಸ್. ರಾಜಮೌಳಿ ಅವರ ತಂದೆ, ರಾಜ್ಯ ಸಭಾ ಸಂಸದ  ವಿಜಯೇಂದ್ರ ಪ್ರಸಾದ್ ರಾಷ್ಟ್ರೀಯ ಸ್ವಯಂ ಸೇವಾ ಸಂಘ (ಆರ್.ಎಸ್.ಎಸ್. ಕುರಿತಾಗಿ ಸಿನಿಮಾ ಮತ್ತು ವೆಬ್ ಸೀರಿಸ್ ಮಾಡುವುದಾಗಿ ತಿಳಿಸಿದ್ದಾರೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸಿದ್ಧವಾಗಿದ್ದು, ಇಡೀ ಕಥೆಯನ್ನು ಮೋಹನ್ ಭಾಗವಾತ್ ಮೆಚ್ಚಿಕೊಂಡಿದ್ದು, ಇದೊಂದು ಅಪರೂಪದ ಸಿನಿಮಾ ಆಗಲಿದೆ ಎಂದಿದ್ದಾರೆ.

    ವಿಜಯವಾಡದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ ಪ್ರಸಾದ್ ಅವರು, ಆರ್.ಎಸ್.ಎಸ್ ಕುರಿತು ಸಿನಿಮಾ ಮತ್ತು ವೆಬ್ ಸೀರಿಸ್ ತಯಾರಾಗಲಿದ್ದು, ಎರಡಕ್ಕೂ ನಾನೇ ನಿರ್ದೇಶನ ಮಾಡಲಿದ್ದೇನೆ ಎಂದು ಹೇಳಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಬರೆಯುವುದಕ್ಕೆ ಆರಂಭಿಸಿರುವುದಾಗಿಯೇ ತಿಳಿಸಿದ್ದಾರೆ. ಆರ್.ಎಸ್.ಎಸ್ ಬಗ್ಗೆ ಊಹಾಪೋಹಗಳನ್ನು ಹರಿಬಿಡಲಾಗಿದೆ. ಗಾಂಧೀಜಿಯನ್ನು ಕೊಂದವರು ಆರ್.ಎಸ್.ಎಸ್ ನವರು ಎಂದು ಬಿಂಬಿಸಲಾಗುತ್ತಿದೆ. ಅದೆಲ್ಲದಕ್ಕೂ ಸಿನಿಮಾದಲ್ಲಿ ಉತ್ತರ ಕೊಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:ಉದಯ್‌ ಹಿಂಬದಿಯಿಂದ ತಬ್ಬಿ ಕಿಸ್‌ ಮಾಡ್ತಾರೆ: ಬಿಗ್‌ ಬಾಸ್‌ ಮನೆಯಲ್ಲಿ ಮಹಿಳಾ ಸ್ಪರ್ಧಿಗಳು ಗರಂ

    ಆರ್.ಎಸ್.ಎಸ್ ಇರದೇ ಇದ್ದರೆ ಹಿಂದೂಗಳು ಉಳಿಯುತ್ತಿರಲಿಲ್ಲ. ಕಾಶ್ಮೀರವೇ ಇರುತ್ತಿರಲಿಲ್ಲ. ಹೀಗೆ ಸಾಕಷ್ಟು ವಿಷಯಗಳನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತೇನೆ. ಆರ್.ಎಸ್.ಎಸ್ ಈ ದೇಶಕ್ಕೆ ಏನೆಲ್ಲ ತ್ಯಾಗ ಮಾಡಿದೆ ಎನ್ನುವ ಕುರಿತಾದ ಸಿನಿಮಾ ಇದಾಗಲಿದೆ ಎಂದಿದ್ದಾರೆ ವಿಜಯೇಂದ್ರ ಪ್ರಸಾದ್.

    Live Tv
    [brid partner=56869869 player=32851 video=960834 autoplay=true]

  • ರಾಜಮೌಳಿ ಮುಂದಿನ ಚಿತ್ರಕ್ಕೆ ಮಹೇಶ್ ಬಾಬು ಹೀರೋ

    ರಾಜಮೌಳಿ ಮುಂದಿನ ಚಿತ್ರಕ್ಕೆ ಮಹೇಶ್ ಬಾಬು ಹೀರೋ

    ಆರ್.ಆರ್.ಆರ್ ಯಶಸ್ಸಿನಲ್ಲಿ ತೇಲುತ್ತಿರುವ ರಾಜಮೌಳಿ ಮುಂದಿನ ಸಿನಿಮಾ ಯಾವುದು  ಎಂಬ ಚರ್ಚೆ ಶುರುವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಈ ಕುರಿತು ರಾಜಮೌಳಿ ಅವರು ಏನೂ ಹೇಳದೇ ಇದ್ದರೂ, ಅವರ ತಂದೆ ವಿಜಯೇಂದ್ರ ಪ್ರಸಾದ್ ಈ ಕುರಿತು ಮಾತನಾಡಿದ್ದಾರೆ. ಅಂದುಕೊಂಡಂತೆ ಆದರೆ, ರಾಜಮೌಳಿ ನಿರ್ದೇಶನದ ಮುಂದಿನ ಸಿನಿಮಾ 2023ರಲ್ಲಿ ಸೆಟ್ಟೇರಲಿದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ರಾಜಮೌಳಿ ಅವರ ಮುಂದಿನ ಚಿತ್ರಕ್ಕೆ ಅವರ ತಂದೆಯೇ ಚಿತ್ರಕತೆ ಬರೆಯುತ್ತಿದ್ದಾರೆ. ಈಗಾಗಲೇ ಕಥೆ ಸಿದ್ದಗೊಂಡಿದ್ದು, ಸ್ಕ್ರೀನ್ ಪ್ಲೇ ಹೆಣೆಯುವಲ್ಲಿ ವಿಜಯೇಂದ್ರ ಪ್ರಸಾದ್ ಬ್ಯುಸಿಯಾಗಿದ್ದಾರಂತೆ. 2023ರ ಜೂನ್‍ನಿಂದ ಚಿತ್ರೀಕರಣ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇದು ಕೂಡ ಭಾರೀ ಬಜೆಟ್ ಸಿನಿಮಾವಾಗಿರಲಿದೆಯಂತೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ಅಂದಹಾಗೆ ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ. ಐತಿಹಾಸಿಕ ಕಥಾವಸ್ತುವನ್ನು ಈ ಸಿನಿಮಾ ಹೊಂದಿದ್ದು, ಮಹೇಶ್ ಬಾಬು ಈ ಪಾತ್ರಕ್ಕಾಗಿ ಕನಿಷ್ಠ ಆರು ತಿಂಗಳ ಕಾಲ ತಯಾರಿ ಮಾಡಿಕೊಳ್ಳಬೇಕಂತೆ. ಸದ್ಯ ಮಹೇಶ್ ಬಾಬು ಅವರು  ‘ಸರ್ಕಾರು ವಾರಿ ಪಾಟ’ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದು, ರಾಜಮೌಳಿ ಅವರ ಕಥೆಯನ್ನು ಒಪ್ಪಿಕೊಂಡಿದ್ದಾರಂತೆ. ಅಲ್ಲದೇ, ವಿಶೇಷ ಪಾತ್ರಕ್ಕೆ ತಯಾರಿ ಮಾಡಿಕೊಳ್ಳುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿತ್ತು. ಈ ಹಿಂದಿನ ಅವರ ಬಾಹುಬಲಿ ಚಿತ್ರ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಬಿರುದಾಂಕಿತಗೊಂಡಿತ್ತು. ಮಹೇಶ್ ಬಾಬುಗಾಗಿ ಬರೆದ ಕಥೆಯು, ಈ ಎರಡೂ ಸಿನಿಮಾಗಳನ್ನೂ ಮೀರಿಸಲಿದೆ ಎಂದು ಸಿನಿಪಂಡಿತರ ಲೆಕ್ಕಾಚಾರ.

  • ಹಾಲಿವುಡ್ ಸಿನಿಮಾ ಮಾಡಲಿದ್ದಾರೆ ರಾಜಮೌಳಿ : ವಿಜಯೇಂದ್ರ ಪ್ರಸಾದ್

    ಹಾಲಿವುಡ್ ಸಿನಿಮಾ ಮಾಡಲಿದ್ದಾರೆ ರಾಜಮೌಳಿ : ವಿಜಯೇಂದ್ರ ಪ್ರಸಾದ್

    ಹೈದರಾಬಾದ್: ಟಾಲಿವುಡ್ ಖ್ಯಾತ ನಿರ್ದೇಶಕ ರಾಜಮೌಳಿ ಹಾಲಿವುಡ್‍ನಲ್ಲಿ ಸಿನಿಮಾ ನಿರ್ದೇಶಿಸಲಿದ್ದಾರೆ ಎಂದು ಅವರ ತಂದೆ ವಿಜಯೇಂದ್ರ ಪ್ರಸಾದ್ ತಿಳಿಸಿದ್ದಾರೆ.

    ಬಾಹುಬಲಿ ಸಿನಿಮಾದ ಮೂಲಕ ಇಡೀ ವಿಶ್ವವೇ ಟಾಲಿವುಡ್ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ರಾಜಮೌಳಿ ಹಾಲಿವುಡ್‍ನಲ್ಲಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಆಗಾಗ ಹರಿದಾಡುತ್ತಲೇ ಇತ್ತು. ಆದರೀಗ ಈ ಮಾತು ಸತ್ಯ ಆಗುತ್ತಿದೆ. ಹೌದು, ನಿರ್ದೇಶಕ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಸಂದರ್ಶನವೊಂದರಲ್ಲಿ ರಾಜಮೌಳಿ ಹಾಲಿವುಡ್‍ನಲ್ಲಿ ಸಿನಿಮಾ ನಿರ್ದೇಶಿಸಿತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಇದನ್ನು ಓದಿ:ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ಯಶ್ ಸಹಾಯ ಹಸ್ತ

    ವಿಶೇಷವೆಂದರೆ ರಾಜಮೌಳಿಯವರು ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ವಿಜಯೇಂದ್ರರವರೆ ಕಥೆ ಬರೆಯುತ್ತಿದ್ದು, ಇದು ಐತಿಹಾಸಿಕ ಕತೆ ಆಧಾರಿಸಿದ ಸಿನಿಮಾವಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಚಿತ್ರ ಕುರಿತಂತೆ ಹಾಲಿವುಡ್ ಪ್ರಖ್ಯಾತ ನಿರ್ಮಾಣ ಸಂಸ್ಥೆಯೊಂದಿಗೆ ಮಾತುಕತೆ ಮಗಿದಿದ್ದು, ಈ ಸಿನಿಮಾದಲ್ಲಿ ಯಾವ ನಟರು ಇರುವುದಿಲ್ಲ. ಇದೊಂದು ಅನಿಮೇಷನ್ ಸಿನಿಮಾ ಆಗಿರಲಿದ್ದು, ಚಿತ್ರದ ಕಥೆ ಭಾರತದ ಪರಿಸರದ್ದೇ ಆಗಿರುತ್ತದೆ ಎಂದು ಹೇಳಿದ್ದಾರೆ.

    ಸದ್ಯ ನಿರ್ದೇಶಕ ರಾಜಮೌಳಿ ಟಾಲಿವುಡ್‍ನ ಸ್ಟಾರ್ ನಟರಾದ ರಾಮ್‍ಚರಣ್ ಹಾಗೂ ಎನ್‍ಟಿಆರ್ ಅಭಿನಯಿಸುತ್ತಿರುವ ‘ಆರ್‌ಆರ್‌ಆರ್‌’ ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಈ ಸಿನಿಮಾದಲ್ಲಿ ಬಹುತೇಕ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಬಹು ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಈ ಸಿನಿಮಾದಲ್ಲ ಬಾಲಿವುಡ್ ನಟಿ ಅಲಿಯಾ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ.

  • ಕುಮಾರಿ ಕನ್ನಡಕ್ಕೆ ಬರಲು ಕಾರಣ ರಾಜಮೌಳಿಯ ಅಪ್ಪ!

    ಕುಮಾರಿ ಕನ್ನಡಕ್ಕೆ ಬರಲು ಕಾರಣ ರಾಜಮೌಳಿಯ ಅಪ್ಪ!

    ಕುಮಾರಿ 21 ಎಫ್ ಚಿತ್ರದ ಮೂಲಕ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದ್ದಾರೆ. ತೆಲುಗಿನಲ್ಲಿ ಹಿಟ್ ಆಗಿದ್ದ ಚಿತ್ರದ ರೀಮೇಕ್ ಆಗಿರೋ ಕುಮಾರಿ ಕನ್ನಡಕ್ಕೆ ಬರಲು ಮೂಲ ಕಾರಣ ರಾಜಮೌಳಿಯವರ ತಂದೆ ವಿಜಯೇಂದ್ರ ಪ್ರಸಾದ್ ಎಂಬ ವಿಚಾರ ಇದೀಗ ಬಯಲಾಗಿದೆ!

    ಇದು ತೆಲುಗಿನ ಕುಮಾರಿ 21 ಎಫ್ ಚಿತ್ರದ ರೀಮೇಕ್. ಈ ಚಿತ್ರವನ್ನು ಸುಕುಮಾರ್ ನಿರ್ದೇಶನ ಮಾಡಿದ್ದರು. ಸುಕುಮಾರ್ ಅವರ ಅಣ್ಣ ವಿಜಯ ಕುಮಾರ್ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದರು. ಸದರಿ ಚಿತ್ರ ಹಿಟ್ ಆಗುತ್ತಲೇ ನಿರ್ಮಾಪಕ ವಿಜಯ ಕುಮಾರ್ ಈ ಚಿತ್ರವನ್ನು ಬೇರೆ ಬೇರೆ ಭಾಷೆಗಳಲ್ಲಿಯೂ ನಿರ್ಮಾಣ ಮಾಡಲು ಯೋಜನೆ ಹಾಕಿಕೊಂಡಿದ್ದರು. ಈ ವಿಚಾರವನ್ನು ನಿರ್ದೇಶಕ ಶ್ರೀಮಾನ್ ಗೆ ಹೇಳಿದ ಸುಕುಮಾರ್, ಅದನ್ನು ಕನ್ನಡಕ್ಕೆ ತಾವೇ ನಿರ್ದೇಶನ ಮಾಡಬೇಕೆಂದು ಕೇಳಿಕೊಂಡಿದ್ದರಂತೆ. ಆದರೆ ಅದುವರೆಗೂ ಈ ಚಿತ್ರವನ್ನು ನೋಡಿರದ ಶ್ರೀಮಾನ್ ಹಿಂದೇಟು ಹಾಕಿ ಅಲ್ಲಿಂದ ಎಸ್ಕೇಪಾಗಿದ್ದರಂತೆ.

    ಅದಾಗಿ ಕೆಲ ದಿನಗಳ ನಂತರ ಈ ವಿಚಾರವನ್ನು ಶ್ರೀಮಾನ್ ತಮ್ಮ ಗುರುಗಳಾದ ವಿಜಯೇಂದ್ರ ಪ್ರಸಾದ್ ಅವರ ಬಳಿ ಹೇಳಿದ್ದಾರೆ. ಅದಕ್ಕವರು ಯಾವ ಕಾರಣಕ್ಕೂ ಈ ಅವಕಾಶವನ್ನು ಬಿಡಬಾರದಾಗಿ ಸಲಹೆ ಕೊಟ್ಟ ನಂತರ ಶ್ರೀಮಾನ್ ಅಖಾಡಕ್ಕಿಳಿದಿದ್ದರು. ಆ ಬಳಿಕ ಮಿಂಚಿನ ವೇಗದಲ್ಲಿ ತಯಾರಿ ಮಾಡಿಕೊಂಡು, ದೇವರಾಜ್ ಅವರ ಬಳಿಯೇ ಮಾತಾಡಿ ಪ್ರಣಾಮ್ ನಟಿಸುವಂತೆ ಮಾಡುವಲ್ಲಿಯೂ ಶ್ರೀಮಾನ್ ಯಶಸ್ವಿಯಾಗಿದ್ದರು.

    ಅಂದಹಾಗೆ ಇದು ಈ ದಿನಮಾನದಲ್ಲಿನ ಯುವಕರ ಕಥೆ. ಈ ಚಿತ್ರ ನೋಡಿದರೆ ಬೇರೆ ಬೇರೆ ಪಾತ್ರಗಳಲ್ಲಿ, ಸನ್ನಿವೇಶಗಳಲ್ಲಿ ಇದು ತಮ್ಮದೇ ಕಥೆ ಎಂಬಂಥಾ ಆಪ್ತ ಭಾವ ಹುಟ್ಟಿಕೊಳ್ಳಲಿದೆಯಂತೆ. ಕನ್ನಡದ ನೇಟಿವಿಟಿಯನ್ನು ಅರ್ಥ ಮಾಡಿಕೊಂಡು ಅದಕ್ಕೆ ತಕ್ಕುದಾಗಿ ಈ ಚಿತ್ರವನ್ನು ರೂಪಿಸಿರೋ ನಿರ್ದೇಶಕ ಶ್ರೀಮಾನ್ ದೊಡ್ಡ ಗೆಲುವೊಂದು ಸಿಕ್ಕುವ ಭರವಸೆಯಿಂದಿದ್ದಾರೆ.