Tag: Vikas Dubey

  • ಮೂವರು ಪೊಲೀಸರು ಅಮಾನತು – ಹಂತಕ ದುಬೆ ಬಗ್ಗೆ ಸುಳಿವು ಕೊಟ್ಟರೆ 2.5 ಲಕ್ಷ ಬಹುಮಾನ

    ಮೂವರು ಪೊಲೀಸರು ಅಮಾನತು – ಹಂತಕ ದುಬೆ ಬಗ್ಗೆ ಸುಳಿವು ಕೊಟ್ಟರೆ 2.5 ಲಕ್ಷ ಬಹುಮಾನ

    ಲಕ್ನೋ: ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಬ್ ಇನ್ಸ್‌ಪೆಕ್ಟರ್‌ ಮತ್ತು ಕಾನ್ಸ್‌ಟೇಬಲ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಪೊಲೀಸರ ನರಹತ್ಯೆಗೈದ ಹಂತಕನ ಮನೆ ಉಡೀಸ್- ಐಷಾರಾಮಿ ಕಾರುಗಳು ಜಖಂ

    ಸಬ್ ಇನ್ಸ್‌ಪೆಕ್ಟರ್‌ಗಳಾದ ಕುನ್ವರ್ ಪಾಲ್ ಮತ್ತು ಕೃಷ್ಣ ಕುಮಾರ್ ಶರ್ಮಾ ಹಾಗೂ ಕಾನ್ಸ್‌ಟೇಬಲ್ ರಾಜೀವ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಅವರ ವಿರುದ್ಧ ಪ್ರಾಥಮಿಕ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಇವರೆಲ್ಲರು ಚೌಬೆಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಕಾನ್ಪುರ ಎಸ್‍ಎಸ್‍ಪಿ ದಿನೇಶ್ ಕುಮಾರ್ ಪಿ ಹೇಳಿದ್ದಾರೆ.

    ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಸಾವಿಗೆ ಸಂಬಂಧಿಸಿದಂತೆ ಮೂವರನ್ನು ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ. ಪೊಲೀಸರ ವಿರುದ್ಧ ಎಫ್‍ಐಆರ್ ಕೂಡ ದಾಖಲಿಸಲಾಗಿದೆ. ವಿಚಾರಣೆಯ ವೇಳೆ ಈ ಹತ್ಯೆಯಲ್ಲಿ ಮೂವರು ಪೊಲೀಸರು ಭಾಗಿಯಾಗಿರುವುದು ಸಾಬೀತಾದರೆ ಅವರು ಮುಂದಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಸ್‍ಎಸ್‍ಪಿ ತಿಳಿಸಿದೆ.

    ಇನ್ನೂ ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟರೆ 2.50 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಉತ್ತರ ಪ್ರದೇಶ ಪೊಲೀಸರು ಭಾನುವಾರ ವಿಕಾಸ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು. ಆದರೆ ಸೋಮವಾರ ಬಹುಮಾನವನ್ನು 2.5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸದ್ಯಕ್ಕೆ ಪೊಲೀಸರು ವಿಕಾಸ್ ದುಬೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ
    ವಿಕಾಸ್ ದುಬೆಗೆ ಪೊಲೀಸರು ಅರೆಸ್ಟ್ ಮಾಡಲು ಬರುತ್ತಾರೆ ಎಂದು ಮೊದಲೇ ಗೊತ್ತಿತ್ತು. ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ ನೀಡುವವರು ಇದ್ದು, ಘಟನೆ ನಡೆದ ದಿನ ಚೌಬೆಪುರ ಪೊಲೀಸ್ ಠಾಣೆಯಿಂದ ಓರ್ವ ಪೊಲೀಸ್ ಅಧಿಕಾರಿ ಕರೆ ಮಾಡಿ ನಿನ್ನನ್ನು ಅರೆಸ್ಟ್ ಮಾಡಲು ಪೊಲೀಸರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು ಅಂತ ಬಂಧಿತ ದಯಾ ಶಂಕರ್ ತನಿಖೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದನು.

    ಪೊಲೀಸರು ನನ್ನನ್ನು ಅರೆಸ್ಟ್ ಮಾಡಿದರೆ ನಾನೂ ಜೈಲು ಪಾಲಾಗುತ್ತೇನೆ ಎಂದು ವಿಕಾಸ್ ದುಬೆಗೆ ಗೊತ್ತಿತ್ತು. ಆದ್ದರಿಂದ ಆತ ವಿಷಯ ತಿಳಿಯುತ್ತಿದ್ದಂತೆ ತನ್ನ ಗ್ಯಾಂಗಿನ ಹುಡುಗರನ್ನು ಕರೆಸಿಕೊಂಡು ತಮ್ಮ ಗ್ರಾಮದಲ್ಲಿ ಉಳಿಸಿಕೊಂಡಿದ್ದ. ಪೊಲೀಸರಿಂದ ಮೊದಲೇ ಮಾಹಿತಿ ಸಿಕ್ಕ ಕಾರಣ ಪೊಲೀಸರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದನು. ಅದರಂತೆ ಗ್ರಾಮಕ್ಕೆ ಬಂದ ಪೊಲಿಸರನ್ನು ರಸ್ತೆಯಲ್ಲೇ ಅಡ್ಡಗಟ್ಟಿ ಕೊಂದು ಹಾಕಿದ್ದಾನೆ ಎಂದು ದಯಾ ತಿಳಿಸಿದ್ದನು.

  • ಪೊಲೀಸರ ನರಮೇಧಕ್ಕೆ ಸಿಗ್ನಲ್ ಹೋಗಿದ್ದೆ ಠಾಣೆಯಿಂದ – ಸ್ಫೋಟಕ ಸತ್ಯ ಬಯಲು

    ಪೊಲೀಸರ ನರಮೇಧಕ್ಕೆ ಸಿಗ್ನಲ್ ಹೋಗಿದ್ದೆ ಠಾಣೆಯಿಂದ – ಸ್ಫೋಟಕ ಸತ್ಯ ಬಯಲು

    – ವಿಕಾಸ್ ದುಬೆ ಸಹಚರನ ಬಂಧನ

    ಲಕ್ನೋ: ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿಕೊಂದ ರೌಡಿ ಶೀಟರ್ ವಿಕಾಸ್ ದುಬೆ ಸಹಚರನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನ್ನು ವಿಕಾಸ್ ದುಬೆ ಜೊತೆ ಬಹಳ ವರ್ಷದಿಂದ ಕೆಲಸ ಮಾಡಿದ್ದ ದಯಾ ಶಂಕರ್ ಅಗ್ನಿಹೋತ್ರಿ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ಭಾನುವಾರ ಮುಂಜಾನೆ ಕಲ್ಯಾಣಪುರದಲ್ಲಿ ಅಡ್ಡಹಾಕಿದ್ದಾರೆ. ಆಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ದಯಾ ಶಂಕರ್ ಕಾಲಿಗೆ ಗುಂಡಿಕ್ಕಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಈ ಬಂಧಿತ ದಯಾ ಶಂಕರ್ ತನಿಖೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದು, ವಿಕಾಸ್ ದುಬೆಗೆ ಪೊಲೀಸರು ಅರೆಸ್ಟ್ ಮಾಡಲು ಬರುತ್ತಾರೆ ಎಂದು ಮೊದಲೇ ಗೊತ್ತಿತ್ತು. ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ ನೀಡುವವರು ಇದ್ದು, ಘಟನೆ ನಡೆದ ದಿನ ಚೌಬೆಪುರ ಪೊಲೀಸ್ ಠಾಣೆಯಿಂದ ಓರ್ವ ಪೊಲೀಸ್ ಅಧಿಕಾರಿ ಕರೆ ಮಾಡಿ ನಿನ್ನನ್ನು ಅರೆಸ್ಟ್ ಮಾಡಲು ಪೊಲೀಸರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು ಎಂದು ಹೇಳಿದ್ದಾನೆ.

    ಪೊಲೀಸರು ನನ್ನನ್ನು ಅರೆಸ್ಟ್ ಮಾಡಿದರೆ ನಾನೂ ಜೈಲು ಪಾಲಾಗುತ್ತೇನೆ ಎಂದು ವಿಕಾಸ್ ದುಬೆಗೆ ಗೊತ್ತಿತ್ತು. ಆದ್ದರಿಂದ ಆತ ವಿಷಯ ತಿಳಿಯುತ್ತಿದ್ದಂತೆ ತನ್ನ ಗ್ಯಾಂಗಿನ ಹುಡುಗರನ್ನು ಕರೆಸಿಕೊಂಡು ತಮ್ಮ ಗ್ರಾಮದಲ್ಲಿ ಉಳಿಸಿಕೊಂಡಿದ್ದ. ಪೊಲೀಸರಿಂದ ಮೊದಲೇ ಮಾಹಿತಿ ಸಿಕ್ಕ ಕಾರಣ ಪೊಲೀಸರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದರು. ಅದರಂತೆ ಗ್ರಾಮಕ್ಕೆ ಬಂದ ಪೊಲಿಸರನ್ನು ರಸ್ತೆಯಲ್ಲೇ ಅಡ್ಡಗಟ್ಟಿ ಕೊಂದು ಹಾಕಿದ್ದಾರೆ ಎಂದು ದಯಾ ತಿಳಿಸಿದ್ದಾನೆ.

    ಈ ನಡುವೆ ಉತ್ತರ ಪ್ರದೇಶದಲ್ಲಿ ಇರುವ ವಿಕಾಸ್ ದುಬೆ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತಿದೆ. ಡಿಕ್ರು ಗ್ರಾಮದಲ್ಲಿ ಇದ್ದ ಆತನ ಮನೆಯನ್ನು ಶನಿವಾರ ಜಿಲ್ಲಾಡಳಿತ ಜೆಸಿಬಿ ತೆಗೆದುಕೊಂಡು ಹೋಗಿ ನೆಲಸಮ ಮಾಡಿ ಬಂದಿತ್ತು. ಜೊತೆಗೆ ಮನೆಯಲ್ಲಿ ಇದ್ದ ಐಷಾರಾಮಿ ಕಾರುಗಳನ್ನು ಕೂಡ ಜಖಂ ಮಾಡಲಾಗಿತ್ತು. ಈಗ ಆತನ ಹೆಸರನಲ್ಲಿದ್ದ ಕಾರ್ಖಾನೆಗಳನ್ನು ಕೂಡ ಜಿಲ್ಲಾಡಳಿತ ಕೆಡವಿ ಹಾಕುತ್ತಿದೆ.

    ಎಂಟು ಜನ ಪೊಲೀಸರನ್ನು ಕೊಂದ ವಿಕಾಸ್ ದುಬೆಯನ್ನು ಎನ್‍ಕೌಂಟರ್ ಮಾಡಬೇಕು ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿವೆ. ಈ ವಿಚಾರವಾಗಿ ಮಾತನಾಡಿದ್ದ ದುಬೆ ತಾಯಿ ಸರ್ಲಾ ದೇವಿ, ಆತ ಅಮಾಯಕ ಪೊಲೀಸರನ್ನು ಕೊಂದು ತಪ್ಪು ಮಾಡಿದ್ದಾನೆ. ಆತ ಪೊಲೀಸರಿಗೆ ಶರಣಾಗಬೇಕು. ಇಲ್ಲ ಆತನನ್ನು ಪೊಲೀಸರೇ ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದರು. ಆದರೆ ವಿಕಾಸ್ ದುಬೆ ತಪ್ಪಿಸಿಕೊಂಡಿದ್ದಾನೆ.

    ಕೊಲೆ ಪ್ರಕರಣದ ಆರೋಪದ ಮೇಲೆ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಎಂಟು ಪೊಲೀಸರನ್ನು ಕಳೆದ ಗುರುವಾರ ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಗುರುವಾರ ರಾತ್ರಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.

  • ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ- ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ- ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ

    – ಆತ ಪಾಪಿ, ಎಂಎಲ್‍ಎ ಆಗಲು ಸಚಿವರನ್ನೇ ಕೊಂದ
    – ರಾಜಕೀಯಕ್ಕೆ ಬಂದು ನನ್ನ ಮಗ ಕ್ರಿಮಿನಲ್ ಆದ

    ಲಕ್ನೋ: ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ ಎಂದು ಉತ್ತರ ಪ್ರದೇಶದ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ತಾಯಿ ಸರ್ಲಾ ದೇವಿ ಅವರು ಹೇಳಿದ್ದಾರೆ.

    ಕೊಲೆ ಪ್ರಕರಣದ ಆರೋಪಿಯಾಗಿದ್ದ ಹಳೇ ರೌಡಿ ಶೀಟರ್ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಪೊಲೀಸರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಗುರುವಾರ ರಾತ್ರಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.

    ಈ ಹತ್ಯೆಯ ನಂತರ ರೌಡಿ ಶಿಟ್ಟರ್ ವಿಕಾಸ್ ದುಬೆ ಹೆಸರು ಮುನ್ನೆಲೆಗೆ ಬಂದಿತ್ತು. ಈಗ ಮಗನ ಪೈಶಾಚಿಕ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಿ ಪಡಿಸಿರುವ ಆತನ ತಾಯಿ, ಆತ ಪೊಲೀಸರಿಗೆ ಶರಣಾಗಬೇಕು. ಅದನ್ನು ಬಿಟ್ಟು ಅವನು ಹೀಗೆ ಮೊಂಡುತನ ತೋರಿಸಿದರೆ. ಅವನನ್ನು ಪೊಲೀಸರು ಎನ್‍ಕೌಂಟರ್ ಮಾಡಬೇಕು. ಅವನು ಮಾಡಿದ್ದು ತಪ್ಪು, ಆತನನ್ನು ಹಿಡಿಯಲು ಆಗಲಿಲ್ಲ ಎಂದರೆ ಆತನನ್ನು ಗುಂಡಿಕ್ಕಿ ಕೊಂದುಬಿಡಿ ಎಂದು ಹೇಳಿದ್ದಾರೆ.

    ಕಾನ್ಪುರದಲ್ಲಿ ನಡೆದ ಕೃತ್ಯದಲ್ಲಿ ಡಿವೈಎಸ್ಪಿಯನ್ನು ಕೂಡ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ವಿಕಾಸ್ ದುಬೆಯೇ ಪ್ರಮುಖ ಆರೋಪಿಯಾಗಿದ್ದ. ಅಮಾಯಕ ಪೊಲೀಸರನ್ನು ಕೊಂದು ನನ್ನ ಮಗ ಬಹಳ ತಪ್ಪು ಮಾಡಿದ್ದಾನೆ. ಅವನು ಹೊರಗೆ ಬಂದು ಪೊಲೀಸರಿಗೆ ಶರಣಾಗಬೇಕು. ರಾಜಕೀಯದ ಸಂಪರ್ಕಕ್ಕೆ ಬಂದ ನಂತರ ನನ್ನ ಮಗ ಈ ರೀತಿ ಕ್ರಿಮಿನಲ್ ಆದ. ನನ್ನ ಕುಟುಂಬದ ಮರ್ಯಾದೆ ತೆಗೆದ. ಆತನಿಗೆ ಶಿಕ್ಷೆ ಆಗಲೇ ಬೇಕು ಎಂದು ಸರ್ಲಾ ದೇವಿ ಕಣ್ಣೀರು ಹಾಕಿದ್ದಾರೆ.

    ವಿಕಾಸ್ ಎಂಎಲ್‍ಎ ಚುನಾವಣೆಗೆ ನಿಂತು ಗೆಲ್ಲಬೇಕು ಎಂದುಕೊಂಡಿದ್ದ. ಅದಕ್ಕಾಗಿ ಆತ ಬಿಜೆಪಿ ಸಚಿವ ಸಂತೋಷ್ ಶುಕ್ಲಾ ಅವರನ್ನು ಕೊಲೆ ಕೂಡ ಮಾಡಿದ್ದ. ನಾನು ನನ್ನ ಹಿರಿಯ ಮಗನ ಜೊತೆ ಲಕ್ನೋದಲ್ಲಿ ವಾಸವಿದ್ದೇನೆ. ಕಳೆದ ನಾಲ್ಕು ತಿಂಗಳಿಂದ ವಿಕಾಸ್ ದುಬೆಯನ್ನು ಮಾತನಾಡಿಸಿಲ್ಲ. ಅವನಿಂದ ನಮಗೆ ಬಹಳ ಸಮಸ್ಯೆಯಾಗಿದೆ. ಆತನಿಂದ ಹುಟ್ಟಿದ ಊರು ಬಿಟ್ಟು ಬಂದು ಲಕ್ನೋದಲ್ಲಿ ಇದ್ದೇವೆ ಎಂದು ಸರ್ಲಾ ದೇವಿ ನೋವವನ್ನು ತೋಡಿಕೊಂಡಿದ್ದಾರೆ.

    2001ರಲ್ಲಿ ವಿಕಾಸ್ ದುಬೆ ಅಂದಿನ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಿನಿಸ್ಟರ್ ಆಗಿದ್ದ ಸಂತೋಷ್ ಶುಕ್ಲಾ ಅವರನ್ನು ಪೊಲೀಸ್ ಠಾಣೆಯಲ್ಲೇ ಗುಂಡಿಕ್ಕಿ ಕೊಲೆ ಮಾಡಿದ್ದ. ನಂತರ ಗ್ಯಾಂಗ್‍ಸ್ಟಾರ್ ಆಗಿ ಬೆಳೆದ ವಿಕಾಸ್ ದುಬೆ, ಹಲವಾರು ಕೊಲೆ ಮಾಡಿ ಜೈಲುವಾಸ ಅನುಭವಿಸಿದ್ದ. ನಂತರ ಜೈಲಿನಲ್ಲಿ ಇದ್ದುಕೊಂಡೇ ನಗರ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದಿದ್ದ. ಈತನ ಮೇಲೆ ಸುಮಾರು 60 ಕ್ರಿಮಿನಲ್ ಮೊಕದ್ದಮೆಗಳು ಇವೆ. ಇದನ್ನು ಓದಿ:ಪೊಲೀಸರನ್ನು ನರಹತ್ಯೆಗೈದ ಡೆಡ್ಲಿ ರೌಡಿ ಶೀಟರ್ ವಿಕಾಸ್ ದುಬೆ ಯಾರು?

    ಸದ್ಯ ವಿಕಾಸ್ ದುಬೆಗಾಗಿ ಇಡೀ ಉತ್ತರ ಪ್ರದೇಶದ ಪೊಲೀಸರು ಹುಡುಕುತ್ತಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರು ಕೂಡ ಪೊಲೀಸರನ್ನು ಕೊಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇತ್ತ ವಿಕಾಸ್ ದುಬೆ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಕಾನ್ಪುರದ ಪೊಲೀಸರು ಘೋಷಣೆ ಮಾಡಿದ್ದಾರೆ.

  • ಪೊಲೀಸರನ್ನು ನರಹತ್ಯೆಗೈದ ಡೆಡ್ಲಿ ರೌಡಿ ಶೀಟರ್ ವಿಕಾಸ್ ದುಬೆ ಯಾರು?

    ಪೊಲೀಸರನ್ನು ನರಹತ್ಯೆಗೈದ ಡೆಡ್ಲಿ ರೌಡಿ ಶೀಟರ್ ವಿಕಾಸ್ ದುಬೆ ಯಾರು?

    – ಜೈಲಿನಲ್ಲಿದ್ದೇ ಪಂಚಾಯ್ತಿ ಚುನಾವಣೆ ಗೆದ್ದಿದ್ದ ರೌಡಿ

    ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆದ ಪೊಲೀಸರ ಹತ್ಯೆ ಇಂದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಎಂಟು ಜನ ಪೊಲೀಸರನ್ನು ನಿರ್ದಾಕ್ಷಣ್ಯವಾಗಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ರೌಡಿ ಶೀಟರ್ ಅನ್ನು ಅರೆಸ್ಟ್ ಮಾಡಲು ಹೋಗಿ ಎಂಟು ಮಂದಿ ಪೊಲೀಸರು ಜೀವ ಬಿಟ್ಟಿದ್ದರು.

    ಹೌದು ಕೊಲೆ ಪ್ರಕರಣದ ಆರೋಪಿಯಾಗಿದ್ದ ಹಳೇ ರೌಡಿ ಶೀಟರ್ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಪೊಲೀಸರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.

    ಈ ಎಲ್ಲದರ ಮಧ್ಯೆ ಈಗ ಸಾಮಾಜಿಕ ಜಾಲತಾಣದಲ್ಲಿ ವಿಕಾಸ್ ದುಬೆ ಯಾರು ಎಂಬ ಚರ್ಚೆ ನಡೆಯುತ್ತಿದೆ. ವಿಕಾಸ್ ದುಬೆ ಓರ್ವ ಉತ್ತರ ಪ್ರದೇಶದ ಹಳೇ ರೌಡಿಶೀಟರ್, ಈತನ ಮೇಲೆ 60 ಪ್ರಕರಣಗಳಿವೆ. ಜೊತೆಗೆ 2001ರಲ್ಲಿ ಬಿಜಿಪಿ ಪಕ್ಷದ ಸಚಿವರಾಗಿದ್ದ ಸಂತೋಷ್ ಶುಕ್ಲಾ ಅವರನ್ನು ಪೊಲೀಸ್ ಠಾಣೆಯಲ್ಲೇ ಗುಂಡಿಕ್ಕಿ ಕೊಂದು ಕೊಲೆಗಾರನಾಗಿ ಗುರುತಿಸಿಕೊಂಡಿದ್ದ. ನಂತರ ರಾಜಕೀಯವಾಗಿ ಸಬಲವಾಗಿ ಬೆಳೆದು ಇಂದು ಸಮಾಜ ದುಷ್ಟ ಶಕ್ತಿಯಾಗಿ ಪರಿವರ್ತನೆಗೊಂಡಿದ್ದಾನೆ.

    ಈತ 2000ರಲ್ಲಿ ಕಾನ್ಪುರದ ಶಿವ್ಲಿ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ತಾರಚಂದ್ ಇಂಟರ್ ಕಾಲೇಜಿನಲ್ಲಿ ಸಹಾಯಕ ವ್ಯವಸ್ಥಾಪಕ ಸಿದ್ಧೇಶ್ವರ ಪಾಂಡೆ ಅವರನ್ನು ಹತ್ಯೆ ಮಾಡಿದ ಆರೋಪ ವಿಕಾಸ್ ದುಬೆ ಮೇಲೆ ಇತ್ತು. ಈ ಆರೋಪದ ಮೇಲೆ ಕಾನ್ಪುರದ ಜೈಲಿನಲ್ಲಿದ್ದ ವಿಕಾಸ್ ದುಬೆ ಅದೇ ವರ್ಷ ರಂಬಾಬು ಯಾದವ್ ಅವರ ಕೊಲೆ ಪ್ರಕರಣದಲ್ಲಿ ಸಂಚು ರೂಪಿಸಿ ಮತ್ತೆ ಅ ಪ್ರಕರಣದಲ್ಲೂ ಸಿಕ್ಕಿಬಿದ್ದಿದ್ದ.

    ಇದಾದ ನಂತರ 2004ರಲ್ಲಿ ಜೈಲಿನಿಂದ ಹೊರಬಂದ ವಿಕಾಸ್ ದುಬೆ, ಕೇಬಲ್ ಉದ್ಯಮಿ ದಿನೇಶ್ ದುಬೆ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ. ನಂತರ 2018ರಲ್ಲಿ ವಿಕಾಸ್ ದುಬೆ ತನ್ನ ಸೋದರಸಂಬಂಧಿ ಅನುರಾಗ್ ಮೇಲೆ ಮಾರಣಾಂತಿಕ ದಾಳಿ ನಡೆಸಿ ಜೈಲುಪಾಲಗಿದ್ದ. ನಂತರ ವಿಕಾಸ್ ಜೈಲಿನಲ್ಲಿದ್ದ, ಜೈಲಿನೊಳಗೆ ಇದ್ದುಕೊಂಡೇ ಅನುರಾಗ್ ನನ್ನು ಕೊಲೆ ಮಾಡಿಸಿದ್ದ. ಈ ವೇಳೆ ಅನುರಾಗ್ ಪತ್ನಿ ಈ ಪ್ರಕರಣದಲ್ಲಿ ವಿಕಾಸ್ ಮತ್ತು ಇತರ ನಾಲ್ವರ ವಿರುದ್ಧ ದೂರು ನೀಡಿದ್ದಳು.

    ಈ ನಡುವೆ 2002ರಲ್ಲೇ ವಿಕಾಸ್ ದುಬೆ ಅಕ್ರಮ ಕೆಲಸಗಳನ್ನು ಮಾಡಿ ಅದರಿಂದ ಬಂದ ಹಣದಲ್ಲಿ ಬೃಹತ್ ಭೂಮಿಯನ್ನು ಖರೀದಿಸಿದ್ದನು. ಇದೇ ಚಾಳಿಯನ್ನು ಮುಂದುವರೆಸಿ ಅಮಾಯಕರಿಂದ ಅಪಾರ ಪ್ರಮಾಣ ಆಸ್ತಿಯನ್ನು ಕಿತ್ತುಕೊಂಡು ದೊಡ್ಡ ಉದ್ಯಮಿಯಾಗಿ ಬೆಳೆದಿದ್ದ. ಜೊತೆಗೆ ಕಾನ್ಪುರ್ ನಗರದಲ್ಲಿ ಬಿಲ್ಹೌರ್, ಶಿವರಾಜ್ಪುರ್, ರಿನ್ಯಾನ್ ಮತ್ತು ಚೌಬೆಪುರ ಪ್ರದೇಶಗಳಲ್ಲಿ ಪ್ರಾಬಲ್ಯ ಸಾಧಿಸಿದ್ದನು. ಇದರ ಜೊತೆಗೆ ಜೈಲಿನಲ್ಲೇ ಇದ್ದುಕೊಂಡು ನಗರ ಪಂಚಾಯ್ತಿ ಚುನಾವಣೆಗೆ ನಿಂತು ಜಯ ಸಾಧಿಸಿ ರಾಜಕೀಯವಾಗಿಯೂ ಪ್ರಬಲ್ಯ ಹೊಂದಿದ್ದ ಎಂದು ಹೇಳಲಾಗಿದೆ.

    ಕೆಲವು ದಿನಗಳ ಹಿಂದೆ ವಿಕಾಸ್ ದುಬೆ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಕಾನ್ಪುರ ಪೊಲೀಸ್ ತಂಡ ವಿಕಾಸ್ ದುಬೆಯನ್ನು ಗುರುವಾರ ರಾತ್ರಿ ಬಂಧಿಸಲು ಹೋಗಿದೆ. ಬಿಕಾರು ಗ್ರಾಮಕ್ಕೆ ಪೊಲೀಸ್ ತಂಡ ತಲುಪಿದ ಕೂಡಲೇ, ಹಲವಾರು ಜೆಸಿಬಿ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ರಸ್ತೆಯನ್ನು ಬ್ಲಾಕ್ ಮಾಡಲಾಗಿದೆ. ಪೊಲೀಸ್ ತಂಡವನ್ನು ತಮ್ಮ ವಾಹನದಿಂದ ಕೆಳಗಿಳಿಯುವಂತೆ ಒತ್ತಾಯಿಸಲಾಗಿದೆ. ನಂತರ ಮನೆಯ ಮೇಲೆ ನಿಂತುಕೊಂಡು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ ಎಂದು ಉತ್ತರ ಪ್ರದೇಶದ ಡಿಜಿಪಿ ಹೆಚ್‍ಸಿ ಅವಸ್ಥಿ ಹೇಳಿದ್ದಾರೆ.