Tag: Vishva Hindu Parishad

  • ಚುನಾವಣೆ ವೇಳೆ ಶಾಂತಿ ಕದಡಲು VHP ಅಧ್ಯಕ್ಷನ ಮೇಲೆ ಫೈರಿಂಗ್: ಬೋಪಯ್ಯ

    ಚುನಾವಣೆ ವೇಳೆ ಶಾಂತಿ ಕದಡಲು VHP ಅಧ್ಯಕ್ಷನ ಮೇಲೆ ಫೈರಿಂಗ್: ಬೋಪಯ್ಯ

    ಮಡಿಕೇರಿ: ಚುನಾವಣೆ ಸಮಯದಲ್ಲಿ ಸಮಾಜದ ಶಾಂತಿ ಕದಡಲು ಕುತಂತ್ರ ನಡೆದಿದೆ ಎಂದು ಶಾಸಕ ಕೆ.ಜಿ ಬೋಪಯ್ಯ (K.G Bopaiah) ಕಿಡಿಕಾರಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು (Kodagu) ಜಿಲ್ಲೆಯ ವಿಹೆಚ್‍ಪಿ (Vishva Hindu Parishad) ಅಧ್ಯಕ್ಷ ಹಾಗೂ ವಕೀಲ ಕೃಷ್ಣಮೂರ್ತಿಯವರ ಮೇಲೆ ನಡೆದ ಗುಂಡಿನ ದಾಳಿಯನ್ನು (Firing) ತೀವ್ರವಾಗಿ ಖಂಡಿಸಿದ್ದಾರೆ. ಈ ಹಿಂದೆ ಸುಳ್ಯ ತಾಲೂಕಿನ ಯುವಕ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿಸಿದ್ದ ಅನ್ಯಕೋಮಿನವರು ಕೊಡಗಿನಲ್ಲಿ ತರಬೇತಿ ಪಡೆದಿರುವುದು ತನಿಖೆ ವೇಳೆ ಬಹಿರಂಗಗೊಂಡಿತ್ತು. ಗುಂಡಿನ ದಾಳಿ ಪ್ರಕರಣದಲ್ಲಿಯೂ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೊಡಗು ವಿಹೆಚ್‍ಪಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

    ಕೃಷ್ಣಮೂರ್ತಿ ಬುಧವಾರ ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಚಟ್ಟಳ್ಳಿಯ (Chettalli) ಗ್ರಾಮ ಪಂಚಾಯಿತಿ ಸದಸ್ಯ ಕಂಠಿ ಕಾರ್ಯಪ್ಪರನ್ನು ರಾತ್ರಿ 11:30ರ ವೇಳೆಗೆ ಅವರ ಮನೆಯ ಬಳಿ ಇಳಿಸಿ ಹೊರಟಿದ್ದರು. ಈ ವೇಳೆ ಅಬ್ಯಾಲದ ಬಳಿ ಗುಂಡಿನ ದಾಳಿ ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಗುಂಡು ತಗಲಿದ್ದರಿಂದ ಕೃಷ್ಣಮೂರ್ತಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಮಡಿಕೇರಿಗೆ ಬಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

    ಸ್ಥಳಕ್ಕೆ ಕೊಡಗು ಎಸ್‍ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿ (Madikeri) ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಚುನಾವಣೆ (Election) ಸಂದರ್ಭದಲ್ಲಿ ಕೋವಿಗಳನ್ನು ಸಮೀಪದ ಪೊಲೀಸ್ ಠಾಣೆಗಳಲ್ಲಿ ಒಪ್ಪಿಸುವ ಕ್ರಮವಿದೆ. ಹೀಗಾಗಿ ಪರವಾನಿಗೆ ರಹಿತ ಕೋವಿಯಿಂದ ದಾಳಿ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚುನಾವಣೆ ಹೊತ್ತಿನಲ್ಲಿ ಹಿಂದೂ ಪರ ಸಂಘಟನೆ ಮುಖಂಡನ ಹತ್ಯೆಗೆ ಯತ್ನ ನಡೆದಿತ್ತಾ ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ – ಮೃತಪಟ್ಟವರಲ್ಲಿ ಇಬ್ಬರು ಕರ್ನಾಟಕದವರು

  • ಕೊಡಗು ವಿಹೆಚ್‍ಪಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

    ಕೊಡಗು ವಿಹೆಚ್‍ಪಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

    ಮಡಿಕೇರಿ: ಕೊಡಗಿನ (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು (Firing) ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.

    ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ಬರುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಈ ಸಂಬಂಧ ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎಂತಹ ನಾಯಕರಾದರೂ ಸಿದ್ದರಾಮಯ್ಯ ನನ್ನಂತೆ ಒಬ್ಬ ಅಭ್ಯರ್ಥಿ: ಸೋಮಣ್ಣ

  • ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ಹಾಸನ: ವಿಶ್ವ ಹಿಂದೂ ಪರಿಷತ್ (Vishva Hindu Parishad) ಹಾಗೂ ಬಜರಂಗದಳ (Bajrang Dal) ವತಿಯಿಂದ ಮಂಗಳವಾರ ಹಾಸನ (Hassan) ನಗರದಲ್ಲಿ ಹಮ್ಮಿಕೊಂಡಿರುವ ಹನುಮಜಯಂತಿ (Hanumajayanti) ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ನಗರ ವ್ಯಾಪ್ತಿಯಲ್ಲಿ ಮದ್ಯ (Alcohol) ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂಎಸ್ ಅರ್ಚನಾ ಆದೇಶ ಹೊರಡಿಸಿದ್ದಾರೆ.

    ಹಾಸನ ನಗರ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸಂತೇಪೇಟೆ ವೃತ್ತದಿಂದ ಬೃಹತ್ ಶೋಭಾಯಾತ್ರೆ ಆರಂಭಗೊಳ್ಳಲಿದ್ದು ಎನ್‌ಆರ್ ವೃತ್ತ, ಮಹಾವೀರ ವೃತ್ತ, ಸಹ್ಯಾದ್ರಿ ವೃತ್ತ, ಸೀತಾರಾಮಾಂಜನೇಯ ದೇವಸ್ಥಾನದ ರಸ್ತೆ ಮೂಲಕ ಯಾತ್ರೆ ಸಾಗಲಿದೆ. ಬಸಟ್ಟಿ ಕೊಪ್ಪಲು, ಎಂಜಿ ರಸ್ತೆ, ಶಂಕರಮಠ ರಸ್ತೆ, ಶಕ್ತಿಗಣಪತಿ ದೇವಸ್ಥಾನ ವೃತ್ತ, ಕುವೆಂಪುನಗರ, ಬಿಎಂ ರಸ್ತೆ ಮೂಲಕ ರೈಲ್ವೆ ನಿಲ್ದಾಣದವರೆಗೆ ಶೋಭಾಯಾತ್ರೆ ನಡೆಯಲಿದೆ. ಇದನ್ನೂ ಓದಿ: ಮಾಜಿ ಶಿಷ್ಯನ ವಿರುದ್ಧ ತೊಡೆ ತಟ್ಟಲಿದ್ದಾರೆ ಸಿದ್ದರಾಮಯ್ಯ – ಕೋಲಾರದಲ್ಲೇ ಸ್ಪರ್ಧೆ ಯಾಕೆ?

    ಶೋಭಾಯಾತ್ರೆಯಲ್ಲಿ 15-20 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಂಜೆ 5:30 ಕ್ಕೆ ರೈಲ್ವೇ ನಿಲ್ದಾಣ ಮುಂಭಾಗ ಸಾರ್ವಜನಿಕ ಸಮಾರಂಭ ಕಾರ್ಯಕ್ರಮ ಆಯೋಜಿಸಿದ್ದು ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ, ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಬೆಲಗೂರು ಮಾರುತಿ ಪೀಠದ ವಿಜಯಮಾರುತಿ ಶರ್ಮ ಗುರುಗಳು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹಾಸನ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಅತ್ತೆ ಹೆಬ್ಬಾಳ್ಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿಮಠ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k