Tag: Vishnupriya

  • ಕಣ್ಸನ್ನೆ ಹುಡುಗಿಯ ‘ವಿಷ್ಣುಪ್ರಿಯ’ ಚಿತ್ರದ ಲವ್ ಸಾಂಗ್ ರಿಲೀಸ್

    ಕಣ್ಸನ್ನೆ ಹುಡುಗಿಯ ‘ವಿಷ್ಣುಪ್ರಿಯ’ ಚಿತ್ರದ ಲವ್ ಸಾಂಗ್ ರಿಲೀಸ್

    ವಿಷ್ಣುಪ್ರಿಯ (Vishnupriya)  1990ರ  ಕಾಲದಲ್ಲಿ ನಡೆದಂಥ ಮಾಸ್ ಲವ್ ಸ್ಟೋರಿ. ಕನ್ನಡದಲ್ಲಿ ಭರವಸೆಯ  ನಾಯಕನಾಗಿ ಗುರುತಿಸಿಕೊಂಡಿರುವ ಯುವನಟ ಶ್ರೇಯಸ್ ಮಂಜು ಈ ಚಿತ್ರದಲ್ಲಿ  ಲವರ್ ಬಾಯ್ ವಿಷ್ಣು ಆಗಿ  ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ಅಲ್ಲದೆ ಪ್ರಿಯಾ ಪಾತ್ರದಲ್ಲಿ ಮಲಯಾಳಂನ ಪ್ರಿಯಾ ವಾರಿಯರ್ ನಟಿಸಿದ್ದಾರೆ. ತೊಂಭತ್ತರ ದಶಕದಲ್ಲಿ ನಡೆದಂಥ ಒಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಈ ಚಿತ್ರದ ಮೂಲಕ  ನಿರ್ದೇಶಕ ವಿ.ಕೆ. ಪ್ರಕಾಶ್  ಅವರು ನಿರೂಪಿಸಿದ್ದಾರೆ‌. ವಿಷ್ಣುಪ್ರಿಯ ಸಿನಿಮಾದ ಮೊದಲ ಪ್ರೇಮ ಗೀತೆಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟ ಶರಣ್ ಹಾಗೂ ನಟಿ ರುಕ್ಮಿಣಿ ವಸಂತ್ ಸೇರಿ  ನಾಗೇಂದ್ರ ಪ್ರಸಾದ್ ರಚನೆಯ ಚಿಗುರು ಚಿಗುರು ಸಮಯ ಹಾಡನ್ನು ಲಾಂಚ್ ಮಾಡಿದರು. ನಿರ್ಮಾಪಕರಾದ ರಮೇಶ್ ರೆಡ್ಡಿ, ಚೇತನ್ ಕುಮಾರ್ , ಸೂರಪ್ಪಬಾಬು, ಅಲ್ಲದೆ ನಿರ್ದೇಶಕರಾದ ಗುರು ದೇಶಪಾಂಡೆ, ದಯಾಳ್ ಪದ್ಮನಾಬನ್, ಭರ್ಜರಿ ಚೇತನ್, ಸತ್ಯಪ್ರಕಾಶ್, ಮಹೇಶ್ ಕುಮಾರ್,  ನಟ ವಿಕ್ರಂ ರವಿಚಂದ್ರನ್ ಮುಂತಾದವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    ನಟ ಶರಣ್ ಮಾತನಾಡುತ್ತ ಕೆಲವು ಹಾಡುಗಳು ಥಟ್ ಅಂತ ಮೆದುಳಿಗೇ ನಾಟುತ್ತವೆ. ಅಂಥಾ ಹಾಡನ್ನು ನಾನಿಲ್ಲಿ ನೋಡಿದೆ. ಇದೊಂದು ಫೀಲ್ ಗುಡ್ ಸಿನಿಮಾ. ನಿರ್ದೇಶಕರು ಪ್ರತಿ ಫ್ರೇಮ್ ನಲ್ಲೂ ಕಾಣಿಸ್ತಾರೆ. ಟೈಟಲ್ ನಲ್ಲೇ ವಿಷ್ಣು ಸರ್ ಇದ್ದಾರೆ. 2024ನ್ನು ಸ್ಟಾರ್ಟ್ ಮಾಡಲು ಅದ್ಭುತವಾದ ಸಾಂಗ್ ಸಿಕ್ಕಿದೆ ಎಂದರು.

    ನಂತರ ದಯಾಳ್ ಪದ್ಮನಾಭನ್ ಮಾತನಾಡಿ ಮಂಜು ಒಂದು ಸಿನಿಮಾ ಮಾಡುವಾಗ ತುಂಬಾ ಕ್ಲಿಯರ್ ಆಗಿರ್ತಾರೆ. ಅವರಿಲ್ಲಿ ಬರೀ  ಪ್ರೊಡ್ಯೂಸರ್ ಆಗಿ ಸಿನಿಮಾ ಮಾಡಿಲ್ಲ. ಒಬ್ಬ ತಂದೆಯಾಗಿ ಜವಾಬ್ದಾರಿ ಇದೆ ಎಂದರು. ಗುರು ದೇಶಪಾಂಡೆ ಮಾತನಾಡಿ ಶ್ರೇಯಸ್ ತುಂಬಾ ಹಾರ್ಡ್ ವರ್ಕ್ ಮಾಡೋ‌ಹುಡುಗ ಎಂದರು. ನಿರ್ಮಾಪಕ ಕೆ.ಮಂಜು ಮಾತನಾಡುತ್ತ  ಚಿತ್ರರಂಗ ನನಗೆ ಹಣ, ಗೌರವ ಎಲ್ಲವನ್ನೂ ಕೊಟ್ಟಿದೆ. ಒಬ್ಬ ರೈತ ಒಳ್ಳೆ ಬೆಳೆ ಬೆಳೆಯಬೇಕಾದರೆ ಮಳೆಯನ್ನ ನಂಬ್ತಾನೆ, ಆದೇರೀತಿ ನನ್ನ ಮಗನನ್ನು ಚಿತ್ರರಂಗದಲ್ಲಿ ಬೆಳೆಸಲು ನಿರ್ದೇಶಕರನ್ನು ನಂಬಿದ್ದೇನೆ. ಈಗಿನ ಕೆಲ ನಿರ್ದೇಶಕರಿಗೆ ಜವಾಬ್ದಾರಿ ಇಲ್ಲ. ನಿರ್ಮಾಪಕ ದುಡ್ಡನ್ನು ಎಲ್ಲಿಂದ ತಂದು ಹಾಕ್ತಾನೆ ಅಂತ ಅವರು ಅರ್ಥಮಾಡಿಕೊಳ್ಳಬೇಕು. ಚೆನ್ನಾಗಿ ಬರಬೇಕೆಂಬ ಕಾರಣದಿಂದ  ಸಿನಿಮಾ ಲೇಟಾಗಿದೆ. ಮುಂಚಿತವಾಗೇ ಯೂಥ್, ಪ್ರೇಮಿಗಳಿಗೆ ನಮ್ಮ ಸಿನಿಮಾನ  ತೋರಿಸುತ್ತೇನೆ. ಶಿವರಾತ್ರಿಗೆ ಅಥವಾ ಏಪ್ರಿಲ್ 5ಕ್ಕೆ ರಿಲೀಸ್ ಮಾಡಬೇಕೆನ್ನುವ ಪ್ಲಾನಿದೆ ಎಂದು ಹೇಳಿದರು.

    ಗಂಡುಗಲಿ ಕೆ. ಮಂಜು ಅವರ ಬಿಂದಿಯಾ ಪ್ರೊಡಕ್ಷನ್ಸ್ ನಿರ್ಮಾಣದ, ರಾಷ್ಟ್ರಪ್ರಶಸ್ತಿ ವಿಜೇತ ವಿ.ಕೆ. ಪ್ರಕಾಶ್ ಅವರ ನಿರ್ದೇಶನದ ಈ ಚಿತ್ರದಲ್ಲಿ ಕೌಟುಂಬಿಕ ಮೌಲ್ಯಗಳ ಹಿನ್ನೆಲೆಯ ವಿಶಿಷ್ಠ ಪ್ರೇಮ ಕಥಾನಕವಿದೆ. ಮಲೆಯಾಳಂನ  ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆ ಈ ಚಿತ್ರದ ಹಾಡುಗಳಿಗಿದೆ.ವಿನೋದ್ ಭಾರತಿ ಅವರ ಛಾಯಾಗ್ರಹಣ, ವಿಕ್ರಂ ಮೋರ್, ಜಾಲಿ ಬಾಸ್ಟಿನ್, ವಿನೋದ್ ಅವರ ಸಾಹಸ ಸಂಯೊಜನೆ ಈ ಚಿತ್ರಕ್ಕಿದೆ.

     

    ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕ  ಶ್ರೇಯಸ್ ಮಂಜು ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಅಚ್ಯುತ್ ಕುಮಾರ್ , ನಿಹಾಲ್ ರಾಜ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

  • ಜ.27ಕ್ಕೆ ‘ವಿಷ್ಣುಪ್ರಿಯ’ ಚಿತ್ರದ ಸಾಂಗ್ ರಿಲೀಸ್

    ಜ.27ಕ್ಕೆ ‘ವಿಷ್ಣುಪ್ರಿಯ’ ಚಿತ್ರದ ಸಾಂಗ್ ರಿಲೀಸ್

    ಡ್ಡೆಹುಲಿ ಚಿತ್ರದ  ಮೂಲಕ ಭರವಸೆಯ  ನಾಯಕನಾಗಿ ಗುರುತಿಸಿಕೊಂಡಿದ್ದ ಯುವನಟ ಶ್ರೇಯಸ್ ಮಂಜು (Shreyas Manju) ಇದೀಗ  ವಿಷ್ಣುಪ್ರಿಯನಾಗಿ (Vishnupriya)  ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ತೊಂಬತ್ತರ ದಶಕದಲ್ಲಿ ನಡೆಯುವ  ರೆಟ್ರೋ ಪ್ರೇಮಕಥಾನಕ ಈ ಚಿತ್ರದಲ್ಲಿದ್ದು, ನಟ ಶ್ರೇಯಸ್ ಅವರ ಪಾಲಿಗೂ ಇದೊಂದು ಮಹತ್ವದ ಚಿತ್ರವಾಗಿದೆ.

    ಜ.27ರಂದು ವಿಷ್ಣುಪ್ರಿಯ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ. ಅದೇ ದಿನ ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಲಿದೆ.  ಮಲೆಯಾಳಂನ  ಗೋಪಿ ಸುಂದರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡುಗಳು ಕುತೂಹಲ‌ ಮೂಡಿಸಿವೆ.

    ಗಂಡುಗಲಿ ಕೆ. ಮಂಜು ಅವರ  ನಿರ್ಮಾಣದ, ರಾಷ್ಟ್ರಪ್ರಶಸ್ತಿ ವಿಜೇತ ವಿ.ಕೆ. ಪ್ರಕಾಶ್ ಅವರ ನಿರ್ದೇಶನದ ಈ ಚಿತ್ರದಲ್ಲಿ ತೊಂಭತ್ತರ ದಶಕದ ಕೌಟುಂಬಿಕ ಮೌಲ್ಯಗಳ ಹಿನ್ನೆಲೆಯ ವಿಶಿಷ್ಠ ಪ್ರೇಮ ಕಥಾನಕವಿದೆ.

     

    ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರದಲ್ಲಿ  ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಅವರು ಶ್ರೇಯಸ್ ಮಂಜು ಅವರ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಅಚ್ಯುತ್ ಕುಮಾರ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

  • ಅಂದು ಕಣ್ಸನ್ನೆ, ಇಂದು ಮಾದಕ ಫೋಟೋ ಹರಿಬಿಟ್ಟು ವೈರಲ್ ಆದ ಪ್ರಿಯಾ ವಾರಿಯರ್

    ಅಂದು ಕಣ್ಸನ್ನೆ, ಇಂದು ಮಾದಕ ಫೋಟೋ ಹರಿಬಿಟ್ಟು ವೈರಲ್ ಆದ ಪ್ರಿಯಾ ವಾರಿಯರ್

    ಕೇವಲ ಕಣ್ಸನ್ನೆ ಮೂಲಕ ರಾತ್ರೋರಾತ್ರಿ ಫೇಮಸ್ ಆದ ಹುಡುಗಿ ಪ್ರಿಯಾ ವಾರಿಯರ್. ಕೇವಲ ಕಣ್ಸನ್ನೆ ಮೂಲಕ ಅಪಾರ ಅಭಿಮಾನಿಗಳನ್ನೂ ಹೊಂದಿರುವ ಪ್ರಿಯಾ ವಾರಿಯರ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಬಾರಿ ಅವರು ಮಾದಕ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಪಡ್ಡೆ ಹುಡುಗರಂತೂ ಪ್ರಿಯಾ ಫೋಟೋಗೆ ಫಿದಾ ಆಗಿದ್ದಾರೆ. ಸೆಕ್ಸಿ ಲುಕ್ ಗೆ ಬಿದ್ದೇ ಹೋಗಿದ್ದಾರೆ.

    ಮುಂಬೈ ಹೋಟೆಲ್ ವೊಂದರಲ್ಲಿ ಪ್ರಿಯಾ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಹಾಟ್ ಹಾಟ್ ಆಗಿ ಕಂಡಿದ್ದಾರೆ. ಅದರಲ್ಲೂ ಕೆಂಪು ಬಣ್ಣದ ಟಾಪ್ ಅವರ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ, ಕುಳಿತಿರುವ ಭಂಗಿ ಮಾತ್ರ ಅರಸಿಕರ ಎದೆಯಲ್ಲೂ ರಸಿಕತೆ ಹುಟ್ಟಿಸುವಂತಿದೆ. ಎದೆಸೀಳು ಕಾಣಿಸುವಂತೆ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಆ ಫೋಟೋಗಳು ವೈರಲ್ ಆಗಿವೆ. ಲಕ್ಷಾಂತರ ಲೈಕ್ಸ್ ಕೂಡ ಬಂದಿವೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಇನ್ಸ್ಟಾದಲ್ಲಂತೂ ಸಖತ್ ಆಕ್ಟಿವ್ ಆಗಿರುವ ಪ್ರಿಯಾ ವಾರಿಯರ್ ಏಳು ಮಿಲಿಯನ್ಸ್ ಫಾಲೋವರ್ಸ್ ಹೊಂದಿದ್ದಾರೆ. ಅಲ್ಲದೇ, ಇತರ ಸೋಷಿಯಲ್ ಮೀಡಿಯಾಗಳಲ್ಲೂ ಅವರು ಸಕ್ರೀಯರಾಗಿದ್ದಾರೆ. ಸದ್ಯ ಕನ್ನಡದಲ್ಲೂ ಅವರು ಒಂದು ಸಿನಿಮಾ ಮಾಡಿದ್ದು, ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಜೊತೆ ನಾಯಕಿಯಾಗಿ ನಟಿಸಿದ್ದಾರೆ. ವಿಷ್ಣುಪ್ರಿಯಾ ಹೆಸರಿನ ಈ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದೆ.

    ಸದ್ಯ ಪ್ರಿಯಾ ಮುಂಬೈನಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ಪ್ರಾಜೆಕ್ಟ್ ವೊಂದರಲ್ಲಿ ಭಾಗವಹಿಸಲು ಅವರು ಮುಂಬೈನಲ್ಲಿದ್ದಾರೆ. ತಾವು ಉಳಿದುಕೊಂಡಿರುವ ಹೋಟೆಲ್ ನಲ್ಲಿ ಈ ಫೋಟೋಗಳನ್ನು ಸೆರೆ ಹಿಡಿದ್ದಾರೆ. ಈ ಫೋಟೋಗೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]