Tag: Virajapet

  • ವಿರಾಜಪೇಟೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

    ವಿರಾಜಪೇಟೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

    ಮಡಿಕೇರಿ: ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapet) ಪಟ್ಟಣದಲ್ಲಿ ನಡೆದಿದೆ.

    ದೀಕ್ಷಿತಾ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿ ಖಾಸಗಿ ಉದ್ಯೋಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!

    ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೈಲು ದುರಂತದ ಬಳಿಕ ಒಡಿಶಾದಲ್ಲಿ ಒಂದಿಲ್ಲೊಂದು ಅವಘಡ – ರೈಲು ಬೋಗಿಯಲ್ಲಿ ಆಕಸ್ಮಿಕ ಬೆಂಕಿ

  • ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

    ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

    ಮಡಿಕೇರಿ: ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapete) ತಾಲೂಕಿನ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.

    ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ದುರ್ದೈವಿ. ಮೂರ್ನಾಡು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಇದೀಗ ಮಗಳನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ನಾಪೋಕ್ಲುವಿನ ಗ್ರಾಮದ ಯುವಕರು ಅಬ್ದುಲ್ ರಜಾಕ್, ಅಬ್ದುಲ್ ಮಜೀದ್ ಹಾಗೂ ಶಮೀ ಸಹಕರಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಟಾಕಿ ತಂದ ಆಪತ್ತು – ಮಕ್ಕಳ ಬಾಳಲ್ಲಿ ಕತ್ತಲೆ ತಂದ ಬೆಳಕಿನ ಹಬ್ಬ, 78 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಮೇಲೆ ಮರಬಿದ್ದು ಓರ್ವ ಸಾವು, ಮೂವರ ಸ್ಥಿತಿ ಗಂಭೀರ

    ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಮೇಲೆ ಮರಬಿದ್ದು ಓರ್ವ ಸಾವು, ಮೂವರ ಸ್ಥಿತಿ ಗಂಭೀರ

    ಮಡಿಕೇರಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಮರ ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ತಿತಿಮತಿ ಸಂಪರ್ಕ ರಸ್ತೆಯ ಹೊಸಳ್ಳಿ ಬಳಿ ನಡೆದಿದೆ.

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಗ್ರಾಮದ ಪಂಚವಳ್ಳಿ ನಿವಾಸಿ ರಾಜು (36) ಮೃತ ಕಾರ್ಮಿಕ. ಚಾಲಕ ಸ್ವಾಮಿ ಹಾಗೂ ಜೊತೆಯಲ್ಲಿದ್ದ ಸುನೀಲ್ (28) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಾರ್ಮಿಕರು ಪಾಲಿಬೆಟ್ಟ ಹೊಸಳ್ಳಿ ಪ್ರದೇಶದ ತೋಟದ ಕೆಲಸ ಮುಗಿಸಿ, ಪಿರಿಯಾಪಟ್ಟಣ ಸಮೀಪದ ಅನುಗೋಡುವಿನ ತಮ್ಮ ಊರಿಗೆ ಟಾಟ ಏಸ್ ವಾಹನದಲ್ಲಿ ತೆರಳುತ್ತಿದ್ದರು. ವಾಹನದಲ್ಲಿ ಸುಮಾರು 13 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಪಾಲಿಬೆಟ್ಟ ತಿತಿಮತಿ ಸಂಪರ್ಕ ರಸ್ತೆಯ ಹೊಸಳ್ಳಿ ಬಳಿ ಬರುತ್ತಿದ್ದ ಟಾಟಾ ಏಸ್ ಮೇಲೆ ಮರ ಬಿದ್ದಿದ್ದು, ಚಾಲಕನ ಸಮೀಪವೇ ಕುಳಿತ್ತಿದ್ದ ರಜು ತಲೆಯ ಭಾಗಕ್ಕೆ ಮರ ಬಿದ್ದ ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಭಾಗದಲ್ಲಿ ಕುಳಿತ್ತಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಇವರು ದುಬಾರೆ ಎಸ್ಟೇಟ್‍ನ ಕಾರ್ಮಿಕರಾಗಿದ್ದು, ಅನುಗೋಡು ನಿವಾಸಿಗಳಾಗಿದ್ದಾರೆ.

    ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಸ್ವಾಮಿ, ಸುನೀಲ್ ಹಾಗೂ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಸಣ್ಣ ಪುಟ್ಟ ಗಾಯವಾಗಿರುವ ಕಾರ್ಮಿಕರನ್ನು ಸಿದ್ದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣೆ ಎಸ್‍ಐ ಸುಬ್ರಹ್ಮಣಿ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.