Tag: vineesh darshan

  • ದರ್ಶನ್ ಪುತ್ರನಿಗೆ ದೀಪಾವಳಿ ಗಿಫ್ಟ್- ತಂದೆ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ ವಿನೀಶ್

    ದರ್ಶನ್ ಪುತ್ರನಿಗೆ ದೀಪಾವಳಿ ಗಿಫ್ಟ್- ತಂದೆ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿರುವ ವಿನೀಶ್

    ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್‌ಗೆ (Darshan) ಇಂದು (ಅ.30) 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಇದರಿಂದ ದರ್ಶನ್ ಪುತ್ರನಿಗೆ ದೀಪಾವಳಿ ಸಂದರ್ಭದಲ್ಲಿ ಭರ್ಜರಿ ಗಿಫ್ಟ್ ಸಿಕ್ಕಿದೆ. ಅ.31ರಂದು ವಿನೀಶ್ (Vineesh Darshan) ಹುಟ್ಟುಹಬ್ಬವನ್ನು (Birthday) ತಂದೆಯ ಜೊತೆ ಆಚರಿಸುವ ಅವಕಾಶ ಸಿಕ್ಕಿದೆ. ಇದನ್ನೂ ಓದಿ:ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮಿ

    ದರ್ಶನ್‌ಗೆ ಜಾಮೀನು ಸಿಕ್ಕಿರೋದು ಕುಟುಂಬಸ್ಥರಿಗೆ, ಫ್ಯಾನ್ಸ್‌ಗೆ ಖುಷಿ ಆಗಿದೆ. ಇದೇ ವೇಳೆ, ದರ್ಶನ್ ಪುತ್ರ ವಿನೀಶ್‌ಗೆ ಡಬಲ್ ಧಮಾಕ ಸಿಕ್ಕಂತಾಗಿದೆ. ಅ.31ರಂದು ವಿನೀಶ್ ಹುಟ್ಟುಹಬ್ಬ ಜೊತೆಗೆ ತಂದೆಯೊಂದಿಗೆ ದೀಪಾವಳಿ ಹಬ್ಬ ಆಚರಿಸುವ ಚಾನ್ಸ್ ಸಿಕ್ಕಿದೆ. ನಾಳೆ ತಂದೆಯ ಜೊತೆ ವಿನೀಶ್‌ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    ಅಂದಹಾಗೆ, ದರ್ಶನ್‌ಗೆ ಬೇಲ್ ಸಿಕ್ಕಿದ್ದಕ್ಕೆ ಕಾಮಾಕ್ಯ ದೇವಿಗೆ ವಿಜಯಲಕ್ಷ್ಮಿ ಧನ್ಯವಾದ ತಿಳಿಸಿದರು. ಸೋಶಿಯಲ್ ಮೀಡಿಯಾದಲ್ಲಿ ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್‌ ಮಾಡಿ ಥ್ಯಾಂಕ್‌ಫುಲ್, ಗ್ರೇಟ್‌ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಬರೆದು ಸಂತಸ ವ್ಯಕ್ತಪಡಿಸಿದ್ದಾರೆ.

  • ‘ಐ ಲವ್ ಯೂ’ ಯಾವಾಗಲೂ ನೀವೇ ನನ್ನ ಹೀರೋ ಎಂದ ದರ್ಶನ್ ಪುತ್ರ

    ‘ಐ ಲವ್ ಯೂ’ ಯಾವಾಗಲೂ ನೀವೇ ನನ್ನ ಹೀರೋ ಎಂದ ದರ್ಶನ್ ಪುತ್ರ

    ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಿರುವಾಗ ಇಂದು (ಜೂನ್ 16) ವಿಶ್ವ ತಂದೆಯಂದಿರ (Fathers Day) ದಿನವಾಗಿದ್ದು, ‘ಐ ಲವ್ ಯೂ’ ಯಾವಾಗಲೂ ನೀವೇ ನನ್ನ ಹೀರೋ ಅಪ್ಪ ಎಂದು ದರ್ಶನ್‌ಗೆ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ತಂದೆಯನ್ನು ಮಿಸ್ ಮಾಡಿಕೊಳ್ಳುತ್ತಿರುವುದಕ್ಕೆ ವಿನೀಶ್ ಭಾವುಕರಾಗಿದ್ದಾರೆ. ಇದನ್ನೂ ಓದಿ:ನಯನತಾರಾ, ತ್ರಿಷಾ ಹಿಂದಿಕ್ಕಿದ ರಶ್ಮಿಕಾ ಮಂದಣ್ಣ- ದುಬಾರಿ ಸಂಭಾವನೆ ಪಡೆದ ನಟಿ

    ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೋ ಎಂದು ವಿನೀಶ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ತಂದೆಯ ಜೊತೆಗಿನ ಕೆಲವು ಫೋಟೋಗಳನ್ನು ಕೊಲಾಜ್ ಮಾಡಿ ಶೇರ್ ಮಾಡಿದ್ದಾರೆ. ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ಇತ್ತೀಚೆಗೆ ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು ಎಂದು ಬರೆದುಕೊಂಡಿದ್ದರು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಾಮೆಂಟ್‌ಗಳ ಬಗ್ಗೆ ವಿನೀಶ್ ತೂಗುದೀಪ ಬೇಸರದ ಪೋಸ್ಟ್ ಮಾಡಿದ್ದರು.


    ಅಂದಹಾಗೆ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್, ಪವಿತ್ರಾ ಗೌಡ ಸೇರಿದಂತೆ 12 ಮಂದಿಯನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ಜೂನ್ 15ರಂದು 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.