Tag: Vishweshwar Hegde Kageri

  • ಡಿಕೆಶಿಗೆ ನಾಳೆಯೇ ಸಿಎಂ ಆಗಬೇಕೆಂಬ ತವಕ: ಕಾಗೇರಿ

    ಡಿಕೆಶಿಗೆ ನಾಳೆಯೇ ಸಿಎಂ ಆಗಬೇಕೆಂಬ ತವಕ: ಕಾಗೇರಿ

    ಚಿತ್ರದುರ್ಗ: ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ನಾಳೆಯೇ ಸಿಎಂ (CM) ಆಗಬೇಕೆಂಬ ತವಕವಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಹೇಳಿದರು.

    ಚಿತ್ರದುರ್ಗದ (Chitradurga) ಕೊಳಾಳ್ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ (Siddaramaiah) ಅಧಿಕಾರದಲ್ಲಿ 2 ದಿನ ಇರ್ತೀನೋ ಬಿಡ್ತೀನೋ ಎಂಬ ಭಾವವಿದೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ ಯಾರಾಗಬೇಕೆಂಬ ಸ್ಪರ್ಧೆ ನಡೆಯುತ್ತಿದ್ದು, ಅಧಿಕಾರದ ದಾಹ ಹೆಚ್ಚಾಗಿದೆ. ಅಧಿಕಾರ ಹಂಚಿಕೆ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದ್ದು, ಈ ಸರ್ಕಾರಕ್ಕೆ ಜನರ ಹಿತ ಕಾಪಾಡುವಲ್ಲಿ ಕಾಳಜಿಯೇ ಕಾಣುತ್ತಿಲ್ಲ ಎಂದು ಆರೋಪಿಸಿದರು.

    ಕಾವೇರಿ ನೀರು ಈಗಲೂ ತಮಿಳುನಾಡಿಗೆ ಹರಿಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಶಿವಮೊಗ್ಗ, ಕೋಲಾರದಲ್ಲಿ ಖಡ್ಗ ಹಿಡಿದು ಟಿಪ್ಪು ಮೆರವಣಿಗೆ ನಡೆದಿದ್ದು, ಕೋಮು ಭಾವನೆ ಕೆರಳಿಸುವ ಮತ್ತು ದ್ವೇಷ ಭಾವನೆ ಹಬ್ಬಿಸುವ ಕೆಲಸಕ್ಕೆ ಸರ್ಕಾರದ ರಕ್ಷಣೆ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

    ಎಲ್ಲೆಡೆ ಬರ ತಾಂಡವವಾಡ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ 17 ತಂಡ ರಚಿಸಿಕೊಂಡು ಬರ ಅಧ್ಯಯನ ನಡೆಸುತ್ತಿದೆ. ಇಂದು ಚಿತ್ರದುರ್ಗ ಜಿಲ್ಲೆಯಾದ್ಯಂತ ನಮ್ಮ ತಂಡ ಅಧ್ಯಯನ ನಡೆಸಲಿದ್ದು, ಈ ಭಾಗದಲ್ಲಿ ಜೋಳ, ಮೆಕ್ಕೆಜೋಳ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಓರ್ವ ರೈತ ಎಕರೆಗೆ 30 ಸಾವಿರ ರೂ. ಖರ್ಚು ಮಾಡಿದ್ದು, ಆತನಿಗೆ 2 ಸಾವಿರ ರೂ. ಕೂಡ ಕೈಗೆ ಸಿಗುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಶೀಘ್ರವೇ ರೈತರಿಗೆ ಬೆಳೆ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಮೇವು, ನೀರು ಪೂರೈಕೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

    ರಾಜ್ಯದ ರೈತರು, ಸಾಕಿ ಸಲಹಿದ ದನ-ಕರುಗಳನ್ನು ಮಾರಾಟ ಮಾಡಲು ಮುಂದಾಗಿದ್ದು, ಬದುಕನ್ನು ಕಟ್ಟಿಕೊಳ್ಳಲು, ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ರಾಜ್ಯದ ಸಿಎಂ, ಡಿಸಿಎಂ, ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಗುತ್ತಿಗೆದಾರರ ಹಣ ಬಿಡುಗಡೆಗೊಳಿಸಿ, ಆ ಹಣ ಪಡೆಯುವಲ್ಲಿ ತಲ್ಲೀನರಾಗಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ – ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಿಜೆಪಿ ಸಂಸದ

    ಸರ್ಕಾರದಿಂದ ರಾಜ್ಯದ ಜನರ ಕಷ್ಟಕ್ಕೆ ಸ್ಪಂದಿಸುವ ಚಟುವಟಿಕೆ ನಡೆದಿಲ್ಲ. ಬಿಜೆಪಿ ಅಧ್ಯಯನದ ಬಳಿಕ ಸರ್ಕಾರ ಎಚ್ಚೆತ್ತು ಜಿಲ್ಲಾ ಸಚಿವರಿಗೆ ಪ್ರವಾಸ ಮಾಡಲು ಸಿಎಂ ಸೂಚಿಸಿದ್ದು, ಪ್ರತಿ ಜಿಲ್ಲೆಗಳಿಗೆ 5, 10, 12 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಆದರೆ ಈವರೆಗೆ ಜಿಲ್ಲೆಗೆ ತಲುಪಿಲ್ಲ. ಹಣ ನೀಡುವುದಾಗಿ ಘೋಷಿಸಿದ್ದಾರಷ್ಟೇ ಎಂದು ಕಿಡಿಕಾರಿದರು.

    ನಮ್ಮ ಬಿಜೆಪಿ ಸರ್ಕಾರದಲ್ಲಿ ಸಮರ್ಪಕ ವಿದ್ಯುತ್ ಪೂರೈಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ವಿದ್ಯುತ್ ಕಡಿತದಿಂದ ರೈತರಿಗೆ ಸಮಸ್ಯೆಯಾಗುತ್ತಿದೆ. ರಾತ್ರಿ ವಿದ್ಯುತ್ ಆನ್ ಹಾಗೂ ಆಫ್ ಮಾಡುವ ವೇಳೆ ರೈತರಿಗೆ ಸಮಸ್ಯೆಯಾಗುತ್ತಿದ್ದು, ಕಾಡು ಪ್ರಾಣಿಗಳಿಂದ ರೈತರಿಗೆ ಅನೇಕ ಕಡೆ ಸಮಸ್ಯೆ ಉದ್ಭವವಾಗಿದೆ. ಹೀಗಾಗಿ ನಿರಂತರ 7 ಗಂಟೆ ವಿದ್ಯುತ್ ಅನ್ನು ರೈತರ ಜಮೀನಿಗೆ ಸರಬರಾಜು ಮಾಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಸಮರ್ಪಕ ಬಿಸಿ ಊಟ, ಪೌಷ್ಟಿಕ ಆಹಾರ ನೀಡದ್ದಕ್ಕೆ ಮಕ್ಕಳೇ ಶಾಲೆಗೆ ಬೀಗ ಹಾಕಿ ಆಕ್ರೋಶ

    ಕೇಂದ್ರ ಸರ್ಕಾರ ಈಗಾಗಲೇ ಅಧಿಕಾರಿಗಳಿಂದ ಬರ ಅಧ್ಯಯನ ನಡೆಸಿದೆ. ಕೇಂದ್ರ ಸರ್ಕಾರಕ್ಕೆ ಅಧಿಕಾರಿಗಳು ವರದಿ ನೀಡುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದತ್ತ ಬೆರಳು ಮಾಡಿ ತೋರಿಸಲಾಗುತ್ತಿದೆ. 2014 ರಿಂದ 23 ರವರೆಗೆ 13.488 ಕೋಟಿ ರೂ. ಹಣ ಬಂದಿದೆ. ಆದರೂ ಕೇಂದ್ರದತ್ತ ಬೆರಳು ಮಾಡುವ ರಾಜ್ಯ ಸರ್ಕಾರಕ್ಕೆ ನಾಚಿಕೆ ಆಗಬೇಕು. ಮೋದಿ ಸರ್ಕಾರ ರಾಜ್ಯಕ್ಕೆ ಯಾವತ್ತೂ ಅನ್ಯಾಯ ಮಾಡಿಲ್ಲ. ಸಿದ್ದರಾಮಯ್ಯ ಈ ರೀತಿ ಆಡಳಿತ ಮಾಡಿದರೆ ಜನ ಸಹಿಸಲ್ಲ. ಮುಂದಿನ ದಿನಗಳಲ್ಲಿ ಜನ ಸೂಕ್ತ ಉತ್ತರ ಕೊಡುತ್ತಾರೆ ಎಂದರು.

  • ಲೋಕಸಭಾ ಚುನಾವಣೆಗೆ ಸಂಸದ ಅನಂತ್‌ಕುಮಾರ್ ಹೆಗಡೆ ಬಿಜೆಪಿ ಅಭ್ಯರ್ಥಿ: ಕಾಗೇರಿ

    ಲೋಕಸಭಾ ಚುನಾವಣೆಗೆ ಸಂಸದ ಅನಂತ್‌ಕುಮಾರ್ ಹೆಗಡೆ ಬಿಜೆಪಿ ಅಭ್ಯರ್ಥಿ: ಕಾಗೇರಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸಂಸದ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ. ಈ ಬಾರಿ ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ (Anantkumar Hegde) ಅವರೇ ಮತ್ತೆ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿ ಆಗಲಿದ್ದಾರೆ ಎಂದು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ತಿಳಿಸಿದ್ದಾರೆ.

    ಶಿರಸಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಗೆ (Lok Sabha Elections) ಹಾಲಿ ಸಂಸದ ಅನಂತ್‌ಕುಮಾರ್ ಹೆಗಡೆ ಅವರೇ ಅಭ್ಯರ್ಥಿಯಾಗಲಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಹಾಗೂ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ ಯಾರೇ ನಿಂತರು ಗೆಲ್ಲಿಸಿ ತರುತ್ತೇವೆ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಆಧಾರದಲ್ಲಿಯೇ ಮತಯಾಚನೆ ಮಾಡುತ್ತೇವೆ. ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು. ಅದಕ್ಕಾಗಿ ಪಕ್ಷದ ವರಿಷ್ಠರು ಯಾರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು‌ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್‌ ಕಾರಿನ ಮೇಲೆ ಕುಳಿತು ಮಹಿಳೆಯ ಭರ್ಜರಿ ಡಾನ್ಸ್‌ – ರೀಲ್ಸ್‌ಗಾಗಿ ಕಾರು ಕೊಟ್ಟ ಅಧಿಕಾರಿ ಅಮಾನತು

    ಇದೇ ವೇಳೆ ಕಾವೇರಿ ಹೋರಾಟ ವಿಚಾರವಾಗಿ ಮಾತನಾಡಿ, ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕು. ಕನ್ನಡ ನಾಡಿನ ಹಿತ ಕಾಪಾಡಬೇಕು ಮತ್ತು ರಾಜ್ಯಕ್ಕೆ ನ್ಯಾಯ ಸಿಗಬೇಕು. ಬಿಜೆಪಿ-ಜೆಡಿಎಸ್ ಪಕ್ಷಗಳು ಸೇರಿ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇವೆ ಎಂದರಲ್ಲದೇ, ಕಾವೇರಿ ನೀರಿನ ವಿಚಾರದಲ್ಲಿ ಅಧಿಕಾರದ ದುರ್ಬಳಕೆಯಾಗುತ್ತಿದೆ. INDIA (ಇಂಡಿಯಾ) ಮೈತ್ರಿಗಾಗಿ ರಾಜ್ಯದ ಹಿತವನ್ನ ಬಲಿ ಕೊಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

    ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

    ಕಾರವಾರ: ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಭಾನುವಾರ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಈ ದೇಶದಲ್ಲಿ ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ – ಮಲ್ಲಿಕಾರ್ಜುನ ಖರ್ಗೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್

    ಅಕ್ಕಪಕ್ಕದ ಕ್ಷೇತ್ರದ ನಾಯಕರು ಹೇಳಿದರು ಅಂತಾ ನನಗೆ ಟಿಕೆಟ್ ತಪ್ಪಿಸಿದರು. ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದ್ರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹಾಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

  • ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್- ಪಕ್ಷೇತರನಾಗಿ ಸ್ಪರ್ಧೆ

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೂಳಿಹಟ್ಟಿ ಶೇಖರ್- ಪಕ್ಷೇತರನಾಗಿ ಸ್ಪರ್ಧೆ

    ಕಾರವಾರ: ಚಿತ್ರದುರ್ಗದ (Chitradurga) ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ರವರು (Goolihatti Shekar) ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ (Resignation) ನೀಡಿದ್ದಾರೆ.

    ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಗೆ (Sirsi) ಆಗಮಿಸಿದ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ (Vishweshwar Hegde Kageri) ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ (Election) ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ. ಎಸ್‌ಸಿ (SC) ಜನಾಂಗದವರು ಎಸ್‌ಸಿ ಕ್ಷೇತ್ರದಲ್ಲಿ ನಿಲ್ಲಬೇಕು, ಎಸ್‌ಟಿ (ST) ಕ್ಷೇತ್ರದಲ್ಲಿ ಎಸ್‌ಟಿ ಜನಾಂಗದವರು ಚುನಾವಣೆಗೆ ನಿಲ್ಲಬೇಕು. ಜನರಲ್‌ನವರು (General) ಜನರಲ್‌ನಲ್ಲಿ ನಿಲ್ಲಬೇಕು ಎಂಬ ನಿಯಮ ನಾವೇ ಮಾಡಿಕೊಂಡಿದ್ದೇವೆ. ಈ ನಿಯಮದಡಿ ಪಕ್ಷ ಸಿದ್ಧಾಂತ ಹಾಗೂ ಸಾಮಾಜಿಕ ನ್ಯಾಯದ ನಿಯಮ ಮಾಡಿಕೊಂಡಿದೆ ಎಂದರು. ಇದನ್ನೂ ಓದಿ: ಒಂದು ಲಕ್ಷ ಮತಗಳೊಂದಿಗೆ ಗೆಲುವು ಸಾಧಿಸುವೆ: ಪ್ರೀತಂ ಗೌಡ 

    ಎಸ್‌ಸಿ ಜನಾಂಗದವನಾಗಿ ಜನರಲ್‌ನಲ್ಲಿ ಟಿಕೆಟ್ ಕೇಳಿರುವುದು ನನ್ನ ತಪ್ಪು. ಪಕ್ಷದಲ್ಲಿ ಸಾಮಾಜಿಕ ನ್ಯಾಯ ಮತ್ತು ತತ್ವ ಸಿದ್ಧಾಂತಗಳು ಅವರದ್ದೇ ಆಗಿರುತ್ತದೆ. ಪಕ್ಷದ ಜನರಲ್‌ನಲ್ಲಿ ಟಿಕೆಟ್ ಕೇಳಿದ್ದರಿಂದ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಜನರ ಮಧ್ಯದಿಂದ ಬಂದವನಾಗಿ ಜನರ ಮಧ್ಯೆ ಇರಬೇಕು ಎನ್ನುವ ದೃಷ್ಟಿಯಿಂದ ಕ್ಷೇತ್ರದ ಮತದಾರರ ಆಕಾಂಕ್ಷೆಯಂತೆ ಈ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ವರುಣಾ, ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ: ಪುಟ್ಟರಂಗಶೆಟ್ಟಿ

  • ಸೋಲು ಕಾಣದ ಕಾಗೇರಿ ಕ್ಷೇತ್ರದಲ್ಲಿ ಚುನಾವಣೆ ಹವಾ ಹೇಗಿದೆ? – 2 ಪ್ರಬಲ ಜನಾಂಗದ ನಾಯಕರು ಮತ್ತೆ ಕಾಳಗಕ್ಕೆ ಇಳಿತಾರಾ?

    ಸೋಲು ಕಾಣದ ಕಾಗೇರಿ ಕ್ಷೇತ್ರದಲ್ಲಿ ಚುನಾವಣೆ ಹವಾ ಹೇಗಿದೆ? – 2 ಪ್ರಬಲ ಜನಾಂಗದ ನಾಯಕರು ಮತ್ತೆ ಕಾಳಗಕ್ಕೆ ಇಳಿತಾರಾ?

    ಕಾರವಾರ: ವಿಧಾನಸಭಾ ಚುನಾವಣೆ ಬಂದಾಗಲೆಲ್ಲ ಶಿರಸಿಯಲ್ಲಿ (Sirsi) ಬಿಜೆಪಿಯ ಕಾಗೇರಿಯೇ ಗೆಲ್ಲುತ್ತಾರೆ ಎಂಬ ಮಾತೊಂದಿದೆ. ಹಾಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗಿನಿಂದಲೂ `ಸೋಲಿಲ್ಲದ ಸರದಾರ’ ಎನಿಸಿಕೊಂಡಿದ್ದಾರೆ. ಬಿಜೆಪಿಯ ಪ್ರಬಲ ಬ್ರಾಹ್ಮಣ ನಾಯಕ ಕಾಗೇರಿಯನ್ನು ಎದುರಿಸಲು ಕಾಂಗ್ರೆಸ್‌ನಲ್ಲಿ ಇನ್ನೊಂದು ಜನಾಂಗದ ಪ್ರಬಲ ನಾಮಧಾರಿ ನಾಯಕ ಭೀಮಣ್ಣ ನಾಯ್ಕರನ್ನು ಮತ್ತೊಮ್ಮೆ ಕಣಕ್ಕಿಳಿಸಲು ವೇದಿಕೆ ಸಜ್ಜಾಗಿದೆ.

    ಸುಮಾರು ಕಾಲು ಶತಮಾನಗಳಿಂದ ಬಿಜೆಪಿ (BJP) ಹಿಡಿತದಲ್ಲಿರುವ ಕ್ಷೇತ್ರವನ್ನು ಕಿತ್ತುಕೊಳ್ಳಬೇಕು ಎಂದು ಎದುರಾಳಿ ಪಕ್ಷಗಳು ತಂತ್ರ ಹುಡುಕುತ್ತಿವೆ. ಹೀಗಾಗಿ ಕಾಗೇರಿ ಎದುರು ನಾಮಧಾರಿ ಹಾಗೂ ಬ್ರಾಹ್ಮಣ ನಾಯಕರನ್ನು ನಿಲ್ಲಿಸಿ ಸೋಲಿಸಬೇಕು ಎಂಬ ಜಾತಿ ಲೆಕ್ಕಾಚಾರ ವಿರೋಧ ಪಕ್ಷ ಹಾಕುತ್ತಿವೆ. ಈ ನಡುವೆ ಬಿಜೆಪಿಯಲ್ಲೇ ಕಾಗೇರಿಗೆ ಈ ಬಾರಿ ಟಿಕೆಟ್ ತಪ್ಪಿಸಬೇಕು ಎಂಬ ಪ್ರಯತ್ನಗಳೂ ಸಹ ನಡೆದಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭಾ ಕ್ಷೇತ್ರದ ಸದ್ಯದ ರಾಜಕೀಯ ಚಿತ್ರಣ.

    ಹವ್ಯಕ ಬ್ರಾಹ್ಮಣ ಹಾಗೂ ನಾಮಧಾರಿಗಳು ಇಲ್ಲಿನ ನಿರ್ಣಾಯಕ ಮತದಾರರು. ಸ್ವಜಾತಿಯ ಹವ್ಯಕರು ಕಾಗೇರಿಗೆ ಅಭಯ ಹಸ್ತರಾಗಿದ್ದಾರೆ. ಜೊತೆಗೆ ಬಿಜೆಪಿ ಅಭಿಮಾನಿ ನಾಮಧಾರಿಗಳೂ ಸಾಕಷ್ಟಿರುವುದು ವಿಶ್ವೇಶ್ವರ ಹೆಗಡೆ ಕಾಗೇರಿಯ ನಿರಂತರ ಗೆಲುವಿಗೆ ಸಹಕಾರಿಯಾಗಿದೆ. ಹಣದ ಹೊಳೆ, ಕೀಳುಮಟ್ಟದ ರಾಜಕೀಯ ಕೆಸರೆರಚಾಟಯಿಲ್ಲದೇ ಅತ್ಯಂತ ಶಾಂತ, ಸರಳವಾಗಿ ಚುನಾವಣೆ ನಡೆಯುವ ಅಪರೂಪದ ಕ್ಷೇತ್ರ ಎಂಬ ವಿಶೇಷತೆ ಶಿರಸಿ ವಿಧಾನಸಭಾ ಕ್ಷೇತ್ರಕ್ಕಿದೆ. ಕಾಂಗ್ರೆಸ್‌ನ ಭೀಮಣ್ಣ ನಾಯ್ಕ ಹಾಗೂ ಕಾಗೇರಿ ಇಬ್ಬರೂ ಸ್ವಭಾವದಲ್ಲಿ ತಾಳಮೇಳಗಳಿವೆ. ಇಬ್ಬರೂ ಪಕ್ಷ ನಿಷ್ಠೆ ಹೊಂದಿದವರು. ಪಕ್ಷ ಕಟ್ಟಿದವರಾಗಿದ್ದಾರೆ.

    ಸೋಲಿಲ್ಲದೇ 6 ಬಾರಿ ನಿರಂತರ ಗೆಲುವು: ವಿಶ್ವೇಶ್ವರ ಹೆಗಡೆ ಕಾಗೇರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಬೆಳೆದು ಬಂದವರು. ರಾಜಕೀಯ ಹಿನ್ನೆಲೆಯಿಲ್ಲದೇ ಸಂಘ ಪರಿವಾರದ ನೆರಳಿನಲ್ಲಿ ಇರುವವರು. ಸತತ 6 ಬಾರಿ ವಿಧಾನಸಭೆಯನ್ನು ಪ್ರತಿನಿಧಿಸಿದ್ದಾರೆ. ಮೊದಲು ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ 1994, 1999, ಹಾಗೂ 2004ರಲ್ಲಿ ಬಿಜೆಪಿಯಿಂದ ಗೆದ್ದು ಬಂದಿದ್ದರು.

    2008ರ ಕ್ಷೇತ್ರ ಪುನರ್ ವಿಂಗಡನೆಯ ನಂತರ ಶಿರಸಿ, ಸಿದ್ದಾಪುರ ತಾಲೂಕನ್ನೊಳಗೊಂಡ ಕ್ಷೇತ್ರದಿಂದ ನಿರಂತರ 3 ಬಾರಿ ಆಯ್ಕೆಯಾಗಿದ್ದಾರೆ. 2013ರ ಚುನಾವಣೆಯಲ್ಲಿ ಅವರ ಗೆಲುವಿನ ಅಂತರ ಕಡಿಮೆಯಾಗಿತ್ತು. ಆದರೆ, 2018ರಲ್ಲಿ ಮೋದಿ ಅಲೆ ಹಾಗೂ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಫಲ ಮತ ಹೆಚ್ಚಿಸಿಕೊಳ್ಳುವ ಚೇತರಿಕೆ ಕಂಡಿದೆ.

    ಯಾವುದೇ ವಿವಾದಗಳಿಗೆ ಸಿಲುಕದೇ ಕ್ಲೀನ್ ಇಮೇಜ್ ಉಳಿಸಿಕೊಂಡಿರುವುದು, ಕ್ಷೇತ್ರದ ಸಾಮಾನ್ಯನ ಮದುವೆ, ಮುಂಜಿ ಸಮಾರಂಭಗಳಿಗೂ ತೆರಳಿ ಶುಭ ಕೋರುವುದು ಕಾಗೇರಿ ರಾಜಕಾರಣದ ವಿಶೇಷ. ಸುದೀರ್ಘ ರಾಜಕೀಯ ಅನುಭವ, ಸಿಎಂ ಕ್ಯಾಂಡಿಡೇಟ್ ಆಗುವಷ್ಟು ಪ್ರಭಾವ ಹೊಂದಿದ್ದರೂ, ಕ್ಷೇತ್ರದ ಹಲವು ಗಂಭೀರ ಸಮಸ್ಯೆಗಳಿಗೆ ಪರಿಹಾರ ಹುಡುಕಿಲ್ಲ. ಪರ್ಯಾಯ ನಾಯಕರನ್ನು ಬೆಳೆಸಿಲ್ಲ. ಕಾರ್ಯಕರ್ತರ, ಆಪ್ತರ ವೈಯಕ್ತಿಕ ಕಾರ್ಯಗಳಿಗೆ ಸ್ಪಂದಿಸುವುದಿಲ್ಲ ಎಂಬ ಆರೋಪ ಕಾಗೇರಿಯವರ ಮೇಲಿದೆ.

    ಸ್ವಪಕ್ಷದಲ್ಲೇ ವಿರೋಧ: ಶಿರಸಿ ಕ್ಷೇತ್ರದಲ್ಲಿ ಸಂಘ ಪರಿವಾರದ ಬೇರು ಗಟ್ಟಿಯಾಗಿದೆ. ಬಿಜೆಪಿ ಸಂಘಟನೆಯೂ ಉತ್ತಮವಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಕಮಲದ ಚಿಹ್ನೆಯು ಕಾಣುತ್ತಿದೆ. ಆದರೆ, ಪಕ್ಷದಲ್ಲಿ ಒಳಜಗಳವೂ ಸಾಕಷ್ಟಿವೆ. ಇದೇ ಊರಿನ ಸಂಸದ ಅನಂತಕುಮಾರ್‌ ಹೆಗಡೆ ಹಾಗೂ ಕಾಗೇರಿ ಸಂಬಂಧ ಹಿಂದಿನಿಂದಲೂ ಹಾಳುಬಿದ್ದಿದೆ. ಪಕ್ಷದಲ್ಲೇ ಕಾಗೇರಿ ವಿರೋಧಿಗಳು ಸಾಕಷ್ಟು ಜನರಿದ್ದಾರೆ. ಆದರೆ, ಯಾವುದೇ ಗೌಜು, ಗದ್ದಲವಿಲ್ಲದೇ ತಮ್ಮ ನಯ ನಾಜೂಕಿನ, ಜಾಣ ನಡೆಯಿಂದಲೇ ಕಾಗೇರಿ ಅದನ್ನು ಹ್ಯಾಂಡಲ್ ಮಾಡಿಕೊಂಡು ಬಂದಿದ್ದಾರೆ.

    ಗುಜರಾತ್ ಮಾದರಿಯ ಪ್ರಯೋಗವನ್ನು ಬಿಜೆಪಿ ರಾಜ್ಯದಲ್ಲೂ ಮಾಡುವ ಯೋಚನೆಯಲ್ಲಿದೆ. ನಿರಂತರವಾಗಿ ಐದಾರು ಬಾರಿ ಗೆದ್ದ ನಾಯಕರಿಗೆ ಬೇರೆ ಕ್ಷೇತ್ರ ನೀಡಿ, ಅಲ್ಲಿ ಸ್ಪರ್ಧಿಸುವ ಚಾಲೆಂಜ್ ನೀಡಲಾಗುತ್ತದೆ. ಅದರಲ್ಲಿ ಕಾಗೇರಿಯವರ ಹೆಸರೂ ಕೇಳಿಬರುತ್ತಿದೆ. ಆರ್‌ಎಸ್‌ಎಸ್ ಘಟ್ಟಿ ಇರುವ ಶಿರಸಿಯಲ್ಲಿ ಈ ಹೊಸ ಪ್ರಯೋಗ ನಡೆಯುತ್ತದೆ ಎಂಬುದು ಕಾಗೇರಿ ಬದಲು ಬಿಜೆಪಿ ಟಿಕೆಟ್ ಬಯಸುತ್ತಿರುವವರ ವಾದ.

    ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಸಚ್ಚಿದಾನಂದ ಹೆಗಡೆ ಶಿರಸಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಸಾಲಿನಲ್ಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಕೆ.ಜಿ.ನಾಯ್ಕ ನಾಮಧಾರಿ ಜಾತಿಯ ಕಾರ್ಡ್ ಉರುಳಿಸಿ ಪ್ರಯತ್ನ ನಡೆಸಿದ್ದಾರೆ. ಕಾಗೇರಿಗೆ ಟಿಕೆಟ್‌ ತಪ್ಪಿದರೆ ತಾವ್ಯಾಕೆ ಪ್ರಯತ್ನಿಸಬಾರದು ಎಂದು ಕೆಲ ಯುವ ಮುಖಗಳೂ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ, ಕಾಗೇರಿ ಮಾತ್ರ ಮುಂದಿನ ಬಾರಿಗೆ ನನಗೆ ಟಿಕೆಟ್, ಗೆಲ್ಲುವುದು ನಾನೇ ಎಂದು ಹೋದಲ್ಲೆಲ್ಲ ಸ್ಪಷ್ಟವಾಗಿ ಹೇಳಿಕೊಳ್ಳುತ್ತಿದ್ದಾರೆ.

    ಸಂಸದ ಅನಂತಕುಮಾರ್ ಹೆಗಡೆ ರಾಜಕೀಯ ಸನ್ಯಾಸ!: ಬಿಜೆಪಿಯಿಂದ ಸಂಸದರಾಗಿರುವ ಅನಂತಕುಮಾರ್ ಹೆಗಡೆ ಅನಾರೋಗ್ಯದ ಕಾರಣ ಹೇಳಿ ರಾಜಕೀಯ ನಿವೃತ್ತಿಯಾಗುವುದಾಗಿ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಇದಲ್ಲದೇ ಪಕ್ಷದ ಯಾವ ಕಾರ್ಯಕ್ರಮದಲ್ಲೂ ಭಾಗಿಯಾಗದೇ ಭೂಗತರಾಗಿದ್ದರು.

    ಪಕ್ಷದ ನಾಯಕರಿಗೂ ಸಿಗದೇ ಅಜ್ಞಾತರಾಗಿದ್ದರಿಂದ ಮುಂಬರುವ ಲೋಕಸಭೆಗೆ ಅನಂತಕುಮಾರ್ ಹೆಗಡೆ ಸ್ಪರ್ಧಿಸದಿದ್ದರೇ ಜಿಲ್ಲೆಯಲ್ಲಿ ಹೆಚ್ಚು ಹಿಡಿತ ಹೊಂದಿರುವ ಕಾಗೇರಿಯವರನ್ನೇ ಮುಂಬರುವ ಲೋಕಸಭೆಗೆ ಪಕ್ಷದಿಂದ ಅಭ್ಯರ್ಥಿ ಮಾಡಬೇಕು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. ಹೀಗಾಗಿ ಪಕ್ಷ ಆಪರೇಶನ್ ಕಮಲಕ್ಕೆ ಕೈ ಹಾಕಿದ್ದು, ಜೆಡಿಎಸ್‌ನಲ್ಲಿರುವ ಶಿರಸಿಯ ಬ್ರಾಹ್ಮಣ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಹೆಗಡೆಯನ್ನು ಬಿಜೆಪಿಗೆ ಕರೆತರುವ ಪ್ರಯತ್ನ ಸಫಲವಾಗಿದೆ‌. ಆದರೆ ಮೂಲಗಳ ಪ್ರಕಾರ ಕಾಗೇರಿಯವರು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂಬ ಮಾತುಗಳು ಕೇಳಿಬಂದಿದೆ. ಆದರೆ ಕಾಗೇರಿಯವರು ಪಕ್ಷದ ತೀರ್ಮಾನವನ್ನು ಧಿಕ್ಕರಿಸುವುದು ಅನುಮಾನ.

    ಸಚಿವರಾಗಿ, ಸ್ಪೀಕರ್ ಆಗಿ ಸಹ ಕಾರ್ಯನಿರ್ವಹಿಸಿದ್ದರಿಂದ ಜೊತೆಗೆ ಉತ್ತಮ ಚಾರಿತ್ಯ, ಭ್ರಷ್ಟಾಚಾರ ಮುಕ್ತರಾಗಿ ಕ್ಲೀನ್ ಇಮೇಜ್ ಹೊಂದಿರುವುದರಿಂದ ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ರೇಸ್‌ನಲ್ಲಿ ಸಹ ತಮ್ಮ ಹೆಸರು ಸೇರುತ್ತದೆ, ತಮಗೊಂದು ಅವಕಾಶ ಸಿಗಬಹುದು ಎಂಬ ನಂಬಿಕೆಯಲ್ಲಿ ಕಾಗೇರಿ ಇದ್ದಾರೆ. ಹೀಗಾಗಿ ಲೋಕಸಭೆಗಿಂತ ವಿಧಾನಸಭೆಗೆ ಸ್ಪರ್ಧೆ ಮಾಡುವ ಇಂಗಿತ ಕಾಗೇರಿಯದ್ದಾಗಿದ್ದು. ಈ ಕಾರಣದಿಂದ ಅನಂತಕುಮಾರ್ ನಡೆ ಬಗ್ಗೆ ಕಾಗೇರಿ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.

    ರಾಮಕೃಷ್ಣ ಹೆಗಡೆ ಗೆದ್ದ ಕ್ಷೇತ್ರ: ಶಿರಸಿ ತಾಲೂಕಿನ ಅರ್ಧ ಭಾಗ ಹಾಗೂ ಸಿದ್ದಾಪುರ ತಾಲೂಕನ್ನೊಳಗೊಂಡ ಶಿರಸಿ ವಿಧಾನಸಭಾ ಕ್ಷೇತ್ರದಿಂದ 1957 ಹಾಗೂ 1962ರಲ್ಲಿ ಖ್ಯಾತ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. ಇಂದಿಗೂ ಕ್ಷೇತ್ರದಲ್ಲಿ ಅವರ ಸಾಕಷ್ಟು ಅಭಿಮಾನಿಗಳಿದ್ದಾರೆ. ಆದರೆ, ಅವರದ್ದೇ ಕುಟುಂಬದ ಶಶಿಭೂಷಣ ಹೆಗಡೆ ಇಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಸಾಧ್ಯವಾಗದೇ ಇರುವುದು ವಿಪರ್ಯಾಸ. 1967ರಲ್ಲಿ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ರಾಮಕೃಷ್ಣ ಹೆಗಡೆ ಅವರು ಕ್ಷೇತ್ರ ಬದಲಿಸಬೇಕಾಯಿತು. ನಂತರ ಶಿರಸಿಯಲ್ಲಿ ಎರಡು ಬಾರಿ ಎಂ.ಎಚ್. ಜಯಪ್ರಕಾಶ್‌ ನಾರಾಯಣ್‌, ಒಂದು ಸಾರಿ ಉಮಾಕಾಂತ್‌ ಬುದ್ದು ಬೋರ್ಕರ್, 3 ಬಾರಿ ಗೋಪಾಲ್‌ ಮುಕುಂದ ಕಾನಡೆ, ಒಮ್ಮೆ ಪ್ರೇಮಾನಂದ ಜಯವಂತ, ಎರಡು ಬಾರಿ ವಿವೇಕಾನಂದ ವೈದ್ಯ ಆಯ್ಕೆಯಾದರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಯೊಂದಿಗೆ ಮತ್ತೆ ಕ್ಷೇತ್ರ ಸಾಮಾನ್ಯಕ್ಕೆ ತೆರೆದುಕೊಂಡಿತು. 1999ರಿಂದಲೂ ಶಿರಸಿ ಕ್ಷೇತ್ರದಲ್ಲಿ ನಿರಂತರವಾಗಿ ಬಿಜೆಪಿ ಗೆಲುವು ಸಾಧಿಸುತ್ತಿದೆ.

    ಕಾಂಗ್ರೆಸ್‌ನಲ್ಲಿ ಸ್ಪರ್ಧೆಗೆ ಹಲವರು: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ನಾಯಕಿ ಮಾರ್ಗರೇಟ್ ಆಳ್ವಾ ಪುತ್ರ ನಿವೇದಿತ್‌ ಆಳ್ವಾ, ಸಿದ್ದಾಪುರದ ಮುಖಂಡ ವಸಂತ ನಾಯ್ಕ, ಶಿರಸಿಯ ಶ್ರೀಪಾದ ಹೆಗಡೆ ಕಡವೆ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿ ಫೈಟ್‌ನಲ್ಲಿದ್ದಾರೆ. ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ನಿವೇದಿತ್ ಆಳ್ವ ಶಿರಸಿ ಕ್ಷೇತ್ರದಿಂದ ಕುಮಟಾ ಕ್ಷೇತ್ರಕ್ಕೆ ಜಿಗಿದಿದ್ದಾರೆ‌.

    ಜೆಡಿಎಸ್‌ನಲ್ಲಿರುವ (JDS) ಶಶಿಭೂಷಣ ಹೆಗಡೆ (Shashibhushan Hegde) ಅವರನ್ನು ಕಾಂಗ್ರೆಸ್‌ಗೆ (Congress) ಕರೆತರುವ ಯತ್ನ ನಡೆದಿದ್ದರೂ, ಕೊನೆಗೆ ಬಿಜೆಪಿ ತೆಕ್ಕೆಗೆ ಶಶಿಭೂಷಣ್ ಹೆಗಡೆ ಬಿದ್ದಿದ್ದಾರೆ. ಹೀಗಾಗಿ ಜಾತಿ ಲೆಕ್ಕಾಚಾರದಲ್ಲಿ ಕಾಗೇರಿಯನ್ನು ಎದುರಿಸುವ ತಂತ್ರ ಕಾಂಗ್ರೆಸ್‌ಗೆ ಸಫಲವಾಗಿಲ್ಲ. ಇನ್ನು ಬ್ರಾಹ್ಮಣ ನಾಯಕರ ಕೊರತೆ ಸಹ ಕಾಂಗ್ರೆಸ್‌ನಲ್ಲಿ ಇದೆ. ಹೀಗಾಗಿ ನಾಮಧಾರಿ ನಾಯಕನಿಗೇ ಮುಂದೆ ಟಿಕೆಟ್ ಕೊಡುವ ಅನಿವಾರ್ಯತೆ ಇದೆ. ಇದನ್ನೂ ಓದಿ: ಕಮಲ ಬಿಟ್ಟು ‘ಕೈ’ ಹಿಡಿಯಲು ಮುಂದಾದ ಮಾಲಕರೆಡ್ಡಿ

    ಜಿಲ್ಲಾ ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯವೇ ಕಾಂಗ್ರೆಸ್ ಬೆಳವಣಿಗೆಗೆ ಮುಳ್ಳಾಗಿದೆ. ಶಿರಸಿ ಕ್ಷೇತ್ರದವರೇ ಆಗಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ ಪಕ್ಷ ತೊರೆದು ಕೈ ಹಿಡಿದಿದ್ದಾರೆ. ಹೀಗಾಗಿ ಪ್ರಬಲ ಜನಾಂಗದ ನಾಯಕ ಜನಾಂಗದ ಹಲವು ಮುಖಂಡರು ಕಾಂಗ್ರೆಸ್ ಮನೆಗೆ ಸೇರಿದ್ದಾರೆ‌. ಇನ್ನು ಕಾಂಗ್ರೆಸ್‌ನಲ್ಲಿ ಮಾಜಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕಗೆ ಕಾಂಗ್ರಸ್ ಟಿಕೆಟ್ ನೀಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ. ಇವರು ಸಕ್ರಿಯ ರಾಜಕೀಯದಲ್ಲಿದ್ದು, ಕ್ಷೇತ್ರದಲ್ಲಿ ಸಹ ಉತ್ತಮ ಹೆಸರು ಮಾಡಿದವರು.

    ಜಿಲ್ಲೆಯಲ್ಲಿ ಕಾಂಗ್ರಸ್ ಉಳಿಯಲು ಕಾರಣರಾದವರು. ಸರಳ, ಸೌಮ್ಯ ಸ್ವಭಾವದ ಹಾಗೂ ಬಿಜೆಪಿಯ ಕಾಗೇರಿಯಂತೆಯೇ ವ್ಯಕ್ತಿತ್ವ ಹೊಂದಿದವರು. ಆದರೆ ಹಲವು ಬಾರಿ ಸ್ಪರ್ಧಿಸಿ ಕಾಗೇರಿ ಎದುರು ಸೋಲು ಕಂಡಿದ್ದ ಇವರಿಗೆ, ಮತ್ತೆ ಕಾಗೇರಿ ವಿರುದ್ಧ ಸ್ಪರ್ಧೆ ಮಾಡಿದರೇ ಗೆಲ್ಲುತ್ತಾರಾ ಎಂಬ ಪ್ರಶ್ನೆ ಕ್ಷೇತ್ರದ ನಾಯಕರಲ್ಲೇ ಇದೆ. ಆದರೆ ಪ್ರಬಲ ನಾಮಧಾರಿ ಸಮುದಾಯದ ಮುಖಂಡರಾದ್ದರಿಂದ ಗೆಲ್ಲಲು ಸಹ ಅವಕಾಶವಿದೆ ಎಂಬುದು ಹಲವರ ವಾದ. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಮೊದಲ ಹಂತದ ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಜಿಲ್ಲೆಯ ಹಳಿಯಾಳ, ಭಟ್ಕಳ, ಕಾರವಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಮಾತ್ರ ಘೋಷಣೆ ಮಾಡಲಾಗಿದ್ದು, ಶಿರಸಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಕಗ್ಗಂಟಾಗೆ ಮುಂದುವರಿದಿದೆ.

    ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರೆಷ್ಟು?
    ಪುರುಷ ಮತದಾರರು- 99,276
    ಮಹಿಳಾ ಮತದಾರರು- 98,211
    ಒಟ್ಟು- 1,97,487

    ಕ್ಷೇತ್ರದ ಬಗ್ಗೆ ಜನ ಏನು ಹೇಳ್ತಾರೆ?: ಕ್ಷೇತ್ರದಲ್ಲಿ ಸ್ಪೀಕರ್ ಕಾಗೇರಿ ಪರ ಜನರ ಒಲವು ಹೆಚ್ಚು ಕಂಡುಬರುತ್ತದೆ. ಹಿಂದಿಗಿಂತಲೂ ಕ್ಷೇತ್ರದ ಅಭಿವೃದ್ಧಿಯನ್ನು ಈ ಬಾರಿ ಕಾಗೇರಿ ಮಾಡಿದ್ದಾರೆ ಎಂಬ ಅಭಿಪ್ರಾಯವಿದೆ. ಹಾಗೆಯೇ ಕಾಂಗ್ರಸ್‌ನ ಸ್ಪರ್ಧಾಕಾಂಕ್ಷಿ ಭೀಮಣ್ಣ ನಾಯ್ಕ ಪರ ಸಹ ಉತ್ತಮ ಅಭಿಪ್ರಾಯ ಜನರಲ್ಲಿದೆ. ಬ್ರಾಹ್ಮಣ ಮತ್ತು ನಾಮಧಾರಿಯ 2 ಪ್ರಬಲ ಜನಾಂಗದ ನಾಯಕರು ಈ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮುಖಾಮುಖಿ ಆಗಲಿದ್ದಾರೆ. ಹೀಗಾಗಿ ಯಾರಿಗೆ ಮತದಾರ ಮತ್ತೊಮ್ಮೆ ಆಯ್ಕೆ ಮಾಡುತ್ತಾನಾ ಅಥವಾ ಹೊಸ ಮುಖಕ್ಕೆ ಮಣೆಹಾಕುತ್ತಾನಾ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ ಹೆಚ್ಚಳ ನಿರ್ಧಾರ ಕೈಬಿಟ್ಟ ಹೆದ್ದಾರಿ ಪ್ರಾಧಿಕಾರ

  • ಸಾರ್ವಜನಿಕರಿಂದ ಕ್ಲಾಸ್‌ -ಶಂಕುಸ್ಥಾಪನೆ ಮಾಡದೇ ಕಾಗೇರಿ ವಾಪಸ್

    ಸಾರ್ವಜನಿಕರಿಂದ ಕ್ಲಾಸ್‌ -ಶಂಕುಸ್ಥಾಪನೆ ಮಾಡದೇ ಕಾಗೇರಿ ವಾಪಸ್

    ಕಾರವಾರ: ರಸ್ತೆ ಶಂಕುಸ್ಥಾಪನೆಗೆ ತೆರಳಿದ್ದ ಸ್ಪೀಕರ್ (Speaker) ವಿಶ್ವೇಶ್ವರ ಹೆಗಡೆ ಕಾಗೇರಿಯವರು (Vishweshwar Hegde Kageri) ಸಾರ್ವಜನಿಕರ ಆಕ್ರೋಶ ಎದುರಿಸಿದ ಘಟನೆ ಸಿದ್ದಾಪುರದ (Siddapura) ಬೇಡ್ಕಣಿಯಲ್ಲಿ (Bedkani) ನಡೆದಿದೆ.

    ಮಂಜೂರಾದ 300 ಮೀಟರ್ ಸಿಮೆಂಟ್ ರಸ್ತೆ ಬದಲಿಗೆ ಸಂಪೂರ್ಣ ಟಾರ್ ರಸ್ತೆ ಮಾಡುವಂತೆ ಸಾರ್ವಜನಿಕರು ಕಾಗೇರಿಯವರ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಮಾಡಿರುವ ರಸ್ತೆಯ ಗುಣಮಟ್ಟ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಂಕುಸ್ಥಾಪನೆ ನೆರವೇರಿಸದೆ ಕಾಗೇರಿ ಕಾರು ಹತ್ತಿ ತೆರಳಿದ್ದಾರೆ. ಇದನ್ನೂ ಓದಿ: ಕರ್ತವ್ಯನಿರತ ಬಸ್ ಕಂಡಕ್ಟರ್‌ಗೆ ಎದೆನೋವು- ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಸಿಗದೆ ನರಳಾಟ

  • ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು, ಅದನ್ನು ಸಹಿಸಲಸಾಧ್ಯ: ಕಾಗೇರಿ

    ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು, ಅದನ್ನು ಸಹಿಸಲಸಾಧ್ಯ: ಕಾಗೇರಿ

    ಬೆಳಗಾವಿ: ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ವಹಿಸಲಾಗಿದೆ. ಅಧಿವೇಶನಕ್ಕೆ (Session) ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಖಡಕ್ ಎಚ್ಚರಿಕೆ ನೀಡಿದ್ದಾರೆ

    ನಗರದ ಸುವರ್ಣ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 19 ರಿಂದ ಬೆಳಗಾವಿಯ (Belagavi) ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ 6 ವಿಧೇಯಕ ಮಂಡನೆಗೆ ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲದ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಈ ಬಾರಿ ನಡೆಯುವ ಗಡಿಪ್ರದೇಶ ಅಭಿವೃದ್ಧಿ ವಿಧೇಯಕ ಸೇರಿ 6 ಮಸೂದೆಗಳನ್ನು ಮಂಡಿಸಲಾಗುವುದು ಎಂದು ತಿಳಿಸಿದರು.

    ಚಳಿಗಾಲದ ಅಧಿವೇಶನದಲ್ಲಿ ಪ್ರತಿಯೊಬ್ಬ ಶಾಸಕರ ಹಾಜರಾತಿ ಕಡ್ಡಾಯವಾಗಿದೆ. ಗೈರಾಗುವುದಾದರೆ ಪೂರ್ವ ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದರು.

    ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ವಿಶೇಷ ಆದ್ಯತೆ ನೀಡಲಾಗುವುದು. ಈ ಸಲವೂ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದೇವೆ. ಪ್ರಶಸ್ತಿ ಪ್ರದಾನ ದಿನಾಂಕ, ಶಾಸಕರ ಹೆಸರು ಇನ್ನೂ ಅಂತಿಮವಾಗಿಲ್ಲ. ಅಧಿವೇಶನಕ್ಕೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಪ್ರೀತಂಗೌಡ ನಮಗೆ ಅಣ್ಣನ ಸಮಾನ – ವೀಡಿಯೋವನ್ನು ತಿರುಚಿ ವೈರಲ್ ಮಾಡಿದ್ದಾರೆ: ಸ್ಥಳೀಯರ ಆಕ್ರೋಶ

    ಸಚಿವರು-ಶಾಸಕರು, ಅಧಿಕಾರಿಗಳ ವಸತಿ, ಊಟ, ವಾಹನದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲು ಸೂಚಿಸಿದ್ದೇನೆ. ಬೆಳಗಾವಿಯಲ್ಲಿ ಈ ಸರ್ಕಾರದ ಕೊನೆಯ ಅಧಿವೇಶನವಾಗಿದಕ್ಕೆ ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಉಭಯ ಸದನದ ಕಲಾಪಗಳು ಮುಕ್ತವಾಗಿ ನಡೆಯಲಿವೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರಿಗೂ ಮುಕ್ತ ಅವಕಾಶ ನೀಡಲಾಗುವುದು ಎಂದರು. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    Live Tv
    [brid partner=56869869 player=32851 video=960834 autoplay=true]

  • ಶಾಲಾ ಪಠ್ಯದಲ್ಲಿ ಭಗವದ್ಗೀತೆ  ಸೇರಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

    ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

    ದಾವಣಗೆರೆ: ಶಾಲಾ ಪಠ್ಯದಲ್ಲಿ (Text Book) ಭಗವದ್ಗೀತೆ (Bhagavad Gita) ಬರಬೇಕು. ಎಲ್ಲಾ ಶಾಲೆಗಳಲ್ಲೂ ಕಡ್ಡಾಯಗೊಳಿಸಬೇಕು ಎಂಬ ಸರ್ಕಾರದ ನಿರ್ಧಾರಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಬೆಂಬಲ ಸೂಚಿಸಿದರು.

    ದಾವಣಗೆರೆ ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ-2ರ ರಾಜ್ಯ ಮಟ್ಟದ ಭಗವದ್ಗೀತಾ ಅಭಿಯಾನದ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎನ್ನುವ ಚರ್ಚೆಯಾಗುತ್ತಿದೆ. ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು. ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದರ ಜೊತೆಗೆ ಅದನ್ನ ಕಡ್ಡಾಯವಾಗಿ ಮಕ್ಕಳಿಗೆ ಕಲಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ದೇಶದ ಮೊದಲ ಚಿನ್ನದ ATM ಉದ್ಘಾಟನೆ – ಇಲ್ಲಿ ಹಣ ಅಲ್ಲ, ಚಿನ್ನ ಡ್ರಾ ಮಾಡ್ಬೋದು!

    ಸಮಾಜದ ಸ್ಥಿತಿಗತಿಗಳನ್ನು, ಆಗುಹೋಗುಗಳನ್ನು ಗಮನಿಸಿದರೆ ಮನಸ್ಸುಗಳು ಅನೇಕ ರೀತಿಯಲ್ಲಿ ಒಡೆದು ಹೋಗಿವೆ. ಭಾಷೆಗಾಗಿ, ಗಡಿಗಳಿಗಾಗಿ, ನೀರಿಗಾಗಿ, ಆಹಾರ ಪದ್ಧತಿಗಳಿಗಾಗಿ, ಪ್ರತಿಯೊಂದರಲ್ಲೂ ಭಿನ್ನತೆಗಳನ್ನು ಕಾಣುತ್ತಿದ್ದೇವೆ. ನಮ್ಮಲ್ಲಿ ಏಕತೆ ಬೆಳೆಯಬೇಕಾದರೆ ಅದಕ್ಕೆ ಭಗವದ್ಗೀತೆಯೇ ಮೂಲ ಆಧಾರವಾಗಿರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಪೊಲೀಸ್‌ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ – ಬಿಜೆಪಿ ಮಾಜಿ ಸಂಸದೆ ವಿರುದ್ಧ ಎಫ್‌ಐಆರ್‌

    Live Tv
    [brid partner=56869869 player=32851 video=960834 autoplay=true]

  • ಚುನಾವಣೆಗೆ ನಿಂತವರಲ್ಲಿ ಒಳ್ಳೆಯವರು ಕಾಣದಿದ್ರೆ ನೋಟಾಗೆ ಒತ್ತಿ: ಕಾಗೇರಿ ಕರೆ

    ಚುನಾವಣೆಗೆ ನಿಂತವರಲ್ಲಿ ಒಳ್ಳೆಯವರು ಕಾಣದಿದ್ರೆ ನೋಟಾಗೆ ಒತ್ತಿ: ಕಾಗೇರಿ ಕರೆ

    ಕಲಬುರಗಿ: ಚುನಾವಣೆಗೆ (Elections) ನಿಂತವರಲ್ಲಿ ಯಾರೂ ಒಳ್ಳೆಯವರು ಕಾಣದಿದ್ದರೆ ನೋಟಾಗೆ ಒತ್ತಿ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಕರೆ ನೀಡಿದ್ದಾರೆ.

    ಬುಧವಾರ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ `ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ `ನನ್ನ ಮತ ಮಾರಾಟಕ್ಕಿಲ್ಲ’ ಎಂಬ ಆತ್ಮಸಾಕ್ಷಿಯ ಅಭಿಯಾನ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: 15 ಸಾವಿರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

    ಚುನಾವಣೆಯಲ್ಲಿಂದು ಹಣ, ತೋಳ್ಬಲ ಹಾಗೂ ಜಾತಿ ಬಲ ಪ್ರಮುಖ ಪಾತ್ರ ವಹಿಸುತ್ತಿವೆ. ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಮತದಾರರು ಅರಿಯಬೇಕು. ಮತ ಮಾರಾಟ ಮಾಡದೇ ಸ್ಫರ್ಧಾಳುಗಳಲ್ಲಿ ಉತ್ತಮರನ್ನು ಆಯ್ಕೆ ಮಾಡಿ. ಒಂದು ವೇಳೆ ಚುನಾವಣೆ ನಿಂತವರಲ್ಲಿ ಯಾರೂ ಒಳ್ಳೆಯವರು ಕಾಣದಿದ್ದರೆ ನೋಟಾಗೆ ಒತ್ತಿ ಎಂದು ಹೇಳಿದ್ದಾರೆ. ಇದನ್ನೂ ಓದಿ: iPhone ತಯಾರಿಸುವ ಕೋಲಾರದ ವಿಸ್ಟ್ರಾನ್‌ ಖರೀದಿಗೆ ಮುಂದಾದ ಟಾಟಾ

    ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮೌಲ್ಯಗಳು ಕುಸಿಯುತ್ತಿವೆ. ಭ್ರಷ್ಟಾಚಾರ ವ್ಯಾಪಿಸಿದೆ. ಜನಪ್ರತಿನಿಧಿಗಳು ಜನರಿಗೆ ನೀಡಿದ ಆಶ್ವಾಸನೆ ಈಡೇರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಕಾರ್ಯಾಂಗದಲ್ಲಿ ಮಾನವೀಯತೆ ಮರೆತ ಪರಿಣಾಮ ಜನರು ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡಿ ರೋಸಿ ಹೋಗಿದ್ದಾರೆ. ನ್ಯಾಯಾಲಯಗಳು (Court) ನ್ಯಾಯ ನೀಡುವ ಬದಲಾಗಿ ನಿರ್ಣಯ ನೀಡುತ್ತಿವೆ. ಇನ್ನು ಮಾಧ್ಯಮ ಕ್ಷೇತ್ರವೂ ಸಾಮಾಜಿಕ ಹೊಣೆಗಾರಿಕೆ ಮರೆತಿದ್ದು, ಇಲ್ಲಿಯೂ ಭ್ರಷ್ಟಾಚಾರ ಕಾಲಿಟ್ಟಿದೆ. ಶಿಕ್ಷಣ ಸಂಸ್ಥೆಗಳು ರಾಷ್ಟ್ರೀಯತೆಯನ್ನು ಮರೆತಂತಿವೆ ಎಂದಿದ್ದಾರೆ.

    ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಈಗಾಗಲೇ ವಿಧಾನಸಭೆಯಲ್ಲಿ ಚರ್ಚಿಸಲಾಗಿದೆ. ಪಕ್ಷಾಂತರ ಕಾಯ್ದೆಗೆ ಮತ್ತಷ್ಟು ಬಲ ನೀಡಲು ಚಿಂತನೆ ನಡೆದಿದೆ. ಪ್ರಣಾಳಿಕೆ ಈಡೇರಿಸುವತ್ತ ಆಡಳಿತ ಪಕ್ಷ ಗಮನಹರಿಸಬೇಕಿದೆ. ಇವೆಲ್ಲದರ ಬಗ್ಗೆ ಜನಾಭಿಪ್ರಾಯ ಮೂಡಿಸಲು ಜನರೊಂದಿಗೆ ಸಂವಾದ ನಡೆಸಲಾಗುತ್ತಿದೆ. ಈಗಾಗಲೇ ರಾಯಚೂರು, ಹುಬ್ಬಳ್ಳಿ, ದಾವಣಗೆರೆ, ವಿಜಯಪುರ, ಕೋಲಾರ ಸೇರಿ ಹಲವು ಕಡೆ ಸಂವಾದ ನಡೆಸಿದ್ದು, ಇಂದು ಕಲಬುರಗಿಯಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

    69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

    ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರು ವಿಭಾಗದ 9 ಜಿಲ್ಲೆಗಳ 54 ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

    ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಗೋಪೂಜೆ ನೆರವೇರಿಸಿ ಸಹಕಾರಿ ಧ್ವಜಾರೋಹಣ ಮಾಡಿದರು. ಇದೇ ವೇಳೆ ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಿಸಲಾಯಿತು. ಬಳಿಕ ಸಹಕಾರ ಪತ್ರಿಕೆ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ವೋಟರ್‌ ಡೇಟಾ ಹಗರಣ ಆರೋಪ – ಕಾಂಗ್ರೆಸ್‌ ವಿರುದ್ಧ ರಾಜ್ಯ ಮುಖ್ಯಚುನಾವಣಾಧಿಕಾರಿ ಬಿಜೆಪಿ ದೂರು

    ಕಾರ್ಯಕ್ರಮದಲ್ಲಿ ಮಾತನಾಡಿದ ಕಾಗೇರಿ, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಮೈಸೂರು ಉಸ್ತುವಾರಿ ಸಚಿವರಾಗಿ ಸೋಮಶೇಖರ್ (S.T.Somshekar) ಅವರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ವಿಶೇಷ ಮೆರುಗು ನೀಡಿದವರು ಎಂದು ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

    ಸಹಕಾರ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರ. ಸಹಕಾರಿ ರತ್ನ ಪ್ರಶಸ್ತಿ ಪಡೆದ ಹಿರಿಯರು, ಸಹಕಾರಿ ಕ್ಷೇತ್ರದ ಏಳಿಗೆಗೆ ಅಪಾರವಾಗಿ ಶ್ರಮಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿನ ಸವಾಲುಗಳನ್ನು ಮೆಟ್ಟಿ ನಿಂತು ಜನಜೀವನಕ್ಕೆ ಬೇಕಾದ ಕೊಡುಗೆಗಳನ್ನು ಕೊಡಲು ಸಹಕಾರಿ ಸಪ್ತಾಹ ಕಾರ್ಯಕ್ರಮ ಸಹಕಾರಿಯಾಗಲಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಉತ್ತಮ ಸಲಹೆಗಳನ್ನು ನೀಡಲು ಈ ಸಹಕಾರ ಸಪ್ತಾಹ ಕಾರ್ಯಕ್ರಮ ಸಾಕ್ಷಿಯಾಗಬೇಕು. ಸಹಕಾರಿ ಸಂಘಗಳು ಜನತೆಯ ವಿಶ್ವಾಸ ಗಳಿಸುವುದರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿವೆ ಎಂದು ಹೇಳಿದರು.

    ಸಹಕಾರಿ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ, ರಾಜ್ಯದ 6 ಸಾವಿರಕ್ಕಿಂತ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ, ಯಶಸ್ವಿನಿ ಯೋಜನೆ ಮರುಜಾರಿ, 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆಗೆ ಸೋಮಶೇಖರ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗುಜರಾತ್ ಮೂಲದ ಗಣಿ ಉದ್ಯಮಿಗೆ ಶಾಸಕನಿಂದ 9 ಕೋಟಿ ದೋಖಾ ಆರೋಪ

    ಯಶವಂತಪುರ ಕ್ಷೇತ್ರದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. 209 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಂಚನಬೆಲೆಯಿಂದ ಕುಡಿಯುವ ನೀರು ಕಲ್ಪಿಸುವ ಭಗೀರಥ ಪ್ರಯತ್ನ ಮಾಡಿದ್ದಾರೆ ಎಂದರು.

    ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ.ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

    ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಸಹಕಾರ ಸಚಿವರಾಗಿ ಕೆಲಸ ಮಾಡುತ್ತಿದ್ದೇನೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಅತಿಹೆಚ್ಚು ಸಾಲ ನೀಡಿದ್ದು ಬಸವರಾಜ ಬೊಮ್ಮಾಯಿ ಅವರ ಸರ್ಕಾರ. 5,700 ಕೋಟಿ ರೂ. ಸಾಲಮನ್ನಾ ಮಾಡಿದ್ದು ನಮ್ಮ ನೆಚ್ಚಿನ ನಾಯಕರಾದ ಬಿ.ಎಸ್.ಯಡಿಯೂರಪ್ಪ ಎಂದು ಬಣ್ಣಿಸಿದರು.

    ಸಾಲ ಮನ್ನಾಕ್ಕಾಗಿ ಬಜೆಟ್‌ನಲ್ಲಿ ಹಣ ಒದಗಿಸಿ ಐತಿಹಾಸಿಕ ತೀರ್ಮಾನ ಮಾಡಿದ್ದು ಯಡಿಯೂರಪ್ಪ ಅವರು. ಕಾಂಗ್ರೆಸ್ ಸರ್ಕಾರ ಯಶಸ್ವಿನಿ ಯೋಜನೆಯನ್ನು ರದ್ದು ಮಾಡಿತು. ಆದರೆ ಬಿಜೆಪಿ ಸರ್ಕಾರ ಅದನ್ನು ಮರುಜಾರಿ ಮಾಡಿದೆ. ಈ ಮೂಲಕ ಲಕ್ಷಾಂತರ ರೈತರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯೋಧರ ವಿರುದ್ಧ ಮೀಡಿಯಾ ಪಾಟ್ನರ್ಸ್‌ಗೆ ಜಯ – ಮಾಧ್ಯಮ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್

    ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜುಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.

    ಕ್ಷೇತ್ರದ ಡಾಂಬರೀಕರಣಕ್ಕೆ 200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ರಾಜಕಾಲುವೆ ಸಮಸ್ಯೆ ಬಗೆಹರಿಸಲು 120 ಕೋಟಿ ಅನುದಾನ ಬಿಡುಗಡೆ ಆಗಿದೆ. ವಿಶ್ವೇಶ್ವರಯ್ಯ, ಬನಶಂಕರಿ 6ನೇ ಹಂತದ ಅಭಿವೃದ್ಧಿಗೆ 208 ಕೋಟಿ ಹಣ ಬಿಡುಗಡೆಯಾಗಿದೆ. ಕಾವೇರಿ ನೀರು ಪೂರೈಕೆ ಕಾಮಗಾರಿ ಆರಂಭವಾಗಿದೆ. ಮಂಚನಬೆಲೆಯಿಂದ 72 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಕೈಗೆತ್ತುಕೊಳ್ಳಲಾಗಿದೆ ಎಂದು ಹೇಳಿದರು. ನಂತರ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]