Tag: Vikramaditya Singh

  • ಯುಪಿ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!

    ಯುಪಿ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!

    ನವದೆಹಲಿ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಇನ್ಮುಂದೆ ಆಹಾರ ಮಳಿಗೆ, ಹೊಟೇಲ್ ಹಾಗೂ ಬೀದಿ ವ್ಯಾಪಾರಿಗಳ ಮಳಿಗೆಗಳ ಹೆಸರು ಪದರ್ಶನ ಕಡ್ಡಾಯ ಎಂದು ಇಲ್ಲಿನ ನಗರಾಭಿವೃದ್ಧಿ ಸಚಿವ ವಿಕ್ರಮಾದಿತ್ಯ ಸಿಂಗ್ (Vikramaditya Singh) ಆದೇಶ ಹೊರಡಿಸಿದ್ದಾರೆ.

    ಇತ್ತೀಚಿಗಷ್ಟೇ ಉತ್ತರ ಪ್ರದೇಶ (Uttara Pradesh) ಸರ್ಕಾರವು ಬೀದಿ ಬದಿಯ ವ್ಯಾಪಾರಿಗಳು ತಮ್ಮ ಹೆಸರು ಹಾಗೂ ವ್ಯಾಪಾರದ ಗುರುತನ್ನು ಅಳವಡಿಸುವುದು ಕಡ್ಡಾಯವೆಂದು ಕಟ್ಟುನಿಟ್ಟಾದ ಆದೇಶವನ್ನು ಹೊರಡಿಸಿತ್ತು.ಇದನ್ನೂ ಓದಿ: ಸೆ.27ರಂದು ತುಮಕೂರು- ಯಶವಂತಪುರ ಮೆಮು ರೈಲಿಗೆ ಚಾಲನೆ

    ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ವಿಕ್ರಮಾದಿತ್ಯ ಸಿಂಗ್ ಮಾತಾನಾಡಿ, ಇತ್ತೀಚಿಗೆ ರಾಜಾದ್ಯಂತ ಜನರು ಇದಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ವ್ಯಕ್ತಪಡಿಸಿದ್ದರು. ಅವುಗಳನ್ನು ಗಮನದಲ್ಲಿಟ್ಟುಕೊಂಡು ಮಂಗಳವಾರ ನಡೆದ ನಗರಾಭಿವೃದ್ಧಿ ಇಲಾಖೆ (Urban Development Department) ಹಾಗೂ ಶಿಮ್ಲಾ ಮಹಾನಗರ ಪಾಲಿಕೆ (Shimla Municipal Corporation) ಸಭೆಯಲ್ಲಿ ನಿರ್ಧಾರಿಸಿದೆ. ಸರಕು ಸಾಮಗ್ರಿಗಳ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಆಹಾರ ಪದಾರ್ಥ ಮಾರಾಟಗಾರರು ತಮ್ಮ ಗುರುತನ್ನು ಪ್ರದರ್ಶಿಸಬೇಕೆಂದು ಸಚಿವರು ಆದೇಶದಲ್ಲಿ ತಿಳಿಸಿದ್ದಾರೆ.

    ತಿನ್ನುವ ಆಹಾರವು ಶುಚಿಯಾಗಿದೆಯಾ? ಗುಣಮಟ್ಟವಾಗಿದೆಯಾ? ಎನ್ನುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳುತ್ತದೆ. ಜೊತೆಗೆ ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (Food and Civil Supplies Department) ಪರಿಶೀಲಿಸುತ್ತದೆ ಎಂದು ತಿಳಿಸಿದ್ದಾರೆ.

    ತಮ್ಮ ಗುರುತನ್ನು ಪ್ರದರ್ಶಿಸುವಾಗ ನೋಂದಣಿ ಸಂಖ್ಯೆ ಹಾಗೂ ವ್ಯಾಪಾರಿಯ ಭಾವಚಿತ್ರವನ್ನು ಪದರ್ಶಿಸಬೇಕೆಂದು ತಿಳಿಸಿರುವುದಾಗಿ ಮೂಲಗಳು ತಿಳಿಸಿವೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆಯಾದಾಗ ಕ್ರಮ ಕೈಗೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಸಿಎಂ, ಪುತ್ರ ಯತೀಂದ್ರ, ಪತ್ನಿ ಪಾರ್ವತಿ ಮೇಲೆ ಎಫ್‌ಐಆರ್‌ ದಾಖಲಿಸಿ: ಪ್ರದೀಪ್‌ ಕುಮಾರ್‌ ದೂರು

  • ಕಂಗನಾ ಮಳೆಗಾಲದಲ್ಲಿ ಹೊರಬರುವ ಕಪ್ಪೆಯಂತೆ, ಬೇಗನೆ ಕಣ್ಮರೆಯಾಗ್ತಾರೆ: ʻಕೈʼ ಸಚಿವ ಲೇವಡಿ

    ಕಂಗನಾ ಮಳೆಗಾಲದಲ್ಲಿ ಹೊರಬರುವ ಕಪ್ಪೆಯಂತೆ, ಬೇಗನೆ ಕಣ್ಮರೆಯಾಗ್ತಾರೆ: ʻಕೈʼ ಸಚಿವ ಲೇವಡಿ

    ಶಿಮ್ಲಾ: ಕಂಗನಾ ರಣಾವತ್‌ (Kangana Ranaut) ಅವರು ಮಳೆಗಾಲದಲ್ಲಿ ಹೊರ ಬರುವ ಕಪ್ಪೆಯಂತೆ ಬೇಗನೆ ಕಣ್ಮರೆಯಾಗ್ತಾರೆ ಎಂದು ಹಿಮಾಚಲ ಪ್ರದೇಶದ ಪಿಡಬ್ಲ್ಯೂಡಿ ಸಚಿವ ಮತ್ತು ಮಂಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ (Vikramaditya Singh) ಟೀಕಿಸಿದ್ದಾರೆ.

    ಮಂಡಿ ಕ್ಷೇತ್ರದಲ್ಲಿ  (Mandi Constituency) ಮತಯಾಚನೆ ವೇಳೆ ಮಾತನಾಡಿರುವ ಅವರು ಕಂಗನಾ ವಿರುದ್ಧ ಲೇವಡಿ ಮಾಡಿದ್ದಾರೆ. ಕಂಗನಾ ರಣಾವತ್‌ ಅವರು ಮಳೆಗಾಲದಲ್ಲಿ ಹೊರಬರುವ ಕಪ್ಪೆಯಿದ್ದಂತೆ, ಪ್ರಚಾರದ ನಂತರ ಮಾಯವಾಗ್ತಾರೆ. ಹಿಮಾಚಲ ಪ್ರದೇಶದ ವಾತಾವರಣವು ಹಿತಕರವಾಗಿರೋದ್ರಿಂದ ಈಗ ಪ್ರವಾಸಕ್ಕೆ ಬಂದಿದ್ದಾರೆ. ಶೀಘ್ರವೇ ಆವರು ಕಣ್ಮರೆಯಾಗ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಲಂಡನ್‌, ದುಬೈನಲ್ಲಿ ಮನೆ.. 5 ಕೋಟಿ ಮೌಲ್ಯದ ಚಿನ್ನ; ದ. ಗೋವಾ ಬಿಜೆಪಿ ಅಭ್ಯರ್ಥಿ 1,400 ಕೋಟಿ ಒಡತಿ

    ಶೂಟಿಂಗ್‌ಗೆ ಹೋಗುವಂತೆ ಬರ್ತಾರೆ:
    ಅಲ್ಲದೇ ಪ್ರಚಾರದ ಸಂದರ್ಭದಲ್ಲಿ ಕಂಗನಾ ಅವರು ಧರಿಸುವ ಬಟ್ಟೆಗಳು ಸಿನಿಮಾ ಶೂಟಿಂಗ್‌ಗೆ ಹೋಗುವಂತೆ ಇದೆ. ಅವರು ಜನಮನ ಗೆಲ್ಲೋದಕ್ಕಾಗಲಿ, ಜನರ ನೋವನ್ನ ಅರ್ಥಮಾಡಿಕೊಳ್ಳೋದಕ್ಕಾಗಲಿ ಸಾಧ್ಯವಿಲ್ಲ. ಹಿಮಾಚಲ ಪ್ರದೇಶದ (Himachal Pradesh) ಆಹ್ಲಾದಕರ ವಾತಾವರಣ ಆನಂದಿಸಲು ರಾಜ್ಯಕ್ಕೆ ಬಂದಿದ್ದಾರೆ, ಮೂರು ತಿಂಗಳ ನಂತರ ಶೀಘ್ರವೇ ಹಿಂದಿರುಗುತ್ತಾರೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪ್ರೆಸಿಡೆಂಟ್ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್- ಚರ್ಚೆಗೆ ಗ್ರಾಸವಾಯ್ತು ರಾಗಾ ಭಾಷಣ

    ಹೆಮ್ಮೆಯ ಹಿಂದೂ ಎಂದಿದ್ದ ಕಂಗನಾ:
    ಇತ್ತೀಚೆಗಷ್ಟೇ ಕಾಂಗ್ರೆಸ್‌ ನಾಯಕ ವಿಜಯ್ ವಾಡೆತ್ತಿವಾರ್, ನಟಿ ಕಂಗನಾ ರಣಾವತ್ ಅವರಿಗೆ ಗೋಮಾಂಸ ಅಂದರೆ ಇಷ್ಟ. ಅವರೇ ಅದನ್ನು ಹೇಳಿಕೊಂಡಿದ್ದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಾತು ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಕಂಗನಾ ಆ ಮಾತಿಗೆ ತಿರುಗೇಟು ನೀಡಿದ್ದರು. ನಾನು ಗೋಮಾಂಸ ಅಥವಾ ಇತರ ಯಾವುದೇ ರೀತಿಯ ಮಾಂಸ ಸೇವಿಸುವುದಿಲ್ಲ. ನನ್ನ ಬಗ್ಗೆ ಸಂಪೂರ್ಣವಾಗಿ ಆಧಾರ ರಹಿತ ವದಂತಿಗಳನ್ನು ಹರಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಯೋಗ ಮತ್ತು ಆಯುರ್ವೇದವನ್ನು ಪ್ರತಿಪಾದಿಸುತ್ತಿದ್ದೇನೆ ಮತ್ತು ಪ್ರಚಾರ ಮಾಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

    ಸದ್ಯ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕಂಗನಾ ರಣಾವತ್‌ ಪ್ರತಿನಿತ್ಯ ವಿಭಿನ್ನ ರೀತಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಗುರುವಾರವೂ ಮಂಡಿ ಕ್ಷೇತ್ರದ ಭರ್ಮೌರ್ ಗೆ ಭೇಟಿ ನೀಡಿದ್ದ ಕಂಗನಾ, ಅಲ್ಲಿನ ಪುರಾತನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಚಂಬಾ ಗಡ್ಡಿ ಸಮುದಾಯದ ಸಾಂಪ್ರದಾಯಿಕ ಉಡುಪನ್ನು ಧರಿಸಿ, ಮತಯಾಚನೆ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್ ಮಂಗಳ ಗ್ರಹದಿಂದ ಬಂದಿದ್ದಾರೆ: ಕಂಗನಾ ಹೇಳಿಕೆಗೆ ‘ಕೈ’ ಕಾರ್ಯಕರ್ತರು ತಿರುಗೇಟು

  • ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ

    ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ

    ಶಿಮ್ಲಾ: ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಬುಧವಾರ ಬೆಳಗ್ಗೆ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಸುಖವಿಂದರ್ ಸಿಂಗ್ ಸುಖು ಸರ್ಕಾರವು ತನ್ನ ಸ್ವಂತ ಶಾಸಕರನ್ನು ಹಲವಾರು ಬಾರಿ ಅವಮಾನಿಸಿದೆ ಎಂದು ವಿಕ್ರಮಾದಿತ್ಯ ಸಿಂಗ್ ಆರೋಪಿಸಿದ್ದಾರೆ. ಅವಮಾನವನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದ ವಿಕ್ರಮಾದಿತ್ಯ, ಈಗ ಹಿಮಾಚಲದಲ್ಲಿ ಕಾಂಗ್ರೆಸ್ ಮುಂದಿನ ನಡೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

    ವಿಕ್ರಮಾದಿತ್ಯ ಅವರು ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಕಾಂಗ್ರೆಸ್ ಸಂಸದೆ ಪ್ರತಿಭಾ ಸಿಂಗ್ ಅವರ ಪುತ್ರ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.

    ಮಂಗಳವಾರ ನಡೆದ ಭಾರಿ ಕುತೂಹಲ ಕೆರಳಿಸಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರು ಶಾಸಕರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಬಿಜೆಪಿಯ ಹರ್ಷ್ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಸಿಂಘ್ವಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.

    ಬಿಜೆಪಿಯು ವಿಶ್ವಾಸಮತಕ್ಕೆ ಒತ್ತಾಯಿಸಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದ್ದು, ಹಿಮಾಚಲ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಅವರು ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲು ವಿಫಲವಾದ ನಂತರ ಕಾಂಗ್ರೆಸ್ ಜನಾದೇಶವನ್ನು ಕಳೆದುಕೊಂಡಿದೆ ಎಂದು ಠಾಕೂರ್ ಹೇಳಿದ್ದಾರೆ. ಬಿಜೆಪಿಯ ಹೇಳಿಕೆಗಳನ್ನು ಕಾಂಗ್ರೆಸ್‌ ನಿರಾಕರಿಸಿದೆ.