Tag: Visvesvaraya Technological University

  • ಲವ್‌ ಫೇಲ್ಯೂರ್‌ ಶಂಕೆ – ಮುದ್ದೇನಹಳ್ಳಿ ವಿಟಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

    ಲವ್‌ ಫೇಲ್ಯೂರ್‌ ಶಂಕೆ – ಮುದ್ದೇನಹಳ್ಳಿ ವಿಟಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ (Visvesvaraya Technological University) ಮುದ್ದೇನಹಳ್ಳಿ ಕ್ಯಾಂಪಸ್ ನಲ್ಲಿ ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಕಾಲೇಜಿನ ವಸತಿ ನಿಲಯದ (Hostel) ಕೊಠಡಿಯಲ್ಲಿ 22 ವರ್ಷದ ಬಾಬು ವಿ ಫ್ಯಾನಿಗೆ ಕೊರಳೊಡ್ಡಿ ಕೊನೆಯುಸಿರು ಚೆಲ್ಲಿದ್ದಾನೆ. ಅಂದಹಾಗೆ ಇಂದು ಬೆಳಗ್ಗೆ 10 ಗಂಟೆಯವರೆಗೂ ಚೆನ್ನಾಗಿಯೇ ಇದ್ದ ಬಾಬು ನಂತರ ಇದ್ದಕ್ಕಿದ್ದಂತೆ ಕೊಠಡಿಗೆ ಹೋಗಿ ಫ್ಯಾನಿಗೆ ಹಗ್ಗ ಕಟ್ಟಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಇದನ್ನೂ ಓದಿ: Bharat Mobility Global Expo | ವಿನೂತನ ವಾಹನಗಳ ವಿಶ್ವರೂಪವನ್ನೇ ನೋಡ್ತಿದ್ದೇನೆ: ಹೆಚ್‌ಡಿಕೆ

    ಇನ್ನೂ ಸಾಯುವ ಮುನ್ನ ತನ್ನ ಅಣ್ಣನ ಮೊಬೈಲ್‌ಗೆ ಸ್ನೇಹಿತರು ಕೊಡಬೇಕಾದ ಹಣದ ವಿವರ, ಬ್ಯಾಂಕ್ ನಲ್ಲಿರುವ ಹಣದ ಮಾಹಿತಿ ಹಾಗೂ ಎಟಿಎಂನ ಪಿನ್‌ ನಂಬರ್‌ ಮೆಸೇಜ್ ಮಾಡಿದ್ದಾನೆ. ಇದ್ರಿಂದ ಕೂಡಲೇ ತಮ್ಮನಿಗೆ ಅಣ್ಣ ಕರೆ ಮಾಡಿದ್ರೂ ಕರೆ ಸ್ವೀಕರಿಸಿಲ್ಲ. ತದನಂತರ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಕೊಠಡಿಗೆ ಹೋಗಿ ನೋಡಲಾಗಿ ಆತ್ಮಹತ್ಯೆ ಮಾಡಕೊಂಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರ್ ಇ ವಿಟಾರಾ ಅನಾವರಣ; 500 ಕಿಮೀ ರೇಂಜ್

    ಇನ್ನೂ ಬಾಬು ಯಾಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದರ ಬಗ್ಗೆ ನಿಖರ ಕಾರಣ ಯಾರ ಬಳಿಯೂ ಹೇಳಿಕೊಂಡಿಲ್ಲ. ಕಾಲೇಜಿನ ಸಹಪಾಠಿಗಳು ಹೇಳಿರುವ ಮಾಹಿತಿ ಪ್ರಕಾರ ಬಾಬು ಕಾಲೇಜಿನಲ್ಲೇ ತಮ್ಮದೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನ ಪ್ರೀತಿ ಮಾಡುತ್ತಿದ್ದ ಎನ್ನಲಾಗಿದೆ. ಅದೇ ಹುಡಿಗಿಯನ್ನ ಇಂದು ತನ್ನ ಬೈಕ್ ಮೂಲಕವೇ ಕಾಲೇಜು ಕ್ಯಾಂಪಸ್ ನಿಂದ ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಿಬಂದಿದ್ದನಂತೆ. ಆದ್ರೆ ಆಕೆ ಹಾಗೂ ಬಾಬು ನಡುವೆ ಅದೇನ್ ಮನಸ್ತಾಪ ಆಗಿದೆಯೋ ಗೊತ್ತಿಲ್ಲ. ಅಲ್ಲಿಂದ ಬಂದವನೇ ನೇರವಾಗಿ ಕೊಠಡಿಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಘಟನೆ ನಂತರ ನಂದಿಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯೆ ಶವಾಗಾರಕ್ಕೆ ರವಾನಿಸಿದ್ದಾರೆ. ಮೃತನ ಸಂಬಂಧಿಕರು ವಿಚಾರಣೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುಡಾ ಮಾಜಿ ಆಯುಕ್ತನ ಹೆಸ್ರಲ್ಲಿ 198, ಎಂಎಲ್‌ಸಿ ಹೆಸ್ರಲ್ಲಿ 128 ಬೇನಾಮಿ ಸೈಟ್ – 631 ಸೈಟುಗಳ ಮಾಹಿತಿ ಕೇಳಿದ ಇಡಿ

  • ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ 18 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ ಹೆಸ್ಕಾಂ

    ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ 18 ಲಕ್ಷ ರೂ. ವಿದ್ಯುತ್ ಬಿಲ್ ನೀಡಿದ ಹೆಸ್ಕಾಂ

    ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ (Visvesvaraya Technological University) ಹೆಸ್ಕಾಂ (HESCOM) ಬರೋಬ್ಬರಿ 18 ಲಕ್ಷ ರೂ. ಬಿಲ್ ಅನ್ನು ನೀಡಿದ್ದು, ಜೂನ್ ತಿಂಗಳ ವಿದ್ಯುತ್ ಬಿಲ್ (Electricity Bill) ಕಂಡು ಬೆಳಗಾವಿ (Belagavi) ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ವಿದ್ಯಾಶಂಕರ್ ಹೌಹಾರಿದ್ದಾರೆ.

    ಕಾಂಗ್ರೆಸ್ (Congress) ಸರ್ಕಾರ ರಾಜ್ಯದ ಜನತೆಗೆ ಉಚಿತ 200 ಯೂನಿಟ್ ವಿದ್ಯುತ್ ನೀಡುವ ಭರವಸೆ ನೀಡಿದ ಬೆನ್ನಲ್ಲೇ ವಿದ್ಯುತ್ ದರ ಏಕಾಏಕಿ ಏರಿಕೆಯಾಗಿದ್ದು, ಜನರು ಶಾಕ್ ಆಗಿದ್ದಾರೆ. ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಏರಿಕೆ ಹಿನ್ನಲೆ ವಿದ್ಯುತ್ ದರ ಏರಿಕೆಯಿಂದ ಬೆಳಗಾವಿಯ ವಿಟಿಯುಗೆ 5 ಲಕ್ಷ ರೂ. ಹೆಚ್ಚುವರಿ ಬಿಲ್ ಬಂದಿದ್ದು, ವಿದ್ಯುತ್ ಬಿಲ್‌ನಿಂದ ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ್ ಶಾಕ್‌ಗೆ ಒಳಗಾಗಿದ್ದಾರೆ. ಇದನ್ನೂ ಓದಿ: ಸಿಎಂ ಅವ್ರೇ ಒಮ್ಮೆ ಆತ್ಮವಿಮರ್ಶೆ ಮಾಡಿಕೊಳ್ಳಿ- 2018ರ ಪಬ್ಲಿಕ್ ಟಿವಿ ವರದಿ ತೆಗೆದು ಸರ್ಕಾರಕ್ಕೆ ತಿವಿದ ಯತ್ನಾಳ್

    ರಾಜ್ಯದ ಐದು ಕಡೆ ವಿಭಾಗೀಯ ಕೇಂದ್ರಗಳನ್ನು ಹೊಂದಿರುವ ವಿಟಿಯು ವಿಭಾಗೀಯ ಕೇಂದ್ರ ಹಾಗೂ ವಿಟಿಯು ಕ್ಯಾಂಪಸ್ ಸೇರಿ ಜೂನ್ ತಿಂಗಳಲ್ಲಿ 35 ಲಕ್ಷ ರೂ. ಬಿಲ್ ಬಂದಿದೆ. ಅದರಲ್ಲಿ ಬೆಳಗಾವಿಯಲ್ಲಿರುವ ವಿಟಿಯು ಕ್ಯಾಂಪಸ್ಸಿನ ಈ ತಿಂಗಳ ಬಿಲ್ 18 ಲಕ್ಷ ರೂ. ಎಂದು ನಮೂದಿಸಲಾಗಿದೆ. ವಿಟಿಯು ಮುಖ್ಯ ಕ್ಯಾಂಪಸ್ ಸೇರಿ 6 ವಿಭಾಗೀಯ ಕೇಂದ್ರಗಳ ಮೇ ತಿಂಗಳ ವಿದ್ಯುತ್ ಬಿಲ್ 35 ಲಕ್ಷ ರೂ.ಬಂದಿದ್ದು, ಮಾರ್ಚ್ ತಿಂಗಳಲ್ಲಿ 25,56,958 ರೂ. ಹಾಗೂ ಏಪ್ರಿಲ್ ತಿಂಗಳಲ್ಲಿ 25,29,021 ರೂ. ವಿದ್ಯುತ್ ಬಿಲ್ ಪಾವತಿಸಿದೆ. ಇದನ್ನೂ ಓದಿ: ಬಸ್ ಸೀಟಿಗಾಗಿ ಕೈಕೈ ಮಿಲಾಯಿಸಿದ ಮೈಸೂರು ಮಹಿಳೆಯರು – ನಾರಿ ʻಶಕ್ತಿʼ ಪ್ರದರ್ಶನ

    ಮೇ ತಿಂಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ 35,05,869 ರೂ. ಬಿಲ್ ನೀಡಿದೆ. ಆದರೆ ಈಗ ಏಕಾಏಕಿ 10 ಲಕ್ಷ ಬಿಲ್ ಬಂದಿರುವುದಕ್ಕೆ ವಿಟಿಯು ಆಡಳಿತ ಮಂಡಳಿ ಕಂಗಾಲಾಗಿದ್ದು, 10 ಲಕ್ಷ ಹೆಚ್ಚುವರಿ ಬಿಲ್ ಬಂದಿರುವುದಕ್ಕೆ ಹೆಸ್ಕಾಂಗೆ ಪತ್ರಬರೆಯಲು ವಿಟಿಯು ಮುಂದಾಗಿದೆ. ಅಲ್ಲದೇ ಗೊಂದಲ ಬಗೆಹರಿದ ಬಳಿಕವಷ್ಟೇ ಹೆಸ್ಕಾಂಗೆ ವಿದ್ಯುತ್ ಬಿಲ್ ಪಾವತಿಸಲು ವಿಟಿಯು ನಿರ್ಧಾರ ಮಾಡಿದೆ. ಇದನ್ನೂ ಓದಿ: ಹೆಂಡತಿ ನನ್ನ ಮಾತು ಕೇಳುತ್ತಿಲ್ಲ, ದಯಮಾಡಿ ಪರಿಹರಿಸಿ- ಶಾಸಕರಿಗೆ ವ್ಯಕ್ತಿ ದೂರು