Tag: vikrant rona film

  • ಹಾಟ್ ಅವತಾರ ತಾಳಿದ ಜಾಕ್ವೆಲಿನ್- ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ

    ಹಾಟ್ ಅವತಾರ ತಾಳಿದ ಜಾಕ್ವೆಲಿನ್- ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ

    ಬಾಲಿವುಡ್ (Bollywood) ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಹಾಟ್ ಫೋಟೋಶೂಟ್‌ವೊಂದನ್ನು ಹಂಚಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಮಾದಕವಾಗಿ ಕಾಣಿಸಿಕೊಂಡಿರುವ ನಟಿಯ ಬ್ಯೂಟಿಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.

    ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿಯೋ ಜಾಕ್ವೆಲಿನ್ ಇದೀಗ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಇದನ್ನೂ ಓದಿ:‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್

    ಕಪ್ಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಕ್ಯಾಮೆರಾ ಮುಂದೆ ಜಾಕ್ವೆಲಿನ್ ಮಿಂಚಿದ್ದಾರೆ. ನಟಿಯ ಹಾಟ್ ಅವತಾರಕ್ಕೆ ಪಡ್ಡೆಹುಡುಗರು ಬೋಲ್ಡ್‌ ಆಗಿದ್ದಾರೆ.

    ಬಾಲಿವುಡ್‌ನ ಬಹುನಿರೀಕ್ಷಿತ ‘ಹೌಸ್‌ಫುಲ್ 5’, ‘ವೆಲ್‌ಕಮ್ ಟು ದಿ ಜಂಗಲ್’ ಸಿನಿಮಾಗಳಲ್ಲಿ ಜಾಕ್ವೆಲಿನ್ ನಟಿಸಿದ್ದಾರೆ. ಇದರ ರಿಲೀಸ್‌ಗಾಗಿ ಅವರು ಎದುರು ನೋಡ್ತಿದ್ದಾರೆ.

    ಸದ್ಯ ಜಾಕ್ವೆಲಿನ್ ಕೆರಿಯರ್‌ನಲ್ಲಿ ಯಾವ ಸಿನಿಮಾ ಕೂಡ ಹಿಟ್ ಆಗ್ತಿಲ್ಲ. ಸಿನಿಮಾ ಸಕ್ಸಸ್ ಆಗದೇ ಇದ್ದರೂ ಅವರಿಗೆ ಅವಕಾಶಗಳ ಕೊರತೆಯಿಲ್ಲ. ಆದರೆ ಅವರು ಕಥೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ.

    ಇನ್ನೂ ಕನ್ನಡದ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ರಕ್ಕಮ್ಮ ಹಾಡಿಗೆ ಸುದೀಪ್ ಜೊತೆ ಜಾಕ್ವೆಲಿನ್ ಸೊಂಟ ಬಳುಕಿಸಿದ್ದರು. ಈ ಸಾಂಗ್ ಸೂಪರ್ ಹಿಟ್ ಆಗಿತ್ತು. ಈ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡಿದರು.

  • ಭಾವಿ ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ‘ವಿಕ್ರಾಂತ್ ರೋಣ’ ನಟಿ

    ಭಾವಿ ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ‘ವಿಕ್ರಾಂತ್ ರೋಣ’ ನಟಿ

    ‘ವಿಕ್ರಾಂತ್ ರೋಣ’ (Vikrant Rona) ನಟಿ ನೀತಾ ಅಶೋಕ್ (Neetha Ashok) ಅವರು ಎಂಗೇಜ್ ಆಗುವ ಮೂಲಕ ಪಡ್ಡೆ ಹುಡುಗರಿಗೆ ಬ್ಯಾಡ್ ನ್ಯೂಸ್ ಕೊಟ್ಟಿದ್ದರು. ಬಹುಕಾಲದ ಗೆಳೆಯ ಸತೀಶ್ (Satish) ಜೊತೆ ಎಂಗೇಜ್ ಆಗಿರುವ ನೀತಾ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾವಿ ಪತಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

    ‘ಯಶೋದೆ’, ‘ನಾ ನಿನ್ನ ಬಿಡಲಾರೆ’ ಸೀರಿಯಲ್ ಮೂಲಕ ಮೋಡಿ ಮಾಡಿದ ಉಡುಪಿ (Udupi) ಮೂಲದ ನಟಿ ನೀತಾ ಓದಿದ್ದು ಎಂಬಿಎ, ಆದರೆ ಅಚಾನಕ್ ಆಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಾರೆ. ಬಳಿಕ ಕಿಚ್ಚ ಸುದೀಪ್ (Kiccha Sudeep), ನಿರೂಪ್ ಭಂಡಾರಿ ಜೊತೆ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಮಿಂಚುತ್ತಾರೆ.

     

    View this post on Instagram

     

    A post shared by Neetha Ashok (@neethaashok01)

    ಕಳೆದ ವರ್ಷ ಅಂತ್ಯದಲ್ಲಿ ಕುಟುಂಬಸ್ಥರು- ಆಪ್ತರ ಸಮ್ಮುಖದಲ್ಲಿ ನೀತಾ ಅವರು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ತನ್ನೂರಿನ ಕ್ಲಾಸ್‌ಮೇಟ್ ಸತೀಶ್ ಜೊತೆ ಪ್ರೇಮಾಂಕುರವಾಗಿ, ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಸೀತಾ ಮಾತೆಯಾಗಿ ಬಂದ ಕೃತಿ ಸನೋನ್- ಫಸ್ಟ್ ಲುಕ್ ಔಟ್

     

    View this post on Instagram

     

    A post shared by Neetha Ashok (@neethaashok01)

    ಭಾವಿ ಪತಿ ಸತೀಶ್ ಜೊತೆಗಿನ ಎಂಗೇಜ್‌ಮೆಂಟ್ ಫೋಟೋ- ವೀಡಿಯೋವನ್ನ ನಟಿ ನೀತಾ ಹಂಚಿಕೊಂಡಿದ್ದಾರೆ. ಇಬ್ಬರೂ ಲೈಟ್ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ನೀತಾ ಜೋಡಿಗೆ ಫ್ಯಾನ್ಸ್‌ ಶುಭಹಾರೈಸುತ್ತಿದ್ದಾರೆ.

  • 200 ಕೋಟಿ ವಂಚನೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಬೆನ್ನಲ್ಲೇ ಜಾಕ್ವೆಲಿನ್ ರಿಯಾಕ್ಷನ್

    200 ಕೋಟಿ ವಂಚನೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಬೆನ್ನಲ್ಲೇ ಜಾಕ್ವೆಲಿನ್ ರಿಯಾಕ್ಷನ್

    `ವಿಕ್ರಾಂತ್ ರೋಣ’ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್, ಸುಖೇಶ್ ಚಂದ್ರಶೇಖರ್ ಪ್ರಕರಣದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ. ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಆರೋಪಿಯನ್ನಾಗಿ ಇಡಿ ಅಧಿಕಾರಿಗಳು ಇಂದು ದೆಹಲಿ ಇಡಿ ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ಈ ಕುರಿತು ಜಾಕ್ವೆಲಿನ್, ಸೋಷಿಯಲ್ ಮೀಡಿಯಾದಲ್ಲಿ ರಿಯಾಕ್ಟ್ ಮಾಡಿದ್ದಾರೆ.

    215 ಕೋಟಿ ವಂಚನೆ ಪ್ರಕರಣದಲ್ಲಿ ಸುಖೇಶ್ ಜೊತೆ ಜಾಕ್ವೆಲಿನ್ ಕೂಡ ಆರೋಪ ಎದುರಿಸುತ್ತಿದ್ದಾರೆ. ಇದೀಗ ಈ ಕುರಿತು ನಟಿ ಕೂಡ ರಿಯಾಕ್ಟ್ ಮಾಡಿದ್ದಾರೆ. ನಾನು ಎಲ್ಲಾ ಒಳ್ಳೆಯದಕ್ಕೆ ಅರ್ಹನಾಗಿದ್ದೇನೆ, ನಾನು ಶಕ್ತಿಶಾಲಿಯಾಗಿದ್ದೇನೆ, ನಾನು ನನ್ನನ್ನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗುತ್ತದೆ, ನಾನು ಬಲಶಾಲಿಯಾಗಿದ್ದೇನೆ, ನನ್ನ ಗುರಿ ಮತ್ತು ಕನಸುಗಳನ್ನು ಸಾಧಿಸುತ್ತೇನೆ,ನಾನು ಅದನ್ನು ಮಾಡಬಲ್ಲೇ ಎಂದು ಜಾಕ್ವೆಲಿನ್ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗುತ್ತಿದೆ. ಇದನ್ನೂ ಓದಿ:ರಾ..ರಾ. ರಕ್ಕಮ್ಮ ಬೆಡಗಿ ಜಾಕ್ವೆಲಿನ್ ಇದೀಗ 215 ಕೋಟಿ ಹಣದ ಪ್ರಕರಣದಲ್ಲಿ ಆರೋಪಿ

    ಬೆಂಗಳೂರು ಮೂಲದ ಸುಖೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ಇಬ್ಬರೂ ಸ್ನೇಹಿತರು ಎಂದು ಹೇಳಲಾಗುತ್ತಿದ್ದು, ಈ ಸುಖೇಶ್ ಬರೋಬ್ಬರಿ 215 ಕೋಟಿ ರೂಪಾಯಿಯನ್ನು ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಜೈಲಿನಲ್ಲಿರುವ ಖೈದಿಯೊಬ್ಬರನ್ನು ಬಿಡುಗಡೆ ಮಾಡಿಸಲು ಈ ಪ್ರಮಾಣದ ಹಣವನ್ನು ಉದ್ಯಮಿಯ ಪತ್ನಿಗೆ ಕೇಳಿದ್ದರು. ನಂಬಿಸಿ ವಸೂಲಿ ಕೂಡ ಮಾಡಿದ್ದರು. ಆ ನಂತರ ಉದ್ಯಮಿ ಪತ್ನಿಗೆ ಇದು ಮೋಸ ಎಂದು ಗೊತ್ತಾಗಿ ಪ್ರಕರಣ ದಾಖಲಿಸಿದ್ದರು.

    215 ಕೋಟಿ ಹಣದಲ್ಲಿ ಸುಖೇಶ್, ಬಾಲಿವುಡ್ ನಟಿ ಜಾಕ್ವೆಲಿನ್ ಗೆ ದುಬಾರಿ ಕಾರು, ಡೈಮೆಂಡ್, ವಾಚ್, ಬ್ಯಾಗ್ ಗಳು ಮತ್ತು ದುಬಾರಿ ಕುದುರೆಯೊಂದನ್ನು ಉಡುಗೊರೆಯಾಗಿ ನೀಡಿದ್ದರು ಎನ್ನುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಇಡಿ ತನಿಖೆ ಆರಂಭಿಸಿತ್ತು. ಇದೀಗ ಅದು ನಿಜವಾಗಿದೆ ಎಂದು ಇಡಿ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಾಗುತ್ತಿದೆ. ಹಾಗಾಗಿ ಜಾರಿ ನಿರ್ದೇಶನಾಲಯವು ಕೋರ್ಟ್ ಗೆ ಜಾಕ್ವೆಲಿನ್ ಹೆಸರೂ ಸೇರಿಸಿದ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಸುಖೇಶ್ ಮಾಡಿದ ತಪ್ಪಿಗೆ ಇದೀಗ ಈ ನಟಿ ಕೋರ್ಟ್ ಕಟಕಟೆಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್‌ಗೆ ಕೊರೊನಾ ಪಾಸಿಟಿವ್ : ಎರಡನೇ ಬಾರಿ ಕಿಚ್ಚನಿಗೆ ಕೋವಿಡ್ ಸೋಂಕು

    ಸುದೀಪ್‌ಗೆ ಕೊರೊನಾ ಪಾಸಿಟಿವ್ : ಎರಡನೇ ಬಾರಿ ಕಿಚ್ಚನಿಗೆ ಕೋವಿಡ್ ಸೋಂಕು

    ನಿರಂತರವಾಗಿ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರ ಕರ‍್ಯದಲ್ಲಿ ತೊಡಗಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದು, ನೆಚ್ಚಿನ ನಟ ಬೇಗ ಗುಣಮುಖರಾಗಲಿ ಎಂದು ಆಪ್ತರು ಮತ್ತು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಅಲ್ಲದೇ, ಅವರಿಗೆ ಕೋವಿಡ್ ಸೋಂಕು ತಗಲುತ್ತಿರುವುದು ಎರಡನೇ ಬಾರಿ ಆಗಿದೆ.

    ಜುಲೈ 28 ರಂದು ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗುತ್ತಿದ್ದು, ಈ ಸಲುವಾಗಿ ಅವರು ಹಲವು ರಾಜ್ಯಗಳನ್ನು ಸುತ್ತಿದ್ದರು. ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಸೇರಿದಂತೆ ಹಲವು ಊರುಗಳಲ್ಲಿ ನಡೆದ ಪ್ರಚಾರ ಕರ‍್ಯದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಕೋವಿಡ್ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ. ತೀವ್ರ ತರಹದ ಲಕ್ಷಣಗಳು ಇಲ್ಲದೇ ಇದ್ದರೂ, ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ನನ್ನ ಪತಿ ಜನಸಂಖ್ಯೆ ನಿಯಂತ್ರಣ ಮಾಡುತ್ತಿದ್ದಾರೆ: ಕರೀನಾ ಕಪೂರ್‌

    `ವಿಕ್ರಾಂತ್ ರೋಣ’ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಬಿಡುವಿಲ್ಲದ ಪ್ರಚಾರದ ಕೆಲಸಗಳಲ್ಲಿ ಕಿಚ್ಚ ತೊಡಗಿಕೊಂಡಿದ್ದಾರೆ. ಈ ನಡುವೆ ಬಿಗ್ ಬಾಸ್ ಸೀಸನ್ 9ರ ಪ್ರೊಮೋ ಶೂಟಿಂಗ್ ನಲ್ಲೂ ಅವರು ಮೊನ್ನೆಯಷ್ಟೇ ಭಾಗಿಯಾಗಿದ್ದರು. ಇನ್ನೇನು ಮುಂದಿನ ವಾರ ಸಿನಿಮಾ ರಿಲೀಸ್ ಆಗಬೇಕು ಅಷ್ಟರಲ್ಲಿ ಕೋವಿಡ್ ಸೋಂಕು ಅವರಿಗೆ ತಗುಲಿದೆ.

    Live Tv
    [brid partner=56869869 player=32851 video=960834 autoplay=true]