Tag: virajpet

  • Kodagu | ವಿರಾಜಪೇಟೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ – ಜನರಲ್ಲಿ ಢವ ಢವ!

    Kodagu | ವಿರಾಜಪೇಟೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ – ಜನರಲ್ಲಿ ಢವ ಢವ!

    ಮಡಿಕೇರಿ: ವರ್ಷವಿಡೀ ಕಾಡಾನೆ ಹಾವಳಿಯಿಂದ ಕಂಗೆಡುತ್ತಿದ್ದ ಕೊಡಗು (Kodagu) ಜಿಲ್ಲೆಯ ಜನರು ಇದೀಗ ಹುಲಿಯ ಹಾವಳಿಯಿಂದ ಭಯಗೊಂಡಿದ್ದಾರೆ. ಇಲ್ಲಿನ ಗ್ರಾಮೀಣ ಭಾಗದಲ್ಲಿ ದನಕರುಗಳನ್ನು ಬಲಿ ಪಡೆಯುತ್ತಿದ್ದ ವ್ಯಾಘ್ರವೊಂದು ಇದೀಗ ವಿರಾಜಪೇಟೆ (Virajpet) ನಗರ ಪ್ರದೇಶದ ರಾಜ್ಯ ಹೆದ್ದಾರಿ ಬದಿಯಲ್ಲೇ ಕಾಣಿಸಿಕೊಂಡಿದೆ.

    ವಿರಾಜಪೇಟೆ-ಮಡಿಕೇರಿ ಮುಖ್ಯರಸ್ತೆಯಲ್ಲಿರುವ ಕುಕ್ಲೂರು ಮುತ್ತಪ್ಪ ದೇವಸ್ಥಾನದ ಮುಂಭಾಗದಲ್ಲಿ ಹುಲಿ (Tiger) ರಸ್ತೆ ದಾಟುತ್ತಿರುವ ದೃಶ್ಯವನ್ನು ವಾಹನ ಸವಾರರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆ ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ಬಾಲಕನ ತಂದೆಗೆ ಬಿತ್ತು 25,000 ರೂ. ದಂಡ!

    ಅರಣ್ಯ ಇಲಾಖೆ ವಿರಾಜಪೇಟೆ ಡಿಸಿಎಫ್ ಜಗನ್ನಾಥ್, ಆರ್‌ಎಫ್‌ಒ ಶಿವರಾಮ್ ಮತ್ತು ಸಿಬ್ಬಂದಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದೆ. ಕಾರ್ಯಾಚರಣೆ ವೇಳೆ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪಟ್ಟಣದ ಪೂಮಾಲೆ ಮಂದ್ ಮೂಲಕ ವಿರಾಜಪೇಟೆ-ಮಡಿಕೇರಿ ಮುಖ್ಯರಸ್ತೆ ಬದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

    ಹುಲಿ ಚಲನವಲನ ಪತ್ತೆಗೆ ಇಂದು (ಡಿ.18) ರಾತ್ರಿಯೇ ಕ್ಯಾಮೆರಾ ಅಳವಡಿಸಲು ಸಂಕೇತ್ ಪೂವಯ್ಯ ಸೂಚನೆ ನೀಡಿದ್ದಾರೆ. ಜೊತೆಗೆ ಕಾರ್ಯಾಚರಣೆಗೆ ಇನ್ನಷ್ಟು ಸಿಬ್ಬಂದಿ ಸೇರಿಸಿಕೊಳ್ಳಲು ಅರಣ್ಯಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

    ಈ ಹಿಂದೆ ಸುಮಾರು ಎರಡೂವರೆ ತಿಂಗಳೂ ಕೊಡಗಿನ ಜನಕ್ಕೆ ಕಾಟ ಕೊಟ್ಟಿದ್ದ ಹುಲಿಯೊಂದು 29 ಜಾನುವಾರುಗಳನ್ನ ಬಲಿ ಪಡೆದಿತ್ತು. ಇದನ್ನೂ ಓದಿ: ಅತ್ತೆ ಮೇಲೆ ಮಚ್ಚು ಬೀಸಿ ಪರಾರಿಯಾಗುತ್ತಿದ್ದ ಅಳಿಯನನ್ನು ಬೆನ್ನಟ್ಟಿ ಹಿಡಿದ ಪೊಲೀಸರು

  • 18 ವರ್ಷಗಳ ಬಳಿಕ ವಿರಾಜಪೇಟೆ ಪುರಸಭೆ ಅಧಿಕಾರ ಹಿಡಿದ ಕಾಂಗ್ರೆಸ್

    18 ವರ್ಷಗಳ ಬಳಿಕ ವಿರಾಜಪೇಟೆ ಪುರಸಭೆ ಅಧಿಕಾರ ಹಿಡಿದ ಕಾಂಗ್ರೆಸ್

    ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ (Virajpet Municipality) ನಡೆದ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್ (Congress) ಗದ್ದುಗೆ ಏರಿದೆ.

    ಎರಡನೇ ಅವಧಿ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಫೌಝಿಯಾ ತಬುಸಂ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ಪುರಸಭೆ ಒಟ್ಟು 18 ಸ್ಥಾನ ಬಲ ಹೊಂದಿದೆ. ದೇಚಮ್ಮ ಕಾಳಪ್ಪ 11 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪುರಸಭೆಯಲ್ಲಿ ಬಿಜೆಪಿಯ 8, ಕಾಂಗ್ರೆಸ್‌ನ 6, ಜೆಡಿಎಸ್ 1 ಹಾಗೂ ಮೂವರು ಪಕ್ಷೇತರ ಸದಸ್ಯರಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ

    ಬಿಜೆಪಿಯ (BJP) ಜೂನಾ ಸುನೀತಾ 8 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ವಿರಾಜಪೇಟೆ ತಹಶೀಲ್ದಾರ್ ರಾಮಚಂದ್ರ ಕರ್ತವ್ಯ ನಿರ್ವಹಿಸಿದರು. ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಚುನಾವಣೆಯಲ್ಲಿ ಭಾಗಿಯಾಗಿದ್ದರು. ಪೊನ್ನಣ್ಣನವರನ್ನು ಹೊತ್ತು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು. ಪುರಸಭೆ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ

  • ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

    ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

    ಮಡಿಕೇರಿ: ತೆರೆದ ಬಾವಿಗೆ (Well) ಬಿದ್ದು ಕಾಡಾನೆ (Wild Elephant ) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

    ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ. ಇದನ್ನೂ ಓದಿ: ದರ್ಶನ್‌ ಮನೆ ತೂಗುದೀಪ್ ನಿವಾಸಕ್ಕೂ ಸಂಚಕಾರ


    ಪಾಲೇಂಗಡ ಬಿದ್ದಪ್ಪ ಶಂಬು ಆವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.

  • ಭುವನ್-ಹರ್ಷಿಕಾ ಮದುವೆ: ಗಣ್ಯರಿಗೆ ಆಮಂತ್ರಣ

    ಭುವನ್-ಹರ್ಷಿಕಾ ಮದುವೆ: ಗಣ್ಯರಿಗೆ ಆಮಂತ್ರಣ

    ಲವು ವರ್ಷಗಳಿಂದ ಸ್ನೇಹಿತರಾಗಿದ್ದ ನಟ ಭುವನ್ (Bhuvan) ಹಾಗೂ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಸಹವಾಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ಈಗಾಗಲೇ ಬ್ಯಾಚುಲರ್ ಪಾರ್ಟಿ ಮುಗಿಸಿಕೊಂಡು ಬಂದಿರುವ ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.

    ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ (Virajpet) ಅದ್ದೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದ್ದು, ಸಾಕಷ್ಟು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಕೊಡವ (Kodava) ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆಯಾಗುತ್ತಿದ್ದು (Marriage), ಅದಕ್ಕಾಗಿ ವಿರಾಜಪೇಟೆಯ ‘ಅಮ್ಮತಿ ಕೊಡವ ಸಮಾಜ’ ಸಿಂಗಾರಗೊಳ್ಳಲಿದೆ.

    ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಜೋಡಿ,  ಸಿಎಂ ಸಿದ್ದರಾಮಯ್ಯ,  ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಈ ಜೋಡಿ ಆಹ್ವಾನಿಸಿದೆ. ಇದನ್ನೂ ಓದಿ:ಫೋನ್ ಸ್ವಿಚ್ ಆಫ್ ಮಾಡಿಕೊಂಡ ನಟ: ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ

    ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್  ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್,  ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.

     

    ಇಬ್ಬರೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ ಮತ್ತು ರಾಜಕೀಯ ಗಣ್ಯರ ಜೊತೆಯೇ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹಾಗಾಗಿ ಎರಡೂ ಕ್ಷೇತ್ರಗಳಿಂದಲೇ ಅನೇಕ ಗಣ್ಯರು ಮದುವೆಗೆ ಬರುವ ಸಾಧ್ಯತೆಯಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾರ್‌ನಲ್ಲಿ ಗಲಾಟೆ – ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ

    ಬಾರ್‌ನಲ್ಲಿ ಗಲಾಟೆ – ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ

    ಮಡಿಕೇರಿ: ಹಳೇ ದ್ವೇಷದ ಹಿನ್ನೆಲೆ ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ.

    ಕ್ರಿಸ್ಟಲ್ (28) ಹತ್ಯೆಯಾದ ದುರ್ದೈವಿ. ಗುರುವಾರ ರಾತ್ರಿ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿರುವ ಬಾರ್‌ವೊಂದರಲ್ಲಿ (Bar) ಕ್ರಿಸ್ಟಲ್ ಸ್ನೇಹಿತರು ಹಾಗೂ ರಂಜಿತ್ ಸ್ನೇಹಿತರು ಇಬ್ಬರು ಒಂದೇ ಬಾರಿನಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದರ್ಭ ರಂಜಿತ್ ಹಾಗೂ ಕ್ರಿಸ್ಟಲ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

    ಗಲಾಟೆಯನ್ನು ಗಮನಿಸಿದ ಬಾರ್ ಮ್ಯಾನೇಜರ್ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸ್ಥಳಕ್ಕೆ ಆಗಮಿಸುವ ವೇಳೆ ಕ್ರಿಸ್ಟಲ್ ತಂಡ ಹಾಗೂ ರಂಜಿತ್ ತಂಡದ ಯುವಕರು ಬಾರ್ ಒಳಗೆ ನುಗ್ಗಿ ಇನ್ನಷ್ಟು ಗಲಾಟೆ ಮಾಡಿಕೊಂಡು ಬಾರ್‌ನ ಶೌಚಾಲಯದ ಬಾಗಿಲು ಮುರಿದಿದ್ದಾರೆ. ಬಳಿಕ ಪೊಲೀಸರು ಕ್ರಿಸ್ಟಲ್‌ನ ಜೊತೆ ಇದ್ದ ಮೈಕೆಲ್ ಹಾಗೂ ಮತ್ತೊಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿದ್ದಾರೆ. ಆದರೆ ಗಲಾಟೆ ಮಾಡಿದ ರಂಜಿತ್ ಹಾಗೂ ಕ್ರಿಸ್ಟಲ್ ಇಬ್ಬರಿಗೂ ಸ್ಥಳದಲ್ಲೇ ಬುದ್ದಿವಾದ ಹೇಳಿ ಮನೆಗೆ ಹೋಗುವಂತೆ ತಿಳಿಸಿದ್ದರು. ಇದನ್ನೂ ಓದಿ: ಕೊಂಬಿನಿಂದ ತಿವಿದು ಬಾಲಕಿಯನ್ನು ಬಿಸಾಕಿದ ಹಸು- ತಮಿಳುನಾಡಿನ ದೃಶ್ಯ ಭಾರೀ ವೈರಲ್

    ಶುಕ್ರವಾರ ಬೆಳಗ್ಗೆ ಬಾರ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದ ಕ್ರಿಸ್ಟಲ್ (28) ಮೃತದೇಹ ಪಾಲಿಬೆಟ್ಟ ರಸ್ತೆಯಲ್ಲಿ ಗೋಚರಿಸಿದೆ. ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸಿದ್ದಾಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‍ನಲ್ಲಿ ಭೀಕರ ಅಪಘಾತ – ಹತ್ತು ಮಂದಿ ಸಾವು

    ಘಟನೆಯ ವಿವರ:
    ಕಳೆದ ಎರಡು ಮೂರು ತಿಂಗಳ ಹಿಂದೆ ಕ್ರಿಸ್ಟಲ್ ಹಾಗೂ ರಂಜಿತ್ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಏರ್ಪಟ್ಟಿದ್ದು, ಇಬ್ಬರ ನಡುವೆ ನಡೆದ ಗಲಾಟೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಗುರುವಾರವೂ ಹಳೆಯ ಗಲಾಟೆಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಗಿಸಿಕೊಂಡು ಬಂದ ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ರಾತ್ರಿ ಬಾರ್‌ನಲ್ಲಿ ಮುಖಾಮುಖಿ ಭೇಟಿಯಾಗಿ ಮತ್ತೊಮ್ಮೆ  ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಲಸಿಕೆ ಹಾಕ್ತಿದ್ದಾಗಲೇ ಕುಸಿದ ಅಂಗನವಾಡಿಯ ಮೇಲ್ಛಾವಣಿ- ಮಗುವಿನ ತಲೆಗೆ ಗಾಯ

    ನಂತರ ಪೊಲೀಸರು ಬಂದು ಕ್ರಿಸ್ಟಲ್‌ನ ಜೊತೆಯಲ್ಲಿದ್ದ ಯುವಕರನ್ನು ಕರೆದುಕೊಂಡು ಹೋಗಿ ಕ್ರಿಸ್ಟಲ್‌ನನ್ನು ಮನೆಗೆ ಹೋಗುವಂತೆ ಹೇಳಿ ಹೋಗಿದ್ದಾರೆ. ಆದರೆ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗೊತ್ತಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದೆ ಪೊಲೀಸರು ಬಿಟ್ಟು ಹೋಗಿದ್ದರಿಂದ ರಾತ್ರಿ ಮತ್ತೊಮ್ಮೆ ರಸ್ತೆ ಮಧ್ಯದಲ್ಲೇ ಗಲಾಟೆ ನಡೆದು ಹತ್ಯೆ ಮಾಡಲಾಗಿದೆ. ಸಿದ್ದಾಪುರ ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕ್ರಿಸ್ಟಲ್ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತ – ಪೊಲೀಸ್ ಕಾನ್ಸ್‌ಟೇಬಲ್ ನಿಧನ

    ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್

    ಕೊಡಗಿನಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಫೈರಿಂಗ್

    ಮಡಿಕೇರಿ: ನಿವೃತ ಎಸ್ಪಿ ಪುತ್ರನೊಬ್ಬ ವರ್ತಕನ ಮೇಲೆ ರಿವಾಲ್ವಾರ್‌ನಿಂದ (Revolver) ಮೂರು ಸುತ್ತು ಗುಂಡು ಹಾರಿಸಿದ ಘಟನೆ ವಿರಾಜಪೇಟೆ (Virajpet) ತಾಲ್ಲೂಕಿನ ಅಮ್ಮತಿ (Ammathi) ಗ್ರಾಮದಲ್ಲಿ ನಡೆದಿದೆ.

    ರಂಜನ್ ಚಿಣ್ಣಪ್ಪ ಎಂಬಾತ ಗುಂಡು ಹಾರಿಸಿದ ವ್ಯಕ್ತಿ. ಸಿದ್ದಾಪುರ (Siddapur) ರಸ್ತೆಯ ವರ್ತಕ ಕೆ.ಬೋಪಣ್ಣ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದು, ಕೂದಲಳೆಯ ಅಂತರದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಡಿಕೆಶಿ ಕುಟುಂಬಕ್ಕೂ ತಟ್ಟಿದ ಚುನಾವಣೆ ಬಿಸಿ – ಹೆಲಿಕಾಪ್ಟರ್ ತಪಾಸಣೆ ವೇಳೆ ಮಾತಿನ ಚಕಮಕಿ

    ರಂಜನ್‍ಗೆ ಸೇರಿದ ಮನೆಯ ಮುಂಭಾಗದ ಅಂಗಡಿ ಮಳಿಗೆಯಲ್ಲಿ ಬೊಪಣ್ಣ ಮತ್ತು ಆತನ ಪಾಲುದಾರರು ಅಡಿಕೆ ಮಂಡಿಯನ್ನು ನಡೆಸುತ್ತಿದ್ದರು. ಅಂಗಡಿ ಮಳಿಗೆಯನ್ನು ಖಾಲಿ ಮಾಡುವಂತೆ ಈ ಹಿಂದೆ ರಂಜನ್ ಸೂಚಿಸಿದ್ದ. ಇದಕ್ಕೆ ಬೋಪಣ್ಣ ಕಾಲಾವಕಾಶವನ್ನು ಕೇಳಿದ್ದರು ಎನ್ನಲಾಗಿದೆ. ಮತ್ತೆ ಪುನಃ ರಂಜನ್ ಬೊಪಣ್ಣರವರ ಅಂಗಡಿಗೆ ತೆರಳಿ ಖಾಲಿ ಮಾಡುವಂತೆ ಕೇಳಿಕೊಂಡಾಗ ಇಬ್ಬರ ನಡುವೆ ಮಾತಿನ ಚಕಮುಕಿ ನಡೆದಿದೆ. ಈ ವೇಳೆ ರಂಜನ್ ತನ್ನ ಬಳಿ ಇದ್ದ ರಿವಾಲ್ವಾರ್ ನಿಂದ ಏಕಾಏಕಿ ಗುಂಡು ಹಾರಿಸಿದ್ದಾನೆ.

    ಬಳಿಕ ರಂಜನ್ ಮೇಲೆ ಕೂಡ ಹಲ್ಲೆ ನಡೆದಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ರಾಜನ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ

  • ಹಳೆ ದ್ವೇಷ – ಮಡಿಕೇರಿಯಲ್ಲಿ ಗುಂಡೇಟಿಗೆ ವ್ಯಕ್ತಿ ಬಲಿ

    ಹಳೆ ದ್ವೇಷ – ಮಡಿಕೇರಿಯಲ್ಲಿ ಗುಂಡೇಟಿಗೆ ವ್ಯಕ್ತಿ ಬಲಿ

    ಮಡಿಕೇರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಕೊಡಗಿನ (Kodagu) ವಿರಾಜಪೇಟೆಯ (Virajpet) ತೋರ ಗ್ರಾಮದಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.

    ಗ್ರಾಮದ ಬೈಮನ ನಾಣಯ್ಯ ಅವರ ಪುತ್ರ ಬಿ.ಎಂ ಮಧು (44) ಮೃತ ದುರ್ದೈವಿ. ರಾತ್ರಿ 12ರ ವೇಳೆಗೆ ಗ್ರಾಮದ ಪಡಚಿಕಾಡು ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ತೋಟದ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವಾರು ವರ್ಷಗಳಿಂದ ಮಧು ಹಾಗೂ ಊರಿನ ಕೆಲವರ ನಡುವೆ ಮನಸ್ತಾಪ ಇತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಸಂಸದ ಸ್ಥಾನಕ್ಕೂ ರಾಜೀನಾಮೆಗೆ ಮುಂದಾದ ಕರಡಿ ಸಂಗಣ್ಣ

    ಮಧು, ಶನಿವಾರ ಸಂಜೆ 7 ಗಂಟೆಯಿಂದ ಸ್ನೇಹಿತರೊಂದಿಗೆ ಸೇರಿಕೊಂಡು ಮದ್ಯಪಾನ ಮಾಡಿದ್ದರು. ರಾತ್ರಿ ವೇಳೆ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಈ ಮೊದಲು ಮಧು ಬೆಂಗಳೂರಿನಲ್ಲಿ (Bengaluru) ಉದ್ಯಮಿಯಾಗಿದ್ದರು. ಕಳೆದ ಒಂದು ವರ್ಷದ ಹಿಂದೆ ಊರಿಗೆ ಮರಳಿ ತೋಟವನ್ನು ನೋಡಿಕೊಂಡು, ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡಿದ್ದರು.

    ಘಟನಾ ಸ್ಥಳಕ್ಕೆ ಕೊಡಗು ಎಸ್‍ಪಿ ರಾಜರಾಜನ್ ಹಾಗೂ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸಿದ್ದುಗೆ `ಅಹಿಂದ’ ಪದದ ಅರ್ಥವೇ ಗೊತ್ತಿಲ್ಲ – ಕಣ್ಣೀರಿಟ್ಟ ಗೋಪಿಕೃಷ್ಣ ದಂಪತಿ

  • ಅಕ್ರಮ ಗಾಂಜಾ ಮಾರಾಟ ಯತ್ನ- ಇಬ್ಬರ ಬಂಧನ

    ಅಕ್ರಮ ಗಾಂಜಾ ಮಾರಾಟ ಯತ್ನ- ಇಬ್ಬರ ಬಂಧನ

    ಮಡಿಕೇರಿ: ಅಕ್ರಮವಾಗಿ ಗಾಂಜಾ (Ganja) ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆಯಲ್ಲಿ (Virajpet) ನಡೆದಿದೆ.

    ವಿರಾಜಪೇಟೆ ತಾಲೂಕಿನ ಇಂಜಿಲಗೆರೆ ಗ್ರಾಮದ ಕಲ್ಲುಕೋರೆ ನಿವಾಸಿ ಪ್ರವೀಣ (31) ಹಾಗೂ ಗಾಂಧಿನಗರ ನಿವಾಸಿ ಇಮ್ರಾನ್ ಅಲಿಯಾಸ್ ಸೋನು (22) ಬಂಧಿತ ಆರೋಪಿಗಳು. ಪ್ರಕರಣದ ಎರಡನೇ ಆರೋಪಿಯಾಗಿರುವ ಸೋನು 2020ರಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜೈಲುವಾಸ ಅನುಭವಿಸಿ ಹಿಂದಿರುಗಿದ್ದಾನೆ. ಅಲ್ಲದೇ ಜೈಲುವಾಸದ ಸಮಯದಲ್ಲಿ ಅನೇಕ ಮಂದಿಯ ಪರಿಚಯವಾಗಿದ್ದು, ಗಾಂಜಾ ಖರೀದಿ ಮತ್ತು ದೊರಕುವ ಸ್ಥಳದ ಬಗ್ಗೆ ಈತನಿಗೆ ಖಚಿತ ಮಾಹಿತಿ ಇತ್ತು ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ- ಚೆನೈ ಕಲಾಕ್ಷೇತ್ರದ ಪ್ರೊಫೆಸರ್ ವಿರುದ್ಧ ದೂರು ದಾಖಲು 

    CRIME 2

    ಸೋನು ತನ್ನ ಸ್ನೇಹಿತನಾದ ಪ್ರವೀಣ್‌ಗೂ ಮಾಹಿತಿ ತಿಳಿಸಿ ಹಣ ಹೊಂದಿಸಿಕೊಂಡು ಮೈಸೂರಿಗೆ ತೆರಳಿದ್ದಾನೆ. ಮಾರ್ಚ್ 30ರ ರಾತ್ರಿ ವೇಳೆಯಲ್ಲಿ ಮೈಸೂರಿನ (Mysuru) ಹೊರವಲಯದಲ್ಲಿ ಗಾಂಜಾ ಖರೀದಿಸಿ ವಿರಾಜಪೇಟೆ ನಗರಕ್ಕೆ ಆಗಮಿಸಿದ್ದಾನೆ. ಮಾರ್ಚ್ 31ರಂದು ಬೆಳಗ್ಗೆ 11 ಗಂಟೆಯ ವೇಳೆಗೆ ಆರೋಪಿಗಳು ತಮ್ಮ ಬಳಿಯಿದ್ದ ಗಾಂಜಾವನ್ನು ಮಾರಾಟ ಮಾಡಲು ವಿರಾಜಪೇಟೆಯ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದ ಮುಂಭಾಗದಲ್ಲಿ ಗಿರಾಕಿಗಳಿಗೆ ಹೊಂಚು ಹಾಕುತ್ತಿದ್ದರು. ಇದನ್ನೂ ಓದಿ: ಸಾಕುನಾಯಿಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ 60ರ ವ್ಯಕ್ತಿ

    ನಿಖರ ಮಾಹಿತಿಯ ಅನ್ವಯ ಪೊಲೀಸರು ಆರೋಪಿಗಳ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರ ಕೈಯಲ್ಲಿ ಮಾರಾಟಕ್ಕೆ ಸಿದ್ಧಗೊಂಡಿದ್ದ 1.222 ಕೆಜಿ ಗಾಂಜಾ ಮತ್ತು 770 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ಗಾಂಜಾ ಸುಮಾರು 30 ಸಾವಿರ ರೂ. ಮೌಲ್ಯದ್ದು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ 

    ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ 20/ಬಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನ – ಭಾರತೀಯರು ಸೇರಿ 8 ಮಂದಿ ಸಾವು

  • ಸುಳ್ಳು ವಯಸ್ಸಿನ ದಾಖಲೆ ನೀಡಿ ಸ್ಪರ್ಧೆ – ಬೋಪಯ್ಯ ವಿರುದ್ಧ ದೂರು

    ಸುಳ್ಳು ವಯಸ್ಸಿನ ದಾಖಲೆ ನೀಡಿ ಸ್ಪರ್ಧೆ – ಬೋಪಯ್ಯ ವಿರುದ್ಧ ದೂರು

    ಮಡಿಕೇರಿ: ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಸುಳ್ಳು ದಾಖಲೆ ನೀಡಿದ್ದರು ಎಂದು ಆರೋಪಿಸಿ ಶಾಸಕ ಹಾಗೂ ಮಾಜಿ ಸ್ಪೀಕರ್ (Former Speaker) ಕೆ.ಜಿ ಬೋಪಯ್ಯ (K.G Bopaiah) ವಿರುದ್ಧ ವ್ಯಕ್ತಿಯೊಬ್ಬರು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೋಪಯ್ಯ ತಮ್ಮ ವಯಸ್ಸನ್ನು ತಿದ್ದಿ, ತಪ್ಪು ಮಾಹಿತಿ ನೀಡಿ ನಾಮಪತ್ರ ಸಲ್ಲಿಸಿದ್ದರು ಎಂದು ಪಿ.ಬಿ ತಿಮ್ಮಯ್ಯ ಎಂಬವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಆತಂಕ ಸೃಷ್ಟಿಸಿರುವ H3N2ಗೆ ರಾಜ್ಯದಲ್ಲಿ ಮೊದಲಿ ಬಲಿ

    ದೂರಿನಲ್ಲಿ ವಿರಾಜಪೇಟೆ (Virajpet) ಕ್ಷೇತ್ರದ ವಿಧಾನಸಭಾ ಸದಸ್ಯರಾದ ಕೆ.ಜಿ ಬೋಪಯ್ಯ 1979ರ ಅಕ್ಟೋಬರ್‌ನಲ್ಲಿ ಬಾರ್ ಕೌನ್ಸಿಲ್ (Bar Council) ವಕೀಲರಾಗಿದ್ದರು. ಅವರು ಆಗ ತಮ್ಮ ಹುಟ್ಟಿದ ದಿನಾಂಕವನ್ನು 1951 ಅಕ್ಟೋಬರ್ 17 ಎಂದು ದಾಖಲಿಸಿದ್ದರು. ಆದರೆ ಬೋಪಯ್ಯನವರು 2004 ನೇ ಸಾಲಿನ ಚುನಾವಣೆ ಸಮಯದಲ್ಲಿ ಅವರ ವಯಸ್ಸು 53 ವರ್ಷ ಆಗಿತ್ತು. ಆದರೆ ಬೋಪಯ್ಯನವರು ತಮ್ಮ ವಯಸ್ಸನ್ನು 49 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು.

    2013ರ ಚುನಾವಣೆಯಲ್ಲಿ ಅವರ ವಯಸ್ಸು 61 ವರ್ಷ ಆಗಿತ್ತು. ಆದರೆ ಅವರು ಚುನಾವಣಾ ಆಯೋಗಕ್ಕೆ (Election Commission) 58 ವರ್ಷ ಎಂದು ಸುಳ್ಳು ಮಾಹಿತಿ ನೀಡಿದ್ದರು. ಮತ್ತು 2018ರ ಚುನಾವಣೆಯಲ್ಲಿ ಅವರ ವಯಸ್ಸು 67 ಆಗಿತ್ತು. ಆದರೆ ತಮ್ಮ ವಯಸ್ಸನ್ನು 65 ಎಂದು ಸುಳ್ಳು ಮಾಹಿತಿ ನೀಡಿದ್ದಾರೆಂದು ದೂರುದಾರ ತಿಮ್ಮಯ್ಯ ಆರೋಪಿಸಿದ್ದಾರೆ.

    ಇದು ಚುನಾವಣೆ ನೀತಿ ಸಂಹಿತೆ ಅನುಗುಣವಾಗಿ ಗಂಭೀರ ಅಪರಾಧವಾಗಿದೆ. ಇದರ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ದೂರು ದಾಖಲಿಸಿದ್ದಾರೆ.

    ಬೋಪಯ್ಯ ಸ್ಪಷ್ಟನೆ: ಪ್ರತೀ ಚುನಾವಣೆ ಬಂದಾಗ ನನ್ನ ವಿರುದ್ಧ ಇಂತಹ ಆರೋಪ ಮಾಡುವ ಗ್ಯಾಂಗ್ ಮಡಿಕೇರಿಯಲ್ಲಿದೆ. ವಯಸ್ಸಿನ ಬಗ್ಗೆ ಸುಳ್ಳು ದಾಖಲೆ ನೀಡಿದ ಆರೋಪದ ದೂರು ದಾಖಲಾಗಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ನನ್ನ ತಂದೆ ಹೆಬ್ಬೆಟ್ಟು. ನನ್ನ ತಂದೆ ಕೊಟ್ಟಿರುವ ದಿನಾಂಕವನ್ನೇ ನಾನು ಫಾಲೋ ಮಾಡುತ್ತಾ ಬಂದಿದ್ದೇನೆ ಎಂದು ಬೋಪಯ್ಯ ಪ್ರತಿಕ್ರಿಯಿಸಿದ್ದಾರೆ.

    ನನ್ನ ವಿರುದ್ಧದ ಹಿಂದೆ ಸೋ ಕಾಲ್ಡ್ ಪರಿಸರವಾದಿಗಳು ಇದ್ದಾರೆ. ಅವರ ಈ ಸಣ್ಣತನಕ್ಕೆ ನಾನು ಸಣ್ಣತನ ಮಾಡಲ್ಲ. ನನ್ನ ಎಲ್ಲಾ ದಾಖಲೆಗಳಲ್ಲೂ ಒಂದೇ ಡೇಟ್ ಇದೆ. ಈ ಬಾರಿ ಚುನಾವಣೆ ಎದುರಿಸಲು ತನಗೆ ಪಕ್ಷದ ತೀರ್ಮಾನವಾಗಿದೆ. ಆರೋಪಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಎರಡು ಕ್ಷೇತ್ರದ ಬಿಜೆಪಿ ಸ್ಥಾನಗಳನ್ನು ಕುಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು- ಹಲವರಿಗೆ ಗಾಯ

  • ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

    ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

    ಮಡಿಕೇರಿ: ವಿರಾಜಪೇಟೆ (Virajpet) ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ (Forest officer) ನಾಪತ್ತೆಯಾಗಿದ್ದಾರೆ.

    ಪವನ್ (23) ನಾಪತ್ತೆಯಾದ ಅರಣ್ಯ ವೀಕ್ಷಕ. ಮೂಲತಃ ಬಾಳೆಲೆ ಗ್ರಾಮದ ಪವನ್ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯನಿರತರಾಗಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗುತ್ತಿದೆ.   ಇದನ್ನೂ ಓದಿ: ಬೆಲೆ ಮಿತಿ ನ್ಯಾಯುತವಾಗಿಲ್ಲದಿದ್ದರೇ ಜಾಗತಿಕ ಮಾರುಕಟ್ಟೆಗೆ ತೈಲ ಪೂರೈಕೆ ಬಂದ್ – ರಷ್ಯಾ

    ಇದೀಗ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದಲ್ಲಿ ನಾಪತ್ತೆಯಾದ ಪವನ್ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ (Forest Department Staff) ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು ಹಾಸ್ಟೆಲ್‌ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

    Live Tv
    [brid partner=56869869 player=32851 video=960834 autoplay=true]