Tag: Vikrant Rona

  • ಬೆಂಗ್ಳೂರಿನಲ್ಲಿ ವಿಕ್ರಾಂತ್ ರೋಣ ಪ್ರೀ ರಿಲೀಸ್ ಇವೆಂಟ್ – ಸುದೀಪ್ ಸೂಪರ್ ಸ್ಟಾರ್ ಎಂದ ಉಪ್ಪಿ

    ಬೆಂಗ್ಳೂರಿನಲ್ಲಿ ವಿಕ್ರಾಂತ್ ರೋಣ ಪ್ರೀ ರಿಲೀಸ್ ಇವೆಂಟ್ – ಸುದೀಪ್ ಸೂಪರ್ ಸ್ಟಾರ್ ಎಂದ ಉಪ್ಪಿ

    ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ `ವಿಕ್ರಾಂತ್ ರೋಣ’ ಇನ್ನೇನು ತೆರೆಯ ಮೇಲೆ ಬರಲು ಸಜ್ಜಾಗಿದ್ದು, ಬೆಂಗಳೂರಿನಲ್ಲಿಂದು ಪ್ರೀ ರಿಲೀಸ್ ಇವೆಂಟ್ ನಡೆದಿದೆ.

    ವಿಕ್ರಾಂತ್ ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು. ಅದಾದ ನಂತರ ಈಗ `ಸಿನೆಬಡ್ಸ್’ ಎಂಬ ಆಪ್ ಮೂಲಕ ಪ್ರೇಕ್ಷಕರು ವಿಕ್ರಾಂತ್ ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯ ಕಶ್ಯಪ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ ಆ್ಯಂಡ್ ವೈಟ್ ಫೋಟೋಶೂಟ್‌ನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ

    ನಿನ್ನೆ ಮುಂಬೈನಲ್ಲಿ ಸಲ್ಮಾನ್ ಖಾನ್ ಹಾಗೂ ಜಾಕ್ವೆಲಿನ್ ಜೊತೆಗೆ `ರಾ ರಾ ರಕ್ಕಮ್ಮ’ ಸಾಂಗ್‌ಗೆ ಸುದೀಪ್ ಸಖತ್ ಸ್ಟೆಪ್ ಹಾಕಿದ್ರು. ಮುಂಬೈ, ಹೈದರಾಬಾದ್ ನಲ್ಲಿ ಇವೆಂಟ್ ಮುಗಿಸಿ ಮರಳಿರುವ ಕಿಚ್ಚ ಸುದೀಪ್ ಇಂದು ಸಿಲಿಕಾನ್ ಸಿಟಿಯ ಲುಲು ಮಾಲ್‌ನಲ್ಲಿ ನಡೆದ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಭಾಗಿಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಾಗಾರ್ಜುನ್ ಸಹ ಕಿಚ್ಚನಿಗೆ ಸಾಥ್ ನೀಡಿದ್ದಾರೆ. ಇಂದು ರೋಣನಿಗೆ ರಿಯಲ್ ಸ್ಟಾರ್ ಉಪೇಂದ್ರ ಜೊತೆಯಾಗಿ ಸಾಥ್ ನೀಡಿದ್ದಾರೆ.

    ಸ್ಟೇಜ್‌ಗೆ ಕಿಚ್ಚನ ಎಂಟ್ರಿ ಆಗ್ತಿದ್ದಂತೆ ಇಡೀ ಚಿತ್ರತಂಡ ಕಲಾ ತಂಡಗಳೊಂದಿಗೆ ಸ್ವಾಗತ ಕೋರಿತು. ವೇದಿಕೆ ಹೊರ ಭಾಗದಲ್ಲಿ ಡೊಳ್ಳು ಕುಣಿತ.. ಚೆಂಡೆ ವಾದ್ಯಗಳ ಆಮಂತ್ರಣದೊಂದಿಗೆ ಕಿಚ್ಚನನ್ನು ಬರಮಾಡಿಕೊಳ್ಳಲಾಯಿತು. ಇದನ್ನೂ ಓದಿ: ನಟ ನಾಗ ಚೈತನ್ಯರ ಕೈ ಹಿಡಿಯಲಿಲ್ಲ ಥ್ಯಾಂಕ್ ಯೂ ಸಿನಿಮಾ

    ವೇದಿಕೆಯಲ್ಲಿ ರೋಣನಿಗೆ ಜೊತೆಯಾದ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ, ಸುದೀಪ್‌ನ ನೋಡಿ ಹೀರೋ ಅಗಿ ಅಂದೆ, ಆದ್ರೆ ಅವರಿಂದು ಸೂಪರ್ ಸ್ಟಾರ್ ಆಗಿದ್ದಾರೆ. ಇದು ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ. ಯಶ್ ಪ್ಯಾನ್ ಇಂಡಿಯಾ ಹೊಡಿತೀವಿ ಅಂದ್ರು. ಈಗ ನಾವು ಪ್ಯಾನ್ ವರ್ಲ್ಡ್ ಹೊಡಿತೀವಿ. ವಿಕ್ರಾಂತ್ ರೋಣ ಅಂದ್ರೆ ವಿಕ್ಟರಿ ರೋಣ. ನಾನು ಫಸ್ಟ್ ಡೇ ಸಿನಿಮಾ ನೋಡ್ತಿನಿ, ಅದು ಕ್ರೌಡ್‌ನಲ್ಲಿ ಎಂದು ಹೇಳಿದ್ದಾರೆ.

    ಇದಕ್ಕೆ ದನಿಗೂಡಿಸಿ ಅಭಿಮಾನಿಗಳಿಗೆ `ಐ ಲವ್ ಯು’ ಅಂದ ಕಿಚ್ಚ ಸುದೀಪ್, ಸೌಂಡ್ ಅಂದ್ರೆ ಇದು, ಉಪ್ಪಿ ಸರ್ ಸಪೋರ್ಟ್ಗೆ ಧನ್ಯವಾದ. ಈ ಸಿನಿಮಾ ನನ್ನೊಬ್ಬನ ಕನಸಲ್ಲ. ಸಾಕಷ್ಟು ಜನ ಕೆಲಸ ಮಾಡಿದ್ದಾರೆ. ಎಲ್ಲಾ ಕಡೆ ಓಡಾಡಿದ್ದೀನಿ. ಆದ್ರೆ ನಮ್ಮವ್ರು ಎಂದೆಂದಿಗೂ ನಮ್ಮೋರೆ ಎಂದು ಅಭಿಮಾನಿಗಳನ್ನ ಹೊಗಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಬಡ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯ ಕಶ್ಯಪ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

    ನಿರ್ಮಾಪಕ ಜಾಕ್ ಮಂಜು ಚಿತ್ರದ ರಿಲೀಸ್ ಕುರಿತು ಮಾತನಾಡಿ 27ರಂದು ಪ್ರಪಂಚದ 27ದೇಶಗಳಲ್ಲಿ ಪ್ರಿವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನಿನ್ನೆಯಷ್ಟೇ ನೇಪಾಳ ಕನ್‌ಫರ್ಮ್ ಆಯ್ತು, ಅಲ್ಲದೆ ಪಾಕಿಸ್ತಾನದಲ್ಲೂ ವಿಕ್ರಾಂತ್‌ ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದೆ, ಕರ್ನಾಟಕದಲ್ಲೇ 400ರಿಂದ 420 ಥೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ಅಲ್ಲದೆ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಾಳೆ, ನಾಡಿದ್ದು ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು. ಇದನ್ನೂ ಓದಿ:10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    ಈಗಾಗಲೇ ರಿಲೀಸಾಗಿರುವ ಟ್ರೈಲರ್ ಜೊತೆಗೆ ಹಾಡುಗಳಂತೂ ಒಂದಕ್ಕಿಂತ ಒಂದು ಹೆಚ್ಚಾಗಿ ವೈರಲ್ ಆಗಿವೆ. ಅದರಲ್ಲೂ ಯಾರ ಮೊಬೈಲ್‌ನಲ್ಲಿ ನೋಡಿದರೂ ರಾರಾ.. ರಕ್ಕಮ್ಮ ಹಾಡಿನ ರೀಲ್ಸ್ ನದ್ದೇ  ಅಬ್ಬರ. ಈ ಹಾಡು ಅಷ್ಟೂ ಭಾಷೆಗಳಲ್ಲೂ ದೊಡ್ಡ ಕ್ರೇಜನ್ನೇ ಸೃಷ್ಟಿಸಿದೆ. ಶೇಂಗಾ.90ರಷ್ಟು 3ಡಿ ವರ್ಷನ್ ಚಿತ್ರ ರಿಲೀಸಾಗುತ್ತಿದ್ದು, 3 ಡಿ ಇಲ್ಲದ ಕಡೆ ಮಾತ್ರವೇ 2ಡಿ  ವರ್ಷನ್ ಪ್ರದರ್ಶನವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಮುಂಬೈನಲ್ಲಿ ವಿಕ್ರಾಂತ್ ರೋಣ : ಕಿಚ್ಚನಿಗೆ ಬಾಲಿವುಡ್ ನಟ ಸಲ್ಮಾನ್ ಸಾಥ್

    ಮುಂಬೈನಲ್ಲಿ ವಿಕ್ರಾಂತ್ ರೋಣ : ಕಿಚ್ಚನಿಗೆ ಬಾಲಿವುಡ್ ನಟ ಸಲ್ಮಾನ್ ಸಾಥ್

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಇದೇ ವಾರ ಜು.28ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಭಾರತವೂ ಸೇರಿದಂತೆ 28ಕ್ಕೂ ಹೆಚ್ಚು ದೇಶಗಳಲ್ಲಿ ಈ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಅದರಲ್ಲೂ ಭಾರತದಲ್ಲಿ ಈ ಸಿನಿಮಾದ ಬಿಡುಗಡೆಯನ್ನು ಹಬ್ಬದಂತೆ ಆಚರಿಸಲಾಗುತ್ತಿದೆ. ಬಹುತೇಕ ಥಿಯೇಟರ್ ಮುಂದೆ ಕಿಚ್ಚನ ಕಟೌಟ್ ತಲೆಯೆತ್ತಿ ನಿಂತಿದ್ದು, ದೇಶದಾದ್ಯಂತ ಪ್ರಚಾರದಲ್ಲಿ ಸಿನಿಮಾ ತಂಡ ತೊಡಗಿದೆ.

    ಕಳೆದ ಮೂರ್ನಾಲ್ಕು ದಿನದಿಂದ ದೇಶದ ನಾನಾ ರಾಜ್ಯಗಳಲ್ಲಿ ಕಿಚ್ಚ ಮತ್ತು ತಂಡ ಸಿನಿಮಾ ಪ್ರಚಾರದಲ್ಲಿ ತೊಡಗಿದ್ದು, ಮೊನ್ನೆಯಷ್ಟೇ ಮುಂಬೈನಲ್ಲಿ ಇವೆಂಟ್ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ರಿತಿಶ್ ದೇಶಮುಖ, ಜೆನಿಲಿಯಾ ಡಿಸೋಜಾ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ರಾ ರಾ ರಕ್ಕಮ್ಮ ಹಾಡಿಗೆ ಸಲ್ಮಾನ್ ಕುಣಿದು ಸಂಭ್ರಮಿಸಿದರು. ಇದನ್ನೂ ಓದಿ:10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    ಸುದೀಪ್ ಮತ್ತು ಸಲ್ಮಾನ್ ಖಾನ್ ಇಬ್ಬರೂ ಆತ್ಮೀಯರು. ಸುದೀಪ್ ಅವರನ್ನು ಸಹೋದರ ಎಂದೇ ಸಲ್ಮಾನ್ ಕರೆಯುತ್ತಾರೆ. ಅಲ್ಲದೇ, ಸಲ್ಮಾನ್ ಖಾನ್ ಗಾಗಿ ಸುದೀಪ್ ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದಾರೆ ಎಂದೂ ಹೇಳಲಾಗುತ್ತಿದೆ. ಹಾಗಾಗಿ ಸುದೀಪ್ ಅವರ ಸಿನಿಮಾ ರಿಲೀಸ್ ಸಂದರ್ಭದಲ್ಲಿ ಸಲ್ಮಾನ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಯಶಸ್ವಿಯಾಗಲಿ ಎಂದು ಸಲ್ಮಾನ್ ಶುಭ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 3500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ : ಪಾಕಿಸ್ತಾನ ಸೇರಿ 27 ದೇಶಗಳಲ್ಲಿ ಚಿತ್ರ ಪ್ರದರ್ಶನ

    3500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ : ಪಾಕಿಸ್ತಾನ ಸೇರಿ 27 ದೇಶಗಳಲ್ಲಿ ಚಿತ್ರ ಪ್ರದರ್ಶನ

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಇದೇ ವಾರ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಭಾರತವೂ ಸೇರಿದಂತೆ 27 ದೇಶಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, 3500 ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ನೋಡಬಹುದು ಎಂದಿದ್ದಾರೆ ನಿರ್ಮಾಪಕ ಜಾಕ್ ಮಂಜು.  ಈಗಾಗಲೇ ಬಹುತೇಕ ಕಡೆ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಬಹುತೇಕ ಕಡೆ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆಯಂತೆ.

    ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ 3500ಕ್ಕೂ ಹೆಚ್ಚು ಸ್ಕ್ರಿನ್ ಗಳಲ್ಲಿ ಬಿಡುಗಡೆ ಆಗುತ್ತಿದ್ದು, ಕರ್ನಾಟಕದಲ್ಲಿ 425ಕ್ಕೂ ಅಧಿಕ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ. ಬಾಲಿವುಡ್ ನಲ್ಲಿ 900 ಥಿಯೇಟರ್ಸ್, ಟಾಲಿವುಡ್ ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ಸ್ ವಿದೇಶಗಳಲ್ಲಿ 800 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಜಾಕ್ ಮಂಜು. ಇದನ್ನೂ ಓದಿ:ಬನ್ಸಾಲಿ ನಿರ್ದೇಶನದಲ್ಲಿ ಬಹುಭಾಷಾ ನಟಿ ಅದಿತಿ ರಾವ್

    ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮತ್ತು ಹಾಡುಗಳು ಸಖತ್ ವೈರಲ್ ಆಗಿವೆ. ರಾ ರಾ ರಕ್ಕಮ್ಮ ಹಾಡಂತೂ ಅಷ್ಟೂ ಭಾಷೆಗಳಲ್ಲೂ ಕ್ರೇಜ್ ಕ್ರಿಯೇಟ್ ಮಾಡಿದೆ. ಜುಲೈ 28ರಂದು 2 ಡಿ ಮತ್ತು 3 ಡಿಯಲ್ಲಿ ವಿಕ್ರಾಂತ್ ರೋಣ ತೆರೆಗೆ ಬರುತ್ತಿದೆ. ಮತ್ತೊಂದು ಕುತೂಹಲದ ಸಂಗತಿ ಅಂದರೆ, ಪಾಕಿಸ್ತಾನದಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ಜ್ವರದ ನಡುವೆಯೂ ಮುಂಬೈನಲ್ಲಿ ನಡೆದ ವಿಕ್ರಾಂತ್ ರೋಣ ಪ್ರಚಾರದಲ್ಲಿ ಭಾಗಿಯಾದ ಸುದೀಪ್

    ಜ್ವರದ ನಡುವೆಯೂ ಮುಂಬೈನಲ್ಲಿ ನಡೆದ ವಿಕ್ರಾಂತ್ ರೋಣ ಪ್ರಚಾರದಲ್ಲಿ ಭಾಗಿಯಾದ ಸುದೀಪ್

    ರಡ್ಮೂರು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಕಿಚ್ಚ ಸುದೀಪ್. ಮುಂದಿನ ವಾರದಲ್ಲೇ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ಸಹಜವಾಗಿಯೇ ಅಭಿಮಾನಿಗಳಲ್ಲಿ ಆತಂಕ ಶುರುವಾಗಿತ್ತು. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ, ಹಲವು ಊರುಗಳಲ್ಲಿ ಚಿತ್ರದ ಪ್ರಚಾರವನ್ನೂ ಮಾಡಬೇಕಿತ್ತು. ಏಕಾಏಕಿ ಜ್ವರ ಕಾಣಿಸಿಕೊಂಡಿದ್ದರಿಂದ ಮುಂದೇನು ಅನ್ನುವ ಗೊಂದಲ ಸಹಜವಾಗಿ ಚಿತ್ರತಂಡಕ್ಕೆ ಮೂಡಿತ್ತು. ಆದರೆ, ಕಿಚ್ಚ ಈ ನೋವಿನ ನಡುವೆಯೂ ಮುಂಬೈಗೆ ತೆರಳಿದ್ದಾರೆ. ಈ ಮೂಲಕ ತಮ್ಮ ವೃತ್ತಿ ಬದ್ಧತೆ ತೋರಿದ್ದಾರೆ.

    ಕೊಚ್ಚಿ, ಚೆನ್ನೈ, ಮುಂಬೈ ಸೇರಿದಂತೆ ಹಲವು ಕಡೆ ಸಿನಿಮಾ ಪ್ರಚಾರದಲ್ಲಿ ಸುದೀಪ್ ಭಾಗಿಯಾಗಬೇಕಾಗಿತ್ತು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಪತ್ರಿಕಾಗೋಷ್ಠಿಗಳನ್ನು ರದ್ದು ಮಾಡಿದ್ದರು. ಈ ಕುರಿತು ಕ್ಷಮೆ ಕೂಡ ಕೇಳಿದ್ದರು. ಆದಷ್ಟು ಬೇಗ ಮಾಧ್ಯಮ ಗೆಳೆಯರನ್ನು ಭೇಟಿ ಮಾಡುವುದಾಗಿಯೂ ತಿಳಿಸಿದ್ದರು. ಮಾತುಕೊಟ್ಟಂತೆ ಅವರು ಜ್ವರ ಕಡಿಮೆ ಆಗುತ್ತಿದ್ದಂತೆಯೇ ಮುಂಬೈ ವಿಮಾನ ಏರಿದ್ದಾರೆ. ಇವತ್ತು ಮುಂಬೈನಲ್ಲಿ ಸಿನಿಮಾ ಪ್ರಚಾರ ಮಾಡಲಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ

     ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ ನ ವಿಕ್ರಾಂತ್ ರೋಣ ಸಿನಿಮಾ ಜು.28ಕ್ಕೆ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದ್ದು ದೇಶದ ನಾನಾ ಕಡೆ ಈಗಾಗಲೇ ಪ್ರಚಾರ ಆರಂಭವಾಗಿದೆ. ಅಭಿಮಾನಿಗಳು ಕೂಡ ಕಿಚ್ಚನ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಜ್ವರದ ನಡುವೆಯೂ ಕಿಚ್ಚ ಹಲವು ಕಡೆ ಪ್ರಚಾರದಲ್ಲಿ ತೊಡಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

    ಮಾಧ್ಯಮ ಪ್ರತಿನಿಧಿಗಳಿಗೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

    ಅಂದುಕೊಂಡಂತೆ ಆಗಿದ್ದರೆ, ಇಂದಿನಿಂದ ಕಿಚ್ಚ ಸುದೀಪ್ ಚೆನ್ನೈ, ಕೊಚ್ಚಿ ಮತ್ತು ಹೈದರಾಬಾದ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಬೇಕಿತ್ತು. ವಿಕ್ರಾಂತ್ ರೋಣ ಸಿನಿಮಾಗಾಗಿ ಹಮ್ಮಿಕೊಂಡಿದ್ದ ಈ ಮಾಧ್ಯಮ ಗೋಷ್ಠಿಯಲ್ಲಿ ಕಿಚ್ಚನ ಎದುರುಗೊಳ್ಳಲು ಮಾಧ್ಯಮ ಪ್ರತಿನಿಧಿಗಳು ಸಿದ್ಧರಾಗಿದ್ದಾರೆ. ಆದರೆ, ನಿನ್ನೆ ಸುದೀಪ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹಾಗಾಗಿ ಪತ್ರಿಕಾ ಗೋಷ್ಠಿಗಳನ್ನು ರದ್ದು ಮಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ.

    ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿದ್ದಕ್ಕೆ ಕೊಚ್ಚಿ, ಚೆನ್ನೈ ಮತ್ತು ಹೈದರಾಬಾದ್ ಮಾಧ್ಯಮದ ಗೆಳೆಯರಿಗೆ ಕ್ಷಮೆ ಕೇಳುತ್ತೇನೆ. ಹುಷಾರಿಲ್ಲದ ಕಾರಣದಿಂದಾಗಿ ನನಗೆ ಪ್ರಯಾಣ ಮಾಡುವುದು  ಕಷ್ಟಸಾಧ್ಯ. ಹಾಗಾಗಿ ಬರಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ದಿನಾಂಕ ನಿಗದಿಪಡಿಸಿ, ನಿಮ್ಮೊಂದಿಗೆ ಮಾತನಾಡಲು ಉತ್ಸುಕನಾಗಿದ್ದೇನೆ. ಆದಷ್ಟು ಬೇಗ ಸಿಗೋಣ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:ಮಗನ ಜೊತೆ ಮೊದಲ ಬಾರಿಗೆ ರೀಲ್ಸ್ ಮಾಡಿದ ಸಂಜನಾ ಗಲ್ರಾನಿ

    ನಿನ್ನೆ ಸುದೀಪ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ಸುದ್ದಿ ಆಗಿತ್ತು. ತಕ್ಷಣವೇ ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ ಜಾಕ್ ಮಂಜು, ಈ ಕುರಿತು ಸ್ಪಷ್ಟನೆ ನೀಡಿ, ಅವರಿಗೆ ಜ್ವರ ಬಂದಿದೆ ಅಷ್ಟೇ ಕೋವಿಡ್ ಸೋಂಕು ತಗುಲಿಲ್ಲ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದರು. ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದರು. ಇದೀಗ ಕಿಚ್ಚನ ಆರೋಗ್ಯ ಸುಧಾರಿಸುತ್ತಿದ್ದು, ಮತ್ತೆ ಅತೀ ಶೀಘ್ರದಲ್ಲೇ ಸಿನಿಮಾ ಪ್ರಚಾರದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುಮ್ಮನ ಜೊತೆ ಬಂದ `ವಿಕ್ರಾಂತ್ ರೋಣ’ ಟೀಮ್: ಹೊಸ ಸಾಂಗ್‌ ರಿಲೀಸ್

    ಗುಮ್ಮನ ಜೊತೆ ಬಂದ `ವಿಕ್ರಾಂತ್ ರೋಣ’ ಟೀಮ್: ಹೊಸ ಸಾಂಗ್‌ ರಿಲೀಸ್

    ಚಿತ್ರರಂಗದಲ್ಲಿ ಸದ್ಯ ಕೇಳಿ ಬರುತ್ತಿರುವ ಚಿತ್ರದ ಹೆಸರು `ವಿಕ್ರಾಂತ್ ರೋಣ’ ಚಿತ್ರದ ಲುಕ್ ಮತ್ತು ಸಾಂಗ್ಸ್ ಮೂಲಕ ಧೂಳೆಬ್ಬಿಸುತ್ತಿದೆ. ಈ ಚಿತ್ರದಿಂದ ನಾಲ್ಕನೇ ಸಾಂಗ್ ರಿಲೀಸ್ ಆಗಿ ಸಿನಿಪ್ರೇಕ್ಷಕರ ಗಮನ ಸೆಳೆಯುತ್ತಿದೆ.

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ನಿರೀಕ್ಷಿತ ಸಿನಿಮಾ `ವಿಕ್ರಾಂತ್ ರೋಣ’ ಚಂದನವನದಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಚಿತ್ರದ ಮೊದಲ ಸಾಂಗ್ `ರಾ ರಾ ರಕ್ಕಮ್ಮ’ ಸಾಂಗ್‌ನಿಂದ ಹಿಡಿದು ಈಗ ರಿಲೀಸ್ ಆಗಿರುವ `ಗುಮ್ಮ ಬಂದ ಗುಮ್ಮ’ ಸಾಂಗ್‌ವೆರೆಗೂ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಇದನ್ನೂ ಓದಿ:ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ ಆಸ್ಪತ್ರೆಗೆ ದಾಖಲು

    ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ `ಗುಮ್ಮ ಬಂದ ಗುಮ್ಮ’ ಸಾಂಗ್ ಮೂಡಿ ಬಂದಿದೆ. ಈ ಹಾಡು ಸಿನಿರಸಿಕರ ಗಮನ ಸೆಳೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಸಾಂಗ್ ವೈರಲ್ ಆಗುತ್ತಿದೆ. ರಕ್ಕಮ್ಮನ ಕಿಕ್‌ನಲ್ಲಿರುವ ಫ್ಯಾನ್ಸ್ಗೆ ಗುಮ್ಮನ ಸಾಂಗ್ ದಿಲ್ ಗೆದ್ದಿದೆ.

    ಚಿತ್ರದಲ್ಲಿ ಕಿಚ್ಚ ಸುದೀಪ್ ಜತೆ ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ಸಾಥ್ ನೀಡಿದ್ದಾರೆ. ಇದೇ ಜುಲೈ 28ಕ್ಕೆ 3ಡಿ ರೂಪದಲ್ಲಿ ತೆರೆಗೆ ಅಬ್ಬರಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ, ಕೋವಿಡ್ ಪಾಸಿಟಿವ್ ಆಗಿಲ್ಲ: ಜಾಕ್ ಮಂಜು

    ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ, ಕೋವಿಡ್ ಪಾಸಿಟಿವ್ ಆಗಿಲ್ಲ: ಜಾಕ್ ಮಂಜು

    ಕಿಚ್ಚ ಸುದೀಪ್ ಅವರಿಗೆ ಎರಡನೇ ಬಾರಿ ಕೋವಿಡ್ ಸೋಂಕು ತಗುಲಿದೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ನೆಚ್ಚಿನ ನಟನಿಗೆ ಮತ್ತೆ ಕೋರೋನಾ ಬಾಧಿಸಿತಾ ಎಂದು ಅಭಿಮಾನಿಗಳು ಆತಂದಲ್ಲಿದ್ದರು. ಆದಷ್ಟು ಬೇಗ ಸುದೀಪ್ ಗುಣಮುಖರಾಗಲಿ ಎಂದು ಹಾರೈಕೆಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದವು. ಸುದೀಪ್ ಜ್ವರದಿಂದ ಬಳಲುತ್ತಿರುವುದು ನಿಜ. ಆದರೆ, ಕೋವಿಡ್ ಪಾಸಿಟಿವ್ ಆಗಿಲ್ಲ ಎಂದು ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ ಕೊಟ್ಟಿದ್ದಾರೆ.

    ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಜಾಕ್ ಮಂಜು, ‘ಸುದೀಪ್ ಅವರು ಜ್ವರದಿಂದ ಬಳಲುತ್ತಿರುವುದು ನಿಜ. ಆದರೆ, ಕೋವಿಡ್ ಪಾಸಿಟಿವ್ ಆಗಿಲ್ಲ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಗದಿತ ದಿನಾಂಕಗಳಂದು ಅವರು ಮತ್ತೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜುಲೈ 23 ರಿಂದ ಅವರು ಅನೇಕ ಊರುಗಳಿಗೆ ಪ್ರಚಾರಕ್ಕಾಗಿ ತೆರಳಲಿದ್ದಾರೆ ಎಂದು ಮಂಜು ವಿಡಿಯೋದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ದಿಶಾ ಪಟಾನಿ ನಯಾ ಫೋಟೋಶೂಟ್

    ಸುದೀಪ್ ನಟನೆಯ ವಿಕ್ರಾಂತ್ ರೋಣ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಬಿಡುವಿಲ್ಲದ ಪ್ರಚಾರದ ಕೆಲಸಗಳಲ್ಲಿ ಕಿಚ್ಚ ತೊಡಗಿಕೊಂಡಿದ್ದಾರೆ. ಈ ನಡುವೆ ಬಿಗ್ ಬಾಸ್ ಸೀಸನ್ 9ರ ಪ್ರೊಮೋ ಶೂಟಿಂಗ್ ನಲ್ಲೂ ಅವರು ಮೊನ್ನೆಯಷ್ಟೇ ಭಾಗಿಯಾಗಿದ್ದರು. ಇನ್ನೇನು ಮುಂದಿನ ವಾರ ಸಿನಿಮಾ ರಿಲೀಸ್ ಆಗಬೇಕು ಅಷ್ಟರಲ್ಲಿ ಕೋವಿಡ್ ಸೋಂಕು ಎಂದು ಸುದ್ದಿಯಾಗಿ ಅಭಿಮಾನಿಗಳು ಆತಂಕ್ಕೀಡಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಡಿಸೆಂಬರ್ ನಿಂದ ಸುದೀಪ್ ನಟನೆಯ ಹೊಸ ಸಿನಿಮಾದ ಶೂಟಿಂಗ್ ಶುರು

    ಡಿಸೆಂಬರ್ ನಿಂದ ಸುದೀಪ್ ನಟನೆಯ ಹೊಸ ಸಿನಿಮಾದ ಶೂಟಿಂಗ್ ಶುರು

    ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇದೇ ಜು.28ಕ್ಕೆ ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಬಿಡುವಿಲ್ಲದೇ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ನಡುವೆಯೇ ಅವರ ಅಭಿಮಾನಿಗಳಿಗೆ ಹೊಸ ಸುದ್ದಿಯನ್ನು ನೀಡಿದ್ದು, ತಮ್ಮ ಹೊಸ ಸಿನಿಮಾ ಇದೇ ಡಿಸೆಂಬರ್ ನಿಂದ ಚಿತ್ರೀಕರಣ ನಡೆಸಲಿದೆ ಎಂದು ಹೇಳಿಕೊಂಡಿದ್ದಾರೆ.

    ಅಂದುಕೊಂಡಂತೆ ಆಗಿದ್ದರೆ ವಿಕ್ರಾಂತ್ ರೋಣ ಸಿನಿಮಾಗೂ ಮುನ್ನ ಬಿಲ್ಲ ರಂಗ ಬಾಷಾ ಸಿನಿಮಾ ಸೆಟ್ಟೇರಬೇಕಿತ್ತು. ಪೈಲ್ವಾನ್ ಸಿನಿಮಾದ ವೇಳೆಯಲ್ಲೇ ಜೋರಾಗಿ ಈ ಸಿನಿಮಾದ ಬಗ್ಗೆ ಸುದ್ದಿ ಹಬ್ಬಿತ್ತು. ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್ ನ ಮೊದಲ ಸಿನಿಮಾ ಇದೇ ಆಗಬೇಕಿತ್ತು. ಆದರೆ, ಅದನ್ನು ಪಕ್ಕಕ್ಕಿಟ್ಟು ವಿಕ್ರಾಂತ್ ರೋಣ ಸಿನಿಮಾ ಮಾಡಿದರು ಕಿಚ್ಚ. ಇದೀಗ ಅದೇ ಸಿನಿಮಾದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಇದನ್ನೂ ಓದಿ:ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ಬಿಲ್ಲ ರಂಗ ಬಾಷಾ ಸಿನಿಮಾಗೆ ಮತ್ತೆ ಮರುಜೀವ ಬಂದಿದ್ದು, ಈ ಸಿನಿಮಾ ಡಿಸೆಂಬರ್ ನಿಂದ ಶೂಟಿಂಗ್ ಶುರುವಾಗಲಿದೆ ಎಂದು ಮಾತನಾಡಿದ್ದಾರೆ. ಈ ಸಿನಿಮಾಗೆ ಅನೂಪ್ ಭಂಡಾರಿ ಅವರೇ ನಿರ್ದೇಶಕರಾಗಿದ್ದು, ಹೆಚ್ಚಿನ ಮಾಹಿತಿಯನ್ನು ನವೆಂಬರ್ ಹೊತ್ತಿಗೆ ಸಿಗಬಹುದು ಎನ್ನಲಾಗುತ್ತಿದೆ. ಈ ಸಿನಿಮಾದ ಸ್ಕ್ರಿಪ್ಟ್ ವರ್ಕ್ ಬಹುತೇಕ ಮುಗಿದಿದ್ದು, ಅದೇ ಸಿನಿಮಾವನ್ನು ಮಾಡುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • `ವಿಕ್ರಾಂತ್ ರೋಣ’ ಸಿನಿಮಾಗಾಗಿ ಫ್ಯಾಷನ್ ಡಿಸೈನರ್ ಆದ ಕಿಚ್ಚ ಸುದೀಪ್

    `ವಿಕ್ರಾಂತ್ ರೋಣ’ ಸಿನಿಮಾಗಾಗಿ ಫ್ಯಾಷನ್ ಡಿಸೈನರ್ ಆದ ಕಿಚ್ಚ ಸುದೀಪ್

    ಚಿತ್ರರಂಗದಲ್ಲಿ ಸೌಂಡ್ ಮಾಡುತ್ತಿರುವ ಸುದ್ದಿ ಅಂದ್ರೆ `ವಿಕ್ರಾಂತ್ ರೋಣ’, ಕಿಚ್ಚ ಸುದೀಪ್ ಕೆರಿಯರ್‌ನಲ್ಲಿ ದೊಡ್ಡ ಮಟ್ಟದಲ್ಲಿ ಓಪನಿಂಗ್ಸ್ ಪಡೆದುಕೊಳ್ಳುತ್ತಿರುವ ಸಿನಿಮಾ ಇದೀಗ ಈ ಚಿತ್ರದ ಮೂಲಕ ಸುದೀಪ್ ಫ್ಯಾಷನ್ ಡಿಸೈನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.

    ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಸ್ಟಾರ್ ನಟ ಸುದೀಪ್ ಬಹುಮುಖ ಪ್ರತಿಭೆ ಅನ್ನೋದನ್ನ ಈಗಾಗಲೇ ಪ್ರೂವ್ ಮಾಡಿದ್ದಾರೆ. ಹೀಗಿರುವಾಗ ಕಿಚ್ಚನ ಅಡ್ಡಾದಿಂದ ಹೊಸ ವಿಚಾರವೊಂದು ಹೊರಬಿದ್ದಿದೆ. ವಿಕ್ರಾಂತ್ ರೋಣ ಸಿನಿಮಾಗಾಗಿ ಸುದೀಪ್ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಈ ಚಿತ್ರದ ತಮ್ಮ ಪಾತ್ರಕ್ಕಾಗಿ ತಾವೇ ಕಾಸ್ಟ್ಯೂಮ್‌ ಡಿಸೈನ್ ಮಾಡಿದ್ದಾರೆ. `ವಿಕ್ರಾಂತ್ ರೋಣ’ ಆಗಿ ಮಿಂಚ್ತಿರುವ ಸುದೀಪ್ ಪಾತ್ರದ ಲುಕ್ ಎಲ್ಲರ ಗಮನ ಸೆಳೆದಿದೆ. ಈ ಎಲ್ಲದರ ಹಿಂದಿನ ರೂವಾರಿ ಸ್ವತಃ ಕಿಚ್ಚ ಸುದೀಪ್ ಅವರೇ ಎಂಬುದು ರಿವೀಲ್ ಆಗಿದೆ.

    ಈಗಾಗಲೇ ಚಿತ್ರದ ಟ್ರೈಲರ್‌ ಮತ್ತು ಪೋಸ್ಟರ್‌ನಲ್ಲಿ ವೈರಲ್ ಆಗಿರುವ ಸ್ಲೀವ್‌ಲೆಸ್ ಶರ್ಟ್‌ ಕಿಚ್ಚನ ಲುಕ್ ಅಭಿಮಾನಿಗಳನ್ನ ಅಟ್ರಾಕ್ಟ್ ಮಾಡಿತ್ತು. ಈ ಚಿತ್ರದಲ್ಲಿ ಸುದೀಪ್ ಡಿಫರೆಂಟ್ ಆಗಿ ಕಾಣಬೇಕು ಅಂತಾ ಯೋಚನೆ ಮಾಡಿ, ಸ್ಲೀವ್‌ಲೆಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ನಭಾ ನಟೇಶ್ ಸಹೋದರ ಎಂಟ್ರಿ

     

    View this post on Instagram

     

    A post shared by KicchaSudeepa (@kichchasudeepa)

    ʻವಿಕ್ರಾಂತ್ ರೋಣʼ ಸಿನಿಮಾ 3ಡಿ ರೂಪದಲ್ಲಿ ಜುಲೈ 28ಕ್ಕೆ ಬಹುಭಾಷೆಗಳಲ್ಲಿ ತೆರೆ ಕಾಣುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರದಲ್ಲಿ ಸುದೀಪ್ ಜತೆ ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]