ಹಾಸನ: ಒಂದೇ ಗ್ರಾಮದ 91 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಲ್ಯ ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದ್ದು, ಕಳೆದ ಒಂದೂವರೆ ತಿಂಗಳಲ್ಲಿ 91 ಪಾಸಿಟಿವ್ ಕೇಸ್ ಬಂದಿವೆ. ಹೀಗಾಗಿ ಅಧಿಕಾರಿಗಳು ಗ್ರಾಮವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ, ಸೀಲ್ ಡೌನ್ ಮಾಡಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿ ಸಂಚಾರ – ಪಾಸಿಟಿವ್ ವ್ಯಕ್ತಿಯ ಕುಟುಂಬವೇ ಆಸ್ಪತ್ರೆಗೆ ಶಿಫ್ಟ್
50 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 50 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಕೆಲವರು ಖಾಸಗೀ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದು, ಗ್ರಾಮಕ್ಕೆ ಯಾರೂ ಬರದಂತೆ ಹಾಗೂ ಗ್ರಾಮದಿಂದ ಯಾರೂ ಹೋರ ಹೋಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ದಾವಣಗೆರೆ: ಬೆಣ್ಣೆ ನಗರಿಯಲ್ಲಿ ಕೊರೊನಾ ಸೋಂಕು ಹಳ್ಳಿಗಳಿಗೆ ಹೆಚ್ಚು ಹಬ್ಬುತ್ತಿದ್ದು, ಒಂದೇ ಗ್ರಾಮದಲ್ಲಿ ಒಂದೇ ದಿನಕ್ಕೆ 28 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ತಾಲೂಕಿನ ಜರೀಕಟ್ಟೆ ಗ್ರಾಮದಲ್ಲಿ ಸೋಂಕು ಹೆಚ್ಚಾಗಿದ್ದು, ಕಳೆದ ಒಂದೇ ದಿನದಲ್ಲಿ 28 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಗ್ಯ ಇಲಾಖೆ 94 ಜನರ ಗಂಟಲು ದ್ರವ ಸಂಗ್ರಹಿಸಿತ್ತು. 94 ಜನರ ಪೈಕಿ 28 ಜನರಿಗೆ ಸೋಂಕು ಇರಿವುದು ದೃಢವಾಗಿದೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆ ಮುಂದುವರೆದಿದೆ. ಇದನ್ನೂ ಓದಿ: ಕೊರೊನಾ ಪರೀಕ್ಷೆಗೆ ಬಂದ ವೈದ್ಯಕೀಯ ತಂಡದ ಮೇಲೆ ಗ್ರಾಮಸ್ಥರಿಂದ ಹಲ್ಲೆಗೆ ಯತ್ನ
ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ಜರೇಕಟ್ಟೆ ಗ್ರಾಮದಲ್ಲಿ ಪೊಲೀಸರಿಂದ ಕೊರೊನಾ ಜಾಗೃತಿ ಮೂಡಿಸಲಾಯಿತು. ಗ್ರಾಮಾಂತರ ಪೊಲೀಸರು ತೆರೆದ ವಾಹನದಲ್ಲಿ ಜನರಿಗೆ ಜಾಗೃತಿ ಮೂಡಿಸಿದರು. ಮಾಸ್ಕ್ ಹಾಗೂ ಸ್ಯಾನಿಟೇಜರ್ ವಿತರಣೆ ಮಾಡಿದರು. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಹ ಹಳ್ಳಿಗಳ ಮೇಲೆ ತೀವ್ರ ನಿಗಾ ಇಟ್ಟು ಕೆಲಸ ಮಾಡುತ್ತಿದೆ. ಆದರೂ ಪ್ರಕರಣಗಳು ಹೆಚ್ಚುತ್ತಲೇ ಇವೆ.
ಬೆಂಗಳೂರು: ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಂದುವರಿಸುವುದಾ ಎನ್ನುವ ಕುರಿತಾಗಿ ನಾವು ಮೂರು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಹಲವರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ಪ್ರತಿ ಗ್ರಾಮ ಪಂಚಾಯ್ತಿಗೆ 50 ಸಾವಿರ ಅನುದಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಜೂನ್ 7ರ ತನಕ ಲಾಕ್ ಡೌನ್ ಮುಂದುವರಿಯಲಿದೆ. ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ. ಇಲ್ಲದಿದ್ದರೆ ಪರಿಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತೆ ಎಂದಿದ್ದಾರೆ.
5 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವೀಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವಥನಾರಾಯಣ್, ಕಂದಾಯ ಸಚಿವ ಆರ್.ಅಶೋಕ್ ಭಾಗಿಯಾಗಿದ್ದರು. 5 ಜಿಲ್ಲೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಭಾಗಿ ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಜಿಲ್ಲೆಗಳ ಕೊರೊನಾ ಸ್ಥಿತಿಗತಿ, ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯದ ಮೇರೆಗೆ ಲಾಕ್‍ಡೌನ್ ವಿಸ್ತರಣೆ ಭವಿಷ್ಯ ನಿರ್ಧಾರವಾಗುತ್ತದೆ.
– ಹಳ್ಳಿಯ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಕೊಳ್ಳುತ್ತಿರುವ ಸೋಂಕು
ರಾಯಚೂರು : ಜಿಲ್ಲೆಯ ಹಳ್ಳಿ ಹಳ್ಳಿಯಲ್ಲೂ ಕೊರೊನಾ ರಣಕೇಕೆ ಹಾಕುತ್ತಿದೆ. ಮಕ್ಕಳಲ್ಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಅಧಿಕಾರಿಗಳು ಹಳ್ಳಿಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಣೆ ಮಾಡುತ್ತಿದ್ದಾರೆ. ರಾಯಚೂರು ತಾಲೂಕಿನ ಸಿಂಗನೋಡಿ ತಾಂಡಾದಲ್ಲಿ ನಿನ್ನೆ 130 ಜನರಿಗೆ ತಪಾಸಣೆ ಮಾಡಲಾಗಿದ್ದು 21 ಜನಕ್ಕೆ ಕೊರೊನಾ ಪಾಸಿಟಿವ್ ಬಂದಿದೆ. ಇದರಲ್ಲಿ 11 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಮಕ್ಕಳನ್ನ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸಲು ಗ್ರಾಮಸ್ಥರು ತಕರಾರು ಮಾಡಿದ್ದರಿಂದ 10 ಜನರನ್ನ ಮಾತ್ರ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಅಧಿಕಾರಿಗಳು ಮಕ್ಕಳನ್ನು ಹೋಂ ಐಸೋಲೇಷನ್‍ಗೆ ಬಿಟ್ಟು ಹೋಗಿದ್ದಾರೆ. ತಾಂಡಾದಲ್ಲಿನ 250ಕ್ಕೂ ಹೆಚ್ಚು ಮಕ್ಕಳಿಗೂ ಕೊರೊನಾ ಆತಂಕವಿದೆ. ಕೊರೊನಾ ಪರೀಕ್ಷೆಗೆ ಆತಂಕ ವ್ಯಕ್ತಪಡಿಸುತ್ತಿರುವ ಸಿಂಗನೋಡಿ ತಾಂಡಾದ ಜನ ಅಧಿಕಾರಿಗಳಿಗೆ ಸಹಕರಿಸುತ್ತಿಲ್ಲ. ಇದನ್ನೂ ಓದಿ: ರಾಯಚೂರಿನಲ್ಲಿ ಮದುವೆಗೆ ಸಂಪೂರ್ಣ ನಿರ್ಬಂಧ: ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ
ಕೊರೊನಾ ತಪಾಸಣೆಗೆ ಅಡ್ಡಿಪಡಿಸುತ್ತಿರುವ ಗ್ರಾಮಸ್ಥರು, ಪರೀಕ್ಷೆ ಮಾಡಿದರೆ ನಮ್ಮ ಗ್ರಾಮದ ಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ ತೆರೆಯಲು ಒತ್ತಾಯಿಸಿದ್ದಾರೆ. 12 ವರ್ಷದ ಒಳಗಿನ 11 ಜನ ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಗ್ರಾಮದಲ್ಲಿ ಆತಂಕ ಹೆಚ್ಚಿಸಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಎಷ್ಟೇ ಮನವೊಲಿಸಿದರೂ ಕೊರೊನಾ ಪರೀಕ್ಷೆಗೆ ಜನ ಮುಂದಾಗುತ್ತಿಲ್ಲ. ಹೀಗಾಗಿ ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ರಾಯಚೂರು ಜಿಲ್ಲಾಡಳಿತ ನಾನಾ ಕಸರತ್ತು ಮಾಡುತ್ತಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಆಸ್ಪತ್ರ್ರೆ ಆರಂಭ
ವಿಜಯಪುರ: ಜಿಲ್ಲೆಯ ಉತ್ನಾಳ್ ತಾಂಡಾ ಎಲ್‍ಟಿ 2 ಗ್ರಾಮದಲ್ಲಿ ಕೋವಿಡ್ ಸೋಂಕಿತರಿಗೆ ಸರಿಯಾದ ಔಷಧಿ ವಿತರಣೆ ಆಗುತ್ತಿಲ್ಲ ಎಂಬ ಪಬ್ಲಿಕ್ ಟಿವಿಯ ವಿಸ್ತøತ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿ ಪಿ,ಸುನಿಲ್ ಕುಮಾರ್ ಅವರ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ ಅವರು ಉತ್ನಾಳ್ ತಾಂಡಾ ಎಲ್‍ಟಿ2 ಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿದ ಬಲರಾಮ್ ಲಮಾಣಿ, ಕೊರೊನಾ ಪಾಸಿಟಿವ್ ಬಂದವರು, ಕುಟುಂಬದ ಉಳಿದ ಸದಸ್ಯರಿಂದ ಪ್ರತ್ಯೇಕವಾಗಿ ವಾಸಿಸಲು ಗ್ರಾಮಸ್ಥರಲ್ಲಿ ಮನವರಿಕೆ ಮಾಡಿದರು. ಪ್ರತ್ಯೇಕ ಕೋಣೆ ಇರದೇ ಇದ್ದ ಪಕ್ಷದಲ್ಲಿ ಗ್ರಾಮದಲ್ಲಿರುವ ಶಾಲೆಯಲ್ಲಿ ವಾಸವಾಗುವಂತೆ ಸೂಚನೆ ನೀಡಿದರು.
ವೈದ್ಯರು ನೀಡಿದ ಮಾತ್ರೆಗಳನ್ನು ತಪ್ಪದೇ ಸೇವಿಸುವಂತೆ ಮತ್ತು ಆರೋಗ್ಯದಲ್ಲಿ ಏರುಪೇರು ಆದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವಂತೆ ಸೂಕ್ತ ತಿಳುವಳಿಕೆ ನೀಡಿ, ಗ್ರಾಮಸ್ಥರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಸರಿಯಾದ ಕ್ರಮ ಪಾಲಿಸುವಂತೆ ಮನವಿ ಮಾಡಿಕೊಂಡರು.
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ ಕಾಣುತ್ತಿದ್ದರೂ ಕೂಡ ಜನ ಮಾತ್ರ ಬುದ್ಧಿ ಕಲಿತಿಲ್ಲ. ಲಾಕ್‍ಡೌನ್ ಮಧ್ಯೆ ನಿಯಮ ಉಲ್ಲಂಘಿಸಿ ಗ್ರಾಮದಲ್ಲಿ ಮಾರಿ ಹಬ್ಬ ಆಚರಿಸಿ ಸಾವಿರಾರು ಕೋಳಿಗಳನ್ನು ಬಲಿ ಕೊಟ್ಟಿದ್ದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಲ್ಕೆರೆ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಗ್ರಾಮಸ್ಥರು ಕೊರೊನಾ ಹೋಗಲಾಡಿಸಲು ಬಲಿ ಪೂಜೆ ಆಚರಣೆ ಮಾಡುವ ಮೂಲಕ ನಿಯಮ ಉಲ್ಲಂಘನೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡು ಬಂದರೂ ಜನ ಮಾತ್ರ ಕ್ಯಾರೆ ಎನ್ನದೇ ಮಾಸ್ಕ್ ಧರಿಸದೇ ಬೇಕಾಬಿಟ್ಟಿ ಹಬ್ಬ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಪ್ರತಿ ವರ್ಷ ಗ್ರಾಮದಲ್ಲಿ ಮಾರಿ ಹಬ್ಬ ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಆಚರಣೆಗೆ ಬ್ರೇಕ್ ಹಾಕಲಾಗಿತ್ತು. ಆದರೂ ಗ್ರಾಮದ ಕೆಲವರು ನಿಯಮ ಉಲ್ಲಂಘಿಸಿ ಕೋಳಿ ಬಲಿಕೊಟ್ಟು ಕೊರೊನಾ ಮುಕ್ತವಾಗಲಿ ಗ್ರಾಮಕ್ಕೆ ಒಳಿತಾಗಲಿ ಎಂದು ಪೂಜೆ ಸಲ್ಲಿಸಿದ್ದಾರೆ.
ಧಾರವಾಡ: ಕೊರೊನಾ ಮೊದಲನೇ ಅಲೆ ಮಾತ್ರವಲ್ಲ ಇಷ್ಟೆಲ್ಲ ಪ್ರಕರಣಗಳು ವರದಿಯಾಗಿ ಪರಿಸ್ಥಿತಿ ಗಂಭಿರವಾದರೂ ಜಿಲ್ಲೆಯ ಈ ಗ್ರಾಮಗಳಿಗೆ ಮಾತ್ರ ಕೊರೊನಾ ಎಂಟ್ರಿ ಕೊಟ್ಟಿಲ್ಲ.
ನಗರದಿಂದ 30 ಕಿ.ಮೀ. ದೂರಲ್ಲಿರುವ ಹುಣಶಿಕುಮರಿ ಹಾಗೂ ಶಿವನಗರ ಗ್ರಾಮಗಳಲ್ಲಿ ಇಲ್ಲಿಯವರೆಗೆ ಒಂದೇ ಒಂದು ಕೊರೊನಾ ಕೇಸ್ ಬಂದಿಲ್ಲ. ಈ ಗ್ರಾಮಗಳಲ್ಲಿ 100 ರಿಂದ 150 ಮನೆಗಳಿದ್ದು, 800 ರಿಂದ 1000 ಜನಸಂಖ್ಯೆ ಇದೆ. ಈ ಗ್ರಾಮದ ಜನ ಎರಡಲೇ ಅಲೆ ಆರಂಭವಾದಾಗಿನಿಂದ ನಗರಕ್ಕೆನೇ ಬಂದಿಲ್ಲ. ಏನಾದರೂ ಬೇಕಾದರೆ ಅಕ್ಕಪಕ್ಕದ ಗ್ರಾಮಗಳಿಗೆ ಹೋಗಿ ದಿನಸಿ ಹಾಗೂ ತರಕಾರಿ ತರುತಿದ್ದಾರೆ.
ನಗರಗಳ ಕಡೆ ಯಾರೂ ಹೋಗದಂತೆ ಎಚ್ಚರಿಕೆ ನೀಡಿರುವ ಗ್ರಾಮಸ್ಥರು, ನಗರದಿಂದ ಗ್ರಾಮಕ್ಕೆ ಬಂದವರಿಗೆ ಪ್ರವೇಶ ನೀಡುತ್ತಿಲ್ಲ. ಜಾನುವಾರು ಸಾಕಿ ಜೀವನ ನಡೆಸುವ ಇವರು, ಸದ್ಯ ಹೊಲ ಗದ್ದೆ ಕೆಲಸವನ್ನ ಮಾಡುತ್ತಲೇ ಜೀವನ ನಡೆಸುತಿದ್ದಾರೆ. ಇನ್ನು ಗ್ರಾಮದಲ್ಲಿ ಯಾವುದೇ ಕಾರ್ಯಕ್ರಮ ಮಾಡದಂತೆ ಎಚ್ಚರಿಕೆ ನೀಡಿರುವ ಗ್ರಾಮದ ಹಿರಯರು, ಹೊರ ಗ್ರಾಮಗಳಲ್ಲಿ ಕೂಡಾ ಕಾರ್ಯಕ್ರಮ ಇದ್ದರೆ ಹೋಗುವಂತಿಲ್ಲ ಎಂದು ಎಚ್ಚರಿಸಿದ್ದಾರೆ.
ಅಲ್ಲದೆ ಹಾಲು ಹಾಕಲು ಬೇರೆ ಗ್ರಾಮಕ್ಕೆ ತೆರಳಲು ಗ್ರಾಮದ ಇಬ್ಬರನ್ನು ನೇಮಕ ಮಾಡಿದ್ದಾರೆ. ಅಲ್ಲದೆ ಅದೇ ಇಬ್ಬರು ದಿನಸಿ ಕೂಡ ತಂದು ಕೊಡಬೇಕು. ಈ ರೀತಿಯಾಗಿ ನಿಮಯ ಮಾಡಿ ಗ್ರಾಮಕ್ಕೆ ಕೊರೊನಾ ಎಂಟ್ರಿ ಕೊಡದಂತೆ ಎಚ್ಚರಿಕೆ ವಹಿಸಿದ್ದಾರೆ.
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಮಹಾಮಾರಿ ಕೊರೋನಾ ತಡೆಗೆ ಸಿಎಂ ಬಿಎಸ್‍ವೈ ಮುಂದಾಗಿದ್ದಾರೆ. ನಗರ ಪ್ರದೇಶಗಳಿಂದ ಹಳ್ಳಿಗಳಿಗೆ ಹೋಗುವ ಮಂದಿಗೆ ಕೋವಿಡ್ ನೆಗೆಟಿವ್ ಟೆಸ್ಟ್ ಕಡ್ಡಾಯ ಮಾಡಿ ಎಂದು ಆದೇಶ ನೀಡಿದ್ದಾರೆ.
ಒಂದು ವೇಳೆ ಟೆಸ್ಟ್ ವೇಳೆ ಪಾಸಿಟಿವ್ ಬಂದರೆ ಊರ ಹೊರಗಡೆ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಿ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರಿನ ಆಯ್ದ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಒಗಳ ಜೊತೆ ಸಂವಾದ ನಡೆಸಿದ ಸಿಎಂ ಈ ಆದೇಶ ನೀಡಿದ್ದಾರೆ.
ಮುಖ್ಯಮಂತ್ರಿ @BSYBJP ರವರು ಇಂದು ಗ್ರಾಮಾಂತರ ಪ್ರದೇಶಗಳಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯದ ಆಯ್ದ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಕೋವಿಡ್ ನಿರ್ವಹಣೆಗೆ ಗ್ರಾ.ಪಂ.ಮಟ್ಟದ ಟಾಸ್ಕ್ ಫೋರ್ಸ್ ಯಾವ ರೀತಿ ಕೆಲಸ ಮಾಡುತ್ತಿದೆ? ಗ್ರಾಮದಲ್ಲಿ ಕೋವಿಡ್ ತಡೆಗೆ ಯಾವೆಲ್ಲ ಕ್ರಮ ಕೈಗೊಂಡಿದ್ದಾರೆ ಎಂಬ ಬಗ್ಗೆ ಸಿಎಂ ಸಮಾಲೋಚನೆ ನಡೆಸಿದರು.
ಪಾಸಿಟಿವಿಟಿ ರೇಟ್ ಶೇ. 20ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಒಂದೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದೊಂದು ಕೋವಿಡ್ ಕೇರ್ ಸೆಂಟರ್ ತೆರೆಯಿರಿ ಎಂದು ಸೂಚನೆ ನೀಡಿದ್ದಾರೆ.
ಇಂದು ಮಾನ್ಯ ಮುಖ್ಯಮಂತ್ರಿಗಳು ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 (ಕೊರೊನಾ ವೈರಸ್) ಸೊಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಶಿವಮೊಗ್ಗ, ಬಳ್ಳಾರಿ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಯ ಕೆಲ ಗ್ರಾಮಪಂಚಾಯತಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳೊಂದಿಗೆ pic.twitter.com/Bx6H70hOXs
ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು. ಇದೇ ವೇಳೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ನೌಕರರನ್ನು ಕೊರೋನಾ ವಾರಿಯರ್ಸ್ ಅಂತಾ ಸಿಎಂ ಘೋಷಣೆ ಮಾಡಿದರು.
ಮತ್ತೆ ಕಂಟೈನ್ಮೆಂಟ್ ಝೋನ್
ಇವತ್ತಿನಿಂದ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಪದ್ಧತಿ ಜಾರಿ ಮಾಡಲಾಗಿದೆ. ಸೊಂಕಿತರ ಮನೆಗೆ ರೆಡ್ ಟೇಪ್ ಹಾಕಿ, ಸೋಂಕಿತರ ಕೈಗೆ ಸೀಲ್ ಹಾಕುವ ಹಳೆಯ ಕಟ್ಟುನಿಟ್ಟಿನ ರೂಲ್ಸನ್ನು ಮತ್ತೆ ಅನುಷ್ಠಾನಕ್ಕೆ ತರಲಾಗಿದೆ.
ಬಿಟಿಎಂ ಲೇಔಟ್, ಪದ್ಮನಾಭನಗರ, ಬಸವನಗುಡಿಯಲ್ಲಿ 1000 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಕೆಂಪು ಪಟ್ಟಿ ಅಂಟಿಸಿದ್ದಾರೆ. 14 ದಿನಗಳ ಕಾಲ ಸೋಂಕಿತರು ಮನೆಯಿಂದ ಮಿಸುಕಾಡದಂತೆ ಮಾಡಿದ್ದಾರೆ. ಕೊರೋನಾ ಸೋಂಕಿತರ ಮನೆಗಳ ಮುಂದಿನ ರಸ್ತೆಗಳಲ್ಲಿ ಸ್ಯಾನಿಟೇಸೇಷನ್ ಮಾಡಲಾಗಿದೆ.
ಕೆಂಪು ಪಟ್ಟಿ ಪದ್ದತಿ ಜಾರಿ ಮಾಡಿರೋದನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಮರ್ಥನೆ ಮಾಡಿಕೊಂಡಿದ್ದಾರೆ. ಹೋಂ ಐಸೋಲೇಷನ್ ಪರಿಣಾಮಕಾರಿ ಮಾಡಲು ಸೋಂಕಿತರ ಮನೆಗಳ ಮುಂದೆ ರೆಡ್ ಟೇಪ್ ಸಿಸ್ಟಂ ಜಾರಿ ಮಾಡಲಾಗಿದೆ ಅಂತ ಹೇಳಿದ್ದಾರೆ. ಆದ್ರೆ ಆ ಸೋಂಕಿತರ ಮನೆಯವರಿಗೆ ನಿತ್ಯದ ಅಗತ್ಯಗಳನ್ನು ಯಾರು ತಲುಪಿಸ್ತಾರೆ ಎಂಬ ಪ್ರಶ್ನೆ ಎದುರಾಗಿದೆ.
ಚಿಕ್ಕಬಳ್ಳಾಪುರ: ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸುವ ವಿಚಾರವಾಗಿ ನಡೆದ ಮಾತಿನ ಚಕಮಕಿ ಮುಗ್ದ ಹೆಣ್ಣು ಮಗಳ ಜೀವವೇ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ.
ಮಮತಾ(17) ಮೃತಳಾಗಿದ್ದಾಳೆ. ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಮಗಳಾದ ಮಮತಾ ಎಂಬ ಅಪ್ರಾಪ್ತೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಯುವಕ ಮಹದೇವ ಅಲಿಯಾಸ್ ಮಣಿಕಂಠ ಮೂರು ತಿಂಗಳ ಮದುವೆಯಾಗಿದ್ದನಂತೆ. ಇಂದು ಮಮತಾಳ ಜನ್ಮದಿನದ ನಿಮಿತ್ತ ಹೊಸಬಟ್ಟೆ ಕೊಡಿಸುವಂತೆ ಗಂಡ ಮಣಿಕಂಠನಿಗೆ ಕೇಳಿದ್ದಾಳೆ. ಆದರೆ ನನ್ನತ್ರ ದುಡ್ಡಿಲ್ಲ ಅಂತ ಆಕೆ ಪತಿ ರೇಗಾಡಿದ್ದಾನೆ. ಇದಿರಿಂದ ಖಿನ್ನತೆಗೊಳಗಾದ ಮಮತಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
2020 ಜನವರಿಯಲ್ಲಿ ಗೌರಿಬಿದನೂರು ತಾಲ್ಲೂಕಿನ ಆಲಿಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದ್ತಿದ್ದ ಮಮತಾಳನ್ನ ಮಹದೇವ ಅಲಿಯಾಸ್ ಮಣಿಕಂಠ ಪ್ರೀತಿ ಪ್ರೇಮದ ಹೆಸರಲ್ಲಿ ಅಪರಣ ಮಾಡಿದ್ದ ಅಂತ ಮಮತಾ ಪೋಷಕರು ಮಂಚೇನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.
ಮಮತಾಳನ್ನ ಸಾಂತ್ವಾನ ಕೇಂದ್ರದಲ್ಲಿ ಬಿಟ್ಟು ಬಳಿಕ ಪೋಷಕರು ಮನೆಗೆ ಕರೆದುಕೊಂಡು ಬಂದಿದ್ದರು. ಆದರೆ ಪ್ರೀತಿ ಮತ್ತಷ್ಟು ಚಿಗುರಿದ ಪರಿಣಾಮ ಮಮತಾ ಮಣಿಕಂಠ ಜೊತೆ ಹೋಗಿ ಮೂರು ತಿಂಗಳ ಹಿಂದೆ ಮದುವೆಯೂ ಆಗಿದ್ದರಂತೆ. ಈ ಬಗ್ಗೆ ಎಲ್ಲಾದರೂ ಹೇಳಿದರೆ ಮಮತಾಳನ್ನ ಸಾಯಿಸುವುದಾಗಿ ಪೋಷಕರಿಗೆ ಬೆದರಿಸಿದ್ದನಂತೆ. ಆದರೆ ಈಗ ಮಗಳ ಸಾವಾಗಿರೋದು ಮಮತಾಳ ಗಂಡ ಮತ್ತವರ ಕುಟುಂಬದವರು ಕೊಲೆ ಮಾಡಿದ್ದಾರೆಂದು ಮಮತಾ ಪೋಷಕರು ದೂರಿದ್ದಾರೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಮತ ಗಂಡ ಮಣಿಕಂಠ, ಅತ್ತೆ ಮಾವನನ್ನಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ನಗರಗಳಿಗಿಂತ ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿಯ ಗ್ರಾಮಸ್ಥರು ಇಡೀ ಗ್ರಾಮವನ್ನೇ ದಿಗ್ಬಂಧನ ಮಾಡಿಕೊಂಡಿದ್ದಾರೆ.
ದಾವಣಗೆರೆಯ 70 ರಷ್ಟು ಗ್ರಾಮಗಳಿಗೆ ಸೋಂಕು ಹೆಚ್ಚಾಗಿದ್ದು, ಇದರಿಂದ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿಯ ಗ್ರಾಮಸ್ಥರು ಸ್ವಯಂ ದಿಗ್ಬಂಧನ ಮಾಡಿಕೊಂಡಿದ್ದಾರೆ. ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿದ್ದು, ಎರಡನೇ ಅಲೆಯಲ್ಲಿ ಗ್ರಾಮಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಇಡೀ ಗ್ರಾಮಸ್ಥರು ದಿಗ್ಬಂಧನ ಮಾಡಿಕೊಳ್ಳುವಂತೆ ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಗ್ರಾಮಕ್ಕೆ ಎಂಟ್ರಿ ಕೊಡುವ ರಸ್ತೆಗಳನ್ನು ಬಂದ್ ಮಾಡಿದ್ದು, ರಸ್ತೆಗೆ ಮುಳ್ಳು ಹಾಕಿ ಯಾರು ಬಾರದಂತೆ ದಿಗ್ಬಂಧನ ಮಾಡಿದ್ದಾರೆ. ಬೇರೆ ಜಿಲ್ಲೆಗಳಿಂದ ಹಾಗೂ ಗ್ರಾಮಗಳಿಂದ ಆಗಮಿಸುವವರಿಗೆ ಸಂಪೂರ್ಣ ನಿಷೇಧ ಮಾಡಿದ್ದು, ಚಿಕ್ಕಮ್ಮನಹಟ್ಟಿಯಿಂದಲೂ ಕೂಡ ಯಾರು ಹೊರ ಹೋಗದಂತೆ ಸೂಚನೆ ನೀಡಿದ್ದಾರೆ. ಗ್ರಾಮದಲ್ಲಿ ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಂಡು, ಗುಂಪು ಸೇರದಂತೆ, ಅನಾವಶ್ಯಕ ಕೂತು ಮಾತನಾಡದಂತೆ ಡಂಗೂರ ಸಾರಿದ್ದಾರೆ. ಹೀಗೆ ತಮ್ಮ ಗ್ರಾಮಕ್ಕೆ ಕೊರೊನಾ ಎಂಟ್ರಿ ಕೊಡದ ಹಾಗೆ ಹಾಗೂ ಸೋಂಕು ನಿಯಂತ್ರಣ ಮಾಡಲು ಇಡೀ ಗ್ರಾಮಸ್ಥರು ಕ್ರಮ ಕೈಗೊಂಡಿದ್ದಾರೆ.