Tag: vishwanath sajjanar

  • ಗದಗ ಜಿಲ್ಲೆಗೆ ವೈದ್ಯಕೀಯ ನೆರವು ನೀಡಿದ ತೆಲಂಗಾಣ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್

    ಗದಗ ಜಿಲ್ಲೆಗೆ ವೈದ್ಯಕೀಯ ನೆರವು ನೀಡಿದ ತೆಲಂಗಾಣ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್

    ಗದಗ: ಮೂಲತಃ ಗದಗ ಜಿಲ್ಲೆಯವರಾದ ವಿಶ್ವನಾಥ್ ಸಜ್ಜನರ್ ಸದ್ಯ ತೆಲಂಗಾಣ ರಾಜ್ಯದ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿಯಾದ ವಿಶ್ವನಾಥ ಸಜ್ಜನರ್ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ವೈದ್ಯಕೀಯ ನೆರವು ನೀಡಿದ್ದಾರೆ.

    22 ಆಕ್ಸಿಜನ್ ಕಾನ್ಸನ್ ಟ್ರೇಟರ್, 84 ಆಕ್ಸಿಜನ್ ಸಿಲಿಂಡರ್, 2 ಸಾವಿರ ಕೋವಿಡ್ ಕಿಟ್, 20 ಸಾವಿರ ಮಾಸ್ಕ್, 200 ಲೀಟರ್ ಸ್ಯಾನಿಟೈಸರ್, 1 ಸಾವಿರ ಫೇಸ್‍ಶೀಲ್ಡ್, 24 ಯುನಿಟ್ ರೆಮ್‍ಡೆಸಿವಿರ್ ಸೇರಿದಂತೆ ಇತರೆ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ರೇಪ್ ಮರ್ಡರ್ ಕೇಸ್ – ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ಸಹೋದರ, ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‍ನ ಡಾ.ಎಂ.ಸಿ.ಸಜ್ಜನರ ಅವರು ಜಿಲ್ಲಾಡಳಿತದ ಭವನದ ಆವರಣದಲ್ಲಿ ವೈದ್ಯಕೀಯ ಔಷಧಿ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್, ಡಿ.ಎಚ್.ಓ ಸತೀಶ್ ಬಸರಿಗಿಡದ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

  • ವಿಶ್ವನಾಥ್ ಸಜ್ಜನರ್ ಬೃಹತ್ ಫೋಟೋ ಇಟ್ಟು ಬೃಹತ್ ಮೆರವಣಿಗೆ

    ವಿಶ್ವನಾಥ್ ಸಜ್ಜನರ್ ಬೃಹತ್ ಫೋಟೋ ಇಟ್ಟು ಬೃಹತ್ ಮೆರವಣಿಗೆ

    ಗದಗ: ಪೊಲೀಸ್ ಅಫೀಸರ್ ವಿಶ್ವನಾಥ್ ಸಜ್ಜನರ್ ಬೃಹತ್ ಫೋಟೋ ಇಟ್ಟು ಅವರ ಸ್ವಗ್ರಾಮ ಅಸೂತಿಯಲ್ಲಿ ಮಧ್ಯರಾತ್ರಿಯಲ್ಲಿ ಬೃಹತ್ ಮೆರವಣಿಗೆ ಮಾಡಲಾಗಿದೆ.

    ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದರು. ಕಾಮುಕರನ್ನು ಹುಟ್ಟಡಗಿಸಿದ್ದು ವೀರ ಕನ್ನಡಿಗ ಅನ್ನೋದು ಗೊತ್ತಾಗುತ್ತಿದ್ದಂತೆ ಕರ್ನಾಟಕದ ಮೂಲೆ ಮೂಲೆಯಿಂದಲೂ ಪ್ರಶಂಸೆ ವ್ಯಕ್ತವಾಗಿ ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿತ್ತು.

    ಶನಿವಾರ ಮಧ್ಯರಾತ್ರಿ ವಿಶ್ವನಾಥ್ ಸಜ್ಜನರ ಅವರ ಸ್ವಗ್ರಾಮ ಅಸೂತಿ ಗ್ರಾಮದಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು. ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂತಿ ಗ್ರಾಮದಲ್ಲಿ ವಿಶ್ವನಾಥ್ ಸಜ್ಜನರ್ ಅವರ ತಂದೆ ಚನ್ನಬಸಪ್ಪ ವಾಸವಿದ್ದಾರೆ. ವಿಶ್ವನಾಥ್ ಸಜ್ಜನರ್ ಅವರು ಕೂಡ ಹುಟ್ಟಿ ಬೆಳೆದ ಊರು ಇದಾಗಿದ್ದು, ನಮ್ಮ ಮನೆ ಮಗ ಎಂದು ಜನ ಮಧ್ಯೆ ರಾತ್ರಿ ಸಂಭ್ರಮಾಚರಣೆ ಮಾಡಿದ್ದಾರೆ.

    ಟ್ಯಾಕ್ಟರ್ ನಲ್ಲಿ ಪೊಲೀಸ್ ಆಫೀಸರ್ ವಿಶ್ವನಾಥ್ ಸಜ್ಜನರ್ ಅವರ ಬೃಹತ್ ಫೋಟೋ ಮೆರವಣಿಗೆ ಮಾಡಿದ್ದಾರೆ. ದಾರಿಯದ್ದಕ್ಕೂ ಡೋಲು, ಮೇಳ ಬಾರಿಸುತ್ತಾ ಪಟಾಕಿ ಸಿಡಿಸಿ ಮೆರವಣಿಗೆ ಮಾಡಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ನಮ್ಮೂರ ಹೆಮ್ಮೆಯ ನಾಯಕ ಎಂದು ಓಕುಳಿ ಆಡಿ, ಪಟಾಕಿ ಸಿಡಿಸಿ, ಮನೆ ಮನೆಯಲ್ಲೂ ಹಬ್ಬ ಆಚರಿಸಿದ್ದಾರೆ. ಶನಿವಾರ ಸಂಜೆ 6.39 ರಿಂದ ಮೆರವಣಿಗೆ ಆರಂಭವಾಗಿದ್ದು, ಮಧ್ಯರಾತ್ರಿ 1 ಗಂಟೆಯವರೆಗೂ ಗ್ರಾಮ ಕೇರಿ ಕೇರಿಯಲ್ಲೂ ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ.

  • ಎನ್‍ಕೌಂಟರ್ ಯೋಗ್ಯ ಶಿಕ್ಷೆ, ಮಾನವ ಹಕ್ಕುಗಳ ಹೆಸರಿನಲ್ಲಿ ಒತ್ತಡ ಹಾಕಬೇಡಿ: ಮುತಾಲಿಕ್ ಮನವಿ

    ಎನ್‍ಕೌಂಟರ್ ಯೋಗ್ಯ ಶಿಕ್ಷೆ, ಮಾನವ ಹಕ್ಕುಗಳ ಹೆಸರಿನಲ್ಲಿ ಒತ್ತಡ ಹಾಕಬೇಡಿ: ಮುತಾಲಿಕ್ ಮನವಿ

    ಹುಬ್ಬಳ್ಳಿ: ಹೈದರಾಬಾದಿನಲ್ಲಿ ನಡೆದಿದ್ದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದು ಸ್ವಾಗತಾರ್ಹ, ದಯವಿಟ್ಟು ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬೇಡಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮನವಿ ಮಾಡಿದ್ದಾರೆ.

    ವಿಡಿಯೋ ಮೂಲಕ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರಿಗೆ ಶ್ರೀರಾಮ ಸೇನೆ ವತಿಯಿಂದ ಪ್ರಮೋದ್ ಮುತಾಲಿಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಅತ್ಯಾಚಾರಿಗಳ ಎನ್‍ಕೌಂಟರ್ ಮಾಡಿದ್ದು ಸ್ವಾಗತಾರ್ಹವಾದದ್ದು, ಪೊಲೀಸರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಈ ರೀತಿ ಎನ್‍ಕೌಂಟರ್ ಮಾಡಿ ಅತ್ಯಾಚಾರಿಗಳಿಗೆ ಪೊಲೀಸರು ಭಯ ಹುಟ್ಟುವಂತೆ ಮಾಡಿದ್ದಾರೆ. ಇದೊಂದು ಉತ್ತಮ ಹೆಜ್ಜೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

    ಅತ್ಯಾಚಾರ ಮಾಡುವ ಕಾಮುಕರಿಗೆ ಕನಸಿನಲ್ಲಿಯೂ ಈ ಎನ್‍ಕೌಂಟರ್ ನೆನಪು ಬರಬೇಕು. ಇಂತಹ ಒಳ್ಳೆಯ ಕಾರ್ಯ ಮಾಡಿದ ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಹಾಗೂ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

    ದಯವಿಟ್ಟು ಈ ವಿಚಾರಕ್ಕೆ ಮಾನವ ಹಕ್ಕುಗಳ ಹೆಸರಿನಲ್ಲಿ ಪೊಲೀಸರ ಮೇಲೆ ಒತ್ತಡ ಹಾಕಬಾರದು. ಎನ್‍ಕೌಂಟರ್ ಅತ್ಯಾಚಾರಿಗಳಿಗೆ ನೀಡಿರುವ ತಕ್ಕ ಶಿಕ್ಷೆಯಾಗಿದೆ. ಹಾಗೆಯೇ ನ್ಯಾಯಾಲಯಗಳಲ್ಲಿ ದೀರ್ಘಕಾಲದವರೆಗೆ ಅತ್ಯಾಚಾರ ಪ್ರಕರಣಗಳ ವಿಚಾರಣೆ ನಡೆಸುವದರಿಂದಲೇ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ ಎನ್ನುವುದನ್ನು ನ್ಯಾಯಾಲಯ ಕೂಡ ಯೋಚಿಸಬೇಕು. ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡುವುದು ಯೋಗ್ಯ ಶಿಕ್ಷೆ ಎಂದು ಮುತಾಲಿಕ್ ಅಭಿಪ್ರಾಯ ವ್ಯಕ್ತಪಡಿಸಿದರು.

  • ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

    ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

    – ಎನ್‍ಕೌಂಟರ್ ನಡೆಸಿಲ್ಲ, ಗುಂಡಿನ ಚಕಮಕಿಯಲ್ಲಿ ಸಾವು
    – ಆರೋಪಿಗಳಿಗೆ ಆಯುಧ ಬಳಕೆ ಗೊತ್ತಿತ್ತು
    – 4 ಭಾಷೆಯಲ್ಲಿ ವಿವರ ನೀಡಿದ ಸಜ್ಜನರ್

    ಹೈದರಾಬಾದ್: ನಾವು ಎನ್‍ಕೌಂಟರ್ ನಡೆಸಿದಲ್ಲ. ಪಿಸ್ತೂಲ್ ಕಸಿದುಕೊಂಡು ನಮ್ಮ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಕ್ಕೆ ಆತ್ಮರಕ್ಷಣೆಗಾಗಿ ನಾವು ಆರೋಪಿಗಳ ಮೇಲೆ ಶೂಟೌಟ್ ಮಾಡಿದ್ದೇವೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ತಿಳಿಸಿದ್ದಾರೆ.

    ಪಶುವೈದ್ಯೆ ದಿಶಾ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಪೊಲೀಸ್ ಶೂಟೌಟ್ ಬಗ್ಗೆ ವಿಶ್ವನಾಥ್ ಸಜ್ಜನರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಇದನ್ನೂ ಓದಿ: 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದು ಹೀಗೆ:
    ದಿಶಾ ಅವರನ್ನು ನ.26 ರಂದು ಅಪಹರಣ ಮಾಡಿ ಬಳಿಕ ಲೈಂಗಿಕ ದಾಳಿ ನಡೆಸಿ ಬಳಿಕ ಕೊಲೆ ಮಾಡಿ ಸೇತುವೆ ಕೆಳಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಯಾವುದೇ ಸಾಕ್ಷಿ ಇಲ್ಲದೇ ಆರಂಭವಾದ ತನಿಖೆಯಲ್ಲಿ ದೊರೆತ ಸಾಕ್ಷಿಗಳ ಆಧಾರವಾಗಿ ನಾಲ್ವರನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಮೂರ್ತಿಗಳ ಎದುರು ಹಾಜರು ಪಡಿಸಿ ಬಂಧಿತ ಮೊಹಮದ್ ಆರಿಫ್, ಚನ್ನಕೇಶವಲು, ಜೊಲ್ಲು ನವಿನ್, ಜೊಲ್ಲು ಶಿವನನ್ನು ಚರ್ಲಪಾಲ್ಲಿ ಜೈಲಿನಲ್ಲಿ ಅವರನ್ನು ಇಡಲಾಗಿತ್ತು. ಪೊಲೀಸರ ಮನವಿಯಂತೆ ನ್ಯಾಯಾಲಯ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಡಿ.4 ಮತ್ತು 5 ರಂದು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ ಪ್ರಕರಣ ಬಗ್ಗೆ ಆರೋಪಿಗಳಿಂದ ಸಾಕಷ್ಟು ಮಾಹಿತಿ ಸಂಗ್ರಹಿಸಲಾಗಿತ್ತು. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಕಸ್ಟಡಿಯಲ್ಲಿ ಇದ್ದ ಸಂದರ್ಭದಲ್ಲಿ ಅವರು ನೀಡಿದ ಮಾಹಿತಿ ಅನ್ವಯ ವೈಜ್ಞಾನಿಕ ಸಾಕ್ಷಿಗಳನ್ನು ಸಂಗ್ರಹಿಸಲು ಹಾಗೂ ದಿಶಾರ ಮೊಬೈಲ್ ಫೋನ್, ಇತರೇ ವಸ್ತುಗಳನ್ನು ವಶಕ್ಕೆ ಪಡೆಯಲು ಘಟನಾ ಸ್ಥಳಕ್ಕೆ ಕರೆತರಲಾಗಿತ್ತು. ಇದರಂತೆ ಬೆಳಗ್ಗೆ ಅವರನ್ನು ಸ್ಥಳ ಪರಿಶೀಲನೆಗೆ ಕರೆತಂದ ವೇಳೆ ಅವರು ಸರಿಯಾದ ಮಾಹಿತಿ ನೀಡದೆ ಸಮಯ ವ್ಯರ್ಥ ಮಾಡಿ ಅಲ್ಲಿದೆ, ಇಲ್ಲಿದೆ ಎಂದು ಹೇಳುತ್ತಿದ್ದರು. ಆ ಬಳಿಕ ಸ್ಥಳದಲ್ಲಿ ದೊರೆತ ಕಲ್ಲು, ದೊಣ್ಣೆಗಳನ್ನು ಹಿಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿ ಪೊಲೀಸರಿಂದ 2 ಪಿಸ್ತೂಲ್ ಕಿತ್ತುಕೊಂಡು ದಾಳಿ ನಡೆಸಿದ್ದರು.

    ಪ್ರಕರಣ ಎ1 ಮತ್ತು ಎ2 ಆರೋಪಿಗಳಾದ ಆರಿಫ್, ಚನ್ನಕೇಶವಲು ಪೊಲೀಸರ ಮೇಲೆ ಫೈರ್ ಮಾಡಿದ್ದರು. ಈ ಸಂದರ್ಭದಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು, ಅವರು ಶೂಟ್ ಮಾಡಿದ ಕಾರಣ ಎಚ್ಚರಿಕೆ ನೀಡಿ ಪೊಲೀಸರು ಅನಿವಾರ್ಯವಾಗಿ ಪ್ರತಿದಾಳಿ ನಡೆಸಿದ್ದರು. ಸ್ವಲ್ಪ ಸಮಯದ ಬಳಿಕ ದಾಳಿ ನಿಂತ ಕಾರಣ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಾಲ್ವರು ಸಾವನ್ನಪ್ಪಿದ್ದು ಖಚಿತವಾಗಿತ್ತು. ಆರೋಪಿಗಳ ಮೇಲೆ ಹಲವು ಅಪರಾಧ ಪ್ರಕರಣಗಳಿದ್ದು, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ. ಅಲ್ಲದೇ ಈ ಹಿಂದೆ ಯಾವ ಯಾವ ಸ್ಥಳಗಳಲ್ಲಿ ಮಹಿಳೆಯರ ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಬಗ್ಗೆಯೂ ತನಿಖೆ ನಡೆಸಿದ್ದೇವೆ. ಇದನ್ನೂ ಓದಿ: ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    ಘಟನೆ ಬಗ್ಗೆ ಕೇಳಿ ಬಂದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಅವರು, ಕಾನೂನು ತನ್ನ ಕೆಲಸವನ್ನು ಮಾಡಿದೆ ಅಷ್ಟೇ ಎಂದರು. ಅವರಿಗೆ ಯಾವುದೇ ಹ್ಯಾಂಡ್ ಕಪ್ ಹಾಕಿರಲಿಲ್ಲ. ಅಲ್ಲದೇ ಅವರು ಶಸ್ತ್ರಾಸ್ತಗಳನ್ನು ಬಳಕೆ ಮಾಡುವ ವಿಧಾನ ತಿಳಿದಿದ್ದರು. ಇದುವೇ ಅವರು ಬಹುಬೇಗ ಪೊಲೀಸರ ಮೇಲೆ ದಾಳಿ ನಡೆಸಲು ಕಾರಣವಾಯಿತು. ಅವರನ್ನು ನಾವು ಘಟನೆ ನಡೆದ ಸ್ಥಳಕ್ಕೆ ದಿಶಾರ ಮೊಬೈಲ್ ಹಾಗೂ ಇತರೇ ವಸ್ತುಗಳನ್ನು ವಶಕ್ಕೆ ಪಡೆಯಲು ಕರೆತಂದಿದ್ದೆವು. ಆದರೆ ಪ್ರಕರಣ ಮರುಸೃಷ್ಟಿಗೆ ಕರೆತಂದಿರಲಿಲ್ಲ. ಬೆಳಗ್ಗೆ 5.30 ರಿಂದ 6.15ರ ವೇಳೆಗೆ ಘಟನೆ ನಡೆದಿದೆ ಎಂದರು.

    ಪ್ರಕರಣದಲ್ಲಿ ಪೊಲೀಸ್ ಎಸ್‍ಐ ಸೇರಿದಂತೆ ಮತ್ತೊಬ್ಬ ಅಧಿಕಾರಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಶಿಫ್ಟ್ ಮಾಡಲಾಗಿದೆ ಎಂದರು. ಅಲ್ಲದೇ ಪೊಲೀಸರಿಗೆ ಯಾವುದೇ ಬುಲೆಟ್ ಗಾಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತೆಲಂಗಾಣ ಎನ್‍ಕೌಂಟರ್: ಕೇಜ್ರಿವಾಲ್, ಶಶಿ ತರೂರ್, ಮನೇಕಾ ಗಾಂಧಿ ಅಪಸ್ವರ

    ಇದೇ ವೇಳೆ ದಿಶಾ ಕುಟುಂಬಕ್ಕೆ ಹೆಚ್ಚಿನ ಸಮಸ್ಯೆ ನೀಡದಂತೆ ಮನವಿ ಮಾಡಿದ ವಿಶ್ವನಾಥ್ ಅವರು, ಅವರ ಖಾಸಗಿ ಜೀವನವನ್ನು ಗೌರವಿಸಿ ಎಂದರು. ಅಲ್ಲದೇ ಪೊಲೀಸರ ತನಿಖೆಯನ್ನು ನಡೆಸಲು ಸಹಕಾರ ನೀಡಿ. ಪ್ರಕರಣ ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ನೀಡುತ್ತೇವೆ. ಆಡೋಪಿಗಳಿಗೆ ಎಷ್ಟು ಬುಲೆಟ್ ತಾಗಿದೆ ಎಂಬ ಬಗ್ಗೆಯೂ ಮರಣೋತ್ತರ ಪರೀಕ್ಷೆಯಲ್ಲಿ ಮಾಹಿತಿ ಲಭ್ಯವಾಗಲಿದೆ. ಇಲ್ಲಿವರೆಗೂ ನಡೆದ ಬೆಳವಣಿಗೆಗಳನ್ನು ನಾವು ಮುಂದಿಟ್ಟಿದ್ದೇವೆ ಎಂದರು.

    4 ಭಾಷೆಯಲ್ಲಿ ಮಾಹಿತಿ:
    ವಿಶ್ವನಾಥ್ ಸಜ್ಜನರ್ ಅವರು ತಮ್ಮ ಸುದ್ದಿಗೋಷ್ಠಿಯಲ್ಲಿ ಮೊದಲು ತೆಲುಗಿನಲ್ಲಿ ವಿವರಣೆ ನೀಡಿದರು. ಬಳಿಕ ಇಂಗ್ಲಿಷ್, ಹಿಂದಿಯಲ್ಲಿ ನೀಡಿ ಕೊನೆಗೆ ಕನ್ನಡದಲ್ಲೂ ಘಟನೆಯನ್ನು ವಿವರಿಸಿ ಕನ್ನಡ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದು ಸರಿಯಲ್ಲ: ಕಾರ್ತಿ ಚಿದಂಬರಂ

  • 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

    ಹೈದರಾಬಾದ್: ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ನಡೆದ ದಿಶಾ ಪ್ರಕರಣ ಅತ್ಯಚಾರಿಗಳ ಎನ್‌ಕೌಂಟರ್‌ನನ್ನು 2008ರಲ್ಲಿ ವಾರಂಗಲ್ ಆ್ಯಸಿಡ್ ಪ್ರಕರಣದ ಎನ್‌ಕೌಂಟರ್‌ಗೆ ಹೋಲಿಸಲಾಗುತ್ತಿದೆ. ಇದೇ ಮಾದರಿಯಲ್ಲೇ ಈ ಹಿಂದೆ ಸಜ್ಜನರ್ ಅವರ ತಂಡ ಆ್ಯಸಿಡ್ ದಾಳಿ ಆರೋಪಿಗಳನ್ನು ಕೂಡ ಎನ್‍ಕೌಂಟರ್ ಮಾಡಿತ್ತು.

    ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈದರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಲಾಗಿದೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಈ ಹಿಂದೆ 2008ರ ಡಿಸೆಂಬರ್ 13ರಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಬ್ಬರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣ ಇಡೀ ಆಂಧ್ರಪ್ರದೇಶವನ್ನು ಬೆಚ್ಚಿಬೀಳಿಸಿತ್ತು. ಆ ಪ್ರಕರಣದ ಮೂವರು ಆರೋಪಿಗಳನ್ನು ಕೂಡ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

    ವಾರಂಗಲ್‍ನ ಕಾಕತೀಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಸ್ವಪ್ನಿಕ ಮತ್ತು ಪ್ರಣೀತಾ ಲವ್ ಪ್ರೊಪೊಸಲ್‍ಗೆ ಒಪ್ಪಿಕೊಳ್ಳದೆ ನಿರಾಕರಿಸಿದ್ದಕ್ಕೆ ಶ್ರೀನಿವಾಸ್(25), ಹರಿಕೃಷ್ಣಾ(24) ಮತ್ತು ಸಂಜತ್(22) ಆ್ಯಸಿಡ್ ದಾಳಿ ನಡೆಸಿದ್ದರು. ಇಬ್ಬರು ವಿದ್ಯಾರ್ಥಿನಿಯರು ತರಗತಿ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಅವರ ಮೇಲೆ ಆರೋಪಿಗಳು ಆ್ಯಸಿಡ್ ಎರಚಿದ್ದರು.

    ಈ ಪ್ರಕರಣ ನಡೆದಿದ್ದಾಗ ವಿಶ್ವನಾಥ್ ಸಜ್ಜನರ್ ಅವರು ವಾರಂಗಲ್ ಎಸ್‍ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ವಿಶ್ವನಾಥ್ ನೇತೃತ್ವದ ತಂಡ ಘಟನೆಯಾದ 48 ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿತ್ತು. ದಿಶಾ ಪ್ರಕರಣ ಆರೋಪಿಗಳನ್ನು ಘಟನಾ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದಂತೆ ಬಂಧನವಾದ ಮರುದಿನ ಸಾಕ್ಷಿಗಳನ್ನು ಸಂಗ್ರಹಿಸಲು ಆ್ಯಸಿಡ್ ದಾಳಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದರು. ಇದನ್ನೂ ಓದಿ: ಎನ್‍ಕೌಂಟರ್ ಮಾಡುವ ಮೊದಲು ನೋಡಲು ಅವಕಾಶ ನೀಡಬೇಕಿತ್ತು: ಆರೋಪಿ ತಂದೆ

    ಈ ವೇಳೆ ಓರ್ವ ಆರೋಪಿ ಪೊಲೀಸರ ಮೇಲೆ ಕಚ್ಚಾ ಬಾಂಬ್‍ನಿಂದ ದಾಳಿ ಮಾಡಲು ಮುಂದಾಗಿದ್ದನು. ಆಗ ಆತ್ಮರಕ್ಷಣೆಗಾಗಿ ಸಜ್ಜನರ್ ಅವರು ತಮ್ಮ ಜೊತೆಗಿದ್ದ ಪೊಲೀಸರಿಗೆ ಎನ್‍ಕೌಂಟರ್ ಮಾಡಲು ಆದೇಶಿಸಿದ್ದರು. ಈ ವೇಳೆ ಮೂವರು ಆರೋಪಿಗಳು ಖಾಕಿ ಗುಂಡೇಟಿಗೆ ಬಲಿಯಾಗಿದ್ದರು.

    ವಾರಂಗಲ್ ಎನ್‍ಕೌಂಟರ್ ಬಳಿಕ ಸಜ್ಜನರ್ ಅವರು `ಎನ್‍ಕೌಂಟರ್ ಸ್ಪೆಷಲಿಸ್ಟ್’ ಆಗಿಬಿಟ್ಟರು. ಆ್ಯಸಿಡ್ ದಾಳಿ ನಡೆದ 48 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ, ಒಂದೆ ದಿನದಲ್ಲಿ ದುಷ್ಟರಿಗೆ ಸಜ್ಜನರ್ ತಕ್ಕ ಪಾಠ ಕಲಿಸಿದ್ದರು. ಅದರಂತೆ ದಿಶಾ ಪ್ರಕರಣ ಸಂಬಂಧ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆ ಸಜ್ಜನರ್ ಅವರ ತಂಡ ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದೆ. ಹೀಗೆ ಈ ಎರಡು ಪ್ರಕರಣದ ಎನ್‍ಕೌಂಟರ್ ಒಂದೇ ಮಾದರಿಯಲ್ಲಿ ನಡೆದಿದೆ.

    ಈ ಹಿಂದೆ ವಾರಂಗಲ್ ಆ್ಯಸಿಡ್ ಪ್ರಕರಣ ಆರೋಪಿಗಳನ್ನು ಸಜ್ಜನರ್ ಎನ್‍ಕೌಂಟರ್ ಮಾಡಿದ್ದಾಗ ಸಂತ್ರಸ್ತ ವಿದ್ಯಾರ್ಥಿನಿಯರ ಪೋಷಕರು, ಸ್ನೇಹಿತರು ಹಾಗೂ ಸಾರ್ವಜನಿಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳು ಇಡೀ ಕಾಲೇಜಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಆ ಖುಷಿಯ ವಾತಾವರಣ ಇಂದು ಕೂಡ ಎಲ್ಲೆಡೆ ಮನೆ ಮಾಡಿದೆ. ದಿಶಾ ಪ್ರಕರಣದ ಅತ್ಯಚಾರಿಗಳನ್ನು ಸಜ್ಜನರ್ ಅವರ ತಂಡ ಎನ್‍ಕೌಂಟರ್ ಮಾಡಿರುವುದಕ್ಕೆ ದೇಶದ ಜನರು ಪೊಲೀಸರಿಗೆ ಭೇಷ್ ಎನ್ನುತ್ತಿದ್ದಾರೆ.

  • ದೇಶಕ್ಕಾಗಿ ಒಳ್ಳೆಯ ನಿರ್ಧಾರ- ವಿಶ್ವನಾಥ್ ಕೆಲಸಕ್ಕೆ ಸಹೋದರ ಶ್ಲಾಘನೆ

    ದೇಶಕ್ಕಾಗಿ ಒಳ್ಳೆಯ ನಿರ್ಧಾರ- ವಿಶ್ವನಾಥ್ ಕೆಲಸಕ್ಕೆ ಸಹೋದರ ಶ್ಲಾಘನೆ

    ಬೆಂಗಳೂರು: ದೇಶಕ್ಕಾಗಿ ಅವರು ಒಳ್ಳೆಯ ನಿರ್ಧಾರ ತೆಗೆದುಕೊಂಡಿರುವುದಕ್ಕೆ ತುಂಬಾ ಹೆಮ್ಮೆ ಆಗುತ್ತಿದೆ ಎಂದು ಎನ್‍ಕೌಂಟರ್ ಸ್ಪೆಷಾಲಿಸ್ಟ್, ಹೈದರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಅವರ ಸಹೋದರ ವೀರಣ್ಣ ಸಜ್ಜನರ್ ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿಶ್ವನಾಥ್ ಸಹೋದರ ವೀರಣ್ಣ ಸಜ್ಜನರ್ ಅವರು, ನನ್ನ ಸಹೋದರ ಇಂತಹದ್ದೊಂದು ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದು ತುಂಬಾ ಖುಷಿಯಾಗುತ್ತಿದೆ. ಈ ಹಿಂದೆ ವಾರಂಗಲ್‍ನಲ್ಲಿ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಎನ್‍ಕೌಂಟರ್ ಮಾಡಿ ಈ ರೀತಿ ಮತ್ತೆ ನಡೆಯುವುದಿಲ್ಲ ಎಂದು ಜನರಿಗೆ ಭರವಸೆ ನೀಡಿದ್ದರು. ಎನ್‍ಕೌಂಟರ್ ನಡೆದಾಗಿನಿಂದ ಆ್ಯಸಿಡ್ ದಾಳಿ ಎಲ್ಲಿಯೂ ನಡೆಯಲಿಲ್ಲ. ಇದೀಗ ಅತ್ಯಾಚಾರಿಗಳ ಎನ್‍ಕೌಂಟರ್ ಮೂಲಕ ಇಡೀ ದೇಶಕ್ಕೆ ಭಯ ಹುಟ್ಟಿಸಿದ್ದಾರೆ. ದೇಶಕ್ಕಾಗಿ ಅವರು ಒಳ್ಳೆಯ ನಿರ್ಧಾರ ತೆಗೆದುಕೊಂಡಿರುವುದಕ್ಕೆ ತುಂಬಾ ಹೆಮ್ಮೆ ಆಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಸಣ್ಣದೇ ಇರಲಿ, ದೊಡ್ಡದೇ ಇರಲಿ ಸಾರ್ವಜನಿಕರಿಗೆ ನ್ಯಾಯ ಸಿಗಬೇಕು ಎಂದು ಅವರು ಯಾವಾಗಲೂ ಹೋರಾಟ ಮಾಡುತ್ತಾರೆ. ವಿಶ್ವನಾಥ್ ಅವರು ವಿದ್ಯಾರ್ಥಿ ಆಗಿದ್ದಾಗಿನಿಂದಲೂ ಹೋರಾಟ ಮಾಡುತ್ತಿದ್ದರು. ಯಾರಿಗಾದರೂ ತೊಂದರೆಯಾದಾಗ ಆರೋಪಿಗಳ ಬೆನ್ನಟ್ಟಿ ಕೆಲಸ ಮುಗಿಯುವವರೆಗೂ ಅವರು ನಿದ್ದೆ ಮಾಡುವುದಿಲ್ಲ. ಈ ಪ್ರಕರಣ ಬೆಳಕಿಗೆ ಬಂದಾಗ ನನ್ನ ಸಹೋದರ ಈ ಕೇಸನ್ನು ನೋಡಿಕೊಳ್ಳುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಅವರು ಕೂಡ ತಮ್ಮ ಕೆಲಸದ ಬಗ್ಗೆ ಏನೂ ಹೇಳಲ್ಲ. ಪ್ರತಿಕೆಗಳಲ್ಲಿ ನೋಡಿದಾಗ ಈ ಪ್ರಕರಣವನ್ನು ನನ್ನ ಸಹೋದರ ವಹಿಸಿಕೊಂಡಿದ್ದಾರೆ ಎಂಬುದು ತಿಳಿಯಿತು ಎಂದರು. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ವಿಶ್ವನಾಥ್ ಮೊದಲು ಆಂಧ್ರ ಪ್ರದೇಶಕ್ಕೆ ಆಯ್ಕೆ ಆಗಿ ಅಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಹೈದರಾಬಾದ್ ಕಮಿಷನರ್ ಆಗಿ ಎರಡೂವರೆ ವರ್ಷ ಆಗಿದೆ. ಅವರಿಗೆ ಮೊದಲು ಆಂಧ್ರದಲ್ಲೇ ಕೆಲಸ ಸಿಕ್ಕ ಕಾರಣ ಅವರು ಕರ್ನಾಟಕದಲ್ಲಿ ಕೆಲಸ ಮಾಡಿಲ್ಲ. ನಮ್ಮ ಊರಿನಲ್ಲಿ ಯಾವುದೇ ಕಾರ್ಯಕ್ರಮ ಇದ್ದರೆ ಅವರು ಬರುತ್ತಾರೆ. ಅಲ್ಲದೆ ಶಿಕ್ಷಣ ಅಥವಾ ಸಮಾಜಕ್ಕೆ ಸಂಬಂಧಿಸಿದ ಕೆಲಸ ಇದ್ದರೆ ಎಷ್ಟೇ ಬ್ಯುಸಿ ಇದ್ದರೂ ಮಕ್ಕಳಿಗೆ ಕೌನ್ಸ್ ಲಿಂಗ್ ಮಾಡುತ್ತಾರೆ ಎಂದು ವೀರಣ್ಣ ತಿಳಿಸಿದರು. ಇದನ್ನೂ ಓದಿ: ಸುಡುವಾಗ ಪಶುವೈದ್ಯೆ ಜೀವಂತವಾಗಿದ್ಳು: ಸತ್ಯ ಬಾಯಿಬಿಟ್ಟ ಮೃಗೀಯ ಮನುಷ್ಯ

    ಬೆಳಗ್ಗೆಯಿಂದಲೂ ಸ್ನೇಹಿತರು ಹಾಗೂ ಸಂಬಂಧಿಕರು ಕರೆ ಮಾಡಿ ಶುಭಾಶಯ ತಿಳಿಸುತ್ತಿದ್ದಾರೆ. ನಮಗೆ ತುಂಬಾ ಖುಷಿ ಹಾಗೂ ಹೆಮ್ಮೆ ಆಗುತ್ತಿದೆ. ವಿಶ್ವನಾಥ್ ಅವರ ಈ ನಿರ್ಧಾರ ಜೀವಮಾನದ ಶ್ರೇಷ್ಠ ನಿರ್ಧಾರ. ಇಡೀ ದೇಶ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ವೀರಣ್ಣ ತಮ್ಮ ಸಂತಸವನ್ನು ಹಂಚಿಕೊಂಡರು.

  • ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    – ಪಶುವೈದ್ಯೆ ಕುಟುಂಬಸ್ಥರಿಂದ ಸಂತಸ

    ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್‍ಕೌಂಟರ್ ಮಾಡಿದ್ದಾರೆ.

    ವಿಶ್ವನಾಥ್ ಸಜ್ಜನರ್ ಎನ್‍ಕೌಂಟರ್ ಸ್ಪೆಷಲಿಸ್ಟ್ ಆಗಿದ್ದು, ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ವಿಶ್ವನಾಥ್ ಸಜ್ಜನರ್ ವಾರಂಗಲ್ ಎಸ್‍ಪಿ ಆಗಿದ್ದರು. ಆಗ ಆಸಿಡ್ ದಾಳಿ ಆರೋಪಿಗಳು ಎನ್‍ಕೌಂಟರ್ ನಲ್ಲಿ ಹತ್ಯೆಗೈದಿದ್ದರು. ಆ ಎನ್‍ಕೌಂಟರ್ ಬಳಿಕ ಆ್ಯಸಿಡ್ ದಾಳಿಯಲ್ಲಿ ಇಳಿಕೆ ಕಂಡಿತ್ತು.

    ವೀರ ಕನ್ನಡಿಗ ವಿಶ್ವನಾಥ್ ಈಗ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ್ದಾರೆ. ಅಲ್ಲದೆ ಕಾಮುಕರನ್ನು ಎನ್‍ಕೌಂಟರ್ ಮಾಡಿದ್ದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ರೇಪಿಸ್ಟ್ ಗಳ ಎನ್‍ಕೌಂಟರ್ ಬೆನ್ನಲ್ಲೇ ಹೈದಾರಾಬಾದ್‍ನಲ್ಲಿ ವಿದ್ಯಾರ್ಥಿಗಳು ಪೊಲೀಸರಿಗೆ ಜೈಕಾರ ಹಾಕುತ್ತಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

    ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.  ಇದನ್ನೂ ಓದಿ: ಸುಡುವಾಗ ಪಶುವೈದ್ಯೆ ಜೀವಂತವಾಗಿದ್ಳು: ಸತ್ಯ ಬಾಯಿಬಿಟ್ಟ ಮೃಗೀಯ ಮನುಷ್ಯ

    ಏನಿದು ಪ್ರಕರಣ?
    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

    ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿ ಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.