Tag: Virajpet Police

  • ಒನ್‌ಸೈಡ್‌ ಲವ್‌ – ಪ್ರೀತಿಸಿದ ಹುಡ್ಗಿಯ ಲಗ್ನ ಪತ್ರಿಕೆ ನೋಡಿ ಯುವಕ ಆತ್ಮಹತ್ಯೆ!

    ಒನ್‌ಸೈಡ್‌ ಲವ್‌ – ಪ್ರೀತಿಸಿದ ಹುಡ್ಗಿಯ ಲಗ್ನ ಪತ್ರಿಕೆ ನೋಡಿ ಯುವಕ ಆತ್ಮಹತ್ಯೆ!

    ಮಡಿಕೇರಿ: ಪ್ರೀತಿಸಿದ ಯುವತಿಯ (Lover) ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಬಿಟ್ಟಂಗಾಲ ಪೆಗ್ಗರಿಕಾಡ್ ಗ್ರಾಮದಲ್ಲಿ ನಡೆದಿದೆ.

    ಬಿಟ್ಟಂಗಾಲ ಗ್ರಾಪಂ ವ್ಯಾಪ್ತಿಯ ಪೆಗ್ಗರಿಕಾಡ್ ಪೈಸಾರಿ ನಿವಾಸಿ ಹಾಗೂ ಜಿಪಂ ಮಾಜಿ ಸದಸ್ಯ ದಿವಂಗತ ಹೆಚ್.ಎಂ ಕಾಳಯ್ಯ ಅವರ ಪುತ್ರ ಹೆಚ್.ಕೆ. ಸುಮಂತ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಇದನ್ನೂ ಓದಿ: ಕೈದಿಗೆ 20,000ಕ್ಕೆ ಮೊಬೈಲ್ ಮಾರಲು ಯತ್ನ – ಪರಪ್ಪನ ಅಗ್ರಹಾರ ಜೈಲು ವೀಕ್ಷಕ ಬಂಧನ

    ಒನ್‌ಸೈಡ್‌ ಲವ್‌ಗೆ ಬಲಿಯಾದ ಯುವಕ!
    ದಿವಂಗತ ಕಾಳಯ್ಯ ದಂಪತಿಗಳಿಗೆ ಇಬ್ಬರು ಹೆಣ್ಣು ಹಾಗೂ ಓರ್ವ ಗಂಡುಮಗ. ಹೆಣ್ಣು ಮಕ್ಕಳಿಗೆ ಮದುವೆಯಾಗಿ ಸುಖಿ ಸಂಸಾರದೊಂದಿಗೆ ಜೀವನ ಸಾಗಿಸುತಿದ್ದಾರೆ. ಮೃತ ಸುಮಂತ್‌ಗೆ ಕೆಲ ವರ್ಷಗಳ ಹಿಂದೆ ಯುವತಿಯೊಬ್ಬಳ ಪರಿಚಯವಾಗಿದೆ. ಆದ್ರೆ ಸುಮಂತ್‌ ಆಕೆಯನ್ನ ಒನ್‌ಸೈಡ್‌ ಲವ್‌ ಮಾಡ್ತಿದ್ದ. ಈ ಬಗ್ಗೆ ಯುವತಿ ಫೋರ್ಸ್‌ ಮಾಡ್ತಿದ್ದಾನೆ ಅಂತ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು. ಆ ನಂತರ ಯುವಕ ಪ್ರೇಮ ವೈಫಲ್ಯದಿಂದ ಬೇರ್ಪಟ್ಟು ಹೊಸ ಜೀವನ ಶುರು ಮಾಡಿದ್ದ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. 6 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಗೆ ಬಂದಿದ್ದ. ನಂತರ ಇಲ್ಲಿಯೇ ಖಾಸಗಿ ವಾಹನ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದನಂತೆ. ಇದನ್ನೂ ಓದಿ: ಈರುಳ್ಳಿ ಮೂಟೆಯಲ್ಲಿ ಶ್ರೀಗಂಧ ತುಂಡುಗಳ ಕಳ್ಳಸಾಗಣೆ – 18 ಮೂಟೆಗಳಲ್ಲಿ 750 ಕೆಜಿ ಶ್ರೀಗಂಧ ವಶಕ್ಕೆ

    ಹೀಗಿರುವಾಗ ಮೃತ ಸುಮಂತ್‌ಗೆ ತನ್ನ ಪ್ರೇಯಸಿ ಮದುವೆ ನಿಗದಿಯಾದ ದಿನಾಂಕ ಗೊತ್ತಾಗಿದೆ. ಇದರಿಂದ ಮನನೊಂದ ಯುವಕ ಅ.18ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ಸಂಜೆ ವೇಳೆಗೆ ಮನೆಗೆ ಬಂದ ತಾಯಿ ಇದನ್ನ ನೋಡಿ ಮಕ್ಕಳಿಗೆ ತಿಳಿಸಿದ್ದಾರೆ. ತಕ್ಷಣವೇ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ರವಾನಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಸ್ವಗೃಹದಲ್ಲಿ ಸುಮಂತ್‌ ಮೃತಪಟ್ಟಿದ್ದಾನೆ. ಮೃತನ ಅಕ್ಕ ಪೂರ್ಣಿಮಾ ಅವರು ನೀಡಿರುವ ದೂರಿನ ಅನ್ವಯ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಬಿಎನ್‌ಎಸ್ 194 ರಂತೆ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಕಿರುಕುಳ – ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಎಫ್‍ಐಆರ್

  • ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಭೂಪ!

    ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಭೂಪ!

    – ಪತ್ನಿಯನ್ನು ಕೊಂದು ತಾನೇ ಪೊಲೀಸರಿಗೆ ಶರಣಾದ ಪತಿ

    ಮಡಿಕೇರಿ: ಬೇರೆಯವರೊಂದಿಗೆ ಫೋನ್‌ನಲ್ಲಿ (Phone) ಮಾತನಾಡುತ್ತಿದ್ದುದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ.

    ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 24 ಗಂಟೆ ವಿದ್ಯುತ್‌ ಉಚಿತ, ಯುವಕರಿಗೆ ಉದ್ಯೋಗ ಖಚಿತ, ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ʻಕೇಜ್ರಿವಾಲ್‌ ಕಿ ಗ್ಯಾರಂಟಿʼ ಘೋಷಣೆ!

    ಪ್ರೀತಿಸಿ ಮದುವೆಯಾಗಿದ್ದ ಜೋಡಿ – ಹತ್ಯೆಗೆ ಕಾರಣ ಏನು?
    ಶಿಲ್ಪಾ ಸೀತಮ್ಮ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ. 2012 ರಿಂದ 2017ರ ವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆಸಲಿಸಿದ್ದರು. ಶುಕ್ರವಾರ (ಜು.19) ರಾತ್ರಿ ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇಂದು (ಶನಿವಾರ) ಬೆಳಗ್ಗೆಯೂ ಪತಿ ಆಕ್ಷೇಪಿಸಿದ್ದ, ಇದರಿಂದ ಇಬ್ಬರ ನಡುವೆ ಜಗಳ ಏರ್ಪಟ್ಟಿತ್ತು, ಕೊನೆಗೆ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ. ಹತ್ಯೆ ಮಾಡಿ ಪೊಲೀಸರಿಗೆ ತಾನೇ ಶರಣಾಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    17 ವರ್ಷದ ಹಿಂದೆ ಪರಸ್ಪರ ಪ್ರೀತಿಸಿ ಇಬ್ಬರು ಮದುವೆಯಾಗಿದ್ದರು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೇ ಬೋಪಣ್ಣ ವಿರಾಜಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದಲ್ಲಿ ಸರ್ವಿಸ್ ಸ್ಟೇಷನ್ ಹಾಗೂ ಕಾಫಿ ತೋಟದ ಮಾಲೀಕನಾಗಿದ್ದ. ಕಳೆದ ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಪರಸ್ಪರ ಭಿನ್ನಾಭಿಪ್ರಾಯ ಉಂಟಾಗಿತ್ತು. ಆದ್ರೆ ಶುಕ್ರವಾರ ರಾತ್ರಿ ಗಲಾಟೆ ದೊಡ್ಡದಾಗಿ ನಡೆದಿತ್ತು ಎನ್ನಲಾಗಿದೆ. ಇದನ್ನೂ ಓದಿ: Madikeri: ಗುಡ್ಡ ಕುಸಿಯುವ ಭೀತಿ; ಸಂಪಾಜೆ ರಸ್ತೆಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ!

    ಪತ್ನಿಯನ್ನು ಹತ್ಯೆಗೈದ ಬಳಿಕ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಬಂದು ಶರಣಾಗಿದ್ದಾನೆ. ಬಳಿಕ ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: `Public TV’ ಇಂಪ್ಯಾಕ್ಟ್‌: ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಸಚಿವ ಬೋಸರಾಜು ಭೇಟಿ