Tag: village

  • ಬಯಲು ಬಹಿರ್ದೆಸೆಗೆ ತೆರಳಿದ್ದ ಬಾಲಕಿಯನ್ನು ರೇಪ್‌ ಮಾಡಿ ಕೊಲೆ

    ಬಯಲು ಬಹಿರ್ದೆಸೆಗೆ ತೆರಳಿದ್ದ ಬಾಲಕಿಯನ್ನು ರೇಪ್‌ ಮಾಡಿ ಕೊಲೆ

    – ಆರೋಪಿಗಳ ಬಂಧನಕ್ಕೆ ತಂಡ ರಚನೆ

    ಕಲಬುರಗಿ: ಬಯಲು ಬಹಿರ್ದೆಸೆಗೆ ತೆರಳಿದ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ(Rape) ಮಾಡಿ ಕೊಲೆ(Murder) ಮಾಡಿರುವ ಅಮಾನವೀಯ ಕೃತ್ಯ ಕಲಬುರಗಿ(Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ. ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು ವೇಲ್‌ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.

    ಮೇಲ್ನೋಟಕ್ಕೆ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿ ನಂತರ ಕೊಲೆಗೈದಿರುವ ವಿಚಾರ ಪೊಲೀಸ್ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ಇದನ್ನೂ ಓದಿ: ಹೂಡಿಕೆದಾರರಿಗೆ ‘ಕಾಂತಾರ’ ಸಿನಿಮಾದ ಉದಾಹರಣೆ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್

    9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ದೀಪಾವಳಿ ರಜೆಗೆ ತನ್ನ ಸ್ವಗ್ರಾಮಕ್ಕೆ ತೆರಳಿ, ನ.3 ರಿಂದ ಪರೀಕ್ಷೆ ಇರುವ ಕಾರಣ ಮಂಗಳವಾರ ಮರಳಿ ಬಂದಿದ್ದಳು. ಹೀಗೆ ಬಂದವಳು ಬಯಲು ಬಹಿರ್ದೆಸೆಗೆ ಹೋದಾಗ ದುಷ್ಕರ್ಮಿಗಳು ಅಮಾನವೀಯ ಕೃತ್ಯ ನಡೆಸಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಸೇರಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವದ ಅತ್ಯಂತ ಕೊಳಕು ಮನುಷ್ಯ ನಿಧನ

    ವಿಶ್ವದ ಅತ್ಯಂತ ಕೊಳಕು ಮನುಷ್ಯ ನಿಧನ

    ಟೆಹರಾನ್: ದಶಕಗಳಿಂದಲೂ ಸ್ನಾನ ಮಾಡದೇ ಇದ್ದ ವಿಶ್ವದ ಅತ್ಯಂತ ಕೊಳಕು ಮನುಷ್ಯ (Dirtiest Man) ಎಂದೇ ಅಡ್ಡ ಹೆಸರು ಪಡೆದಿದ್ದ ಇರಾನಿನ (Iran) ವ್ಯಕ್ತಿ ನಿಧನರಾದರು.

    50 ವರ್ಷಕ್ಕೂ ಹೆಚ್ಚು ಕಾಲ ಸ್ನಾನ ಮಾಡದೇ ಒಂಟಿಯಾಗಿದ್ದ ಅಮೌ ಹಾಜಿ (94) ದಕ್ಷಿಣ ಪ್ರಾಂತ್ಯದ ಫಾರ್ಸ್‍ನ ದೇಜ್ಗಾ ಗ್ರಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

    ಹಾಜಿ ತಾನು ಸ್ನಾನ ಮಾಡಿದರೆ ಅನಾರೋಗ್ಯಕ್ಕೆ ಒಳಗಾಗುತ್ತೇನೆ ಎಂದು ಸ್ನಾನ ಮಾಡುವುದರಿಂದ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಕೆಲವು ತಿಂಗಳ ಹಿಂದೆ ಮೊದಲ ಬಾರಿಗೆ ಅಲ್ಲಿನ ಗ್ರಾಮಸ್ಥರು ಆತನನ್ನು ಬಲವಂತವಾಗಿ ಸ್ನಾನಗೃಹಕ್ಕೆ ಕರೆದೊಯ್ದು ಸ್ನಾನ ಮಾಡಿಸಿದ್ದರು. ಇದನ್ನೂ ಓದಿ: ಮೌಢ್ಯಕ್ಕೆ ಸೆಡ್ಡು – ಗ್ರಹಣ ವೇಳೆ ಬಾಳೆಹಣ್ಣು, ಚುರುಮುರಿ ಸೇವಿಸಿದ ಜನ

    2013ರಲ್ಲಿ ಹಾಜಿ ಜೀವನದ ಬಗ್ಗೆ ದಿ ಸ್ಟ್ರೇಂಜ್ ಲೈಫ್ ಆಫ್ ಅಮೌ ಹಾಜಿ ಎಂಬ ಒಂದು ಕಿರು ಚಿತ್ರವನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ ಪ್ರಕರಣ ಆತ್ಮಹತ್ಯಾ ದಾಳಿಯೆಂದು ಪರಿಗಣಿಸಿ NIA ತನಿಖೆಗೆ ವಹಿಸಿ – ಅಣ್ಣಾಮಲೈ

    Live Tv
    [brid partner=56869869 player=32851 video=960834 autoplay=true]

  • ಪಂಚಾಯತ್‌ ಸಭೆಯಲ್ಲೇ ಅಧ್ಯಕ್ಷನ ಮೇಲೆ ಸದಸ್ಯನಿಂದ ಹಲ್ಲೆ

    ಪಂಚಾಯತ್‌ ಸಭೆಯಲ್ಲೇ ಅಧ್ಯಕ್ಷನ ಮೇಲೆ ಸದಸ್ಯನಿಂದ ಹಲ್ಲೆ

    ಮಡಿಕೇರಿ: ಪಂಚಾಯತ್‌(Panchayat) ಸಭಾಂಗಣದಲ್ಲಿಯೇ ಅಧ್ಯಕ್ಷನ ಮೇಲೆ ಸದಸ್ಯ ಹಲ್ಲೆ ಮಾಡಿರುವ ಘಟನೆ ಕೊಡಗು(Kodagu) ಜಿಲ್ಲೆಯ ಕುಶಾಲನಗರದ ಏಳನೇ ಹೊಸಕೋಟೆ ಗ್ರಾಮ ನಡೆದಿದೆ.

    ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ(General Meeting) ಅಧ್ಯಕ್ಷ ರಮೇಶ್ ಹಾಗೂ ಸದಸ್ಯ ಮುಸ್ತಫಾ ಎಂಬುವವರು ಕಾಮಗಾರಿ ಬಿಲ್ ಮಾಡುವ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭ ಪಂಚಾಯತ್‌ ಅಧ್ಯಕ್ಷರ ಗಮನಕ್ಕೆ ತರದೇ ಕಾಮಗಾರಿ ‌ಮಾಡಿ‌ ಬಿಲ್ ಮಾಡುವ ಬಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಚೇತನ್ ವಿವಾದಾತ್ಮಕ ಹೇಳಿಕೆಗೆ ನೋ ಕಾಮೆಂಟ್ಸ್ ಎಂದ `ಕಾಂತಾರ’ ನಟ ರಿಷಬ್

    ಅಷ್ಟೇ ಅಲ್ಲದೇ ಸಭೆ ನಡೆಯುವಾಗಲೇ ಮುಸ್ತಾಫಾ ಅವರು ರಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಅಧ್ಯಕ್ಷ ರಮೇಶ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಆರೋಪಿ ಸದಸ್ಯ ಮುಸ್ತಫಾನನ್ನು ಬಂಧಿಸುವಂತೆ ಬಿಜೆಪಿಯ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ

    ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ

    ಮಡಿಕೇರಿ: ಮುಂಗಾರು ಮಳೆಯಿಂದ ಆಗಿರುವ ಹಾನಿ ಬಗ್ಗೆ ಅಧ್ಯಯನ ಮಾಡಲು ಕೇಂದ್ರ ತಂಡ ಕೊಡಗು(Kodagu) ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ.

    ಮಡಿಕೇರಿ(Madikeri) ತಾಲೂಕಿನ ಸೀಮೆಹುಲ್ಲು ಕಜೆ ಬಳಿ ಉಂಟಾಗಿರುವ ಭೂಕುಸಿತ, ಕಾಫಿ ಬೆಳೆ ಹಾನಿ, ಮದೆನಾಡು ಬಳಿಯ ಕರ್ತೋಜಿ ಹೆದ್ದಾರಿ, ಕೊಯನಾಡು ಶಾಲೆ ಬಳಿ ಭೂಕುಸಿತ ಹಾಗೂ ಕಿಂಡಿ ಆಣೆಕಟ್ಟು ಪ್ರದೇಶವನ್ನು ಬುಧವಾರ ವೀಕ್ಷಿಸಿದ್ದಾರೆ.

    ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಆಶೀಸ್ ಕುಮಾರ್ ನೇತೃತ್ವದ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕಾರಾದ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕರಾದ ಭವ್ಯ ಪಾಂಡೆ ತಂಡವು ಜಿಲ್ಲೆಯ ಭೂಕೂಸಿತ, ಬೆಳೆ ಹಾನಿ ಹಾಗೂ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಂದ ಮಾಹಿತಿ ಪಡೆದರು. ಇದನ್ನೂ ಓದಿ: ಮಹಾ ಮಳೆಗೆ ವ್ಯಂಗ್ಯ – #LeaveBengaluru ಅಭಿಯಾನ ಆರಂಭಿಸಿದ ಕನ್ನಡಿಗರು

    ಡಾ.ಬಿ.ಸಿ.ಸತೀಶ್ ಅವರು ಸೀಮೆಹುಲ್ಲು ಕಜೆ ಬಳಿ ಬರೆ ಕುಸಿತ, ಕಾಫಿ ಬೆಳೆಹಾನಿ, ಕೊಯಿನಾಡು ಶಾಲೆ ಬಳಿಯ ಭೂಕೂಸಿತ, ಕಿಂಡಿ ಆಣೆಕಟ್ಟು ಪ್ರದೇಶದಲ್ಲಿ ಪ್ರವಾಹ ಮತ್ತಿತರ ಬಗ್ಗೆ ಅಧ್ಯಯನ ಕೇಂದ್ರ ತಂಡಕ್ಕೆ ಸವಿವರವಾಗಿ ಮಾಹಿತಿ ನೀಡಿದರು.


    ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಮನೋಜ್ ರಾಜನ್ ಅವರು ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಭೂಕುಸಿತ, ಬೆಳೆಹಾನಿ ಹಾಗೂ ಪ್ರವಾಹದಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಮಳೆಹಾನಿ ಅಧ್ಯಯನ ಕೇಂದ್ರ ತಂಡವು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ವಿಕ್ಷಣೆ ಕೈಗೊಂಡಿದೆ ಎಂದರು.

    ಕೇಂದ್ರದಿಂದ 3 ತಂಡ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಅಧ್ಯಯನ ಕೇಂದ್ರ ತಂಡವು ಮಳೆ ಹಾನಿ ಸಂಬಂಧ ಚರ್ಚಿಸಿದ್ದಾರೆ ಎಂದು ಮನೋಜ್ ರಾಜನ್ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಎಲ್ಲಾ ಜಿಲ್ಲೆಗಳಲ್ಲಿ ಸಂಸ್ಕೃತ ಗ್ರಾಮ ಅಭಿವೃದ್ಧಿಪಡಿಸಲು ಮುಂದಾದ ಉತ್ತರಾಖಂಡ

    ಎಲ್ಲಾ ಜಿಲ್ಲೆಗಳಲ್ಲಿ ಸಂಸ್ಕೃತ ಗ್ರಾಮ ಅಭಿವೃದ್ಧಿಪಡಿಸಲು ಮುಂದಾದ ಉತ್ತರಾಖಂಡ

    ಡೆಹ್ರಾಡೂನ್‌: ಉತ್ತರಾಖಂಡ ಸರ್ಕಾರವು ರಾಜ್ಯದ 13 ಜಿಲ್ಲೆಗಳಲ್ಲಿ ತಲಾ ಒಂದು ಸಂಸ್ಕೃತ ಮಾತನಾಡುವ ಗ್ರಾಮವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.

    ಈ ಮೂಲಕ ಸಂಸ್ಕೃತವನ್ನು ಉತ್ತೇಜಿಸಲು ಈ ಪ್ರಮಾಣದಲ್ಲಿ ಉಪಕ್ರಮವನ್ನು ಪ್ರಾರಂಭಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡವಾಗಿದೆ. ಸಂಸ್ಕೃತವು ಉತ್ತರಾಖಂಡದ ಎರಡನೇ ಅಧಿಕೃತ ಭಾಷೆಯಾಗಿದೆ.

    ಗ್ರಾಮಗಳ ನಿವಾಸಿಗಳಿಗೆ ಪ್ರಾಚೀನ ಭಾರತೀಯ ಭಾಷೆಯನ್ನು ದೈನಂದಿನ ಸಂವಹನ ಮಾಧ್ಯಮವಾಗಿ ಬಳಸಲು ತಜ್ಞರಿಂದ ತರಬೇತಿ ನೀಡಲಾಗುವುದು ಮತ್ತು ಸಂಸ್ಕೃತ ಶಿಕ್ಷಕರನ್ನು ಕಳುಹಿಸಲಾಗುವುದು ಎಂದು ಉತ್ತರಾಖಂಡದ ಸಂಸ್ಕೃತ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಹೇಳಿದ್ದಾರೆ.

    ಭಾಷೆಯಲ್ಲಿ ಸಂವಹನ, ಸಂಸ್ಕೃತದಲ್ಲಿ ಪ್ರಾವೀಣ್ಯತೆ ಸಾಧಿಸಲು ಜನರಿಗೆ ವೇದಗಳು ಮತ್ತು ಪುರಾಣಗಳನ್ನು ಕಲಿಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: Breaking-ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕೋಲ್ಡ್ ವಾರ್: ಶಿವಣ್ಣ, ರವಿಚಂದ್ರನ್ ಸನ್ಮಾನ, ಅನುಮಾನ?

    ಸಂಸ್ಕೃತ ಗ್ರಾಮ ಎಂದು ಕರೆಯಲ್ಪಡುವ ಹಳ್ಳಿಗಳು ಪ್ರಾಚೀನ ಭಾರತೀಯ ಸಂಸ್ಕೃತಿಯ ಕೇಂದ್ರವಾಗುತ್ತವೆ. ಯುವ ಪೀಳಿಗೆ ತನ್ನ ಪೂರ್ವಜರ ಭಾಷೆಯಲ್ಲಿ ಮಾತನಾಡುವಂತಿರಬೇಕು. ಯುವ ಪೀಳಿಗೆಯನ್ನು ಅದರ ಬೇರುಗಳಿಗೆ ಹತ್ತಿರಕ್ಕೆ ಕೊಂಡೊಯ್ಯುವುದರ ಜೊತೆಗೆ, ಈ ಗ್ರಾಮಗಳು ದೇಶಾದ್ಯಂತ ಮತ್ತು ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಭಾರತದ ಪ್ರಾಚೀನ ಸಂಸ್ಕೃತಿಯ ಪರಿಚಯಿಸಲಿದೆ ಎಂದು ತಿಳಿಸಿದರು.

    ತಿವೇಂದ್ರ ಸಿಂಗ್‌ ರಾವತ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂಸ್ಕೃತ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಕಲ್ಪನೆಯನ್ನು ಮೊದಲು ರೂಪಿಸಲಾಯಿತು. ಆದರೆ ಯೋಜನೆಯು ಪ್ರಾರಂಭವಾಗಿರಲಿಲ್ಲ. ಈ ಹಿಂದೆ ಬಾಗೇಶ್ವರ ಮತ್ತು ಚಮೋಲಿ ಜಿಲ್ಲೆಯ ಎರಡು ಕಡೆ ಪ್ರಾಯೋಗಿಕವಾಗಿ ಜಾರಿಯಾಗಿತ್ತು. ಈಗ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲು ಸರ್ಕಾರ ಮುಂದಾಗಿದೆ.

    ಪ್ರಸ್ತುತ ಭಾರತದಲ್ಲೇ ಸಂಸ್ಕೃತದಲ್ಲೇ ಸಂವಹನ ನಡೆಸುವ ಏಕೈಕ ಗ್ರಾಮ ಕರ್ನಾಟಕದಲ್ಲಿದೆ. ಶಿವಮೊಗ್ಗದ ನಗರದಿಂದ 10 ಕಿಲೋಮೀಟರ್ ದೂರದಲ್ಲಿರುವ ಮತ್ತೂರು ಗ್ರಾಮದಲ್ಲಿ ಸಂಸ್ಕೃತದಲ್ಲಿ ಸಂವಹನ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದ್ರೌಪದಿ ಮುರ್ಮು ಹುಟ್ಟೂರಿಗೆ ಮೊಟ್ಟ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

    ದ್ರೌಪದಿ ಮುರ್ಮು ಹುಟ್ಟೂರಿಗೆ ಮೊಟ್ಟ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ

    ಭುವನೇಶ್ವರ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಹುಟ್ಟಿದ ಊರು ಉಪರಬೇಡ ಗ್ರಾಮದ ಜನ ಕಡೆಗೂ ವಿದ್ಯುತ್ ಸಂಪರ್ಕದ ಭಾಗ್ಯ ಕಂಡಿದ್ದಾರೆ.

    ದೇಶಕ್ಕೆ ಎನ್‍ಡಿಎಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಘೋಷಣೆ ಆಗುವವರೆಗೆ ಹಲವರು ಅವರ ಹೆಸರನ್ನು ಕೇಳಿರಲಿಲ್ಲ. ಇದೀಗ ದ್ರೌಪದಿ ಮುರ್ಮು ದೇಶಕ್ಕೆ ಪರಿಚಯವಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ ದ್ರೌಪದಿ ಮುರ್ಮು ಅವರ ಹುಟ್ಟೂರು ಒಡಿಸ್ಸಾದ ಮಾಯರ್ಭಾಂಜ್‌ ಜಿಲ್ಲೆಯ ಉಪರಬೇಡ ಗ್ರಾಮಕ್ಕೆ ಇಷ್ಟು ವರ್ಷಗಳ ವರೆಗೂ ವಿದ್ಯುತ್ ಸಂಪರ್ಕ ಮರೀಚಿಕೆಯಾಗಿತ್ತು. ಮಾಯರ್ಭಾಂಜ್‌ ಜಿಲ್ಲೆಯ ಕುಸುಮ್ ಬ್ಲಾಕ್‍ನ ಡುಂಗುರಿಶಾಹಿ ಗ್ರಾಮದಲ್ಲಿ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ವಿದ್ಯುತ್ ಸಂಪರ್ಕ ಮಾತ್ರ ಇರಲಿಲ್ಲ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

    ದ್ರೌಪದಿ ಮುರ್ಮು ಮಾಯರ್ಭಾಂಜ್‌ ಜಿಲ್ಲೆಯ ಉಪರಬೇಡ ಗ್ರಾಮದಲ್ಲಿ ಜನಿಸಿದರು. 3,500 ಜನಸಂಖ್ಯೆ ಹೊಂದಿರುವ ಈ ಹಳ್ಳಿಯಲ್ಲಿ ಎರಡು ಕುಗ್ರಾಮಗಳಿವೆ. ಬಡಾ ಶಾಹಿ ಮತ್ತು ಡುಂಗ್ರಿ ಶಾಹಿ. ಬಡಾ ಶಾಹಿಯಲ್ಲಿ ವಿದ್ಯುತ್ ಸಂಪರ್ಕ ಇದೆ. ಆದರೆ ಡುಂಗ್ರಿ ಶಾಹಿ ಕತ್ತಲೆಯಲ್ಲಿ ಮುಳುಗಿತ್ತು. ಸೀಮೆಎಣ್ಣೆ ದೀಪದ ಮೂಲಕ ರಾತ್ರಿ ವೇಳೆ ಬೆಳಕನ್ನು ಉಪರಬೇಡ ಗ್ರಾಮದ ಜನ ಕಾಣುತ್ತಿದ್ದರು. ಇದೀಗ ದ್ರೌಪದಿ ಮುರ್ಮು ರಾಷ್ಟ್ರಪತಿ ಅಭ್ಯರ್ಥಿಯಾದ ಬಳಿಕ ಹುಟ್ಟೂರಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ.

    ಒಡಿಸ್ಸಾ ಸರ್ಕಾರ ಇಂದು ಮಾಯರ್ಭಾಂಜ್‌ ಜಿಲ್ಲೆಯ ಉಪರಬೇಡ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ಪ್ರಾರಂಭಿಸಿದೆ. ಹಳ್ಳಿಯ ಜನರು ವಿದ್ಯುತ್ ಇಲ್ಲದೆ ವಾಸಿಸುತ್ತಿದ್ದಾರೆ ಎಂದು ಮಾಧ್ಯಮ ವರದಿ ಬಳಿಕ ಇದೀಗ ಸರ್ಕಾರ ಎಚ್ಚೆತ್ತುಕೊಂಡಿದೆ. ದ್ರೌಪದಿ ಮುರ್ಮು ಪ್ರಸ್ತುತ ಉಪರಬೇಡ ಗ್ರಾಮದಲ್ಲಿ ವಾಸಿಸುತ್ತಿಲ್ಲ. ಉಪರಬೇಡ ಡುಂಗುರಿಶಾಹಿಯಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಪಟ್ಟಣವಾದ ರೈರಂಗಪುರದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಹಡಗು ಮುಳುಗಡೆ – ತೈಲ ಸೋರಿಕೆ ಆತಂಕದಲ್ಲಿ ದ.ಕ ಜಿಲ್ಲಾಡಳಿತ ಅಲರ್ಟ್

    ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್‌ ಜಿಲ್ಲೆಯವರಾಗಿದ್ದು, ಬುಡಕಟ್ಟು ಜನಾಂಗ ಮೂಲದ ಮಹಿಳೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. 2015-21ರ ಅವಧಿಯಲ್ಲಿ ಜಾರ್ಖಂಡ್‍ನ ರಾಜ್ಯಪಾಲರಾಗಿದ್ದರು. ಇದೀಗ 16ನೇ ರಾಷ್ಟ್ರಪತಿ ಚುನಾವಣೆಯ ಎನ್‍ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

    Live Tv

  • ರಾಮನಗರದಲ್ಲಿ ಮೌಢ್ಯತೆ ಇನ್ನೂ ಜೀವಂತ- ಹಸಿ ಬಾಣಂತಿ, ಮಗು ಗ್ರಾಮದಿಂದ ಹೊರಕ್ಕೆ

    ರಾಮನಗರದಲ್ಲಿ ಮೌಢ್ಯತೆ ಇನ್ನೂ ಜೀವಂತ- ಹಸಿ ಬಾಣಂತಿ, ಮಗು ಗ್ರಾಮದಿಂದ ಹೊರಕ್ಕೆ

    ರಾಮನಗರ: ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೂ ಈ ಮೂಢನಂಬಿಕೆ ಮಾತ್ರ ಇನ್ನೂ ಜೀವಂತವಾಗಿದೆ. ಗ್ರಾಮಕ್ಕೆ ಕೇಡಾಗುತ್ತದೆಯೆಂದು ಹೆದರಿ 20 ದಿನದ ಹಸುಗೂಸು ಹಾಗೂ ಬಾಣಂತಿಯನ್ನ ಗ್ರಾಮದ ಹೊರಗಿಟ್ಟಿರುವ ಘಟನೆ ನಡೆದಿದೆ.

    ಹೌದು. ರಾಮನಗರ ತಾಲೂಕಿನ ದೇವರದೊಡ್ಡಿ ಗ್ರಾಮದ ಹೊರವಲಯದ ಪ್ರದೇಶದಲ್ಲಿ ಮೌಢ್ಯತೆಯ ಅನಾವರಣವಾಗಿದೆ. ಇಲ್ಲಿ ತಲೆಮಾರುಗಳಿಂದಲೂ ಋತುಮತಿಯಾದವರು, ಬಾಣಂತಿಯರನ್ನ 2 ತಿಂಗಳು 3 ದಿನ ಊರ ಹೊರಗಿಟ್ಟು ಮೌಢ್ಯತೆಯ ಪರಮಾವಧಿ ಮೀರಿದ್ದಾರೆ.

    ಗ್ರಾಮದ ಶ್ರೀರಂಗಪ್ಪ ದೇವರಿಗಾಗಿ ಈ ಮೌಢ್ಯತೆಯನ್ನು ಆಚರಿಸಿಕೊಂಡು ಬರುತ್ತಿದ್ದು, ಉಲ್ಲಂಘಿಸಿದ್ರೇ ಗ್ರಾಮಕ್ಕೆ ಕೇಡಾಗುತ್ತೆ ಅನ್ನೋ ನಂಬಿಕೆ ಇಲ್ಲಿನ ಜನರನ್ನು ಆವರಿಸಿದೆ. ಈ ಮೌಢ್ಯ ಆಚರಣೆ ಕೇವಲ ಬಾಣಂತಿಯರಿಗೆ ಮಾತ್ರವಲ್ಲ, ಋತುಮತಿಗಳಿಗೆ ಹಾಗೂ ದೊಡ್ಡವರಾಗುವ ಬಾಲಕಿಯರಿಗೂ ಅನ್ವಯಿಸುತ್ತೆ. ಇವರಿಗಾಗಿ ಗ್ರಾಮದ ಹೊರಗೆ ಕೆಲವು ಕೊಠಡಿಗಳನ್ನು ನಿರ್ಮಿಸಿದ್ದಾರೆ. ತಮ್ಮ ದಿನದ ಅವಧಿ ಮುಗಿಯುವರೆಗೂ ಅವರು ಅಲ್ಲೇ ವಾಸವಿರಬೇಕು. ಇದನ್ನೂ ಓದಿ: ಮಕ್ಕಳು ಓಡಿ ಹೋಗದಂತೆ ತಡೆಯಲು ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ

    ಲೆಕ್ಕ ಹಾಕಿದರೆ ದೇವರದೊಡ್ಡಿ ಗ್ರಾಮದಲ್ಲಿ ಕೇವಲ 100 ರಿಂದ 139 ಮನೆಗಳಿವೆ. ರಾಜಧಾನಿಯಿಂದ ಕೇವಲ 45 ಕಿ.ಮೀ ದೂರ. ರಾಜಧಾನಿಯಲ್ಲಿ ಆಧುನೀಕತೆ ಅಬ್ಬರವಿದ್ದರೆ ಈ ಗ್ರಾಮದಲ್ಲಿ ಮೌಢ್ಯತೆ ಮನೆ ಮಾಡಿರೋದು ಮಾತ್ರ ವಿರ್ಪಯಾಸವೇ ಸರಿ. ಇದನ್ನೂ ಓದಿ: ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಮಗು ಸೇರಿದಂತೆ 4 ಮಂದಿ ಸಾವು

  • ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

    ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

    ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಸಂಬಳವನ್ನು ಏರಿಕೆ ಮಾಡಲಾಗಿದೆ.

    ಮಾಸಿಕ ವೇತನವನ್ನು 12 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಘೋಷಣೆಯಾದಂತೆ ಏಪ್ರಿಲ್‌ 1 ರಿಂದಲೇ ಇದು ಜಾರಿಯಾಗಲಿದೆ. ಇದನ್ನೂ ಓದಿ: ಮಧ್ಯಪ್ರದೇಶಲ್ಲಿ ಜೆಸಿಬಿ ಘರ್ಜನೆ – ರಾಮನವಮಿ ಕಲ್ಲುತೂರಾಟ, 20 ಅಕ್ರಮ ಕಟ್ಟಡಗಳು ನೆಲಸಮ

    ಕರ್ನಾಟಕ ಗ್ರಾಮ ಕಚೇರಿಗಳ ರದ್ದತಿ ಕಾಯ್ದೆ 1961 ಜಾರಿಯಾದ ಬಳಿಕ 1963ರಿಂದ ಅನ್ವಯವಾಗುವಂತೆ ವಂಶಪಾರಂಪರ್ಯದ ಎಲ್ಲ ಗ್ರಾಮೀಣ ಹಂತದ ವಿಲೇಜ್‌ ಆಫೀಸರ್ಸ್‌ ಹುದ್ದೆಗಳು ರದ್ದಾಗಿದ್ದರಿಂದ ಕೆಳ ಹಂತದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಿಸಲಾಗುತ್ತದೆ.

  • ಗ್ರಾಮದ ಜಾತ್ರೆಯಲ್ಲಿ ನೃತ್ಯ ಮಾಡಿ ರಂಜಿಸಿದ ಸಿದ್ದರಾಮಯ್ಯ

    ಗ್ರಾಮದ ಜಾತ್ರೆಯಲ್ಲಿ ನೃತ್ಯ ಮಾಡಿ ರಂಜಿಸಿದ ಸಿದ್ದರಾಮಯ್ಯ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ವಗ್ರಾಮ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ನೃತ್ಯ ಮಾಡಿದ್ದಾರೆ.

    ಸ್ನೇಹಿತರು ಮತ್ತು ಬೆಂಬಲಿಗರ ಜೊತೆ 40 ನಿಮಿಷಗಳ ಕಾಲ ಜಾನಪದ ವಾದ್ಯಗಳ ಹಿಮ್ಮೆಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ್ದಾರೆ. ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನೃತ್ಯ ಮಾಡಿದ್ದ ಸಿದ್ದರಾಮಯ್ಯ ಈಗ 15 ವರ್ಷದ ಬಳಿಕ ಗ್ರಾಮದ ಜಾತ್ರೆಯಲ್ಲಿ ಸ್ಟೆಪ್‌ ಹಾಕಿದ್ದಾರೆ. ಇದನ್ನೂ ಓದಿ: ಪತ್ರಕರ್ತರಿಗೆ ಮಧ್ಯರಾತ್ರಿಯ ಸರ್ಪ್ರೈಸ್ ಕೊಟ್ಟ RRR ಟೀಮ್..!

    70ರ ಹರೆಯದ ಸಿದ್ದರಾಮಯ್ಯ ಅವರ ನೃತ್ಯ ನೋಡಲು ಗ್ರಾಮಸ್ಥರು ಮುಗಿ ಬಿದ್ದಿದ್ದರು. ನೂಕು ನುಗ್ಗಲು ಮಧ್ಯೆ ಸಿದ್ದರಾಮಯ್ಯ ನೃತ್ಯ ಮಾಡಿ ಜನರನ್ನು ರಂಜಿಸಿದ್ದಾರೆ.

    ತಂದೆಯ ನೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಅಪ್ಪ ಪ್ರತಿ ವರ್ಷ ಜಾತ್ರೆಯ ವೇಳೆ ವೀರನ ಕುಣಿತ ಮಾಡುತ್ತಿದ್ದರು. ಆದರೆ ಈ ವಯಸ್ಸಿನಲ್ಲಿ ಅಪ್ಪ ವೀರನ ಕುಣಿತ ಮಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ. ನಾನು ನೃತ್ಯ ಮಾಡುವುದಿಲ್ಲ ಎಂದು ತಂದೆ ಮೊದಲೇ ಹೇಳಿದ್ದರು. ಆದರೆ ಜನರ ಉತ್ಸಾಹ ನೋಡಿ ಅವರು ನೃತ್ಯ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೇಕೆದಾಟು: ತಮಿಳುನಾಡು ವಿರುದ್ಧದ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಬೆಂಬಲ

    ತಂದೆ ಶಾಲೆಯಲ್ಲಿ ವೀರನ ಕುಣಿತ ಕಲಿತಿದ್ದರು. ಹೀಗಾಗಿ ಅವರಿಗೆ ಪ್ರತಿಯೊಂದು ಸ್ಟೆಪ್ ನೆನಪಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

  • ಮರ್ಯಾದಾ ಹತ್ಯೆ – ಅನ್ಯ ಜಾತಿ ಹುಡುಗನ ಪ್ರೀತಿಸಿದ್ದಕ್ಕೆ ಮಗಳನ್ನೇ ಸುಟ್ಟು ಕೊಂದ ಕುಟುಂಬಸ್ಥರು

    ಮರ್ಯಾದಾ ಹತ್ಯೆ – ಅನ್ಯ ಜಾತಿ ಹುಡುಗನ ಪ್ರೀತಿಸಿದ್ದಕ್ಕೆ ಮಗಳನ್ನೇ ಸುಟ್ಟು ಕೊಂದ ಕುಟುಂಬಸ್ಥರು

    ಲಕ್ನೋ: ಅನ್ಯ ಜಾತಿ ಹುಡುಗನನ್ನು ಪ್ರೀತಿ ಮಾಡಿದ್ದ, ಬ್ರಾಹ್ಮಣ ಜಾತಿಯ ಹುಡುಗಿಯನ್ನು ಕುಟುಂಬಸ್ಥರೇ ಬೆಂಕಿ ಹಚ್ಚಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.

    ನಡೆದಿದ್ದೇನು?: ಅನ್ಯ ಜಾತಿ ಯುವಕನನ್ನು 20 ವರ್ಷದ ಯುವತಿ ಪ್ರೀತಿಸುತ್ತಿದ್ದಳು. ಬ್ರಾಹ್ಮಣ ಜಾತಿಗೆ ಸೇರಿದ ಯುವತಿ, ಜಾಟ್ ಸಮುದಾಯಕ್ಕೆ ಸೇರಿದ ಸುಗಮ್‌ನೊಂದಿಗೆ  ಓಡಿ ಹೋಗಿದ್ದಳು. ಇದರಿಂದಾಗಿ ಯುವತಿಯನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ಯುವತಿ ಕುಟುಂಬದ ಸದಸ್ಯರು ಎಫ್‌ಐಆರ್ ಕೂಡಾ ದಾಖಲಿಸಿದ್ದರು. ನಂತರ ಈ ದಂಪತಿ ಗುರುವಾರ ಮನೆಗೆ ವಾಪಸ್ಸಾಗಿದ್ದಾರೆ. ಮಾರನೇ ದಿನ ಯುವತಿ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಬಿಜೆಪಿ ಸುಳ್ಳುಗಾರರ ಪಕ್ಷ: ಅಖಿಲೇಶ್ ಯಾದವ್

    ಯುವಕನ ಮೃತದೇಹ ಶಾಮ್ಲಿ ಜಿಲ್ಲೆಯ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ತನ್ನ ಪ್ರೇಯಸಿಯ ಹತ್ಯೆಯಾಗಿರಬಹುದೆಂಬ ಶಂಕೆಯಿಂದ ಆತ ಆತ್ಮಹತ್ಯೆಗೆ ಶರಣಾಗಿದ್ದ. ಬೊರಾಕಾಳ ಠಾಣೆ ವ್ಯಾಪ್ತಿಯ ಸಿಸೌಲಿ ಹಳ್ಳಿಯ ನೀರು ತುಂಬಿದ ಹೊಲದಲ್ಲಿ ಅರ್ಧ ಬೆಂದ ಸ್ಥಿತಿಯಲ್ಲಿ ಯುವತಿಯ ಮೃತ ದೇಹ ಪತ್ತೆಯಾದ ನಂತರ ಮಾರ್ಯಾದ ಹತ್ಯೆ ಎಂದು ಶಂಕಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸ್ ನಿತೀನ್ ಕುಮಾರ್ ಹೇಳಿದ್ದಾರೆ.

    POLICE JEEP

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇದು ಕೊಲೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇರೆಗೆ ಯುವತಿ ತಾಯಿ ಮತ್ತು ಚಿಕ್ಕಪ್ಪನ್ನು ಬಂಧಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.