Tag: Vinod Rajkumar

  • ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಗಣೇಶ್ ಸಾಥ್

    ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ಗಣೇಶ್ ಸಾಥ್

    ಸಿಂಪಲ್ ಸುನಿ (Simple Suni) ನಿರ್ದೇಶಿಸಿ ವಿನಯ್ ರಾಜ್‌ಕುಮಾರ್‌ (Vinod Rajkumar) ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್ ಗಣೇಶ್ (Ganesh) ರಿಲೀಸ್ ಮಾಡಿ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಾಥ್ ನೀಡಿದರು.

    ಹಾಡು ಬಿಡುಗಡೆ ಮಾತನಾಡಿದ ಗಣೇಶ್, ಹಾಡು ಬಹಳ ಚೆನ್ನಾಗಿದೆ. ಆ ಹುಕ್ ಲೈನ್ ಬಹಳ ಇಷ್ಟವಾಯಿತು. ಗುನು ಗುನುಗು ಅಂತಾ. ನನಗೆ ಈ ರೀತಿ ಸಾಂಗ್ ಕೇಳಲು ಬಹಳ ಇಷ್ಟ. ಇಡೀ ತಂಡಕ್ಕೆ ಆಲ್ ದಿ ಬೆಸ್ಟ್. ವಿನಯ್ ಹಾಗೂ ಹೀರೋಯಿನ್ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಮ್ಯೂಸಿಕ್ ತುಂಬಾ ಚೆನ್ನಾಗಿದೆ. ಅದು ಸಿಂಪಲ್ ಸುನಿ ಅಲ್ಲ ಕಂಪ್ಲಿಕೇಟೇಡ್ ಸುನಿ. ಕಥೆ ಮಾಡುವ ವಿಚಾರದಲ್ಲಿ ಕಂಪ್ಲಿಕೇಷನ್ ಇದೆ. ಸುನಿ ಕಥೆ ಹೇಳಬೇಕಾದರೆ ಸಿಂಪಲ್ ಆಗಿ ಹೇಳ್ತಾರೆ. ಸುನಿ ಅವರ ಜೊತೆ ನನ್ನ ದೊಡ್ಡ ಜರ್ನಿ ಇದೆ. ಚಮಕ್ ಆದ್ಮೇಲೆ ಸಿಕ್ತಾ ಇದ್ದೇವು. ಯಾವುದಾದರೂ ಲೈನ್ ಬಂದರೆ ಹೇಳುವವರು. ಮೂರ್ನಾಲ್ಕು ಲೈನ್ ಹೇಳಿದಾಗ ಗೊತ್ತಾಯ್ತು ಸಿಂಪಲ್ ಸುನಿ ಅಲ್ಲ ಕಂಪ್ಲಿಕೇಟೆಡ್ ಸುನಿ. ಒಂದ್ ಒಂದು ಸಾರಿಗೆ ಒಂದೊಂದು ಐಡಿಯಾ ತರುತ್ತಾರೆ. ಅದೇ ತರ ಈ ಸಿನಿಮಾ ಕೂಡ ವಿಭಿನ್ನವಾಗಿ ಇರುತ್ತದೆ ಅಂದುಕೊಂಡಿದ್ದೇನೆ. ಸುನಿಯ ಡೈಲಾಗ್, ಬರವಣಿಗೆ ಶೈಲಿ ನಾನು ದೊಡ್ಡ ಅಭಿಮಾನಿ. ಯಾವ ನಿರ್ದೇಶಕನಿಗೆ ಬರವಣಿಗೆ, ಭಾಷೆ ಹಿಡಿತ ಇರುತ್ತದೆಯೋ ಆತನಿಗೆ ತುಂಬಾ ಚೆನ್ನಾಗಿ ಹೊಳೆಯುತ್ತದೆ ಎಲ್ಲಾ. ನಮ್ಮ ಭಾಷೆ, ಅಕ್ಷರ, ವ್ಯಾಕರಣ ಮೇಲೆ ಹಿಡಿತ ಇರುವ ನಿರ್ದೇಶಕರಲ್ಲಿ ಒಬ್ಬರು ಸುನಿ ಎಂದರು.

    ನಟ ವಿಜಯ್ ರಾಜ್ ಕುಮಾರ್ ಮಾತನಾಡಿ, ಗುನು ಗುನುಗು ತುಂಬಾ ಇಷ್ಟವಾದ ಹಾಡು. ವೀರ್ ಸಮರ್ಥ್ ಅವರು ತುಂಬಾ ಚೆನ್ನಾಗಿ ಮ್ಯೂಸಿಕ್ ಮಾಡಿದ್ದಾರೆ. ಸಚಿನ್ ಅವರು ತುಂಬಾ ಚೆನ್ನಾಗಿ ಬರೆದಿದ್ದಾರೆ. ಇದೊಂದೇ ಕೊರಿಯೋಗ್ರಾಫ್ ಸಾಂಗ್ ಈ ಚಿತ್ರದಲ್ಲಿ ಇರುವುದು. ಇಡೀ ಟೀಂಗೆ ಧನ್ಯವಾದ. ಈ ಬಾರಿ ಫೈಟ್ ಇಲ್ಲ ಬರೀ ಪ್ರೀತಿ. ಒಂದು ಸರಳ ಪ್ರೇಮಕಥೆ ನೋಡಿ. ನೆಕ್ಸ್ಟ್ ಆಕ್ಷನ್ ನೋಡಿ.‌ನನ್ನದು ಅತಿಷಯ ಎಂಬ ಪಾತ್ರ. ಚಿಕ್ಕಪೇಟೆಯಲ್ಲಿ ಇಡೀ ಕುಟುಂಬ ಕಥೆ. ಈ ಕಥೆಯನ್ನು ಸುನಿ ಅವರು ತುಂಬಾ ಸರಳವಾಗಿ ಹೇಳಿದ್ದಾರೆ ಎಂದರು.

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ನಿರ್ಮಾಪಕರಾದ ರಮೇಶ್ ಸರ್  ಸಿನಿಮಾಗೆ ಏನೂ ಬೇಕು ಎಲ್ಲಾ ಕೊಟ್ಟಿದ್ದಾರೆ‌. ಪಾತ್ರಕ್ಕೆ ಏನೂ ಬೇಕು ಎಲ್ಲವನ್ನೂ ವಿನಯ್ ಅವರು ಕಲಿತ್ತಿದ್ದಾರೆ. ಸ್ವಾದಿಷ್ಟ, ಮಲ್ಲಿಕಾ ಇಬ್ಬರು ಅದ್ಭುತವಾಗಿ ನಟಿಸಿದ್ದಾರೆ. ಸಚಿನ್ ಅದ್ಭುತವಾಗಿ ಹಾಡು ಬರೆದಿದ್ದಾನೆ. ವೀರ ಸಮರ್ಥ್ ಸರ್ ಫರ್ಪೆಕ್ಟ್ ಟೈಮ್ ಗೆ ಡಿಲಿವರಿ ಮಾಡುವವರು. ಯಾವಾಗಲೂ ಕೀ ಬೋರ್ಡ್ ಮುಂದೆ ಕುಳಿತಿರುತ್ತಾರೆ. ಸಿನಿಮಾ ನೋಡಿದ ನಂತರ ಅವರ ಸ್ಟ್ರೇಂಥ್ ಏನೂ ಅನ್ನೋದು ಗೊತ್ತಾಗುತ್ತದೆ ಎಂದರು. ಸ್ವಾತಿಷ್ಠ ಕೃಷ್ಣನ್ ಮಾತನಾಡಿ, ಸುನಿ ಸರ್ ನನ್ನ ಈ ಚಿತ್ರಕ್ಕೆ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ರಮೇಶ್ ಸರ್ ಅಂತಾ ಪ್ರೊಡ್ಯೂಸರ್ ಎಲ್ಲಾ ಆರ್ಟಿಸ್ಟ್ ಗೆ ಸಿಗಬೇಕು. ತುಂಬಾ ಫ್ರೆಂಡ್ಲಿ. ವಿನಯ್ ಅವರ ಬಗ್ಗೆ ತುಂಬಾ ಹೇಳಬೇಕಿದೆ. ಮುಂದಿನ ಇವೆಂಟ್ ನಲ್ಲಿ ಒಂದೊಂದಾಗಿ ಹೇಳುತ್ತೇ‌ನೆ. ನನಗೆ ಒಳ್ಳೆ ಕೋ ಆರ್ಟಿಸ್ಟ್. ನಿಮ್ಮ ಜೊತೆ ನಟಿಸಲು ಮತ್ತಷ್ಟು ಅವಕಾಶಗಳು ಸಿಗಲಿ. ಟೆಕ್ನಿಷಿಯನ್ಸ್ ತುಂಬಾ ಫ್ರೆಂಡ್ಲಿಯಾಗಿ ಟ್ರೀಟ್ ಮಾಡಿದರು. ಇದು ನನ್ನ ಎರಡನೇ ಮೂವೀ. ಅನುರಾಧಾ ಪಾತ್ರ ನಿಮಗೆ ಇಷ್ಟ ಆಗುತ್ತದೆ ಎಂದರು.

    ಮಲ್ಲಿಕಾ ಸಿಂಗ್ ಮಾತನಾಡಿ, ಈ ಅದ್ಭುತ ಪ್ರಾಜೆಕ್ಟ್ ಭಾಗವಾಗಿದ್ದಕ್ಕೆ ಖುಷಿ ಇದೆ. ಮೊದಲು ಈ ಪ್ರಾಜೆಕ್ಟ್ ನಲ್ಲಿ ನಟಿಸುವಾಗ ಭಯವಾಗಿತ್ತು. ಆ ನಂತರ ಎಲ್ಲಾ ಸುಲಭವಾಗಿ ಆಯ್ತು. ನಿಮಗೆ ಈ ಚಿತ್ರ ಇಷ್ಟವಾಗುತ್ತದೆ ಎಂದರು. ಗುನುಗುನುಗು ಹಾಡಿಗೆ ಸಚಿನ್ ಸಂಘೈ ಸಾಹಿತ್ಯ ಬರೆದಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನವಿದ್ದು, ಕೇಶವ್ ಆನಂದ್ ಧ್ವನಿಯಾಗಿದ್ದಾರೆ. ವಿನಯ್ ರಾಜ್ ಕುಮಾರ್ ಹಾಗೂ ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸ್ವಾತಿಷ್ಠ ಕೃಷ್ಣನ್ ಮತ್ತೊಬ್ಬ ನಾಯಕಿಯಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಸ್ಪೆಷಲ್ ರೋಲ್ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ. ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆದವರು. ಇದೀಗ ಅವರು ‘ಒಂದು ಸರಳ ಪ್ರೇಮಕಥೆ’ ಹೇಳೋದಿಕ್ಕೆ ಬರ್ತಿದ್ದಾರೆ. ರಾಮ್ ಮೂವೀಸ್ ಬ್ಯಾನರ್ ನಡಿ ಮೈಸೂರು ರಮೇಶ್ ಬಂಡವಾಳ ಹೂಡಿದ್ದಾರೆ.

  • ಮಗನ ಮದುವೆ ವಿಚಾರ : ಅಂತರಂಗ ಕೆದಕಬೇಡಿ ಎಂದ ನಟಿ ಲೀಲಾವತಿ

    ಮಗನ ಮದುವೆ ವಿಚಾರ : ಅಂತರಂಗ ಕೆದಕಬೇಡಿ ಎಂದ ನಟಿ ಲೀಲಾವತಿ

    ನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ (Leelavati) ಪುತ್ರ ವಿನೋದ್ ರಾಜ್  (Vinod Raj) ಮದುವೆ (Marriage) ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಿನೋದ್ ರಾಜ್ ತಮ್ಮ ತಾಯಿಗಾಗಿ ಮದುವೆಯನ್ನೇ ಆಗಿಲ್ಲ ಎಂದು ಹಲವರು ವಾದ ಮಾಡುತ್ತಿದ್ದರು. ಇನ್ನೂ ಕೆಲವರು ಮದುವೆ ಆಗಿದ್ದಾರೆ ಎಂದು ಹೇಳಿದ್ದರು. ಈ ಗೊಂದಲಕ್ಕೆ ತೆರೆ ಎಳೆಯುವಂತೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು (Prakash Raj Mehu)  ಫೋಟೋವೊಂದನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ವಿನೋದ್ ರಾಜ್  ಪತ್ನಿ ಹಾಗೂ ಪುತ್ರ ಕೂಡ ಇದ್ದರು.

      

    ಈ ವಿಷಯಕ್ಕೆ ಸಂಬಂಧಿಸಿದಂತೆ ಲೀಲಾವತಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯಿಸಿ, ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ   ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂದವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದಾರೆ.

    ಮುಂದುವರೆದು ಮಾತನಾಡಿರುವ ಲೀಲಾವತಿ, ‘ನನ್ನ ಮಗನ ಮದುವೆಗೆ ಏಳು ಜನ ಕನ್ನಡಿಗರು ಬಂದಿದ್ದರು. ಏನ್ ಲೀಲಾವತಿ ಅವರೇ ನಿಮ್ಮ ಮಗನ ಮದುವೆಗೆ ಏಳೇ ಏಳು ಜನ ಬಂದಿದ್ದಾರೆ. ಜನ ಸಿಗಲಿಲ್ಲವಾ ಎಂದು ಕುಹಕವಾಡಿದರು. ಯಾವುದಕ್ಕೂ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದಾರೆ.

    ಕೆಲ ದಿನಗಳ ಹಿಂದೆ ನಿರ್ದೇಶಕ ಮೆಹು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೀಲಾವತಿ ಮತ್ತು ಅವರ ಪುತ್ರನ ಬಗ್ಗೆ ಪೋಸ್ಟ್ ವೊಂದನ್ನು ಹಾಕಿದ್ದರು. ಅದರಲ್ಲಿ ‘ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ’ ಎಂದು ಬರೆದಿದ್ದರು. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

    ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ.

  • ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ನಟ ಶ್ರೀನಾಥ್ ಅಂಡ್ ಟೀಮ್

    ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ನಟ ಶ್ರೀನಾಥ್ ಅಂಡ್ ಟೀಮ್

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿತ್ರೋದ್ಯಮದ ಹಿರಿಯ ನಟ ಶ್ರೀನಾಥ್ (Srinath), ನಟಿ ಪದ್ಮಾ ವಾಸಂತಿ (Padma Vasanthi), ನಟ ಸುಂದರಾಜ್, ಪ್ರಮೀಳಾ ಜೋಷಾಯಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.

    ಎರಡು ತಿಂಗಳು ಹಿಂದೆಯಷ್ಟೇ ನಟಿಯರಾದ ಶ್ರುತಿ ಸೇರಿದಂತೆ ಹಲವರು ಲೀಲಾವತಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇದೀಗ ಶ್ರೀನಾಥ್ ಮತ್ತು ತಂಡ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಅವರೊಂದಿಗೆ ಕೆಲ ಸಮಯ ಕಳೆದಿದೆ. ಹಳೆಯ ದಿನಗಳನ್ನು ಅವರೊಂದಿಗೆ ಮೆಲುಕು ಹಾಕಿದೆ. ಇದನ್ನೂ ಓದಿ: ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್

    ಸಿನಿಮಾ ರಂಗದಿಂದ ದೂರವಾದ ನಂತರ ಲೀಲಾವತಿ ಅವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ಊರಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರೆ. ಅಲ್ಲದೇ, ರೈತರಿಗೆ ನಾನಾ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಲೀಲಾವತಿ ಅವರ ಜೊತೆ ಪುತ್ರ ವಿನೋದ್ ರಾಜ್ ಕುಮಾರ್ ಕೂಡ ಸಾಥ್ ನೀಡಿದ್ದಾರೆ.

    ನಾಲ್ಕುನೂರಕ್ಕೆ ಹೆಚ್ಚು ಚಿತ್ರಗಳನ್ನು ಮಾಡಿರುವ ಲೀಲಾವತಿ ಸದ್ಯ ಬೆಂಗಳೂರು ಸಮೀಪದ ಸೋಲದೇವನಹಳ್ಳಿಯಲ್ಲಿ ವಾಸವಾಗಿದ್ದಾರೆ. ಅಲ್ಲಿಯೇ ಅವರ ತೋಟ ಕೂಡ ಇದೆ. ಮೊನ್ನೆಯಷ್ಟೇ ತಮ್ಮ ಚೆನ್ನೈನಲ್ಲಿದ್ದ ಜಮೀನು ಮಾರಿ ಬಂದ ಹಣದಲ್ಲಿ ‘ಡಾ.ಲೀಲಾವತಿ ಪ್ರಾಥಮಿಕ ಆರೋಗ್ಯ ಕೇಂದ್ರ’ವನ್ನು ಸ್ಥಾಪನೆ ಮಾಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲೀಲಾವತಿ ಚಿತ್ರಜಗತ್ತಿನ ಎವರ್ ಗ್ರೀನ್ ಕಲಾವಿದೆ: ಆಸ್ಪತ್ರೆ ಉದ್ಘಾಟಿಸಿ ಹೊಗಳಿದ ಸಿಎಂ ಬೊಮ್ಮಾಯಿ

    ಲೀಲಾವತಿ ಚಿತ್ರಜಗತ್ತಿನ ಎವರ್ ಗ್ರೀನ್ ಕಲಾವಿದೆ: ಆಸ್ಪತ್ರೆ ಉದ್ಘಾಟಿಸಿ ಹೊಗಳಿದ ಸಿಎಂ ಬೊಮ್ಮಾಯಿ

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಡಾ.ಲೀಲಾವತಿ (Leelavati) ಅವರು ನೆಲಮಂಗಲ ಹತ್ತಿರದ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಉದ್ಘಾಟಿಸಿದರು. ಹಿರಿಯ ನಟಿಯ ಈ ಸೇವೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಲೀಲಾವತಿ ಅವರನ್ನು ಮನಸಾರೆ ಹೊಗಳಿದರು. ಇನ್ನೂ ನೂರ್ಕಾಲ ಬಾಳಬೇಕು ಎಂದು ಹಾರೈಸಿದರು. ಅಲ್ಲದೇ, ಚಿತ್ರ ಜಗತ್ತಿನ ಎವರ್ ಗ್ರೀನ್ ಕಲಾವಿದೆ ಎಂದು ಬಣ್ಣಿಸಿದರು.

    ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ‘ಸೋಲದೇವನಹಳ್ಳಿ (Soladevanahalli)  ಅಂದ್ರೆ ಏನಿದು ಅಂತ ಯೋಚನೆ ಮಾಡ್ತಿದ್ದೆ. ದೇವರು ಕೂಡ ಇಲ್ಲಿಯ ನಿಸರ್ಗ ಸೌಂದರ್ಯಕ್ಕೆ ಸೋತಿರುವುದೇ ಸೋಲದೇವನಹಳ್ಳಿ. ಇಂತಹ ಜಾಗದಲ್ಲಿ ಲೀಲಾವತಿ ಅವರು ನೆಲೆಸಿದ್ದಾರೆ. ಬದುಕಿನಲ್ಲಿ ನಿರಂತರವಾಗಿ ಎಲ್ಲವನ್ನೂ ನೀಡಿ, ಎಲ್ಲಾ ಅಡೆತೆಡೆಗಳನ್ನೂ ಹಾಗೂ  ಹಲವಾರು ಸವಾಲನ್ನು ಎದರಿಸಿದ್ದಾರೆ. ಲೀಲಾವತಿಯವರು ಮನಸ್ಸು ಮಾಡಿದ್ರೆ ಪ್ರತಿಷ್ಠಿತ ಬಡಾವಣೆಗಳಲ್ಲಿ ಮನೆ ಮಾಡಿಕೊಂಡು ನೆಮ್ಮದಿಯಾಗಿ ಜೀವನ ಮಾಡಬಹುದಿತ್ತು. ಆದರೆ, ಎಲ್ಲಾ ಬಿಟ್ಟು ಈ ಸೋಲದೇವನಹಳ್ಳಿಗೆ ಬಂದು ತೋಟ ಮಾಡಿದ್ದಾರೆ. ಅವರೇ ಹೇಳಿದ್ ಹಾಗೇ ಈ ಜಾಗ ಸಮತಟ್ಟಾಗಿರಲಿಲ್ಲ. ಆದ್ರೆ ಅವರ ಮನಸ್ಸು ಸಮತಟ್ಟವಾಗಿದೆ’ ಎಂದು ಲೀಲಾವತಿ ಅವರನ್ನು ಹಾಡಿ ಹೊಗಳಿದರು ಸಿಎಂ. ಇದನ್ನೂ ಓದಿ:ರಿಲೇಶನ್ ಶಿಪ್ ಇಟ್ಕೊಳ್ಳೋಕೆ ಬಿಗ್ ಬಾಸ್ ಮನೆಗೆ ಬಂದಿಲ್ಲ ಎಂದು ಕಣ್ಣೀರಿಟ್ಟ ನಟಿ ಮಯೂರಿ

    ಇದೇ ಸಂದರ್ಭದಲ್ಲಿ ಲೀಲಾವತಿ ಅವರ ಮತ್ತೊಂದು ಬೇಡಿಕೆಯ ಬಗ್ಗೆಯೂ ಮಾತನಾಡಿದ ಬೊಮ್ಮಾಯಿ, ಈ ಸೋಲದೇವನಹಳ್ಳಿಗೆ ಒಂದು ಪಶು ಆಸ್ಪತ್ರೆ (Hospital) ಬೇಕು ಎಂದು ಕೇಳಿದ್ದಾರೆ. ಆದಷ್ಟು ಬೇಗ ಈ ಬೇಡಿಕೆಯನ್ನು ಈಡೇರಿಸುತ್ತೇನೆ ಅಂದಿದ್ದಾರೆ. ಲೀಲಾವತಿ ಅವರು ನಿರ್ಮಿಸಿರುವ ಆಸ್ಪತ್ರೆಗೆ ಬೇಕಿರುವ ಎಲ್ಲ ಸೌಲಭ್ಯಗಳನ್ನೂ ಒದಗಿಸುವ ಭರವಸೆ ಕೊಟ್ಟಿದ್ದಾರೆ. ಸರ್ಕಾರದಿಂದ ಡಾಕ್ಟರ್ ಮತ್ತು ನರ್ಸ್ ನೇಮಿಸುವ ಕುರಿತು ಅವರು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ

    ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ

    ನ್ನಡ ಚಿತ್ರರಂಗದ ಮಹಾನ್ ನಟಿ ಲೀಲಾವತಿ (Leelavathi) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿದ್ದಾರೆ.

    ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ (Bama harish) ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್

    ಇನ್ನು ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯನ್ನ ಲೀಲಾವತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ಕುಮಾರ್ (Vinod rajkumar) ಅವರ ಬಳಿ ನಟಿಯ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

    ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕನ್ನಡದ ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ನಿನ್ನೆ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಭೇಟಿ ಮಾಡಿರುವ ತಾಯಿ ಮತ್ತು ಮಗ ಮಹತ್ತರ ಕಾರ್ಯಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದಾರೆ. ಲೀಲಾವತಿ ಅವರ ಕೆಲಸ ಕಂಡು ಸ್ವತಃ ಮುಖ್ಯಮಂತ್ರಿಗಳು ಶ್ಲ್ಯಾಘಿಸಿದ್ದಾರೆ.

    ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಅವರು ತಾವು ನೆಲೆಸಿರುವ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿದ್ದಾರೆ. ಆ ಆಸ್ಪತ್ರೆಯ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಅಮೃತಹಸ್ತದಿಂದ ಮಾಡಿಸಬೇಕು ಎನ್ನುವುದು ಲೀಲಾವತಿ ಅವರ ಆಸೆಯಂತೆ. ಹಾಗಾಗಿ ಸಿಎಂ ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ:ನಟ ಕಮಾಲ್ ಖಾನ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕಣ್ಣೀರಿಟ್ಟ ಖಾನ್

    ಈ ಹಿಂದೆ ಪುಟ್ಟದೊಂದು ಆಸ್ಪತ್ರೆ ಕಟ್ಟಿದ್ದರು ಲೀಲಾವತಿ. ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರಂತೆ. ಚೆನೈ ನಲ್ಲಿ ಜಮೀನು ಮಾರಿದ ಹಣದಲ್ಲಿ ಈ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ. ಉದ್ಘಾಟನೆಯ ನಂತರ ಈ ದವಾಖಾನೆಯನ್ನು ಸರಕಾರಕ್ಕೆ ಬಿಟ್ಟು ಕೊಡಲಿದ್ದಾರಂತೆ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಕುಮಾರ್.

    Live Tv
    [brid partner=56869869 player=32851 video=960834 autoplay=true]