Tag: village

  • ಹುಲಿ ಹಿಡಿಯಲು ವಿಫಲ – ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

    ಹುಲಿ ಹಿಡಿಯಲು ವಿಫಲ – ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಜನ

    ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನಲ್ಲಿ ಅರಣ್ಯ ಪ್ರದೇಶ ಹೆಚ್ಚಿದೆ. ಅರಣ್ಯದ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.

    ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಾಣ ಭಯದಲ್ಲಿ ಜೀವ ನಡೆಸುತ್ತಿರುವ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ 2 ತಿಂಗಳಿನಿಂದ ಗ್ರಾಮದ ಹೊರವಲಯದಲ್ಲಿ ಹುಲಿ ಹಾಗೂ ಚಿರತೆ ಕಾಣಿಸಿಕೊಳ್ಳುತ್ತಿವೆ. ಈ ಬಗ್ಗೆ ಜನರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ, ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಬೋನು ಇಡಲಾಗಿದೆ. ಮಂಗಳವಾರ ಹುಲಿ ಮತ್ತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಜನರು ಅರಣ್ಯ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.

    ಜಾನುವಾರುಗಳ ಮೇಲೆ ದಾಳಿ:
    ತಿಂಗಳಿನಿಂದ ಗ್ರಾಮದ ಸುತ್ತಲೂ ಓಡಾಡುತ್ತಿರುವ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ರೈತರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ನಂತರ ಅರಣ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಇತ್ತ ಸುಳಿಯದೇ ಇರುವುದು ರೈತರು ಪಿತ್ತ ನೆತ್ತಿಗೇರಿಸಿತ್ತು.

    ಅರಣ್ಯ ಇಲಾಖೆ ಸಿಬ್ಬಂದಿಯನ್ನ ಬೋನ್​​ನಲ್ಲಿ ಇರಿಸಿದ ಬಗ್ಗೆ ಮಾಹಿತಿ ಪಡೆದ ಗುಂಡ್ಲುಪೇಟೆ ವಲಯದ ಎಸಿಎಫ್ ಸುರೇಶ್ ಹಾಗೂ ಬಂಡೀಪುರ ವಲಯದ ಎಸಿಎಫ್ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ. ಈ ವೇಳೆ, ರೈತರು ಹಾಗೂ ಅರಣ್ಯಾಧಿಕಾರಿಗಳ ನಡುವೆ ಮಾತಿನ‌ ಚಕಮಕಿ ನಡೆಯಿತು. ಕಾಡುಪ್ರಾಣಿಗಳ ಭೀತಿಯಲ್ಲಿ ನಾವು ಜೀವನ ನಡೆಸುತ್ತಿದ್ದೇವೆ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸಿಬ್ಬಂದಿಯನ್ನ ಬೋನಿನಿಂದ ಹೊರ ಬಿಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಮನವೊಲಿಸಿದರು.

  • ಹಣ ಸಂಗ್ರಹಿಸಿ 3 ಕಿ.ಮೀ. ರಾಜ್ಯ ಹೆದ್ದಾರಿಯ ಗುಂಡಿ ಮುಚ್ಚಿದ ಬೀದರ್‌ ಗ್ರಾಮಸ್ಥರು!

    ಹಣ ಸಂಗ್ರಹಿಸಿ 3 ಕಿ.ಮೀ. ರಾಜ್ಯ ಹೆದ್ದಾರಿಯ ಗುಂಡಿ ಮುಚ್ಚಿದ ಬೀದರ್‌ ಗ್ರಾಮಸ್ಥರು!

    – ಕಂದಗೋಳ ಗ್ರಾಮಸ್ಥರಿಂದ ಕೆಲಸ
    – ಗ್ಯಾರಂಟಿಯಿಂದ ಸರ್ಕಾರದ ಬಳಿ ದುಡ್ಡಿ ಇಲ್ಲ ಎಂದು ಆಕ್ರೋಶ

    ಬೀದರ್‌: ಪಂಚ ಗ್ಯಾರಂಟಿ (Congress Guarantee) ಯೋಜನೆಯನ್ನು ಜಾರಿ ಮಾಡಿದ ಬಳಿಕ ರಾಜ್ಯ ಸರ್ಕಾರದ ಬಳಿ ಡೆಡ್ಲಿ ಗುಂಡಿಗಳನ್ನು ಮುಚ್ಚಲು (Road Repair) ಹಣವಿಲ್ವಾ ಎಂಬ ಪ್ರಶ್ನೆ ಎದ್ದಿದೆ. ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿ ಸುಸ್ತಾದ ಜಿಲ್ಲೆಯ ಕಂದಗೋಳ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಲ್ಲೇ ಗುಂಡಿಗಳನ್ನು ಮುಚ್ಚಲು ಆರಂಭಿಸಿದ್ದಾರೆ.

    ಬೀದರ್‌ನಿಂದ (Bidar) ತೆಲಂಗಾಣದ ಹಾಗೂ ಮಹಾರಾಷ್ಟಕ್ಕೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಗುಂಡಿಗಳು (Potholes) ಸೃಷ್ಟಿಯಾಗಿವೆ. ಬೀದರ್‌ನಿಂದ ವಡಗಾಂವ್ ಮಾರ್ಗವಾಗಿ ತೆಲಂಗಾಣದ ಮತ್ತು ನಾಗಮಾರಪಳ್ಳಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಇದನ್ನೂ ಓದಿ: ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್ ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

    ಭಾರೀ ಗಾತ್ರದ ವಾಹನಗಳ ಓಡಾಟದಿಂದ ರಸ್ತೆಗಳು ಮತ್ತಷ್ಟು ಹಾಳಾಗಿವೆ. ಪ್ರತಿದಿನ ಬೀದರ್‌ಗೆ ಹಾಗೂ ಔರಾದ್‌ಗೆ ಹೋಗಬೇಕಾದರೆ ಭಯದಲ್ಲೇ ಜನ ಸಂಚಾರ ಮಾಡುತ್ತಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದರೂ ಪ್ರಯೋಜನ ಆಗಿರಲಿಲ್ಲ. ಶಾಸಕರು ಮತ್ತು ಮಾಜಿ ಸಚಿವರಾದ ಪ್ರಭು ಚೌಹಾಣ್‌ಗೆ ಹತ್ತಾರು ಬಾರಿ ಮನವಿ ಮಾಡಿದರೂ ಕೆಲಸ ಆಗಲಿಲ್ಲ.

    ಮನವಿಗೆ ಯಾವುದೇ ಸ್ಪಂದನೆ ಸಿಗದ ಕಾರಣ ಕಂದಗೋಳ ಗ್ರಾಮಸ್ಥರೇ ತಮ್ಮ ತಮ್ಮ ಕೈಯಿಂದ ಹಣ ಹಾಕಿಕೊಂಡು ರಸ್ತೆ ರಿಪೇರಿ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲೇ ಜಲ್ಲಿ, ಮರಳು ತಂದು ರಸ್ತೆಯಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚಿದ್ದಾರೆ. ಮೂರು ಕಿಲೋಮೀಟರ್ ದೂರದವರೆಗೆ ಇರುವ ಗುಂಡಿಗಳನ್ನು ಮಣ್ಣಿನಿಂದ ಮುಚ್ಚಿ ಮಾದರಿ ಆಗಿದ್ದಾರೆ. ಇದರಿಂದ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮುಜುಗರವಾಗಿದೆ.

    ಗ್ರಾಮಸ್ಥ ಕಾಶಿನಾಥ್‌ ಪ್ರತಿಕ್ರಿಯಿಸಿ, ಪ್ರತಿದಿನ ಇಲ್ಲಿ ಸಾವಿರಾರು ವಾಹನಗಳು ಓಡಾಡುತ್ತಿವೆ. ಪ್ರತಿದಿನ ಬೈಕಿನಿಂದ ಸವಾರರು ರಸ್ತೆಗೆ ಬಿದ್ದು ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಈ ರಸ್ತೆಯಲ್ಲಿ ಓಡಾಡುತ್ತಿದ್ದು ಹಲವು ಬಾರಿ ಬಿದ್ದಿದ್ದೇವೆ. ಸಾಕಷ್ಟು ಬಾರಿ ಅಧಿಕಾರಿಗಳನ್ನು, ಜನಪ್ರತಿನಿಧಿಗಳ ಬಳಿ ಮನವಿ ಮಾಡಿ ರಿಪೇರಿ ಮಾಡುವಂತೆ ಕೇಳಿಕೊಂಡಿದ್ದೆವು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಕೊನೆಗೆ ನಾವೇ ಗ್ರಾಮಸ್ಥರಿಂದ ಹಣವನ್ನು ಸಂಗ್ರಹ ಮಾಡಿ ಗುಂಡಿ ಮುಚ್ಚಲು ಮುಂದಾಗುತ್ತಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ ಎಂದು ದೂರಿದರು. ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಕೇಸ್ ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

  • ಗುಳೇದಗುಡ್ಡ ತಾಲೂಕಿನ 3 ಗ್ರಾಮದಲ್ಲಿ ಚಿರತೆ ಆತಂಕ

    ಗುಳೇದಗುಡ್ಡ ತಾಲೂಕಿನ 3 ಗ್ರಾಮದಲ್ಲಿ ಚಿರತೆ ಆತಂಕ

    ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ (Guledgudda) ತಾಲೂಕಿನಲ್ಲಿ ಬರುವ ಮಂಗಳಗುಡ್ಡ, ಚಿಮ್ಮಲಗಿ ಹಾಗೂ ಪಟ್ಟದಕಲ್ಲು ಗ್ರಾಮಕ್ಕೆ ಹೊಂದಿಕೊಂಡಂತಿರುವ ಗುಡ್ಡದಲ್ಲಿ ಚಿರತೆ (Leopard) ಕಾಣಿಸಿದೆ.

    ಚಿರತೆ ಗುಡ್ಡದಲ್ಲಿ ಓಡಾಡುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲಿನಲ್ಲಿ ಸೆರೆಹಿಡಿದಿದ್ದು ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಇನ್ನುಂದೆ ʻಅನ್ನಭಾಗ್ಯʼ ಹಣದ ಬದಲು ಅಕ್ಕಿ ಕೊಡಲು ಸರ್ಕಾರ ತೀರ್ಮಾನ


    ಚಿರತೆ ರಾತ್ರಿ ಆಕಳು ಮತ್ತು ಕರುವಿನ ಮೇಲೆ ದಾಳಿ ಮಾಡಿ, ತಿಂದು ಹೋದ ಘಟನೆಗಳು ನಡೆದಿವೆ. ಚಿರತೆ ಕಾಣಿಸಿದ್ದರಿಂದ ಗ್ರಾಮದ ರೈತರು ಹಾಗೂ ಗದ್ದೆಗಳಲ್ಲಿ ಕೆಲಸ ಮಾಡುವ ಜನರು ಭಯದಲ್ಲಿದ್ದಾರೆ.

  • ದಕ್ಷಿಣ ಕನ್ನಡ: ಬೆಳ್ತಂಗಡಿಯ ಬಾಂಜಾರು ಮಲೆಯಲ್ಲಿ 100% ಮತದಾನ

    ದಕ್ಷಿಣ ಕನ್ನಡ: ಬೆಳ್ತಂಗಡಿಯ ಬಾಂಜಾರು ಮಲೆಯಲ್ಲಿ 100% ಮತದಾನ

    ಮಂಗಳೂರು: ಲೋಕಸಭಾ ಚುನಾವಣೆಯ (Loksabha Elections 2024) ಮೊದಲ ಹಂತದ ಮತದಾನ ಇಂದು ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬಹುತೇಕವಾಗಿ ಶಾಂತಿಯುತ ಮತದಾನ ನಡೆದಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಗ್ರಾಮವೊಂದು ಎಲ್ಲರ ಗಮನಸೆಳೆದಿದೆ.

    ಹೌದು. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆ (Banjarau Male) ಗ್ರಾಮದ ಮತದಾರರು ಹಕ್ಕು ಚಲಾಯಿಸಲು ಹಿಂದೇಟು ಹಾಕಿದವರಿಗೆ ಸೆಡ್ಡು ಹೊಡೆದಿದ್ದಾರೆ. ಈ ಗ್ರಾಮದಲ್ಲಿ ನೂರಕ್ಕೆ‌ ನೂರು ಮತದಾನವಾಗಿದೆ. ಗ್ರಾಮದಲ್ಲಿರುವ 111 ಮತದಾರರು ಕೂಡ ಮತದಾನ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

    ಒಟ್ಟಾರೆಯಾಗಿ ಕುಗ್ರಾಮವಾದರೂ ತಮ್ಮ ಹಕ್ಕು ಚಲಾಯಿಸುವಲ್ಲಿ ಮಾತ್ರ ಗ್ರಾಮಸ್ಥರು ಎಲ್ಲರಿಗೂ ಮಾದರಿಯಾಗಿದ್ದಾರೆ. ಸಂಜೆ 5 ಗಂಟೆಯ ವೇಳೆಗೆ ದಕ್ಷಿಣ ಕನ್ನಡದಲ್ಲಿ 71.83% ರಷ್ಟು ಮತದಾನವಾಗಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟಾ ಹಾಗೂ ಕಾಂಗ್ರೆಸ್‍ನಿಂದ ಪದ್ಮರಾಜ್ ರಾಮಯ್ಯ ಚುನಾವಣಾ ಅಖಾಡದಲ್ಲಿದ್ದಾರೆ. ಇದನ್ನೂ ಓದಿ: ಧರ್ಮದ ಆಧಾರದಲ್ಲಿ ಮತಯಾಚನೆ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌

  • ಕಾರವಾರದಲ್ಲಿ ಸೇತುವೆ ಸಂಪರ್ಕ ಬಂದ್- ಕಿ.ಮೀ ಗಟ್ಟಲೇ ವ್ಯಕ್ತಿ ಹೊತ್ತೊಯ್ದ ಜನ

    ಕಾರವಾರದಲ್ಲಿ ಸೇತುವೆ ಸಂಪರ್ಕ ಬಂದ್- ಕಿ.ಮೀ ಗಟ್ಟಲೇ ವ್ಯಕ್ತಿ ಹೊತ್ತೊಯ್ದ ಜನ

    ಕಾರವಾರ: ದೇಶ ಎಷ್ಟೇ ಮುಂದುವರಿದಿದ್ದರೂ ಉತ್ತರ ಕನ್ನಡ ಜಿಲ್ಲೆಯ ಮಟ್ಟಿಗೆ ಮಾತ್ರ ಅಭಿವೃದ್ಧಿ ಎನ್ನುವುದೇ ಮರೀಚಿಕೆ. ರಸ್ತೆಗಳಿಲ್ಲದೇ ಅದೆಷ್ಟೋ ಗ್ರಾಮಗಳು ಇಂದು ಸಹ ಅನಾರೋಗ್ಯ ಪೀಡಿತ ಜನರನ್ನು ಕರೆತರಲು ಜೋಳಿಗೆಯೇ ಆಶ್ರಯ. ಮಳೆಬಂತು ಎಂದರೇ ಜಲದಿಗ್ಭಂದನವಾಗುವ ಗ್ರಾಮದ ಜನರ ಸಂಕಷ್ಟ ಕೇಳುವರೇ ಇಲ್ಲ.

    ಉತ್ತರ ಕನ್ನಡ (UttaraKannada) ಜಿಲ್ಲೆಯ ಅಂಕೋಲಾ (Ankola) ತಾಲೂಕಿನ ಕೆಂದಗಿ ಗ್ರಾಮದ ಉಮೇಶ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕತ್ತಿ ಜಾರಿದ ಪರಿಣಾಮ ಕಾಲಿಗೆ ಗಂಭೀರ ಗಾಯಗೊಂಡಿದ್ದ. ಆದರೆ ಭಾರೀ ಮಳೆಯಿಂದಾಗಿ ಗ್ರಾಮದ ಬಳಿ ಹರಿಯುವ ನಾಲ್ಕು ಹಳ್ಳಗಳಿಂದಾಗಿ ಜಲದಿಗ್ಭಂದನ ಉಂಟಾಗಿದ್ದು, ಆಸ್ಪತ್ರೆಗೆ (Hospital) ತೆರಳಲಾಗದೇ ಮನೆಯಲ್ಲಿಯೇ ಉಳಿದುಕೊಳ್ಳುವಂತಾಗಿತ್ತು. ನಾಲ್ಕೈದು ದಿನಗಳ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಈ ವೇಳೆ ಗ್ರಾಮಸ್ಥರು ಒಟ್ಟಾಗಿ ಜೋಳಿಗೆ ಮೂಲಕ ಗಾಯಗೊಂಡಿದ್ದ ಉಮೇಶ್‌ನನ್ನ ಹೆಗಲ ಮೇಲೆ ಹೊತ್ತುಕೊಂಡು ಸುಮಾರು 15 ಕಿಲೋ ಮೀಟರ್ ದೂರ ಕಾಡಿನ ಹಾದಿಯಲ್ಲಿ ನಡೆದುಕೊಂಡೇ ಕರೆತಂದಿದ್ದಾರೆ. ಬಳಿಕ ಹಟ್ಟಿಕೇರಿ ಗ್ರಾಮದಿಂದ ವಾಹನದ ಮೂಲಕ ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು ರಸ್ತೆಯಿಲ್ಲದ ಪರಿಣಾಮ ಗಾಯಗೊಂಡು ವಾರದ ಬಳಿಕ ಆಸ್ಪತ್ರೆಗೆ ಸೇರುವಂತಾಗಿದೆ.

    ಕೆಂದಗಿ ಗ್ರಾಮವು ದಟ್ಟ ಕಾಡಿನ ನಡುವೆ ಇದ್ದು ಏನೇ ಅಗತ್ಯ ವಸ್ತುಗಳು ಬೇಕಿದ್ದರೂ ಸಹ 18 ಕಿಲೋ ಮೀಟರ್ ದೂರದ ಹಟ್ಟಿಕೇರಿ ಗ್ರಾಮಕ್ಕೆ ಆಗಮಿಸಬೇಕು. ಗ್ರಾಮಕ್ಕೆ ತೆರಳಬೇಕಂದ್ರೆ ರಸ್ತೆಯೇ ಇಲ್ಲ. ಬೊಕಳೆ ಹಳ್ಳ, ವತ್ತಿನ ಹಳ್ಳ, ಕಂಬದ ಹಳ್ಳ ಹಾಗೂ ಕೆಂದಗಿ ದೊಡ್ಡ ಹಳ್ಳವನ್ನ ಕಾಲು ಹಾದಿಯಲ್ಲಿ ನಡೆದುಕೊಂಡು ದಾಟಿಯೇ ಬರಬೇಕು. ಮಳೆಗಾಲದಲ್ಲಂತೂ ಗ್ರಾಮಸ್ಥರ ಪಾಡು ಹೇಳತೀರದಾಗಿದ್ದು ಹಳ್ಳಗಳು ತುಂಬಿ ಹರಿಯುವ ಸಂದರ್ಭದಲ್ಲಿ ಗ್ರಾಮದ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ. ಹೀಗಾಗಿಯೇ ಗ್ರಾಮದಲ್ಲಿನ ವಿದ್ಯಾರ್ಥಿಗಳು ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    ದೇಶ ಚಂದ್ರನ ಮೇಲೆ ತಲುಪಿದರೂ ಸಹ ಇದುವರೆಗೂ ರಸ್ತೆ ಸಂಪರ್ಕವಿಲ್ಲದೇ ಈವಗ್ರಾಮದ ಜನ ನಗರ ಪ್ರದೇಶಕ್ಕೆ ತಲುಪದ ಸ್ಥಿತಿ ಇದೆ. ಇನ್ನಾದ್ರೂ ಸರ್ಕಾರ ಇತ್ತ ಗಮನಹರಿಸಿ ಗ್ರಾಮಕ್ಕೆ ಕನಿಷ್ಠ ಸಂಪರ್ಕ ವ್ಯವಸ್ಥೆಯನ್ನಾದರೂ ಕಲ್ಪಿಸಿಕೊಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎರಡೂವರೆ ವರ್ಷದ ಬಳಿಕ ನಡೆಯಿತು ಗ್ರಾ.ಪಂ. ಮರು ಮತ ಎಣಿಕೆ

    ಎರಡೂವರೆ ವರ್ಷದ ಬಳಿಕ ನಡೆಯಿತು ಗ್ರಾ.ಪಂ. ಮರು ಮತ ಎಣಿಕೆ

    ತುಮಕೂರು: ಹೈಕೋರ್ಟ್‌ (High Court) ಆದೇಶದಂತೆ ಹೊಸಕೆರೆ ಗ್ರಾಮ ಪಂಚಾಯತ್‌ (Village Panchayat) ಶಿವನೇಹಳ್ಳಿ ವಾರ್ಡ್‌ ಮತಗಳ ಮರುಎಣಿಕೆ (Recounting) ಗುರುವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.

    ಎರಡೂವರೆ ವರ್ಷದ ಹಿಂದೆ ನಡೆದ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಶಿವೇನಹಳ್ಳಿ ವಾರ್ಡ್‌ನ  ಅಜಯ್ 296 ಮತ ಪಡೆದು, ಕೇವಲ 1 ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದರು. 295 ಮತ ಪಡೆದಿದ್ದ ಅರೇಹಳ್ಳಿ ನಟರಾಜು ಮತ ಎಣಿಕೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

    high court (1)

    ಗುಬ್ಬಿ ಹಾಗೂ ತುಮಕೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಎರಡು ವರ್ಷದ ನಂತರ ಚುನಾಯಿತ ಸದಸ್ಯ ಅರೇಹಳ್ಳಿ ನಟರಾಜು ಎಂದು ಘೋಷಿಸಿ ಪ್ರಮಾಣ ಪತ್ರ ಸಹ ನೀಡಲಾಗಿತ್ತು. ಇದನ್ನೂ ಓದಿ: ಟ್ವಿಟ್ಟರ್‌ಗಿಂತ ಥ್ರೆಡ್ಸ್‌ ಭಿನ್ನ ಹೇಗೆ? ವಿಶೇಷತೆ ಏನು

    ಈ ಆದೇಶವನ್ನು ಪ್ರಶ್ನಿಸಿ ಸದಸ್ಯ ಅಜಯ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದಂತೆ ಗುರುವಾರ ಮರು ಎಣಿಕೆ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಕಳುಹಿಸಲಾಗಿದೆ.

    ಅರ್ಜಿದಾರ ಅಜಯ್ ಪ್ರತಿಕ್ರಿಯಿಸಿ, ಕೆಳ ನ್ಯಾಯಾಲಯಗಳ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮರುಎಣಿಕೆ ಆದೇಶ ಪಡೆಯಲಾಗಿತ್ತು. ಅದರಂತೆ  ಈಗಎಣಿಕೆ ನಡೆದಿದ್ದು, ಗೆಲುವು ಸಾಧಿಸುತ್ತೇನೆ ಎಂಬ ನಿರೀಕ್ಷೆ ಇದೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕದ 865 ಹಳ್ಳಿಗಳಿಗೆ ಆರೋಗ್ಯ ವಿಮೆ – ಮಹಾರಾಷ್ಟ್ರದ ಸರ್ಕಾರದಿಂದ ಆದೇಶ

    ಕರ್ನಾಟಕದ 865 ಹಳ್ಳಿಗಳಿಗೆ ಆರೋಗ್ಯ ವಿಮೆ – ಮಹಾರಾಷ್ಟ್ರದ ಸರ್ಕಾರದಿಂದ ಆದೇಶ

    ಬೆಳಗಾವಿ/ ಬೆಂಗಳೂರು: ಮಹಾರಾಷ್ಟ್ರದ (Maharashtra ) ಗಡಿಕ್ಯಾತೆ ಮುಂದುವರಿದಿದ್ದು ಕರ್ನಾಟಕದ (Karnataka) 865 ಹಳ್ಳಿಗಳಿಗೆ ಅನ್ವಯವಾಗುವಂತೆ ಆರೋಗ್ಯ ವಿಮೆಯನ್ನು (Health Insurance) ಮಹಾರಾಷ್ಟ್ರ ಸರ್ಕಾರ ಜಾರಿ ಮಾಡಿ ಆದೇಶ ಹೊರಡಿಸಿ ಉದ್ಧಟತನ ಮೆರೆದಿದೆ.

    ಈ ಬೆನ್ನಲ್ಲೇ ಸಿಎಂ ಬೊಮ್ಮಾಯಿ (CM Bommai) ಟ್ವೀಟ್ ಮಾಡಿ, ಮಹಾರಾಷ್ಟ್ರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಗಡಿವಿವಾದ ಸುಪ್ರೀಂಕೋರ್ಟ್‍ನಲ್ಲಿದ್ದರೂ (Supreme Court) ಮಹಾ ಸರ್ಕಾರ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಮಹಾರಾಷ್ಟ್ರದ ಕನ್ನಡ ಭಾಷಿಕ ಹಳ್ಳಿಗಳಿಗೆ ನಾವೂ ಯೋಜನೆಗಳನ್ನು ಪ್ರಕಟಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ಈಗ ಸ್ಟಾರ್ ಪ್ರಚಾರಕ – ಬಿಜೆಪಿ ಲೆಕ್ಕಾಚಾರ ಏನು?

    ಸಿಎಂ ಏಕ್‍ನಾಥ್ ಶಿಂಧೆ (Eknath Shinde) ವಿರುದ್ಧ ಸಿದ್ದರಾಮಯ್ಯ (Siddaramaiah) ಆಕ್ರೋಶ ಹೊರಹಾಕಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೇ ಇದ್ದರೇ ಪರಿಣಾಮ ನೆಟ್ಟಗಿರದು ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ನೀಡಿದ ಎಚ್ಚರಿಕೆಯನ್ನು ಮಹಾರಾಷ್ಟ್ರ ಸರ್ಕಾರ ಧಿಕ್ಕರಿಸಿದೆ. ಮುಖ್ಯಮಂತ್ರಿ ಬೊಮ್ಮಾಯಿ ಈಗ ಬದ್ಧತೆ ತೋರಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

    ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ಕೂಡ ಟ್ವೀಟ್ ಮಾಡಿ ಮಹಾರಾಷ್ಟ್ರ ಸರ್ಕಾರದ ಕ್ರಮನ್ನು ಖಂಡಿಸಿ ಮೋದಿ ಮೌನವನ್ನೂ ಪ್ರಶ್ನೆ ಮಾಡಿದ್ದಾರೆ.

  • ಚಿರತೆ ದಾಳಿ – ಕುಟುಂಬಗಳನ್ನು ಭೇಟಿಯಾಗಿ ಗ್ರಾಮಸ್ಥರ ಅಹವಾಲು ಆಲಿಸಿದ ಎಸ್‌ಟಿಎಸ್‌

    ಚಿರತೆ ದಾಳಿ – ಕುಟುಂಬಗಳನ್ನು ಭೇಟಿಯಾಗಿ ಗ್ರಾಮಸ್ಥರ ಅಹವಾಲು ಆಲಿಸಿದ ಎಸ್‌ಟಿಎಸ್‌

    ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಿರತೆ ದಾಳಿಗೆ ಒಳಗಾದ ಕುಟುಂಬಗಳ ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ.

    ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಮೃತಪಟ್ಟ 11 ವರ್ಷದ ಬಾಲಕ ಜಯಂತ್‌ ನಿವಾಸ ಹಾಗೂ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಮೃತಪಟ್ಟ ಸಿದ್ದಮ್ಮ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಗ್ರಾಮಸ್ಥರ ಅಹವಾಲು ಆಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

    ಚಿರತೆ ದಾಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು, ಜಿಲ್ಲಾಡಳಿತದೊಂದಿಗೆ ಸಭೆ ಕರೆಯಲಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ. ಕಬ್ಬು ಕಟಾವು, ರಸ್ತೆ ಬದಿಯ ಮರದ ರೆಂಬೆ ಕಟಾವು, ಗ್ರಾಮಕ್ಕೆ ಬಸ್ ಸೌಕರ್ಯ, ಬೀದಿದೀಪಗಳ ವ್ಯವಸ್ಥೆ ಕಲ್ಪಿಸುವುದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವುದರ ಕುರಿತು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ ಎಂದರು. ಇದನ್ನೂ ಓದಿ: PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ – ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ಕೈಗೊಳ್ಳಲಿದ್ದಾರೆ.‌ ಮತ್ತೆ ಈ ರೀತಿಯ ಅನಾಹುತ ಮರುಕಳಿಸದಂತೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುವುದು. ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ಕಲ್ಪಿಸಲಾಗಿದೆ. ಚಿರತೆ ದಾಳಿ ತಡೆಗೆ ಜಿಲ್ಲಾಡಳಿತದ ಜೊತೆ ವಿಶೇಷ ಸಭೆ ನಡೆಸಿ ಪರಿಹಾರ ದೊರಕಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

    ರಾತ್ರಿ ವೇಳೆ ಬೀದಿದೀಪಗಳ ವ್ಯವಸ್ಥೆ, ಶಾಲೆಗೆ ತೆರಳಲು ಮಕ್ಕಳಿಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಸೇರಿದಂತೆ ನಾನಾ ಸಮಸ್ಯೆಗಳನ್ನು ಗ್ರಾಮಸ್ಥರು ಬಿಚ್ಚಿಟ್ಟರು. ಇದೇ ವೇಳೆ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಸಚಿವರು, ಚಿರತೆ ದಾಳಿ ತಡೆಗೆ ಶಾಶ್ವತ ಪರಿಹಾರ ದೊರಕಿಸಲು ಕ್ರಮಕೈಗೊಳ್ಳಲಾಗುವುದು.

    ಶಾಸಕರಾದ ಎಂ.ಅಶ್ವಿನ್ ಕುಮಾರ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಅನೇಕ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

    ಮಡಿಕೇರಿ: ಯುವತಿ ಆರತಿಯನ್ನು (Arathi) ಕೊಲೆಗೈದ ಆರೋಪಿ ತಿಮ್ಮಯ್ಯ (Thimmaiah) ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ವಿರಾಜಪೇಟೆ(Virajpet) ತಾಲ್ಲೂಕಿನ ಎರಡನೇ ರುದ್ರಗುಪ್ಪೆ ಗ್ರಾಮದಲ್ಲಿ ಇರುವ ತಿಮ್ಮಯ್ಯ ಅವರ ಮನೆ ಸಮೀಪದ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ.

    ಭಾನುವಾರ ಕತ್ತಿಯಿಂದ ಕಡಿದು ಆರತಿಯನ್ನು ಹತ್ಯೆ ಬಳಿಕ ಕೆರೆಗೆ ಹಾರಿ ತಿಮ್ಮಯ್ಯ ಆತ್ಮಹತ್ಯೆ ‌ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ತಿಮ್ಮಯ್ಯನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.  ಇದನ್ನೂ ಓದಿ: ಬೆಂಗಳೂರಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

    ಎರಡು ದಿನಗಳಿಂದ ಕೆರೆಯಲ್ಲಿ ನಿರಂತರವಾಗಿ ಹುಡುಕಾಟ ನಡೆಸಿದರೂ ತಿಮ್ಮಯ್ಯನ ಮೃತದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಮಧ್ಯಾಹ್ನದ ಬಳಿಕ ಕೆರೆಯ ನೀರನ್ನು ಪಂಪ್‌ನಿಂದ ಖಾಲಿ ಮಾಡುತ್ತಿದ್ದಾಗ ತಡರಾತ್ರಿ ಮೃತದೇಹ ಪತ್ತೆಯಾಗಿದೆ.

    ಕೆರೆಯಲ್ಲಿ ಹೆಚ್ಚಾಗಿ ಕೆಸರು ತುಂಬಿದ ಹಿನ್ನೆಲೆಯಲ್ಲಿ ‌ಮೃತದೇಹ ಶೋಧಕಾರ್ಯದ ವೇಳೆ ಸುಲಭವಾಗಿ ಪತ್ತೆಯಾಗಿರಲಿಲ್ಲ. ಈಗ ಮೃತ ತಿಮ್ಮಯ್ಯನ ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಅಸ್ಪತ್ರೆಗೆ ಮರಣೋತ್ತರ ಪರೀಕ್ಷೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ರವಾನಿಸಿದ್ದಾರೆ.

    ಆರತಿ ಕೊಲೆಯಾದ ಜಾಗದ ಸಮೀಪವೇ ತಿಮ್ಮಯ್ಯನ ಬೈಕ್‌, ಮೊಬೈಲ್, ಚಪ್ಪಲಿ ಪತ್ತೆಯಾಗಿತ್ತು. ಹತ್ಯೆ ಬಳಿಕ ತಿಮ್ಮಯ್ಯ ಕೂಡ ವಿಷ ಸೇವಿಸಿರುವ ಬಗ್ಗೆ ಅನುಮಾನ ಹುಟ್ಟಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಮೊಬೈಲ್ ದೊರೆತಿರುವ ಸ್ಥಳದಲ್ಲಿ ವಿಷದ ಬಾಟಲಿಯೂ ಸಿಕ್ಕಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಶ್ಲೀಲ ದೃಶ್ಯ ನೋಡಿ ಪ್ರಚೋದನೆ – ಅಪ್ರಾಪ್ತನಿಂದ ಬಾಲಕಿಯ ಮೇಲೆ ರೇಪ್‌, ಕೊಲೆ

    ಅಶ್ಲೀಲ ದೃಶ್ಯ ನೋಡಿ ಪ್ರಚೋದನೆ – ಅಪ್ರಾಪ್ತನಿಂದ ಬಾಲಕಿಯ ಮೇಲೆ ರೇಪ್‌, ಕೊಲೆ

    ಕಲಬುರಗಿ: ಮೊಬೈಲ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ ಪ್ರಚೋದನೆಗೊಂಡ ಅಪ್ರಾಪ್ತನೊಬ್ಬ 14 ವರ್ಷದ ಬಾಲಕಿಯನ್ನು ಅತ್ಯಾಚಾರ(Rape) ಮಾಡಿ ಹತ್ಯೆಗೈದ(Murder) ಶಾಕಿಂಗ್‌ ಘಟನೆ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ. ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು ವೇಲ್‌ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.

    9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ದೀಪಾವಳಿ ರಜೆಗೆ ತನ್ನ ಸ್ವಗ್ರಾಮಕ್ಕೆ ತೆರಳಿ, ನ.3 ರಿಂದ ಪರೀಕ್ಷೆ ಇರುವ ಕಾರಣ ಮಂಗಳವಾರ ಮರಳಿ ಬಂದಿದ್ದಳು. ಸ್ಥಳಕ್ಕೆ ಕಲಬುರಗಿ ಎಸ್‌ಪಿ ಇಶಾ ಪಂತ್ ಸೇರಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.  ಇದನ್ನೂ ಓದಿ: ಪೊಲೀಸರು ಮ್ಯಾಚ್ ಫಿಕ್ಸಿಂಗ್ ಮಾಡೋದನ್ನು ಬಿಡಿ, ನಿಷ್ಠೆಯಿಂದ ಕೆಲಸ ಮಾಡಿ: ಅಲೋಕ್ ಕುಮಾರ್

    ಕಣ್ಣೀರಿಟ್ಟಿರುವ ಎಸ್‍ಪಿ ಇಶಾ ಪಂತ್, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ  16 ವರ್ಷದ ಬಾಲಕನನ್ನು ಬಂಧಿಸಿದ್ದಾರೆ.  24 ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸಿದ್ದಕ್ಕೆ ಪೊಲೀಸರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.

    ಬಾಲಕಿಯನ್ನು ಒಂಟಿಯಾಗಿ ನೋಡಿದ ಬಾಲಕ ಅತ್ಯಾಚಾರ ನಡೆಸಿದ ನಂತರ ಕಲ್ಲಿನಿಂದ ಹೊಡೆದು ವೇಲ್ ನಿಂದ ಕತ್ತು ಹಿಸುಕಿ ಬಾಲಕ ಕೊಲೆ ಮಾಡಿದ್ದಾನೆ.  ಅತ್ಯಾಚಾರ ಖಂಡಿಸಿ ಕಲಬುರಗಿ, ಆಳಂದದಲ್ಲಿ ಪ್ರತಿಭಟನೆ ನಡೆಸಿರುವ ಜನ, ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]