Tag: Vinay Rajkumar

  • ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಇದೀಗ `ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ನವಿರಾದ ಪ್ರೇಮಕಥೆಯನ್ನ ತೆರೆಯ ಮೇಲೆ ಹೇಳಲು ರೆಡಿಯಾಗಿದ್ದಾರೆ. ಈ ಹಿಂದೆ ಅಪ್ಪು ಇಷ್ಟಪಟ್ಟಿದ್ದ ಕಥೆಯಲ್ಲಿ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿದ್ದಾರೆ.

    `ಒಂದು ಸರಳ ಪ್ರೇಮಕಥೆ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ಭರದಿಂದ ಚಿತ್ರೀಕರಣ ನಡೆಯುತ್ತಿದ್ದು, ಮಾ.08ರಂದು ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಿಂಪಲ್ ಸುನಿ ನಿರ್ದೇಶನದ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿ ಹತ್ತು ವರ್ಷವಾದ ಹಿನ್ನೆಲೆಯಲ್ಲಿ `ಒಂದು ಸರಳ ಪ್ರೇಮ ಕತೆ’ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ 2 ವರ್ಷಗಳ ಹಿಂದೆ ನಡೆದ ಅಪ್ಪು ಜೊತೆಗಿನ ಸಂಭಾಷಣೆ ಬಗ್ಗೆ ಸಿಂಪಲ್ ಸುನಿ ಹಂಚಿಕೊಂಡಿದ್ದಾರೆ.‌ ಸುನಿ ರಚಿಸಿದ ಸ್ಟೋರಿಯನ್ನ ಅಪ್ಪು ಮೆಚ್ಚಿಕೊಂಡಿದ್ದರು. ಈ ಬಗ್ಗೆ ಸುನಿ ಮಾತನಾಡಿದ್ದಾರೆ. ಇದನ್ನೂ ಓದಿ: ತಾಯಿ ದೀಪಾ ಅಯ್ಯರ್ ಡ್ರೆಸ್ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವರಿಗೆ ಬೆಂಡೆತ್ತಿದ ಸಾನ್ಯ

    ಈ ಸಿನಿಮಾದ ಕತೆಯನ್ನು ಪುನೀತ್ ರಾಜ್‌ಕುಮಾರ್ ಇಷ್ಟಪಟ್ಟಿದ್ದರು. ಮೊದಲು ನಾಲ್ಕು ಸಾಲಲ್ಲಿ ಕತೆ ಹೇಳಿದ್ದೆ ಆಗ ಅಪ್ಪು ಸರ್ ಒಪ್ಪಿದ್ದರು. ಕತೆಯನ್ನು ಡೆವೆಲಪ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ದುರ್ಘಟನೆ ಸಂಭವಿಸಿತು. ಈಗ ಅದೇ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ನಟಿಸುತ್ತಿದ್ದಾರೆ ಎಂದು ನಿರ್ದೇಶಕ ಸುನಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಒಂದು ಸರಳ ಪ್ರೇಮಕಥೆ. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, `ರಾಧಾ ಕೃಷ್ಣ’ ಧಾರಾವಾಹಿ ನಟಿ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ.

    ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ʻಸಿಂಪಲ್ಲಾಗ್ ಒಂದ್ ಲವ್ ಸ್ಟೋರಿʼಗೆ ಇಟ್ಟ ಮೊದಲ ಟೈಟಲ್ ʻಒಂದು ಸರಳ ಪ್ರೇಮಕಥೆʼ. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಒಕೆ ಮಾಡಿದರು. ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜ.23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50%ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

     

    View this post on Instagram

     

    A post shared by ಸುನಿ SuNi (@simplesuni)

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡರು. ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

  • ‘ಒಂದು ಸರಳ ಪ್ರೇಮಕಥೆ’ ಹೇಳಲಿದ್ದಾರೆ ನಿರ್ದೇಶಕ ಸಿಂಪಲ್ ಸುನಿ

    ‘ಒಂದು ಸರಳ ಪ್ರೇಮಕಥೆ’ ಹೇಳಲಿದ್ದಾರೆ ನಿರ್ದೇಶಕ ಸಿಂಪಲ್ ಸುನಿ

    ಸಿಂಪಲ್ ಸುನಿ (Simple Suni) ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್ (Swathistha Krishnan), ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

    ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು. ಇದನ್ನೂ ಓದಿ: ವರುಣ್ ಧವನ್ ಮಾಡಿದ ಎಡವಟ್ಟಿಗೆ ಬೇಸರ ಹೊರಹಾಕಿದ ಕೃತಿ ಸನೂನ್

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಒಕೆ ಮಾಡಿದ್ರು, ಚಿತ್ರಕ್ಕೆ  ಎಂ.ಎಲ್. ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.  ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

  • ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ರಾಧಾ ಕೃಷ್ಣ’ ಸೀರಿಯಲ್ ನಟಿ

    ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ರಾಧಾ ಕೃಷ್ಣ’ ಸೀರಿಯಲ್ ನಟಿ

    ನಪ್ರಿಯ ಧಾರಾವಾಹಿ `ರಾಧಾ ಕೃಷ್ಣ’ (Radhakrishna) ಸೀರಿಯಲ್‌ನ ರಾಧೆ ಮಲ್ಲಿಕಾ ಸಿಂಗ್ (Mallika Singh) ಇದೀಗ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ. ಡಾ.ರಾಜ್ ಕುಟುಂಬದ ಕುಡಿ ವಿನಯ್ ರಾಜ್‌ಕುಮಾರ್‌ಗೆ (Vinay Rajkumar)  ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

    ಕಿರುತೆರೆಯ ರಾಧೆಯಾಗಿ ಮನಗೆದ್ದಿದ್ದ ಚೆಲುವೆ ಮಲ್ಲಿಕಾ ಸಿಂಗ್ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೀಗ ಹಿರಿತೆರೆಯಲ್ಲಿ ಮಿಂಚಲು ನಟಿ ಮಲ್ಲಿಕಾ ಸಿಂಗ್ ರೆಡಿಯಾಗಿದ್ದಾರೆ. ಸಿಂಪಲ್ ಸುನಿ (Simple Suni) ಮತ್ತು ವಿನಯ್ ರಾಜ್‌ಕುಮಾರ್ ಕಾಂಬಿನೇಷನ್ ಚಿತ್ರಕ್ಕೆ ರಾಧಾ (Radha) ಅಲಿಯಾಸ್ ಮಲ್ಲಿಕಾ ಸಿಂಗ್ ಆಯ್ಕೆಯಾಗಿದ್ದಾರೆ.

    ಇತ್ತೀಚಿಗಷ್ಟೇ ವಿನಯ್ ರಾಜ್‌ಕುಮಾರ್ ಹೊಸ ಸಿನಿಮಾಗೆ ಚಾಲನೆ ನೀಡಲಾಗಿತ್ತು. ಸಿಂಪಲ್ ಸುನಿ ನಿರ್ದೇಶನದ ಹೊಸ ಚಿತ್ರದಲ್ಲಿ ವಿನಯ್‌ಗೆ ಜೋಡಿಯಾಗಿ ತಮಿಳಿನ `ವಿಕ್ರಮ್’ ನಟಿ ಸ್ವಾತಿಷ್ಠ ಕೃಷ್ಣನ್ ನಟಿಸುವ ಬಗ್ಗೆ ಅನೌನ್ಸ್‌ ಮಾಡಲಾಗಿತ್ತು. ಈ ಬೆನ್ನಲ್ಲೇ ಈ ಚಿತ್ರಕ್ಕೆ ಹೊಸ ನಾಯಕಿಯ ಎಂಟ್ರಿಯಾಗಿದೆ. ಇದನ್ನೂ ಓದಿ: Exclusive- ರಕ್ಷಿತ್ ಶೆಟ್ಟಿ ಎಲ್ಲಿಯೂ ಕಾಣಿಸ್ತಿಲ್ಲ ಯಾಕೆ? ಅದಕ್ಕೊಂದು ಕಾರಣವಿದೆ

    ಈ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್‌ಗೆ ಇಬ್ಬರು ನಾಯಕಿಯರು ಇರಲಿದ್ದಾರೆ. ಸ್ವಾತಿಷ್ಠ ಕೃಷ್ಣನ್- ಮಲ್ಲಿಕಾ ಸಿಂಗ್ ಇಬ್ಬರು ವಿನಯ್ ಜೊತೆ ಡ್ಯುಯೇಟ್ ಹಾಡಲಿದ್ದಾರೆ. ನಾಯಕಿ ಸ್ವಾತಿಷ್ಠ ಪತ್ರಕರ್ತೆ (Journalist) ಪಾತ್ರದಲ್ಲಿ ನಟಿಸುತ್ತಿದ್ದು, ಮಲ್ಲಿಕಾ ಕಾಶ್ಮೀರಿ ಹುಡುಗಿಯ ಪಾತ್ರಕ್ಕೆ ಜೀವತುಂಬಲಿದ್ದಾರೆ. ಇನ್ನೂ ಸಿಂಪಲ್ ಸುನಿ ನಿರ್ದೇಶನದ ಈ ಹೊಸ ಪ್ರೇಮ ಕಥೆಯಲ್ಲಿ ಈ ಮೂವರ ಜೋಡಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

  • ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಮ್’ ಬೆಡಗಿ  ಸ್ವತಿಷ್ಠ ಕೃಷ್ಣನ್

    ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಮ್’ ಬೆಡಗಿ ಸ್ವತಿಷ್ಠ ಕೃಷ್ಣನ್

    ನಿರ್ದೇಶಕ ಸಿಂಪಲ್ ಸುನಿ (Simple Suni), ವಿನಯ್ ರಾಜ್ ಕುಮಾರ್ (Vinay Rajkumar) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ‘ವಿಕ್ರಮ್’ (Vikram) ಚಿತ್ರದಲ್ಲಿ ನಟಿಸಿರುವ ಸ್ವತಿಷ್ಠ ಕೃಷ್ಣನ್ (Swatishtha Krishnan) ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.

    ವಿನಯ್ ರಾಜ್ ಕುಮಾರ್, ಸಿಂಪಲ್ ಸುನಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಚಿತ್ರಕ್ಕಾಗಿ ನಾಯಕಿ ಹುಡುಕಾಟದಲ್ಲಿದ್ದ ಸಿಂಪಲ್ ಸುನಿ ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸ್ವತಿಷ್ಠ ಕೃಷ್ಣನ್ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ.  ವಿನಯ್ ರಾಜ್ ಕುಮಾರ್ ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.

    ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಸಿಂಪಲ್ ಸುನಿ ನನಗೆ ಕನ್ನಡದ ಹುಡುಗಿಯೇ ನಾಯಕಿಯಾಗಿ ಬೇಕಿತ್ತು. ನನ್ನ ಎಲ್ಲಾ ಸಿನಿಮಾಗಳಲ್ಲೂ ಅದು ಮೊದಲ ಆದ್ಯತೆಯಾಗಿರುತ್ತೆ ವಿಕ್ರಮ್ ಸಿನಿಮಾದಲ್ಲಿ ಸ್ವತಿಷ್ಠ ಪಾತ್ರ ನೋಡಿ ಇಷ್ಟವಾಗಿತ್ತು. ಸ್ವತಿಷ್ಠ ಮೂಲತಃ ಉತ್ತರ ಕರ್ನಾಟಕದವರು. ನಮ್ಮ ಸಿನಿಮಾ ಪಾತ್ರಕ್ಕೆ ಅವರು ಸೂಕ್ತ ಎನಿಸಿತು ಅವರು ಕೂಡ ಕಥೆ ಕೇಳಿ ಓಕೆ ಮಾಡಿ ನಮ್ಮ ಚಿತ್ರತಂಡ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಸಿನಿಮಾ ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ದಾ ಹೊಸ ಬಗೆಯ ಕಥೆ, ಪಾತ್ರಗಳ ಮೂಲಕ ಗಮನ ಸೆಳೆಯುವ ವಿನಯ್ ರಾಜ್‌ಕುಮಾರ್ (Vinay Rajkumar) ಇದೀಗ ಭಿನ್ನವಾಗಿರುವ ಲವ್ ಸ್ಟೋರಿ ಮಾಡಲು ರೆಡಿಯಾಗಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ (Simple Suni) ಜೊತೆ ಕೈಜೋಡಿಸಿದ್ದಾರೆ.

    ಇತ್ತೀಚೆಗಷ್ಟೇ `ಅಂದೊಂದಿತ್ತು ಕಾಲ’ ಎನ್ನುವ ಲವ್ ಸಬ್‌ಜೆಕ್ಟ್ ಅನ್ನು ನಟ ವಿನಯ್ ಘೋಷಿಸಿದ್ದರು. ಈ ಬೆನ್ನಲ್ಲೇ ಮತ್ತೊಂದು ಪ್ರೇಮಕಥೆ ಒಳಗೊಂಡ ಸಿನಿಮಾ ಮಾಡಲು ಮುಂದಾಗಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ಕೈಗೊಡಿಸಿದ್ದಾರೆ. ಈ ಸಿನಿಮಾದ ಮುಹೂರ್ತ ಕೂಡ (ಜ.23)ರಂದು ನೆರವೇರಿದೆ. ಈ ವೇಳೆ ಚಿತ್ರತಂಡದ ಜೊತೆ ರಾಘವೇಂದ್ರ ರಾಜ್‌ಕುಮಾರ್‌ ಕುಟುಂಬ ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ: ಜನವರಿ 27ಕ್ಕೆ ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ಬಿಡುಗಡೆ

    ಸಿಂಪಲ್ ಸುನಿ ನಿರ್ದೇಶನದ ಚಿತ್ರಕ್ಕೆ `ಒಂದು ಸರಳ ಪ್ರೇಮಕಥೆ’ (Ondu Sarala Prema Kathe) ಎಂದು ಟೈಟಲ್ ಇಡಲಾಗಿದೆ. 2013ರಲ್ಲಿ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಎಂಬ ಚಿತ್ರವನ್ನು ನಿರ್ದೇಶಿಸಿ ಬೃಹತ್ ಗೆಲುವು ಸಾಧಿಸಿ ನೆಲೆಯೂರಿದ ನಿರ್ದೇಶಕ ಸುನಿ ಈ ಬಾರಿ ಅದೇ ಶೀರ್ಷಿಕೆ ಕನ್ನಡ ವರ್ಷನ್ ಅನ್ನು ಶೀರ್ಷಿಕೆಯಾಗಿ ಬಳಸಿದಂತಿದೆ.

    `ಸಿಂಪಲ್ಲಾಗ್ ಒಂದ ಲವ್ ಸ್ಟೋರಿ’ ಹಾಗೂ ಈಗಿನ `ಒಂದು ಸರಳ ಪ್ರೇಮ ಕಥೆ’ ಎರಡೂ ಶೀರ್ಷಿಕೆಗಳು ಒಂದೇ ಅರ್ಥವನ್ನು ನೀಡಲಿವೆ. ಈ ಹೊಸ ಕಥೆ ಯಾವ ರೀತಿ ಮೋಡಿ ಮಾಡಲಿದೆ ಎಂದು ಕಾದುನೋಡಬೇಕಿದೆ.

     

    View this post on Instagram

     

    A post shared by Swathishta (@swathishta_krishnan)

    ಇನ್ನೂ ವಿನಯ್ ರಾಜ್‌ಕುಮಾರ್ ಜೊತೆ ಸ್ವಾತಿಷ್ಟ ಕೃಷ್ಣನ್ (Swathishta Krishnan) ನಾಯಕಿಯಾಗಿ ಮಿಂಚಲಿದ್ದಾರೆ. ಕಮಲ್ ಹಾಸನ್ (Kamal Haasan) ನಟನೆಯ `ವಿಕ್ರಮ್’ (Vikram) ಸಿನಿಮಾದಲ್ಲಿ ಸ್ವಾತಿಷ್ಟ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ `ಒಂದು ಸರಳ ಪ್ರೇಮ ಕಥೆ’ ಮೂಲಕ ಕನ್ನಡಕ್ಕೆ ಬರುತ್ತಿದ್ದಾರೆ. ಇನ್ನೂ ಸ್ವಾತಿಷ್ಟ ಕೂಡ ಕನ್ನಡದವರೇ ಆಗಿದ್ದು, ಮೂಲತಃ ಬೆಂಗಳೂರಿನವರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ

    ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ

    ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

    ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

    ಅಂದ್ಹಾಗೆ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ಮೊದಲ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣವಿರಲಿದೆ. ವಿನಯ್‍ ರಾಜ್ ಕುಮಾರ್ ವೃತ್ತಿ ಜೀವನಕ್ಕೆ ಇದು ವಿಶೇಷ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಸೇರಿದಂತೆ ಹಲವು ಮಾಹಿತಿಯನ್ನು ಹಂಚಿಕೊಳ್ಳಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಪೆ’ ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಹೊಸ ಅವತಾರ

    ‘ಪೆಪೆ’ ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಹೊಸ ಅವತಾರ

    ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ರಗಡ್ ಟೀಸರ್ ಝಲಕ್ ಸಿನಿ ರಸಿಕರಲ್ಲಿ ಒಂದಷ್ಟು ಕುತೂಹಲವನ್ನು ಹುಟ್ಟು ಹಾಕಿದೆ. ಇದೀಗ ಚಿತ್ರತಂಡ ಹೊಸ ವರ್ಷಕ್ಕೆ ಮಾಸ್ ಫೀಲ್ ಇರೋ ರಗಡ್ ಪೋಸ್ಟರ್ ಬಿಡುಗಡೆ ಮಾಡಿದೆ. ವಿನಯ್ ರಾಜ್ ಕುಮಾರ್ ನಯಾ ಅವತಾರ, ಮಾಸ್ ಲುಕ್ ಚಿತ್ರ ಪ್ರೇಮಿಗಳ ಗಮನ ಸೆಳೆಯುತ್ತಿದೆ.

    ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಪೆಪೆ’ ಚಿತ್ರತಂಡ ನಿರತವಾಗಿದೆ. ಟೈಟಲ್ ಮೂಲಕವೇ ಕುತೂಹಲವನ್ನು ಹುಟ್ಟುಹಾಕಿರುವ ಈ ಚಿತ್ರ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ. ಗ್ಯಾಂಗ್ ಸ್ಟಾರ್ ಸಿನಿಮಾ ಇದಾಗಿದ್ದು, ವಿನಯ್ ರಾಜ್ ಕುಮಾರ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಅವತಾರ ತಾಳಿದ್ದಾರೆ. ಒಂದೇ ಜಾನರ್ ಸಿನಿಮಾಗೆ ಒಗ್ಗಿ ಕೊಳ್ಳದೇ, ಪ್ರತಿ ಬಾರಿ ವಿಭಿನ್ನ ಸಬ್ಜೆಕ್ಟ್ ಆಯ್ಕೆ ಮಾಡಿಕೊಳ್ಳುವ ವಿನಯ್ ರಾಜ್ ಕುಮಾರ್ ಈ ಚಿತ್ರದಲ್ಲಿ ಕಂಪ್ಲೀಟ್ ಡಿಫ್ರೆಂಟ್ ಅವತಾರ ತಾಳಿದ್ದಾರೆ. ಗ್ಯಾಂಗ್ ಲೀಡರ್ ಆಗಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದು, ಟೀಸರ್ ಹಾಗೂ ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಇದಕ್ಕೆ ಸಾಕ್ಷಿಯಾಗಿವೆ. ದೊಡ್ಮನೆ ಅಭಿಮಾನಿ ಬಳಗ ವಿನಯ್ ಲುಕ್ ಕಂಡು ಥ್ರಿಲ್ ಆಗಿದ್ದು ಸಿನಿಮಾ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ನಾನಿ ಜೊತೆ ಡುಯೆಟ್ ಹಾಡಲು ರೆಡಿಯಾದ್ರು `ಸೀತಾರಾಮಂ’ ನಟಿ

    ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಯಶ್ ಶೆಟ್ಟಿ, ಬಾಲ ರಾಜ್ ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್ ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ. ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆ ಹಿಡಿಯಾಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ ನಡಿ ಉದಯ್ ಮತ್ತು ಶ್ರೀರಾಮ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಮುಕ್ತಾಯ

    ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಸಿನಿಮಾ ಶೂಟಿಂಗ್ ಮುಕ್ತಾಯ

    ಟ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪೆಪೆ’. ಟೈಟಲ್ ಮೂಲಕವೇ ಕುತೂಹಲ ಹುಟ್ಟು ಹಾಕಿರುವ ಈ ಚಿತ್ರದ ಟೀಸರ್ ಝಲಕ್ ಕಂಡು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಸಾಕಷ್ಟು ಉತ್ತಮ ರೆಸ್ಪಾನ್ಸ್ ಟೀಸರ್ ಪಡೆದುಕೊಂಡಿತ್ತು. ಹೀಗೆ ಆರಂಭದಿಂದಲೂ ಸಿನಿರಸಿಕರಲ್ಲಿ ನಿರೀಕ್ಷೆ ಹುಟ್ಟು ಹಾಕಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆಯಲಾಗಿದೆ.

    ಶ್ರೀಲೇಶ್ ಎಸ್ ನಾಯರ್ ನಿರ್ದೇಶನಲ್ಲಿ ಮೂಡಿ ಬರ್ತಿರುವ ‘ಪೆಪೆ’ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ಸಾಹಸ ನಿರ್ದೇಶಕ ರವಿವರ್ಮಾ ಕಂಪೋಸ್ ಮಾಡಿದ ಕ್ಲೈಮ್ಯಾಕ್ಸ್ ಫೈಟಿಂಗ್ ಸೀನ್ ಸೆರೆ ಹಿಡಿಯುವ ಮೂಲಕ ‘ಪೆಪೆ’ ಚಿತ್ರೀಕರಣಕ್ಕೆ ಶುಭಂ ಹೇಳಲಾಗಿದೆ. ಇದನ್ನೂ ಓದಿ: ಕ್ಯಾನ್ಸರ್‌ ಗೆದ್ದಿದ್ದ 24ರ ಹರೆಯದ ನಟಿ ಐಂದ್ರಿಲಾ ಶರ್ಮಾ ಹೃದಯಾಘಾತದಿಂದ ನಿಧನ

    ಆರಂಭದಿಂದ ಒಂದೇ ರೀತಿ ಸಿನಿಮಾಗಳಿಗೆ ಮೊರೆ ಹೋಗದೇ ಪ್ರತಿ ಸಿನಿಮಾದಲ್ಲೂ ವಿಭಿನ್ನತೆ ಕಾಪಾಡಿಕೊಂಡು ಬರ್ತಿರುವ ವಿನಯ್ ರಾಜ್ ಕುಮಾರ್ ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಟೀಸರ್, ಪೋಸ್ಟರ್ ಝಲಕ್ ನಲ್ಲಿ ವಿನಯ್ ಕಂಡು ದೊಡ್ಮನೆ ಅಭಿಮಾನಿಗಳು, ಸಿನಿರಸಿಕರು ಥ್ರಿಲ್ ಆಗಿದ್ದು, ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

    ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಕಲೇಶಪುರದಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಚಿತ್ರವನ್ನು ಉದಯ್ ಮತ್ತು ಶ್ರೀರಾಮ್ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ. 2018ರಲ್ಲಿ ತೆರೆಕಂಡ ಅನಂತು v/s ನುಸ್ರುತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. ‘ಪೆಪೆ’ ಜೊತೆಗೆ ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳಲ್ಲೂ ವಿನಯ್ ಬ್ಯುಸಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಹುಭಾಷಾ ನಟಿ ಅಮೃತಾ ಅಯ್ಯರ್ ದಕ್ಷಿಣದ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದಾರೆ. ಇದೀಗ `ಗ್ರಾಮಾಯಣ’ ಚಿತ್ರದ ಮೂಲಕ ಈಗಾಗಲೇ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಸದಾ ಸಿನಿಮಾ ವಿಷ್ಯವಾಗಿ ಸುದ್ದಿಯಲ್ಲಿರುತ್ತಿದ್ದ ನಟಿ ಈಗ ಸದ್ದಿಲ್ಲದೆ ಹಸೆಮಣೆ ಏರಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.

     

    View this post on Instagram

     

    A post shared by Amritha – Thendral (@amritha_aiyer)

    ಬೆಂಗಳೂರು ಮೂಲದ ನಟಿ ಅಮೃತಾ ಅಯ್ಯರ್ ಕಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳಿನ `ಬಿಗಿಲ್’ ಮತ್ತು ಸೂಪರ್ ಸ್ಟಾರ್ ರಜನೀಕಾಂತ್ ಜತೆ ಲಿಂಗಾ ಚಿತ್ರದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಳೆದರೆಡು ದಿನಗಳಿಂದ ನಟಿ ಅಮೃತಾಗೆ ಮದುವೆ ಆಗಿದೆ ಎಂದು ಅನ್ನುವ ಗುಸು ಗುಸು ಶುರುವಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವೆಡ್ಡಿಂಗ್ ಫೋಟೋ ಕೂಡ ವೈರಲ್ ಆಗಿದೆ. ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by Amritha – Thendral (@amritha_aiyer)

    ದಕ್ಷಿಣ ಭಾರತದ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ಕನ್ನಡತಿಗೆ ಇದೀಗ ತಮ್ಮ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ವಣಕಂ ಡಾ ಮಾಪಿಳೈ ಸಿನಿಮಾದ ಫೋಟೋಗಳು ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಟಿಯ ಪೋಸ್ಟ್‌ಗೆ ಫ್ಯಾನ್ಸ್ ಕೂಡ ರಿಯಾಕ್ಟ್ ಮಾಡಿದ್ದು, ಈಗಲೇ ಮದುವೆ ಬೇಡ, ನಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಬುದ್ದಿಮಾಂದ್ಯ ಮಗನ ನೆನೆದು ಕಣ್ಣೀರಿಟ್ಟ ಮಾಳವಿಕಾ ಅವಿನಾಶ್

     

    View this post on Instagram

     

    A post shared by Amritha – Thendral (@amritha_aiyer)

    `ವಣಕಂ ಡಾ ಮಾಪಿಳೈ’ ಚಿತ್ರದಲ್ಲಿ ಅಮೃತಾ ಮದುವೆಯಾಗುವ ಸನ್ನಿವೇಶವೊಂದಿತ್ತು. ಆ ಫೋಟೊದಲ್ಲಿರುವ ವರನ ಫೋಟೋವನ್ನು ಕ್ರಾಪ್ ಮಾಡಿ ಬರೀ ಅಮೃತಾ ಫೊಟೊವನ್ನು ಯಾರೋ ಶೇರ್ ಮಾಡಿದ್ದಾರೆ. ಇದನ್ನು ನೋಡಿ ನಿಜವಾಗಿಯೂ ಅಮೃತಾಗೆ ಮದುವೆ ಆಗಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಹಾಗಾಗಿ ಈ ಫೋಟೊಗಳು ಸಖತ್ ವೈರಲ್ ಆಗಿತ್ತು. ಆಕೆಯ ಸ್ನೇಹಿತೆಯರು ಶುಭಾಶಯ ಕೋರಲು ಶುರು ಮಾಡಿದ ಮೇಲೆ ಎಚ್ಚೆತ್ತುಕೊಂಡು ನಟಿ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ.

    ಇನ್ನು ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾಗಿ, `ಗ್ರಾಮಾಯಣ’ ಚಿತ್ರದಲ್ಲಿ ನಟಿ ಅಮೃತಾ ಅಯ್ಯರ್ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್‌ಗೆ  ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಸಮಾಜಮುಖಿ ಕೆಲಸಗಳು ಮತ್ತು ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಆಧರಿಸಿ, ಮೈಸೂರು ವಿವಿ ಈ ಗೌರವನ್ನು ನೀಡಿದೆ.