Tag: Vikas Dubey

  • ಕ್ರಿಮಿನಲ್ ಸತ್ತ, ಆದ್ರೆ ಅವರ ಕಥೆ ಏನು..?- ವಿಕಾಸ್ ದುಬೆ ಎನ್‌ಕೌಂಟರ್‌ಗೆ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ

    ಕ್ರಿಮಿನಲ್ ಸತ್ತ, ಆದ್ರೆ ಅವರ ಕಥೆ ಏನು..?- ವಿಕಾಸ್ ದುಬೆ ಎನ್‌ಕೌಂಟರ್‌ಗೆ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ

    ನವದೆಹಲಿ: ಉತ್ತರ ಪ್ರದೇಶ ಗ್ಯಾಂಗ್‍ಸ್ಟರ್ ವಿಕಾಸ್ ದುವೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಇಂದು ಸಾವನ್ನಪ್ಪಿದ್ದು, ದುಬೆ ಎನ್‍ಕೌಂಟರ್ ಮೇಲೆ ರಾಜಕೀಯ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದೆ.

    ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಸೇರಿದಂತೆ ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್, ಮಧ್ಯ ಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ ಗಾಂಧಿ, ಕ್ರಿಮಿನಲ್ ಹತ್ಯೆಯಾಗಿದೆ. ಆದರೆ ಆತನಿಗೆ ರಕ್ಷಣೆ ನೀಡುತ್ತಿದ್ದ ರಾಜಕೀಯ ನಾಯಕರ ಸಂಗತಿಯೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾರ ಉತ್ತರ ಪ್ರದೇಶವನ್ನು ‘ಅಪರಾಧ ಪ್ರದೇಶ’ವಾಗಿ ಪರಿವರ್ತಿಸಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಕಾನ್ಪುರದ ಸಂಪೂರ್ಣ ಘಟನೆಯನ್ನು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

    ಇತ್ತ ಮಾಜಿ ಸಿಎಂ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು, ವಾಸ್ತವದಲ್ಲಿ ಕಾರು ಪಲ್ಟಿಯಾಗಿಲ್ಲ. ರಹಸ್ಯ ಬಯಲಿಗೆ ಬಂದರೇ ಸರ್ಕಾರ ಪತನವಾಗುತ್ತದೆ ಎಂದು ಎನ್‍ಕೌಂಟರ್ ಮಾಡಲಾಗಿದೆ’ ಎಂದು ವಿಮರ್ಶೆ ಮಾಡಿದ್ದಾರೆ.

    ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯೆ ನೀಡಿ, ‘ನಾವು ಅನುಮಾನಪಟ್ಟಂತೆ ನಡೆದಿದೆ. ವಿಕಾಸ್ ದುಬೆಗೆ ಹತ್ತಿರವಾಗಿದ್ದ ರಾಜಕೀಯ ನಾಯಕರು, ಪೊಲೀಸರು, ಸರ್ಕಾರಿ ಅಧಿಕಾರಿಗಳು ಹೆಸರು ಇನ್ನು ಬಯಲಿಗೆ ಬರುವುದಿಲ್ಲ. ಕಳೆದ 3-4 ದಿನಗಳಿಂದ ದುಬೆ ಸಹಚರರನ್ನು ಎನ್‍ಕೌಂಟರ್ ಮಾಡಿದ್ದರು. ಆದರೆ ಮೂರು ಎನ್‍ಕೌಂಟರ್ ಗಳು ಒಂದೇ ರೀತಿ ಏಕೆ ಇದೆ ಎಂದು ಪ್ರಶ್ನಿಸಿದ್ದಾರೆ.

    ಆರೋಪಿ ವಿಕಾಸ್ ದುಬೆಯನ್ನು ಮಧ್ಯ ಪ್ರದೇಶದಿಂದ ಉತ್ತರ ಪ್ರದೇಶಕ್ಕೆ ಕರೆತರುತ್ತಿದ್ದ ವೇಳೆ ಕಾನ್ಪುರ ಸಮೀಪದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದಂತೆ ಆತನಿದ್ದ ವಾಹನ ಪಲ್ಟಿಯಾಗಿತ್ತು. ಈ ವೇಳೆ ದುಬೆ ಪರಾರಿಯಾಗಲು ಯತ್ನಿಸಿ ಪೊಲೀಸ್ ಪೇದೆಯಿಂದ ತುಪಾಕಿ ಕಸಿದುಕೊಂಡು ಶೂಟ್ ಮಾಡಲು ಯತ್ನಿಸಿದ್ದ. ಈ ವೇಳೆ ಎಸ್‍ಐ ಸೇರಿದಂತೆ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಕಾನ್ಪುರ ಐಜಿ ಮೋಹಿತ್ ಅಗರ್ವಾಲ್ ತಿಳಿಸಿದ್ದರು.

     

  • ದುಬೆ ದುಷ್ಕೃತ್ಯಕ್ಕೆ ಸಾಥ್ – ಪಂಚಾಯತ್ ಚುನಾವಣೆ ಗೆದ್ದಿದ್ದ ಪತ್ನಿ ಅರೆಸ್ಟ್

    ದುಬೆ ದುಷ್ಕೃತ್ಯಕ್ಕೆ ಸಾಥ್ – ಪಂಚಾಯತ್ ಚುನಾವಣೆ ಗೆದ್ದಿದ್ದ ಪತ್ನಿ ಅರೆಸ್ಟ್

    ಲಕ್ನೋ: ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ಪತ್ನಿ ಮತ್ತು ಆತನ ಮಗನನ್ನು ಉತ್ತರ ಪ್ರದೇಶದ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

    ವಿಕಾಸ್ ದುಬೆಯ ಪತ್ನಿ ರಿಚಾ ದುಬೆಯನ್ನು ಕೃಷ್ಣನಗರ ನಿವಾಸದಿಂದ ಗುರುವಾರ ಸಂಜೆ ವಿಶೇಷ ಕಾರ್ಯಪಡೆ ತಂಡ (ಎಸ್‍ಟಿಎಫ್) ಆರೋಪಿಗಳಿಗೆ ಆಶ್ರಯ ನೀಡಿದ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದರ ಜೊತೆಗೆ ವಿಕಾಸ್ ದುಬೆ ಮಗ ಮತ್ತು ಆತನ ಸಹಚರನೋರ್ವನನ್ನು ಬಂಧಿಸಲಾಗಿದೆ.

    ಬಂಧಿತ ರಿಚಾ ದುಬೆ, ಗ್ಯಾಂಗ್ ಸ್ಟಾರ್ ನಡೆಸುತ್ತಿದ್ದ ಎಲ್ಲ ಕೃತ್ಯಗಳಿಗೂ ಸಾಥ್ ನೀಡುತ್ತಿದ್ದಳು ಎಂದು ತಿಳಿದು ಬಂದಿದೆ. ಕನ್ಪುರದಲ್ಲಿ ಪೊಲೀಸರನ್ನು ಕೊಂದ ಘಟನೆಯ ಬಗ್ಗೆ ಆಕೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆಯಲ್ಲಿ ಕನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಕೊಂದ ಕೃತ್ಯದಲ್ಲಿ ಈಕೆಯೂ ಕೂಡ ಭಾಗವಾಗಿದ್ದಳು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಈಕೆ ಬಿಕ್ರು ಗ್ರಾಮದಲ್ಲಿದ್ದ ದುಬೆ ಮನೆಗೆ ಸಿಸಿಟಿವಿಯನ್ನು ಅಳವಡಿಸಿ ಅದರ ದೃಶ್ಯಗಳನ್ನು ತನ್ನ ಮೊಬೈಲ್ ಮೂಲಕ ಕೂತಲ್ಲಿಯೇ ನೋಡುತ್ತಿದ್ದಳು. ಆ ಮನೆಯನ್ನು ನಾಶ ಮಾಡಿದ ಅಧಿಕಾರಿಗಳು ಆಕೆಯನ್ನು ಹುಡುಕಿಕೊಂಡು ಕೃಷ್ಣನಗರ ನಿವಾಸಕ್ಕೆ ಹೋಗಿದ್ದಾರೆ. ಆದರೆ ಆಕೆ ಅಲ್ಲಿಂದ ಪರಾರಿಯಾಗಿದ್ದಳು. ಆದರೆ ವಿಕಾಸ್ ದುಬೆ ಗುರುವಾರ ಸಿಕ್ಕಿಬಿದ್ದ ನಂತರ ಮತ್ತೆ ಆದೇ ಮನೆಗೆ ವಾಪಸ್ ಆಗಿದ್ದಾಳೆ. ಆನಂತರ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

    ಈಕೆ ಕೂಡ ಸ್ಥಳೀಯ ಗ್ರಾಮ ಪಂಜಾಯ್ತಿ ಚುನಾವಣೆಗೆ ನಿಂತು ಗೆದ್ದಿದ್ದಳು. ಮೊದಲು ಬಿಜೆಪಿ ಪಕ್ಷದಲ್ಲಿ ಇದ್ದ ವಿಕಾಸ್ ದುಬೆ ನಂತರದ ದಿನದಲ್ಲಿ ಸಮಾಜವಾದಿ ಪಕ್ಷಕ್ಕೆ ಬಂದಿದ್ದ. ಈತನೂ ಕೂಡ ಜೈಲಿನಲ್ಲೇ ಇದ್ದುಕೊಂಡೆ ನಗರ ಪಂಚಾಯ್ತಿ ಚುನಾವಣೆಗೆ ನಿಂತು ಜಯಗಳಿಸಿದ್ದ. ಜೊತೆಗೆ ಎಂಎಲ್‍ಐ ಆಗಬೇಕು ಎಂಬ ಕನಸು ಕಂಡಿದ್ದ ದುಬೆ, ಇದಕ್ಕಾಗಿ 2000ದಲ್ಲಿ ಬಿಜೆಪಿ ಸಚಿವ ಸಂತೋಷ್ ಶುಕ್ಲಾ ಅವರನ್ನು ಪೊಲೀಸ್ ಠಾಣೆಯಲ್ಲೇ ಕೊಲೆ ಕೂಡ ಮಾಡಿದ್ದ.

    ಜುಲೈ 2ರಂದು ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆ ಮತ್ತು ಅವನ ಗ್ಯಾಂಗ್ ನಾಪತ್ತೆಯಾಗಿತ್ತು. ವಿಕಾಸ್ ದುಬೆಗಾಗಿ ಉತ್ತರ ಪ್ರದೇಶದ ಪೊಲೀಸರು ನಿರಂತರ ಹುಡುಕಾಟ ನಡೆಸಿದ್ದರು. ಈ ಮಧ್ಯೆ ಉತ್ತರ ಪ್ರದೇಶ ಮತ್ತು ಹರ್ಯಾಣದಲ್ಲಿ ಸಿಕ್ಕ ವಿಕಾಸ್ ದುಬೆಯ ಏಳು ಮಂದಿ ಸಹಚರನ್ನು ಎನ್‍ಕೌಂಟರ್ ಮಾಡಿದ್ದರು. ಇದಾದ ಒಂದು ವಾರದ ನಂತರ ವಿಕಾಸ್ ದುಬೆ ಮಧ್ಯಪ್ರದೇಶದ ಉಜ್ಜೈನ್‍ನಲ್ಲಿರುವ ಮಹಾಕಾಲ ದೇವಸ್ಥಾನದಲ್ಲಿ ಗುರುವಾರ ಸೆರೆಸಿಕ್ಕಿದ್ದ.

    ಗುರುವಾರ ಮಧ್ಯಪ್ರದೇಶದಲ್ಲಿ ಸೆರೆಸಿಕ್ಕ ವಿಕಾಸ್ ದುಬೆಯನ್ನು ಇಂದು ಮುಂಜಾನೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಮಧ್ಯಪ್ರದೇಶದ ಪೊಲೀಸರಿಂದ ದುಬೆಯನ್ನು ವಶಕ್ಕೆ ಪಡೆದು ಕರೆತರುವ ಸಮಯದಲ್ಲಿ ನಮ್ಮ ವಾಹನ ಅಪಘಾತವಾಗಿ ಪಲ್ಟಿಯಾಗಿತ್ತು. ಈ ವೇಳೆ ದುಬೆ ತಮ್ಮ ಪೊಲೀಸರ ಬಂದೂಕನ್ನು ಕಿತ್ತುಕೊಂಡು ನಮ್ಮ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತನನ್ನು ಎನ್‍ಕೌಂಟರ್ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಈ ಐದು ಎಡವಟ್ಟಿನಿಂದ ದುಬೆ ಎನ್‌ಕೌಂಟರ್‌ನಲ್ಲಿ ಸಿಕ್ಕಿಬೀಳ್ತಾರಾ ಪೊಲೀಸರು?

    ಈ ಐದು ಎಡವಟ್ಟಿನಿಂದ ದುಬೆ ಎನ್‌ಕೌಂಟರ್‌ನಲ್ಲಿ ಸಿಕ್ಕಿಬೀಳ್ತಾರಾ ಪೊಲೀಸರು?

    – ದುಬೆ ಎನ್‍ಕೌಂಟರ್ ಸುತ್ತ ಅನುಮಾನಗಳ ಹುತ್ತ

    ಲಕ್ನೋ: ಇಂದು ಮುಂಜಾನೆ ಎನ್‍ಕೌಂಟರ್ ಆದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಈ ಎಲ್ಲದರ ನಡುವೆ ಪೊಲೀಸರು ನೀಡಿರುವ ಹೇಳಿಕೆಗಳು ಅನುಮಾನ ಮೂಡುವಂತಿದೆ.

    ಪೊಲೀಸರು ಎನ್‍ಕೌಂಟರ್ ಗೆ ನೀಡಿರುವ ಕೆಲ ಕಾರಣಗಳು ಅನುಮಾನ ಮೂಡಿಸುತ್ತಿವೆ. ಈಗ ಪೊಲೀಸರು ಕೊಟ್ಟ ಕಾರಣಗಳೇ ಈ ಪ್ರಕರಣದಲ್ಲಿ ಪೊಲೀಸರನ್ನು ಸಿಕ್ಕಿಹಾಕಿಕೊಳ್ಳವಂತೆ ಮಾಡುತ್ತಿದೆ ಎಂದು ಹೇಳಲಾಗಿದೆ. ಪೊಲೀಸರು ಕೊಟ್ಟ ಐದು ಕಾರಣಗಳನ್ನು ನೋಡಿದರೆ, ಇದರಲ್ಲಿ ಸಂಶಯಾಸ್ಪದ ವಿಚಾರಗಳೇ ಜಾಸ್ತಿ ಇವೆ.

    ಎನ್‍ಕೌಂಟರ್ ಗೆ ಮೊದಲ ಕಾರಣ ಕೊಟ್ಟಿರುವ ಪೊಲೀಸರು, ನಮ್ಮ ಬೆಂಗಾವಲು ವಾಹನ ಪಲ್ಟಿಯಾದ ನಂತರ ದುಬೆಯನ್ನು ನಾವು ಕಾರಿನಿಂದ ಹೊರ ಎಳೆದವು. ಆಗ ಆತ ನಮ್ಮ ಪೊಲೀಸರಿಗೆ ಗುಂಡು ಹಾರಿಸಿ ಓಡಲು ಯತ್ನಿಸಿದನು. ಈ ವೇಳೆ ನಾವು ಶೂಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಓಡುತ್ತಿದ್ದ ದುಬೆಯ ಎದೆಗೆ ಹಿಂಬದಿಯಿಂದ ಪೊಲೀಸರು ಹೇಗೆ ನಿಖರವಾಗಿ ಗುಂಡು ಹಾರಿಸಿದರು ಎಂಬ ಪ್ರಶ್ನೆ ಈಗ ಮೂಡಿದೆ.

    ದುಬೆ ಕೃಷಿ ಹೊಲದಲ್ಲಿ ತಪ್ಪಿಸಿಕೊಂಡು ಓಡುವಾಗ ಗುಂಡು ಹೊಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಎನ್‍ಕೌಂಟರ್ ನಡೆದಿರುವುದು ನಿರ್ಜನ ಪ್ರದೇಶದಲ್ಲಿ ಜೊತೆಗೆ ಮುಂಜಾನೆಯಲ್ಲಿ. ಆಗ ಆತ ಓಡುತ್ತಿದ್ದ ಎಂದು ಹೇಳಿದ್ದಾರೆ. ವರದಿಯ ಪ್ರಕಾರ, ದುಬೆ ಬಲಗಾಲಿಗೆ ಕಬ್ಬಿಣ ರಾಡ್ ಅನ್ನು ಹಾಕಲಾಗಿದೆ. ಜೊತೆಗೆ ಆತ ಇತ್ತೀಚೆಗೆ ಕುಂಟುತ್ತಿದ್ದ ಎಂದು ಹೇಳಲಾಗಿದೆ. ಹೀಗಿರುವಾಗ ಆತ ಹೇಗೆ ಓಡಿಹೋಗುತ್ತಾನೆ ಎಂಬ ಅನುಮಾನ ಮೂಡಿದೆ.

    ಇದರ ಜೊತೆಗೆ ಉತ್ತರ ಪ್ರದೇಶದ ಪೊಲೀಸರು, ದುಬೆ ನಮ್ಮ ಗಾಯಗೊಂಡ ಪೊಲೀಸರ ಬಳಿ ಬಂದೂಕುಗಳನ್ನು ಕಿತ್ತುಕೊಂಡು ಹಲ್ಲೆ ಮಾಡಿದ ಎಂದು ಹೇಳಿದ್ದಾರೆ. ಆದರೆ ನಿಯಮಗಳ ಪ್ರಕಾರ, ಯಾವುದೇ ಆರೋಪಿಯನ್ನು ಬೇರೆ ಕಡೆ ಸಾಗಿಸುವಾಗ ಆತನಿಗೆ ಕೈಕೋಳ ಹಾಕಬೇಕು. ಅದನ್ನು ಹಾಕಿದ್ದರೇ ಆತ ಹೇಗೆ ಬಂದೂಕನ್ನು ಕಿತ್ತುಕೊಂಡ? ಇಲ್ಲವೇ ಅದನ್ನು ಹಾಕಿರಲಿಲ್ಲ ಎಂದರೆ ಏಕೆ ಹಾಕಲಿಲ್ಲ ಎಂಬ ಪ್ರಶ್ನೆ ಎದ್ದಿದೆ.

    ದುಬೆ ನಮ್ಮ ಬೆಂಗಾವಲು ವಾಹನ ಪಲ್ಟಿಯಾದ ಬಳಿಕ ಪರಾರಿಯಾಗಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ವರದಿಯ ಪ್ರಕಾರ, ದುಬೆಯನ್ನು ಮಧ್ಯ ಪ್ರದೇಶದಿಂದ ಟಾಟಾ ಸಫಾರಿ ಕಾರಿನಲ್ಲಿ ಕರೆದೊಯ್ಯಲಾಗುತ್ತಿತ್ತು. ಆದರೆ ಉತ್ತರ ಪ್ರದೇಶದಲ್ಲಿ ಪಲ್ಟಿಯಾಗಿದ್ದು ಟಿಯೂವಿ-300 ಎಸ್‍ಯೂವಿ ಕಾರು. ಮಾರ್ಗ ಮಧ್ಯೆ ಕಾರು ಚೇಂಜ್ ಆಗಲು ಕಾರಣವೇನು ಎಂಬ ಅನುಮಾನ ಬಂದಿದೆ.

    ಘಟನೆಯಲ್ಲಿ ಗಾಯಗೊಂಡ ಪೊಲೀಸರು ಆಸ್ಪತ್ರೆಗೆ ಬಂದಾಗ ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದರು. ಆದರೆ ಮಧ್ಯಪ್ರದೇಶದಲ್ಲಿ ದುಬೆಯನ್ನು ವಶಕ್ಕೆ ಪಡೆದಾಗ ಅಲ್ಲಿ ಇದ್ದ ಸಿಸಿಟಿವಿ ದೃಶ್ಯದ ಪ್ರಕಾರ ಯಾವ ಪೊಲೀಸ್ ಕೂಡ ಸಮವಸ್ತ್ರ ಧರಿಸಿರಲಿಲ್ಲ. ಪೊಲೀಸರು ಮಾರ್ಗ ಮಧ್ಯೆ ಸಮವಸ್ತ್ರ ಧರಿಸಲು ಕಾರಣವೇನು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

  • ‘ದುಬೆ ಕಾನ್ಪುರ ತಲುಪಲ್ಲ’- ಪೊಲೀಸ್ ಸಂಭಾಷಣೆಯ ಸ್ಫೋಟಕ ವಿಡಿಯೋ ವೈರಲ್

    ‘ದುಬೆ ಕಾನ್ಪುರ ತಲುಪಲ್ಲ’- ಪೊಲೀಸ್ ಸಂಭಾಷಣೆಯ ಸ್ಫೋಟಕ ವಿಡಿಯೋ ವೈರಲ್

    – ದಾರಿ ಮಧ್ಯೆ ದುಬೆ ಚಲಿಸುತ್ತಿದ್ದ ಕಾರು ಚೇಂಜ್
    – ರಹಸ್ಯಮಯವಾಗಿದೆ ದುಬೆ ಎನ್‍ಕೌಂಟರ್ ಕಥೆ

    ಲಕ್ನೋ: ಇಂದು ಮುಂಜಾನೆ ಎನ್‍ಕೌಂಟರ್ ಆದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಸಾವಿನ ಸುತ್ತ ಅನುಮಾನಗಳ ಹುತ್ತ ಮೂಡಿವೆ. ಈ ನಡುವೆ ದುಬೆ ಕಾನ್ಪುರ ತಲುಪಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವ ವಿಡಿಯೋ ವೈರಲ್ ಆಗಿದೆ.

    ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸ್ ಅಧಿಕಾರಿಗಳು ಮಾತನಾಡುತ್ತಿರುತ್ತಾರೆ. ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ವಿಕಾಸ್ ದುಬೆ ಯಾವ ಸಮಯಕ್ಕೆ ಕಾನ್ಪುರಕ್ಕೆ ಬರುತ್ತಾನೆ ಎಂದು ಪ್ರಶ್ನೆ ಮಾಡುತ್ತಾರೆ. ಇದಕ್ಕೆ ಉತ್ತರಿಸಿದ ಪೊಲೀಸ್ ಅಧಿಕಾರಿಯೋರ್ವ, ವಿಕಾಸ್ ದುಬೆ ಕಾನ್ಪುರ ತಲುಪುವುದಿಲ್ಲ ಎಂದು ನಾನೂ ಭಾವಿಸುತ್ತೇನೆ ಎಂದು ನಗುತ್ತಾ ಹೇಳಿರುವುದು ಸ್ಪಷ್ಟವಾಗಿದೆ.

    ಈ ವಿಡಿಯೋ ಜೊತೆಗೆ ಇನ್ನೊಂದು ಸ್ಫೋಟಕ ಸುದ್ದಿ ಹೊರಬಿದ್ದಿದ್ದು, ವಿಕಾಸ್ ದುಬೆಯನ್ನು ಎನ್‍ಕೌಂಟರ್ ಮಾಡಲೆಂದೇ ಪೊಲೀಸರು ಮಾರ್ಗ ಮಧ್ಯೆ ಆತನಿದ್ದ ಕಾರನ್ನು ಚೇಂಜ್ ಮಾಡಿದ್ದರು ಎನ್ನಲಾಗಿದೆ. ವರದಿಯ ಪ್ರಕಾರ, ವಿಕಾಸ್ ದುಬೆ ಮಧ್ಯ ಪ್ರದೇಶದಿಂದ ಸಫಾರಿ ಕಾರಿನಲ್ಲಿ ಹೊರಟಿದ್ದಾನೆ. ಆದರೆ ಪೊಲೀಸ್ ಎನ್‍ಕೌಂಟರ್ ಸಮಯದಲ್ಲಿ ಪಲ್ಟಿಯಾದ ಕಾರ ಎಸ್‍ಯೂವಿಯಾಗಿದೆ. ಈ ಬದಲಾವಣೆಯಿಂದ ಇದು ಫೇಕ್ ಎನ್‍ಕೌಂಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಇದರ ಜೊತೆಗೆ ವಿಕಾಸ್ ದುಬೆಯನ್ನು ಪ್ಲಾನ್ ಮಾಡಿಯೇ ಎನ್‍ಕೌಂಟರ್ ಮಾಡಲಾಗಿದೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಈಗಾಗಲೇ #ಫೇಕ್‍ಎನ್‍ಕೌಂಟರ್ ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗಿದೆ. ದೇಶದ ಎಲ್ಲ ಪ್ರಮುಖ ನಾಯಕರು ಟ್ವೀಟ್ ಮಾಡಿ ಉತ್ತರ ಪ್ರದೇಶದ ಸರ್ಕಾರ ಮತ್ತು ಪೊಲೀಸರ ಮೇಲೆ ಕಿಡಿಕಾರುತ್ತಿದ್ದಾರೆ. ಈ ನಡುವೆ ದೊಡ್ಡ ದೊಡ್ಡ ವ್ಯಕ್ತಿಗಳು ತಪ್ಪಿಸಿಕೊಳ್ಳಲು ವಿಚಾರಣೆಗಿಂತ ಮುಂಚೆಯೇ ವಿಕಾಸ್ ದುಬೆಯನ್ನು ಹತ್ಯೆ ಮಾಡಿಸಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಿಜೆಪಿ ಪಕ್ಷದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ. ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿ, ವಿಕಾಸ್ ದುಬೆಯ ಫೇಕ್‍ಎನ್‍ಕೌಂಟರ್ ಗೆ ನ್ಯಾಯ ಸಿಗಬೇಕು. ಆತ ಅಮಾಯಕನಾಗಿದ್ದು, ಸಮಾಜವಾದಿ ಪಕ್ಷದ ಉತ್ತಮ ಕಾರ್ಯಕರ್ತನಾಗಿದ್ದ. ರಾಜಕೀಯ ವೈಷಮ್ಯದಿಂದ ಬಿಜೆಪಿ ಸರ್ಕಾರ ಆತನನ್ನು ಕೊಲೆ ಮಾಡಿದೆ. ಇದರ ಹಿಂದೆ ಏನೋ ರಹಸ್ಯವಿದೆ ಎಂದು ದೂರಿದ್ದಾರೆ.

    ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಇಂದು ಮುಂಜಾನೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

  • ಎನ್‍ಕೌಂಟರ್ ಆಗಿದ್ದ ದುಬೆ ಸಹಚರನಿಗೆ ಕೊರೊನಾ- ವಿಕಾಸ್ ಮೃತದೇಹ ಪರೀಕ್ಷೆಗೆ ರವಾನೆ

    ಎನ್‍ಕೌಂಟರ್ ಆಗಿದ್ದ ದುಬೆ ಸಹಚರನಿಗೆ ಕೊರೊನಾ- ವಿಕಾಸ್ ಮೃತದೇಹ ಪರೀಕ್ಷೆಗೆ ರವಾನೆ

    ಲಕ್ನೋ: ಮೃತ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ಸಹಚರನಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಇಂದು ಎನ್‍ಕೌಂಟರ್ ಗೆ ಬಲಿಯಾದ ವಿಕಾಸ್ ದುಬೆ ಮೃತದೇಹವನ್ನು ಪೊಲೀಸರು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದಾರೆ.

    ಕಳೆದ ಎರಡು ದಿನದ ಹಿಂದೆ ವಿಕಾಸ್ ದುಬೆ ಬಲಗೈ ಬಂಟನಂತಿದ್ದ ಅಮರ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮುನ್ನ ಕೊರೊನಾ ಪರೀಕ್ಷೆ ಮಾಡಿಸಿದ್ದು, ಆತನಿಗೆ ಕೊರೊನಾ ಪಾಟಿಸಿವ್ ಬಂದಿತ್ತು. ಈ ಕಾರಣದಿಂದ ಇಂದು ಬೆಳಗ್ಗೆ ಎನ್‍ಕೌಂಟರ್ ಆದ ವಿಕಾಸ್ ದುಬೆ ಮೃತದೇಹವನ್ನು ಕೂಡ ಕೊರೊನಾ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ.

    ಎಂಟು ಮಂದಿ ಪೊಲೀಸರನ್ನು ಅಮಾನುಷವಾಗಿ ಕೊಂದು ಹಾಕಿದ್ದ ಪ್ರಕರಣದಲ್ಲಿ, ಬುಧವಾರ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಸಿಬ್ಬಂದಿ ಪ್ರಮುಖ ಆರೋಪಿ ವಿಕಾಸ್ ದುಬೆ ಸಹಚರ ಅಮರ್ ದುಬೆಯನ್ನು ಎನ್‍ಕೌಂಟರ್ ಮಾಡಿತ್ತು. ಎನ್‍ಕೌಂಟರ್ ಗೆ ಬಲಿಯಾದ ಅಮರ್ ದುಬೆ ವಿಕಾಸ್ ದುಬೆ ಅಪ್ತನಾಗಿದ್ದು, ಈತ ಕೂಡ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಅಮರ್ ಹೆಸರು ಕೂಡ ಎಫ್‍ಐಆರ್ ಅಲ್ಲಿ ಉಲ್ಲೇಖವಾಗಿತ್ತು.

    ಗುರುವಾಗ ಮಧ್ಯಪ್ರದೇಶದಲ್ಲಿ ಸೆರೆಸಿಕ್ಕ ವಿಕಾಸ್ ದುಬೆಯನ್ನು ಇಂದು ಮುಂಜಾನೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಮಧ್ಯಪ್ರದೇಶದ ಪೊಲೀಸರಿಂದ ದುಬೆಯನ್ನು ವಶಕ್ಕೆ ಪಡೆದು ಕರೆತರುವ ಸಮಯದಲ್ಲಿ ನಮ್ಮ ವಾಹನ ಅಪಘಾತವಾಗಿ ಪಲ್ಟಿಯಾಗಿತ್ತು. ಈ ವೇಳೆ ದುಬೆ ತಮ್ಮ ಪೊಲೀಸರ ಬಂದೂಕನ್ನು ಕಿತ್ತುಕೊಂಡು ನಮ್ಮ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತನನ್ನು ಎನ್‍ಕೌಂಟರ್ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗ್ಯಾಂಗ್ ಅವರ ಮೇಲೆ ಗುಂಡಿನ ದಾಳಿ ಮಾಡಿ ಎಂಟು ಮಂದಿ ಪೊಲೀಸರನ್ನು ಕೊಂದು ಹಾಕಿತ್ತು.

  • ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್- ಎಸ್ಕೇಪ್ ಆಗಲು ಯತ್ನಿಸ್ತಿದ್ದಂತೆ ಶೂಟೌಟ್

    ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್- ಎಸ್ಕೇಪ್ ಆಗಲು ಯತ್ನಿಸ್ತಿದ್ದಂತೆ ಶೂಟೌಟ್

    ಲಕ್ನೋ: ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

    ವಿಕಾಸ್ ದುಬೆಯನ್ನು ಬಂಧಿಸಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ವಾಪಸ್ ಕರೆತರಲಾಗುತ್ತಿತ್ತು. ಆದರೆ ಇಂದು ಮುಂಜಾನೆ ಕಾನ್ಪುರದ ಬಾರ್ರಾ ಪೊಲೀಸ್ ವಲಯಕ್ಕೆ ತಲುಪುತ್ತಿದ್ದಂತೆ ವಿಕಾಸ್ ದುಬೆ ಕುಳಿತಿದ್ದ ವಾಹನವು ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ.

    ಆಗ ಪೊಲೀಸರು ವಿಕಾಸ್‍ನನ್ನು ವಾಹನದಿಂದ ಹೊರಗೆ ಎಳೆದುಕೊಂಡಿದ್ದಾರೆ. ಈ ವೇಳೆ ಆರೋಪಿ ಗಾಯಗೊಂಡ ಪೊಲೀಸರೊಬ್ಬರಿಂದ ಬಂದೂಕನ್ನು ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆಗ ಪೊಲೀಸರು ಕೂಡ ಗುಂಡಿನ ದಾಳಿ ಮಾಡಿದ್ದಾರೆ. ಈ ಶೂಟೌಟ್‍ನಲ್ಲಿ ಪೊಲೀಸರು ಆರೋಪಿ ವಿಕಾಸ್ ದುಬೆಯನ್ನ ಎನ್‍ಕೌಂಟರ್ ಮಾಡಿದ್ದಾರೆ. ಪರಿಣಾಮ ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

    ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಗುರುವಾರ ಎನ್‍ಕೌಂಟರ್ ಮಾಡಿದ್ದಾರೆ. ನಿನ್ನೆಯಷ್ಟೇ ಕಾನ್ಪುರ ಎಕ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನ್‍ನಲ್ಲಿ ಬಂಧಿಸಲಾಗಿತ್ತು. ಗುರುವಾರ ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದರು.

    ಅಲ್ಲದೇ ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗ ಮಧ್ಯೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ ಪರಿಣಾಮ ಆರೋಪಿಗಳು ಸಾವನ್ನಪ್ಪಿದ್ದಾರೆ ಎಂದು ಕಾನ್ಪೂರ ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದರು.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

  • ಮಹಾಕಾಲನೇ ಸಾವಿನಿಂದ ಆತನನ್ನು ರಕ್ಷಿಸಿದ್ದಾನೆ: ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    ಮಹಾಕಾಲನೇ ಸಾವಿನಿಂದ ಆತನನ್ನು ರಕ್ಷಿಸಿದ್ದಾನೆ: ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    ಲಕ್ನೋ: ಆ ಮಹಾಕಾಲನೇ ಆತನನ್ನು ಸಾವಿನಿಂದ ರಕ್ಷಿಸಿದ್ದಾನೆ ಎಂದು ಇಂದು ಬೆಳಗ್ಗೆ ಮಧ್ಯ ಪ್ರದೇಶದಲ್ಲಿ ಅರೆಸ್ಟ್ ಆದ ರೌಡಿ ಶೀಟರ್ ವಿಕಾಸ್ ದುಬೆ ತಾಯಿ ಸರ್ಲಾ ದೇವಿ ಅವರು ಹೇಳಿದ್ದಾರೆ.

    ಜುಲೈ 2ರ ಮಧ್ಯರಾತ್ರಿ ತನ್ನನ್ನು ಅರೆಸ್ಟ್ ಮಾಡಲು ಬಂದ ಪೊಲೀಸರನ್ನು ವಿಕಾಸ್ ದುಬೆ ಮತ್ತು ಅವನ ಸಹಚರರು ಗುಂಡಿದಾಳಿ ಮಾಡಿ ಅಮಾನುಷವಾಗಿ ಕೊಂದು ಹಾಕಿದ್ದರು. ಈ ಘಟನೆಯಲ್ಲಿ ಎಂಟು ಮಂದಿ ಅಮಾಯಾಕ ಪೊಲೀಸರು ಸಾವನ್ನಪ್ಪಿದ್ದರು. ಇದಾದ ಬಳಿಕ ಎಸ್ಕೇಪ್ ಆಗಿದ್ದ ವಿಕಾಸ್ ದುಬೆ ಇಂದು ಮಧ್ಯ ಪ್ರದೇಶದ ಉಜ್ಜೈನಿಯ ಮಹಾಕಾಲ ದೇವಸ್ಥಾನದಲ್ಲಿ ಸೆರೆಸಿಕ್ಕಿದ್ದಾನೆ.

    ಈಗ ಈ ವಿಚಾರದ ಬಗ್ಗೆ ಮಾತನಾಡಿರುವ ವಿಕಾಸ್ ದುಬೆ ತಾಯಿ ಸರ್ಲಾ ದೇವಿ, ನಾನು ಆತ ಅರೆಸ್ಟ್ ಆದ ಎಂದು ಟಿವಿಯಲ್ಲಿ ನೋಡಿ ತಿಳಿದುಕೊಂಡೆ. ಆ ಮಹಾಕಾಲನೇ ಸಾವಿನಿಂದ ಆತನನ್ನು ರಕ್ಷಿಸಿದ್ದಾನೆ. ಆತ ಪ್ರತಿ ವರ್ಷ ಮಹಾಕಾಲನ ದರ್ಶನಕ್ಕೆ ಹೋಗುತ್ತಿದ್ದ. ಜೊತೆಗೆ ಆತ ಬಿಜೆಪಿ ಪಕ್ಷದಲ್ಲಿ ಇರಲಿಲ್ಲ ಎಸ್‍ಪಿ ಪಕ್ಷದಲ್ಲಿದ್ದ. ಈಗ ಸೆರೆ ಸಿಕ್ಕಿರುವ ವಿಕಾಸ್ ದುಬೆ ಮೇಲೆ ಸರ್ಕಾರ ಕಾನೂನಿನ ಅಡಿಯಲ್ಲಿ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದು ಹೇಳಿದ್ದಾರೆ.

    ಈ ಹಿಂದೆ ಮಗನ ಕ್ರೂರ ಕೃತ್ಯದ ಬಗ್ಗೆ ಮಾತನಾಡಿದ್ದ ಸರ್ಲಾ ದೇವಿ, ಆತ ಅಮಾಯಾಕ ಪೊಲೀಸರನ್ನು ಕೊಲೆ ಮಾಡಿದ್ದು ತಪ್ಪು. ಆತನೇ ಬಂದು ಪೊಲೀಸರಿಗೆ ಶರಣಾಗಬೇಕು. ಇಲ್ಲವಾದಲ್ಲಿ ಪೊಲೀಸರು ಅವನನ್ನು ಎನ್‍ಕೌಂಟರ್ ಮಾಡಲಿ. ನಾನು ಆತನ ಜೊತೆ ಮಾತನಾಡಿ ನಾಲ್ಕು ತಿಂಗಳಾಯ್ತು. ನಮ್ಮ ಕುಟುಂಬವೇ ತಲೆ ತಗ್ಗಿಸುವಂತ ಕೆಲಸ ಮಾಡಿದ್ದಾನೆ. ಆತ ರಾಜಕೀಯಕ್ಕೆ ಬಂದ ನಂತರ ಈ ರೀತಿಯ ಕೆಟ್ಟ ಬುದ್ಧಿ ಕಲಿತುಕೊಂಡ ಎಂದು ಹೇಳಿದ್ದರು.

    ಪೊಲೀಸರನ್ನು ಕೊಂದು ತಲೆ ಮರೆಸಿಕೊಂಡಿದ್ದ ವಿಕಾಸ್ ದುಬೆಯನ್ನು ಒಂದು ವಾರದ ನಂತರ ಇಂದು ಬೆಳಗ್ಗೆ ಮಧ್ಯ ಪ್ರದೇಶದ ಉಜ್ಜೈನ್ ನಲ್ಲಿರುವ ಮಹಾಕಾಲ ದೇವಸ್ಥಾನದಲ್ಲಿ ಬಂಧಿಸಲಾಗಿದೆ. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುಬೆ ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

  • ಗ್ಯಾಂಗ್‍ಸ್ಟಾರ್ ದುಬೆ ಅರೆಸ್ಟ್ – ಸುಳಿವು ನೀಡಿದ ಸೆಕ್ಯೂರಿಟಿ ಗಾರ್ಡ್ ಹೇಳಿದ್ದೇನು?

    ಗ್ಯಾಂಗ್‍ಸ್ಟಾರ್ ದುಬೆ ಅರೆಸ್ಟ್ – ಸುಳಿವು ನೀಡಿದ ಸೆಕ್ಯೂರಿಟಿ ಗಾರ್ಡ್ ಹೇಳಿದ್ದೇನು?

    ಭೋಪಾಲ್: ಉತ್ತರ ಪ್ರದೇಶದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ರೌಡಿ ಶೀಟರ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮಧ್ಯಪ್ರದೇಶದ ದೇವಾಲಯದಲ್ಲಿ ಬಂಧಿಸಿದ್ದಾರೆ.

    ನಕಲಿ ಐಡಿ ಕಾರ್ಡ್ ಬಳಸಿ ಮಧ್ಯ ಪ್ರದೇಶಕ್ಕೆ ಎಂಟ್ರಿಕೊಟ್ಟಿದ್ದ ದುಬೆ, ಅಲ್ಲಿನ ಉಜ್ಜೈನ್‍ನಲ್ಲಿರುವ ಮಹಾಕಾಳಿ ದೇವಸ್ಥಾನಕ್ಕೆ ಬಂದಿದ್ದ. ಈ ವೇಳೆ ಆತನನ್ನು ಗುರುತಿಸಿದ ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ಲಖನ್ ಯಾದವ್, ಪೊಲೀಸರಿಗೆ ವಿಷಯ ತಿಳಿಸಿದ್ದರು. ಈ ಮೂಲಕ ಕುಖ್ಯಾತ ರೌಡಿಯನ್ನು ಬಂಧಿಸುವಲ್ಲಿ ನೆರವಾಗಿದ್ದರು.

    ಈ ಬಗ್ಗೆ ಮಾತನಾಡಿರುವ ಲಖನ್ ಯಾದವ್ ಅವರು, ನಾನು ಈ ಮೊದಲೇ ಫೋಟೋದಲ್ಲಿ ವಿಕಾಸ್ ದುಬೆಯನ್ನು ನೋಡಿದ್ದೆ. ದುಬೆ ಇಂದು ಬೆಳಗ್ಗೆ 7 ಗಂಟೆಗೆ ದೇವಸ್ಥಾನಕ್ಕೆ ಬಂದ. ಜೊತೆಗೆ ಅವನು ಹಿಂದಿನ ಬಾಗಿಲಿನಿಂದ ದೇವಸ್ಥಾನದ ಒಳ ಬರಲು ಪ್ರಯತ್ನಿಸುತ್ತಿದ್ದ. ವಿಕಾಸ್ ದುಬೆ ನಡವಳಿಕೆ ನೋಡಿ ನನಗೆ ಅನುಮಾನ ಬಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಆತ ವಿಐಪಿ ಪಾಸ್ ಪಡೆದಿದ್ದರೂ ದೇವಸ್ಥಾನದ ಒಳಗೆ ಬರಲು ಹಿಂದೆ ಮುಂದೆ ನೋಡುತ್ತಿದ್ದ ಎಂದು ಹೇಳಿದ್ದಾರೆ.

    ಈ ವೇಳೆ ನಾನು ದೇವಸ್ಥಾನದಲ್ಲಿ ಆತನನ್ನು ತಡೆದು ವಿಚಾರಣೆ ಮಾಡಿದೆ. ಆತ ಏನೂ ಮಾತನಾಡಲಿಲ್ಲ. ನಂತರ ಸ್ಥಳಕ್ಕೆ ಬಂದು ಪೊಲೀಸರು ಆತನನ್ನು ಕರೆದುಕೊಂಡು ಹೋದರು ಎಂದು ಯಾದವ್ ಅವರು ತಿಳಿಸಿದ್ದಾರೆ. ಮಧ್ಯ ಪ್ರದೇಶದ ಪೊಲೀಸರು ಆತನನ್ನು ಬಂಧಿಸಿದ್ದು, ಉತ್ತರ ಪ್ರದೇಶದ ಪೊಲೀಸರಿಗೆ ಒಪ್ಪಿಸಲು ಸಿದ್ಧವಿದ್ದಾರೆ. ಈ ನಡುವೆ ಉತ್ತರ ಪ್ರದೇಶದಲ್ಲಿ ಇಬ್ಬರು ದುಬೆ ಸಹಚರರನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

    ಇಂದು ಬೆಳಗ್ಗೆ ಮಧ್ಯಪ್ರದೇಶದ ಪೊಲೀಸರು ವಿಕಾಸ್ ದುಬೆಯನ್ನು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ದೃಢಪಡಿಸಿದ್ದರು. ಉತ್ತರ ಪ್ರದೇಶದಲ್ಲಿ ಆತ ಘಟನೆಯ ನಂತರ ನಮ್ಮ ರಾಜ್ಯ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದ ಕಾರಣ ಇಂದು ದುಬೆಯನ್ನು ಬಂಧಿಸಲು ಸಾಧ್ಯವಾಯ್ತು ಎಂದು ಮಿಶ್ರಾ ತಿಳಿಸಿದ್ದಾರೆ. ಇದರ ಜೊತೆಗೆ ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಉಜ್ಜೈನಿ ಪೊಲೀಸರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಎಂಟು ಮಂದಿ ಪೊಲೀಸರು ಸಾವನ್ನಪ್ಪಿದ್ದರು.

  • ಕಾನ್ಪುರ್ ಎನ್‍ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್‍ಕೌಂಟರ್

    ಕಾನ್ಪುರ್ ಎನ್‍ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್‍ಕೌಂಟರ್

    ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

    ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ ಪರಿಣಾಮ ಆರೋಪಿಗಳು ಸಾವನ್ನಪ್ಪಿದ್ದಾರೆ ಎಂದು ಕಾನ್ಪೂರ ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

    ಘಟನೆಯಲ್ಲಿ ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಆರೋಪಿಗಳನ್ನು ರಿಮಾಂಡ್ ಹೋಮ್‍ಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಉಳಿದಂತೆ ಬುಧವಾರ ನಡೆದಿದ್ದ ಎನ್‍ಕೌಂಟರ್ ನಲ್ಲಿ ದುಬೆ ಪ್ರಮುಖ ಸಹಚರ ಅಮರ್ ದುಬೆ ಅಲಿಯಾಸ್ ಶಾಡೋ ಸಾವನ್ನಪ್ಪಿದ್ದ. ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಅಮರ್ ದುಬೆ ಇದ್ದ ಮಾಹಿತಿ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿ ಆಧಾರಿಸಿ ಆತನನ್ನು ಬಂಧಿಸಲು ತೆರಳಿದ್ದ ವೇಳೆ ಘಟನೆ ನಡೆದಿತ್ತು. ಇತ್ತ ವಿಕಾಸ್  ಮಧ್ಯ ಪ್ರದೇಶದ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದರು.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು.ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.

  • ಕಾನ್ಪುರ್ ಎನ್‍ಕೌಂಟರ್-ಪ್ರಮುಖ ಆರೋಪಿ ವಿಕಾಸ್ ದುಬೆಯ ಬಂಧನ

    ಕಾನ್ಪುರ್ ಎನ್‍ಕೌಂಟರ್-ಪ್ರಮುಖ ಆರೋಪಿ ವಿಕಾಸ್ ದುಬೆಯ ಬಂಧನ

    ಲಕ್ನೋ: ಕಾನ್ಪುರ ಎಕ್‍ಕೌಂಟರ್ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜೈನ್ ನಲ್ಲಿ ಬಂಧಿಸಲಾಗಿದೆ.

    ಇಂದು ಬೆಳಗ್ಗೆ ವಿಕಾಸ್ ದುಬೆ ಉಜ್ಜೈನ್ ನಲ್ಲಿರುವ ಮಹಾಕಾಲ್ ದೇವಸ್ಥಾನಕ್ಕೆ ಹೋಗಿದ್ದನು. ದೇವಸ್ಥಾನದ ಭದ್ರತಾ ಸಿಬ್ಬಂದಿ ದುಬೆಯನ್ನು ಗುರುತಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಸ್ಥಾನದಿಂದ ಹೊರ ಬರೋಷ್ಟರಲ್ಲಿ ಬಂದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು.ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಡಿವೈಎಸ್ಪಿ ದೇವೇಂದ್ರ ಮಿಶ್ರಾ, ಮೂವರು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ 4 ಪೊಲೀಸರು ಮೃತಪಟ್ಟಿದ್ದರು. ಇದೇ ಸಂದರ್ಭದಲ್ಲಿ ದುಬೆ ಬೆಂಬಲಿಗರು ಪೊಲೀಸರ ಬಳಿಯಿದ್ದ ಎಕೆ-47 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದರು.