Tag: VK Saxena

  • ದೆಹಲಿ ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ದೊಡ್ಡ ಸಂಕಷ್ಟ – ಇಡಿ ತನಿಖೆಗೆ ರಾಜ್ಯಪಾಲರು ಅಸ್ತು

    ದೆಹಲಿ ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ದೊಡ್ಡ ಸಂಕಷ್ಟ – ಇಡಿ ತನಿಖೆಗೆ ರಾಜ್ಯಪಾಲರು ಅಸ್ತು

    ನವದೆಹಲಿ: ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರಾದ ವಿ.ಕೆ ಸಕ್ಸೆನಾ (VK Saxena), ಜಾರಿ ನಿರ್ದೇಶನಾಲಯಕ್ಕೆ (ED) ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಲೋಕಸಭೆ ಚುನಾವಣೆ ಸೋಲಿನ ಬಳಿಕ ಅಗ್ನಿಪರೀಕ್ಷೆಯಾಗಿರುವ ದೆಹಲಿ ವಿಧಾನಸಭಾ ಚುನಾವಣೆಗೆ (Delhi elections) ಇನ್ನೆರಡು ತಿಂಗಳು ಬಾಕಿಯಿದೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಹತ್ಯೆ ಮಾಡಲೆಂದು ಕಬ್ಬಿನ ಗದ್ದೆಗೆ ಕರ್ಕೊಂಡು ಬಂದಿದ್ರು: ರಾತ್ರಿ ಏನೇನಾಯ್ತು ವಿವರಿಸಿದ ಸಿಟಿ ರವಿ

    ಕೇಜ್ರಿವಾಲ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಆರೋಪದಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು, ಆದರೆ ವಿಚಾರಣೆ ಆರಂಭವಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಅನುಮೋದನೆಯನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದ ನಂತರ, ಇಡಿ ಅನುಮತಿ ಕೋರಿ ಪತ್ರ ಬರೆದಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣನಾ? ನನಗೂ ಸಿ.ಟಿ ರವಿ ಬಗ್ಗೆ ಸಿಂಪತಿ ಇದೆ – ಡಿಕೆಶಿ

    ಕೇಜ್ರಿವಾಲ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮಾಡಿದ ಬಹುದೊಡ್ಡ ಆರೋಪಗಳಲ್ಲಿ ಮದ್ಯ ನೀತಿ ಹಗರಣವೂ ಒಂದಾಗಿದೆ. ಹಗರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಇಡಿ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥರು ಸೆಪ್ಟೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2025ರ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಮರು ಆಯ್ಕೆ ಮಾಡಿದ ಬಳಿಕವೇ ಉನ್ನತ ಹುದ್ದೆಗಳಿಗೆ ಮರಳುವುದಾಗಿ ಪ್ರತಿಜ್ಞೆ ಮಾಡಿದ್ದರು.

    ಇನ್ನೂ ಕೇಜ್ರಿವಾಲ್‌ ಮತ್ತು ಆಪ್‌ ಪಕ್ಷದ ವಿರುದ್ಧ ಇಡಿ ಸಲ್ಲಿಸಿದ ಕೊನೆಯ ಚಾರ್ಜ್‌ಶೀಟ್‌ನಲ್ಲಿ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಹಗರಣದ ಕಿಂಗ್‌ಪಿನ್‌ ಎಂದು ಹೆಸರಿಸಿತ್ತು. ಸಿಸೋಡಿಯಾ ಸಹ ಮದ್ಯನೀತಿ ಹಗರಣದಲ್ಲಿ 18 ತಿಂಗಳು ಜೈಲು ವಾಸ ಅನುಭವಿಸಿ, ಕಳೆದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದರು. ಇದನ್ನೂ ಓದಿ: ನೆಲಮಂಗಲದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟಿದ್ದ ಒಂದೇ ಕುಟುಂಬದ 6 ಮಂದಿ ದುರ್ಮರಣ

    https://youtu.be/YlG_OlaLqTs?si=3RuOGm_tcymnxqzA

    ಇ.ಡಿ ಆರೋಪ ಏನು?
    ಕೇಜ್ರಿವಾಲ್‌ ಮತ್ತು ಸಿಸೋಡಿಯಾ ಅವರು 100 ಕೋಟಿ ಲಂಚ ಪಡೆಯುವ ಸಲುವಾಗಿ 2021-22ನೇ ಸಾಲಿನ ಅಬಕಾರಿ ನೀತಿಯಲ್ಲಿ ಬದಲಾವಣೆ ತಂದಿದ್ದರು. ಇದರಲ್ಲಿ 45 ಕೋಟಿ ರೂ.ಗಳನ್ನ ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದರು ಎಂಬುದು ಇ.ಡಿ ಆರೋಪ. ಈಗಾಗಲೇ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಶುಕ್ರವಾರ (ಡಿ.20) ದೆಹಲಿ ಹೈಕೋರ್ಟ್‌ ಇ.ಡಿಗೆ ನೋಟಿಸ್‌ ನೀಡಿದೆ.

  • ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

    ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಸಿದ್ದಾರೆ.

    ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರಿಗೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಜ್ರಿವಾಲ್‌ಗೆ ದೆಹಲಿ ಸಚಿವರು ಸಾಥ್ ನೀಡಿದ್ದಾರೆ. ಇದೇ ವೇಳೆ ಹೊಸ ಸರ್ಕಾರ ರಚನೆಗೆ ಅತಿಶಿ (Atishi) ಹಕ್ಕು ಮಂಡಿಸಿದರು. ಸೆ. 15 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮುಂದಿನ 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಮೆಟ್ರೋ ಟ್ರ‍್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ಯುವಕ ಪಾರು

    ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. ಅರವಿಂದ್ ಕೇಜ್ರಿವಾಲ್ ಅವರ ಉನ್ನತ ಸ್ಥಾನಕ್ಕೆ ರಾಜೀನಾಮೆ ಬಳಿಕ ದೆಹಲಿ ಸಚಿವೆ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (AAP) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ, ರಾಜ್ಯ ಪೊಲೀಸರಿಗೆ ಸತ್ವ ಇಲ್ಲ: ಶೋಭಾ ಕರಂದ್ಲಾಜೆ

    ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ರಿಲೀಸ್ ಆದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

    ನಾನು ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಪ್ರತಿ ಮನೆ, ಬೀದಿಗೆ ಹೋಗುತ್ತೇನೆ. ಅಲ್ಲಿಯವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಜನರಿಂದ ತೀರ್ಪು ಪಡೆಯುತ್ತೇನೆ ಎಂದು ತಮ್ಮ ಭಾಷಣದಲ್ಲಿ ಕೇಜ್ರಿವಾಲ್ ಗುಡುಗಿದ್ದರು. ಇದನ್ನೂ ಓದಿ: ದೇಶದಲ್ಲಿ ಅ.1 ರವರೆಗೆ ‘ಬುಲ್ಡೋಜರ್‌ ಕಾರ್ಯಾಚರಣೆ’ಗೆ ಸುಪ್ರೀಂ ತಡೆ

  • ಮಾನನಷ್ಟ ಕೇಸ್- ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

    ಮಾನನಷ್ಟ ಕೇಸ್- ಹೋರಾಟಗಾರ್ತಿ ಮೇಧಾ ಪಾಟ್ಕರ್‌ಗೆ 5 ತಿಂಗಳು ಜೈಲು

    ನವದೆಹಲಿ: ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ (VK Saxena) 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಹೋರಾಟಗಾರ್ತಿ (Narmada Bachao Andolan) ಮೇಧಾ ಪಾಟ್ಕರ್ (Medha Patkar) ಅವರಿಗೆ ದೆಹಲಿ ಕೋರ್ಟ್ 5 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

    ತೀರ್ಪಿನಲ್ಲಿ ವಿ.ಕೆ ಸಕ್ಸೇನಾ ಅವರಿಗೆ 10 ಲಕ್ಷ ರೂ. ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ಅಲ್ಲದೇ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮೇಧಾ ಪಾಟ್ಕರ್ ಅವರ ಶಿಕ್ಷೆಯನ್ನು ಆಗಸ್ಟ್ 1 ರವರೆಗೆ ತಡೆ ಹಿಡಿಯಲಾಗಿದೆ. ಇದನ್ನೂ ಓದಿ: ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ಷರತ್ತಿನ ಮೇಲೆ ತನ್ನನ್ನು ಬಿಡುಗಡೆ ಮಾಡಬೇಕೆಂಬ ಪಾಟ್ಕರ್ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, `ವಯಸ್ಸು ಮತ್ತು ಅನಾರೋಗ್ಯವನ್ನು ಪರಿಗಣಿಸಿ, ಹೆಚ್ಚಿನ ಶಿಕ್ಷೆ ನೀಡಲು ಭಯಸುವುದಿಲ್ಲ’ ಎಂದಿದೆ. ಕಳೆದ ಮೇ.24ರಂದು ಸಾಕೇತ್ ನ್ಯಾಯಾಲಯ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿತ್ತು.

    ನ್ಯಾಯಾಲಯದ ಆದೇಶದ ಕುರಿತು ಪ್ರತಿಕ್ರಿಯಿಸಿದ ಪಾಟ್ಕರ್, `ಸತ್ಯವನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಯಾರನ್ನೂ ದೂಷಿಸಲು ಪ್ರಯತ್ನಿಸಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತೇವೆ. ನಾನು ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತೇನೆ’ ಎಂದು ಹೇಳಿದ್ದಾರೆ.

    2000ರ ನವೆಂಬರ್ 25 ರಂದು ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ 2001ರಲ್ಲಿ ಸಕ್ಸೇನಾ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‍ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‍ನ ಮುಖ್ಯಸ್ಥರಾಗಿದ್ದರು. ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಪಾತ್ರ ಇದೆಯಾ? – ಸಚಿವ ಬೈರತಿ ಸುರೇಶ್ ಹೇಳಿದ್ದೇನು?

  • ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ಮಾನನಷ್ಟ ಕೇಸ್‌- ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ, ನರ್ಮದಾ ಬಚಾವೋ ಆಂದೋಲನದ (Narmada Bachao Andolan) ನಾಯಕಿ ಮೇಧಾ ಪಾಟ್ಕರ್ (Medha Patkar) ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.

    ದೆಹಲಿಯ ಸಾಕೇತ್ ನ್ಯಾಯಾಲಯ ಆದೇಶ ಪ್ರಕಟಿಸಿದ್ದು, ಆದೇಶದಿಂದಾಗಿ ಎರಡು ವರ್ಷ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ಶಿಕ್ಷೆಯಾಗಿ ವಿಧಿಸುವ ಸಾಧ್ಯತೆಯಿದೆ.

    ಅಹಮದಾಬಾದ್ ಮೂಲದ ಸರ್ಕಾರೇತರ ಸಂಸ್ಥೆ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್ ಮುಖ್ಯಸ್ಥರಾಗಿದ್ದ ವಿ.ಕೆ ಸಕ್ಸೆನಾ ನರ್ಮದಾ ಬಚಾವೋ ಆಂದೋಲನ ವಿರುದ್ಧ ಜಾಹೀರಾತುಗಳನ್ನು ಪ್ರಕಟಿಸಿದ್ದರು.

    ಈ ವೇಳೆ ಮಾಧ್ಯಮಗಳಲ್ಲಿ ವಿ.ಕೆ ಸಕ್ಸೆನಾ ವಿರುದ್ಧ ಮೇಧಾ ಪಾಟ್ಕರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಸಕ್ಸೆನಾ ಮಾನನಷ್ಟ ಪ್ರಕರಣ ಹೂಡಿದ್ದರು. ವಿಕೆ ಸಕ್ಸೇನಾ ಮತ್ತು ಮೇಧಾ ಪಾಟ್ಕರ್ 2000 ನೇ ಇಸ್ವಿಯಿಂದ ಕಾನೂನು ಸಮರ ನಡೆಸುತ್ತಿದ್ದಾರೆ.

     

  • ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

    ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರು ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಎನ್‍ಐಎ (NIA) ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

    ಕೇಜ್ರಿವಾಲ್ ವಿರುದ್ಧ ನಿಷೇಧಿತ ಭಯೋತ್ಪಾದಕ ಸಂಘಟನೆ `ಸಿಖ್ಸ್ ಫಾರ್ ಜಸ್ಟೀಸ್’ನಿಂದ ದೇಣಿಗೆ ಪಡೆದ ಆರೋಪದ ಮೇಲೆ ಎನ್‍ಐಎ ತನಿಖೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.

    ಈ ಸಂಬಂಧ ಸಕ್ಸೆನಾ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ನೇತೃತ್ವದ ಎಎಪಿಯು ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಉಗ್ರ ಖಲಿಸ್ತಾನಿ ಗುಂಪುಗಳಿಂದ ದೇಣಿಗೆ ಪಡೆದಿರುವ ಬಗ್ಗೆ ತಮಗೆ ದೂರು ಬಂದಿದೆ. ದೂರುದಾರರು ಕಳುಹಿಸಿರುವ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪರೀಕ್ಷೆ ಒಳಪಡಿಸುವುದು ಹಾಗೂ ಈ ಪ್ರಕರಣದ ತನಿಖೆ ಎನ್‍ಐಎಗೆ ವಹಿಸುವ ಅಗತ್ಯವಿದೆ ಎಂದು ಸಕ್ಸೆನಾ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮುಂದಾಗಿರುವ ಹೊತ್ತಲ್ಲೇ ಸಕ್ಸೆನಾ ಅವರ ಈ ಶಿಫಾರಸು ಕೇಜ್ರಿವಾಲ್ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

    ಎನ್‍ಐಎ ತನಿಖೆ ಶಿಫಾರಸು ಬಿಜೆಪಿಯ (BJP )ಮತ್ತೊಂದು ಪಿತೂರಿ ಎಂದು ಆಪ್ (AAP) ಆರೋಪಿಸಿದೆ. ಕೇಜ್ರಿವಾಲ್ ಪ್ರಸ್ತುತ ನೂತನ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

  • ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ನವದೆಹಲಿ: ಸರ್ಕಾರಿ ಜಾಹೀರಾತು ಹೆಸರಿನಲ್ಲಿ ಆಮ್ ಆದ್ಮಿ ಪಕ್ಷ (AAP) ರಾಜಕೀಯ ಜಾಹೀರಾತುಗಳಿಗೆ ಬಳಸಿರುವ 97 ಕೋಟಿ ರೂ. ಹಣವನ್ನು ವಸೂಲಿ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (Lieutenant Governor VK Saxena) ಅವರು ಮುಖ್ಯ ಕಾರ್ಯದರ್ಶಿಗಳಿಗೆ ಮಂಗಳವಾರ ಆದೇಶ ನೀಡಿದ್ದಾರೆ.

    ದೆಹಲಿಯ ಆಡಳಿತಾರೂಢ ಆಪ್ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು, 2016ರ ದೆಹಲಿ ಹೈಕೋಟ್ ಆದೇಶವನ್ನು ಹಾಗೂ 2016ರ ಸರ್ಕಾರಿ ಜಾಹೀರಾತುಗಳಲ್ಲಿ ವಿಷಯ ನಿಯಂತ್ರಣ ಸಮಿತಿ (CCRGA) ಆದೇಶಗಳನ್ನು ಉಲ್ಲಂಘಿಸಿದೆ ಎಂದು ಸಕ್ಸೇನಾ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    ಎಫ್ಟಿನೆಂಟ್ ಗವರ್ನರ್ ಸರ್ಕಾರ ಪ್ರಕಟಿಸಿರುವ ಕೆಲವು ನಿರ್ದಿಷ್ಟ ಜಾಹೀರಾತುಗಳನ್ನು ಗುರುತಿಸಿ, ಇದು ಮಾರ್ಗಸೂಚಿಗಳ ಸಂಪೂರ್ಣ ಉಲ್ಲಂಘನೆಯಾಗಿದೆ. ಅಂತಹ ಜಾಹೀರಾತುಗಳಿಗೆ ಖರ್ಚು ಮಾಡಿರುವ ಮೊತ್ತವನ್ನು ಲೆಕ್ಕ ಹಾಕಲು ಹಾಗೂ ಆಪ್ ನಿಂದ ವಸೂಲಿ ಮಾಡುವಂತೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

    Live Tv
    [brid partner=56869869 player=32851 video=960834 autoplay=true]

  • ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ಸಿಂಗಾಪುರ ಭೇಟಿಗೆ ಕೇಜ್ರಿವಾಲ್‌ಗೆ ಅನುಮತಿ ನಿರಾಕರಿಸಿದ ಲೆಫ್ಟಿನೆಂಟ್ ಗವರ್ನರ್

    ನವದೆಹಲಿ: ಆಗಸ್ಟ್ 1 ರಂದು ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ ಅನುಮತಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ವಿ.ಕೆ ಸಕ್ಸೇನಾ ಗುರುವಾರ ತಿರಸ್ಕರಿಸಿದ್ದಾರೆ.

    ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆ ಮೇಯರ್‌ಗಳಿಗೆ ಮೀಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಸಿಎಂ ಹಾಜರಾಗುವುದು ಸರಿಯಲ್ಲ ಎಂದು ಸಕ್ಸೇನಾ ಹೇಳಿದ್ದಾರೆ.

    ಲೆಫ್ಟಿನೆಂಟ್ ಗವರ್ನರ್ ಶೃಂಗಸಭೆಯ ಭೇಟಿಗೆ ಅನುಮತಿ ನೀಡದಿದ್ದರೂ ಕೇಜ್ರಿವಾಲ್ ಸಿಂಗಾಪುರಕ್ಕೆ ಭೇಟಿ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ

    ಅನುಮತಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ವಿಷಯಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ನಿಮ್ಮ ಮಾತಿನಂತೆ ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ವಿದೇಶಿ ಭೇಟಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಹೆಚ್ಚಿನ ಭೇಟಿಗಳಲ್ಲಿ ರಾಜ್ಯದ ಪಟ್ಟಿಯಲ್ಲಿ ಹಾಗೂ ಅಧಿಕಾರದ ವ್ಯಾಪ್ತಿಯಲ್ಲಿ ಬಾರದ ವಿಷಯಗಳನ್ನೇ ಚರ್ಚಿಸುತ್ತಾರೆ ಎಂದಿದ್ದಾರೆ.

    ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕಳೆದ ವಾರ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಿಂಗಾಪುರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

    ಕೇಂದ್ರ ತನಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡದೇ ಹೋದಾಗ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿ, ನಾನು ಅಪರಾಧಿಯಲ್ಲ, ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

    Live Tv
    [brid partner=56869869 player=32851 video=960834 autoplay=true]