Tag: vishweshateertha swamiji

  • ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಪಾರ್ಥಿವ ಶರೀರ – ವಿದ್ಯಾಪೀಠದಲ್ಲಿ ಪಾಸ್ ಇದ್ದವರಿಗೆ ಮಾತ್ರ ಅನುಮತಿ

    ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಪಾರ್ಥಿವ ಶರೀರ – ವಿದ್ಯಾಪೀಠದಲ್ಲಿ ಪಾಸ್ ಇದ್ದವರಿಗೆ ಮಾತ್ರ ಅನುಮತಿ

    ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ.

    ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ ಹೆಲಿಕಾಪ್ಟರ್ ಮಧ್ಯಾಹ್ನ 3:35ಕ್ಕೆ ಎಚ್‍ಎಎಲ್ ತಲುಪಿತು. ಇಲ್ಲಿಂದ ಅಲಕೃಂತಗೊಂಡ ತೆರೆದ ವಾಹನದಲ್ಲಿ ಮೃತ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನಕ್ಕೆ ತರಲಾಯಿತು.

    ಸಂಜೆ 5:30ರ ವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಬಳಿಕ ಮೆರವಣಿಗೆಯೊಂದಿಗೆ ವಿದ್ಯಾಪೀಠಕ್ಕೆ ತರಲಾಗುತ್ತದೆ. ರಾಘವೇಂದ್ರ, ಕೃಷ್ಣ, ಮದ್ವಚಾರ್ಯರ ಮೂರ್ತಿಗೆ ಪೂಜೆ ಮಾಡಿದ ಬಳಿಕ ಅಂತ್ಯ ಕ್ರಿಯೆ ನಡೆಯಲಿದೆ.

    ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರ ಉಡುಪಿಯಿಂದ ಈಗಾಗಲೇ ಬೆಂಗಳೂರಿಗೆ ಬಂದಿದೆ.

    ವಿದ್ಯಾಪೀಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಈಗ ಯಾರನ್ನೂ ಒಳಗಡೆ ಬಿಡುತ್ತಿಲ್ಲ. ಗೇಟ್ ಬಳಿಯೇ ಪೊಲೀಸರು ತಡೆಯುತ್ತಿದ್ದು ಪಾಸ್ ಹೊಂದಿರುವ ಭಕ್ತರನ್ನು ಮಾತ್ರ ಒಳಗಡೆ ಬಿಡುತ್ತಿದ್ದಾರೆ.

  • ಹರ್ನಿಯಾ ಆಪರೇಷನ್ ನಡೆದಾಗಲೇ ಕೊನೆಯಾಸೆ ಬಿಚ್ಚಿಟ್ಟಿದ್ದ ಪೇಜಾವರ ಶ್ರೀ

    ಹರ್ನಿಯಾ ಆಪರೇಷನ್ ನಡೆದಾಗಲೇ ಕೊನೆಯಾಸೆ ಬಿಚ್ಚಿಟ್ಟಿದ್ದ ಪೇಜಾವರ ಶ್ರೀ

    ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

    ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಪಬ್ಲಿಕ್ ಟಿವಿಗೆ ರಘುಪತಿ ಭಟ್ ತಿಳಿಸಿದ್ದಾರೆ. ಇದನ್ನೂ ಓದಿ: 8ನೇ ವಯಸ್ಸಿನಲ್ಲಿ ದೀಕ್ಷೆ, ದಲಿತ ಪರ ಹೋರಾಟ, 5ನೇ ಬಾರಿ ಪರ್ಯಾಯ ಪೀಠ ಏರಿ ಸಾಧನೆ

    ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣನ ಪಾದ ಸೇರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

    ಶ್ರೀಗಳ ಕೊನೆ ಆಸೆಯಂತೆ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಮದ್ವ ಸರೋವರದಲ್ಲಿ ಶ್ರೀಗಳಿಗೆ ಸ್ನಾನ ಮಾಡಿಸಿ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

    ಅಲ್ಲಿ ಮಧ್ಯಾಹ್ನ 12 ಗಂಟೆಯವರೆಗೂ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೊನೆಗೆ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತಿಮ ಕ್ರಿಯಾ ವಿಧಿ ವಿಧಾನಗಳು ನಡೆಯಲಿದೆ.

  • ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿಗಳು ಬೆಂಗ್ಳೂರಿಗೆ ಶಿಫ್ಟ್

    ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿಗಳು ಬೆಂಗ್ಳೂರಿಗೆ ಶಿಫ್ಟ್

    ಉಡುಪಿ: ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಸದ್ಯ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪೂಜಾ ಸಾಮಾಗ್ರಿಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ.

    ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ ಉಪಯೋಗಿಸುತ್ತಿದ್ದ ಪೂಜಾ ಪರಿಕರವನ್ನು ಸಿಬ್ಬಂದಿ ವಾಹನದೊಳಗೆ ತುಂಬಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ವಿದ್ಯಾಪೀಠಕ್ಕೆ ಈ ಸಾಮಾಗ್ರಿಗಳು ಶಿಫ್ಟ್ ಆಗಲಿವೆ. ಕಿರಿಯ ಸ್ವಾಮೀಜಿಗಳು ಕೂಡ ಸಂಜೆ ವಿದ್ಯಾ ಪೀಠಕ್ಕೆ ತೆರಳಲಿದ್ದಾರೆ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

    ಈಗಾಗಲೇ ಶ್ರೀಗಳ ಸುಮಾರು 30 ಮಂದಿ ಶಿಷ್ಯರು ಶಿಫ್ಟ್ ಆಗಿದ್ದಾರೆ. 6 ಟಿಟಿಯಲ್ಲಿ ಪೂಜಾ ಸಾಮಾಗ್ರಿ ಹಾಗೂ ಶಿಷ್ಯವೃಂದದವರು ತೆರಳಿದ್ದಾರೆ. ಕಿರಿಯ ಶ್ರೀಗಳ ಪೂಜಾ ಸಾಮಾಗ್ರಿಗಳನ್ನು ಕೂಡ ಶಿಫ್ಟ್ ಮಾಡಲಾಗಿದೆ. ಸಂಜೆಯ ವೇಳೆಯ ಪೂಜೆ ವಿದ್ಯಾಪೀಠದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಪೂಜಾ ಸಾಮಾಗ್ರಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

  • ಪ್ರಧಾನಿ ಮೋದಿ ಈಗ ಬಂದಿಲ್ಲ, ಮುಂದೆ ಬರ್ತಾರೆ: ಪೇಜಾವರ ಶ್ರೀ

    ಪ್ರಧಾನಿ ಮೋದಿ ಈಗ ಬಂದಿಲ್ಲ, ಮುಂದೆ ಬರ್ತಾರೆ: ಪೇಜಾವರ ಶ್ರೀ

    ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಪ್ರಚಾರ ಭಾಷಣ ಮಾಡಲು ಆಗಮಿಸಲಿರುವ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಆರಂಭದಲ್ಲಿ ಲಭ್ಯವಾಗಿತ್ತು. ಆದರೆ ಕೊನೆಯಲ್ಲಿ ಈ ಕಾರ್ಯಕ್ರಮ ರದ್ದಾಗಿದ್ದು ಮುಂದೆ ಮೋದಿ ಕೃಷ್ಣ ಮಠಕ್ಕೆ ಯಾವಾಗ ಭೇಟಿ ನೀಡಲಿದ್ದಾರೆ ಎನ್ನುವ ವಿಚಾರವನ್ನು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಗಳು ತಿಳಿಸಿದ್ದಾರೆ.

    ಉಡುಪಿಗೆ ಬಂದಾಗ ಮಠಕ್ಕೆ ಬರಬೇಕೆಂದು ಪತ್ರ ಬರೆದಿದ್ದೆ. ಈ ಪತ್ರಕ್ಕೆ ಮೋದಿಯವರ ಆಪ್ತ ಕಾರ್ಯದರ್ಶಿಯವರು ನಮ್ಮ ಕಾರ್ಯದರ್ಶಿಗೆ ಕರೆ ಮಾಡಿ, ರಾಜಕೀಯ ಸಮಾವೇಶದ ನಡುವೆ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮೋದಿ ತಿಳಿಸಿದ್ದಾರೆ. ಮುಂದೊಂದು ದಿನ ಧಾರ್ಮಿಕ ಕಾರ್ಯಕ್ರಮವನ್ನೇ ನಿಗದಿಪಡಿಸಿ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ ಎಂದು ಪೇಜಾವರ ಶ್ರೀ ಹೇಳಿದರು.

    ನಮ್ಮ ಪರ್ಯಾಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿತ್ತು. ಪರ್ಯಾಯ ಸಂದರ್ಭದಲ್ಲೂ ಕೃಷ್ಣಮಠಕ್ಕೆ ಬಂದಿರಲಿಲ್ಲ. ಪ್ರಧಾನಿ ಬರಲಿಲ್ಲವೆಂದು ನಮಗೆ ಬೇಸರವಿಲ್ಲ. ಚುನಾವಣೆ ಸಂದರ್ಭ ದೇವರ ಅನುಗ್ರಹವಾಗುತ್ತದೆ ಉಡುಪಿಯವರೆಗೆ ಬಂದವರು ಈ ಬಾರಿಯಾದರೂ ಮಠಕ್ಕೆ ಬರುವಂತೆ ಪತ್ರ ಬರೆದಿದ್ದೆ ಎಂದು ತಿಳಿಸಿದರು.

    ಪ್ರಣಬ್ ಮುಖರ್ಜಿ ಕರೆಯದೆ ಮಠಕ್ಕೆ ಬಂದಿದ್ದರು. ಏನೇ ಆಗಲಿ ಮಂತ್ರಿಗಳು ಬರುತ್ತಾರೆ ಹೋಗುತ್ತಾರೆ. ಜನರ ಕೆಲಸ ಆಗದಿದ್ದರೆ ನಮಗೆ ಬೇಸರವಾಗುತ್ತದೆ. ಮಠಕ್ಕೆ ಬಂದಿಲ್ಲವೆಂದು ಬೇಸರಪಟ್ಟುಕೊಳ್ಳುವುದಿಲ್ಲ ಎಂದು ಹೇಳಿದರು.

  • ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

    ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

    ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ.

    ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ರವಿಶಂಕರ ಗುರೂಜಿ ಶ್ರೀಕೃಷ್ಣನ ದರ್ಶನ ಮಾಡಿ ಚಂದ್ರಶಾಲೆಯಲ್ಲಿ ಕುಳಿತಿದ್ದರು.

    ಬೆಳಗ್ಗೆಯ ಪೂಜೆಯಲ್ಲಿದ್ದ ಪೇಜಾವರ ಶ್ರೀಗಳು ರವಿಶಂಕರ್ ಗುರೂಜಿಯನ್ನು ಕಂಡು ಪೂಜೆ ಮುಗಿಸಿ ಬರುವುದಾಗಿ ಹೇಳಿ ಕೃಷ್ಣಪೂಜೆಯಲ್ಲಿ ತೊಡಗಿದರು. ನಂತರ ಮಠದ ಬಡಗು ಮಾಳಿಗೆಯಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಪೇಜಾವರ ಶ್ರೀ ಮತ್ತು ರವಿಶಂಕರ್ ಗುರೂಜಿ ಗೌಪ್ಯ ಮಾತುಕತೆ ಮಾಡಿದರು. ಪೇಜಾವರ ಶ್ರೀಗಳು ಧರ್ಮ ಸಂಸದ್ ನಲ್ಲಿ ನಡೆದ ಗೋಷ್ಟಿಗಳ ಬಗ್ಗೆ ಪೇಜಾವರ ಮಾಹಿತಿ ನೀಡಿದ್ದಾರೆ. ರವಿಶಂಕರ್ ಗುರೂಜಿ ತನ್ನ ಮಧ್ಯಸ್ಥಿಕೆಯ ಬೆಳವಣಿಗೆ ಬಗ್ಗೆ ಮಾತುಕತೆ ಮಾಡಿದ್ದಾರೆ.

    ಗೌಪ್ಯ ಮಾತುಕತೆ ನಂತರ ಹೊರಬಂದ ಶ್ರೀರವಿಶಂಕರ್ ಗುರೂಜಿ, ಪ್ರತಿಯೊಬ್ಬರಿಗೂ ಅವರದ್ದೇ ಆದ ಅಭಿಪ್ರಾಯ ಇದೆ. ಸೌಹಾರ್ದ ಪ್ರಯತ್ನ ಮುಂದುವರೆಸುತ್ತೇನೆ. ನ್ಯಾಯಾಲಯದ ಹೊರಗೆ ರಾಮಜನ್ಮಭೂಮಿ ವಿವಾದ ಬಗೆಹರಿಸಲು ನಮ್ಮ ಪರ ಯತ್ನ ಮುಂದುವರೆಯುತ್ತದೆ. ನಾನು ಭೇಟಿಯಾದ ಎಲ್ಲರೂ ಮಂದಿರ ನಿರ್ಮಾಣದ ಪರವಾಗಿದ್ದಾರೆ. ಮುಸ್ಲಿಮರೂ ಸಹಮತ ವ್ಯಕ್ತಪಡಿಸಿದ್ದಾರೆ. ಆರ್‍ಎಸ್‍ಎಸ್ ತನ್ನದೇ ಅಭಿಪ್ರಾಯ ಹೊಂದಲು ಸ್ವತಂತ್ರ ಎಂದರು.

    ಪೇಜಾವರಶ್ರೀ ಮಾತನಾಡಿ, ಗೌಪ್ಯ ಮಾತುಕತೆಯ ವಿವರಣೆಗಳನ್ನು ಹೇಳಲ್ಲ. ಧರ್ಮಸಂಸದ್‍ನಲ್ಲಿ ಗುರೂಜಿಗೆ ವಿರೋಧವಿತ್ತು ಎಂದು ಹೇಳಲಾರೆ. ನ್ಯಾಯಾಲಯದ ಹೊರಗೆ ತೀರ್ಮಾನವಾಗಬೇಕು ಎಂಬುದು ನಮ್ಮ ಅಪೇಕ್ಷೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಅನ್ನೋದು ಎಲ್ಲರ ಅಭಿಪ್ರಾಯ ಎಂದರು.

    ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳ ಜೊತೆ ಸಂಧಾನಕ್ಕೆ ಯತ್ನಿಸದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಗೈರು ಹಾಜರಿ ಹಾಕಿದ್ದರು ಎಂದು ಹೇಳಲಾಗುತ್ತಿದೆ.