Tag: villagers

  • ಮಾನಸಿಕ ಅಸ್ವಸ್ಥನಿಂದ ವ್ಯಕ್ತಿಯ ಕೊಲೆ – ಗುದ್ದಲಿ ಹಿಡಿದು ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿದ ಆರೋಪಿ

    ಮಾನಸಿಕ ಅಸ್ವಸ್ಥನಿಂದ ವ್ಯಕ್ತಿಯ ಕೊಲೆ – ಗುದ್ದಲಿ ಹಿಡಿದು ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿದ ಆರೋಪಿ

    ರಾಯಚೂರು: ಮಾನಸಿಕ ಅಸ್ವಸ್ಥನೋರ್ವ ಗುದ್ದಲಿಯಿಂದ ಹೊಡೆದು ವ್ಯಕ್ತಿಯೊಬ್ಬನನ್ನ ಕೊಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ.

    ಮೂಲಪ್ಪ ಸೋಮನಮರಡಿ (46) ಕೊಲೆಯಾದ ವ್ಯಕ್ತಿ. ಆರೋಪಿ ಮೌನೇಶ್ ಗುದ್ದಲಿ ಹಿಡಿದು ಜನರನ್ನು ಹೆದರಿಸಿಕೊಂಡು ಗ್ರಾಮದಲ್ಲಿ ಓಡಾಡುತ್ತಿದ್ದ. ಗುದ್ದಲಿ ಹಿಡಿದುಕೊಂಡು ಓಡಾಡುವ ವಿಚಾರಕ್ಕೆ ಮಾತಿನ ಚಕಮಕಿ ಬೆಳೆದು ಜಗಳವಾಗಿ ಕೊಲೆ ನಡೆದಿದೆ. ಗುದ್ದಲಿಯಿಂದ ಬಲವಾಗಿ ತಲೆಗೆ ಹೊಡೆದ ಪರಿಣಾಮ ರಕ್ತಸ್ರಾವವಾಗಿ ಮೂಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆ ಮುಂಭಾಗದಲ್ಲೇ ಏರ್‌ ಫೈರ್ – ವೆಬ್ ಡಿಸೈನರ್ ಕಿಡ್ನಾಪ್

    ಆರೋಪಿ ಮೌನೇಶ್ ಈ ಹಿಂದೆ ಗ್ರಾಮದ ನಾಲ್ಕು ಬಣವೆಗಳಿಗೆ ಬೆಂಕಿ ಹಚ್ಚಿ ಅವಾಂತರ ಸೃಷ್ಟಿಸಿದ್ದನು. ಗ್ರಾಮದಲ್ಲಿ ಗುದ್ದಲಿ ಹಿಡಿದುಕೊಂಡು ಓಡಾಡಿ ಜನರಿಗೆ ಭಯಹುಟ್ಟಿಸಿದ್ದ ಅಂತ ಗ್ರಾಮಸ್ಥರು ತಿಳಿಸಿದ್ದಾರೆ.

    ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರನ ಸೂಪರ್‌ವೈಸರ್ ನೇಣುಬಿಗಿದು ಆತ್ಮಹತ್ಯೆಗೆ ಶರಣು

  • ಸೋಮೇಶ್ವರ ದೇವಾಲಯ ಜಾಗಕ್ಕೆ ಕಿತ್ತಾಟ: ವ್ಯಕ್ತಿಯ ವಿರುದ್ಧ ತಿರುಗಿಬಿದ್ದ ಗ್ರಾಮಸ್ಥರು

    ಸೋಮೇಶ್ವರ ದೇವಾಲಯ ಜಾಗಕ್ಕೆ ಕಿತ್ತಾಟ: ವ್ಯಕ್ತಿಯ ವಿರುದ್ಧ ತಿರುಗಿಬಿದ್ದ ಗ್ರಾಮಸ್ಥರು

    ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳ ಗ್ರಾಮದಲ್ಲಿ ಸೋಮೇಶ್ವರ ದೇವಾಲಯಕ್ಕೆ ಸೇರಿದ ಜಾಗದ ವಿವಾದ ಕೆಲ ಘಂಟೆಗಳ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

    ಇಲ್ಲಿನ ಖಾಸಗಿ ವ್ಯಕ್ತಿ ಮುನಿರಾಜು ಮರಸೂರು ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮವಾಗಿ ಸೋಮೇಶ್ವರ ದೇವಾಲಯಕ್ಕೆ ಸೇರಿದ ಜಾಗವನ್ನು ಕಬಳಿಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಊರಿನ ಗ್ರಾಮಸ್ಥರು ಆತನ ವಿರುದ್ಧ ತಿರುಗಿಬಿದ್ದಿದ್ದರು. ಇದನ್ನೂ ಓದಿ: ಆಧಾರ್ ಕಾರ್ಡ್ ಇರೋರೆಲ್ಲ ಭಾರತೀಯರು: ವಚನಾನಂದ ಶ್ರೀ

    ಇದೇ ಜಾಗದಲ್ಲಿ ಮುಸ್ಲಿಮರ ಕಡೆಯಿಂದ ಇಲ್ಲಿನ ಸ್ಥಳೀಯ ವ್ಯಕ್ತಿಯಾದ ಮುನಿರಾಜುಗೆ ಮಾರಾಟ ಮಾಡಿರುವುದಾಗಿ ದಾಖಲೆಗಳಿವೆ. ಹೀಗಾಗಿ ಮುನಿರಾಜು ನನಗೆ ಸೇರಿದ ಜಾಗ ಅಂತ ಸರ್ವೆ ಮಾಡಿಕೊಂಡಿದ್ದರು. ಅದಕ್ಕಾಗಿ ಕೆಲ ಘಂಟೆಗಳ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ

    ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೋಮೇಶ್ವರ ದೇವಾಲಯದ ಜಾಗವನ್ನು ಬಿಟ್ಟುಕೊಡುವಂತೆ ಸೂಚಿಸಿದರು. ಈ ವೇಳೆ ಕೆಲ ಗಂಟೆಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

  • ಕಾಮಣ್ಣನ ಹಬ್ಬಕ್ಕೆ ಶಸ್ತ್ರಾಸ್ತ್ರ ಹೊರ ತರುವ ಗ್ರಾಮಸ್ಥರು

    ಕಾಮಣ್ಣನ ಹಬ್ಬಕ್ಕೆ ಶಸ್ತ್ರಾಸ್ತ್ರ ಹೊರ ತರುವ ಗ್ರಾಮಸ್ಥರು

    ಧಾರವಾಡ: ಆ ಗ್ರಾಮದಲ್ಲಿ ಹೋಳಿ ಹಬ್ಬ ಬಂದರೆ ಸಾಕು, ಗ್ರಾಮದ ಜನರೆಲ್ಲಾ ಕೈಯಲ್ಲಿ ಆಯುಧಗಳನ್ನ ಹಿಡಿದುಕೊಂಡು ನಿಲ್ಲುತ್ತಾರೆ. ಏಕೆಂದರೆ ಆ ಗ್ರಾಮದ ಕಾಮಣ್ಣನೇ ಇದಕ್ಕೆ ಕಾರಣ.

    ಹೌದು, ಜಿಲ್ಲೆಯ ಮುಳಮುತ್ತಲ ಗ್ರಾಮದಲ್ಲಿ ಕಾಮಣ್ಣನ ಹಬ್ಬ ಬಂದರೆ ಸಾಕು, ಇಡೀ ಗ್ರಾಮದ ಜನ ಕೈಯಲ್ಲಿ ಆಯುಧಗಳನ್ನು ಹಿಡಿದು ಕಾಮಣ್ಣನನ್ನು ಕಾವಲು ಕಾಯುತ್ತಾರೆ. ಇದನ್ನೂ ಓದಿ: ಡ್ರೋಣ್ ಕ್ಯಾಮೆರಾ ಮೂಲಕ ಆರೋಪಿ ಸೆರೆಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸರು..!

    ಏಕೆಂದರೆ ಈ ಕಾಮಣ್ಣನ ಮುಖ ಕಳ್ಳತನ ಮಾಡಲು ಬರುತ್ತಾರೆ ಎಂಬುದಕ್ಕೆ ಇದನ್ನು ಕಾವಲು ಕಾಯುತ್ತಾರೆ. ಇನ್ನು ಇಡೀ ರಾತ್ರಿ ಗ್ರಾಮದ ಜನ ಈ ಕಾಮಣ್ಣನ ದರ್ಶನ ಪಡೆಯುತ್ತಾರೆ. ಅಲ್ಲದೇ ತಮ್ಮ ಇಷ್ಟಾರ್ಥಗಳನ್ನು ಕೂಡ ಈ ಕಾಮಣ್ಣ ಎದುರು ಇಡುತ್ತಾರೆ. ನಾಳೆಯ ದಿನ ಬೆಳಗ್ಗೆ ಕಾಮದಹನ ಮಾಡಿ ನಂತರ ರಂಗ ಪಂಚಮಿ ಆಚರಣೆ ಮಾಡುತ್ತಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧ

    ಜಿಲ್ಲೆಯ ಅಣ್ಣಿಗೇರಿಯಿಂದ ಈ ಕಾಮಣ್ಣ ಮುಖವಾಡ ತಂದು ಇಲ್ಲಿ ಪ್ರತಿಷ್ಠಾಪನೆ ಮಾಡಿದ್ದರು. ಹೀಗಾಗಿ ಅಲ್ಲಿಯ ಜನ ಇದನ್ನ ಕದ್ದು ಹೋಗಬಹುದು ಎನ್ನುವ ಕಾರಣಕ್ಕೆ ತಲ್ವಾರ್, ಮಚ್ಚು, ಕೊಡಲಿ ಹಿಡಿದು ಕಾವಲು ಕಾಯುತ್ತಾರೆ.

  • ಬೋನಿಗೆ ಬಿದ್ದ ಚಿರತೆ- ನಿಟ್ಟುಸಿರು ಬಿಟ್ಟ ಹಳ್ಳಿಗರು

    ಬೋನಿಗೆ ಬಿದ್ದ ಚಿರತೆ- ನಿಟ್ಟುಸಿರು ಬಿಟ್ಟ ಹಳ್ಳಿಗರು

    ಚಿಕ್ಕಮಗಳೂರು: ಒಂದೇ ವಾರದಲ್ಲಿ ಮೂರು ಕಡೆ ಇಟ್ಟಿದ್ದ ಬೋನಿಗೆ ಬೀಳದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಟಕ್ಕರ್ ಕೊಟ್ಟುಕೊಂಡು ಓಡಾಡುತ್ತಿತ್ತು. ಆದರೆ ನಾಲ್ಕನೇ ಜಾಗದಲ್ಲಿ ಇಟ್ಟ ಬೋನಿನಲ್ಲಿ ಚಿರತೆ ಸೆರೆಯಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಕಾವಲು ಚೌಡೇಶ್ವರಿ ದೇವಸ್ಥಾನದ ಬಳಿ ನಡೆದಿದೆ.

    ಬೀರೂರಿನ ಸುತ್ತಮುತ್ತಲಿನ ಬ್ಯಾಗಡೇಹಳ್ಳಿ, ಹುಲ್ಲೇಹಳ್ಳಿ, ಜೋಗಿಹಟ್ಟಿ, ಸೀಗೆಹಡ್ಲು, ದಾಸರಹಳ್ಳಿ ಸೇರಿದಂತೆ ಹತ್ತಾರು ಹಳ್ಳಿಯ ಜನರಿಗೆ ಈ ಚಿರತೆ ತಲೆನೋವು ತರಿಸಿತ್ತು. ಕಳೆದೊಂದು ತಿಂಗಳಿಂದ ಊರಿನ ಜನರ ಕಣ್ಣಿಗೆ ಬಿದ್ದು ಮಾಯವಾಗುತ್ತಿತ್ತು. ಇದರಿಂದ ಹಳ್ಳಿಯ ಜನ ಹೊಲಗದ್ದೆಗಳಿಗೆ ತೋಟಕ್ಕೆ ಹೋಗಲು ಭಯ ಪಡುತ್ತಿದ್ದರು. ಹಳ್ಳಿಯಲ್ಲಿ ನಾಯಿ-ಕುರಿಗಳನ್ನ ಹೊತ್ತೊಯ್ದು ಒಂದೆರಡು ದಿನ ಕಾಣಿಸಿಕೊಳ್ಳುತ್ತಿರಲಿಲ್ಲ. ಆಮೇಲೆ ಅಲ್ಲಲ್ಲೇ ಮತ್ತೆ ಪ್ರತ್ಯಕ್ಷವಾಗುತ್ತಿತ್ತು. ಕೆಲ ಹಳ್ಳಿಗಳಲ್ಲಿ ಜಾನುವಾರುಗಳನ್ನೂ ಬೇಟೆಯಾಡಿತ್ತು. ಇದರಿಂದ ಭಯಗೊಂಡು ಹಳ್ಳಿಗರು ಅರಣ್ಯ ಇಲಾಖೆಗೆ ಚಿರತೆಯನ್ನ ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು.

    ಅರಣ್ಯ ಇಲಾಖೆ ಸಿಬ್ಬಂದಿ ಒಂದೇ ವಾರದಲ್ಲಿ ಮೂರು ಕಡೆ ಬೋನಿಟ್ಟರು ಕೂಡ ಚಿರತೆ ಸೆರೆಯಾಗಿರಲಿಲ್ಲ. ಕಡೆಯದಾಗಿ ಬೀರೂರಿನ ಕಾವಲು ಚೌಡೇಶ್ವರಿ ದೇವಾಲಯದ ಬಳಿ ಅರಣ್ಯ ಇಲಾಖೆ ನಾಲ್ಕನೇ ಬಾರಿ ಇಟ್ಟ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು 12-14 ವರ್ಷದ ಚಿರತೆ ಪ್ರಾಯದ ಚಿರತೆಯಾಗಿದೆ. ಸೆರೆ ಹಿಡಿದ ಚಿರತೆಯನ್ನ ಬನ್ನೇರುಘಟ್ಟಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಾದ ಸಂತೋಷ್ ಕುಮಾರ್ ಹಾಗೂ ಹರೀಶ್ ಪಾಲ್ಗೊಂಡಿದ್ದರು. ಕಳೆದೊಂದು ತಿಂಗಳಿಂದ ಹತ್ತಾರು ಹಳ್ಳಿಗರಿಗೆ ಭಯ ಹುಟ್ಟಿಸಿದ ಚಿರತೆ ಸೆರೆಯಾಗಿದ್ದರಿಂದ ಹಳ್ಳಿಗರು ನಿಟ್ಟುಸಿರು ಬಿಟ್ಟಿದ್ದಾರೆ.

  • ಸತ್ತ ಗುಬ್ಬಚ್ಚಿಗೆ ಸಮಾಧಿ ನಿರ್ಮಿಸಿ ತಿಥಿ ಮಾಡಿದ ಗ್ರಾಮಸ್ಥರು

    ಸತ್ತ ಗುಬ್ಬಚ್ಚಿಗೆ ಸಮಾಧಿ ನಿರ್ಮಿಸಿ ತಿಥಿ ಮಾಡಿದ ಗ್ರಾಮಸ್ಥರು

    ಚಿಕ್ಕಬಳ್ಳಾಪುರ: ಸತ್ತ ಗುಬ್ಬಚ್ಚಿಗೆ ಗ್ರಾಮಸ್ಥರರೆಲ್ಲರೂ ಸೇರಿ ಸಮಾಧಿ ನಿರ್ಮಾಣ ಮಾಡಿ ತಿಥಿ ಮಾಡಿದ್ದಾರೆ. ಈ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸತ್ತಿರುವ ಗುಬ್ಬಚ್ಚಿಯ ಫ್ಲೆಕ್ಸ್‌ ಬ್ಯಾನರ್ ಹಾಕಿ ಮಿಸ್ ಯೂ ಗೆಳೆಯ ಮತ್ತೆ ಹುಟ್ಟಿ ಬಾ ಗೆಳೆಯಾ, ಹೀಗೆ ಬರೆದು 11 ದಿನಗಳ ನಂತರ ಬ್ಯಾನರ್ ಹಾಕಿ ಸಂಪ್ರದಾಯದಂತೆ ತಿಥಿ ಸಹ ಮಾಡಿದ್ದಾರೆ. ತಿಥಿ ದಿನದಂದು ಬಾಡೂಟ ಸಹ ಹಾಕಿದ್ದಾರೆ.

    ಮನೆಯ ಸದಸ್ಯರೇ ಸತ್ತರೇ 11ನೇ ಕಾರ್ಯ, ಪುಣ್ಯತಿಥಿ ಮಾಡೋರು ಕಡಿಮೆ. ಕೆಲವರು ಮನೆಯಲ್ಲಿ ಸಾಕಿದ ನಾಯಿ ಸತ್ತಾಗ ಅದರ ತಿಥಿ ಕಾರ್ಯವನ್ನು ಮಾಡಿ, ನೂರಾರು ಜನರಿಗೆ ಊಟ ಹಾಕಲಾಗಿದೆ. ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಈ ಗುಬ್ಬಚ್ಚಿ ಎಲ್ಲರ ಮನೆಗೆ ಹೋಗುತ್ತಿತ್ತಂತೆ. ಹೀಗಾಗಿ ಈ ಗುಬ್ಬಚ್ಚಿ ಗ್ರಾಮಸ್ಥರಿಗೆ ಬಲು ಇಷ್ಟವಂತೆ. ಆದರೆ ಅದೇನಾಯ್ತೋ ಏನೋ ಅದೊಂದು ದಿನ ಗುಬ್ಬಚ್ಚಿ ಮರಿ ಅಸುನೀಗಿದೆ. ಇದ್ರಿಂದ ನೊಂದ ಗ್ರಾಮಸ್ಥರೆಲ್ಲರೂ ಸೇರಿ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಮಾಡಿದ್ದಾರೆ. ಇದನ್ನೂ ಓದಿ: ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ: ಜಾವೇದ್ ಅಖ್ತರ್

    ಸಮಾಧಿ ನಿರ್ಮಿಸಿ ತಿಥಿ ಮಾಡಿದ್ದಾರೆ. ಈ ಸುದ್ದಿಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುತ್ತಿದ್ದಂತೆ. ಗ್ರಾಮದಲ್ಲಿ ಮಾಡಿರುವ ಈ ಅಂತ್ಯಸಂಸ್ಕಾರಕ್ಕೆ ಎಲ್ಲಿಲ್ಲದ ಅಭಿನಂದನೆಗಳು ಸುರಿಮಳೆ ಬಂದಿದೆ. ಪಕ್ಷಿ ಪ್ರೇಮವನ್ನು ಮೆರೆದ ಈ ಗ್ರಾಮದ ಜನರ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

  • UP Election: ಚುಣಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಶಾಸಕನನ್ನು ಓಡಿಸಿದ ಗ್ರಾಮಸ್ಥರು

    UP Election: ಚುಣಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಶಾಸಕನನ್ನು ಓಡಿಸಿದ ಗ್ರಾಮಸ್ಥರು

    ಲಕ್ನೋ: ಮುಂದಿನ ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಮುಜಾಫರ್‌ನಗರದಲ್ಲಿ ಪ್ರಚಾರ ತೆರಳಿದ್ದ ಬಿಜೆಪಿ ಶಾಸಕನನ್ನು ಗ್ರಾಮಸ್ಥರು ಓಡಿಸಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

    ಬಿಜೆಪಿ ಶಾಸಕ ವಿಕ್ರಮ್ ಸಿಂಗ್ ಸೈನಿ ಚುನಾವಣೆಗೆ ಪ್ರಚಾರ ನಡೆಸಲು ಮುನ್ವಾರ್‌ಪುರ ಗ್ರಾಮಕ್ಕೆ ತೆರಳಿದ್ದರು. ಆದರೆ ಶಾಸಕರ ಕಾರನ್ನು ಗ್ರಾಮಸ್ಥರು ಅರ್ಧದಲ್ಲೇ ತಡೆದಿದ್ದಾರೆ. ಅಲ್ಲದೇ ಶಾಸಕರ ವಿರುದ್ಧ ಘೋಷಣೆ ಕೂಗಿ ವಾಪಸ್ ಹೋಗುವಂತೆ ಹೇಳಿದ್ದಾರೆ. ಇದನ್ನೂ ಓದಿ: ಪರಿಕ್ಕರ್ ಪುತ್ರನನ್ನು ಎಎಪಿಗೆ ಆಹ್ವಾನಿಸಿದ ಕೇಜ್ರಿವಾಲ್

    ಗ್ರಾಮಸ್ಥರ ಪ್ರತಿರೋಧದಿಂದಾಗಿ ಶಾಸಕರು ಬೇರೆ ಆಯ್ಕೆಯಿಲ್ಲದೇ ಕಾರು ಹತ್ತಿ ವಾಪಸ್ ಬಂದಿದ್ದಾರೆ. ಈ ಪ್ರಸಂಗದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

    ಈ ಕುರಿತು ಪ್ರತಿಕ್ರಿಯಿಸಿದ ಸೈನಿ, ಗ್ರಾಮಸ್ಥರ ಗುಂಪಿನಲ್ಲಿ ಕೆಲವರು ಮದ್ಯಪಾನ ಮಾಡಿದ್ದರು. ಆದ್ದರಿಂದ ನಾನು ಪ್ರಚಾರ ನಡೆಸದೇ ವಾಪಸ್ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: UP Election: ಗೋರಖ್‌ಪುರ ಕ್ಷೇತ್ರದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿ ಮುಖ್ಯಸ್ಥ ಸ್ಪರ್ಧೆ

    ವಿಕ್ರಮ್ ಸೈನಿ ವಿವಾದಾತ್ಮಕ ಹೇಳಿಕೆಗಳಿಂದಲೇ ಫೇಮಸ್ ಆದವರು. ಭಾರತದಲ್ಲಿ ಅಸುರಕ್ಷಿತ ವಾತಾವರಣ ಇದೆ ಎನ್ನುವವರಿಗೆ ಬಾಂಬ್ ಹಾಕುವುದಾಗಿಯೂ, ನಮ್ಮ ದೇಶವನ್ನು ಹಿಂದೂಸ್ತಾನ್ ಎನ್ನಲಾಗುತ್ತೆ. ಇದು ಹಿಂದೂಗಳ ರಾಷ್ಟ್ರ, ಗೋಹತ್ಯೆ ಮಾಡುವವರ ಕೈಕಾಲು ಮುರಿಯಬೇಕು ಎಂದು ಹೇಳಿಕೆಗಳನ್ನು ನೀಡಿದ್ದರು.

  • ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯಕ್ಕೆ ಸ್ವಚ್ಛತೆ ಮೂಲಕ ಪಾಠ ಕಲಿಸಿದ ಗ್ರಾಮಸ್ಥರು

    ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯಕ್ಕೆ ಸ್ವಚ್ಛತೆ ಮೂಲಕ ಪಾಠ ಕಲಿಸಿದ ಗ್ರಾಮಸ್ಥರು

    ರಾಯಚೂರು: ಗ್ರಾಮ ಪಂಚಾಯತಿಯನ್ನು ಸ್ವಚ್ಛತೆ ಕಾಪಾಡಿ ಎಂದು ಎಷ್ಟೇ ಕೇಳಿಕೊಂಡರು ಅಧಿಕಾರಿಗಳು ತಲೆ ಕೆಡಿಸಿಕೊಳ್ಳದ ಹಿನ್ನೆಲೆ ಗ್ರಾಮದ ಜನರೇ ಸ್ಥಳವನ್ನು ಸ್ವಚ್ಛ ಮಾಡುವ ಮೂಲಕ ಪಂಚಾಯ್ತಿಗೆ ಪಾಠ ಕಲಿಸಿದ್ದಾರೆ.

    ಜಿಲ್ಲೆಯ ಸಿರವಾರ ತಾಲೂಕಿನ ಚಾಗಭಾವಿ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಎಷ್ಟೇ ಮನವಿ ಮಾಡಿದರೂ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕ್ರಮಕೈಗೊಂಡಿರಲಿಲ್ಲ. ಈ ಹಿನ್ನೆಲೆ ಗ್ರಾಮಸ್ಥರೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ, ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ

    ಈ ಮೂಲಕ ಗ್ರಾಮಸ್ಥರು ಪಂಚಾಯ್ತಿಗೆ ಒಂದು ವಾರದ ಗಡುವು ನೀಡಿದ್ದು, ಶಾಲಾ ಸ್ವಚ್ಛತೆ ಹಾಗೂ ಅಭಿವೃದ್ಧಿಗೆ ಒತ್ತಾಯಿಸಿದ್ದಾರೆ. ಬಹುದಿನಗಳಿಂದ ಕಸದಿಂದ ತಿಪ್ಪೆಯಂತಾಗಿದ್ದ ಶಾಲಾ ಆವರಣ ಸ್ವಚ್ಛಗೊಳಿಸುವಂತೆ ಚಾಗಭಾವಿ ಗ್ರಾಮ ಪಂಚಾಯ್ತಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ.

    ಹೀಗಾಗಿ ಗ್ರಾಮದ ಯುವಕರು, ಶಿಕ್ಷಣ ಪ್ರೇಮಿಗಳು, ವಿವಿಧ ಸಂಘಟನೆಗಳು ಸೇರಿ ಶಾಲಾ ಆವರಣವನ್ನ ಸ್ವಚ್ಛಗೊಳಿಸಿದ್ದಾರೆ. ಶಾಲೆಗೆ ಅಗತ್ಯವಾದ ಕುಡಿಯುವ ನೀರು, ಶೌಚಾಲಯ ಸೇರಿ ಇತರ ಅಗತ್ಯ ಸೌಕರ್ಯಗಳನ್ನ ಒಂದು ವಾರದಲ್ಲಿ ಕಲ್ಪಿಸದಿದ್ದರೆ ಪಂಚಾಯ್ತಿ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಜನರಿಗೆ 14 ಕೋಟಿ ರೂ. ವಂಚಿಸಿದ ಆಫೀಸರ್ ಅರೆಸ್ಟ್

  • ಹೆರಿಗೆಗಾಗಿ ಗರ್ಭಿಣಿಯನ್ನು ಮಂಚದ ಮೇಲೆ ಮಲಗಿಸಿ ಹೊತ್ತೊಯ್ದ ಗ್ರಾಮಸ್ಥರು!

    ಹೆರಿಗೆಗಾಗಿ ಗರ್ಭಿಣಿಯನ್ನು ಮಂಚದ ಮೇಲೆ ಮಲಗಿಸಿ ಹೊತ್ತೊಯ್ದ ಗ್ರಾಮಸ್ಥರು!

    ರಾಂಚಿ: ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮಸ್ಥರು ತುಂಬು ಗರ್ಭಿಣಿಯನ್ನು ಮಂಚದ ಮೇಲೆ ಮಲಗಿಸಿ ಅದನ್ನು ತಮ್ಮ ಹೆಗಲಲ್ಲಿ ಹೊತ್ತು ಆಸ್ಪತ್ರೆಗೆ ನಡೆದ ವಿಲಕ್ಷಣ ಘಟನೆಯೊಂದು ಜಾರ್ಖಂಡ್ ನಲ್ಲಿ ನಡೆದಿದೆ.

    ಗುಡಿಯಾ ದೇವಿ ತುಂಬು ಗರ್ಭಿಣಿ. ಈಕೆಗೆ ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ ಈಕೆಯಿದ್ದ ಪ್ರದೇಶದಲ್ಲಿ ರಸ್ತೆ ವ್ಯವಸ್ಥೆ ಸರಿಯಾಗಿಲ್ಲ. ಅಲ್ಲದೆ ಹತ್ತಿರ ಯಾವುದೇ ಆಸ್ಪತ್ರೆಯೂ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕೆಯನ್ನು ಮಂಚದ ಮೇಲೆ ಮಲಗಿಸಿದ್ದಾರೆ. ನಂತರ ಮಂಚವನ್ನು ಹೊತ್ತು ಗ್ರಾಮಸ್ಥರು ಕೆಲ ದೂರ ಸಾಗಿದ್ದಾರೆ. ಸೂಕ್ತವಾದ ರಸ್ತೆ ಸಿಕ್ಕಿದ ಬಳಿಕ ಗುಡಿಯಾ ದೇವಿಯವರನ್ನು ಕಾರಿನ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

    ಈ ಸಂಬಂಧ ಸಮಾಜ ಸೇವಕ ಭವೇಶ್ ಕುಮಾರ್ ಹೆಂಬ್ರಾಂ ಮಾತನಾಡಿ, ಗ್ರಾಮಕ್ಕೆ ರಸ್ತೆ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಹಲವು ಬಾರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅದರಿಂದ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜಾರ್ಖಂಡ್‍ನ 6 ಗ್ರಾಮಗಳಿಗೆ ಮೂಲ ಸೌಕರ್ಯಗಳ ಕೊರತೆಯಿದೆ ಎಂದರು.

    ಗ್ರಾಮದಲ್ಲಿ ಸರಿಯಾದ ರಸ್ತೆ ವ್ಯವಸ್ಥೆ ಹಾಗೂ ಆಸ್ಪತ್ರೆ ಕೂಡ ಇಲ್ಲ. ಹೀಗಾಗಿ ಈ ಗ್ರಾಮಗಳಲ್ಲಿ ಜನ ವೈದ್ಯಕೀಯ ಚಿಕಿತ್ಸೆ ಪಡೆಯಲು ಜನ ಹರಸಾಹಸಪಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅವರು ಅಳಲು ತೋಡಿಕೊಂಡರು.

  • 10 ವರ್ಷಗಳಿಂದ ಮುಚ್ಚಿದ್ದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಗ್ರಾಮಸ್ಥರು

    10 ವರ್ಷಗಳಿಂದ ಮುಚ್ಚಿದ್ದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಗ್ರಾಮಸ್ಥರು

    ತುಮಕೂರು: ವಿದ್ಯಾರ್ಥಿಗಳ ಕೊರತೆಯಿಂದ 10 ವರ್ಷಗಳಿಂದ ಮುಚ್ಚಿದ್ದ ಸರ್ಕಾರಿ ಶಾಲೆಗೆ ಗ್ರಾಮಸ್ಥರೆಲ್ಲರು ಸೇರಿ ಮರುಜೀವ ನೀಡಿದ್ದಾರೆ.

    ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಗೂರು ಕ್ಲಸ್ಟರ್ ವ್ಯಾಪ್ತಿಯ ಯರೇಕಟ್ಟೆ ಸರ್ಕಾರಿ ಶಾಲೆಯನ್ನು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಲಾಗಿತ್ತು. ಈ ಶಾಲೆಯಲ್ಲಿ ಮತ್ತೆ ಮಕ್ಕಳ ಕಲರವ ಕೇಳುತ್ತಿದೆ. ಸುಮಾರು 30 ಕುಟುಂಬಗಳಿರುವ ಈ ಗ್ರಾಮದಿಂದ ಅಕ್ಕಪಕ್ಕದ ಗ್ರಾಮಗಳ ಶಾಲೆಗೆ ಮಕ್ಕಳು ಹೋಗುತ್ತಿದ್ದರು. ಗ್ರಾಮದಲ್ಲಿ ಶಾಲೆಯೊಂದು ಇರಬೇಕೆಂಬ ಗ್ರಾಮಸ್ಥರ ಬೇಡಿಕೆಯಂತೆ ಮೂರು ದಶಕಗಳ ಹಿಂದೆ ಕಿರಿಯ ಪ್ರಾಥಮಿಕ ಶಾಲೆ ಆರಂಭವಾಗಿತ್ತು. ಇದನ್ನೂ ಓದಿ: ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ: ಆರ್. ಅಶೋಕ್

    ಆರಂಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಉತ್ತಮವಾಗಿತ್ತು. ಕ್ರಮೇಣ ಇಳಿಮುಖವಾಯಿತು. ವಿದ್ಯಾರ್ಥಿಗಳ ಕೊರತೆಯಿಂದ 10 ವರ್ಷಗಳ ಹಿಂದೆ ಶಿಕ್ಷಣ ಇಲಾಖೆ ಆದೇಶದಂತೆ ಶಾಲೆಯನ್ನು ಮುಚ್ಚಲಾಗಿತ್ತು. ಶಾಲೆ ಮುಚ್ಚುವ ವೇಳೆ ವಿದ್ಯಾರ್ಥಿಗಳ ಹಾಜರಾತಿ 2ಕ್ಕೆ ಇಳಿದಿತ್ತು. ಶಾಲೆಯ ದಾಖಲಾತಿಗಳನ್ನು ಪಕ್ಕದ ಬರಗೂರು ಸರ್ಕಾರಿ ಶಾಲೆಗೆ ವರ್ಗಾವಣೆ ಮಾಡಿ ಶಾಲೆಯನ್ನು ಮುಚ್ಚಲಾಗಿತ್ತು. ಇದನ್ನೂ ಓದಿ:  ಕಾರಿನಲ್ಲಿ ತೆರಳುತ್ತಿದ್ದಾಗ ಮಹಿಳೆಗೆ ಡ್ರಗ್ಸ್‌ ನೀಡಿ ಅತ್ಯಾಚಾರ- ಸೇನಾ ಸಿಬ್ಬಂದಿ ಅರೆಸ್ಟ್‌

    ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿದ್ದ ಕೆಲವು ಪೋಷಕರು ದೂರದ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಿದ್ದರು. ಕೆಲವು ವಿದ್ಯಾರ್ಥಿಗಳು ಮಾತ್ರ ಅಕ್ಕಪಕ್ಕದ ಶಾಲೆಗಳಿಗೆ ಹೋಗುತ್ತಿದ್ದರು. ಬೇರೆ ಊರುಗಳಲ್ಲಿ ನೆಲೆ ಕಂಡುಕೊಂಡಿದ್ದ ಗ್ರಾಮಸ್ಥರು, ಕೋವಿಡ್ ಸಂಕಷ್ಟದ ನಂತರ ಮತ್ತೆ ಗ್ರಾಮಕ್ಕೆ ಬಂದಿದ್ದಾರೆ. ತಮ್ಮೂರಿನ ಶಾಲೆಯತ್ತ ಗಮನ ಹರಿಸಿದ್ದಾರೆ. ಗ್ರಾಮದ ಕೆಲವು ಯುವಕರು ಗ್ರಾಮದಲ್ಲಿ ಸಭೆ ನಡೆಸಿ, ತಮ್ಮೂರಿನ ಶಾಲೆಯನ್ನು ಮತ್ತೆ ಪ್ರಾರಂಭಿಸುವ ಪಣತೊಟ್ಟು ಶಾಲೆಯ ಆರಂಭಕ್ಕೆ ಕಾರಣರಾಗಿದ್ದಾರೆ. ಶಾಲೆಗೆ 1ರಿಂದ 4ನೇ ತರಗತಿವರೆಗೆ 16 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಹತ್ತು ವರ್ಷಗಳಿಂದ ಬಣಗುಡುತ್ತಿದ್ದ ಶಾಲೆ ಕಟ್ಟಡದಲ್ಲಿ ಮತ್ತೆ ಮಕ್ಕಳ ನಗು ಚೆಲ್ಲಿದೆ. ಇದನ್ನೂ ಓದಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್‌

  • ಗ್ರಾಮದ ಕಷ್ಟ ನಿವಾರಣೆಗಾಗಿ ಬಲೂನು ಹಾರಿಬಿಟ್ಟ ಗ್ರಾಮಸ್ಥರು!

    ಗ್ರಾಮದ ಕಷ್ಟ ನಿವಾರಣೆಗಾಗಿ ಬಲೂನು ಹಾರಿಬಿಟ್ಟ ಗ್ರಾಮಸ್ಥರು!

    ಕಾರವಾರ: ಇಲ್ಲಿನ ಮಾಜಾಳಿಯ ರಾಮನಾಥ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮದ ಒಳಿತಿಗಾಗಿ ದಾಂಡೇಬಾಗದ ಕಡಲತೀರದಲ್ಲಿ ‘ವಾಫರ್ ಬಲೂನ್’ ಅನ್ನು ಆಕಾಶಕ್ಕೆ ಹಾರಿಬಿಡಲಾಯಿತು. ಈ ದೃಶ್ಯವನ್ನು ಜಾತ್ರೆಗೆ ಆಗಮಿಸಿದ್ದ ಭಕ್ತರು ನೋಡಿ ಕಣ್ತುಂಬಿಕೊಂಡರು.

    ಪ್ರತಿವರ್ಷ ಕಾರ್ತಿಕ ಮಾಸದ ದ್ವಿತೀಯ ದಿನದಂದು ಮಾಜಾಳಿಯ ರಾಮನಾಥ ದೇವರ ಜಾತ್ರೆ ನಡೆಯುತ್ತದೆ. ಅದರಂತೆ ಈ ಬಾರಿಯೂ ಇಲ್ಲಿನ ರಾಮನಾಥ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ರಾಮನಾಥ ದೇವರ ಮೂರ್ತಿಯನ್ನು ಭಾನುವಾರ ರಾತ್ರಿ ಸಾತೇರಿದೇವಿ ದೇವಸ್ಥಾನಕ್ಕೆ ತರಲಾಯಿತು. ಅಲ್ಲಿಂದ ಸೋಮವಾರ ಬೆಳಗ್ಗೆ ದೇವರ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಕುಳಾವಿ ಜನರು ಕಟ್ಟಿರುವ ತೋರಣಗಳ ಬಳಿ ತೆರಳಿದ ಪಲ್ಲಕ್ಕಿಗೆ ಜನರು ಆರತಿ ಬೆಳಗಿ, ಹೂವು ಹಣ್ಣು ನೀಡಿ ಪೂಜೆ ಸಲ್ಲಿಸಿದರು.

    ಇಂದು ದಾಂಡೇಬಾಗ ಗ್ರಾಮದ ಸಾತೇರಿ ದೇವಸ್ಥಾನ ಹಾಗೂ ರಾಮನಾಥ ದೇವಾಲಯದ ಬಳಿ ಗ್ರಾಮಕ್ಕೆ ಒಳಿತಾಗಲಿ ಎಂದು ಬಲೂನನ್ನು ಹಾರಿಸಲಾಯಿತು. ಬಲೂನ್ ಜಾತ್ರೆಯೆಂದೇ ಪ್ರಸಿದ್ಧಿ ಪಡೆದಿರುವ ಈ ಜಾತ್ರೆಗೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತರು ಆಗಮಿಸಿದ್ದರು. ಬಲೂನ್ ಹಾರುವಾಗ ಹರಹರ ಮಹಾದೇವ ಎನ್ನುತ್ತಾ ಕೂಗುತ್ತಾ, ಚಪ್ಪಾಳೆ ತಟ್ಟುವ ಮೂಲಕ ಎಲ್ಲರೂ ಈ ದೃಶ್ಯವನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.

    ಈ ಆಚರಣೆ ಇಂದು ನಿನ್ನೆಯದಲ್ಲ. ತಲೆ- ತಲಾಂತರದಿಂದ ಗ್ರಾಮದಲ್ಲಿ ಪೂರ್ವಜರು ನಡೆಸಿಕೊಂಡು ಬಂದಿದ್ದ ಆಚರಣೆಯನ್ನು ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಗ್ರಾಮದಲ್ಲಿನ ಕಷ್ಟ, ತೊಂದರೆ, ರೋಗ ಇತ್ಯಾದಿ ಸಂಕಷ್ಟಗಳು ಹೊಗೆಯ ರೂಪದಲ್ಲಿ ಗ್ರಾಮದಿಂದ ಹಾರಿ ಹೋಗಲಿ ಎನ್ನುವ ಉದ್ದೇಶದಿಂದ ಜಾತ್ರೆಯ ಸಂದರ್ಭದಲ್ಲಿ ಈ ರೀತಿ ಬಲೂನ್ ಅನ್ನು ಹಾರಿ ಬಿಡಲಾಗುತ್ತದೆ. ಆಕಾಶಕ್ಕೆ ಹಾರಿಬಿಡುವ ಈ ವಾಫರ್ ಸಾಕಷ್ಟು ಎತ್ತರದಲ್ಲಿ ಗಂಟೆಗಟ್ಟಲೇ ಹಾರಿ ನಂತರ ಸಮುದ್ರದಲ್ಲಿ ಬೀಳುತ್ತದೆ. ಹೀಗೆ ಬಿದ್ದರೆ ಗ್ರಾಮದಲ್ಲಿನ ತೊಂದರೆಗಳು ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರದ್ದಾಗಿದೆ.