Tag: Vishweshwar Hegde Kageri

  • ಉತ್ತರ ಕನ್ನಡ ಸಂಸದ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ!

    ಉತ್ತರ ಕನ್ನಡ ಸಂಸದ ಕಾಗೇರಿ ಮನೆಯಲ್ಲಿ ಚಿರತೆ ಪ್ರತ್ಯಕ್ಷ!

    – ಮನೆಯ ಶ್ವಾನ ಅಟ್ಟಾಡಿಸಿ ಹೋದ ಚಿರತೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮನೆಗೆ ಆಹಾರ ಅರಸಿ ಬಂದ ಚಿರತೆಯೊಂದು ನುಗ್ಗಿದ್ದು, ಸಂಸದರ ಮನೆಯ ಸಾಕುನಾಯಿಯನ್ನು ಅಟ್ಟಿಸಿಕೊಂಡು ಹೋಗಿದೆ.

    ಈ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಮವಾರ ಮಧ್ಯರಾತ್ರಿ ಶಿರಸಿ ತಾಲೂಕಿನ ಕಾಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹಾಗೂ ಕುಟುಂಬ ಸದಸ್ಯರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇದನ್ನೂ ಓದಿ: ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ – 8 ನಕಲಿ ಕ್ಲಿನಿಕ್ ಮೇಲೆ ದಾಳಿ

    ಇದೇ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದ್ದು, ಮನೆಯ ಮುಂಭಾಗದಲ್ಲಿದ್ದ ಸಾಕುನಾಯಿಯನ್ನು ಅಟ್ಟಾಡಿಸಿಕೊಂಡು ಹೋಗಿದೆ. ಅದೃಷ್ಟವಶಾತ್ ಚಿರತೆ ದಾಳಿಯಿಂದ ಸಾಕು ನಾಯಿ ತಪ್ಪಿಸಿಕೊಂಡಿದೆ. ರಾತ್ರಿ ಮನೆಯ ನಾಯಿ ಹೆಚ್ಚು ಕೂಗಿದ್ದರಿಂದಾಗಿ, ಇಂದು ಬೆಳಗ್ಗೆ ಮನೆಯವರು ಸಿಸಿಟಿವಿ ದೃಶ್ಯ ವೀಕ್ಷಿಸಿದಾಗ ಚಿರತೆ ಮನೆಗೆ ಬಂದ ವಿಷಯ ತಿಳಿದಿದೆ.

    ಘಟನೆ ಸಂಬಂಧ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?

    ಸದ್ಯ ಚಿರತೆ ಇವರ ಮನೆಬಾಗಿಲಿಗೆ ಬಂದರೂ ಯಾವುದೇ ತೊಂದರೆಯಾಗಿಲ್ಲ. ಇನ್ನು ಈ ಭಾಗದಲ್ಲಿ ಚಿರತೆ ಓಡಾಟ ಸಾಮಾನ್ಯವಾಗಿದ್ದು, ಇತ್ತೀಚೆಗೆ ಅಹಾರ ಅರಸಿ ನಾಡಿನತ್ತ ಆಗಮಿಸುತಿದೆ. ಇದೇ ಮೊದಲ ಬಾರಿ ಕಾಗೇರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.

  • ಅಡಿಕೆ ಕೊನೆ ಇಳಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

    ಅಡಿಕೆ ಕೊನೆ ಇಳಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

    ಕಾರವಾರ: ಸರಳತೆಗೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಮ್ಮ ತೋಟದಲ್ಲಿ ಅಡಿಕೆ ಕೊನೆಯನ್ನು ಹಗ್ಗದಿಂದ ಇಳಿಸುವ ಮೂಲಕ ಮನೆಯ ತೋಟದ ಕೊನೆ ಕೊಯ್ಲಿನಲ್ಲಿ ಭಾಗಿಯಾದರು.

    ಇಂದು ಶಿರಸಿಯ ಕಾಗೇರಿಯ ತಮ್ಮ ನಿವಾಸದಲ್ಲಿ ತೋಟದ ಕೊನೆ ಕೊಯ್ಲಿನಲ್ಲಿ ಭಾಗಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮರವೇರಿದ ಕೊನೆ ಗೌಡನ ಹಗ್ಗದ ನೇಣು ಹಿಡಿದು ಅಡಿಕೆ ಕೊನೆಯನ್ನು ಇಳಿಸಿಕೊಂಡು ಅಡಿಕೆ ಸುಗ್ಗಿ ನೆರವೇರಿಸಿದ್ದು ವಿಡಿಯೋ ವೈರಲ್ ಆಗಿದೆ.

    ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಗೇರಿ ಪಾರ್ಲಿಮೆಂಟ್‌ ಪ್ರವೇಶಿಸಿದ್ದಾರೆ. ಆಗ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಗಮನ ಸೆಳೆದಿದ್ದರು.

  • ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ: ಕಾಗೇರಿ ಕಿಡಿ

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ: ಕಾಗೇರಿ ಕಿಡಿ

    – ಅಹಂಕಾರದ ನಡವಳಿಕೆಯಿಂದ ಸಿದ್ದರಾಮಯ್ಯ ರಾಜ್ಯದ ಜನತೆಗೆ ಅವಮಾನ ಮಾಡ್ತಿದ್ದಾರೆ ಎಂದ ಸಂಸದ

    ಕಾರವಾರ: ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ರಾಷ್ಟ್ರದ್ರೋಹದ ಅಪರಾಧಿಗಳನ್ನು ರಕ್ಷಿಸುತ್ತಿದೆ. ರಾಷ್ಟ್ರದ್ರೋಹದ ಪ್ರಕರಣ ಹಿಂಪಡೆಯುವುದರ ಮೂಲಕ ಅಪರಾಧಿಗಳ ರಕ್ಷಣೆಗೆ ನಾವಿದ್ದೇವೆ ಎಂಬ ಸ್ಪಷ್ಟ ಸಂದೇಶ ಕಾಂಗ್ರೆಸ್ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಕಿಡಿಕಾರಿದರು.

    ಶಿರಸಿಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ (Hubballi Riots) ಪ್ರಕರಣವನ್ನು ಹಿಂಪಡೆದು ಕಾಂಗ್ರೆಸ್ ಸರ್ಕಾರ ದೊಡ್ಡ ಅಪರಾಧ ಮಾಡಿದೆ. ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬಾರದು ಎಂದು ಕಾಂಗ್ರೆಸ್ ಓಲೈಕೆಯ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಎಂಪಿಗಳಿಗೆ ಮೋದಿ, ಅಮಿತ್ ಶಾ ಕಂಡ್ರೆ ಭಯ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಕಾಂಗ್ರೆಸ್‌ಗೆ ಹಿಂದೂಗಳ ಕುರಿತು ಮಾತನಾಡುವಾಗ ಜಾತಿಯೇ ಮುಖ್ಯವಾಗುತ್ತದೆ. ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದಲ್ಲಿ ಅನೇಕ ಜಾತಿಗಳಿವೆ. ಅಲ್ಲಿ ಯಾಕೆ ಜಾತಿಗಣತಿ ನಡೆಸುತ್ತಿಲ್ಲ. ಕಾಂಗ್ರೆಸ್‌ನ ಷಡ್ಯಂತ್ರಕ್ಕೆ ಅಲ್ಪಸಂಖ್ಯಾತರು ಬಲಿಯಾಗಬಾರದು. ರಾಜ್ಯದ ಕಾಂಗ್ರೆಸ್ ಬ್ರಿಟಿಷ್ ಮಾನಸಿಕತೆ ಬೆಳೆಸಿಕೊಂಡಿದೆ ಎಂದರು.

    ರಾಜ್ಯದಲ್ಲಿ ಸರ್ಕಾರವಿದೆ. ಆದರೆ ಆಡಳಿತ ಶೂನ್ಯವಾಗಿದೆ. ರಾಜಕೀಯ ದ್ವೇಷ, ಸೇಡಿನ ರಾಜಕಾರಣದಲ್ಲಿ ಕಾಂಗ್ರೆಸ್ ಮುಳುಗಿದೆ. ರಾಜ್ಯದ ಅಭಿವೃದ್ಧಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣವಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ. ಅಹಂಕಾರದ ನಡವಳಿಕೆಯಿಂದ ಸಿದ್ದರಾಮಯ್ಯ ರಾಜ್ಯದ ಜನತೆಗೆ ಅವಮಾನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತಾಕತ್ತಿದ್ದರೆ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಏನೇ ಆಗಲಿ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಾನೇ – ಹೆಚ್‌ಡಿಕೆ

  • ಸಂಸದ ಕಾಗೇರಿ ಪ್ರಯತ್ನ – ಪ್ರಧಾನಿ ಪರಿಹಾರ ನಿಧಿಯಿಂದ ಶಿರೂರು ಸಂತ್ರಸ್ತರಿಗೆ ವಿಶೇಷ ಅನುದಾನಕ್ಕೆ ಅನುಮತಿ

    ಸಂಸದ ಕಾಗೇರಿ ಪ್ರಯತ್ನ – ಪ್ರಧಾನಿ ಪರಿಹಾರ ನಿಧಿಯಿಂದ ಶಿರೂರು ಸಂತ್ರಸ್ತರಿಗೆ ವಿಶೇಷ ಅನುದಾನಕ್ಕೆ ಅನುಮತಿ

    ಕಾರವಾರ: ಶಿರೂರು ಗುಡ್ಡ ಕುಸಿತ (Shirur Landslide) ಸಂತ್ರಸ್ತರಿಗೆ ಪ್ರಧಾನಿ ಮಂತ್ರಿಗಳ ವಿಪತ್ತು ನಿಧಿಯಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಅನುಮೋದನೆ ಸಿಕ್ಕಿದೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16 ರಂದು ಭೂ ಕುಸಿತವಾಗಿ 11 ಜನ ಸಾವು ಕಂಡಿದ್ದರು. ಇದರ ಬೆನ್ನಲ್ಲೇ 8 ಜನರ ಶವ ಶೋಧ ಮಾಡಲಾಗಿತ್ತು. ಇನ್ನೂ ಮೂರು ಜನರ ಶವ ಶೋಧಕಾರ್ಯ ನಡೆಯಬೇಕಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

    ನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಕೇಂದ್ರಸರ್ಕಾರದ ಪರಿಹಾರ ನಿಧಿಯಡಿ ಹಣ ಬಿಡುಗಡೆ ಮಾಡಬೇಕೆಂದು ಜುಲೈ 31 ರಂದು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ಶಿರೂರು ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪ್ರಧಾನಿ ಮಂತ್ರಿಗಳ ವಿಪತ್ತು ನಿಧಿಯಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಲು ಅನುಮೋದನೆ ನೀಡಿದ್ದಾರೆ.

    ಈ ಹಿಂದೆ ಕೇಂದ್ರ ಸರ್ಕಾರದಿಂದ NDRF ರಿಲೀಫ್ ಪಂಡ್ ನಿಂದ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗಿತ್ತು. ಇದೀಗ ವಿಶೇಷ ಪ್ರಕರಣ ಎಂದು ಪರಿಗಣಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಪರಿಹಾರ ನೀಡುತಿದ್ದು ಜಿಲ್ಲೆಯಲ್ಲಿ ಆದ ಭೂ ಕುಸಿತ/ಪ್ರಕೃತಿ ವಿಕೋಪ ಅವಘಡದಲ್ಲಿ ಇದೇ ಮೊದಲ ಬಾರಿಗೆ ವಿಶೇಷ ಅನುದಾನ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ಡೆಮಾಕ್ರಟಿಕ್ ಪಕ್ಷದ ಸಭೆಯಲ್ಲಿ ವೇದಮಂತ್ರಗಳ ಸದ್ದು – ಅಮೆರಿಕದಲ್ಲಿ ಬೆಂಗಳೂರು ಅರ್ಚಕರಿಂದ ವಿಶೇಷ ಪ್ರಾರ್ಥನೆ!

    <iframe width=”560″ height=”315″ src=”https://www.youtube.com/embed/f8A-vIFsZKA?si=n4J27g54NGGa0OcW” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>

  • ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಕಾರವಾರ/ನವದೆಹಲಿ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಭೂಕುಸಿತವಾಗಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ. ಶಿರೂರು ಭೂಕುಸಿತದಲ್ಲಿ ಮೃತರಾದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ನೀಡಬೇಕು. NDRFನ ಮತ್ತೊಂದು ತಂಡವನ್ನು ಶಿರೂರಿಗೆ ಶೋಧ ಕಾರ್ಯ ನಡೆಸಲು ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

    ವಯನಾಡಿನಲ್ಲಿ ಆಗಿರುವಂತೆ ಶಿರೂರಿನಲ್ಲಿ ಸಹ ಗುಡ್ಡ ಕುಸಿತವಾಗಿದೆ. ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಮಾಡುವಾಗ ವೈಜ್ಞಾನಿಕ ಅಧ್ಯಯನದ ವರದಿ ಮೂಲಕ ಅಭಿವೃದ್ಧಿ ಮಾಡಬೇಕು. ಪಶ್ಚಿಮಘಟ್ಟ ಬಹಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅದರ ಕ್ಯಾರಿಂಗ್ ಕ್ಯಪಾಸಿಟಿ ಅಧ್ಯಯನ ಆಗುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

    ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಕೆಲಸ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕವಾಗಿರುವುದರಿಂದಲೇ ಗುಡ್ಡ ಕುಸಿದಿದೆ ಎಂಬುದಾಗಿ ಹೇಳಲಾಗುತ್ತಿದೆ ಎಂದು ಸಂಸತ್‌ನಲ್ಲಿ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

    ಮುಂದಿನ ದಿನಗಳಲ್ಲಿಯಾದರೂ ಕಾಮಗಾರಿ ಮಾಡುವಾಗ ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಆಗಬೇಕು ಎಂದು ಸಂಸತ್‌ನಲ್ಲಿ ಕಾಗೇರಿ, ಜಿಲ್ಲೆಯ ಸಮಸ್ಯೆ ಕುರಿತು ಸಂಸತ್ ಗಮನಕ್ಕೆ ತಂದಿದ್ದಾರೆ.

  • ತಂದೆಯ ಪುಣ್ಯತಿಥಿಯಂದು ತಾಯಿಯೊಂದಿಗೆ ಗಿಡ ನೆಟ್ಟ ಸಂಸದ ಕಾಗೇರಿ

    ತಂದೆಯ ಪುಣ್ಯತಿಥಿಯಂದು ತಾಯಿಯೊಂದಿಗೆ ಗಿಡ ನೆಟ್ಟ ಸಂಸದ ಕಾಗೇರಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ‌ ಕಾಗೇರಿಯವರು (Vishweshwar Hegde Kageri) ತಂದೆ ಅನಂತ್ ಹೆಗಡೆಯವರ 5ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ತಾಯಿ ಸರ್ವೇಶ್ವರಿ ಹೆಗಡೆಯವರೊಂದಿಗೆ ಶಿರಸಿಯ ಕಾಗೇರಿಯ ತಮ್ಮ ನಿವಾಸದಲ್ಲಿ ತಾಯಿ ಹೆಸರಲ್ಲಿ ಗಿಡ ನೆಟ್ಟರು.

    ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್ ಕಿ ಬಾತ್ (Man Ki Bath) ರೇಡಿಯೋ ಕಾರ್ಯಕ್ರಮದಲ್ಲಿ ಅಮ್ಮನ ಹೆಸರಿನಲ್ಲಿ ಒಂದು ಗಿಡ ನೆಡುವ ಅಭಿಯಾನಕ್ಕೆ ಕರೆಕೊಟ್ಟ ಬೆನ್ನಲ್ಲೇ ಕಾಗೇರಿ ಈ ಕೆಲಸ ಮಾಡಿದ್ದಾರೆ. 2019ರ ಜೂನ್ ನಲ್ಲಿ ಅನಂತ್ ಹೆಗಡೆಯವರು ನಿಧನರಾಗಿದ್ದಾರೆ. ಇಂದು ಅವರ 5 ನೃ ವರ್ಷದ ಪುಣ್ಯತಿಥಿ ಕೂಡ ಮಾಡಲಾಗಿದೆ.

    ಪ್ರತಿಯೊಬ್ಬರಿಗೂ ಅಮ್ಮನ ಪ್ರೀತಿ ಬಹಳ ಮುಖ್ಯ. ಅಮ್ಮನ ಈ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವ ಪರಿಸರ ದಿನಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ್ದೇವೆ. ಏಕ್ ಪೇಡ್, ಮಾ ಕೆ ನಾಮ್ ಕ್ಯಾಂಪೇನ್ ಇದು ಎಂದು ಮೋದಿ ಹೇಳಿದ್ದರು. ಇದನ್ನೂ ಓದಿ: ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು: ಪರಂ

    #Plant4Mother ಹ್ಯಾಶ್ ಟ್ಯಾಗ್ ಉಪಯೋಗಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆಯೂ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಹ ಅಮ್ಮನೊಂದಿಗೆ ಗಿಡ ನೆಟ್ಟು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಷೇರ್ ಮಾಡಿದ್ದಾರೆ.

  • ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ

    ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ

    ಕಾರವಾರ: ಉತ್ತರಕನ್ನಡ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಜಯಗಳಿಸಿದ್ದಾರೆ. ಆದರೆ ಅಧಿಕೃತವಾಗಿ ಇನ್ನಷ್ಟೇ ಘೋಷಣೆ ಮಾಡಬೇಕಿದೆ.

    ಹೌದು. ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಗೇರಿಯವರು ಮುನ್ನಡೆ ಕಾಯ್ದುಕೊಂಡಿದ್ದರು. ಇದೀಗ ನಿಂಬಾಳ್ಕರ್‌ (Anjali Nimbalkar) ವಿರುದ್ಧ ಕಾಗೇರಿಯವರು ಗೆದ್ದು ಬೀಗಿದ್ದಾರೆ.

    ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಯವರು 7,76,968 ಇವಿಎಂ ಮತ, 3,526 ಪೋಸ್ಟಲ್ ಮತ ಸೇರಿ 7,80,494 ಮತಗಳಿಂದ ಜಯಗಳಿಸಿದ್ದಾರೆ. ನಿಂಬಾಳ್ಕರ್ ಅವರು 4,42,622 ಮತಗಳನ್ನು ಪಡೆದುಕೊಳ್ಳುವ ಮೂಲಕ ಸೋಲನುಭವಿಸಿದರು. ಒಟ್ಟಿನಲ್ಲಿ ಕಾಗೇರಿಯವರು 3,37,872 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ತನ್ನದಾಗಿಸಿಕೊಂಡಿದ್ದಾರೆ. 10,139 ನೋಟಾ ಮತಗಳು ದಾಖಲಾಗಿವೆ.

    ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರಲ್ಲಿ ಮುಗಿಲು ಮುಟ್ಟಿದೆ. ಕುಮಟಾ ಬಿಜೆಪಿ ಕಚೇರಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯಕರ್ತರು, ಮುಖಂಡರು ಗೆಲುವನ್ನ ಸಂಭ್ರಮಿಸಿದರು.

    ತಮ್ಮ ಗೆಲುವಿನ ಕುರಿತು ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಕಾಗೇರಿಯವರು, ನನ್ನ ಗೆಲುವನ್ನು ಕಾರ್ಯಕರ್ತರು ಮತದಾರಿಗೆ ಅರ್ಪಣೆ ಮಾಡುತ್ತೇನೆ. ನನ್ನ ಸೋಲಿಸಬೇಕು ಎಂದು ಪ್ರಯತ್ನಿಸಿದ ವ್ಯಕ್ತಿಗಳು ಈಗಲಾದರೂ ಆತ್ಮಾವಲೋಕನ ಮಾಡಿಕೊಳ್ಳಲಿ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಜಿಲ್ಲೆಯ ಕಾರ್ಯಕರ್ತರು ತೋರಿಸಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಶಾಸಕ ಶಿವರಾಮ್ ಹೆಬ್ಬಾರ್ ಗೆ ಟಾಂಗ್ ನೀಡಿದರು.

  • ಸಂಘ ಪರಿವಾರದ ಟ್ರಸ್ಟ್‌ಗೆ ಸಾಲ – ಕಾಗೇರಿ ಬಳಿ ಇರುವ ಆಸ್ತಿ ಎಷ್ಟು?

    ಸಂಘ ಪರಿವಾರದ ಟ್ರಸ್ಟ್‌ಗೆ ಸಾಲ – ಕಾಗೇರಿ ಬಳಿ ಇರುವ ಆಸ್ತಿ ಎಷ್ಟು?

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ (Lok Sabha Election) ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು (Vishweshwar Hegde Kageri) ಇಂದು ನಾಮಪತ್ರ ಸಲ್ಲಿಕೆ ಮಾಡಿದರು.

    ಬಿಜೆಪಿಯಿಂದ (BJP) ಆರು ಬಾರಿ ಶಾಸಕರಾದ ಕಾಗೇರಿ ಶಿಕ್ಷಣ ಸಚಿವರಾಗಿ ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಮುಂದೆ ಸೋಲು ಕಂಡ ಇವರು ಇದೇ ಮೊದಲಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ.

     

    ಆಸ್ತಿ ಎಷ್ಟಿದೆ?
    ವಿಶ್ವೇಶ್ವರ ಹೆಗಡೆ ಬಳಿ ಒಟ್ಟು 16.74 ಕೋಟಿ ರೂ. ಆಸ್ತಿಯಿದ್ದು ಪತ್ನಿ ಬಳಿ 79.32 ಲಕ್ಷ ರೂ. ಆಸ್ತಿಯಿದೆ. 6.69 ಕೋಟಿ ರೂ. ಸ್ಥಿರಾಸ್ತಿ 10.24 ಕೋಟಿ ರೂ. ಚರಾಸ್ತಿಯನ್ನು ಹೊಂದಿದ್ದಾರೆ. ಇದನ್ನೂ ಓದಿ: ಹಿಂದೂ ದೇವಾಲಯಗಳ ಮೇಲಿನ ದಾಳಿ, ಅಪರಾಧಗಳ ವಿರುದ್ಧ ಅಮೆರಿಕದಲ್ಲಿ ನಿರ್ಣಯ ಮಂಡನೆ

    ಪತ್ನಿ ಭಾರತಿ ಹೆಗಡೆ ಅವರಿಗಿಂತ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಹೆಚ್ಚಿನ ಚಿನ್ನ, ಬೆಳ್ಳಿ ಹೊಂದಿದ್ದಾರೆ. ಪತ್ನಿ ಬಳಿ 1.100 ಕೆ.ಜಿ. ಚಿನ್ನ ಇದ್ದರೆ ಕಾಗೇರಿ ಬಳಿ 1.250 ಕೆ.ಜಿ. ಚಿನ್ನ, 3.500 ಕೆ.ಜಿ. ಬೆಳ್ಳಿ ಹೊಂದಿದ್ದಾರೆ.

     

    ಇವರ ಅವಿಭಕ್ತ ಕುಟುಂಬವು ಒಟ್ಟು 3.48 ಕೋಟಿ ರೂ. ಚರಾಸ್ತಿ ಮತ್ತು 2.05 ಕೋಟಿ ರೂ. ಸ್ಥಿರಾಸ್ತಿ ಹೊಂದಿದೆ. ಹೆಗಡೆಯವರು ಪತ್ನಿ, ಮಕ್ಕಳ ಹೆಸರಿನಲ್ಲಿ ಯಾವುದೇ ಜಮೀನು ಹೊಂದಿಲ್ಲ.

    ಸಂಘ ಪರಿವಾರದ ದೀನದಯಾಳ ಟ್ರಸ್ಟ್‌ಗೆ 24.50 ಲಕ್ಷ ರೂ. ಕೈ ಸಾಲ ಕೊಟ್ಟಿದ್ದಾರೆ. ತನಗೆ ಯಾವುದೇ ಸಾಲಗಳಿಲ್ಲ ಎಂದು ತಮ್ಮ ಅಫಿಡವಿಟ್‌ನಲ್ಲಿ ಮಾಹಿತಿ ನೀಡಿದ್ದಾರೆ.

  • ಬೆಳಗಾವಿಯಲ್ಲಿ ಶೆಟ್ಟರ್‌, ಚಿಕ್ಕಬಳ್ಳಾಪುರ ಸುಧಾಕರ್‌, ಉತ್ತರ ಕನ್ನಡದಲ್ಲಿ ಕಾಗೇರಿ ಸ್ಪರ್ಧೆ- BJP 5ನೇ ಪಟ್ಟಿ ರಿಲೀಸ್‌

    ಬೆಳಗಾವಿಯಲ್ಲಿ ಶೆಟ್ಟರ್‌, ಚಿಕ್ಕಬಳ್ಳಾಪುರ ಸುಧಾಕರ್‌, ಉತ್ತರ ಕನ್ನಡದಲ್ಲಿ ಕಾಗೇರಿ ಸ್ಪರ್ಧೆ- BJP 5ನೇ ಪಟ್ಟಿ ರಿಲೀಸ್‌

    – ಬಿಜೆಪಿ ಫೈರ್‌ ಬ್ರ್ಯಾಂಡ್‌ ಅನಂತ್‌ಕುಮಾರ್‌ ಹೆಗಡೆಗೆ ಕೊಕ್‌
    – ಚಿತ್ರದುರ್ಗ ಕ್ಷೇತ್ರ ಕಾಯ್ದಿರಿಸಿದ ಬಿಜೆಪಿ

    ನವದೆಹಲಿ: ಲೋಕಸಭಾ ಚುನಾವಣೆಗೆ (Lok Sabha Election 2024) ಬಿಜೆಪಿಯು (BJP) ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

    ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌ (Jagadeesh Shettar), ರಾಯಚೂರು- ರಾಜಾ ಅಮರೇಶ್ವರ ನಾಯಕ್‌, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಚಿಕ್ಕಬಳ್ಳಾಪುರದಿಂದ ಡಾ. ಕೆ.ಸುಧಾಕರ್‌ (Dr.K.Sudhakar) ಅವರಿಗೆ ಟಿಕೆಟ್‌ ನೀಡಿದೆ. ಇದನ್ನೂ ಓದಿ: ಕೈಗಾರಿಕೋದ್ಯಮಿ, ಕಾಂಗ್ರೆಸ್‌ ಮಾಜಿ ಸಂಸದ ನವೀನ್‌ ಜಿಂದಾಲ್‌ ಬಿಜೆಪಿಗೆ ಸೇರ್ಪಡೆ

    ಚಿತ್ರದುರ್ಗ ಕ್ಷೇತ್ರದ ಟಿಕೆಟ್‌ ಅನ್ನು ಬಿಜೆಪಿ ಕಾಯ್ದಿರಿಸಿದೆ. ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಹಾಲಿ ಸಂಸದ ಎ.ನಾರಾಯಣ ಸ್ವಾಮಿ ವರ್ಸಸ್ ಜನಾರ್ದನ ಸ್ವಾಮಿ ಮಧ್ಯೆ ತೀವ್ರ ಪೈಪೋಟಿ ಇದೆ. ಜನಾರ್ದನ ಸ್ವಾಮಿ ಪರ ಸಂಘ ಪರಿವಾರ ನಿಂತಿದೆ. ಇದರ ಮಧ್ಯೆ ಗೋವಿಂದ ಕಾರಜೋಳ ಹೆಸರು ಕೂಡ ಕೇಳಿಬರುತ್ತಿದೆ. ಹೀಗಾಗಿ ಪಕ್ಷದ ಯಾರಿಗೆ ಮಣೆ ಹಾಕುತ್ತದೆ ಎಂಬುದು ಕುತೂಹಲ ಮೂಡಿಸಿದೆ.

    ಇತ್ತ ಉತ್ತರ ಕನ್ನಡ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಅನಂತ್‌ ಕುಮಾರ್‌ ಹೆಗಡೆಗೆ ಟಿಕೆಟ್‌ ಮಿಸ್‌ ಆಗಿದೆ. ಕ್ಷೇತ್ರದಲ್ಲಿ ಕಾರ್ಯಕರ್ತರಿಂದಲೇ ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಅವರ ಬದಲಿಗೆ ವಿಧಾನಸಭಾ ಮಾಜಿ ಸಭಾಧ್ಯಕ್ಷ ಕಾಗೇರಗೆ ಈ ಬಾರಿ ಪಕ್ಷ ಮಣೆ ಹಾಕಿದೆ. ಇದನ್ನೂ ಓದಿ: ಪಾಕ್‌ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನ ಆಗುತ್ತೆ: ರಾಜನಾಥ್‌ ಸಿಂಗ್‌ ಭರವಸೆ

    ಚಿಕ್ಕಬಳ್ಳಾಪುರಕ್ಕೆ ಹೈಕಮಾಂಡ್ ಕೋಟಾದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಡಾ. ಕೆ.ಸುಧಾಕರ್‌ಗೆ ಟಿಕೆಟ್ ಹೈಕಮಾಂಡ್ ಕೋಟಾದಲ್ಲಿ ನೀಡಿದೆ ಎನ್ನಲಾಗಿದೆ. ಸ್ಥಳೀಯವಾಗಿ ಸುಧಾಕರ್ ಪ್ರಭಾವ ಮತ್ತು ಬಿಜೆಪಿ ಕೋಟೆ ಎಂಬ ಲೆಕ್ಕಾಚಾರದಲ್ಲಿ ಟಿಕೆಟ್‌ ನೀಡಲಾಗಿದೆ.

    ಇನ್ನು ಬೆಳಗಾವಿಯಲ್ಲಿ ಹಾಲಿ ಸಂಸದೆ ಮಂಗಳಾ ಅಂಗಡಿ ಬದಲು ಜಗದೀಶ್ ಶೆಟ್ಟರ್‌ಗೆ ಪಕ್ಷ ಮಣೆ ಹಾಕಿದೆ. ಸ್ಥಳೀಯರ ವಿರೋಧದ ಮಧ್ಯೆಯೂ ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ವಾಪಸ್‌ ಆಗಿದ್ದ ಜಗದೀಶ್‌ ಶೆಟ್ಟರ್‌ಗೆ ಬೆಳಗಾವಿ ಟಿಕೆಟ್‌ ನೀಡಲಾಗಿದೆ. ಯಡಿಯೂರಪ್ಪ ಒತ್ತಾಯದ ಮೇರೆಗೆ ಶೆಟ್ಟರ್‌ಗೆ ಟಿಕೆಟ್ ಸಿಕ್ಕಿದೆ. ಸ್ಥಳೀಯ ನಾಯಕರ ಜೊತೆ ಮಾಜಿ ಸಿಎಂ ಯಡಿಯೂರಪ್ಪ ಸಮಾಲೋಚನೆಗೆ ನಿರ್ಧಾರ ಮಾಡಿದ್ದಾರೆ. ಮುಂದಿನ ವಾರವೇ ಬೆಳಗಾವಿ ಸಂಧಾನ ಕಸರತ್ತು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

  • ಉ.ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆ ಆಗಿದೆ: ಕಾಗೇರಿ

    ಉ.ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆ ಆಗಿದೆ: ಕಾಗೇರಿ

     ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಲೋಕಸಭಾ ಚುನಾವಣೆಗೆ (Loksabha Election) ಅಭ್ಯರ್ಥಿ ಘೋಷಣೆ ಆಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರು (Vishweshwar Hegde Kageri) ಹೇಳಿದ್ದಾರೆ.

    ಬಿಜೆಪಿಯಿಂದ (BJP) ಮುಂದೆ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೆನರಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಿಲಾಗಿದೆ. ಆ ಅಭ್ಯರ್ಥಿಯೇ ಬಿಜೆಪಿಯ ಕಮಲ ಎಂದಿದ್ದಾರೆ. ಈ ಕಮಲಕ್ಕಾಗಿ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುತ್ತಾರೆ ಎಂದು ತಿಳಿಸಿದರು.

    ಉತ್ತರ ಕನ್ನಡ ಜಿಲ್ಲೆಯ ಸಂದದ ಅನಂತ್ ಕುಮಾರ್ ಹೆಗ್ಡೆ (Anantkumar Hegde) ರಾಜಕೀಯವಾಗಿ ನಿವೃತ್ತಿಯಾಗುವುದಾಗಿ ಈ ಹಿಂದೆಯೇ ಹೇಳಿಕೊಂಡಿದ್ದು, ಪಕ್ಷದ ಸಂಘಟನೆಯಾಗಲಿ ಅಥವಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ದೂರ ಉಳಿದಿದ್ದರು. ಹೀಗಾಗಿ ಬಿಜೆಪಿ ಪಕ್ಷದಿಂದ ಮುಂಬರುವ ಲೋಕಸಭಾ ಚುನಾವಣೆಗೆ ಯಾರು ಸ್ಪರ್ಧಿಗಳಾಗುತ್ತಾರೆ ಅಥವಾ ಜೆಡಿಎಸ್‍ಗೆ ಸ್ಥಾನ ಬಿಟ್ಟುಕೊಡುತ್ತಾ ಎಂಬುದು ಕುತೂಹಲ ಮೂಡಿಸಿತ್ತು. ಇದನ್ನೂ ಓದಿ: ಹಿಂದೂಗಳು ನಮಸ್ಕಾರ ಮಾಡ್ಬೇಕು ಅಂತ ನಾನು ಹೇಳಿದ್ದೀನಾ? – ಸಚಿವ ಜಮೀರ್‌ ಪ್ರಶ್ನೆ

    ಈ ನಡುವೆ ಶಿರಸಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ, ಕಾರವಾರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಹೆಸರು ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಕಾರವಾರಕ್ಕೆ ಆಗಮಿಸಿದ ಕಾಗೇರಿಯವರು ಈ ರೀತಿ ಹೇಳುವ ಮೂಲಕ ತೀವ್ರ ಕುತೂಹಲ ಹುಟ್ಟಿಸಿದ್ದಾರೆ.