Tag: Vishakapattanam

  • ಆಂಧ್ರಪ್ರದೇಶ | ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ದುರ್ಮರಣ

    ಆಂಧ್ರಪ್ರದೇಶ | ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ದುರ್ಮರಣ

    ಅಮರಾವತಿ: ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ.

    ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಅವಘಡ: 14 ಮಂದಿ ಸಾವು

    ಸ್ಥಳಕ್ಕೆ ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದವು. ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ.

    ವರದಿಗಳ ಪ್ರಕಾರ, ಇಂದು ಬೆಳಗಿನ ಜಾವ 2:30 ರಿಂದ 3:30ರವರೆಗೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಭಾರೀ ಗಾಳಿ ಹಾಗೂ ದೇವಸ್ಥಾನದ ಬಳಿ ಹರಿಯುತ್ತಿದ್ದ ನೀರಿನ ಹರಿವು ಈ ಘಟನೆಗೆ ಕಾರಣ ಎನ್ನಲಾಗಿದೆ. ಗೋಡೆಯು ಮಣ್ಣಿನ ಹೊದಿಕೆಯನ್ನು ಹೊಂದಿದ್ದು, ಮಣ್ಣು ಸಡಿಲಗೊಂಡಿರಬಹುದು, ಜೊತೆಗೆ ಭಾರೀ ಗಾಳಿಯಿಂದಾಗಿ ಪೆಂಡಾಲ್‌ಗಳು ನೆಲಕ್ಕುರುಳಿದವು. ಇನ್ನೂ 20 ದಿನಗಳ ಹಿಂದೆಯಷ್ಟೇ ಈ ಗೋಡೆಯನ್ನು ನಿರ್ಮಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

    ಚಂದನೋತ್ಸವಂ ಹಬ್ಬವನ್ನು ಪ್ರತಿ ವರ್ಷ ಏ.30 ರಂದು ಆಚರಿಸಲಾಗುತ್ತದೆ. ಭಕ್ತರು ವರ್ಷಪೂರ್ತಿ ಶ್ರೀಗಂಧದ ಲೇಪದಿಂದ ಮುಚ್ಚಿದ ನರಸಿಂಹ ದೇವರನ್ನು ಈ ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ ನೋಡುತ್ತಾರೆ.ಇದನ್ನೂ ಓದಿ: ಖಾಸಗಿಯವ್ರ ಪಾಲಾಗುತ್ತಿದೆ ಟೈರನ್ನೊಸಾರಸ್ ಪಳಯುಳಿಕೆ – ವಿಜ್ಞಾನಿಗಳ ಆತಂಕವೇನು?

  • Andhra Pradesh| ಕತ್ತು ಹಿಸುಕಿ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ

    Andhra Pradesh| ಕತ್ತು ಹಿಸುಕಿ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ

    ಅಮರಾವತಿ: ಗಂಡ-ಹೆಂಡತಿಯ ನಡುವೆ ಜಗಳ ನಡೆದು, ಪತಿ 8 ತಿಂಗಳ ಗರ್ಭಿಣಿ ಪತ್ನಿಯನ್ನು (Preganant Wife) ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ.

    ಅನುಷಾ (27) ಮೃತ ಪತ್ನಿ. ಪತಿ ಜ್ಞಾನೇಶ್ವರ್ ಹಾಗೂ ಪತ್ನಿ ಅನುಷಾ ಸೋಮವಾರ ಬೆಳಗ್ಗೆ ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ಜ್ಞಾನೇಶ್ವರ್ ತನ್ನ ಪತ್ನಿಯ ಕತ್ತು ಹಿಸುಕಿದ್ದಾನೆ. ಈ ಸಂದರ್ಭ ಅನುಷಾ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಪತಿ, ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಇದನ್ನೂ ಓದಿ: ತುಮಕೂರು | ಬೀದಿ ದೀಪ ಆರಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ಸಾವು

    ವಿಶಾಖಪಟ್ಟಣಂನ (Visakhapatnam) ಪಿಎಂ ಪಾಲೆಂನ ಉಡಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಆರೋಪಿ ಪತಿ ನಗರದ ಸ್ಕೌಟ್ಸ್ ಮತ್ತು ಸಾಗರ್‌ನಗರ ವೀಕ್ಷಣಾ ಕೇಂದ್ರದ ಬಳಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಅನುಷಾಳೊಂದಿಗೆ ಪ್ರೇಮ ವಿವಾಹವಾಗಿದ್ದರು. ಬಳಿಕ ಹಲವಾರು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸೆಂಚುರಿ ಬಾರಿಸಿದ್ದಕ್ಕೆ ಪಾಕ್‌ ಸೂಪರ್‌ ಲೀಗಲ್ಲಿ ಸಿಕ್ಕಿದ್ದು ಹೇರ್ ಡ್ರೈಯರ್‌!

    ಘಟನೆಯ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರದ್ದು ಕಾಂಟ್ರ್ಯಾಕ್ಟ್‌ ಮ್ಯಾರೇಜ್, ಹಿಂದೂಗಳ ರೀತಿ ಏಳು ಜನ್ಮದ ಅನುಬಂಧ ಅಲ್ಲ: ರಾಯರೆಡ್ಡಿ

  • ಕೋಡ್ ವರ್ಡ್ ಮೂಲಕ ಗಾಂಜಾ ಮಾರುತ್ತಿದ್ದ ಮೂವರು ಅರೆಸ್ಟ್

    ಕೋಡ್ ವರ್ಡ್ ಮೂಲಕ ಗಾಂಜಾ ಮಾರುತ್ತಿದ್ದ ಮೂವರು ಅರೆಸ್ಟ್

    ಬೆಂಗಳೂರು: ಕೋಡ್ ವರ್ಡ್‍ಗಳ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳನ್ನು ರಾಜಧಾನಿಯ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಅಜಯ್, ರಾಜು, ರವಿ ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ 40 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಗಾಂಜಾ ದಂಧೆಕೋರರು ಮಾಸ್ಟರ್ ಪ್ಲಾನ್ ಮಾಡಿ ಕೋಡ್ ವರ್ಡ್‍ಗಳ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಮೆಣಸಿನಕಾಯಿ ಬಜ್ಜಿಯಂತೆ ಹಲ್ಲಿಯನ್ನು ಸಲೀಸಾಗಿ ತಿಂದ ಭೂಪ

    ಮೂರ್ನಾಲ್ಕು ಕಡೆ ವಾಹನ ಬದಲಿಸಿ ಬೆಂಗಳೂರಿಗೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದರು. ಒಡಿಶಾದಿಂದ ವಿಶಾಖಪಟ್ಟಣಕ್ಕೆ ಒಂದು ವಾಹನ, ಅಲ್ಲಿಂದ ಬೆಂಗಳೂರಿಗೆ ಮತ್ತೊಂದು ವಾಹನದಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

    ಸದ್ಯ ಮಾರತ್ತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.

  • ಗೆಳತಿ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆಗೈದು ಆತ್ಮಹತ್ಯೆಗೆ ಯತ್ನ

    ಗೆಳತಿ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆಗೈದು ಆತ್ಮಹತ್ಯೆಗೆ ಯತ್ನ

    – ಜೀವನ್ಮರಣ ಹೋರಾಟದಲ್ಲಿ ಯುವತಿ

    ಹೈದರಾಬಾದ್: ಯುವಕನೋರ್ವ ಗೆಳತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದಿದೆ.

    ಶ್ರೀಕಾಂತ್ ಗೆಳತಿ ಪ್ರಿಯಾಂಕ ಮೇಲೆ ಚಾಕುವಿನಿಂದ ದಾಳಿ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಿಯಾಂಕ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ನಡುರಸ್ತೆಯಲ್ಲಿ ದಾಳಿ ನಡೆದಿದ್ದು, ಸ್ಥಳೀಯರು ಇಬ್ಬರನ್ನೂ ಕೆಜಿಹೆಚ್ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯ ಕತ್ತಿನ ಭಾಗದಲ್ಲಿ ದೊಡ್ಡ ಪ್ರಮಾಣದ ಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾಳೆ ಎಂದು ಕೆಜಿಹೆಚ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

    ಶ್ರೀಕಾಂತ್ ಮತ್ತು ಪ್ರಿಯಾಂಕ ಪರಸ್ಪರ ಪ್ರೀತಿಸುತ್ತಿದ್ದರು ಎಂದು ವರದಿಯಾಗಿದ್ದು, ಶ್ರೀಕಾಂತ್ ನ ಈ ನಿರ್ಧಾರಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

     

  • ಪ್ರತಿಪಕ್ಷಗಳ ರಾಜಕಾರಣದಿಂದ ಶತ್ರುಗಳು ಲಾಭ ಪಡೆಯುತ್ತಿದ್ದಾರೆ: ಪ್ರಧಾನಿ ಮೋದಿ

    ಪ್ರತಿಪಕ್ಷಗಳ ರಾಜಕಾರಣದಿಂದ ಶತ್ರುಗಳು ಲಾಭ ಪಡೆಯುತ್ತಿದ್ದಾರೆ: ಪ್ರಧಾನಿ ಮೋದಿ

    ವಿಶಾಖಪಟ್ಟಣಂ: ದೇಶದಲ್ಲಿ ಪ್ರತಿಪಕ್ಷಗಳು ಮಾಡುತ್ತಿರುವ ರಾಜಕಾರಣದ ಆಟಗಳಿಂದ ಶತ್ರು ದೇಶ ಲಾಭ ಪಡೆಯುತ್ತಿದೆ. ಇದರಿಂದ ಭಾರತಕ್ಕೆ ಹಾನಿ ಅನುಭವಿಸುವಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.

    ಶುಕ್ರವಾರದಂದು ತಮಿಳುನಾಡಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮೋದಿ ಅವರು ಬಳಿಕ ಕನ್ಯಾಕುಮಾರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತ, ಕೆಲವು ವಿರೋಧ ಪಕ್ಷಗಳು ಮೋದಿ ಮೇಲಿರುವ ದ್ವೇಷಕ್ಕೆ ದೇಶವನ್ನು ಕೂಡ ದ್ವೇಷಿಸಲು ಆರಂಭಿಸಿವೆ. ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟವನ್ನು ಇಡೀ ಜಗತ್ತೇ ಬೆಂಬಲಿಸುತ್ತಿದೆ. ಆದ್ರೆ ಭಾರತದಲ್ಲೇ ಇರುವ ಕೆಲವು ಪಕ್ಷಗಳು ಹಾಗೂ ಅದರ ನಾಯಕರು ನಮ್ಮ ಹೋರಾಟವನ್ನು ಅನುಮಾನದ ದೃಷ್ಟಿಯಿಂದ ನೋಡುತ್ತಿದ್ದಾರೆ. ಇದರಿಂದ ಶತ್ರು ದೇಶಕ್ಕೆ ಲಾಭವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

    26/11ರಲ್ಲಿ ಮುಂಬಯಿ ದಾಳಿಯಾದಾಗ ಅಂದಿನ ಸರ್ಕಾರ ಯಾವ ಕ್ರಮವನ್ನು ತೆಗೆದುಕೊಳ್ಳಲಿಲ್ಲ. ಆದ್ರೆ ಉರಿ ದಾಳಿಯಾದಾಗ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರಿಗೆ ಪಾಠ ಕಲಿಸಿತ್ತು. ಬಳಿಕ ಪುಲ್ವಾಮ ದಾಳಿ ನಡೆದಾಗ ಭಾರತೀಯ ವಾಯುಪಡೆ ಏರ್ ಸ್ಟ್ರೈಕ್ ಮಾಡಿರುವುದು ನಿಮ್ಮೆಲ್ಲರಿಗೂ ಗೊತ್ತಿದೆ. ನಾವು ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಉಗ್ರರ ವಿರುದ್ಧ ಹೋರಾಡಲು ಸೇನೆಗೆ ನಮ್ಮ ಸರ್ಕಾರ ಮುಕ್ತ ಅವಕಾಶ ನೀಡಿದೆ. ಉಗ್ರರ ಕೈಯಲ್ಲಿ ಭಾರತ ಅಸಹಾಯಕವಾಗಿ ಸಿಲುಕುವ ಕಾಲ ಮುಗಿದೋಗಿದೆ. ದೇಶ ಸೇವೆಯಲ್ಲಿರುವ ನಮ್ಮ ಯೋಧರಿಗೆ ನನ್ನ ನಮನಗಳು ಎಂದು ಹೇಳಿದರು.

    ಬಳಿಕ ಮಹಾ ಘಟಬಂಧನ ಕುರಿತು ಮಾತನಾಡಿ, ಯಾಕೆ ಪ್ರತಿಪಕ್ಷ ನಾಯಕರು ಭಾರತವನ್ನು ದುರ್ಬಲಗೊಳಿಸಲು ನೋಡುತ್ತಿದ್ದಾರೆ ಅಂತ ಗೊತ್ತಾಗುತ್ತಿಲ್ಲ. ಪಕ್ಷಗಳ ರಾಜಕಾರಣಕ್ಕೆ ದೇಶವನ್ನು ದುರ್ಬಲಗೊಳಿಸಿ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದ್ದಾರೆ. ಯಾಕೆ ಈ ರೀತಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ? ಮೋದಿ ಮೇಲಿನ ದ್ವೇಷಕ್ಕೆ ದೇಶವನ್ನು ಯಾಕೆ ದ್ವೇಷಿಸಲು ಆರಂಭಿಸಿದ್ದಾರೆ? ಇದರಿಂದ ಪಾಕಿಸ್ತಾನ ಲಾಭ ಪಡೆಯುತ್ತಿದೆ. ಎಂದು ವಿಪಕ್ಷ ನಾಯಕರನ್ನು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv