Tag: Vodafone

  • Layoff: 11 ಸಾವಿರ ಜಾಬ್ ಕಟ್‌ಗೆ ವೊಡಾಫೋನ್ ಪ್ಲ್ಯಾನ್

    Layoff: 11 ಸಾವಿರ ಜಾಬ್ ಕಟ್‌ಗೆ ವೊಡಾಫೋನ್ ಪ್ಲ್ಯಾನ್

    ಲಂಡನ್: ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ನಡೆಯುತ್ತಲೇ ಇದೆ. ಇದೀಗ ಬ್ರಿಟನ್ನಿನ ದೈತ್ಯ ವೊಡಾಫೋನ್ (Vodafone) ಸಂಸ್ಥೆಯ ಸಿಇಒ ಮಾರ್ಗರಿಟಾ ಡೆಲ್ಲಾ ವ್ಯಾಲೆ (Margherita Della Valle) ಮುಂದಿನ ಮೂರು ವರ್ಷಗಳಲ್ಲಿ 11 ಸಾವಿರ ಉದ್ಯೋಗ ಕಡಿತಗೊಳಿಸುವುದಾಗಿ (Layoff) ಹೇಳಿದ್ದಾರೆ.

    ವೊಡಾಫೋನ್ ಸರಳ ವಾಣಿಜ್ಯ ಸಂಸ್ಥೆಯಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸಲು ಬಯಸುತ್ತದೆ. ಜೊತೆಗೆ ತನ್ನ ಕಾರ್ಯಕ್ಷಮತೆ ಸಾಕಷ್ಟು ಉತ್ತಮವಾಗಿಲ್ಲ. ಸ್ಥಿರವಾಗಿ ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಬದಲಾವಣೆಯಾಗಬೇಕಿದೆ ಎಂದು ತಿಳಿಸಿದ್ದಾರೆ.

    ಕಳೆದ ವರ್ಷ 1,04,000 ಉದ್ಯೋಗಿಗಳನ್ನು ಒಳಗೊಂಡಿದ್ದ ವೊಡಾಫೋನ್ ಸಂಸ್ಥೆಯಲ್ಲಿ ಜಾಗತಿಕವಾಗಿ ಶೇ.10 ರಷ್ಟು ಉದ್ಯೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದರಿಂದ ನಮ್ಮ ಆದ್ಯತೆಗಳೇನಿದ್ದರೂ ಮೊದಲು ಗ್ರಾಹಕರು ನಂತರ ಸರಳತೆ ಮತ್ತು ಕಂಪನಿಯ ಬೆಳವಣಿಗೆಯಾಗಿದೆ. ಹಾಗಾಗಿ ಸಂಸ್ಥೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಸರಳಗೊಳಿಸಲು ಬಯಸುತ್ತೇವೆ. ನಮ್ಮ ಸ್ಪರ್ಧಾತ್ಮಕತೆಯನ್ನು ಮರಳಿ ಪಡೆಯಲು ಉದ್ಯೋಗ ಕಡಿತಗೊಳಿಸುತ್ತೇವೆ. ನಮ್ಮ ಗ್ರಾಹಕರು ನಿರೀಕ್ಷಿಸುವ ಮಟ್ಟಕ್ಕೆ ಗುಣಮಟ್ಟದ ಸೇವೆ ಒದಗಿಸಲು ಸಂಪನ್ಮೂಲ ಮರುಹಂಚಿಕೆ ಮಾಡುತ್ತೇವೆ ಎಂದು ಮಾರ್ಗರಿಟಾ ಡೆಲ್ಲಾ ವ್ಯಾಲೆ ಹೇಳಿದ್ದಾರೆ. ಇದನ್ನೂ ಓದಿ: ಮೊಬೈಲ್ ಫೋನ್ ಕಳೆದು ಹೋದ್ರೆ ಇನ್ನು ಚಿಂತಿಸಬೇಕಿಲ್ಲ – ಶೀಘ್ರವೇ ಕೇಂದ್ರ ತರಲಿದೆ ಟ್ರ್ಯಾಕಿಂಗ್ ಸಿಸ್ಟಮ್

    ಈಗಾಗಲೇ ವಿವಿಧ ಜಾಗತಿಕ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನ ವಜಾಗೊಳಿಸಿದೆ. ಮೆಟಾ ಸಂಸ್ಥೆ ಎರಡು ಸುತ್ತಿನಲ್ಲಿ 15 ಸಾವಿರ ಉದ್ಯೋಗಿಗಳನ್ನ ವಜಾಗೊಳಿಸಿತ್ತು. ಅಮೆಜಾನ್ ಈ ಹಿಂದೆ 3 ತಿಂಗಳ ಅಂತರದಲ್ಲಿ 27 ಸಾವಿರ ಉದ್ಯೋಗಿಗಳನ್ನ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಡಿಸ್ನಿ ಸಂಸ್ಥೆ ಸಹ 7 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಇತ್ತೀಚೆಗೆ ಹೇಳಿತ್ತು. ಇದನ್ನೂ ಓದಿ: ಅಮೆಜಾನ್‌ನಲ್ಲಿ 2ನೇ ಸುತ್ತಿನ ವಜಾ ಪ್ರಕ್ರಿಯೆ ಆರಂಭ – 3 ತಿಂಗಳೊಳಗೆ 27 ಸಾವಿರ ಮಂದಿ ಮನೆಗೆ

  • ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    – ಸರ್ಕಾರಕ್ಕೆ ಶೇ.36ರಷ್ಟು ಷೇರನ್ನು ಮಾರಾಟ ಮಾಡಲು ಮುಂದಾದ ವಿಐಎಲ್‌
    – ಎಜಿಆರ್‌ ಸುಳಿಯಲ್ಲಿ ಸಿಲುಕಿ ಷೇರು ಮಾರಾಟ

    ನವದೆಹಲಿ: ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯಲ್ಲಿ ಈಗ ಭಾರತ ಸರ್ಕಾರ ಅತಿ ದೊಡ್ಡ ಪಾಲುದಾರನಾಗಿ ಹೊರಹೊಮ್ಮಿದೆ.

    ಹೌದು. ಭಾರತ ಸರ್ಕಾರವೇ ಷೇರುಗಳನ್ನು ಖರೀದಿಸಿಲ್ಲ ಬದಲಾಗಿ ವಿಐಎಲ್‌ ಕಂಪನಿಯೇ ಶೇ.36 ರಷ್ಟು ಷೇರನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡುವುದಾಗಿ ಘೋಷಿಸಿದೆ.

    ಸಾಲದ ಸುಳಿಯಲ್ಲಿರುವ ವಿಐಎಲ್ ಕಂಪನಿ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪಾವತಿಸಬೇಕಿದೆ. ಅಂದಾಜಿನ ಪ್ರಕಾರ ಕಂಪನಿ ಬಡ್ಡಿಯ ಮೊತ್ತವಾಗಿ ಸುಮಾರು 16,000 ಕೋಟಿ ರೂ.ವನ್ನು ಪಾವತಿಸಬೇಕಿದೆ. ಇಷ್ಟೊಂದು ಮೊತ್ತವನ್ನು ಪಾವತಿಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ತನ್ನ ಬಳಿ ಇರುವ ಷೇರನ್ನೇ ಮಾರಾಟ ಮಾಡಲು ಆಡಳಿತ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

    ಬಾಂಬೆ ಸ್ಟಾಕ್‌ ಎಕ್ಸ್‌ಚೇಂಜ್‌ಗೆ ಸಲ್ಲಿಸಿದ ಮಾಹಿತಿಯಲ್ಲಿ 16,000 ಕೋಟಿ ರೂ. ಬಡ್ಡಿ ಮೊತ್ತ ಪಾವತಿ ಸಂಬಂಧ ಸರ್ಕಾರಕ್ಕೆ 10 ರೂ. ಮುಖಬೆಲೆಗೆ 1 ಷೇರನ್ನು ಮಾರಾಟ ಮಾಡಲು ಆಡಳಿತ ಮಂಡಳಿಯ ನಿರ್ದೇಶಕರು ಅನುಮೋದಿಸಿದ್ದಾರೆ ಎಂದು ವಿಐಎಲ್‌ ತಿಳಿಸಿದೆ. ಶೇ.36 ರಷ್ಟು ಷೇರನ್ನು ಭಾರತ ಸರ್ಕಾರಕ್ಕೆ ಮಾರಾಟ ಮಾಡಿದ ಬಳಿಕ ವಿಐಎಲ್‌ನಲ್ಲಿ ವೊಡಾಫೋನ್ ಗ್ರೂಪ್ ಶೇ.28.5 ಆದಿತ್ಯ ಬಿರ್ಲಾ ಗ್ರೂಪ್‌ ಶೇ.17.8 ರಷ್ಟು ಷೇರನ್ನು ಉಳಿಸಿಕೊಳ್ಳಲಿದೆ.

    ಈ ನಿರ್ಧಾರ ಪ್ರಕಟವಾಗುತ್ತಿದಂತೆ ವಿಐಎಲ್‌ ಷೇರು ಬೆಲೆ ಭಾರೀ ಕುಸಿತ ಕಂಡಿದೆ. ಇಂದು 3.05 ರೂ. ಕುಸಿತಗೊಂಡು ಅಂತಿಮವಾಗಿ 11.80 ರೂ.ಯಲ್ಲಿ ಇಂದಿನ ವ್ಯವಹಾರ ಮುಗಿಸಿದೆ. ಇದನ್ನೂ ಓದಿ: ಶೇ.100 ಎಫ್‍ಡಿಐಗೆ ಸರ್ಕಾರದ ಅನುಮತಿ ಬೇಕಿಲ್ಲ – ಟೆಲಿಕಾಂ ಕಂಪನಿಗಳಿಗೆ ಹಲವು ಕೊಡುಗೆ ನೀಡಿದ ಕೇಂದ್ರ

    SUPREME COURT

    ಬಾಕಿ ಎಷ್ಟಿದೆ?
    ಎಜಿಆರ್ ಪ್ರಕರಣದಲ್ಲಿ ವೊಡಾಫೋನ್ ಐಡಿಯಾ ಲಿಮಿಟೆಡ್ ಕಂಪನಿ ಒಟ್ಟು 58,254 ಕೋಟಿ ರೂ.ವನ್ನು ಪಾವತಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕಂಪನಿ ಕೇವಲ 7,584 ಕೋಟಿ ರೂ. ಪಾವತಿಸಿದ್ದು ಇನ್ನೂ 50,399 ಕೋಟಿ ರೂ. ಪಾವತಿಸಬೇಕಿದೆ. ಸುಪ್ರೀಂ ಕೋರ್ಟ್‌ 2031ರ ಒಳಗಡೆ ಈ ಹಣವನ್ನು ಪಾವತಿಸಬೇಕು ಎಂದು ಕಂಪನಿಗಳಿಗೆ ಗಡುವು ನೀಡಿದೆ.

    ಏರ್‌ಟೆಲ್‌ ಕಂಪನಿಯೂ ಎಜಿಆರ್‌ ಮೊತ್ತವನ್ನು ಸರ್ಕಾರಕ್ಕೆ ಪಾವತಿ ಮಾಡಬೇಕಿದೆ. ಆದರೆ ನಾನು ಸರ್ಕಾರಕ್ಕೆ ತನ್ನ ಷೇರನ್ನು ಮಾರಾಟ ಮಾಡುವುದಿಲ್ಲ ಎಂದು ಕಂಪನಿ ತಿಳಿಸಿದೆ.

    ಏನಿದು ಎಜಿಆರ್?:
    ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ. ಇದನ್ನೂ ಓದಿ: ಡಿಸೆಂಬರ್ 1 ರಿಂದ ಜಿಯೋ ದುಬಾರಿ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

    ನುಡಿದಂತೆ ನಡೆದ ಬಿರ್ಲಾ
    ಈ ಹಿಂದೆ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯಲ್ಲಿ ತಾವು ಹೊಂದಿರುವ ಷೇರುಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವುದಾಗಿ ಹೇಳಿದ್ದರು. ಬಿರ್ಲಾ ಅವರು ಕಂಪನಿಯಲ್ಲಿ ಶೇ. 27ರಷ್ಟು ಷೇರು ಹೊಂದಿದ್ದಾರೆ.

    ಕೇಂದ್ರ ಸರ್ಕಾರದ ನಮಗೆ ಏನಾದರೂ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವೊಡಾಫೋನ್, ಐಡಿಯಾದ ಅಧ್ಯಾಯ ಮುಕ್ತಾಯವಾಗಲಿದೆ. ದಿವಾಳಿಯಾದ ನಂತರವೂ ನಾವು ಹಣ ಹೂಡುವುದರಲ್ಲಿ ಅರ್ಥವಿಲ್ಲ ಹೀಗಾಗಿ ನಾವು ಮಳಿಗೆಗಳನ್ನು ಮುಚ್ಚುತ್ತೇವೆ ಎಂದು ಬಿರ್ಲಾ ಸ್ಪಷ್ಟಪಡಿಸಿದ್ದರು. ಈ ಸಂಬಂಧ ಬಿರ್ಲಾ ಅವರು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ಜೂನ್ 7ರಂದು ಪತ್ರ ಬರೆದಿದ್ದರು. ಸರ್ಕಾರ ಮಾತ್ರ ಅಲ್ಲದೆ ವಿಐಎಲ್ ಕಂಪನಿಯನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಸರ್ಕಾರ ಹೇಳುವ ಯಾವುದೇ ಕಂಪನಿಗೆ ಕೂಡ ಷೇರು ವರ್ಗಾವಣೆ ಮಾಡುವುದಾಗಿ ತಿಳಿಸಿದ್ದರು.

    ಸರ್ಕಾರ ಹಾಕಿರುವ ಎಜಿಆರ್ ಲೆಕ್ಕ ಸರಿಯಿಲ್ಲ ಎಂದು ಎಂದು ವಿಐಎಲ್ ಸೇರಿದಂತೆ ಟೆಲಿಕಾಂ ಕಂಪನಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಕಂಪನಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕಳೆದ ವರ್ಷ ತಿರಸ್ಕರಿಸಿ 10 ವರ್ಷದ ಒಳಗಡೆ ಪಾವತಿಸಬೇಕು ಎಂದು ಗಡುವು ನೀಡಿತ್ತು.

    ವಿಐಎಲ್ ಕಂಪನಿಗೆ 25 ಸಾವಿರ ಕೋಟಿ ರೂ. ಬಂಡವಾಳ ಸಂಗ್ರಹಿಸಲು ಕಂಪನಿಯ ಆಡಳಿತ ಮಂಡಳಿ 2020ರ ಸೆಪ್ಟೆಂಬರ್ ನಲ್ಲಿ ಅನುಮತಿ ನೀಡಿತ್ತು. ಆದರೆ ಅಷ್ಟು ಮೊತ್ತವನ್ನು ಸಂಗ್ರಹಿಸಲು ಕಂಪನಿ ವಿಫಲವಾಗಿತ್ತು.

  • ಸಾಲದಲ್ಲಿ ವಿಐಎಲ್ ಕಂಪನಿ – ಸರ್ಕಾರಕ್ಕೆ ಷೇರು ಮಾರಲು ಮುಂದಾದ ಬಿರ್ಲಾ

    ಸಾಲದಲ್ಲಿ ವಿಐಎಲ್ ಕಂಪನಿ – ಸರ್ಕಾರಕ್ಕೆ ಷೇರು ಮಾರಲು ಮುಂದಾದ ಬಿರ್ಲಾ

    ನವದೆಹಲಿ: ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ವೊಡಾಫೋನ್ ಐಡಿಯಾ ಲಿಮಿಟೆಡ್ (ವಿಐಎಲ್) ಕಂಪನಿಯಲ್ಲಿ ತಾವು ಹೊಂದಿರುವ ಷೇರುಗಳನ್ನು ಸರ್ಕಾರಕ್ಕೆ ವರ್ಗಾವಣೆ ಮಾಡುವುದಾಗಿ ಹೇಳಿದ್ದಾರೆ.

    ಸಾಲದ ಸುಳಿಯಲ್ಲಿರುವ ವಿಐಎಲ್ ಕಂಪನಿ ಬಾಕಿ ಉಳಿಸಿಕೊಂಡಿರುವ ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಹಣವನ್ನು ಪಾವತಿಸಬೇಕಿದೆ. ಈ ನಡುವೆ ಕುಮಾರ್ ಮಂಗಲಂ ಬಿರ್ಲಾ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ನಮಗೆ ಪರಿಹಾರ ಕಲ್ಪಿಸಬೇಕು ಎಂದು ಕೇಳಿದ್ದಾರೆ.

    ಬಿರ್ಲಾ ಅವರು ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ಜೂನ್ 7ರಂದು ಬರೆದಿರುವ ಪತ್ರದಲ್ಲಿ ಸರ್ಕಾರ ಮಾತ್ರ ಅಲ್ಲದೆ ವಿಐಎಲ್ ಕಂಪನಿಯನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಸರ್ಕಾರ ಹೇಳುವ ಯಾವುದೇ ಕಂಪನಿಗೆ ಕೂಡ ಷೇರು ವರ್ಗಾವಣೆ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.  ಇದನ್ನೂ ಓದಿ : ಸರ್ಕಾರ ಸಹಾಯ ಮಾಡದಿದ್ದರೆ ವೊಡಾಫೋನ್, ಐಡಿಯಾ ಮುಚ್ಚುತ್ತೇವೆ- ಬಿರ್ಲಾ

    ಅಂಕಿಅಂಶಗಳ ಪ್ರಕಾರ ವಿಐಎಲ್ ಕಂಪನಿಯು ಎಜಿಆರ್ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ 50,399 ಕೋಟಿ ರೂ. ಹಣವನ್ನು ಪಾವತಿಸಬೇಕಿದೆ. ಸರ್ಕಾರ ಹಾಕಿರುವ ಎಜಿಆರ್ ಲೆಕ್ಕ ಸರಿಯಿಲ್ಲ ಎಂದು ಎಂದು ವಿಐಎಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಕಂಪನಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

    ವಿಐಎಲ್ ಕಂಪನಿಗೆ 25 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ಕಂಪನಿಯ ಆಡಳಿತ ಮಂಡಳಿ 2020ರ ಸೆಪ್ಟೆಂಬರ್ ನಲ್ಲಿ ಅನುಮತಿ ನೀಡಿತ್ತು. ಆದರೆ ಅಷ್ಟು ಮೊತ್ತವನ್ನು ಸಂಗ್ರಹಿಸಲು ಕಂಪನಿ ವಿಫಲವಾಗಿತ್ತು.

    ಕಂಪನಿಯನ್ನೇ ಮುಚ್ಚುತ್ತೇವೆ:
    ಬಿರ್ಲಾ ಅವರು ಕಂಪನಿಯಲ್ಲಿ ಶೇ 27ರಷ್ಟು ಷೇರು ಹೊಂದಿದ್ದಾರೆ. ಈ ಹಿಂದೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬಿರ್ಲಾ ಅವರು, ಕೇಂದ್ರ ಸರ್ಕಾರ ನಮಗೆ ಪರಿಹಾರೋಪಾಯಗಳನ್ನು ಕಲ್ಪಿಸದಿದ್ದಲ್ಲಿ ವೊಡಾಫೋನ್ ಹಾಗೂ ಐಡಿಯಾ ಕಂಪನಿಗಳನ್ನು ಮುಚ್ಚುತ್ತೇವೆ ಹೇಳಿದ್ದರು. ಇದನ್ನೂ ಓದಿ : ತಿಂಗಳಿಗೆ 160 ರೂ.ಗೆ 16 ಜಿಬಿ ಡೇಟಾ ಸಿಗುತ್ತಿರುವುದು ದುರಂತ – ಏರ್‌ಟೆಲ್‌ ಮುಖ್ಯಸ್ಥ

    ಕೇಂದ್ರ ಸರ್ಕಾರದ ನಮಗೆ ಏನಾದರೂ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ವೊಡಾಫೋನ್, ಐಡಿಯಾದ ಅಧ್ಯಾಯ ಮುಕ್ತಾಯವಾಗಲಿದೆ. ದಿವಾಳಿಯಾದ ನಂತರವೂ ನಾವು ಹಣ ಹೂಡುವುದರಲ್ಲಿ ಅರ್ಥವಿಲ್ಲ ಹೀಗಾಗಿ ನಾವು ಮಳಿಗೆಗಳನ್ನು ಮುಚ್ಚುತ್ತೇವೆ ಎಂದು ಬಿರ್ಲಾ ಸ್ಪಷ್ಟಪಡಿಸಿದ್ದರು.

    ಅರ್ಜಿ ವಜಾ:
    ಎಜಿಆರ್ ಪ್ರಕರಣ ಸಂಬಂಧ 2019ರ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 92 ಸಾವಿರ ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿತ್ತು. ಅಷ್ಟೇ ಅಲ್ಲದೇ ಕೋರ್ಟ್ 3 ತಿಂಗಳ ಒಳಗಡೆ ಈ ಹಣವನ್ನು ಪಾವತಿಸುವಂತೆ ಟೆಲಿಕಾಂ ಕಂಪನಿಗಳಿಗೆ ಗಡುವು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ವೊಡಾಫೋನ್ ಮತ್ತು ಏರ್ ಟೆಲ್ ಕಂಪನಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.

    ಬಾಕಿ ಎಷ್ಟಿದೆ?
    ಎಜಿಆರ್ ಪ್ರಕರಣದಲ್ಲಿ ವೊಡಾಫೋನ್ ಐಡಿಯಾ ಲಿಮಿಟೆಡ್  ಕಂಪನಿ ಒಟ್ಟು 58,254 ಕೋಟಿ ರೂ.ವನ್ನು ಪಾವತಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಕಂಪನಿ ಕೇವಲ 7,584 ಕೋಟಿ ರೂ. ಪಾವತಿಸಿದ್ದು ಇನ್ನೂ 50,399 ಕೋಟಿ ರೂ. ಪಾವತಿಸಬೇಕಿದೆ.

    ಏನಿದು ಎಜಿಆರ್?:
    ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ.

  • ದಿಢೀರ್ 99 ರೂ. ಕಡಿತ – ಕ್ಷಮೆ ಕೇಳಿ ಸ್ಪಷ್ಟನೆ ನೀಡಿದ ವೊಡಾಫೋನ್

    ದಿಢೀರ್ 99 ರೂ. ಕಡಿತ – ಕ್ಷಮೆ ಕೇಳಿ ಸ್ಪಷ್ಟನೆ ನೀಡಿದ ವೊಡಾಫೋನ್

    ಬೆಂಗಳೂರು: ವೊಡಾಫೋನ್ ಗ್ರಾಹಕರಿಗೆ ಇಂದು ಬೆಳಗ್ಗೆ ಶಾಕ್ ಕಾದಿತ್ತು. ಅಂತಾರಾಷ್ಟ್ರೀಯ ರೋಮಿಂಗ್‍ಗಾಗಿ 99 ರೂ. ಕಡಿತ ಮಾಡಲಾಗಿದೆ ಎಂಬ ಮಸೇಜ್ ಬಂದಿತ್ತು.

    “ಪ್ರೀತಿಯ ಗ್ರಾಹಕರೇ 30 ದಿವಸಗಳ ಅಂತಾರಾಷ್ಟ್ರೀಯ ರೋಮಿಂಗ್ ಬಾಡಿಗೆ ಮೊತ್ತವಾಗಿ 99 ರೂ. ಕಡಿತಮಾಡುತ್ತಿದ್ದು, ಈ ಮಾಹಿತಿಯನ್ನು ನಿಮಗೆ ನೀಡುತ್ತಿದ್ದೇವೆ” ಎಂಬ ಮಸೇಜ್ ಬಂದಿತ್ತು. ಗ್ರಾಹಕರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೊಡಾಫೋನ್ ಕಂಪನಿಯನ್ನು ಪ್ರಶ್ನಿಸಿದ ಪರಿಣಾಮ ಟ್ರೆಂಡ್ ಸೃಷ್ಟಿಯಾಗಿತ್ತು.

    ಜನ ಪ್ರಶ್ನಿಸುತ್ತಿದ್ದಂತೆ, ಕ್ಷಮಿಸಿ. ತಾಂತ್ರಿಕ ಸಮಸ್ಯೆಯಿಂದಾಗಿ ಈ ಮೆಸೇಜ್ ಬಂದಿದೆ. ಕಡಿತಗೊಂಡಿರುವ ಹಣವನ್ನು ಪ್ರಿಪೇಯ್ಡ್ ಗ್ರಾಹಕರಿಗೆ ಮರಳಿ ಪಾವತಿಸಲಾಗುವುದು ಎಂದು ವೊಡಾಫೋನ್ ಹೇಳಿದೆ.

    https://twitter.com/VodafoneIN/status/1267758842122612736

    ನಾನು ಯಾವುದೇ ಅಂತರಾಷ್ಟ್ರೀಯ ಕರೆ ಮಾಡುತ್ತಿಲ್ಲ. ಅಷ್ಟೇ ಅಲ್ಲದೇ ನಾನು ಅನ್‍ಲಿಮಿಟೆಡ್ ಪ್ಯಾಕ್ ಹಾಕಿದ್ದೇನೆ. ನನ್ನ ಅನುಮತಿ ಇಲ್ಲದೇ ಹೇಗೆ ಅಂತಾರಾಷ್ಟ್ರೀಯ ರೋಮಿಂಗ್‍ಗೆ ಹಣವನ್ನು ಕಡಿತ ಮಾಡಲಾಗಿದೆ. ಕೂಡಲೇ ಹಣವನ್ನು ನನ್ನ ಖಾತೆಗೆ ಹಾಕಿ ಎಂದು ಪ್ರಶ್ನಿಸುತ್ತಿದ್ದಾರೆ. ಈಗ ವೊಡಾಫೋನ್ 99 ರೂ. ಕಡಿತ ಮಸೇಜ್ ಸಂಬಂಧ ಎದ್ದಿದ್ದ ಎಲ್ಲ ಗೊಂದಲಗಳಿಗೆ ಸ್ಪಷ್ಟನೆ ನೀಡಿ ತೆರೆ ಎಳೆದಿದೆ.

    ’99 ರೂಪಾಯಿ’ ಟ್ರೆಂಡ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಜನ ತಮ್ಮದೆ ಮಿಮ್ಸ್ ಗಳನ್ನು ಪ್ರಕಟಿಸುತ್ತಿದ್ದಾರೆ.

  • 2 ಗಂಟೆ ವೊಡಾಫೋನ್ ನೆಟ್‍ವರ್ಕ್ ಡೌನ್ – ಬಳಕೆದಾರರ ಆಕ್ರೋಶ

    2 ಗಂಟೆ ವೊಡಾಫೋನ್ ನೆಟ್‍ವರ್ಕ್ ಡೌನ್ – ಬಳಕೆದಾರರ ಆಕ್ರೋಶ

    ಬೆಂಗಳೂರು: ವೊಡಾಫೋನ್ ನೆಟ್‍ವರ್ಕ್ ಸರಿಯಾಗಿ ಸಿಗುತ್ತಿಲ್ಲ ಎಂಬ ದೂರಿನ ಮಧ್ಯೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗಳ ಕಾಲ ವೊಡಾಫೋನ್ ನೆಟ್‍ವರ್ಕ್ ಡೌನ್ ಆಗಿತ್ತು.

    ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವೆಡೆ ವೊಡಾಫೋನ್ ನೆಟ್‍ವರ್ಕ್ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಡೌನ್ ಆಗಿತ್ತು. ಡೌನ್ ಆದ ವಿಚಾರ ತಿಳಿಯುತ್ತಿದ್ದಂತೆ ಮೊಬೈಲ್‍ನಲ್ಲಿ ಕರೆನ್ಸಿ, ಡೇಟಾ ಪ್ಯಾಕ್ ಇದ್ದರೂ ಯಾವುದೇ ಪ್ರಯೋಜನವಾಗ್ತಿಲ್ಲ ಎಂದು ಕಂಪನಿಯನ್ನು ಬಳಕೆದಾರರು ದೂರಲು ಆರಂಭಿಸಿದರು.

    https://twitter.com/VodafoneIN/status/1225739534106681344

    ಕರ್ನಾಟಕದಲ್ಲಿ ನಮ್ಮ ನೆಟ್‍ವರ್ಕ್ ಸಮಸ್ಯೆಯಾಗಿದೆ. ನಾವು ಇದನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯುತ್ತೆ, ಸಹಕರಿಸಿ ಎಂದು ಮನವಿ ಮಾಡಿ ವೊಡಾಫೋನ್ ಕಂಪನಿ ಬಳಕೆದಾರರಿಗೆ ಮೆಸೆಜ್ ಕಳುಹಿಸಿತ್ತು.

    https://twitter.com/VodafoneIN/status/1225731629529722881

    ಬಳಕೆದಾರರ ದೂರುಗಳಿಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿ, ಇದು ತಾತ್ಕಾಲಿಕ ಸಮಸ್ಯೆ. ಇದನ್ನು ನಾವು ಸರಿಪಡಿಸುತ್ತಿದ್ದೇವೆ. ದಯಮಾಡಿ ನಮಗೆ ಸಮಯ ಕೊಡಿ, ಸಮಸ್ಯೆ ಬಗೆಹರಿಸುತ್ತಿದ್ದೇವೆ ಎಂದಿದೆ.

    https://twitter.com/VodafoneIN/status/1225737986429472771

    ಅಷ್ಟೇ ಅಲ್ಲದೆ ಪದೇ ಪದೇ ನೆಟ್‍ವರ್ಕ್ ಡೌನ್ ಆಗುತ್ತಿರುವುದಕ್ಕೆ ನೆಟ್ಟಿಗರು ವೊಡಾಫೋನ್ ಕಂಪನಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಮಾಡಿ, ಕಾಲೆಳೆಯುತ್ತಿದ್ದಾರೆ.

    ಹೆಚ್ಚು ಬಳಕೆದಾರರನ್ನು ಹೊಂದಿರುವ ಟೆಲಿಕಾಮ್ ನೆಟ್‍ವರ್ಕ್‍ಗಳಲ್ಲಿ ವೊಡಾಫೋನ್ ಕೂಡ ಒಂದು. ಭಾರತದಲ್ಲಿ ವೊಡಾಫೋನ್ ಸುಮಾರು 200 ಮಿಲಿಯನ್ ಸಬ್‍ಸ್ಕ್ರೈರ್ಸ್ ಹೊಂದಿದೆ. ಆದ್ದರಿಂದ ಬಳಕೆದಾರರು ಟಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್‍ವರ್ಕ್ ಡೌನ್ ಆಗಿರುವ ಬಗ್ಗೆ ದೂರುತ್ತಿದ್ದಾರೆ.

    https://twitter.com/DreamersNest/status/1225707997738913792

    ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಬಿಡುಗಡೆ ಮಾಡಿದ ವರದಿ ಪ್ರಕಾರ ದೇಶದಲ್ಲಿ ವೊಡಾಫೋನ್ 37.24 ಕೋಟಿ, ರಿಲಯನ್ಸ್ ಜಿಯೋ 35.52 ಕೋಟಿ, ಏರ್‍ಟೆಲ್ 32.55 ಕೋಟಿ, ಬಿಎಸ್‍ಎನ್‍ಎಲ್ 11.69 ಕೋಟಿ ಹಾಗೂ ಎಂಟಿಎನ್‍ಎಲ್ 33.93 ಲಕ್ಷ ಗ್ರಾಹಕರನ್ನು ಹೊಂದಿದೆ.

  • ವೊಡಾಫೋನ್ Vs ಏರ್‌ಟೆಲ್  – ದರ ಏರಿಕೆ ಸಮರದಿಂದ ಜಿಯೋಗೆ ಲಾಭವಂತೆ

    ವೊಡಾಫೋನ್ Vs ಏರ್‌ಟೆಲ್ – ದರ ಏರಿಕೆ ಸಮರದಿಂದ ಜಿಯೋಗೆ ಲಾಭವಂತೆ

    ನವದೆಹಲಿ: ಜಿಯೋ ಸೇವೆ ಆರಂಭಗೊಂಡ ನಂತರ ಡೇಟಾ ವಾರ್ ಶುರುವಾಗಿ ಉಳಿದ ಟೆಲಿಕಾಂ ಕಂಪನಿಗಳು ನಷ್ಟ ಅನುಭವಿಸಿದ್ದು ಈಗ ನಿಧನವಾಗಿ ದರ ಏರಿಕೆ ಮಾಡಲು ಮುಂದಾಗುತ್ತಿದೆ. ಏರ್‌ಟೆಲ್, ವೊಡಾಫೋನ್ ಕಂಪನಿಗಳು ಈಗಾಗಲೇ ಡೇಟಾ ದರ ಏರಿಸಿವೆ. ಈಗ ದರ ಏರಿಕೆಯ ಸಮರ ಆರಂಭಗೊಂಡಿದ್ದರೂ ಈ ‘ಹೈಕ್ ವಾರ್’ ನಲ್ಲಿ ಜಿಯೋಗೆ ಲಾಭವಾಗಲಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಹೌದು. ಈಗಾಗಲೇ ವೊಡಾಫೋನ್ ಮತ್ತು ಏರ್‌ಟೆಲ್ ಕಂಪನಿಗಳು ಶೇ.20-41 ಅಂದಾಜಿನಲ್ಲಿ ಡೇಟಾ ಪ್ಯಾಕ್ ಗಳ ದರ ಏರಿಕೆ ಮಾಡಿವೆ. ಜಿಯೋ ಈ ಹಿಂದೆಯೇ ತಿಳಿಸಿದಂತೆ ಉಳಿದ ಕಂಪನಿಗಳ ದರವನ್ನು ನೋಡಿಕೊಂಡು ದರವನ್ನು ಏರಿಸಲಾಗುವುದು ಎಂದು ತಿಳಿಸಿತ್ತು. ಅದರಂತೆ ಡಿ.6 ರಿಂದ ಹೊಸ ದರದ ಪ್ಲ್ಯಾನ್ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

    ಈ ಮಧ್ಯೆ ಪ್ರಸಿದ್ಧ ಪ್ಲ್ಯಾನ್‍ಗಳ ದರವನ್ನು ಶೇ.40 ರಷ್ಟು ಏರಿಸುವುದಿಲ್ಲ. ಬದಲಾಗಿ ಶೇ.25 – 30 ರಷ್ಟು ಏರಿಸಬಹುದು ಎಂದು ಬ್ಯಾಂಕ್ ಆಫ್ ಅಮೇರಿಕಾ ಮೆರಿಲ್ ಲಿಂಚ್ ವರದಿ ತಿಳಿಸಿದೆ. ಜಿಯೋ ಈಗ ಹೊಸ ಪ್ಲ್ಯಾನ್ ಬಗ್ಗೆ ಮಾಹಿತಿ ಪ್ರಕಟಿಸಿದೆ. ಡಿ.6 ರಂದು ಆಲ್ ಇನ್ ಒನ್ ಪ್ಲ್ಯಾನ್ ಆರಂಭಿಸುತ್ತಿದ್ದೇವೆ. 6 ರೀತಿ ದರ ಇರುವ ಈ ಪ್ಲ್ಯಾನ್ ನಲ್ಲಿ ಅನ್ ಲಿಮಿಟೆಡ್ ಕರೆ ಮತ್ತು ಡೇಟಾ ಸಿಗಲಿದೆ. ಈ ಹಿಂದಿನ ಪ್ಲ್ಯಾನ್ ಗಳಿಗೆ ಹೋಲಿಸಿದರೆ ಇದರಿಂದ ಶೇ.300 ರಷ್ಟು ಪ್ರಯೋಜನವಾಗಲಿದೆ ಎಂದು ತಿಳಿಸಿದೆ.

    ಈಗ ದರ ಏರಿಕೆಯಾದರೂ ಉಳಿದ ಕಂಪನಿಗಳ ದರಕ್ಕೆ ಹೋಲಿಸಿದರೆ ಜಿಯೋ ಆಯ್ದ ಪ್ಯಾಕ್ ಗಳ ಬೆಲೆ ಶೇ.20- 30 ರಷ್ಟು ಕಡಿಮೆ ಇರಲಿದೆ. ನ್ಯಾಯಯುತ ಬಳಕೆ ರೂಪದಲ್ಲಿ ಜಿಯೋ ದರಗಳು ನಿಯಂತ್ರಣದಲ್ಲಿ ಇರದೇ ಇದ್ದರೆ ಟೆಲಿಕಾಂ ಕಂಪನಿಗಳು ಪ್ಲ್ಯಾನ್‍ಗಳು ತಲೆಕೆಳಗಾಬಹುದು ಎಂದು ಬ್ಯಾಂಕ್ ಆಫ್ ಅಮೇರಿಕಾ ಮೆರಿಲ್ ಲಿಂಚ್ ಅಭಿಪ್ರಾಯಪಟ್ಟಿದೆ.

    ಜಿಯೋ ಡೇಟಾ ದರ ಸಮರ ಆರಂಭಗೊಂಡ ಬಳಿಕ ಭಾರತದಲ್ಲಿ ಹಲವು ಕಂಪನಿಗಳು ದೊಡ್ಡ ಕಂಪನಿಗಳ ಜೊತೆ ವಿಲೀನಗೊಂಡಿತ್ತು. ಜೊತೆಗೆ ಬಳಕೆದಾರರು ಜಿಯೋಗೆ ಪೋರ್ಟ್ ಮಾಡಿದ್ದರು. ಪರಿಣಾಮ ದೇಶದ ಎರಡನೇ ಅತಿ ದೊಡ್ಡ ಕಂಪನಿಯಾಗಿ ಜಿಯೋ ಹೊರ ಹೊಮ್ಮಿದೆ. ಈಗ ದರ ಏರಿಕೆಯ ಸಮರದಲ್ಲಿ ಯಾವ ಟೆಲಿಕಾಂ ಕಂಪನಿಗೆ ಲಾಭವಾಗಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಗ್ರಾಹಕರಿಗೆ ಉಚಿತ ಡೇಟಾ ನೀಡಿದ್ದ ಜಿಯೋಗೆ ಆಗಿರುವ ನಷ್ಟ ಎಷ್ಟು ಗೊತ್ತೆ?

    ಮಾರುಕಟ್ಟೆಯಲ್ಲಿ ಜಿಯೋಗೆ ಸ್ಪರ್ಧೆ ನೀಡಲು ಮೂರು ವರ್ಷಗಳಿಂದ ದರವನ್ನು ಇಳಿಸಿದ್ದ ಟೆಲಿಕಾಂ ಕಂಪನಿಗಳು ಈಗ ದರ ಏರಿಸುತ್ತಿವೆ. ವೊಡಾಫೋನ್ ಐಡಿಯಾ, ಏರ್‌ಟೆಲ್ ಕಳೆದ ವಾರ ಪ್ರತ್ಯೇಕ ಹೇಳಿಕೆಯನ್ನು ಬಿಡುಗಡೆ ಮಾಡಿ ಕಂಪನಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಬೆಲೆ ಏರಿಕೆ ಮಾಡಲಾಗುವುದು ಎಂದು ಹೇಳಿಕೊಂಡಿತ್ತು.

    ಟೆಲಿಕಾಂ ಕ್ಷೇತ್ರದಲ್ಲಿ ತಂತ್ರಜ್ಞಾನ ಬದಲಾವಣೆ ಆಗುತ್ತಲೇ ಇರುತ್ತದೆ. ಹೀಗಾಗಿ ಹೊಸತನಕ್ಕೆ ತೆರೆಯಬೇಕಾದರೆ ಕೋಟ್ಯಂತರ ರೂ. ಹಣ ಹೂಡಬೇಕಾಗುತ್ತದೆ. ನಷ್ಟದಲ್ಲಿದ್ದುಕೊಂಡು ಹೂಡಿಕೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ದರ ಏರಿಕೆ ಅನಿವಾರ್ಯ ಎಂದು ಕಂಪನಿಗಳು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿತ್ತು.

    ವಿಶ್ವದಲ್ಲಿ ಈಗ ಭಾರತದಲ್ಲಿ ಅತಿ ಕಡಿಮೆ ದರದಲ್ಲಿ ಡೇಟಾ ಲಭ್ಯವಿದೆ. ಜಿಯೋಗೆ ಸ್ಪರ್ಧೆ ನೀಡಲು ಡೇಟಾ ಮತ್ತು ಕರೆ ದರವನ್ನು ಕಡಿತಗೊಳಿಸಿದ ಪರಿಣಾಮ ಟೆಲಿಕಾಂ ಕಂಪನಿಗಳು ಭಾರೀ ನಷ್ಟಕ್ಕೆ ತುತ್ತಾಗಿವೆ.

    ವೊಡಾಫೋನ್ ಸೆಪ್ಟೆಂಬರಿಗೆ ಅಂತ್ಯಗೊಂಡ ದ್ವಿತೀಯ ತ್ರೈಮಾಸಿಕದಲ್ಲಿ 50,921 ರೂ. ಕೋಟಿಗಳಷ್ಟು ನಷ್ಟ ದಾಖಲಿಸಿದ್ದರೆ, ಭಾರ್ತಿ ಏರ್‌ಟೆಲ್ 23,045 ಕೋಟಿ ರೂ. ನಷ್ಟ ಅನುಭವಿಸಿದೆ. ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ತರಂಗಾಂತರ ಬಳಕೆ ಮತ್ತು ಲೈಸೆನ್ಸ್ ಶುಲ್ಕವನ್ನು ದಂಡ, ಬಡ್ಡಿ ಜತೆ ಪಾವತಿಸಬೇಕಿದೆ. ತಮ್ಮ ಆದಾಯದ ಬಹಭಾಗವನ್ನು ಪ್ರತ್ಯೇಕವಾಗಿ ತೆಗೆದಿರಿಸಿದ ಪರಿಣಾಮ ಟೆಲಿಕಾಂ ಕಂಪನಿಗಳ ನಷ್ಟ ಭಾರೀ ಏರಿಕೆಯಾಗಿದೆ. ಶುಲ್ಕ ಮತ್ತು ದಂಡ ಪಾವತಿಸುವಂತೆ ಸುಪ್ರೀಂಕೋರ್ಟ್ ತೀರ್ಪು ಪರಾಮರ್ಶೆಗೆ ಅರ್ಜಿ ಸಲ್ಲಿಸಲು ವೊಡಾಫೋನ್ ಸಿದ್ಧತೆ ನಡೆಸುತ್ತಿದೆ.  ಇದನ್ನೂ ಓದಿ: ಜಿಯೋ ಎಷ್ಟು ಲಾಭವಾಗಿದೆ? ಭಾರತದಲ್ಲಿ  ಇತಿಹಾಸ ಸೃಷ್ಟಿಸಿದ ರಿಲಯನ್ಸ್

    ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 92 ಸಾವಿರ ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿತ್ತು.

    ಭಾರತಿ ಏರ್‌ಟೆಲ್ 21,682 ಕೋಟಿ ರೂ., ವೊಡಾಫೋನ್ ಜೊತೆ ಐಡಿಯಾ ವಿಲೀನಗೊಂಡಿದ್ದರಿಂದ 28,300 ಕೋಟಿ ರೂ., ರಿಲಯನ್ಸ್ ಕಮ್ಯೂನಿಕೇಷನ್ಸ್ 16,456 ಕೋಟಿ ರೂ., ಬಿಎಸ್‍ಎನ್‍ಎಲ್ 2,098 ಕೋಟಿ ರೂ. ಹಾಗೂ ಎಂಟಿಎನ್‍ಎಲ್ 2,537 ಕೋಟಿ ರೂ. ಪಾವತಿಸಬೇಕಾಗಿದೆ. ಇದನ್ನೂ ಓದಿ: ಕೇಂದ್ರದಿಂದ ಟೆಲಿಕಾಂ ಕಂಪನಿಗಳಿಗೆ ಬಿಗ್ ರಿಲೀಫ್

    ಏನಿದು ಎಜಿಆರ್?
    ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ.

  • ಟೆಲಿಕಾಂ ಕಂಪನಿಗಳು ಈಸ್ಟ್ ಇಂಡಿಯಾ ಕಂಪನಿ ರೀತಿ ವರ್ತಿಸುತ್ತಿವೆ- ಕಾಂಗ್ರೆಸ್

    ಟೆಲಿಕಾಂ ಕಂಪನಿಗಳು ಈಸ್ಟ್ ಇಂಡಿಯಾ ಕಂಪನಿ ರೀತಿ ವರ್ತಿಸುತ್ತಿವೆ- ಕಾಂಗ್ರೆಸ್

    – ದರ ಏರಿಕೆಯ ಮೂಲಕ ದರೋಡೆಗೆ ನಿಂತಿವೆ
    – ಮೊದಲು ಡೇಟಾ ದರ ಕಡಿಮೆ ಮಾಡಿದ್ಯಾಕೆ?

    ನವದೆಹಲಿ: ಟೆಲಿಕಾಂ ಕಂಪನಿಗಳ ದರ ಏರಿಕೆ ಸಮರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದೆ.

    ಈ ಕುರಿತು ಕಾಂಗ್ರೆಸ್ ಸಂಸದ ಪ್ರತಾಪ್ ಸಿಂಗ್ ಬಜ್ವಾ ಪ್ರತಿಕ್ರಿಯಿಸಿದ್ದು, ಟೆಲಿಕಾಂ ಕಂಪನಿಗಳು ಟಾರಿಫ್ ಪ್ಲಾನ್‍ಗಳ ದರವನ್ನು ಹೆಚ್ಚಿಸುವ ಮೂಲಕ ಗ್ರಾಹಕರನ್ನು ಸುಲಿಗೆ ಮಾಡುತ್ತಿವೆ. ಈ ಮೂಲಕ ಈಸ್ಟ್ ಇಂಡಿಯಾ ಕಂಪನಿ ರೀತಿ ವರ್ತಿಸುತ್ತಿವೆ. ಇದನ್ನು ಕೇಂದ್ರ ಸರ್ಕಾರ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.

    ವೋಡಾಫೋನ್-ಐಡಿಯಾ, ಭಾರ್ತಿ ಏರ್‍ಟೆಲ್ ಡಿಸೆಂಬರ್ 3 ರಿಂದ ಹಾಗೂ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಡಿಸೆಂಬರ್ 6ರಿಂದ ಕರೆ ಹಾಗೂ ಡೇಟಾ ದರವನ್ನು ಶೇ.15ರಿಂದ 47 ರಷ್ಟು ಹೆಚ್ಚಳ ಮಾಡುವ ಕುರಿತು ತಿಳಿಸಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

    ಇದ್ದಕ್ಕಿದ್ದಂತೆ ಟಾರಿಫ್ ದರ ಹೆಚ್ಚಿಸುವುದು ಸುಲಿಗೆಗಿಂತ ಕಡಿಮೆಯೇನಲ್ಲ. ಮೊದಲು ಕರೆ ಹಾಗೂ ಡೇಟಾ ದರವನ್ನು ಕಡಿಮೆ ಮಾಡಿದ್ದರು. ಇದೀಗ ಅವರ ಜೇಬಿಗೆ ಹಣ ಬರುತ್ತಿದ್ದಂತೆ ದರ ಹೆಚ್ಚಿಸುವ ಮೂಲಕ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಬಿಜ್ವಾ ಆರೋಪಿಸಿದ್ದಾರೆ.

    ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಟೆಲಿಕಾಂ ವಲಯ ಏಕೆ 8 ಲಕ್ಷ ಕೋಟಿ ರೂ. ಸಾಲ ಹೊಂದಿದೆ. ಟೆಲಿಕಾಂ ಕಂಪನಿಗಳ ಈ ನಿರ್ಧಾರಕ್ಕೆ ಸರ್ಕಾರವೇ ಕಾರಣ. ರಿಲಾಯನ್ಸ್‍ನ ಜಿಯೋ ಕಾಲಿಟ್ಟ ನಂತರ ಈ ಬೆಲೆ ವಾರ್ ಶುರುವಾಗಿದೆ ಎಂದರು.

    ಐಡಿಯಾ ವೊಡಾಫೋನ್ ಮತ್ತು ಏರ್‍ಟೆಲ್ ಕಂಪನಿಗಳು ಡಿ.3 ರಿಂದ ಹಾಗೂ ರಿಲಾಯನ್ಸ್ ಜಿಯೋ ಡಿಸೆಂಬರ್ 6ರಿಂದ ಮೊಬೈಲ್ ಕರೆ ಮತ್ತು ಡೇಟಾ ದರಗಳನ್ನು ಹೆಚ್ಚಿಸುವುದಾಗಿ ತಿಳಿಸಿವೆ. ಈ ಹಿಂದಿನ ದರಗಳಿಗೆ ಹೋಲಿಸಿದರೆ ಶೇ.42 ರಷ್ಟು ದರ ಹೆಚ್ಚಳವಾಗಲಿದೆ.

    ಮಾರುಕಟ್ಟೆಯಲ್ಲಿ ಜಿಯೋಗೆ ಸ್ಪರ್ಧೆ ನೀಡಲು ಮೂರು ವರ್ಷಗಳಿಂದ ದರವನ್ನು ಇಳಿಸಿದ್ದ ಟೆಲಿಕಾಂ ಕಂಪನಿಗಳು ಈಗ ದರ ಏರಿಸುತ್ತಿವೆ. ವೊಡಾಫೋನ್ ಐಡಿಯಾ, ಏರ್‍ಟೆಲ್ ಕಳೆದ ವಾರ ಪ್ರತ್ಯೇಕ ಹೇಳಿಕೆಯನ್ನು ಬಿಡುಗಡೆ ಮಾಡಿ ಕಂಪನಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಬೆಲೆ ಏರಿಕೆ ಮಾಡಲಾಗುವುದು ಎಂದು ಹೇಳಿಕೊಂಡಿತ್ತು.

    ಟೆಲಿಕಾಂ ಕ್ಷೇತ್ರದಲ್ಲಿ ತಂತ್ರಜ್ಞಾನ ಬದಲಾವಣೆ ಆಗುತ್ತಲೇ ಇರುತ್ತದೆ. ಹೀಗಾಗಿ ಹೊಸತನಕ್ಕೆ ತೆರೆಯಬೇಕಾದರೆ ಕೋಟ್ಯಂತರ ರೂ. ಹಣ ಹೂಡಬೇಕಾಗುತ್ತದೆ. ನಷ್ಟದಲ್ಲಿದ್ದುಕೊಂಡು ಹೂಡಿಕೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ದರ ಏರಿಕೆ ಅನಿವಾರ್ಯ ಎಂದು ಕಂಪನಿಗಳು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದವು.

  • ವೊಡಾಫೋನ್, ಏರ್‌ಟೆಲ್  ಕರೆ, ಡೇಟಾ ದರ ಹೆಚ್ಚಾಯ್ತು – ಎಷ್ಟು ಏರಿಕೆ? ಇಲ್ಲಿದೆ ಪೂರ್ಣ ಮಾಹಿತಿ

    ವೊಡಾಫೋನ್, ಏರ್‌ಟೆಲ್ ಕರೆ, ಡೇಟಾ ದರ ಹೆಚ್ಚಾಯ್ತು – ಎಷ್ಟು ಏರಿಕೆ? ಇಲ್ಲಿದೆ ಪೂರ್ಣ ಮಾಹಿತಿ

    ನವದೆಹಲಿ: ಐಡಿಯಾ ವೊಡಾಫೋನ್ ಮತ್ತು ಏರ್‌ಟೆಲ್ ಕಂಪನಿಗಳು ಡಿ.3 ರಿಂದ ಮೊಬೈಲ್ ಕರೆ ಮತ್ತು ಡೇಟಾ ದರಗಳನ್ನು ಏರಿಸುವುದಾಗಿ ತಿಳಿಸಿದೆ. ಈ ಹಿಂದಿನ ದರಗಳಿಗೆ ಹೋಲಿಸಿದರೆ ಶೇ.42 ರಷ್ಟು ದರ ಹಚ್ಚಳವಾಗಲಿದೆ.

    ಮಾರುಕಟ್ಟೆಯಲ್ಲಿ ಜಿಯೋಗೆ ಸ್ಪರ್ಧೆ ನೀಡಲು ಮೂರು ವರ್ಷಗಳಿಂದ ದರವನ್ನು ಇಳಿಸಿದ್ದ ಟೆಲಿಕಾಂ ಕಂಪನಿಗಳು ಈಗ ದರ ಏರಿಸುತ್ತಿವೆ. ವೊಡಾಫೋನ್ ಐಡಿಯಾ, ಏರ್‌ಟೆಲ್ ಕಳೆದ ವಾರ ಪ್ರತ್ಯೇಕ ಹೇಳಿಕೆಯನ್ನು ಬಿಡುಗಡೆ ಮಾಡಿ ಕಂಪನಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಬೆಲೆ ಏರಿಕೆ ಮಾಡಲಾಗುವುದು ಎಂದು ಹೇಳಿಕೊಂಡಿತ್ತು.

    ಟೆಲಿಕಾಂ ಕ್ಷೇತ್ರದಲ್ಲಿ ತಂತ್ರಜ್ಞಾನ ಬದಲಾವಣೆ ಆಗುತ್ತಲೇ ಇರುತ್ತದೆ. ಹೀಗಾಗಿ ಹೊಸತನಕ್ಕೆ ತೆರೆಯಬೇಕಾದರೆ ಕೋಟ್ಯಂತರ ರೂ. ಹಣ ಹೂಡಬೇಕಾಗುತ್ತದೆ. ನಷ್ಟದಲ್ಲಿದ್ದುಕೊಂಡು ಹೂಡಿಕೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ದರ ಏರಿಕೆ ಅನಿವಾರ್ಯ ಎಂದು ಕಂಪನಿಗಳು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿತ್ತು.

    ವಿಶ್ವದಲ್ಲಿ ಈಗ ಭಾರತದಲ್ಲಿ ಅತಿ ಕಡಿಮೆ ದರದಲ್ಲಿ ಡೇಟಾ ಲಭ್ಯವಿದೆ. ಜಿಯೋಗೆ ಸ್ಪರ್ಧೆ ನೀಡಲು ಡೇಟಾ ಮತ್ತು ಕರೆ ದರವನ್ನು ಕಡಿತಗೊಳಿಸಿದ ಪರಿಣಾಮ ಟೆಲಿಕಾಂ ಕಂಪನಿಗಳು ಭಾರೀ ನಷ್ಟಕ್ಕೆ ತುತ್ತಾಗಿವೆ.

    ವೊಡಾಫೋನ್ ಸೆಪ್ಟೆಂಬರಿಗೆ ಅಂತ್ಯಗೊಂಡ ದ್ವಿತೀಯ ತ್ರೈಮಾಸಿಕದಲ್ಲಿ 50,921 ರೂ. ಕೋಟಿಗಳಷ್ಟು ನಷ್ಟ ದಾಖಲಿಸಿದ್ದರೆ, ಭಾರ್ತಿ ಏರ್‌ಟೆಲ್ 23,045 ಕೋಟಿ ರೂ. ನಷ್ಟ ಅನುಭವಿಸಿದೆ. ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ತರಂಗಾಂತರ ಬಳಕೆ ಮತ್ತು ಲೈಸೆನ್ಸ್ ಶುಲ್ಕವನ್ನು ದಂಡ, ಬಡ್ಡಿ ಜತೆ ಪಾವತಿಸಬೇಕಿದೆ. ತಮ್ಮ ಆದಾಯದ ಬಹಭಾಗವನ್ನು ಪ್ರತ್ಯೇಕವಾಗಿ ತೆಗೆದಿರಿಸಿದ ಪರಿಣಾಮ ಟೆಲಿಕಾಂ ಕಂಪನಿಗಳ ನಷ್ಟ ಭಾರೀ ಏರಿಕೆಯಾಗಿದೆ. ಶುಲ್ಕ ಮತ್ತು ದಂಡ ಪಾವತಿಸುವಂತೆ ಸುಪ್ರೀಂಕೋರ್ಟ್ ತೀರ್ಪು ಪರಾಮರ್ಶೆಗೆ ಅರ್ಜಿ ಸಲ್ಲಿಸಲು ವೊಡಾಫೋನ್ ಸಿದ್ಧತೆ ನಡೆಸುತ್ತಿದೆ.

    ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 92 ಸಾವಿರ ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿತ್ತು.

    ಭಾರತಿ ಏರ್‌ಟೆಲ್ 21,682 ಕೋಟಿ ರೂ., ವೊಡಾಫೋನ್ ಜೊತೆ ಐಡಿಯಾ ವಿಲೀನಗೊಂಡಿದ್ದರಿಂದ 28,300 ಕೋಟಿ ರೂ., ರಿಲಯನ್ಸ್ ಕಮ್ಯೂನಿಕೇಷನ್ಸ್ 16,456 ಕೋಟಿ ರೂ., ಬಿಎಸ್‍ಎನ್‍ಎಲ್ 2,098 ಕೋಟಿ ರೂ. ಹಾಗೂ ಎಂಟಿಎನ್‍ಎಲ್ 2,537 ಕೋಟಿ ರೂ. ಪಾವತಿಸಬೇಕಾಗಿದೆ.

    ಏನಿದು ಎಜಿಆರ್?
    ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ.

  • ಯಾವುದೇ ದಿನದಲ್ಲಿ ಭಾರತವನ್ನು ತೊರೆಯಬಹುದು ವೊಡಾಫೋನ್

    ಯಾವುದೇ ದಿನದಲ್ಲಿ ಭಾರತವನ್ನು ತೊರೆಯಬಹುದು ವೊಡಾಫೋನ್

    ನವದೆಹಲಿ: ವಿದೇಶಿ ಟೆಲಿಕಾಂ ಸಂಸ್ಥೆ ವೊಡಾಫೋನ್ ಭಾರತದಲ್ಲಿ ತನ್ನ ಉದ್ಯಮವನ್ನು ತೊರೆಯಲು ಮುಂದಾಗಿದೆ ಎಂದು ವರದಿಯಾಗಿದೆ.

    ಭಾರೀ ನಷ್ಟದಲ್ಲಿರುವ ಕಾರಣ ದೇಶದ ಅತಿ ದೊಡ್ಡ ಟೆಲಿಕಾಂ ಕಂಪನಿ ವೊಡಾಫೋನ್ ಭಾರತವನ್ನು ತೊರೆಯಲು ಸಿದ್ಧತೆ ನಡೆಸಿದೆ ಎಂದು ಐಎಎನ್‍ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

    ವೊಡಾಫೋನ್ ಪ್ರತಿ ತಿಂಗಳು ತನ್ನ ಲಕ್ಷಾಂತರ ಗ್ರಾಹಕರನ್ನು ಕಳೆದುಕೊಳ್ಳುತ್ತಿದೆ. ಮಾರುಕಟ್ಟೆಯಲ್ಲಿಯೂ ಬೇಡಿಕೆ ಇಳಿಮುಖವಾಗುತ್ತಿದೆ. ಈ ಎಲ್ಲದರ ಪರಿಣಾಮ ವೊಡಾಫೋನ್ ಆರ್ಥಿಕ ಸ್ಥಿತಿ ಮೇಲೆ ಭಾರೀ ಹೊಡೆತ ಬಿದ್ದಿದೆ. ಇದರಿಂದಾಗಿ ಯಾವುದೇ ದಿನದಲ್ಲಾದರೂ ಭಾರತದಲ್ಲಿ ತನ್ನ ಕಾರ್ಯವನ್ನು ಸ್ಥಗಿತಗೊಳಿಸಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಈ ವರ್ಷದ ವೊಡಾಫೋನ್ ತ್ರೈಮಾಸಿಕ ವರದಿಯ ಪ್ರಕಾರ ಭಾರೀ ನಷ್ಟವನ್ನು ಅನುಭವಿಸಿದೆ. ವೊಡಾಫೋನ್ ಮತ್ತು ಐಡಿಯಾ ಸೆಲ್ಯೂಲರ್ ಜೊತೆಗೆ ವಿಲೀನವಾದ ಬಳಿಕ ಕಂಪನಿಯ ಶೇರುಗಳ ಬೆಲೆ ಕೂಡ ತೀವ್ರ ಇಳಿಮುಖ ಕಂಡಿದೆ. 2018ರ ಜೂನ್ ತಿಂಗಳಿಗೆ ಅಂತ್ಯಗೊಂಡ ಮೊದಲ ತ್ರೈಮಾಸಿಕಲ್ಲಿ ವೊಡಾಫೋನ್ 2,757.60 ಕೋಟಿ ರೂ. ನಷ್ಟ ಅನುಭವಿಸಿದ್ದರೆ 2019ರಲ್ಲಿ ಅಂತ್ಯಗೊಂಡ ಜೂನ್ ತ್ರೈಮಾಸಿಕದಲ್ಲಿ 4,067.01 ಕೋಟಿ ರೂ. ನಷ್ಟ ಅನುಭವಿಸಿತ್ತು. ಒಂದೇ ವರ್ಷದಲ್ಲಿ ನಷ್ಟದ ಪ್ರಮಾಣವು ದ್ವಿಗುಣಗೊಂಡ ಹಿನ್ನೆಲೆಯಲ್ಲಿ ವೊಡಾಫೋನ್ ಕಂಪನಿ ಭಾರತ ತೊರೆಯಲು ಮುಂದಾಗುತ್ತಿದೆ ಎನ್ನಲಾಗುತ್ತಿದೆ.

    ಈ ಸುದ್ದಿಗೆ ಸಂಬಂಧಿಸಿದಂತೆ ಸುದ್ದಿಸಂಸ್ಥೆ ವೊಡಾಫೋನ್ ಕಂಪನಿಯನ್ನು ಸಂಪರ್ಕಿಸಿದೆ. ಆದರೆ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವೊಡಾಫೋನ್ ಪ್ರತಿಕ್ರಿಯೆ ನೀಡಿದ ಬಳಿಕ ಸುದ್ದಿ ಪ್ರಕಟಿಸಲಾಗುವುದು ಎಂದು ಸುದ್ದಿಸಂಸ್ಥೆ ಹೇಳಿದೆ.

    ವೊಡಾಫೋನ್-ಐಡಿಯಾ ಸಂಸ್ಥೆ ತನಗೆ ಸಾಲ ನೀಡಿರುವ ಸಂಸ್ಥೆಗೆ ಸಾಲದ ಬಾಧ್ಯತೆಗಳನ್ನು ಮರುಹಂಚಿಕೆ ಮಾಡಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವೊಡಾಫೋನ್ ಭಾರತ ತೊರೆಯಲು ಮುಂದಾಗಿದೆ ಎಂಬ ವದಂತಿ ಹಬ್ಬಿತ್ತು. ಈ ಮಾಹಿತಿಯನ್ನು ತಳ್ಳಿಹಾಕಿರುವ ಸಂಸ್ಥೆ, ನಾವು ಯಾವುದೇ ಮನವಿಯನ್ನೂ ಯಾರಿಗೂ ಮಾಡಿಲ್ಲ. ಎಲ್ಲಾ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಲಿದ್ದೇವೆ ಎಂದು ಸ್ಪಷ್ಟನೆ ನೀಡಿತ್ತು.

    ಹೊಂದಾಯಿಸಲಾದ ನಿವ್ವಳ ಆದಾಯ’ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 92 ಸಾವಿರ ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿದೆ. ಅಷ್ಟೇ ಅಲ್ಲದೇ ಕೋರ್ಟ್ 3 ತಿಂಗಳ ಒಳಗಡೆ ಈ ಹಣವನ್ನು ಪಾವತಿಸುವಂತೆ ಟೆಲಿಕಾಂ ಕಂಪನಿಗಳಿಗೆ ಗಡುವು ನೀಡಲಾಗಿದೆ.

    ಭಾರತಿ ಏರ್‍ಟೆಲ್ 21,682 ಕೋಟಿ ರೂ., ವೊಡಾಫೋನ್ ಜೊತೆ ಐಡಿಯಾ ವಿಲೀನಗೊಂಡಿದ್ದರಿಂದ 28,300 ಕೋಟಿ ರೂ., ರಿಲಯನ್ಸ್ ಕಮ್ಯುನಿಕೇಷನ್ಸ್ 16,456 ಕೋಟಿ ರೂ., ಬಿಎಸ್‍ಎನ್‍ಎಲ್ 2098 ಕೋಟಿ ರೂ. ಹಾಗೂ ಎಂಟಿಎನ್‍ಎಲ್ 2537 ಕೋಟಿ ರೂ. ಪಾವತಿಸಬೇಕಾಗಿದೆ. ನಷ್ಟದಲ್ಲಿರುವ ವೊಡಾಫೋನ್ ಕಂಪನಿಗೆ ಸುಪ್ರೀಂ ತೀರ್ಪು ಭಾರೀ ಹೊಡೆತ ನೀಡಿದೆ.

    ಏನಿದು ಎಜಿಆರ್?:
    ದೇಶದ ಹೊಸ ಟೆಲಿಕಾಂ ನೀತಿ ಪ್ರಕಾರ, ದೂರಸಂಪರ್ಕ ಆದಾಯದ ಜತೆಗೆ ಬಾಡಿಗೆ, ಲಾಭಾಂಶ, ನಿಶ್ಚಿತ ಠೇವಣಿಯಿಂದ ಬರುವ ಲಾಭ ಹಾಗೂ ಇನ್ನಿತರೆ ಆದಾಯಗಳನ್ನು ಎಜಿಆರ್ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಕಾರ್ಯನಿರ್ವಹಿಸುವ ಕಂಪನಿಗಳು ತಮ್ಮ ಎಜಿಆರ್ ನಲ್ಲಿ ಒಂದಷ್ಟು ಪಾಲನ್ನು ಕೇಂದ್ರ ಸರ್ಕಾರಕ್ಕೆ ನೀಡಬೇಕಾಗುತ್ತದೆ. ಅದನ್ನು ವಾರ್ಷಿಕ ಲೈಸೆನ್ಸ್ ಶುಲ್ಕ ಎಂದು ಕರೆಯಲಾಗುತ್ತದೆ. ಇದರ ಜತೆಗೆ ತಮಗೆ ಹಂಚಿಕೆಯಾದ ಸ್ಪೆಕ್ಟ್ರಂ ಅನ್ನು ಬಳಕೆ ಮಾಡಿದ್ದಕ್ಕೆ ಬಳಕೆ ಶುಲ್ಕವನ್ನೂ ಪಾವತಿಸಬೇಕಾಗಿದೆ.

    ದೇಶದ ಅತೀ ದೊಡ್ಡ ಟೆಲಿಕಾಮ್ ಸಂಸ್ಥೆಯನ್ನು ಸ್ಥಾಪಿಸುವ ಸಲುವಾಗಿ ಐಡಿಯಾ ಸೆಲ್ಯುಲರ್ ಮತ್ತು ಬ್ರಿಟಿಷ್ ಟೆಲಿಕಾಮ್ ಸಂಸ್ಥೆ ವೊಡಾಫೋನ್ ನ ಭಾರತದ ಘಟಕ 2017ರ ಮಾರ್ಚ್ 20 ರಂದು ವಿಲೀನಗೊಳ್ಳುತ್ತಿರುವುದಾಗಿ ಘೋಷಿಸಿಕೊಂಡಿತ್ತು.

    ಐಡಿಯಾ ಹಾಗೂ ವೊಡಾಫೋನ್ ಇಂಡಿಯಾ ವಿಲೀನದಿಂದ 40 ಕೋಟಿಗೂ ಅಧಿಕ ಗ್ರಾಹಕರನ್ನೊಳಗೊಂಡ ಭಾರತದ ಅತೀ ದೊಡ್ಡ ಟೆಲಿಕಾಮ್ ಸಂಸ್ಥೆಯಾಗಿ ಹೊರಹೊಮ್ಮಿತ್ತು. ಡೀಲ್ ಪ್ರಕಾರ ಹೊಸ ಕಂಪೆನಿಯಲ್ಲಿ ವೊಡಾಫೋನ್ ಶೇ.45 ರಷ್ಟು ಪಾಲು ಹೊಂದಿದ್ದು, ಶೇ.26 ರಷ್ಟು ಪಾಲುದಾರಿಕೆ ಮೇಲೆ ಐಡಿಯಾ ಕಂಪೆನಿ ತನ್ನ ಹಕ್ಕನ್ನು ಹೊಂದಿದೆ.

    ಈ ವಿಲೀನದೊಂದಿಗೆ ಆದಿತ್ಯಾ ಬಿರ್ಲಾ ಗ್ರೂಪ್ ದೇಶದಲ್ಲಿ ಉತ್ತಮ ಗುಣಮಟ್ಟದ ಡಿಜಿಟಲ್ ಸೇವೆಯನ್ನ ಒದಗಿಸಲಿದೆ. ಇದು ಭಾರತೀಯರನ್ನ ಡಿಜಿಟಲ್ ಜೀವನಶೈಲಿಯತ್ತ ಕೊಂಡಯ್ಯಲಿದ್ದು, ಸರ್ಕಾರದ ಡಿಜಿಟಲ್ ಇಂಡಿಯಾ ಉದ್ದೇಶ ಸಾಕಾರವಾಗಲಿದೆ ಎಂದು ಆದಿತ್ಯ ಬಿರ್ಲಾ ಗ್ರೂಪ್‍ನ ಅಧ್ಯಕ್ಷರಾದ ಮಂಗಳಂ ಬಿರ್ಲಾ ಹೇಳಿಕೆ ನೀಡಿದ್ದರು.

  • ಇಂದಿನಿಂದ ಎಲ್ಲ ಜಿಯೋ ಕರೆ ಉಚಿತವಲ್ಲ – ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಇಂದಿನಿಂದ ಎಲ್ಲ ಜಿಯೋ ಕರೆ ಉಚಿತವಲ್ಲ – ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

    ಬೆಂಗಳೂರು: ಇಂದಿನಿಂದ ಜಿಯೋ ಗ್ರಾಹಕರು ಬೇರೆ ಟೆಲಿಕಾಂ ಕಂಪನಿಯ ಕರೆಗಳಿಗೆ ಕರೆ ಮಾಡಿದರೆ ಹಣವನ್ನು ಪಾವತಿಸಬೇಕಾಗುತ್ತದೆ.

    ಜಿಯೋ ಬೇರೆ ಟೆಲಿಕಾಂ ಕಂಪನಿಗಳಿಗೆ ಹೊರಹೋಗುವ ಎಲ್ಲ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ದರ ವಿಧಿಸಲಾಗುವುದು ಎಂದು ಪ್ರಕಟಿಸಿದೆ. ಇಲ್ಲಿಯವರೆಗೆ ಜಿಯೋ ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್ (ಐಯುಸಿ) ವಿಧಿಸುತ್ತಿರಲಿಲ್ಲ. ಆದರೆ ಈಗ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ನಿಗದಿ ಪಡಿಸಿದಂತೆ ಐಯುಸಿ ವಿಧಿಸಲು ಜಿಯೋ ಮುಂದಾಗುತ್ತಿದೆ. ಐಯುಸಿಗಾಗಿ ಈಗ ಜಿಯೋ ಟಾಪ್ ಅಪ್ ಪ್ಲಾನ್ ಪ್ರಕಟಿಸಿದೆ.

    ಬೇರೆ ಕಂಪನಿಗಳ ನಂಬರ್ ಗಳ ಕರೆಗಳಿಗೆ ಮಾತ್ರ ದರ ವಿಧಿಸಲಾಗಿದ್ದು ಜಿಯೋದಿಂದ ಜಿಯೋ ನಂಬರಿಗೆ ಹೋಗುವ ಕರೆಗಳು ಎಂದಿನಂತೆ ಉಚಿತವಾಗಿ ಇರಲಿದೆ. ಇದರ ಜೊತೆ ಡೇಟಾ ಬಳಸಿಕೊಂಡು ಮಾಡುವ ವಾಟ್ಸಪ್ ಕರೆ, ವಿಡಿಯೋ ಕರೆಗಳಿಗೆ ಯಾವುದೇ ದರ ಇಲ್ಲ.

    ಜಿಯೋ ಈ ಹಿಂದೆ ಜಾರಿಗೆ ತಂದ ಡೇಟಾ ಪ್ಲಾನ್‍ಗಳು ಈಗಲೂ ಚಾಲ್ತಿಯಲ್ಲಿದೆ. ಈ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಉದಾಹರಣೆಗೆ ಹಿಂದೆ 449 ರೂ. ರಿಚಾರ್ಜ್ ಮಾಡಿದರೆ 91 ದಿನಗಳ ಕಾಲ ಉಚಿತವಾಗಿ ಯಾವುದೇ ಟೆಲಿಕಾಂ ಕಂಪನಿಯ ನಂಬರಿಗೆ ಕರೆ ಮಾಡಬಹುದಿತ್ತು. ಈ ಪ್ಲಾನ್ ನಲ್ಲಿ ಪ್ರತಿ ದಿನ ಗರಿಷ್ಟ 1.5 ಜಿಬಿ ಡೇಟಾ ಬಳಸಬಹುದಿತ್ತು. ಈಗಲೂ ಈ ಪ್ಲಾನ್ ಚಾಲ್ತಿಯಲ್ಲಿದೆ. ನೀವು ಜಿಯೋ ನಂಬರಿಗೆ ಮಾತ್ರ ಕರೆ ಮಾಡುತ್ತಿದ್ದರೆ ಟಾಪ್ ಅಪ್ ಹಾಕುವ ಅಗತ್ಯವಿಲ್ಲ. ಆದರೆ ಬೇರೆ ನಂಬರಿಗೆ ಕರೆ ಮಾಡಬೇಕಾದರೆ ಡೇಟಾ ಪ್ಲಾನ್ ಜೊತೆಗೆ ಟಾಪ್ ಅಪ್ ಹಾಕಬೇಕಾಗುತ್ತದೆ.

    ಎಷ್ಟು ಟಾಪ್ ಅಪ್ ಹಾಕಬೇಕು?
    ಜಿಯೋ 10 ರೂ. ನಿಂದ ಆರಂಭಿಸಿ 1000 ರೂ. ಟಾಪ್ ಅಪ್ ಪರಿಚಯಿಸಿದೆ. ಈ ಟಾಪ್ ಅಪ್‍ಗಳು ಎಲ್ಲ ಡೇಟಾ ಪ್ಲಾನ್‍ಗಳಿಗೆ ಅನ್ವಯವಾಗಲಿದೆ. ಅಂದರೆ ಒಂದೊಂದು ಡೇಟಾ ಪ್ಲಾನ್ ಗಳಿಗೆ ಪ್ರತ್ಯೇಕವಾಗಿ ಯಾವುದೇ ಟಾಪ್ ಅಪ್ ಇಲ್ಲ. 98 ರೂ.ನಿಂದ ಹಿಡಿದು 9999 ರೂ. ವರೆಗಿನ ಎಲ್ಲ ಡೇಟಾ ಪ್ಲಾನ್ ಗಳಿಗೆ ಒಂದೇ ರೀತಿಯ ಟಾಪ್ ಅಪ್ ದರ ನಿಗದಿಯಾಗಿದೆ.

    ಟಾಪ್ ಅಪ್ ಹಾಕಿದ್ದಕ್ಕೆ ಹೆಚ್ಚುವರಿ ಡೇಟಾ(10 ರೂ.ಗೆ 1 ಜಿಬಿ) ನೀಡುವುದಾಗಿ ಜಿಯೋ ಹೇಳಿದೆ. ಅದಕ್ಕೂ ಬೆಲೆ ನಿಗದಿ ಪಡಿಸಿದ್ದು 10 ರೂ. ಟಾಪ್ ಅಪ್ ಹಾಕಿಸಿದರೆ 1 ಜಿಬಿ ಡೇಟಾ ಸಿಕ್ಕರೆ 1000 ರೂ. ಹಾಕಿದರೆ 100 ಜಿಬಿ ಡೇಟಾ ಸಿಗಲಿದೆ.

    10 ರೂ.ಗೆ 124 ನಿಮಿಷ, 20 ರೂ. ಗೆ 249 ನಿಮಿಷ, 50 ರೂ.ಗೆ 656 ನಿಮಿಷ, 100 ರೂ.ಗೆ 1362 ನಿಮಿಷ, 500 ರೂ.ಗೆ 7,012 ನಿಮಿಷ, 1000 ರೂ.ಗೆ 14,074 ನಿಮಿಷ ಕರೆಯನ್ನು ಮಾಡಬಹುದಾಗಿದೆ.

    ಈ ಹಿಂದೆ ಪ್ಲಾನ್ ಹಾಕಿದ್ರೆ ಏನು ಮಾಡಬೇಕು?
    ನಿನ್ನೆಯವರೆಗೆ ಯಾರೆಲ್ಲ ಯಾವ ಡೇಟಾ ಪ್ಲಾನ್ ಹಾಕಿದ್ದೀರೋ ಅವರೆಲ್ಲ ಆ ಪ್ಲಾನ್ ನಲ್ಲಿ ಘೋಷಣೆಯಾಗಿರುವ ವ್ಯಾಲಿಡಿಟಿಯವರೆಗೆ ಯಾವುದೇ ನಂಬರಿಗೆ ಉಚಿತವಾಗಿ ಕರೆ ಮಾಡಬಹುದು. ಯಾಕೆಂದರೆ ರಿಚಾರ್ಜ್ ಮಾಡಿದ ಕೂಡಲೇ ಇಂತಿಷ್ಟು ದಿನದವರೆಗೆ ಹೊರ ಹೋಗುವ ಕರೆಗಳು ಉಚಿತ ಎಂದು ಸಂದೇಶ ಇರುವ ಮೆಸೇಜ್ ಬಂದಿರುತ್ತದೆ. ಹೀಗಾಗಿ ಆ ಗ್ರಾಹಕರು ವ್ಯಾಲಿಡಿಟಿ ಮುಗಿಯುವವರೆಗೂ ಯಾವುದೇ ಟಾಪ್ ಅಪ್ ಹಾಕುವ ಅಗತ್ಯವಿಲ್ಲ. ವ್ಯಾಲಿಡಿಟಿ ಮುಗಿದ ಬಳಿಕ ಡೇಟಾ ಪ್ಲಾನ್ ಹಾಕುವಾಗ ಪ್ರತ್ಯೇಕವಾಗಿ ಟಾಪ್ ಅಪ್ ರಿಚಾರ್ಜ್ ಮಾಡಬೇಕಾಗುತ್ತದೆ.

    ಜಿಯೋ ಸೇವೆ ಆರಂಭಗೊಂಡ ಬಳಿಕ ಈ ಐಯುಸಿಯನ್ನು ತಗೆದು ಹಾಕಬೇಕೆಂದು ಟ್ರಾಯ್ ಮುಂದೆ ವಾದ ಮಂಡಿಸುತಿತ್ತು. ಆದರೆ ಬೇರೆ ಟೆಲಿಕಾಂ ಕಂಪನಿಗಳು ಐಯುಸಿಯನ್ನು ತೆಗೆದು ಹಾಕಬಾರದು ದರವನ್ನು ಹೆಚ್ಚಿಸಬೇಕು ಎಂದು ವಾದಿಸುತ್ತಿದ್ದವು. ಆದರೆ ಟ್ರಾಯ್ ಹಂತ ಹಂತವಾಗಿ ಐಯುಸಿ ದರವನ್ನು ಕಡಿತಗೊಳಿಸುತ್ತಿದ್ದು ಮುಂದಿನ ವರ್ಷದಲ್ಲಿ ಸಂಪೂರ್ಣವಾಗಿ ತೆಗೆದು ಹಾಕುವ ಸಾಧ್ಯತೆಯಿದೆ.

    ಏನಿದು ಐಯುಸಿ?
    ಇಂಟರ್ ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಟ್ರಾಯ್ ನಿಗದಿ ಪಡಿಸುತ್ತದೆ. ಉದಾಹರಣೆಗೆ ಜಿಯೋ ಗ್ರಾಹಕರೊಬ್ಬರು ವೊಡಾಫೋನ್ ಗ್ರಾಹಕರಿಗೆ ಕರೆ ಮಾಡಿದರೆ ಜಿಯೋ ಟ್ರಾಯ್ ನಿಗದಿ ಪಡಿಸಿದ ಐಯುಸಿಯನ್ನು ವೊಡಾಫೋನ್ ಕಂಪನಿಗೆ ಪಾವತಿಸಬೇಕಾಗುತ್ತದೆ.

    2003ರಲ್ಲಿ ಒಳಬರುವ ಕರೆಯನ್ನು ಉಚಿತವಾಗಿ ನೀಡುವ ಸಲುವಾಗಿ ಟ್ರಾಯ್ ಐಯುಸಿಯನ್ನು ತಂದಿತ್ತು. 2004ರ ಫೆಬ್ರವರಿಯಲ್ಲಿ ಟ್ರಾಯ್ ಪ್ರತಿ ನಿಮಿಷಕ್ಕೆ 30 ಪೈಸೆ, 2009ರ ಏಪ್ರಿಲ್ ನಲ್ಲಿ 20 ಪೈಸೆ, 2015ರ ಮಾರ್ಚ್ ನಲ್ಲಿ 14 ಪೈಸೆ, ಪ್ರಸ್ತುತ ಈಗ 6 ಪೈಸೆ ಐಯುಸಿ ಬೆಲೆಯನ್ನು ಟ್ರಾಯ್ ನಿಗದಿಪಡಿಸಿದೆ.

    ಐಯುಸಿಯಿಂದಾಗಿ ಏರ್ ಟೆಲ್, ವೊಡಾಫೋನ್ ಕಂಪನಿಗಳು ಸಾವಿರಾರು ಕೋಟಿ ರೂ. ಆದಾಯಗಳಿಸುತ್ತಿದೆ ಎನ್ನುವುದು ಜಿಯೋ ಆರೋಪ. ಕಳೆದ 3 ವರ್ಷಗಳಲ್ಲಿ ಜಿಯೋ ಐಯುಸಿಗೆಂದು ಒಟ್ಟು 12 ಸಾವಿರ ಕೋಟಿ ರೂ. ಹಣವನ್ನು ವಿವಿಧ ಟೆಲಿಕಾಂ ಕಂಪನಿಗಳಿಗೆ ಪಾವತಿಸಿದೆ. ಹೊರ ಹೋಗುವ ಕರೆಗಳು ಉಚಿತವಾಗಿ ಇರುವ ಕಾರಣ ಬೇರೆ ಕಂಪನಿಯ ಗ್ರಾಹಕರು ನಮ್ಮ ಕಂಪನಿಯ ಗ್ರಾಹಕರಿಗೆ ಮಿಸ್ ಕಾಲ್ ನೀಡುತ್ತಿದ್ದಾರೆ. ಪ್ರತಿ ದಿನ ಜಿಯೋಗೆ  25 ರಿಂದ 30 ಕೋಟಿ ಮಿಸ್ ಕಾಲ್ ಗಳು ಬರುತ್ತಿದೆ. ಇದರಿಂದಾಗಿ ನಮಗೆ ಪ್ರತಿ ದಿನ 65 ರಿಂದ 75 ಕೋಟಿ ನಷ್ಟವಾಗುತ್ತಿದೆ ಎಂದು ಜಿಯೋ ಹೇಳಿದೆ.

    ಈ ಹಿಂದೆ ಭಾರತಿ ಎಂಟರ್ಪ್ರೈಸಸ್ ಮುಖ್ಯಸ್ಥ ಸುನೀಲ್ ಮಿತ್ತಲ್ ಟ್ರಾಯ್ ಮುಖ್ಯಸ್ಥರಿಗೆ ಪತ್ರ ಬರೆದು ಪ್ರಸ್ತುತ ಐಯುಸಿ ಕಡಿಮೆ ಇದೆ. ಪಾರದರ್ಶಕವಾಗಿ ಹೊಸ ಬೆಲೆಯನ್ನು ನಿಗದಿಪಡಿಸಬೇಕೆಂದು ಮನವಿ ಮಾಡಿದ್ದರು.

    ಜಿಯೋ ವಿರೋಧ ಯಾಕೆ?
    ಇಲ್ಲಿಯವರೆಗೆ ಟೆಲಿಕಾಂ ಕಂಪನಿಗಳು ಕರೆ ಮತ್ತು ಡೇಟಾ ಸೇವೆಗಳನ್ನು ಪ್ರತ್ಯೇಕವಾಗಿ ನಿಭಾಯಿಸುತಿತ್ತು. ಆದರೆ ಜಿಯೋ ಈ ಎರಡನ್ನೂ ಒಟ್ಟಿಗೆ ನಿಭಾಯಿಸುತ್ತದೆ. ಇದರಿಂದಾಗಿ ಖರ್ಚು ಕಡಿಮೆ ಆಗುತ್ತದೆ. ಡೇಟಾವನ್ನು ಬಳಸಿಕೊಂಡು ಕರೆ ಮಾಡುವ ತಂತ್ರಜ್ಞಾನವೇ ವಾಯ್ಸ್ ಓವರ್ ಲಾಂಗ್ ಟರ್ಮ್ ಎವಲ್ಯೂಶನ್(ಎಲ್‍ಟಿಇ). ಇದರಲ್ಲಿ ಕರೆಗೆ ಬೇರೆ, ಡೇಟಾಗೆ ಬೇರೆ ಎಂದು ಹಣ ನೀಡಬೇಕಿಲ್ಲ. ಡೇಟಾಗೆ ನೀಡಿದ ಹಣದಲ್ಲೇ ಕರೆಯನ್ನೂ ಉಚಿತವಾಗಿ ಮಾಡಬಹುದು. ಈ ಕಾರಣಕ್ಕಾಗಿ ಜಿಯೋ ಸಂಪೂರ್ಣವಾಗಿ ಐಯುಸಿಯನ್ನು ತೆಗೆದು ಹಾಕಬೇಕೆಂದು ವಾದ ಮಂಡಿಸುತ್ತಿದೆ. ಐಯುಸಿಯಿಂದ ನಮಗೆ ಹೊರೆಯಾಗುತ್ತಿದೆ. ಇತರೇ ಟೆಲಿಕಾಂ ಕಂಪೆನಿಗಳು ತಮ್ಮ ಆದಾಯವನ್ನು ಹೆಚ್ಚಿಸಲು ಮಾಡಿಕೊಂಡ ತಂತ್ರ ಎಂದು ಜಿಯೋ ವಾದಿಸುತ್ತಿದೆ.