Tag: Vikram Lander

  • ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಇಳಿದ ಜಾಗಕ್ಕೆ ‘ಶಿವ ಶಕ್ತಿ’ ಎಂದು ನಾಮಕರಣ – ಐಎಯು ಅನುಮೋದನೆ

    ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಇಳಿದ ಜಾಗಕ್ಕೆ ‘ಶಿವ ಶಕ್ತಿ’ ಎಂದು ನಾಮಕರಣ – ಐಎಯು ಅನುಮೋದನೆ

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಚಂದ್ರಯಾನ-3 (Chandrayaan-3)ಮಿಷನ್‌ನ ವಿಕ್ರಂ ಲ್ಯಾಂಡರ್ (Vikram Lander) ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಎಂದು ಹೆಸರಿಡಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ (IAU) ಅನುಮೋದನೆ ನೀಡಿದೆ. ಇದೀಗ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಸಲಾಗಿದೆ.

    ಚಂದ್ರನ ಮೇಲ್ಮೈಯಲ್ಲಿ ವಿಕ್ರಂ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವ ಶಕ್ತಿ’ (Shiv Shakti) ಎಂಬ ಹೆಸರಿನಿಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆದಿದ್ದರು. ಇದಾದ 7 ತಿಂಗಳ ಬಳಿಕ ಈ ಸ್ಥಳಕ್ಕೆ ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಡಲು ಐಎಯು ಅನುಮೋದನೆ ನೀಡಿದೆ. ಇದನ್ನೂ ಓದಿ: ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ

     

    ಚಂದ್ರಯಾನ-3 ಲ್ಯಾಂಡಿಂಗ್ ಸೈಟ್‌ಗೆ ‘ಸ್ಪ್ಯಾಟಿಯೋ ಶಿವ ಶಕ್ತಿ’ ಎಂಬ ಹೆಸರನ್ನಿರಿಸುವಂತೆ ಪ್ಯಾರಿಸ್ ಮೂಲದ ಐಎಯು ಮಾರ್ಚ್ 19 ರಂದು ಅನುಮೋದನೆ ನೀಡಿದೆ. ಗ್ಯಾಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ ಖಗೋಳ ಸಂಸ್ಥೆಯು ಅನುಮೋದಿಸಿದ ಗ್ರಹಗಳ ಹೆಸರುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ಬಿಜೆಪಿಗೆ ಅಡ್ಡಮತದಾನ ಮಾಡಿದ್ದ ನಾಲ್ವರು ಎಸ್‌ಪಿ ಶಾಸಕರಿಗೆ ‘ವೈ’ ಕೆಟಗರಿ ಭದ್ರತೆ

    ಆಗಸ್ಟ್ 26, 2023ರಂದು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್‌ನಲ್ಲಿ ಆಗಸ್ಟ್ 23, ಚಂದ್ರಯಾನ-3 ಚಂದ್ರನ ಮೇಲೆ ಇಳಿದ ದಿನವನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಅಲ್ಲದೇ ಚಂದ್ರಯಾನ-2 ತನ್ನ ಹೆಜ್ಜೆಗುರುತುಗಳನ್ನು ಬಿಟ್ಟ ಸ್ಥಳವನ್ನು ‘ತಿರಂಗ’ ಎಂದು ಕರೆಯಲಾಗುವುದು ಎಂದಿದ್ದರು. ಇದನ್ನೂ ಓದಿ: ಲೇಹ್‌ನಲ್ಲಿ ಸೈನಿಕರೊಂದಿಗೆ ಹೋಳಿ ಆಚರಿಸಿದ ರಾಜನಾಥ್ ಸಿಂಗ್

    ಆಗಸ್ಟ್ 23, 2023ರಂದು ಚಂದ್ರಯಾನ-3 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. ಭಾರತ ಈಗ ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆದ ರಾಷ್ಟ್ರಗಳ ಪೈಕಿ ಭಾರತ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಚಂದ್ರಯಾನ-3 ಮಿಷನ್‌ನಲ್ಲಿನ ಸಾಧನೆಗಳಿಗಾಗಿ ಇಸ್ರೋಗೆ ಪ್ರತಿಷ್ಠಿತ ‘ಏವಿಯೇಷನ್ ವೀಕ್ ಲಾರೆಟ್ಸ್’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ನಿವೃತ್ತ ವಾಯುಸೇನೆ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ

  • ಚಂದ್ರಯಾನ-3 ಲ್ಯಾಂಡರ್‌, ರೋವರ್‌ನಿಂದ ಸಿಗ್ನಲ್‌ ಸಿಗ್ತಿಲ್ಲ: ಇಸ್ರೋ

    ಚಂದ್ರಯಾನ-3 ಲ್ಯಾಂಡರ್‌, ರೋವರ್‌ನಿಂದ ಸಿಗ್ನಲ್‌ ಸಿಗ್ತಿಲ್ಲ: ಇಸ್ರೋ

    ನವದೆಹಲಿ: ಚಂದ್ರನಲ್ಲಿ ರಾತ್ರಿ ಅಂತ್ಯವಾಗಿದ್ದು (ಚಂದ್ರನ ಒಂದು ದಿನ ಭೂಮಿಯ 14 ದಿನಕ್ಕೆ ಸಮ), ಸೂರ್ಯೋದಯವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿದ್ರೆಯಲ್ಲಿರುವ ಚಂದ್ರಯಾನ-3 (Chandrayaan-3) ಲ್ಯಾಂಡರ್‌ ಮತ್ತು ರೋವರ್‌ ಎಚ್ಚರಗೊಳಿಸಲು ಇಸ್ರೋ ಪ್ರಯತ್ನ ನಡೆಸುತ್ತಿದೆ. ಆದರೆ ಲ್ಯಾಂಡರ್‌ ಮತ್ತು ರೋವರ್‌ನಿಂದ ಇದುವರೆಗೂ ಯಾವುದೇ ಸಿಗ್ನಲ್‌ ಸಿಕ್ಕಿಲ್ಲ.

    ವಿಕ್ರಮ್ ಲ್ಯಾಂಡರ್ (Vikram Lander) ಮತ್ತು ಪ್ರಗ್ಯಾನ್ ರೋವರ್ (Pragna Rover) ಎಚ್ಚರಗೊಳ್ಳುವ ಸ್ಥಿತಿ ಖಚಿತಪಡಿಸಿಕೊಳ್ಳಲು, ಸಂವಹನ ಸ್ಥಾಪಿಸಲು ಪ್ರಯತ್ನ ನಡೆಯುತ್ತಿದೆ ಎಂದು ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

    ಎರಡು ವಾರಗಳ ಚಂದ್ರನ ರಾತ್ರಿಯಿಂದಾಗಿ ಲ್ಯಾಂಡರ್ ಮತ್ತು ರೋವರ್ ಅನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿತ್ತು. ಈಗ ಚಂದ್ರನ ದಕ್ಷಿಣ ಧ್ರುವದಲ್ಲಿ ಬೆಳಕಾಗಿದ್ದು, ಸಂಪರ್ಕ ಸ್ಥಾಪಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ಇಸ್ರೋ ಹೇಳಿದೆ.

    ಚಂದ್ರನ ರಾತ್ರಿಯ ಸಮಯದಲ್ಲಿ ಮೈನಸ್ 150C (ಮೈನಸ್ 238F) ವರೆಗೆ ಶೀತ ಹವಾಮಾನ ಇತ್ತು. ಹೀಗಾಗಿ ಲ್ಯಾಂಡರ್‌ ಮತ್ತು ರೋವರ್‌ನೊಂದಿಗೆ ಸಂಪರ್ಕ ಸಾಧಿಸಲು ತೊಂದರೆಯಾಗುತ್ತಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್‌ ತಿಳಿಸಿದ್ದರು. ಇದನ್ನೂ ಓದಿ: ಗಗನಯಾತ್ರಿಗಳ ಮೈಕ್ರೋಮೀಟೋರಾಯ್ಡ್ ದಿರಿಸುಗಳ ಕೌತುಕ ಲೋಕದ ಬಗ್ಗೆ ನಿಮಗೆ ಗೊತ್ತಾ? 

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

    ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

    ನವದೆಹಲಿ: ಚಂದ್ರಯಾನ-3 ಯೋಜನೆಯ ಮಹತ್ವದ ಘಟ್ಟವೊಂದಕ್ಕೆ ಕ್ಷಣಗಣನೆ ಶುರುವಾಗಿದೆ. ಸೆಪ್ಟೆಂಬರ್ 22 ರಂದು ಚಂದ್ರದ ದಕ್ಷಿಣ ಧ್ರುವದಲ್ಲಿ ಸೂರ್ಯೋದಯ ಆಗಲಿದೆ. ಆಗ ಚಂದ್ರನ ಅಂಗಳದಲ್ಲಿ ಇರುವ ವಿಕ್ರಂ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್ ಮತ್ತೆ ಮರುಜೀವ ಪಡೆಯುತ್ತಾ ಅನ್ನೋ ಕೌತುಕವನ್ನ ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ.

    ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಶಿವಶಕ್ತಿ ಪಾಯಿಂಟ್ ಮೇಲೆ ಸೂರ್ಯನ ಬೆಳಕು ಚೆಲ್ಲಲಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್‌ಗಳಾದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್‌ಗಳನ್ನ ಪುನರುಜ್ಜೀವನಗೊಳಿಸಲು ಸಖಲ ತಯಾರಿ ನಡೆಸುತ್ತಿದೆ. ಇದನ್ನೂ ಓದಿ: ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ಕಳೆದ ತಿಂಗಳು ಆಗಸ್ಟ್ 23 ರಂದು ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಆ ನಂತರ ವಿಕ್ರಂ ಲ್ಯಾಂಡರ್ ಒಳಗಿನಿಂದ ಪ್ರಗ್ಯಾನ್ ರೋವರ್ ಚಂದ್ರನ ಅಂಗಳದಲ್ಲಿ ಸಂಚಾರ ಮಾಡಿತ್ತು. ಇದಾದ 14 ಭೂಮಿಯ ದಿನಗಳ ಬಳಿಕ ಚಂದ್ರನ ದಕ್ಷಿಣ ಧ್ರುವದಲ್ಲಿ ರಾತ್ರಿ ಆರಂಭವಾಗುವುದಕ್ಕೂ ಮುನ್ನವೇ ಮತ್ತೊಂದು ಬಾರಿ ವಿಕ್ರಂ ಲ್ಯಾಂಡರ್ ಅನ್ನು ಕಿಕ್ ಸ್ಟಾರ್ಟ್ ಮಾಡಿ 40 ಸೆಂಟಿಮೀಟರ್‌ಗಳಷ್ಟು ಮೇಲಕ್ಕೆ ಎತ್ತರಿಸಿ, ಮತ್ತೆ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿತ್ತು. ನಂತರ ಎರಡೂ ಉಪಕರಣಗಳು ನಿದ್ರೆಗೆ ಜಾರಿದ್ದವು. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್‌ ರೋವರ್‌ – ವಿಕ್ರಮ್‌ ಲ್ಯಾಂಡರ್‌ನಿಂದ ಹೊರಬರಲು ತಡವಾಗಿದ್ಯಾಕೆ?

    ಇದೀಗ ಸುಸ್ಥಿತಿಯಲ್ಲಿ ಇರುವ ವಿಕ್ರಂ ಲ್ಯಾಂಡರ್ ಹಾಗೂ ಪ್ರಗ್ಯಾನ್ ರೋವರ್, ಶುಕ್ರವಾರ ಸೂರ್ಯೋದಯ ಆದ ಬಳಿಕ ಮತ್ತೆ ನಿದ್ರೆಯಿಂದ ಎಚ್ಚರ ಆಗುವ ನಿರೀಕ್ಷೆ ಇದೆ. ಒಂದು ವೇಳೆ ಈ ಉಪಕರಣಗಳು ಕೆಲಸ ಮಾಡದೇ ಇದ್ದರೆ ಇವುಗಳು ಚಂದ್ರನ ಅಂಗಳದಲ್ಲಿ ಶಾಶ್ವತವಾಗಿ ಭಾರತದ ಬಾಹ್ಯಾಕಾಶ ಪ್ರಯೋಗದ ರಾಯಭಾರಿಗಳ ರೀತಿಯಲ್ಲಿ ಉಳಿದು ಹೋಗಲಿವೆ. ಒಂದು ವೇಳೆ ಈ ಕಾರ್ಯ ಯಶಸ್ವಿಯಾದರೆ ಇಸ್ರೋ ಬಾಹ್ಯಾಕಾಶ ಪರಿಶೋಧನೆಯಲ್ಲಿ ಮಹತ್ವದ ಮೈಲುಗಲ್ಲನ್ನು ಸಾಧಿಸಲಿದೆ. ಜೊತೆಗೆ ಮುಂದಿನ 14 ದಿನಗಳ ಕಾಲ ಚಂದ್ರನ ಅಂಗಳದಲ್ಲಿ ಇನ್ನಷ್ಟು ಮಾಹಿತಿಗಳನ್ನ ಸಂಗ್ರಹಿಸಲು ನೆರವಾಗಲಿದೆ.

    ಈ ಬಾರಿ ಚಂದ್ರನ ಮೈಲ್ಮೈ ವೈಶಿಷ್ಟ್ಯಗಳು, ಉಷ್ಣ ವಾತಾವರಣದ ಗುಣಲಕ್ಷಣಗಳು ಹಾಗೂ ಮಣ್ಣಿನ ಅಂಶಗಳನ್ನ ಅಧ್ಯಯನ ನಡೆಸುವ ಉದ್ದೇಶ ಹೊಂದಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‌Chandrayaan-3: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ – ಇಸ್ರೋದಿಂದ ವೀಡಿಯೋ ರಿಲೀಸ್‌

    ‌Chandrayaan-3: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ – ಇಸ್ರೋದಿಂದ ವೀಡಿಯೋ ರಿಲೀಸ್‌

    ನವದೆಹಲಿ: ಚಂದ್ರನ (Moon) ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡಿಂಗ್‌ ಮಾಡಿದ 10 ದಿನಗಳ ನಂತರ, ಚಂದ್ರಯಾನ -3 (Chandrayaan-3) ಲ್ಯಾಂಡರ್ (Vikram Lander) ಕೆಲವು ಸೆಕೆಂಡುಗಳ ಕಾಲ ಚಂದ್ರನ ಮೇಲ್ಮೈಯಲ್ಲಿ ಪ್ರಾಯೋಗಿಕವಾಗಿ ಸ್ವಲ್ಪ ಎತ್ತರಕ್ಕೆ ಹಾರಾಟ ನಡೆಸಿ ಮತ್ತೆ ಸಾಫ್ಟ್‌ ಲ್ಯಾಂಡಿಂಗ್‌ ಮಾಡಿದೆ.

    ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಟ್ವೀಟ್‌ ಮಾಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO), ವಿಕ್ರಮ್ ಲ್ಯಾಂಡರ್ ತನ್ನ ಮಿಷನ್ ಉದ್ದೇಶಗಳನ್ನು ಮೀರಿದೆ. ಇದು ಹಾಪ್ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿತು. ಆಜ್ಞೆಯ ಮೇರೆಗೆ ಎಂಜಿನಿಗಳ ಸಹಾಯದಿಂದ ಮೇಲಕ್ಕೆ ಹಾರಿಸಲಾಯಿತು. ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿಸಿ, 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಯಿತು ಎಂದು ತಿಳಿಸಿದೆ. ಇದನ್ನೂ ಓದಿ: ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

    ಏನಿದರ ಪ್ರಾಮುಖ್ಯತೆ?
    ಚಂದ್ರನಲ್ಲಿ ಕತ್ತಲು ಆವರಿಸುತ್ತಿರುವ ಹಿನ್ನೆಲೆ ವಿಕ್ರಮ್‌ ಲ್ಯಾಂಡರನ್ನು ಇಸ್ರೋ ಸ್ಲೀಪ್‌ ಮೋಡ್‌ಗೆ ಹಾಕಿತ್ತು. ಬಳಿಕ ವಿಜ್ಞಾನಿಗಳು ವಿಕ್ರಮ್‌ನ ಕಿಕ್-ಸ್ಟಾರ್ಟ್ ಮಾಡಿದ್ದಾರೆ. ಎಂಜಿನ್‌ಗಳ ಸಹಾಯದಿಂದ 40 ಸೆಂ.ಮೀ ಎತ್ತರಕ್ಕೆ ಹಾರಿಸಿ 30 – 40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಲಾಗಿದೆ. ಕಿಕ್ ಸ್ಟಾರ್ಟ್‌ನಿಂದ ಭವಿಷ್ಯದಲ್ಲಿ ಕಾರ್ಯಾಚರಣೆಗೆ ಸಹಕಾರಿಯಾಗಲಿದೆ. ಚಂದ್ರನಲ್ಲಿ ಮತ್ತೊಮ್ಮೆ ಬೆಳಕಿನ ನಂತರ ಕಾರ್ಯಾಚರಣೆ ಮಾಡಲು ಪೂರ್ವ ತಯಾರಿ ಮಾಡಲಾಗಿದೆ. ವಿಕ್ರಮ್ ಲ್ಯಾಂಡರ್ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

    ಚಂದ್ರನ ಮೇಲ್ಮೈಯನ್ನು ಯಶಸ್ವಿಯಾಗಿ ಮುಟ್ಟಿದ ಕೆಲ ದಿನಗಳ ನಂತರ ಚಂದ್ರಯಾನ-3 ರ ಪ್ರಗ್ಯಾನ್ ರೋವರ್ 100 ಮೀಟರ್‌ಗಳಷ್ಟು ಕ್ರಮಿಸಿದೆ. ರೋವರ್ ತನ್ನ ಕಾರ್ಯಯೋಜನೆಗಳನ್ನು ಪೂರ್ಣಗೊಳಿಸಿದೆ. ಈಗ ವಿಕ್ರಮ್‌ ಲ್ಯಾಂಡರ್‌ ಮತ್ತು ಪ್ರಗ್ಯಾನ್ ರೋವರನ್ನು ಸ್ಲೀಪ್‌ ಮೋಡ್‌ಗೆ ಹೊಂದಿಸಲಾಗಿದೆ ಎಂದು ಕೆಲ ದಿನಗಳ ಹಿಂದೆ ಇಸ್ರೋ ತಿಳಿಸಿತ್ತು. ಇದನ್ನೂ ಓದಿ: ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ರೋವರನ್ನು ಈಗ ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ. ಸ್ಲೀಪ್ ಮೋಡ್‌ಗೆ ಹೊಂದಿಸಲಾಗಿದೆ. APXS ಮತ್ತು LIBS ಪೇಲೋಡ್‌ಗಳನ್ನು ಆಫ್ ಮಾಡಲಾಗಿದೆ. ಈ ಪೇಲೋಡ್‌ಗಳಿಂದ ದತ್ತಾಂಶವು ಲ್ಯಾಂಡರ್ ಮೂಲಕ ಭೂಮಿಗೆ ರವಾನೆಯಾಗುತ್ತದೆ ಎಂದು ಟ್ವೀಟ್‌ ಮಾಡಿ ಇಸ್ರೋ ಮಾಹಿತಿ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೋ ಅಧ್ಯಕ್ಷರಿಗೆ ವಿಕ್ರಂ ಲ್ಯಾಂಡರ್ ಗಿಫ್ಟ್ ನೀಡಿದ ಪುಟ್ಟ ಬಾಲಕ

    ಇಸ್ರೋ ಅಧ್ಯಕ್ಷರಿಗೆ ವಿಕ್ರಂ ಲ್ಯಾಂಡರ್ ಗಿಫ್ಟ್ ನೀಡಿದ ಪುಟ್ಟ ಬಾಲಕ

    ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮುಖ್ಯಸ್ಥ ಎಸ್. ಸೋಮನಾಥ್ (S.Somanath)ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯಾಂಡರ್ (Vikram Lander) ಮಾದರಿಯನ್ನು ಗಿಫ್ಟ್ (Gift) ಕೊಡುವ ಮೂಲಕ ಅಭಿನಂದನೆ ಸಲ್ಲಿಸಿದ್ದು, ಈ ಚಿತ್ರ ಎಲ್ಲರ ಮನಗೆದ್ದಿದೆ.

    ಆಗಸ್ಟ್ 23ರಂದು ಚಂದ್ರಯಾನ-3 ಮಿಷನ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿದ್ದು, ಪ್ರತಿಯೊಬ್ಬ ಭಾರತೀಯ ಹೆಮ್ಮೆ ಪಡುವ ದಿನ ಅದಾಗಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಕೀರ್ತಿ ಭಾರತಕ್ಕೆ ಸಂದಿದೆ. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಕಾರ್ಯಕ್ಕೆ ಗಣ್ಯಾತಿಗಣ್ಯರಿಂದ ಹಿಡಿದು ಇಡೀ ವಿಶ್ವವೇ ಅಭಿನಂದನೆ ಸಲ್ಲಿಸಿತ್ತು. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    ಅದೇ ರೀತಿ ಈ ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್‌ನ ಮಾದರಿಯನ್ನು ರಚಿಸಿದ್ದು, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ. ಇಸ್ರೋ ವಿಜ್ಞಾನಿ ಪಿವಿ ವೆಂಕಟಕೃಷ್ಣನ್ ಅವರು ಟ್ವಿಟ್ಟರ್‌ನಲ್ಲಿ ಈ ಸುಂದರ ಕ್ಷಣದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಬಾಲಕ ಎಸ್ ಸೋಮನಾಥ್ ಅವರಿಗೆ ಗಿಫ್ಟ್ ನೀಡುತ್ತಿರುವ ಚಿತ್ರವನ್ನು ಸಹಾ ಹಂಚಿಕೊಂಡಿದ್ದಾರೆ. ಈ ಕ್ಯೂಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮನಗೆದ್ದಿದೆ. ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರ ಆರೋಪ- ತೆಲಂಗಾಣ ಕಾಂಗ್ರೆಸ್ ನಾಯಕನಿಗೆ ನೋಟಿಸ್

    ಸೆ.2ರಂದು ಇಸ್ರೋ ತನ್ನ ಸೌರ ಮಿಷನ್ ಆದಿತ್ಯ ಎಲ್-1 ಅನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಿದೆ. ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಮಿಷನ್ ಇದಾಗಿದೆ. ಈ ಸೋಲಾರ್ ಮಿಷನ್‌ಗೆ ಸುಮಾರು 300 ಕೋಟಿ ರೂ. ವೆಚ್ಚವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ನವದೆಹಲಿ: ಚಂದ್ರನ (Moon) ಮೇಲ್ಮೈಯನ್ನು ಯಶಸ್ವಿಯಾಗಿ ಮುಟ್ಟಿದ ದಿನಗಳ ನಂತರ ಚಂದ್ರಯಾನ-3 ರ (Chandrayaan-3) ಪ್ರಗ್ಯಾನ್ ರೋವರ್ (Pragyan Rover) 100 ಮೀಟರ್‌ಗಳಷ್ಟು ಕ್ರಮಿಸಿದೆ. ರೋವರ್ ತನ್ನ ಕಾರ್ಯಯೋಜನೆಗಳನ್ನು ಪೂರ್ಣಗೊಳಿಸಿದೆ. ಈಗ ವಿಕ್ರಮ್‌ ಲ್ಯಾಂಡರ್‌ (Vikram Lander) ಮತ್ತು ಪ್ರಗ್ಯಾನ್ ರೋವರನ್ನು ಸ್ಲೀಪ್‌ ಮೋಡ್‌ಗೆ (Sleep Mode) ಹೊಂದಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

    ರೋವರನ್ನು ಈಗ ಸುರಕ್ಷಿತವಾಗಿ ನಿಲುಗಡೆ ಮಾಡಲಾಗಿದೆ. ಸ್ಲೀಪ್ ಮೋಡ್‌ಗೆ ಹೊಂದಿಸಲಾಗಿದೆ. APXS ಮತ್ತು LIBS ಪೇಲೋಡ್‌ಗಳನ್ನು ಆಫ್ ಮಾಡಲಾಗಿದೆ. ಈ ಪೇಲೋಡ್‌ಗಳಿಂದ ದತ್ತಾಂಶವು ಲ್ಯಾಂಡರ್ ಮೂಲಕ ಭೂಮಿಗೆ ರವಾನೆಯಾಗುತ್ತದೆ ಎಂದು ಇಸ್ರೋ (ISRO) ಟ್ವೀಟ್‌ ಮಾಡಿ ಮಾಹಿತಿ ನೀಡಿದೆ. ಇದನ್ನೂ ಓದಿ: ಚಂದ್ರ, ಸೂರ್ಯ ಮಿಷನ್‌ ಆಯ್ತು; ಇಸ್ರೋ ಮುಂದಿನ ಆಪರೇಷನ್‌ ಯಾವುದು?

    ಪ್ರಸ್ತುತ, ಬ್ಯಾಟರಿ ಸಂಪೂರ್ಣವಾಗಿ ಚಾರ್ಜ್ ಆಗಿದೆ. ಸೌರ ಫಲಕವು ಸೆಪ್ಟೆಂಬರ್ 22, 2023 ರಂದು ನಿರೀಕ್ಷಿತ ಮುಂದಿನ ಸೂರ್ಯೋದಯದಲ್ಲಿ ಬೆಳಕನ್ನು ಸ್ವೀಕರಿಸಲು ಆಧಾರಿತವಾಗಿದೆ. ರಿಸೀವರ್ ಅನ್ನು ಇರಿಸಲಾಗಿದೆ. ಅದು ಯಶಸ್ವಿಯಾಗಿ ಮತ್ತೊಂದು ಕಾರ್ಯಯೋಜನೆ ಮಾಡುವ ಆಶಯ ಹೊಂದಲಾಗಿದೆ. ಇಲ್ಲದಿದ್ದರೆ, ಅದು ಭಾರತದ ಚಂದ್ರನ ರಾಯಭಾರಿಯಾಗಿ ಶಾಶ್ವತವಾಗಿ ಉಳಿಯುತ್ತದೆ ಎಂದು ಇಸ್ರೋ ತಿಳಿಸಿದೆ.

    ರಾತ್ರಿಯಾದಾಗ ಚಂದ್ರನ ಮೇಲ್ಮೈನಲ್ಲಿ – 230 ಡಿಗ್ರಿ ತಾಪಮಾನ ಇರುತ್ತದೆ. ಈ ಸಂದರ್ಭದಲ್ಲಿ ಸಂಶೋಧನೆ ಅಸಾಧ್ಯ. ಹೀಗಾಗಿ ರೋವರನ್ನು ಇಸ್ರೋ ಸುರಕ್ಷಿತವಾಗಿ ನಿಲುಗಡೆ ಮಾಡಿದೆ. ಇದನ್ನೂ ಓದಿ: Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

    ಇದಕ್ಕೂ ಮೊದಲು ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಅವರು, “ಒಳ್ಳೆಯ ಸುದ್ದಿ ಏನೆಂದರೆ, ಲ್ಯಾಂಡರ್‌ನಿಂದ ರೋವರ್‌ ಸುಮಾರು 100 ಮೀಟರ್‌ಗಳಷ್ಟು ಚಲಿಸಿದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ರೋವರ್‌, ಲ್ಯಾಂಡರ್‌ ನಿದ್ರೆ ಮಾಡುವ ಪ್ರಕ್ರಿಯೆಯನ್ನು ನಾವು ಪ್ರಾರಂಭಿಸಲಿದ್ದೇವೆ. ಏಕೆಂದರೆ ಅವೆರಡು ಮುಂಬರುವ ರಾತ್ರಿಯನ್ನು ತಡೆದುಕೊಳ್ಳಬೇಕಾಗುತ್ತದೆ” ಎಂದು ತಿಳಿಸಿದ್ದರು.

    ವಿಕ್ರಮ್‌ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಇನ್ನೂ ಕಾರ್ಯನಿರ್ವಹಿಸುತ್ತಿವೆ. ವೈಜ್ಞಾನಿಕ ಉಪಕರಣಗಳನ್ನು ಹೊಂದಿರುವ ತಂಡವು ಸಾಕಷ್ಟು ಕೆಲಸ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದ್ದರು.

    ಭಾರತದ ಚಂದ್ರಯಾನ-3, ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದ ಬಳಿ ಸಾಫ್ಟ್ ಲ್ಯಾಂಡಿಂಗ್ ಸಾಧಿಸಿದ ಮೊದಲ ದೇಶ ಎಂಬ ಇತಿಹಾಸವನ್ನು ಸೃಷ್ಟಿಸಿತು. ಆ ಮೂಲಕ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್‌ ಸಾಧಿಸಿದ ಅಮೆರಿಕ, ರಷ್ಯಾ ಮತ್ತು ಚೀನಾ, ಜಪಾನ್‌ ದೇಶಗಳ ಸಾಲಿಗೆ ಭಾರತ ಸೇರಿತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ‘ಸ್ಮೈಲ್ ಪ್ಲೀಸ್’ – ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್

    Chandrayaan-3: ‘ಸ್ಮೈಲ್ ಪ್ಲೀಸ್’ – ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್

    ನವದೆಹಲಿ: ಭಾರತದ ಹೆಮ್ಮೆಯ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿ ಚಂದ್ರನ (Moon) ದಕ್ಷಿಣ ಧ್ರುವದಲ್ಲಿ ಇಳಿದು ತನ್ನ ಕಾರ್ಯಾಚರಣೆ ಪ್ರಾರಂಭಿಸಿದೆ. ಚಂದ್ರನ ಮೇಲ್ಮೈಯಲ್ಲಿ ಅನ್ವೇಷಣೆ ನಡೆಸುತ್ತಿರುವ ಚಂದ್ರಯಾನ-3 ಮಿಷನ್‌ನ ಪೋಟೋಗಳನ್ನು ಇಸ್ರೋ (ISRO) ನಿರಂತರವಾಗಿ ಹಂಚಿಕೊಳ್ಳುತ್ತಿದೆ.

    ಬುಧವಾರ ಬೆಳಗ್ಗೆ ಚಂದ್ರಯಾನ ಮಿಷನ್‌ನ ಪ್ರಗ್ಯಾನ್ ರೋವರ್ (Pragyan Rover) ವಿಕ್ರಂ ಲ್ಯಾಂಡರ್‌ನ (Vikram Lander) ಚಿತ್ರವನ್ನು ಕ್ಲಿಕ್ಕಿಸಿದೆ. ಈ ಚಿತ್ರವನ್ನು ಇಸ್ರೋ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ‘ಸ್ಮೈಲ್ ಪ್ಲೀಸ್!’ ಇಂದು ಬೆಳಗ್ಗೆ ರೋವರ್ ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಕ್ಲಿಕ್ಕಿಸಿದೆ. ರೋವರ್‌ನಲ್ಲಿನ ನ್ಯಾವಿಗೇಷನ್ ಕ್ಯಾಮೆರಾದಿಂದ ಮಿಷನ್‌ನ ಚಿತ್ರವನ್ನು ತೆಗೆಯಲಾಗಿದೆ. ಚಂದ್ರಯಾನ-3 ಮಿಷನ್‌ಗಾಗಿ ನ್ಯಾವಿಗೇಷನ್ ಕ್ಯಾಮೆರಾಗಳನ್ನು ಲ್ಯಾಬೊರೇಟರಿ ಫಾರ್ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟಮ್ಸ್ (LEOS) ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಪತ್ತೆ ಹಚ್ಚಿದ ಚಂದ್ರಯಾನ-3

    ಚಂದ್ರನ ಅಂಗಳದಲ್ಲಿ ಈಗಾಗಲೇ ಚಂದ್ರಯಾನ-3 ಮಿಷನ್ 5 ದಿನಗಳ ಕಾರ್ಯಾಚರಣೆಯನ್ನು ನಡೆಸಿದೆ. ಈ ಕಾರ್ಯಾಚರಣೆ 14 ದಿನಗಳೊಳಗೆ ಮುಕ್ತಾಯಗೊಳಿಸಬೇಕಿದೆ. ಮಂಗಳವಾರ ಚಂದ್ರನ ದಕ್ಷಿಣ ಧ್ರುವದಲ್ಲಿ ಗಂಧಕ ಇರುವುದು ದೃಢಪಟ್ಟಿದೆ ಎಂದು ಇಸ್ರೋ ತಿಳಿಸಿದೆ. ಇದನ್ನೂ ಓದಿ: ಹಲವು ವರ್ಷಗಳ ಹೆತ್ತವರ ಕನಸನ್ನು ಸಾಕಾರಗೊಳಿಸಿದ್ದೀರಿ- ಆನಂದ್ ಮಹೀಂದ್ರಾಗೆ ಪ್ರಜ್ಞಾನಂದ ಥ್ಯಾಂಕ್ಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಜ್ಞಾನ್ ರೋವರ್‌ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ – ಇನ್ನು 10 ದಿನ ಮಾತ್ರ ಬಾಕಿ

    ಪ್ರಜ್ಞಾನ್ ರೋವರ್‌ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ – ಇನ್ನು 10 ದಿನ ಮಾತ್ರ ಬಾಕಿ

    ನವದೆಹಲಿ/ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿ ಕಾರ್ಯಾಚರಣೆಗೆ ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪ್ರಜ್ಞಾನ್ ರೋವರ್ (Pragyan Rover) ಚಂದ್ರನ ಮೇಲ್ಮೈನ ದತ್ತಾಂಶ ಸಂಗ್ರಹಿಸುವ ಕಾರ್ಯವನ್ನು ಚುರುಕುಗೊಳಿಸಿದೆ. ಒಂದು ಚಂದ್ರನ ದಿನ ಪೂರ್ಣಗೊಳ್ಳಲು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದೆ. ಚಂದ್ರನ ಅಂಗಳದಲ್ಲಿ ಅಧ್ಯಯನ ನಡೆಸುತ್ತಿರುವ ಪ್ರಜ್ಞಾನ್ ರೋವರ್ ದೊಡ್ಡದೊಂದು ಕುಳಿಗೆ ಮುಖಾಮುಖಿಯಾಗಿದೆ.

    4 ಮೀಟರ್ ಸುತ್ತಳತೆ ಹೊಂದಿರುವ ಗುಂಡಿಯೊಂದನ್ನ ರೋವರ್ ಗುರುತಿಸಿದೆ. ಈ ಕುಳಿಯಿಂದ ಪ್ರಜ್ಞಾನ್ ರೋವರ್ 3 ಮೀಟರ್ ದೂರದಲ್ಲಿ ಇತ್ತು. ಹೀಗಾಗಿ ರೋವರ್‌ನ ಪಥ ಬದಲಾವಣೆಗೆ ಇಸ್ರೋ (ISRO) ನಿಯಂತ್ರಣ ಕೊಠಡಿ ಸೂಚನೆ ರವಾನಿಸಿತು. ಇದೀಗ ಹೊಸ ಹಾದಿಯಲ್ಲಿ ರೋವರ್ ಮುಂದೆ ಸಾಗಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಈಗ ಇಸ್ರೋದಿಂದ ಸೂರ್ಯನ ಅಧ್ಯಯನ – ಆದಿತ್ಯ ಉಡಾವಣೆಗೆ ಮುಹೂರ್ತ ಫಿಕ್ಸ್

    ಸೋಮವಾರ ಮಧ್ಯಾಹ್ನ ಇಸ್ರೋ ನಿಯಂತ್ರಣ ಕೊಠಡಿಗೆ ಪ್ರಜ್ಞಾನ್ ತನಗೆ ಗುಂಡಿಯೊಂದು ಎದುರಾಗಿರುವ ಕುರಿತಾಗಿ ಮಾಹಿತಿ ನೀಡಿತ್ತು. ಆ ನಂತರ ಸಕ್ರಿಯರಾದ ತಜ್ಞರ ತಂಡ ರೋವರ್‌ಗೆ ಹೊಸ ಮಾರ್ಗ ಸೂಚಿಸಿತು. ನಂತರ ರೋವರ್‌ನ ಬದಲಾದ ಮಾರ್ಗದ ಫೋಟೋ ಸಮೇತ ಇಸ್ರೋ ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ಇದನ್ನೂ ಓದಿ: 15 ದಿನಗಳ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ತಮಿಳುನಾಡಿಗೆ ಹರಿಸಿ – ಕರ್ನಾಟಕಕ್ಕೆ CWRC ಆದೇಶ

    ಚಂದ್ರನ ಅಂಗಳದಲ್ಲಿ ಈಗಾಗಲೇ 4 ದಿನಗಳ ಕಾರ್ಯಾಚರಣೆ ನಡೆಸಿರುವ ಪ್ರಗ್ಯಾನ್ ರೋವರ್‌ಗೆ ಇನ್ನು ಕೇವಲ 10 ದಿನ ಮಾತ್ರ ಬಾಕಿ ಉಳಿದಿದೆ. ಚಂದ್ರನ ಮೇಲೆ ಒಂದು ದಿನ ಕಳೆಯಲು ಭೂಮಿಯ 14 ದಿನಗಳು ಆಗುತ್ತವೆ. ನಂತರದ 14 ದಿನಗಳ ಕಾಲ ಚಂದ್ರನ ದಕ್ಷಿಣ ಧ್ರುವದ ಮೇಲೆ ಕತ್ತಲು ಕವಿಯುತ್ತದೆ. ಹೀಗಾಗಿ ಈ 14 ದಿನಗಳ ಒಳಗೆ ಕಾರ್ಯಾಚರಣೆ ಮುಕ್ತಾಯಗೊಳಿಸಬೇಕಿದೆ. ಒಂದು ವೇಳೆ ಚಂದ್ರನ ದಕ್ಷಿಣ ಧ್ರವದಲ್ಲಿ ಕತ್ತಲು ಕವಿಯುವ 14 ದಿನಗಳ ಬಳಿಕವೂ ರೋವರ್ ಜೀವಂತವಾಗಿದ್ದರೆ, ಅದನ್ನು ಮುಂದಿನ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳಬಹುದಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʼಶಿವಶಕ್ತಿʼ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

    ʼಶಿವಶಕ್ತಿʼ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

    ತಿರುವನಂತಪುರಂ: ವಿಕ್ರಂ ಲ್ಯಾಂಡರ್‌ (Vikram Lander) ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್‌ (Shivashakti Point) ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ (Somanath) ಹೇಳಿದ್ದಾರೆ.

    ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್‌ ಪ್ರಾರ್ಥನೆ ಸಲ್ಲಿಸಿದರು.

    ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್‌ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ‘ಶಿವಶಕ್ತಿ’ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು. ಇದನ್ನೂ ಓದಿ: ಚಂದ್ರಲೋಕದಲ್ಲಿ ಜೈ ಹಿಂದ್‌ – ಮೊದಲ ಬಾರಿಗೆ ತಾಪಮಾನ ಪರೀಕ್ಷೆ

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ‘ತಿರಂಗಾ ಪಾಯಿಂಟ್‌ʼ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು  ಎಂದು ಹೇಳಿದರು.

    ನಾನೊಬ್ಬ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ. ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮ. ನಾನು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಮತ್ತು ಅನೇಕ ಗ್ರಂಥಗಳನ್ನು ಓದುತ್ತೇನೆ. ಈ ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತೇನೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹೊರಗಡೆ ವಿಜ್ಞಾನ ಮಾಡಿದರೆ ಅಂತರಂಗಕ್ಕೆ ದೇವಸ್ಥಾನಗಳಿಗೆ ಬರುತ್ತೇನೆ ಎಂದು ಹೇಳಿದರು.

    ಮಿಷನ್‌ನ ಪ್ರಸ್ತುತ ಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಚಂದ್ರಯಾನ 3, ಲ್ಯಾಂಡರ್, ರೋವರ್ ತುಂಬಾ ಆರೋಗ್ಯಕರವಾಗಿದ್ದು, ಬೋರ್ಡ್‌ನಲ್ಲಿರುವ ಎಲ್ಲಾ ಐದು ಉಪಕರಣಗಳನ್ನು ಸ್ವಿಚ್ ಆನ್ ಮಾಡಲಾಗಿದೆ. ಇವುಗಳು ಸುಂದರವಾದ ಡೇಟಾವನ್ನು ನೀಡುತ್ತಿದೆ. ಇನ್ನೂ ಹತ್ತು ದಿನಗಳು ಉಳಿದಿವೆ. ವಿವಿಧ ವಿಧಾನಗಳ ಸಂಪೂರ್ಣ ಸಾಮರ್ಥ್ಯದೊಂದಿಗೆ ನಾವು ಎಲ್ಲಾ ಪ್ರಯೋಗಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಲೋಕದಲ್ಲಿ ಜೈ ಹಿಂದ್‌ – ಮೊದಲ ಬಾರಿಗೆ ತಾಪಮಾನ ಪರೀಕ್ಷೆ

    ಚಂದ್ರಲೋಕದಲ್ಲಿ ಜೈ ಹಿಂದ್‌ – ಮೊದಲ ಬಾರಿಗೆ ತಾಪಮಾನ ಪರೀಕ್ಷೆ

    – ಗ್ರಾಫ್ ಚಿತ್ರವನ್ನು ಹಂಚಿಕೊಂಡ ಇಸ್ರೋ

    ಬೆಂಗಳೂರು: ಬಾಹ್ಯಾಕಾಶ ಸಂಶೋಧನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಚಂದ್ರನ ಮಣ್ಣಿನ ತಾಪಮಾನ ಪತ್ತೆ ಹಚ್ಚಲಾಗಿದೆ. ಭಾರತದ ಚಂದ್ರಯಾನ 3 ಯೋಜನೆಯ ಮೂಲಕ ದಕ್ಷಿಣ ಧ್ರುವ ತಲುಪಿರುವ ವಿಕ್ರಮ್ ಲ್ಯಾಂಡರ್ ತನ್ನ ChaSTE ಪೇಲೋಡ್‌ನ ಸಹಾಯದಿಂದ ಮಣ್ಣಿನ ಅಧ್ಯಯನ ಆರಂಭಿಸಿದೆ.

    ಆಗಸ್ಟ್ 23 ರಂದು ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿತ್ತು. ಇದಾದ ನಾಲ್ಕು ದಿನಗಳ ಬಳಿಕ ವೈಜ್ಞಾನಿಕ ಪ್ರಯೋಗಗಳ ಮಾಹಿತಿ ಲಭ್ಯವಾಗುತ್ತಿದೆ. ChaSTE (Chandra’s Surface Thermophysical Experiment) ಪೇಲೋಡ್ ಚಂದ್ರನ ಭೂಮಿಯನ್ನು 10 ಸೆಂಟಿ ಮೀಟರ್ ಕೊರೆದು ಪರೀಕ್ಷೆ ನಡೆಸಿದ್ದು, – 10 ಡಿಗ್ರಿಯಿಂದ 60 ಡಿಗ್ರಿ ತಾಪಮಾನ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೋ ಉಡುಗೊರೆ

    ಚಂದ್ರನ ಮೇಲ್ಮೈಯ ಉಷ್ಣ ವರ್ತನೆಯನ್ನು ಅರ್ಥಮಾಡಿಕೊಳ್ಳಲು ChaSTE ಚಂದ್ರನ ಮೇಲ್ಮೈ ಮೇಲೆ ಥರ್ಮೋಫಿಸಿಕಲ್ ಪ್ರಯೋಗ ನಡೆಸಿದೆ ಎಂದು ಟ್ವೀಟ್‌ನಲ್ಲಿ ಇಸ್ರೋ ವಿವರಿಸಿದ್ದು, ಗ್ರಾಫ್ ಚಿತ್ರಣವನ್ನು ಹಂಚಿಕೊಂಡಿದೆ. ತನಿಖೆಗೆ 10 ಪ್ರತ್ಯೇಕ ತಾಪಮಾನ ಸಂವೇದಕಗಳನ್ನು ಅಳವಡಿಸಲಾಗಿದೆ ಎಂದು ಟ್ವೀಟ್ ಹೇಳಿದೆ. ಅಹಮದಾಬಾದ್‌ನ ಭೌತಿಕ ಸಂಶೋಧನಾ ಪ್ರಯೋಗಾಲಯ (PRL) ಸಹಯೋಗದೊಂದಿಗೆ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ಬಾಹ್ಯಾಕಾಶ ಭೌತಶಾಸ್ತ್ರ ಪ್ರಯೋಗಾಲಯ (SPL) ನೇತೃತ್ವದ ತಂಡವು ಪೇಲೋಡ್ ಅನ್ನು ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ಚಂದ್ರಯಾನ ಸಂಭ್ರಮಾಚರಣೆ ಮಾಡಿದವರ ಮೇಲೆ ಕಾಶ್ಮೀರಿ ವಿದ್ಯಾರ್ಥಿಗಳಿಂದ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]