Tag: Vikram Simha

  • ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ.. ಅವರೇ ಶ್ರೀಮನ್ ಸಿದ್ದರಾಮಣ್ಣ: ಹೆಚ್‌ಡಿಕೆ ಟಾಂಗ್‌

    ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ.. ಅವರೇ ಶ್ರೀಮನ್ ಸಿದ್ದರಾಮಣ್ಣ: ಹೆಚ್‌ಡಿಕೆ ಟಾಂಗ್‌

    ಬೆಂಗಳೂರು: ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಟಾಂಗ್‌ಕೊಟ್ಟಿದ್ದಾರೆ.

    ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ (Vikram Simha) ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹಾಗೂ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಅವರ ಹೇಳಿಕೆಗಳಿಗೆ ಪ್ರತ್ಯುತ್ತರ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. ಅಲ್ಲದೇ, ದಾಖಲೆ ಇಟ್ಟುಕೊಂಡೇ ವಿಕ್ರಂ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

    ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ.ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ಪ್ರಕರಣಕ್ಕೆ ಸಂಬಂಧಿಸಿ ನಾನು ಕೊಟ್ಟಿರುವ ಹೇಳಿಕೆಗಳಿಗೆ ನೀಡಿದ ಪ್ರತಿಕ್ರಿಯೆ ಗಮನಿಸಿದ್ದೇನೆ. ಇದನ್ನೂ ಓದಿ: 9 ದಿನಗಳ ಬಳಿಕ ಶ್ರೀಕಾಂತ್‌ ಪೂಜಾರಿ ಜೈಲಿನಿಂದ ಬಿಡುಗಡೆ – ‘ಭಾರತ್‌ ಮಾತಾ ಕೀ ಜೈ’ ಎಂದ ಕಾರ್ಯಕರ್ತರು

    ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದಾರೆ ಈ ಸಚಿವರಿಬ್ಬರು. ‘ಸಚಿವಗಿರಿ ಎಂದರೆ ಚಮಚಾಗಿರಿ ಅಲ್ಲ’ ಅನ್ನುವುದನ್ನು ಇವರು ಅರ್ಥ ಮಾಡಿಕೊಳ್ಳಬೇಕು. ತಪ್ಪಿದರೆ, ಸತ್ಯದ ಪರ ನಿಲ್ಲುವ ಗಂಡಸ್ತನ ನಮಗಿಲ್ಲ ಎಂಬುದನ್ನು ಒಪ್ಪಿಕೊಳ್ಳುವ ನೈತಿಕತೆಯನ್ನಾದರೂ ತೋರಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸರ್ಕಾರಿ ಬಸ್‍ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ನಾನು ಹೇಳಿದ್ದೆಲ್ಲವೂ ಸತ್ಯ, ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ಆ ದಾಖಲೆಗಳನ್ನು ತೆಗೆದುಕೊಂಡು ಎಲ್ಲಿಗೆ ಬರಲಿ, ಆಗ ಕ್ರಮ ಜರುಗಿಸುವ ದಮ್ಮು, ತಾಕತ್ತನ್ನು ತೋರುವಿರಾ? ಅಥವಾ ಪಲಾಯನ ಮಾಡುವಿರಾ ಹೇಳಿ? ಬಹಿರಂಗ ಚರ್ಚೆಗೂ ನಾನು ತಯಾರು. ನೀವು ಸಿದ್ಧವೇ? ಎಲ್ಲಿ? ಯಾವಾಗ? ಎಷ್ಟೊತ್ತಿಗೆ? ನೀವು ಫಿಕ್ಸ್ ಮಾಡ್ತೀರಾ? ನಾನು ಫಿಕ್ಸ್ ಮಾಡ್ಲಾ? ಅಲ್ಲಿ ನಾನು ಹೇಳಿದ್ದೇನು ಎಂಬ ಬಗ್ಗೆ ಚರ್ಚಿಸೋಣ ಎಂದು ಸಚಿವರಿಬ್ಬರಿಗೆ ಸವಾಲು ಹಾಕಿದ್ದಾರೆ.

    ಸರಿ, ವಿಕ್ರಂಸಿಂಹ ಮರ ಕಡಿದಿದ್ದರೇ FIR ನಲ್ಲಿ ಅವರ ಹೆಸರಿಲ್ಲ, ಯಾಕೆ? ಆ FIR ಪ್ರತಿ ಲಗತ್ತಿಸಿದ್ದೇನೆ. ಅದನ್ನು ನೋಡಿ, ಆಮೇಲೆ ಮಾತನಾಡಿ, ಎಂದು ಎಕ್ಸ್ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ಜೊತೆ FIR ಪ್ರತಿಯನ್ನು ಅವರು ಟ್ಯಾಗ್ ಮಾಡಿದ್ದಾರೆ.

    ದಲಿತರ ಹೆಸರಿನಲ್ಲಿ ರಾಜಕೀಯ ಬಾಳು ಕಟ್ಟಿಕೊಂಡ ಪರಮೇಶ್ವರ್, ರಾಜಣ್ಣನವರೇ.. ನಿಮ್ಮ ರೋಷಾವೇಷ ಆ ದಲಿತ ಅಧಿಕಾರಿಯನ್ನು ಅಮಾನತು ಮಾಡುವ ಕ್ಷಣದಲ್ಲಿ ಯಾರ ಬೂಟಿನ ಕೆಳಗೆ ಬಿದ್ದು ಹೊರಳಾಡುತ್ತಿತ್ತು? ಒಬ್ಬ ಗಾರ್ಡ್ ಅಮಾನತಿಗೂ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೇ ಆದೇಶ ಹೊರಡಿಸಬೇಕೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಘೋಷವಾಕ್ಯ, ಲೋಗೋ ಅನಾವರಣ

    ಅಹಿಂದ ಅಹಿಂದ ಎಂದು ಬೆಳಗೆದ್ದರೆ ಭಜನೆ ಮಾಡುವ ನೀವು, ಆ ಅಧಿಕಾರಿಯಿಂದ 50 ಲಕ್ಷ ರೂ. ಕಿತ್ತ ನಿಮ್ಮ ನೀತಿಗೆಟ್ಟ ಹೊಲಸು ಶಾಸಕನ ಬಗ್ಗೆ ನಿಮ್ಮ ಮೌನ ಅಸಹ್ಯ. ನಿಮ್ಮದೇ ಲಜ್ಜೆಗೆಟ್ಟ ಸರ್ಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್ ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ? ಎಂದು ಅವರು ಸಚಿವರನ್ನು ಕೇಳಿದ್ದಾರೆ.

    ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದ್ದೇ, ಅವರೇ ಶ್ರೀಮನ್ ಸಿದ್ದರಾಮಣ್ಣ ಎಂದು ಸಿಎಂ ಅವರಿಗೆ ಟಾಂಗ್ ನೀಡಿದ್ದಾರೆ.

  • ಸಿದ್ದರಾಮಯ್ಯ ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧಿಸಿದ್ದಾರೆ – ಪ್ರತಾಪ್‌ ಸಿಂಹ ಪರ ಹೆಚ್‌ಡಿಕೆ ಬ್ಯಾಟಿಂಗ್‌

    ಸಿದ್ದರಾಮಯ್ಯ ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧಿಸಿದ್ದಾರೆ – ಪ್ರತಾಪ್‌ ಸಿಂಹ ಪರ ಹೆಚ್‌ಡಿಕೆ ಬ್ಯಾಟಿಂಗ್‌

    ಬೆಂಗಳೂರು: ಸಂಸದ ಪ್ರತಾಪ್ ಸಿಂಹರ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ (Siddaramaiah) ಅವರೇ ಪ್ಲ್ಯಾನ್ ಮಾಡಿ ವಿಕ್ರಂ ಸಿಂಹರನ್ನ ಬಂಧನ ಮಾಡಿಸಿದ್ದಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

    ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾಗ ಯಾರದ್ದೋ ಮರ ಕಡಿದದ್ದು ಯಾರೋ. ಆದ್ರೆ ಬಂಧನ ಆಗಿದ್ದು ಸಂಸದ ಪ್ರತಾಪ್ ಸಿಂಹ (Pratap Simha) ಸಹೋದರ ವಿಕ್ರಂ ಸಿಂಹ (Vikram Simha). ವಿರೋಧಿಗಳ ಧ್ವನಿ ಅಡಗಿಸೋಕೆ ಕಾಂಗ್ರೆಸ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಅಂತ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಆಪ್‌ ಸರ್ಕಾರದ ಬಹುನಿರೀಕ್ಷಿತ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ – ಸಿಬಿಐ ತನಿಖೆಗೆ ಆದೇಶ

    ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ? ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. 5 ಜನ ಅರಣ್ಯಾಧಿಕಾರಿಗಳನ್ನ (Forest Officers) ಅಮಾನತು ಮಾಡಿದ್ದಾರೆ. ಅಮಾನತುಗೊಳಿಸಲು ಕಾರಣವೇನು? ಹೇಳಿ ಅಂತ ಪ್ರಶ್ನೆ ಮಾಡಿದ್ರು. ಬೇಲೂರಿನ ಒಂದು ಗ್ರಾಮದಲ್ಲಿ ಪೂರ್ವ ಅನುಮತಿ ಇಲ್ಲದೇ ಮರ ಕಡಿದಿರೋ‌ ಹಿನ್ನೆಲೆಯಲ್ಲಿ ವರದಿ ಹೋಗಿದೆ. ವರದಿಯಲ್ಲಿ ಸರ್ಕಾರದ ಭೂಮಿಯಲ್ಲಿ ಕಟ್ಟಿರೋ ಮನೆಗಳ ಸಕ್ರಮೀಕರಣ ಮಾಡೋಕೆ ಮನೆಗಳ ಬಗ್ಗೆ ವರದಿ ತಹಶಿಲ್ದಾರರಿಗೆ ಕೊಟ್ಟಿದ್ದರು. 40 ಎಕರೆ ಭೂಮಿಯನ್ನ 16 ಜನಕ್ಕೆ ಹಕ್ಕುಪತ್ರಗಳನ್ನ ಕೊಟ್ಟಿದ್ದಾರೆ. ಉಳಿದ ‌ 4 ಎಕರೆ 12 ಗುಂಟೆ ಗೋಮಾಳ ಆಗಿದೆ. 16ನೇ ವ್ಯಕ್ತಿ ರಾಕೇಶ್ ಶೆಟ್ಟಿಗೆ ಸರ್ಕಾರದಿಂದಲೇ 4 ಎಕರೆ ಭೂಮಿ ಕೊಟ್ಟಿದ್ದಾರೆ. ಅವರ ಮಗಳು ಜಯಮ್ಮ ವಿಕ್ರಮ ಸಿಂಹಗೆ ಶುಂಠಿ ಬೆಳೆಯೋಕೆ ಲೀಸ್ ಕೊಟ್ಟಿದ್ದಾರೆ‌ .ಲೀಸ್ ಪ್ರಾರಂಭ ಆಗೋದು 2024 ಜನವರಿಯಿಂದ. ಜಯಮ್ಮ ಮತ್ತು ರವಿ ಅನ್ನೋರು ಈ ಮಧ್ಯೆ ಮರ ಕಡಿದಿದ್ದಾರೆ. ಇದಕ್ಕೆ ವಿಕ್ರಂ ಸಿಂಹ ಕಾರಣ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಕೇಸ್;‌ ಸಂಸದ ಪ್ರತಾಪ್‌ ಸಿಂಹ ಸಹೋದರನಿಗೆ ಜಾಮೀನು ಮಂಜೂರು

    ಪ್ರಕರಣದ A1 ಜಯಮ್ಮ, A2 ರಾಕೇಶ್ ಶೆಟ್ಟಿ, A3 ಇರಲಿಲ್ಲ. ಅಲ್ಲಿರೋ ಒಬ್ಬ ಪುಡಾರಿ ಸಿಎಂಗೆ ಮಾಹಿತಿ ಕೊಟ್ಟು ಪ್ರತಾಪ್‌ ಸಿಂಹಗೆ ಪಾಠ ಕಲಿಸೋಕೆ ಅಂತ ಸಿಎಂಗೆ ತಲೆ ತಿಂದ. ಆಗ ಸಿಎಂ ಅಧಿಕಾರಿಗಳಿಗೆ ಕರೆ ಮಾಡಿ ಬೀಟೆ ಮರ ಕಡಿದು ಅ ಜಾಗದಲ್ಲಿ ಹಾಕುವಂತೆ ಹೇಳಿದ್ದರು ಎಂದು ಸಿಎಂ ಮೇಲೆ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಬೇಕಿದ್ದರೇ ಸಿಎಂ ಫೋನ್‌ಕಾಲ್‌ ಲೀಸ್ಟ್ ತೆಗೆಯಿರಿ ಸತ್ಯ ಗೊತ್ತಾಗುತ್ತದೆ. ಎ1, ಎ2ಗೆ ಅರಣ್ಯಾಧಿಕಾರಿಗಳೇ ಬೇಲ್ ಕೊಟ್ಟರು. ಆದರೆ ವಿಕ್ರಂ ಸಿಂಹರ ಬಂಧನ ಮಾಡಿದರು. ಎ1, ಎ2ಗೆ ಕಚೇರಿಯಲ್ಲಿ ಬೇಲ್ ಕೊಟ್ಟು ಇವರನ್ನು ಯಾಕೆ ಅರೆಸ್ಟ್ ಮಾಡಿದಿರಿ? ಎಂದು ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ಉಗಿದರು ಆಗ ಕೋರ್ಟ್ ಬೇಲ್ ಕೊಟ್ಟರು. ಲೀಸ್ ಅಷ್ಟೇ ವಿಕ್ರಂ ತೆಗೆದುಕೊಂಡಿದ್ದ. ಮರ ಕಡಿದಿದ್ದು ಜಯಮ್ಮ ಮತ್ತು ರವಿ ಆದರೆ ಬೀಟೆ ಮರ ಇಲ್ಲಿ ತಂದು ಹಾಕಿ ಅಂದಿದ್ದು ಸರ್ಕಾರ. ಸಿಎಂ ಅವರೇ ಮರ ಕಡಿದು ಹಾಕಿ ಅಂತ ಹೇಳಿ ಬೀಟೆ ಮರ ಹಾಕಿಸಿದ್ದಾರೆ. ಬೀಟೆ ಮರವನ್ನ ಗೆಂಡೆಕೆರೆಯಿಂದ ಕಟ್ ಮಾಡಿಕೊಂಡು ಬಂದು ಇಲ್ಲಿ ಹಾಕಿದ್ದಾರೆ. ಪ್ರತಾಪ್ ಸಿಂಹನ ತಮ್ಮ ಮರ ಕಡಿದಿಲ್ಲ ಆದರೂ ಪ್ರತಾಪ್ ಸಿಂಹನ ಹೆದರಿಸೋಕೆ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಮಂಡ್ಯದಲ್ಲಿ ಪರಿಷತ್ ಸದಸ್ಯರೊಬ್ಬರು ಮರ ಕಡಿದರು. ಅವರ ಮೇಲೆ ಯಾಕೆ ಕ್ರಮ ಆಗಿಲ್ಲ? ಸಿಎಂ, ಗೃಹ ಸಚಿವರೇ ಇದಕ್ಕೆ ಉತ್ತರ ಕೊಡಿ. ಅಮಾನತು ಆಗಿರೋ ಡಿಎಫ್ಓ ದಲಿತ ಸಮುದಾಯ ವ್ಯಕ್ತಿ. ಯಾಕೆ ಅಧಿಕಾರಿ ಅಮಾನತು ಮಾಡಿದ್ರಿ? ಪ್ರಾಮಾಣಿಕ ದಲಿತ ಅಧಿಕಾರಿ. ಅವನ ಮೇಲೆ ಯಾಕೆ ಕ್ರಮ ಆಯ್ತು‌? ಹಾಸನಕ್ಕೆ ಯಾರ ಶಿಫಾರಸು ಮಾಡಿ ಅವನನ್ನ ಹಾಕಿದ್ರಿ? ಆತನನ್ನ ಹಾಸನಕ್ಕೆ ವರ್ಗಾವಣೆ ಮಾಡಿಸಲು ಯಾವ ಎಂಎಲ್ಎ ಕುಳಿತಿದ್ದ? ಎಷ್ಟು ಹಣ ಎಂಎಲ್ಎ ತೆಗೆದುಕೊಂಡ? ಯಶವಂತಪುರದಲ್ಲಿ ಹಣದ ವ್ಯವಹಾರ ಆಗಿದೆ. ಹಾಸನಕ್ಕೆ ಡಿಎಫ್ಓ ನೇಮಕದಲ್ಲಿ ಶಾಸಕ ಹಣ ಪಡೆದಿದ್ದಾನೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜೈಲು ಸೇರಿರುವ ಸಂಜಯ್ ಸಿಂಗ್‍ಗೆ ಎಂಪಿಯಾಗಿ ಮುಂದುವರಿಸಲು ಆಪ್ ನಿರ್ಧಾರ

    ಶಾಸಕರೇ ಹಣ ಡಿಮ್ಯಾಂಡ್ ಮಾಡಿ ಪಡೆದಿದ್ದಾನೆ. ಹಣ ಪಡೆದು ಡಿಎಫ್ಓ ಹಾಸನಕ್ಕೆ ನೇಮಕ ಮಾಡಿದ್ದಾರೆ. ಪಾಪ ಅವನು ಹಣಕೊಟ್ಟು ಈಗ ಅಮಾನತು ಆಗಿದ್ದಾನೆ. ವಿಕ್ರಂ ಸಿಂಹ ತಪ್ಪು ಮಾಡದೇ ಹೋದರು ಅರೆಸ್ಟ್ ಮಾಡುತ್ತೀರಾ? ಸಿಎಂ ಅವರೇ ಬೀಟೆ ಮರ ಕಟ್‌ಮಾಡಿ ಅಲ್ಲಿ ಹಾಕಿ ಅಂತ ಹೇಳಿದ್ದಾರೆ. ನನಗೆ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ. ಬೇಕಿದ್ದರೆ ಕಾಲ್ ಲೀಸ್ಟ್ ತೆಗೆಸಿ. ಬೇಕಿದ್ರೆ ನಾಗಮೋಹನ್ ದಾಸ್ ಕಮಿಟಿಗೆ ತನಿಖೆ ಮಾಡಲು ಹೇಳಿ ಅಥವಾ ಹೊಸ ಆಯೋಗ ರಚಿಸಿ ಎನಿಖೆ ನಡೆಸಿ ಎಂದರು. ಹಾಸನದ ಶಾಸಕರು ಯಾರು ಇದ್ದಾರೆ ಯಾರು ಹಾಸನದಲ್ಲಿ ವರ್ಗಾವಣೆ ನೋಡಿಕೊಳ್ತಿದ್ದಾರೆ? ಅವರೇ ಇದನ್ನ ಮಾಡಿದ್ದಾರೆ. ಅವರೇ ಡಿಎಫ್ಓ ನಿಂದ ಹಣ ಪಡೆದಿದ್ದಾರೆ ಎಂದು ಹೆಸರು ಹೇಳದೇ ಶಿವಲಿಂಗೇಗೌಡ ಮೇಲೆ ಕುಮಾರಸ್ವಾಮಿ ಆರೋಪಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಾಯಕತ್ವದಲ್ಲಿ ಕರ್ನಾಟಕ ಕಾಂಗ್ರೆಸ್‌ ಅಂತ್ಯವಾಗುತ್ತೆ: ಹೆಚ್‌ಡಿಡಿ ಭವಿಷ್ಯ

  • ಪ್ರತಾಪ್ ಸಿಂಹ, ಅವರ ಸಹೋದರ ಹೆದರುವ ಅಗತ್ಯವಿಲ್ಲ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ: ವಿಜಯೇಂದ್ರ

    ಪ್ರತಾಪ್ ಸಿಂಹ, ಅವರ ಸಹೋದರ ಹೆದರುವ ಅಗತ್ಯವಿಲ್ಲ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ: ವಿಜಯೇಂದ್ರ

    ದಾವಣಗೆರೆ: ಕಾಂಗ್ರೆಸ್ (Congress) ಪಕ್ಷ ಹತಾಶೆಯ ಮನೋಭಾವದಲ್ಲಿದೆ. ಪ್ರತಾಪ್ ಸಿಂಹ (Pratap Simha) ಅವರ ತಮ್ಮನ ವಿಚಾರದಲ್ಲಿ ಇದೊಂದು ರಾಜಕೀಯ ಪ್ರೇರಿತವಾದ ನಡೆ ಎಂದು ಅನಕ್ಷರಸ್ಥರೂ ಹೇಳುತ್ತಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ವಾಗ್ದಾಳಿ ನಡೆಸಿದ್ದಾರೆ.

    ದಾವಣಗೆರೆಯ ಆನಗೋಡು ಮತ್ತು ಅಣಜಿ ನಡುವಿನ ಜಮಾಪುರ ಗ್ರಾಮದಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿ ಬಳಿಕ ವಿಕ್ರಂ ಸಿಂಹ ಅವರ ಬಂಧನದ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಲೋಕಸಭಾ ಚುನಾವಣೆ ಹತ್ತಿರದಲ್ಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವನ್ನು ಜನ ಗಮನಿಸಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದೆ. ಪ್ರತಾಪ್ ಸಿಂಹ ಹಾಗೂ ಅವರ ಸಹೋದರ ಹೆದರುವ ಪ್ರಶ್ನೆಯೇ ಇಲ್ಲ. ಇದೆಲ್ಲದನ್ನೂ ಅವರು ಎದುರಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಸಿಎಂಗೆ ಪತ್ರ: ಯಶ್‌ಪಾಲ್‌ ಸುವರ್ಣ

    ರಾಜ್ಯ ಸರ್ಕಾರ ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು. ರೈತ, ಮರುಳಸಿದ್ದಪ್ಪ ಅವರು ಬೆಳೆದ ಮೆಕ್ಕೆ ಜೋಳ ಸಂಪೂರ್ಣವಾಗಿ ನಾಶವಾಗಿದೆ. ಎಕರೆಗೆ 25ರಿಂದ 30 ಸಾವಿರ ರೂ. ಖರ್ಚು ಮಾಡಿದ್ದಾರೆ. ಮರುಳಸಿದ್ದಪ್ಪ ಮಾತ್ರವಲ್ಲದೇ ಅವರ ಕುಟುಂಬಸ್ಥರಾದ ಸಿದ್ದಮ್ಮನ ಕಣ್ಣಲ್ಲೂ ನೀರನ್ನು ನೋಡಿದ್ದೀರಿ. ರೈತರ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

    ರಾಜ್ಯ ಸರ್ಕಾರ ಕೇವಲ ರೈತರಿಗೆ ಪರಿಹಾರ ಘೋಷಿಸಿದರೆ ಸಾಕಾಗುವುದಿಲ್ಲ. ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳಂತೆ ಡಿಬಿಟಿ (ನೇರ ಸೌಲಭ್ಯ ವರ್ಗಾವಣೆ) ಮೂಲಕ ತಕ್ಷಣವೇ ರೈತರನ್ನು ತಲುಪುವಂತಾಗಬೇಕು. ಕಿಸಾನ್ ಸಮ್ಮಾನ್ ಯೋಜನೆಯಡಿ ಡಿಬಿಟಿ ಮೂಲಕ ಕೋಟ್ಯಂತರ ರೈತರಿಗೆ 6 ಸಾವಿರ ರೂ. ಜಮಾ ಮಾಡುತ್ತಾರೆ. ಯಡಿಯೂರಪ್ಪ ಅವರು 4 ಸಾವಿರ ಕೊಡುತ್ತಿದ್ದರು. ಅದನ್ನು ಸಿದ್ದರಾಮಯ್ಯ ಸರ್ಕಾರ ಬಂದ್ ಮಾಡಿದೆ ಎಂದು ಕಿಡಿಕಾರಿದ್ದಾರೆ.

    ಕೇಂದ್ರ ಸರ್ಕಾರದ ಯೋಜನೆಗಳು ಮಧ್ಯವರ್ತಿಗಳಿಲ್ಲದೆ ನೇರವಾಗಿ ಬಡವರ ಖಾತೆಗೆ ತಲುಪುತ್ತಿದೆ. ರಾಜ್ಯ ಸರ್ಕಾರ ಜಾಹೀರಾತು ಕೊಟ್ಟು ಪ್ರಚಾರ ಪಡೆಯುವ ಬದಲಾಗಿ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಿಸಬೇಕು. ಹೊಸ ವರ್ಷದಲ್ಲಿ ನಮ್ಮೆಲ್ಲ ಮುಖಂಡರ ಜೊತೆ ಬೂಟಾಟಿಕೆ ಮಾಡಲು ಬರಗಾಲ ವೀಕ್ಷಣೆಗೆ ಬಂದಿಲ್ಲ. ಇವತ್ತಿನ ಭೇಟಿ ಮೂಲಕ ರಾಜ್ಯ ಸರ್ಕಾರವನ್ನು ಎಚ್ಚರಿಸಬೇಕು. ರಾಜ್ಯದಲ್ಲಿ ಭೀಕರ ಬರಗಾಲದ ಪರಿಣಾಮ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವುದೇ ಮುಖ್ಯಮಂತ್ರಿಗಳ ಆದ್ಯತೆಯಾಗಿದೆ ಎಂದು ಅವರು ಕುಟುಕಿದ್ದಾರೆ.

    ರೈತಾಪಿ ವರ್ಗದಲ್ಲಿ ಎಲ್ಲಾ ಸಮಾಜ, ಎಲ್ಲಾ ವರ್ಗ, ಎಲ್ಲಾ ಧರ್ಮದವರೂ ಇರುತ್ತಾರೆ. ರೈತರೆಂದರೆ ಕೇವಲ ಹಿಂದೂಗಳು, ಲಿಂಗಾಯತರಲ್ಲ. ಇವತ್ತು ದಲಿತ ವರ್ಗದ ರೈತ ಕುಟುಂಬದವರನ್ನು ಭೇಟಿ ಮಾಡಿದ್ದೇವೆ. ರಾಜ್ಯವು ಹೊಸ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ರಾಜ್ಯದ ರೈತರೇ ತಮ್ಮ ಆದ್ಯತೆ ಆಗಿರಲಿ. ರೈತರಿಗೆ ಸ್ಪಂದಿಸಬೇಕು, ನೀವು ಅಲ್ಪಸಂಖ್ಯಾತರಿಗೆ ಸಾವಿರ ಕೋಟಿ, 10 ಸಾವಿರ ಕೋಟಿ ರೂ. ಘೋಷಿಸುವಾಗ ಕೇಂದ್ರವನ್ನು ಕೇಳುತ್ತಿಲ್ಲ. ರೈತರ ವಿಷಯ ಬಂದಾಗ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ಕಡೆ ಬೆರಳು ಮಾಡಿ ತೋರಿಸುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಸಂಸದ ಜಿಎಂ.ಸಿದ್ದೇಶ್ವರ್, ಶಾಸಕ ಬಿ.ಪಿ.ಹರೀಶ್, ಮಾಜಿ ಸಚಿವ ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು. ಇದನ್ನೂ ಓದಿ: ನನ್ನನ್ನು ರಾಜಕೀಯವಾಗಿ ಮುಗಿಸಬೇಕೆಂದು ದೊಡ್ಡ ಷಡ್ಯಂತ್ರ ನಡೀತಿದೆ: ಡಿಕೆಶಿ

  • ಸಹೋದರನಿಗೆ ಜಾಮೀನು- ನ್ಯಾಯಾಧೀಶರಿಗೆ ಪ್ರತಾಪ್ ಸಿಂಹ ಧನ್ಯವಾದ

    ಸಹೋದರನಿಗೆ ಜಾಮೀನು- ನ್ಯಾಯಾಧೀಶರಿಗೆ ಪ್ರತಾಪ್ ಸಿಂಹ ಧನ್ಯವಾದ

    ಮೈಸೂರು: ಸಹೋದರ ವಿಕ್ರಂ ಸಿಂಹಗೆ (Vikram Simha) ಜಾಮೀನು ನೀಡಿದ ಸಿಕ್ಕ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ (Pratap Simha) ಅವರು ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

    ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಮ್ಮ ಬೆನ್ನಿಗೆ ನಿಂತ ಎಲ್ಲರಿಗೂ ಹಗೂ ನ್ಯಾಯಾಧೀಶರಿಗೂ ಧನ್ಯವಾದಗಳು ಎಂದಿದ್ದಾರೆ.

    ಎಕ್ಸ್ ನಲ್ಲೇನಿದೆ..?: ನನ್ನ ತಮ್ಮ ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಕರೆಗಳ ಮೂಲಕ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ನ್ಯಾಯದ ದಾರಿಯಲ್ಲಿದ್ದೇನೆ, ಸತ್ಯಕ್ಕೆ ಜಯ ಸಿಕ್ಕಿದೆ: ವಿಕ್ರಂ ಸಿಂಹ

    ಏನಿದು ಪ್ರಕರಣ?: ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‍ಎಫ್‍ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.

    ಜಾಮೀನು ಸಿಕ್ಕಿದ್ದು ಹೇಗೆ?: ವಿಕ್ರಂಸಿಂಹ ವಿರುದ್ದ ಫಾರೆಸ್ಟ್ ಕಾಯ್ದೆ ಕಲಂ 33(5), ಕಲಂ (80), ಕಲಂ (77 ಂ), ಕಲಂ (77 ಉ) ಕಲಂ 62 ಅಡಿಯಲ್ಲಿ ರೂಲ್ಸ್ 144 ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಇವು ಜಾಮೀನಿಗೆ ಅರ್ಹವಾಗಿರುವುದರಿಂದ ನ್ಯಾಯಾಧೀಶರು ಯಾವುದೇ ಷರತ್ತುಗಳನ್ನು ವಿಧಿಸದೇ ಜಾಮೀನು ಮಂಜೂರು ಮಾಡಿದ್ದಾರೆ.

  • ವಿಕ್ರಂ ಸಿಂಹ ಬಂಧನದ ಹಿಂದೆ ಇದ್ಯಾ ರಾಜಕೀಯ ಷಡ್ಯಂತ್ರ? – ಅಮಾನತಾದ ಅಧಿಕಾರಿಗಳಿಂದಲೇ ಬಂಧನ

    ವಿಕ್ರಂ ಸಿಂಹ ಬಂಧನದ ಹಿಂದೆ ಇದ್ಯಾ ರಾಜಕೀಯ ಷಡ್ಯಂತ್ರ? – ಅಮಾನತಾದ ಅಧಿಕಾರಿಗಳಿಂದಲೇ ಬಂಧನ

    – ನನ್ನ ವಿರುದ್ಧ ರಾಜಕೀಯ ಪಿತೂರಿ : ವಿಕ್ರಂ ಸಿಂಹ
    – ಷರತ್ತು ವಿಧಿಸದೇ ಜಾಮೀನು ಮಂಜೂರು

    ಹಾಸನ: ಮೈಸೂರು ಸಂಸದ ಪ್ರತಾಪ್‌ ಸಿಂಹ (Pratap Simha) ಸಹೋದರ ವಿಕ್ರಂ ಸಿಂಹ (Viram Simha) ಬಂಧನದ ಹಿಂದೆ ರಾಜಕೀಯ ಷಡ್ಯಂತ್ರ ಇದ್ಯಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.  ಅಮಾನತಾದ ಅಧಿಕಾರಿಗಳೇ ವಿಕ್ರಂ ಸಿಂಹ  ಅವರನ್ನು ಬಂಧಿಸಿದ್ದರಿಂದ ಈ ಪ್ರಶ್ನೆ ಸೃಷ್ಟಿಯಾಗಿದೆ.

    ಹೌದು. ಅಕ್ರಮವಾಗಿ ನೂರಾರು ಮರ (Tree) ಕಡಿಸಿದ ಆರೋಪದ ಮೇಲೆ ಶನಿವಾರ ಬಂಧನಕ್ಕೆ ಒಳಗಾದ ವಿಕ್ರಂ ಸಿಂಹ ಅವರಿಗೆ ಜಾಮೀನು ಸಿಕ್ಕಿದೆ. ಭಾನುವಾರ ಬೇಲೂರಿನ ಜೆಎಂಎಫ್‌ಸಿ ಕೋರ್ಟ್ ನ್ಯಾಯಾಧೀಶರ ಮನೆಯಲ್ಲಿ ವಿಕ್ರಂ ಸಿಂಹ ಅವರನ್ನು ಪೊಲೀಸರು ಹಾಜರುಪಡಿಸಿದರು.

    ಯಾವುದೇ ಷರತ್ತುಗಳನ್ನು ವಿಧಿಸದೇ ವಿಕ್ರಂ ಸಿಂಹಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು. ಈ ಬೆಳವಣಿಗೆಯಿಂದ ವಿಕ್ರಂ ಸಿಂಹ ಬಂಧಿಸಿದ್ದ ಅರಣ್ಯಾಧಿಕಾರಿಗಳು ತೀವ್ರ ಮುಜುಗರಕ್ಕೊಳಗಾದರು. ವಿಕ್ರಂಸಿಂಹ ಪ್ರತಿಕ್ರಿಯಿಸಿ, ನಾನು ತಪ್ಪು ಮಾಡಿಲ್ಲ. ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಖುಷಿ ವ್ಯಕ್ತಪಡಿಸಿದರು. ನಮ್ಮ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಪುನರುಚ್ಚರಿಸಿದರು.

    ಸಂಸದ ಪ್ರತಾಪ್ ಸಿಂಹ, ತಲೆಮರೆಸಿಕೊಳ್ಳುವ ಯಾವ ಕೆಲಸವನ್ನು ನನ್ನ ತಮ್ಮ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದ ಎಂದು ಹೇಳಿದರು.  ಇದನ್ನೂ ಓದಿ: ಜ.12 ರಂದು ದೇಶದ ಅತಿ ಉದ್ದದ ಸಮುದ್ರ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಮೋದಿ

     

    ಅಮಾನತಾದ ಅಧಿಕಾರಿಗಳಿಂದಲೇ ಬಂಧನ:
    ಮರ ಕಡಿದ ಪ್ರಕರಣ ಸರ್ಕಾರದ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ತಹಸೀಲ್ದಾರ್ ವರದಿ ಆಧರಿಸಿ ಡಿಎಫ್‌ಓ, ಎಸಿಎಫ್, ಆರ್‌ಎಫ್‌ಓ, ಡಿ‌ಆರ್‌ಎಫ್‌ಓ ಹಾಗೂ ಓರ್ವ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಆದರೆ ಇಡೀ ಪ್ರಕರಣದಲ್ಲಿ ವಿಕ್ರಂಸಿಂಹ ವಿರುದ್ಧ ಪ್ರಕರಣ ದಾಖಲಾಗಿರಲಿಲ್ಲ. ಆದರೆ ಅಮಾನತಾಗಿದ್ದ ಎಸಿಎಫ್ ಪ್ರಭು ಬಿರಾದರ್, ಆರ್‌ಎಫ್‌ಓ ವಿನಯ್‌ಕುಮಾರ್ ವಿಕ್ರಂಸಿಂಹ ಅವರನ್ನು ಬಂಧಿಸಿದ್ದು ಅಚ್ಚರಿಗೆ ಕಾರಣವಾಗಿತ್ತು.

    ಇದೇ ಅಧಿಕಾರಿಗಳನ್ನು ಅಮಾನತು ಮಾಡಿದ್ದರೂ ಅಧಿಕಾರಿಗಳಿಗೆ ಅಮಾನತಾದ ಬಗ್ಗೆ ಅಧಿಕೃತವಾಗಿ ಯಾವುದೇ ಆದೇಶ ಬಂದಿರಲಿಲ್ಲ.ಈ ಕಾರಣಕ್ಕೆ ಇನ್ನೂ ಅಧಿಕಾರಿಗಳು ಕರ್ತವ್ಯದಲ್ಲಿದ್ದರು. ಇದನ್ನೂ ಗಮನಿಸಿದರೆ ಮೇಲ್ನೋಟಕ್ಕೆ ಅಮಾನತು ಮಾಡಿ ಅಧಿಕಾರಿಗಳಿಗೆ ಆದೇಶ ಜಾರಿ ಮಾಡದೇ ಸರ್ಕಾರ ಕಣ್ಣೊರೆಸುವ ತಂತ್ರ ಮಾಡಿತಾ ಎಂಬ ಅನುಮಾನ ದಟ್ಟವಾಗಿದೆ.

     

    ಜಾಮೀನು ಸಿಕ್ಕಿದ್ದು ಹೇಗೆ?
    ವಿಕ್ರಂಸಿಂಹ ವಿರುದ್ದ ಫಾರೆಸ್ಟ್ ಕಾಯ್ದೆ ಕಲಂ 33(5), ಕಲಂ (80), ಕಲಂ (77 A), ಕಲಂ (77 G) ಕಲಂ 62 ಅಡಿಯಲ್ಲಿ ರೂಲ್ಸ್ 144 ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಇವು ಜಾಮೀನಿಗೆ ಅರ್ಹವಾಗಿರುವುದರುಂದ  ಆಗಿರುವುದರಿಂದ ನ್ಯಾಯಾಧೀಶರು ಯಾವುದೇ ಷರತ್ತುಗಳನ್ನು ವಿಧಿಸದೇ ಜಾಮೀನು ಮಂಜೂರು ಮಾಡಿದ್ದಾರೆ.

    ಶುಂಠಿ ಬೆಳೆಯಲು ಜಮೀನು ಒಪ್ಪಂದ ಮಾಡಿಕೊಂಡಿದ್ದೇ ವಿಕ್ರಂಸಿಂಹ ಅವರಿಗೆ ಮುಳುವಾಗಿದೆ. ಎಫ್‌ಐಆರ್ ಮಾಡದೇ ಹಾಗೂ ಅಮಾನತಾದ ಅಧಿಕಾರಿಗಳೇ ಬಂಧನ ಮಾಡಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ಕಾಣದ ಕೈಗಳ ಪ್ರಭಾವ ಇದೆ ಎಂಬ ಆರೋಪ ಬಂದಿದ್ದು ಮುಂದಿನ ದಿನಗಳಲ್ಲಿ ನಡೆಯುವ ಪ್ರಕರಣದ ತನಿಖೆಯಿಂದ ನಿಜಾಂಶ ಹೊರಬೀಳಲಿದೆ.

     

  • ನಾನು ನ್ಯಾಯದ ದಾರಿಯಲ್ಲಿದ್ದೇನೆ, ಸತ್ಯಕ್ಕೆ ಜಯ ಸಿಕ್ಕಿದೆ: ವಿಕ್ರಂ ಸಿಂಹ

    ನಾನು ನ್ಯಾಯದ ದಾರಿಯಲ್ಲಿದ್ದೇನೆ, ಸತ್ಯಕ್ಕೆ ಜಯ ಸಿಕ್ಕಿದೆ: ವಿಕ್ರಂ ಸಿಂಹ

    ಹಾಸನ: ಸತ್ಯಕ್ಕೆ ಜಯ ಸಿಕ್ಕಿದೆ. ನನಗೆ ನ್ಯಾಯ ಸಿಗಲು ನೀವೆಲ್ಲರೂ ಸಹಕಾರ ಕೊಟ್ಟಿದ್ದೀರಿ. ನನಗೆ ತುಂಬಾ ಖುಷಿಯಾಗಿದೆ ಎಂದು ಸಂಸದ ಪ್ರತಾಪ್ ಸಿಂಹ (Prathap Simha) ಅವರ ಸಹೋದರ ವಿಕ್ರಂ ಸಿಂಹ (Vikram Simha) ಹೇಳಿಕೆ ನೀಡಿದ್ದಾರೆ.

    ಮರಗಳ್ಳತನ ಪ್ರಕರಣದಲ್ಲಿ ಜಾಮೀನು (Bail) ಮಂಜೂರಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬರೀ ಬೆಳೆ ಬೆಳೆಯಲು ಹೋದವನು. ಆ ಬೆಳೆ ಬೆಳೆಯಲು ಹೋದವನಿಗೆ ಈ ತರಹದ ಆರೋಪಗಳನ್ನು ಎದುರಿಸಬೇಕಾಗಿ ಬಂತು. ಇದೆಲ್ಲಾ ಒಂದು ರೀತಿಯ ರಾಜಕೀಯ ಪಿತೂರಿ. ಸತ್ಯಕ್ಕೆ ಜಯ ನ್ಯಾಯಾಲಯದಲ್ಲಿ ಸಿಕ್ಕಿದೆ ಎಂದರು. ಇದನ್ನೂ ಓದಿ: ಹೆಚ್‌ಡಿಕೆ ಬಗ್ಗೆ ಮಾತನಾಡದೆ ಇರುವುದೇ ಒಳ್ಳೆಯದು: ಜಿ.ಪರಮೇಶ್ವರ್‌ ಟಾಂಗ್‌

    ಇದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ನಾನು ನ್ಯಾಯದ ದಾರಿಯಲ್ಲಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ಜಾಮೀನು ಸಿಕ್ಕಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ನ್ಯಾಯ ಸಿಗುತ್ತೆಯೆಂಬ ಭರವಸೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಮರಗಳ್ಳತನ ಕೇಸ್;‌ ಸಂಸದ ಪ್ರತಾಪ್‌ ಸಿಂಹ ಸಹೋದರನಿಗೆ ಜಾಮೀನು ಮಂಜೂರು

    ಭಾನುವಾರ ರಜಾ ಹಿನ್ನೆಲೆ ವಿಕ್ರಂ ಸಿಂಹ ಅವರನ್ನು ಹಾಸನದ ಬೇಲೂರಿನಲ್ಲಿರುವ ನ್ಯಾಯಾಧೀಶರ ನಿವಾಸದ ಮುಂದೆ ಅರಣ್ಯ ಅಧಿಕಾರಿಗಳು ಹಾಜರುಪಡಿಸಿದ್ದರು. ಜೆಎಂಎಫ್‌ಸಿ ನ್ಯಾಯಾಧೀಶರಾದ ಪ್ರಕಾಶ್ ನಾಯ್ಕ ಎದುರು ವಿಕ್ರಂ ಸಿಂಹನನ್ನು ಹಾಜರು ಪಡಿಸಿದ್ದು, ವಿಚಾರಣೆ ಬಳಿಕ ಯಾವುದೇ ಷರತ್ತು ವಿಧಿಸದೇ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹರನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ: ಭಗವಂತ ಖೂಬಾ

  • ಮರಗಳ್ಳತನ ಕೇಸ್;‌ ಸಂಸದ ಪ್ರತಾಪ್‌ ಸಿಂಹ ಸಹೋದರನಿಗೆ ಜಾಮೀನು ಮಂಜೂರು

    ಮರಗಳ್ಳತನ ಕೇಸ್;‌ ಸಂಸದ ಪ್ರತಾಪ್‌ ಸಿಂಹ ಸಹೋದರನಿಗೆ ಜಾಮೀನು ಮಂಜೂರು

    ಹಾಸನ: ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ.

    ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದರು.

    ಏನಿದು ಪ್ರಕರಣ?
    ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು.

    ಸಹೋದರನ ಬಂಧನ ಕುರಿತು ಮಾತನಾಡಿದ್ದ ಸಂಸದ ಪ್ರತಾಪ್‌ ಸಿಂಹ, ಸಿದ್ದರಾಮಯ್ಯ ಅವರು ತಮ್ಮ ಮಗನನ್ನು ಎಂಪಿ ಮಾಡಲು ನಮ್ಮನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ರಾಜಕೀಯವಾಗಿ ನಮ್ಮನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.

  • ಪ್ರತಾಪ್ ಸಿಂಹರನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ: ಭಗವಂತ ಖೂಬಾ

    ಪ್ರತಾಪ್ ಸಿಂಹರನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ: ಭಗವಂತ ಖೂಬಾ

    ಬೀದರ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ವಿಕ್ರಂ ಸಿಂಹರನ್ನು ಬಂಧಿಸಿರುವುದು ಕಾನೂನಿನ ವಿರುದ್ಧವಾಗಿದೆ. ಎಫ್‍ಐಆರ್‍ನಲ್ಲಿ ಹೆಸರಿಲ್ಲದಿದ್ದರೂ ಅವರನ್ನು ಬಂಧಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರು ಆರೋಪಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅವರಿಗೆ ಕೆಟ್ಟ ಹೆಸರು ತರಲು ಹೀಗೆ ಮಾಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯನವರ ಕುತಂತ್ರವಾಗಿದೆ. ಈ ರೀತಿ ಕುತಂತ್ರ ಮಾಡಿದರೂ ಸಹ ಪ್ರತಾಪ್ ಸಿಂಹ ಅವರನ್ನು ಅಲ್ಲಿಯ ಜನ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ

    ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸರು ಯಾರ ಮೂಗಿನ ಅಳತೆ ಮೇಲೆ ಕೆಲಸ ಮಾಡುತ್ತಿರುವುದು ಗೊತ್ತಿದೆ. ಇದು ಸರಿಯಾದ ನಡೆಯಲ್ಲ. ಪ್ರತಾಪ್ ಸಿಂಹ ಅವರೇ ನೀವು ಎದೆಗುಂದುವುದು ಬೇಡ, ಸತ್ಯಕ್ಕೆ ಜಯವಾಗಲಿದೆ ಎಂದಿದ್ದಾರೆ.

    ಕಾನೂನು ಎಲ್ಲರಿಗೂ ಒಂದೇ ಎನ್ನುವುದು ದೇಶದ ಜನರಿಗೆ ಗೊತ್ತಿದೆ, ನಿಮ್ಮ ಕ್ಷೇತ್ರದಲ್ಲಿ ದಲಿತರ ಮೇಲೆ ಹಾಗೂ ಸಾಮಾನ್ಯರಿಗೆ ಎಷ್ಟು ದೌರ್ಜನ್ಯವಾಗುತ್ತಿದೆ ಗೊತ್ತಾ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

  • ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ

    ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ

    – ಯಾರ‍್ಯಾರ ಕೈವಾಡವಿದೆ ಎಲ್ಲವನ್ನೂ ಹೇಳ್ತೀನಿ

    ಹಾಸನ: ಮರಗಳ್ಳತನ ಪ್ರಕರಣದಲ್ಲಿ ತನ್ನನ್ನು ಪೊಲೀಸರು ಬಂಧಿಸಿರುವುದಕ್ಕೆ ವಿಕ್ರಂ ಸಿಂಹ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಅಣ್ಣನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನುವುದನ್ನು ಬಹಿರಂಗವಾಗಿಯೇ ಹೇಳುತ್ತೇನೆ ಎಂದು ವಿಕ್ರಂ ಸಿಂಹ (Vikram Simha) ಹೇಳಿಕೆ ನೀಡಿದ್ದಾರೆ.

    ಹಾಸನದ ಹಿಮ್ಸ್‌ನಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿಕ್ರಂ ಸಿಂಹ ಅಸಮಾಧಾನ ಹೊರಹಾಕಿದ್ದಾರೆ. ತುಂಬಾ ವಿಷಯಗಳಿವೆ. ಕಾಲ ಬರಲಿ ಎಲ್ಲಾ ಹೇಳ್ತೇನೆ. ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನುವುದನ್ನ ಬಹಿರಂಗವಾಗಿಯೇ ಹೇಳ್ತೀನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಗನ ಎಂಪಿ ಮಾಡಲು ನನ್ನ ಮೇಲೆ ಆರೋಪ ಮಾಡ್ತಿದ್ದೀರಿ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

    ಯಾರ‍್ಯಾರ ಕೈವಾಡವಿದೆ ಎಲ್ಲವನ್ನೂ ಹೇಳ್ತೇನೆ. ಯಾರನ್ನ ನೀವು ನಿಷ್ಠಾವಂತ ಅಧಿಕಾರಿ ಎನ್ನುತ್ತಿದ್ದೀರಿ? ಅವರ ನಿಷ್ಠೆ ಯಾರಿಗೆ ಅನ್ನುವುದನ್ನು ಹೇಳುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

    ನಮ್ಮನ್ನ ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಅಣ್ಣನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇದೆಲ್ಲಾ ವ್ಯವಸ್ಥಿತವಾಗಿಯೇ ಆಗ್ತಾ ಇದೆ. ಯಾರು ನಿಷ್ಠಾವಂತ ಅಧಿಕಾರಿ ಎನ್ನುತ್ತಿದ್ದೀರಿ ಅವರ ಬಗ್ಗೆ ಹೇಳ್ತೇನೆ. ಮಾಧ್ಯಮದ ಮುಂದೆ ಬರುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಹೋದರನ ಬಂಧನ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್‌ ಸಿಂಹ

    ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ. ಇದನ್ನೂ ಓದಿ: ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು.

  • ಸಹೋದರನ ಬಂಧನ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್‌ ಸಿಂಹ

    ಸಹೋದರನ ಬಂಧನ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್‌ ಸಿಂಹ

    ಬೆಂಗಳೂರು: ಮರಗಳ್ಳತನ ಪ್ರಕರಣದಲ್ಲಿ ತನ್ನ ಸಹೋದರ ವಿಕ್ರಂ ಸಿಂಹನನ್ನು (Vikram Simha) ಬಂಧಿಸಿರುವ ಬಗ್ಗೆ ಸಂಸದ ಪ್ರತಾಪ್‌ ಸಿಂಹ (Pratap Simha) ಕೊನೆಗೂ ಮೌನ ಮುರಿದಿದ್ದಾರೆ.

    ಪ್ರಕರಣದ ಎಫ್‌ಐಆರ್‌ ಪ್ರತಿಯನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಯನ್ನು ಹಂಚಿಕೊಂಡಿರುವ ಸಂಸದ ‘ಎಫ್‌ಐಆರ್‌’ ಎಂದಷ್ಟೇ ಬರೆದಿದ್ದಾರೆ. ಇದನ್ನೂ ಓದಿ: ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್

    ಎಫ್‌ಐಆರ್‌ ಪ್ರತಿಯಲ್ಲಿ ಪ್ರಕರಣದ ಮೊದಲ ಆರೋಪಿ ರಾಕೇಶ್‌ ಶೆಟ್ಟಿ ಎಂದಿದೆ. 2ನೇ ಆರೋಪಿ ಜಯಮ್ಮ ಎಂದು ಉಲ್ಲೇಖಿಸಲಾಗಿದೆ. ಪ್ರಕರಣದ ಆರೋಪಿ ಅಲ್ಲದೇ ಇದ್ದರೂ ವಿಕ್ರಂ ಬಂಧನ ಎಂದು ಮಾರ್ಮಿಕವಾಗಿ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

    ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

    ಏನಿದು ಪ್ರಕರಣ?
    ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ