Tag: Vikrant Rona Open in Google Translate •

  • ‘ವಿಕ್ರಾಂತ್ ರೋಣ’ ಸಿನಿಮಾ ನಟಿ ಜಾಕ್ವೆಲಿನ್ ಗೆ ವಿದೇಶಕ್ಕೆ ತೆರಳಲು ಅನುಮತಿ

    ‘ವಿಕ್ರಾಂತ್ ರೋಣ’ ಸಿನಿಮಾ ನಟಿ ಜಾಕ್ವೆಲಿನ್ ಗೆ ವಿದೇಶಕ್ಕೆ ತೆರಳಲು ಅನುಮತಿ

    ಬಾಲಿವುಡ್ ನಟಿ, ಕನ್ನಡದಲ್ಲಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಕಾಣಿಸಿಕೊಂಡಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಮೇ 31ರಿಂದ ಜೂನ್ 06ರವರೆಗೆ ವಿದೇಶಕ್ಕೆ ತೆರಳಲು ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ. ಸುಖೇಶ್ ಚಂದ್ರಶೇಖರ್ ವಿರುದ್ಧದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಜಾಕ್ವೆಲಿನ್ ಎದುರಿಸುತ್ತಿದ್ದರು. ಹಾಗಾಗಿ ವಿದೇಶಕ್ಕೆ ತೆರಳದಂತೆ ಇವರಿಗೆ ನಿರ್ಬಂಧ ಹೇರಲಾಗಿತ್ತು. ಇದನ್ನೂ ಓದಿ : ‘ಮುದುಕನ ಲವ್ ಸ್ಟೋರಿ’ಗೆ ಕೆಜಿಎಫ್ ತಾತ ಕೃಷ್ಣರಾವ್ ಹೀರೋ

    ಅಬುಧಾಬಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಭಾರತೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ತಾವು ಭಾಗಿ ಆಗಬೇಕಾಗಿದ್ದರಿಂದ, ಅನುಮತಿ ಕೋರಿ ನ್ಯಾಯಾಲಯಕ್ಕೆ ಜಾಕ್ವೆಲಿನ್ ಅರ್ಜಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಗಣಿಸಿರುವ ದೆಹಲಿ ಪಟಿಯಾಲ್ ಹೌಸ್ ಕೋರ್ಟ್ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. ಇದನ್ನೂ ಓದಿ : ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಖೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸುಖೇಶ್ ಜತೆ ಸ್ನೇಹ ಹೊಂದಿದೆ ಜಾಕ್ವೆಲಿನ್ ಗೆ ಸುಖೇಶ್ 7 ಕೋಟಿ ಮೌಲ್ಯದ ಉಡುಗೊರೆಯನ್ನು ನೀಡಿದ್ದಾನೆ ಎಂದು ಆರೋಪವಿದೆ. ಹೀಗಾಗಿ ಉಡುಗೊರೆಯನ್ನು ಈಗಾಗಲೇ ಇಡಿ ಜಪ್ತಿ ಮಾಡಿದೆ. ಈ ಪ್ರಕರಣವೇ ನಟಿಗೆ ದೇಶಬಿಟ್ಟು ಹೋಗದಂತೆ ಮಾಡಿತ್ತು. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

    ಜಾಕ್ವೆಲಿನ್  ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಚಿತ್ರದಲ್ಲಿ ಇವರು ವಿಶೇಷ ಪಾತ್ರ ಮಾಡಿದ್ದಾರಂತೆ. ಈಗಷ್ಟೇ ಬಿಡುಗಡೆ ಆಗಿರುವ ‘ರಾ..ರಾ.. ರಕ್ಕಮ್ಮ’ ಹಾಡಿನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಈ ಹಾಡು ಸದ್ಯ ಟ್ರೆಂಡಿಂಗ್ ನಲ್ಲಿದೆ. ಅಲ್ಲದೇ, ಜಾಕ್ವೆಲಿನ್ ನೃತ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.