ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ (Earthquake) ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಭೋಪಾಲ್: ಆನೆ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ಸಂಜೆ ಜೈತಾರಿ ಅರಣ್ಯ ವ್ಯಾಪ್ತಿಯಲ್ಲಿ ಬೆಳೆ ನಾಶ ಮಾಡುತ್ತಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಓಡಿಸಲು ಮುಂದಾದಾಗ ಯುವಕನ ಮೇಲೆ ಆನೆ ದಾಳಿ (Elephant Attack in Madhyapradesh) ಮಾಡಿದೆ. ಪರಿಣಾಮ ಗಂಭೀರ ಗಾಯಗೊಂಡು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆಯೇ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸಿಟ್ಟಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಅಲ್ಲದೇ ಅವರ ವಾಹನಗಳನ್ನು ಜಖಂಗೊಳಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್ ಪಡೆಗಳನ್ನು ರವಾನಿಸಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಬಲಿ; ಕರ್ನಾಟಕ ಸರ್ಕಾರದಿಂದ ಪರಿಹಾರ – ಈಶ್ವರ್ ಖಂಡ್ರೆ ಹೇಳಿದ್ದೇನು?
ಸದ್ಯ ಅನುಪ್ಪುರ್ ಆನೆ ದಾಳಿ ಘಟನೆಯಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸಿಎಂ ಮೋಹನ್ ಯಾದವ್ ಘೋಷಿಸಿದ್ದಾರೆ. ಇತ್ತೀಚೆಗೆ ಅನುಪ್ಪುರ್ ಜಿಲ್ಲೆಯಲ್ಲಿ ಆನೆಗಳ ದಾಳಿ ಪ್ರಕರಣ ಹೆಚ್ಚುತ್ತಿದೆ. ಕಾಡಾನೆಗಳು ಆಹಾರ ಅರಸಿ ನಾಡಿಗೆ ಬರುತ್ತಿದ್ದು, ಬೆಳೆ ಹಾಗೂ ಮನೆಗಳಿಗೆ ಹಾನಿ ಮಾಡುತ್ತಿವೆ. ಮಧ್ಯಪ್ರದೇಶದ ಶಾಹದೋಲ್ ವಿಭಾಗವು ಆನೆ ಮತ್ತು ಮನುಷ್ಯ ಸಂಘರ್ಷದ ಹೊಸ ಕೇಂದ್ರವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 25 ಮಂದಿ ಆನೆ ದಾಳಿಗೆ ಬಲಿಯಾಗಿದ್ದಾರೆ. 40-50 ಆನೆಗಳ ದೊಡ್ಡ ಹಿಂಡುಗಳು ಹಳ್ಳಿಗಳ ಬಳಿ ತಿರುಗಾಡುವುದನ್ನು ಗ್ರಾಮಸ್ಥರು ಆಗಾಗ್ಗೆ ಗಮನಿಸುತ್ತಾರೆ. ಆದರೆ ಈ ಸಂಬಂಧ ಸರ್ಕಾರ ಹಾಗೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
– ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಆದೇಶ
ಮಂಡ್ಯ: ಕೆರಗೋಡು ಹನುಮಧ್ವಜ ವಿವಾದಕ್ಕೆ (Hanuman Flag Controversy) ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉದ್ರಿಕ್ತ ಭಾಷಣಗಳನ್ನ ಹಂಚಿಕೊಳ್ಳದಂತೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Mandya SP) ಆದೇಶಿಸಿದ್ದಾರೆ.
ಆದೇಶ ಪ್ರತಿಯಲ್ಲಿ ಏನಿದೆ?
ಹನುಮಧ್ವಜ ಸಂಘರ್ಷ ಸಂಬಂಧ ಪ್ರಕಟಣೆ ಹೊರಡಿಸಿರುವ ಎಸ್ಪಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಾದ X, Facebook, Whatsaap, Instagram, Youtube ಇತ್ಯಾದಿಗಳಲ್ಲಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಭಂಗ ತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉದ್ರೇಕಕಾರಿ ಭಾಷಣಗಳನ್ನ ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸಬಾರದು. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವಿಗೆ ಆಕ್ರೋಶ- ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್
ಏನಿದು ಪ್ರಕರಣ?
ಕಳೆದ ಜನವರಿ 28ರಂದು ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಪೊಲೀಸ್ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಕೆರಗೋಡು ಗ್ರಾಮಸ್ಥರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದರು. ಭಾರೀ ಹೈಡ್ರಾಮಾ ನಡುವೆ ತಳ್ಳಾಟ-ನೂಕಾಟವೂ ನಡೆದಿತ್ತು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವಿವಾದ ರಾಜಾದ್ಯಂತ ವ್ಯಾಪಿಸಿತು. ಇದನ್ನೂ ಓದಿ: ಹನುಮಂತನ ಕೆಣಕಿದ್ದಕ್ಕೆ ಲಂಕ ದಹನವಾಯ್ತು, ಅದೇ ರೀತಿ ನಿಮ್ಮ ಅವನತಿಯಾಗುತ್ತೆ: ಹೆಚ್‍ಡಿಕೆ ವಾಗ್ದಾಳಿ
– ರಾಮನ ಬ್ಯಾನರ್ ಕಿತ್ತು ಹಾಕಿದ ಪೊಲೀಸರು – ಹೆಚ್ಚಿದ ಪ್ರತಿಭಟನೆ ಕಿಚ್ಚು, ಕಣ್ಣೀರಿಟ್ಟ ಗ್ರಾಮಸ್ಥರು
ಮಂಡ್ಯ: ಭಾರೀ ಹೈಡ್ರಾಮಾ ನಡುವೆ 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು (Mandya Police) ಕೆಳಗಿಳಿಸಿದ್ದಾರೆ. ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದ್ದು, ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 (144 Section) ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ (Mandya) ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನ ತಿರುಗಿಬಿದ್ದಿದ್ದಾರೆ. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಧುಮುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರಗೋಡಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಸ್ಥಳದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ.
ಗ್ರಾಮಸ್ಥರ ಮೇಲೆ ಪೊಲೀಸರ ಲಾಠಿ ಚಾರ್ಜ್:
ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿಯನ್ನ ತಿಳಿಗೊಳಿಸಲು ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ ಶ್ರೀರಾಮನ ಬ್ಯಾನರ್ ಕಿತ್ತು ಹಾಕಿದ್ದಾರೆ. ಬೃಹತ್ ಧ್ವಜಸ್ತಂಬವನ್ನು ಕಟ್ ಮಾಡೋದಕ್ಕೆ ಗ್ಯಾಸ್‌ಕಟ್ಟರ್ ತರಿಸಿದ್ದಾರೆ.
ಪೊಲೀಸರ ನಡೆಗೆ ಗ್ರಾಮಸ್ಥರು, ಹಿಂದೂ ಕಾರ್ಯಕರ್ತರು, ಮಹಿಳೆಯರು ಶಾಪ ಹಾಕಿದ್ದಾರೆ. ಕಣ್ಣೀರಿಟ್ಟು, ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಶಾಸಕ ಗಣಿಗ ರವಿ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಕುಮ್ಮಕ್ಕಿನಿಂದ ಈ ರೀತಿ ಕೆಲಸವಾಗ್ತಿದೆ ಎಂದು ಕಿಡಿ ಕಾರಿದ್ದಾರೆ.
ರಸ್ತೆ ತಡೆದು ಪ್ರತಿಭಟನೆ:
ಹನುಮ ಧ್ವಜ ಇಳಿಸಿದ್ದರ ವಿರುದ್ಧ ಆಕ್ರೋಶ ಹೊರಹಾಕಿದ ಕೆರೆಗೋಡು ಗ್ರಾಮಸ್ಥರು ಮಂಡ್ಯ-ಯಡಿಯೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೈ ಶಾಸಕ ಗಣಿಗ ರವಿಕುಮಾರ್ ಫ್ಲೆಕ್ಸ್ ಹರಿದು, ಒಲೆ ಹಚ್ಚಿ, ರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಹನುಮನ ದೇವಸ್ಥಾನದ ಮುಂಭಾಗದಲ್ಲಿ ಯುವಕರೊಟ್ಟಿಗೆ ಮಹಿಳೆಯರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಆದ್ರೆ ಇದಕ್ಕೆ ಆಸ್ಪದ ನೀಡದ ಪೊಲೀಸರು ಅಡುಗೆ ಮಾಡುವುದನ್ನ ತಡೆದಿದ್ದಾರೆ. ಅಡುಗೆ ಪಾತ್ರೆಗಳಲ್ಲಿದ್ದ ನೀರನ್ನು ರುಸಿದು, ಪಾತ್ರೆಯನ್ನ ಹೊತ್ತೊಯ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಜನರು ಇಡೀ ಶಾಪ ಹಾಕಿದ್ದಾರೆ.
– ಜೈಶ್ರೀರಾಮ್ ಘೋಷಣೆಯೊಂದಿಗೆ ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಆಕ್ರೋಶ
ಮಂಡ್ಯ: ರಾತ್ರೋರಾತ್ರಿ ಹನುಮ ಧ್ವಜ (Hanuma Flag) ತೆರವಿಗೆ ಅಧಿಕಾರಿಗಳು ಆಗಮಿಸಿದ ಸಂದರ್ಭ ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧವೇ ತಿರುಗಿಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ.
ಅಧಿಕಾರಿಗಳು ಭಾನುವಾರ (ಜ.28) ಮುಂಜಾನೆ 3 ಗಂಟೆ ವೇಳೆಗೆ ಗ್ರಾಮಕ್ಕೆ ಆಗಮಿಸಿ ಧ್ವಜ ತೆರವಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಮಂಡ್ಯ ತಾಲೂಕಿನ ಕೆರೆಗೋಡು (Keregodu) ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಹನುಮ ಧ್ವಜ ತೆರವು ಮಾಡದಂತೆ ನೂರಾರು ಜನ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: 6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್
ಮಂಡ್ಯ ಎಸಿ ಶಿವಮೂರ್ತಿ, ತಹಸಿಲ್ದಾರ್ ಶಿವಕುಮಾರ್ ಬಿರಾದರ್ ನೇತೃತ್ವದಲ್ಲಿ ಧ್ವಜ ಇಳಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಜೈ ಶ್ರೀರಾಮ್, ಜೈ ಹನುಮ ಘೋಷಣೆ ಕೂಗಿ ಪ್ರತಿಭಟನೆ ಆರಂಭಿಸಿದ್ದು, ಧ್ವಜ ಕಂಬದ ಬಳಿಯೇ ಮಹಿಳೆಯರು ಹಾಗೂ ಯುವಕರು ಕುಳಿತಿದ್ದಾರೆ. ಅಲ್ಲದೇ ಕೆರೆಗೋಡು ಗ್ರಾಮಸ್ಥರಿಗೆ ಸಾಥ್ ನೀಡಲು ಹಲವು ಹಿಂದೂ ಸಂಘಟನೆಗಳು ಧಾವಿಸಿವೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ – 2 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ
ಹನುಮನ ಧ್ವಜ ಉಳಿವಿಗಾಗಿ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಹಿಂದೂ ಧರ್ಮದ ಪ್ರತೀಕ ಹನುಮ ಧ್ವಜ. ನಾವು ಧ್ವಜವನ್ನು ಯಾವುದೇ ಕಾರಣಕ್ಕೂ ಇಳಿಸಲ್ಲ. ರಾತ್ರಿ ಎಲ್ಲಾ ಊಟ, ನಿದ್ದೆ ಬಿಟ್ಟು ಹನುಮ ಧ್ವಜ ಕಾದಿದ್ದೇವೆ. ಕಾರಣವನ್ನು ಹೇಳದೆ ಧ್ವಜ ಇಳಿಸಲು ಬಂದಿದ್ದಾರೆ. ಹನುಮ ಧ್ವಜ ಇಳಿಸಲು ಬಂದವರಿಗೆ ಶಾಪ ತಟ್ಟದೇ ಬಿಡಲ್ಲ ಎಂದು ಮಹಿಳೆಯರು `ಪಬ್ಲಿಕ್ ಟಿವಿ’ಯೊಂದಿಗೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ನಾಪೋಕ್ಲು ಬಳಿಯ ನೆಲಜಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಕೋಲಾರ: 2 ದಿನಗಳ ಹಿಂದೆ ನಡೆದ ಆ ಒಂದು ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಯಾರನ್ನು ಯಾವಾಗ ಪೊಲೀಸರು ಬಂಧಿಸ್ತಾರೋ ಅನ್ನೋ ಆತಂಕದಲ್ಲಿ ಊರಿಗೆ ಊರೇ ಖಾಲಿಯಾಗಿದೆ. ಜನರು ಆ ಗ್ರಾಮವನ್ನೇ ತೊರೆದಿದ್ದು, ಅಲ್ಲಿ ಸ್ಮಶಾನ ಮೌನ ಆವರಿಸಿದೆ.
ಬಿಕೋ ಎನ್ನುತ್ತಿರುವ ಗ್ರಾಮ, ಪೊಲೀಸರಿಂದ ಗ್ರಾಮದಲ್ಲಿ ಮೊಕ್ಕಾಂ, ಗ್ರಾಮಕ್ಕೆ ಗ್ರಾಮವನ್ನೇ ತೊರೆದಿರುವ ಗ್ರಾಮಸ್ಥರು. ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ (Srinivasapur) ತಾಲೂಕಿನ ನಂಬಿಹಳ್ಳಿಯಲ್ಲಿ (Nambihalli). ಕಳೆದ 2 ದಿನಗಳ ಹಿಂದೆ ಪತಿಯಿಂದಲೇ ಪತ್ನಿಯ ಭೀಕರ ಕೊಲೆ ನಡೆದಿತ್ತು. ಈ ವೇಳೆ ಆರೋಪಿ ಬೀಸಿದ ಮಚ್ಚಿಗೆ ಒರ್ವ ಮಹಿಳೆ ಹತ್ಯೆಯಾಗಿದ್ದರೂ 4 ಕೊಲೆ ಯತ್ನ ಹಾಗೂ 10 ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿತ್ತು. ಈ ವೇಳೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಬಳಿಕ ಪ್ರತ್ಯೇಕ 3 ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ರು. ಆದರೆ ಆರೋಪಿ ಬಂಧಿಸಲು ಮುಂದಾದ ವೇಳೆ ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದ ಗ್ರಾಮಸ್ಥರಿಗೂ ಈಗ ಕಂಟಕ ಎದುರಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ನಂಬಿಹಳ್ಳಿ ಗ್ರಾಮದ 1,000ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದೀಗ ಬಂಧನದ ಭೀತಿಯಲ್ಲಿ ಗ್ರಾಮಸ್ಥರು ಊರನ್ನೇ ತೊರೆದಿದ್ದಾರೆ.
ಕಳೆದ 2 ದಿನಗಳ ಹಿಂದೆ ರಾಧಾ ಎಂಬಾಕೆಯನ್ನು ಆಕೆಯ ಪತಿ ನಾಗೇಶ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ. ಜೊತೆಗೆ ಇನ್ನೂ 4 ಜನರ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿ, ನಂತರ ಅದೇ ಗ್ರಾಮದ ಹೋಟೆಲ್ ಒಂದರಲ್ಲಿ ಅವಿತುಕೊಂಡಿದ್ದ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆರೋಪಿ ನಾಗೇಶ್ ಇದ್ದ ಹೋಟೆಲ್‌ಗೆ ದಾಳಿ ಮಾಡಿ ಆತನನ್ನು ಕೊಲೆ ಮಾಡಲು ಮುಂದಾಗಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಗ್ರಾಮಸ್ಥರ ಮನವೊಲಿಕೆಗೆ ಮುಂದಾಗಿದ್ದರು. ವಿಫಲರಾದ ನಂತರ ಲಘು ಲಾಠಿ ಚಾರ್ಜ್ ಮಾಡಿದ್ದರು. ಇದನ್ನೂ ಓದಿ: ಎಲ್ಲಾ ಪರೀಕ್ಷೆಗಳ ರಿಪೋರ್ಟ್ ನಾರ್ಮಲ್- ಚೈತ್ರಾ ಹೆಲ್ತ್ ಬುಲೆಟಿನ್ ರಿಪೋರ್ಟ್ ಇಲ್ಲಿದೆ
ಇದ್ಯಾವುದಕ್ಕೂ ಗ್ರಾಮಸ್ಥರು ಜಗ್ಗದ ಹಿನ್ನೆಲೆ ಪೊಲೀಸರು ಗಾಳಿಯಲ್ಲಿ 7 ಸುತ್ತಿನ ಗುಂಡು ಹಾಯಿಸಿ ಅಶ್ರುವಾಯು ಸಿಡಿಸಿದ ನಂತರ ಪರಿಸ್ಥಿತಿ ಹತೋಟಿಗೆ ಬಂದಿತ್ತು. ನಂತರ ಆರೋಪಿ ನಾಗೇಶ್ ನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದ ವೇಳೆ ಪೊಲೀಸರ ಮೇಲೆಯೂ ಮಚ್ಚಿನಿಂದ ದಾಳಿ ಮಾಡಿ, ಎಸ್‌ಪಿ ನಾರಾಯಣ್ ಸೇರಿದಂತೆ 10 ಮಂದಿ ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ಆರೋಪಿಯ ಕಾಲು ಹಾಗೂ ಕೈಗೆ 5 ಸುತ್ತಿನ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದು ಚಿಕಿತ್ಸೆ ಕೊಡಿಸಲಾಗಿತ್ತು. ಹೀಗಾಗಿ ಗ್ರಾಮದಲ್ಲಿರುವ ಮಹಿಳೆಯರು, ಮಕ್ಕಳು, ಪುರುಷರು ಬಂಧನದ ಭೀತಿಯಿಂದಾಗಿ ಗ್ರಾಮವನ್ನು ಬಿಟ್ಟಿದ್ದಾರೆ.
ಒಟ್ಟಿನಲ್ಲಿ ಮಾಡಿದ್ದುಣ್ಣು ಮಾರಾಯ ಅಂತಾ ಕಾನೂನಿನ ವಿರುದ್ಧವಾಗಿ ಆರೋಪಿಯನ್ನು ಕೊಲ್ಲುವ ಯತ್ನ ಹಾಗೂ ಪೊಲೀಸರಿಗೆ ಅಡ್ಡಿಪಡಿಸಿ ಇಡೀ ಗ್ರಾಮ ಸಂಕಷ್ಟಕ್ಕೀಡಾಗಿದೆ. ಆದರೂ 1,000ಕ್ಕೂ ಹೆಚ್ಚು ಜನರ ಮೇಲೆ ದೂರು ದಾಖಲಾಗಿದ್ದು ಇದೊಂದು ದೊಂಬಿ ಪ್ರಕರಣ, ಇದಕ್ಕೆ ಅಷ್ಟೊಂದು ಮಹತ್ವ ಇಲ್ಲ ಎನ್ನುವುದು ಇಲಾಖಾಧಿಕಾರಿಗಳ ಮಾತು. ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಹಿಂದೂ ಅಪ್ರಾಪ್ತೆಯರಿಬ್ಬರ ಕಿಡ್ನಾಪ್- ನಾಲ್ವರು ಅರೆಸ್ಟ್
ರಾಮನಗರ: ಟ್ಯೂಶನ್ (Tuition) ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಸೋಮವಾರ ರಾಮನಗರ (Ramanagara) ತಾಲೂಕಿನ ಗೊಲ್ಲರದೊಡ್ಡಿ (Gollaradoddi) ಗ್ರಾಮದಲ್ಲಿ ರಸ್ತೆ ಮಧ್ಯೆ ಮಗುವಿನ ಶವ ಇಟ್ಟು, ರಸ್ತೆಗೆ ಹಂಪ್ (Humps) ಹಾಕುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ (Protest) ನಡೆಸಿದ್ದಾರೆ.
ರಾಮನಗರ- ಮಾಗಡಿ ಮುಖ್ಯರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 9ರಂದು ಟ್ಯೂಶನ್ ಮುಗಿಸಿ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದಿದ್ದು, ಘಟನೆಯ ಪರಿಣಾಮ ಮೂವರು ಮೃತಪಟ್ಟಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮತ್ತೊಂದು ಮಗು ಮೃತಪಟ್ಟ ಹಿನ್ನೆಲೆ ವಾಹನಗಳ ವೇಗಕ್ಕೆ ಕಡಿವಾಣ ಹಾಕಿ ಅಪಘಾತ ತಪ್ಪಿಸುವಂತೆ ಗ್ರಾಮಸ್ಥರು (Villagers) ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಮಗುವಿನ ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಅವಾಂತರದಿಂದ ಬೈಕ್‍ಗೆ ಟ್ರಕ್ ಡಿಕ್ಕಿ – ಇಬ್ಬರ ದುರ್ಮರಣ
ಪ್ರತಿಭಟನಾ ಸ್ಥಳಕ್ಕೆ ಎಸಿ ಶ್ರೀಬಿಜಾಯ್ ಭೇಟಿ ನೀಡಿ ಗ್ರಾಮಸ್ಥರ ಮನವಿಯನ್ನು ಆಲಿಸಿದ್ದು, ರಸ್ತೆಗೆ ಹಂಪ್‌ಗಳ ನಿರ್ಮಾಣಕ್ಕೆ ಕ್ರಮವಹಿಸುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೇ ಗ್ರಾಮಸ್ಥರ ಮನವೊಲಿಸಿ ಪ್ರತಿಭಟನೆ ವಾಪಸ್ ಪಡೆದು ಮಗುವಿನ ಅಂತ್ಯಸಂಸ್ಕಾರ ನೆರವೇರಿಸುವಂತೆ ಮನವಿ ಮಾಡಿಕೊಂಡರು. ಎಸಿ ಭರವಸೆ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ. ಇದನ್ನೂ ಓದಿ: ಕಲ್ಲು, ಚೂರಿ ಹಿಡಿದು ನಡುರಸ್ತೆಯಲ್ಲಿ ದಾಂಧಲೆ – ಸಿನಿಮೀಯ ಶೈಲಿಯಲ್ಲಿ ಲಾಕ್ ಮಾಡಿದ ಪೊಲೀಸರು
ರಾಯಚೂರು: ಕಲುಷಿತ ನೀರು (Contaminated Water) ಕುಡಿದು ಕಳೆದ ಒಂದು ವಾರದಿಂದ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasugur) ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ನಡೆದಿದೆ.
ಆಗಸ್ಟ್ 5ರಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಕುಡಿಯುವ ನೀರಿನ ಪೈಪ್‌ಗೆ ಚರಂಡಿ ನೀರು (Sewage Water) ಸೇರಿದ ಪರಿಣಾಮ ಘಟನೆ ನಡೆದಿದೆ. ಫುಡ್ ಪಾಯಿಸನ್ (Food Poison) ಎಂದುಕೊಂಡು ಗ್ರಾಮದಲ್ಲೇ ಚಿಕಿತ್ಸೆ ಪಡೆದಿದ್ದ ಜನ ವಾಂತಿ, ಭೇದಿ, ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಲಿಂಗಸುಗೂರು ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ 20 ಜನ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ತಾನು ಸಾಕಿದ ಗುಂಡಾಗಳಿಂದ ನನ್ನ ಹತ್ಯೆಗೆ ಸಂಚು: ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ
ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಅಸ್ವಸ್ಥಗೊಂಡ ಗ್ರಾಮಸ್ಥರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಪತ್ತೆಯಾಗಿದ್ದು ಚಿರತೆಯಲ್ಲ, ಅದು ಕಿರುಬ ಬೆಕ್ಕು!
ಪಾಟ್ನ: ಪ್ರಿಯಕರನನ್ನು (Lover) ಭೇಟಿ ಮಾಡುವ ಸಲುವಾಗಿ ಯುವತಿಯೊಬ್ಬಳು ಪದೇ ಪದೇ ಗ್ರಾಮದ ವಿದ್ಯುತ್ (Electricity) ಸಂಪರ್ಕವನ್ನು ಕಡಿತಗೊಳಿಸುತ್ತಿದ್ದ ಘಟನೆ ಬಿಹಾರದಲ್ಲಿ (Bihar) ನಡೆದಿದ್ದು, ಕೊನೆಗೂ ಗ್ರಾಮಸ್ಥರ ಕೈಯಲ್ಲಿ ಜೋಡಿಗಳಿಬ್ಬರು ಸಿಕ್ಕಿಬಿದ್ದಿದ್ದಾರೆ.
ಬಿಹಾರದ ಬೆಟ್ಟಿಯಾ ಯುವತಿ ಪ್ರೀತಿ ಕುಮಾರಿ ಎಂಬಾಕೆ ಪಕ್ಕದ ಗ್ರಾಮದ ರಾಜ್‌ಕುಮಾರ್ ಎಂಬಾತನನ್ನು ಪ್ರೀತಿಸುತ್ತಿದ್ದು, ಆತನನ್ನು ಭೇಟಿ ಮಾಡುವ ಸಲುವಾಗಿ ಆಗಾಗ ಗ್ರಾಮದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುತ್ತಿದ್ದಳು. ಪದೇ ಪದೇ ವಿದ್ಯುತ್ ಕಡಿತವಾಗುತ್ತಿದ್ದರಿಂದ ಗ್ರಾಮಸ್ಥರು ಕಂಗಾಲಾಗಿದ್ದರು. ಪ್ರೀತಿ ಪ್ರತಿದಿನ ರಾತ್ರಿ ವಿದ್ಯುತ್ ಕಡಿತಗೊಳಿಸಿ ತನ್ನ ಪ್ರೇಮಿಯನ್ನು ಭೇಟಿಯಾಗುತ್ತಿದ್ದಳು. ವಿದ್ಯುತ್ ಕಡಿತದಿಂದ ಗ್ರಾಮದಲ್ಲಿ ಕಳ್ಳತನದ ವರದಿಗಳು ಜಾಸ್ತಿಯಾಗುತ್ತಿತ್ತು. ಇದನ್ನೂ ಓದಿ: ಆನ್‍ಲೈನ್ ಗೇಮ್‍ನಲ್ಲಿ 5 ಕೋಟಿ ಗೆದ್ದು, 58 ಕೋಟಿ ಕಳೆದುಕೊಂಡ ಉದ್ಯಮಿ!
ಗ್ರಾಮದಲ್ಲಿ ಪದೇ ಪದೇ ವಿದ್ಯುತ್ ಕಡಿತವಾಗುತ್ತಿದ್ದರಿಂದ ಗ್ರಾಮಸ್ಥರು ವಿದ್ಯುತ್ ಇಲಾಖೆಗೆ ಹಲವು ಬಾರಿ ದೂರು ನೀಡಿದ್ದರು. ಇದರಿಂದ ಯಾವುದೇ ಪ್ರಯೋಜನವಾಗದ ಕಾರಣ ವಿದ್ಯುತ್ ಕಡಿತದ ಹಿಂದಿರುವ ಕಾರಣವನ್ನು ಕಂಡುಹಿಡಿಯಲು ಗ್ರಾಮಸ್ಥರು ನಿರ್ಧರಿಸಿದ್ದರು. ಮುಂದಿನ ಬಾರಿ ಕರೆಂಟ್ ಕಟ್ ಆದ ಸಂದರ್ಭ ಈ ಪ್ರೇಮಿಗಳು ಗ್ರಾಮಸ್ಥರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವಿದ್ಯುತ್ ಕಡಿತದ ಹಿಂದಿರುವ ಸತ್ಯ ಬೆಳಕಿಗೆ ಬಂದ ಬಳಿಕ ಗ್ರಾಮಸ್ಥರು ಯುವಕನಿಗೆ ಥಳಿಸಿದ್ದಾರೆ. ಘಟನೆಯ ನಂತರ ಯುವಕ ತನ್ನ ಗ್ಯಾಂಗ್ ಅನ್ನು ಕರೆಸಿ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ವ್ಯಕ್ತಿಯ ಮುಖ, ದೇಹಕ್ಕೆ ಮಲ ಮೆತ್ತಿಸಿ ವಿಕೃತಿ ಮೆರೆದ!
ಇದೀಗ ಗ್ರಾಮಸ್ಥರು ರಾಜ್‌ಕುಮಾರ್‌ಗೆ ದೊಣ್ಣೆಯಿಂದ ಹೊಡೆಯುವುದು ಮತ್ತು ಯುವತಿ ಆತನನ್ನು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ. ಬಳಿಕ ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಗ್ರಾಮದ ಜನರು ಮುತುವರ್ಜಿ ವಹಿಸಿ ರಾಜ್‌ಕುಮಾರ್‌ಗೆ ಪ್ರೀತಿಯನ್ನು ಮದುವೆಯಾಗುವಂತೆ ಸೂಚಿಸಿದ್ದಾರೆ. ಅದರ ಪ್ರಕಾರ ಇವರಿಬ್ಬರ ಮದುವೆ (Marriage) ಸ್ಥಳೀಯ ದೇವಸ್ಥಾನದಲ್ಲಿ (Temple) ಅದ್ಧೂರಿಯಾಗಿ ನೆರವೇರಿದೆ. ಇದನ್ನೂ ಓದಿ: ನಾಲ್ಕು ತಿಂಗಳ ಮಗುವಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ
ಯಾದಗಿರಿ: ಯಾದಗಿರಿ (Yadgiri) ತಾಲೂಕಿನ ಹೊನಗೇರಾದಲ್ಲಿನ ಪ್ರಾಥಮಿಕ ಆಸ್ಪತ್ರೆಗೆ ಹೆರಿಗೆಗೆಂದು ತೆರಳಿದ್ದ ಗರ್ಭಿಣಿಗೆ (Pregnant) ಸೂಕ್ತ ಚಿಕಿತ್ಸೆ ದೊರೆಯದ ಹಿನ್ನೆಲೆ ಹೊಟ್ಟೆಯಲ್ಲಿಯೇ ಶಿಶು (Infant) ಮೃತಪಟ್ಟಿರುವ ಘಟನೆ ನಡೆದಿದೆ.
ಆಶನಾಳ ಗ್ರಾಮದ ಗರ್ಭಿಣಿ ಲಕ್ಷ್ಮಿ ಎಂಬುವವರಿಗೆ ಸರಿಯಾದ ಚಿಕಿತ್ಸೆ ಸಿಗಲಿಲ್ಲ. ವೈದ್ಯರ (Doctor) ನಿರ್ಲಕ್ಷ್ಯದಿಂದಲೇ ಹೀಗೆ ಆಗಿದೆ ಎಂದು ಆರೋಪ ಮಾಡಲಾಗಿದೆ. ಮೊದಲಿಗೆ ಆಶಾ ಕಾರ್ಯಕರ್ತೆಯು ಇವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (Primary Health Centre) ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಇರದ ಹಿನ್ನೆಲೆಯಲ್ಲಿ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸೋಮವಾರ ರಾತ್ರಿ ಗರ್ಭಿಣಿ ಲಕ್ಷ್ಮಿಯ ಸ್ಕ್ಯಾನಿಂಗ್ (Scanning) ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿದ್ದ ಬಗ್ಗೆ ತಿಳಿದುಬಂದಿದೆ. ಕೊನೆಗೆ ಮೃತ ಶಿಶುವನ್ನು ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರ ತೆಗೆದಿದ್ದಾರೆ. ಬಳಿಕ ಬಾಣಂತಿ ಲಕ್ಷ್ಮಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು- ಯುವತಿ ಸಾವು
ವೈದ್ಯರ ನಿರ್ಲಕ್ಷ್ಯತನದಿಂದ ಶಿಶು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಬಾರದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಆರೋಗ್ಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಕುಟುಂಬಸ್ಥರು, ಸೂಕ್ತ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ತಪ್ಪಿತಸ್ಥ ವೈದ್ಯರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು (Villagers) ಯಾದಗಿರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ (Protest) ನಡೆಸಿ, ಸೂಕ್ತ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಿಯಕರನಿಂದ ಪ್ರಿಯತಮೆ ಮರ್ಡರ್!
ವಿಷಯ ತಿಳಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Channareddy Patil Tunnur) ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಈ ವೇಳೆ ಶಾಸಕರ ಮುಂದೆ ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ. ಇದನ್ನೂ ಓದಿ: ಮೈ-ಬೆಂ. ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ಇಬ್ಬರು ಗಂಭೀರ