Tag: Vishwambhara film

  • ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ ಸಿನಿಮಾದಲ್ಲಿ ಭಜರಂಗಿ ಲೋಕಿ

    ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’ ಸಿನಿಮಾದಲ್ಲಿ ಭಜರಂಗಿ ಲೋಕಿ

    ನ್ನಡ ಮತ್ತು ಪರಭಾಷಾ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಭಜರಂಗಿ ಲೋಕಿ ಈಗ ತೆಲುಗಿನ ಮತ್ತೊಂದು ಮೆಗಾ ಪ್ರಾಜೆಕ್ಟ್‌ನಲ್ಲಿ ನಟಿಸಿದ್ದಾರೆ. ಬಹುನಿರೀಕ್ಷಿತ ‘ವಿಶ್ವಂಭರ’ (Vishambhara) ಸಿನಿಮಾದಲ್ಲಿ ಭಜರಂಗಿ ಲೋಕಿ (Bhajarangi Loki) ಕೂಡ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸೊಂಟ ಕಾಣಿಸುವಂತೆ ಹಸಿರು ಸೀರೆಯುಟ್ಟು ಬಂದ ಉರ್ಫಿ – ಒಳಉಡುಪು ಎಲ್ಲಿ ಹೋಯ್ತು ಅಂದ ನೆಟ್ಟಿಗರು

    ಕನ್ನಡದ ಚುಟು ಚುಟು ಚೆಲುವೆ ಆಶಿಕಾ ರಂಗನಾಥ್ (Ashika Ranganath) ಬಳಿಕ ಭಜರಂಗಿ ಲೋಕಿ ಅಲಿಯಾಸ್ ಸೌರವ್ ಲೋಕೇಶ್ (Saurav Lokesh) ಅವರು ಚಿರಂಜೀವಿ ನಟನೆಯ ‘ವಿಶ್ವಂಭರ’ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಈ ಚಿತ್ರ ವಿಶೇಷವಾಗಿ ರೆಡಿಯಾಗುತ್ತಿದೆ. ಸಿನಿಮಾದಲ್ಲಿ ಸ್ಪೆಷಲ್ ರೋಲ್‌ನಲ್ಲಿ ನಟಿಸಿದ್ದಾರೆ. ಈ ಹಿಂದೆ ಎಂದೂ ಕಾಣಿಸಿಕೊಂಡಿರದ ಶೇಡ್‌ನಲ್ಲಿ ಅವರು ನಟಿಸಿದ್ದಾರೆ. ಆ ಪಾತ್ರ ಹೇಗಿರುತ್ತೆ ಎಂಬುದನ್ನು ಸಿನಿಮಾ ರಿಲೀಸ್ ಆದ್ಮೇಲೆ ಕಾದುನೋಡಬೇಕಿದೆ.

    ಈ ಹಿಂದೆಯೂ ಕೂಡ ಚಿರಂಜೀವಿ, ರಾಮ್ ಚರಣ್ ನಟನೆಯ ‘ಆಚಾರ್ಯ’ ಸಿನಿಮಾದಲ್ಲಿ ಭಜರಂಗಿ ಲೋಕಿ ನಟಿಸಿದ್ದರು. ಲೋಕಿ ಅವರ ಟ್ಯಾಲೆಂಟ್ ನೋಡಿಯೇ ಚಿತ್ರತಂಡ ಮತ್ತೊಮ್ಮೆ ಮೆಗಾಸ್ಟಾರ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದೆ.

    ಇನ್ನೂ ಚಿರಂಜೀವಿ ಸಿನಿಮಾದಲ್ಲಿ ತ್ರಿಷಾ, ಆಶಿಕಾ, ಮೀನಾಕ್ಷಿ ಚೌಧರಿ, ಸೇರಿದಂತೆ ಅನೇಕರು ನಟಿಸಿದ್ದಾರೆ. ಮುಂದಿನ ವರ್ಷ ಜ.25ರಂದು ಸಿನಿಮಾ ಬಿಡುಗಡೆಯಾಗಲಿದೆ.

  • ಪತ್ನಿ ಜೊತೆ ಮೆಗಾಸ್ಟಾರ್ ಚಿರಂಜೀವಿ ಟೆಂಪಲ್ ರನ್

    ಪತ್ನಿ ಜೊತೆ ಮೆಗಾಸ್ಟಾರ್ ಚಿರಂಜೀವಿ ಟೆಂಪಲ್ ರನ್

    ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರು ಇಂದು (ಆ.22) 69ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪತ್ನಿ ಸುರೇಖಾ (Wife Surekha) ಜೊತೆ ತಿರುಪತಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:Kantara Chapter 1: ಕಳರಿಪಯಟ್ಟು ಕಲಿಕೆಯ ಫೋಟೋ ಹಂಚಿಕೊಂಡ ರಿಷಬ್‌ ಶೆಟ್ಟಿ

    ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಚಿರಂಜೀವಿ ಅವರು ತಿರುಪತಿ ಸನ್ನಿಧಿಗೆ ಭೇಟಿ ಕೊಡುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ನಟನ ಹುಟ್ಟುಹಬ್ಬದ ಹಿನ್ನೆಲೆ ‘ವಿಶ್ವಾಂಭರ’ (Vishwambhara) ಸಿನಿಮಾದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮೆಗಾ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದೆ ಚಿತ್ರತಂಡ.

    ತ್ರಿಶೂಲ ಹಿಡಿದು ಸಖತ್ ಮಾಸ್ ಲುಕ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಲುಕ್ ನೋಡಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ. ಜೊತೆಗೆ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಾಗಿದೆ.

    ಅಂದಹಾಗೆ, ‘ವಿಶ್ವಾಂಭರ’ ಸಿನಿಮಾದಲ್ಲಿ  ಚಿರಂಜೀವಿ ಜೊತೆ ತ್ರಿಷಾ, ಮೀನಾಕ್ಷಿ ಚೌಧರಿ, ಕನ್ನಡದ ನಟಿ ಆಶಿಕಾ ರಂಗನಾಥ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮುಂದಿನ ವರ್ಷ ಜ.25ರಂದು ಸಿನಿಮಾ ಬಿಡುಗಡೆಯಾಗಲಿದೆ.