Tag: Voice

  • ‘ಟೈಗರ್’ಗೆ ಧ್ವನಿಯಾದ ಪ್ರಿಯಾಂಕಾ ಚೋಪ್ರಾ

    ‘ಟೈಗರ್’ಗೆ ಧ್ವನಿಯಾದ ಪ್ರಿಯಾಂಕಾ ಚೋಪ್ರಾ

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅಪರೂಪದ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಅದರಲ್ಲೂ ಪರಿಸರ, ಪ್ರಾಣಿ ಪಕ್ಷಿಗಳ ಬಗ್ಗೆ ಅಪಾರ ಕಾಳಜಿ ತಗೆದುಕೊಳ್ಳುತ್ತಾರೆ. ಇದರ ಭಾಗವಾಗಿಯೇ ಅವರು ಟೈಗರ್ (Tiger) ಹೆಸರಿನ ಡಾಕ್ಯುಮೆಂಟರಿಗೆ ಧ್ವನಿ (Voice) ನೀಡಿದ್ದಾರೆ. ಅತ್ಯಂತ ಅಭಿಮಾನದಿಂದ ಈ ಕೆಲಸವನ್ನು ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

    ಬ್ರಿಟಿಷ್ ಬರಹಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಮಾರ್ಕ್ ಲೈನ್‍ ಫೀಲ್ಸ್ ಅವರು ಈ ಚಿತ್ರವನ್ನು ತಯಾರಿಸಿದ್ದು, ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಈ ಡಾಕ್ಯುಮೆಂಟರಿ ಪ್ರಸಾರವಾಗಲಿದೆ. ಈ ಕುರಿತಂತೆ ಕೆಲವು ವಿವರಗಳನ್ನು ಪ್ರಿಯಾಂಕಾ ಚೋಪ್ರಾ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

     

    ಟೈಗರ್ ಡಾಕ್ಯುಮೆಂಟರಿಗೆ ಧ್ವನಿ ನೀಡುತ್ತಾ, ನಾನು ಕಾಡನ್ನು ಎಂಜಾಯ್ ಮಾಡಿದೆ. ಸ್ಟೋರಿ ಅದ್ಭುತವಾಗಿದೆ. ಕಾಡಿನ ಹುಡುಕಾಟದ ಅನುಭವವನ್ನೂ ಕಣ್ತುಂಬಿಕೊಂಡೇ ಅನುಭವಿಸಬೇಕು ಎಂದೆಲ್ಲ ಪ್ರಿಯಾಂಕಾ ಬರೆದಿದ್ದಾರೆ.

  • ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

    ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

    ನವದೆಹಲಿ: ಶ್ರೀಹರಿಕೋಟಾದಲ್ಲಿ (Sriharikota) ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ (Countdown) ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿ (Scientist) ವಲರ್ಮತಿ (Valarmathi) ಅವರು ಹೃದಯಾಘಾತದಿಂದ (Heart Attack) ಭಾನುವಾರ ನಿಧನರಾಗಿದ್ದಾರೆ.

    ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 (Chandrayaan-3) ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು. ಇದನ್ನೂ ಓದಿ: ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಆಕೆಯ ಅಂತಿಮ ಕೌಂಟ್‌ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಹುಪತ್ನಿತ್ವ ನಿಷೇಧ – ಮಸೂದೆ ಮಂಡನೆಗೆ ಮುಂದಾದ ಅಸ್ಸಾಂ ಸರ್ಕಾರ

    ವಲರ್ಮತಿ ಯಾರು?
    ವಲರ್ಮತಿ ಆರ್‌ಐಎಸ್‌ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ವಲರ್ಮತಿ 1984ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2ಎ, ಐಆರ್‌ಎಸ್, ಐಸಿ, ಐಡಿ, ಟಿಇಎಸ್ ಸೇರಿದಂತೆ ಹಲವು ಕಾರ್ಯಾಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇದನ್ನೂ ಓದಿ: Aditya L1: ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ ನೌಕೆ – ಸೂರ್ಯನತ್ತ ಮತ್ತೊಂದು ಹೆಜ್ಜೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ’ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಕನ್ನಡ ಫಸ್ಟ್ ಲುಕ್ ಗೆ ಶಿವಣ್ಣ ವಾಯ್ಸ್

    ’ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಕನ್ನಡ ಫಸ್ಟ್ ಲುಕ್ ಗೆ ಶಿವಣ್ಣ ವಾಯ್ಸ್

    ಟಾಲಿವುಡ್ ಮಾಸ್ ಮಹಾರಾಜ ರವಿತೇಜ (Ravitej) ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ (Tiger Nageshwar Rao) ಫಸ್ಟ್ ಲುಕ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿರುವ ಫಸ್ಟ್ ಲುಕ್ (First Look) ಕನ್ನಡ ಝಲಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿ (Voice) ನೀಡಿದ್ದಾರೆ.

    ಕರುನಾಡ ಚಕ್ರವರ್ತಿ ಶಿವಣ್ಣ (Shivaraj Kumar)ತಮ್ಮ ಮ್ಯಾಜಿಕಲ್ ವಾಯ್ಸ್ ಮೂಲಕ ಟೈಗರ್ ನಾಗೇಶ್ವರ್ ರಾವ್ ಪ್ರಪಂಚಕ್ಕೆ ನಿಮ್ಮನ್ನು ಕೊಂಡೊಯ್ಯಲಿದ್ದಾರೆ. ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ಇದನ್ನೂ ಓದಿ:ಕಾನ್‌ ಫೆಸ್ಟಿವಲ್‌ನಲ್ಲಿ ಕಂಗೊಳಿಸಿದ ಊರ್ವಶಿ ರೌಟೇಲಾ

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

    ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದಾರೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

  • ವಾಣಿಜ್ಯ ಬಳಕೆಗೆ ತಮ್ಮ ಹೆಸರು, ಧ್ವನಿ ಬಳಸದಂತೆ ರಜನಿಕಾಂತ್ ಎಚ್ಚರಿಕೆ ನೋಟಿಸ್

    ವಾಣಿಜ್ಯ ಬಳಕೆಗೆ ತಮ್ಮ ಹೆಸರು, ಧ್ವನಿ ಬಳಸದಂತೆ ರಜನಿಕಾಂತ್ ಎಚ್ಚರಿಕೆ ನೋಟಿಸ್

    ಭಾರತೀಯ ಸಿನಿಮಾ ರಂಗದ ಖ್ಯಾತ ನಟ ರಜನಿಕಾಂತ್ (Rajinikanth), ತಮ್ಮ ಹೆಸರನ್ನು ವಾಣಿಜ್ಯ ಬಳಕೆಗೆ ಬಳಸದಂತೆ ಸಾರ್ವಜನಿಕವಾಗಿ ಎಚ್ಚರಿಕೆ ನೋಟಿಸ್ ನೀಡಿದ್ದಾರೆ. ಕೇವಲ ತಮ್ಮ ಹೆಸರು ಮಾತ್ರವಲ್ಲ, ತಮ್ಮ ಸ್ಟೈಲ್ (Style), ಸಿನಿಮಾದ ತುಣುಕು, ಧ್ವನಿ (Voice) ಹಾಗೂ ಮ್ಯಾನರಿಸಂ ಅನ್ನು ಬಳಸದಂತೆ ಅವರು ಸಾರ್ವಜನಿಕವಾಗಿ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವೇಳೆ ಉಲ್ಲಂಘನೆ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ ತಗೆದುಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.

    ರಜನಿಕಾಂತ್ ಅರಿವಿಗೆ ಬಾರದಂತೆ ಅವರು ಫೋಟೋ, ವಿಡಿಯೋ ತುಣುಕು, ಧ್ವನಿ ಮತ್ತು ವಿವಿಧ ಸ್ಟೈಲ್ ನ ಚಿತ್ರಗಳನ್ನು ವಾಣಿಜ್ಯ ಬಳಕೆಗಾಗಿ ಬಳಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಇಂಥದ್ದೊಂದು ನೋಟಿಸ್ ಅನ್ನು ಅವರು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ್ದಾರೆ. ರಜನಿಕಾಂತ್ ಅವರ ಪರವಾನಿಗೆ ತಗೆದುಕೊಂಡು ಬಳಸುವಂತೆಯೂ ಅವರು ಮನವಿ ಮಾಡಿದ್ದಾರೆ. ಅಲ್ಲದೇ, ತಮ್ಮ ಗೌರವಕ್ಕೆ ಧಕ್ಕೆ ತರುವಂತೆ ಕೆಲವು ಕಡೆ ಬಳಕೆ ಆಗಿರುವ ಕುರಿತೂ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ

    ಈ ಹಿಂದೆ ಇಂಥದ್ದೊಂದು ಸಾರ್ವಜನಿಕ ನೋಟಿಸ್ ಅನ್ನು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಕೂಡ ನೀಡಿದ್ದರು. ನಾನಾ ಜಾಹೀರಾತುಗಳಲ್ಲಿ ಅಮಿತಾಭ್ ಅವರನ್ನು ಬಳಕೆ ಮಾಡಿದ್ದರ ವಿರುದ್ಧ ಕಿಡಿಕಾರಿದ್ದರು. ವಾಣಿಜ್ಯ ಉದ್ದೇಶ ಇಟ್ಟುಕೊಂಡು ಅಮಿತಾಭ್ ಫೋಟೋ, ಧ್ವನಿ ಮತ್ತು ಸಿನಿಮಾದ ತುಣುಕುಗಳನ್ನು ಬಳಸಿದವರು ವಿರುದ್ಧ ಚಾಟಿ ಬೀಸಿದ್ದರು. ಕಾನೂನು ಕ್ರಮಕ್ಕೂ ಅವರು ಮುಂದಾಗಿದ್ದರು. ಇದೀಗ ರಜನಿಕಾಂತ್ ಅದೇ ಹಾದಿಯನ್ನು ಹಿಡಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ, ನನಗೆ ಸಿಟ್ಟು ಬರುವುದಿಲ್ಲ: ಅಮಿತ್ ಶಾ

    ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ, ನನಗೆ ಸಿಟ್ಟು ಬರುವುದಿಲ್ಲ: ಅಮಿತ್ ಶಾ

    ನವದೆಹಲಿ: ನನಗೆ ಸಿಟ್ಟು ಬರುವುದಿಲ್ಲ, ನನ್ನ ಗಟ್ಟಿ ಧ್ವನಿ ಮ್ಯಾನುಫ್ಯಾಕ್ಚರಿಂಗ್ ಡಿಫೆಕ್ಟ್ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

    ಲೋಕಸಭೆಯಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಪ್ರೊಸೀಜರ್  ಮಸೂದೆ 2022(Criminal Procedure (Identification) Bill 2022)ಅನ್ನು ಇಂದು ಸದನದಲ್ಲಿ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ  ಅಮಿತ್ ಶಾ ಮಂಡಿಸಿದ್ದಾರೆ.  ಅಪರಾಧದ ತನಿಖೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಮಾಡಲು ಮತ್ತು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಗುರಿಯನ್ನು ಈ ಮಸೂದೆ ಹೊಂದಿದೆ ಎಂದು ಹೇಳಿದರು. ಖಾಸಗಿತನದ ಹಕ್ಕು ಸೇರಿದಂತೆ ಮಸೂದೆಯ ಬಗ್ಗೆ ವಿರೋಧ ಪಕ್ಷದ ಸದಸ್ಯರ ಆತಂಕವನ್ನು ನಿವಾರಿಸಲು ಅವರು ಪ್ರಯತ್ನಿಸಿದರು.

    ಪ್ರತಿಪಕ್ಷ ಸದಸ್ಯರು ಟೀಕೆ ಮಾಡಿದಾಗ, ದಾದಾಗೆ ಸಚಿವರು ಕೋಪದ ಸ್ವರದಲ್ಲಿ ಪ್ರತಿಕ್ರಿಯಿಸುತ್ತಾರೆ ಎಂದು ತೃಣಮೂಲ ಕಾಂಗ್ರೆಸ್ ಸದಸ್ಯರೊಬ್ಬರು ಲಘು ಧಾಟಿಯಲ್ಲಿ ವ್ಯಂಗ್ಯವಾಡಿದಾಗ, ಸಚಿವರು ತಮ್ಮ ಉತ್ತರದಿಂದ ಎಲ್ಲರನ್ನೂ ನಗುವಂತೆ ಮಾಡಿದರು. ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ. ನನ್ನ ಧ್ವನಿ ಸ್ವಲ್ಪ ಗಟ್ಟಿಯಾಗಿದೆ. ಇದು ನನ್ನ ತಯಾರಿಕೆಯ ದೋಷವಾಗಿದೆ. ನಾನು ಕೋಪಗೊಳ್ಳುವುದಿಲ್ಲ, ಕಾಶ್ಮೀರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಎಂದು ಅವರು ಹೇಳಿದರು. ಇದನ್ನೂ ಓದಿ: ಬೆಲೆ ಏರಿಕೆ ಪ್ರಧಾನ ಮಂತ್ರಿ ಜನ್ ಧನ್ ಲೂಟ್ ಯೋಜನೆಯ ಭಾಗ: ರಾಹುಲ್ ಗಾಂಧಿ

    ಸಂಸತ್ ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಿತು. ಮಸೂದೆ ಅಂಗೀಕಾರದ ವೇಳೆ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಚೌಧರಿ ಅವರಿಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ನಾವು ಏನು ಮಾಡುತ್ತಿದ್ದೇವೆ ಎಂದು ನೀವು ಭಾವಿಸುತ್ತೀರಿ. ನಾವು ದೇಶಕ್ಕಾಗಿ ನಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

  • ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    – ಸಂಗೀತ, ಹೆಣ್ಣುಮಕ್ಕಳ ಧ್ವನಿ ನಿಷೇಧ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಇನ್ನೂ ತಣ್ಣಗಾಗುತ್ತಿಲ್ಲ. ಖ್ಯಾತ ಸಂಗೀತಗಾರನನ್ನು ಹತ್ಯೆಗೈದ ಬಳಿಕ ಇದೀಗ ಅಫ್ಘಾನಿಸ್ತಾನದ ಕಂದಹಾರ್‍ನಲ್ಲಿ ಮಹಿಳೆಯರ ಧ್ವನಿಯನ್ನು ಬ್ಯಾನ್ ಮಾಡಲಾಗಿದೆ. ಟಿವಿ, ರೇಡಿಯೋಗಳಲ್ಲಿ ಎಲ್ಲೂ ಸಂಗೀತ ಹಾಗೂ ಮಹಿಳೆಯರ ಧ್ವನಿ ಕೇಳುವಂತಿಲ್ಲ ಎಂದು ತಾಲಿಬಾನಿಗಳು ಹೇಳಿದ್ದಾರೆ.

    ಆಗಸ್ಟ್ 15ರಂದು ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡ ಬಳಿಕ ಕೆಲ ಟಿವಿ ವಾಹಿನಿಗಳು ಮಹಿಳಾ ನಿರೂಪಕಿಯರನ್ನು ಕೆಲಸದಿಂದ ತೆಗೆದುಹಾಕಿವೆ. ಅಲ್ಲದೆ ಕಾಬೂಲ್‍ನಲ್ಲಿನ ಸ್ಥಳೀಯ ಮೀಡಿಯಾಗಳಲ್ಲಿ ಹಲವು ಮಹಿಳೆಯರನ್ನು ಮನೆಗೆ ಕಳುಹಿಸಿವೆ. ಇದನ್ನೂ ಓದಿ: ಜನಪ್ರಿಯ ಹಾಡುಗಾರನನ್ನ ಹತ್ಯೆಗೈದ ತಾಲಿಬಾನಿಗಳು

    ಇಷ್ಟಾದರೂ ತಾಲಿಬಾನಿಗಳು ಮಹಿಳೆಯರ ಸ್ವಾತಂತ್ರ್ಯದ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದು, ಮಹಿಳೆಯರನ್ನು ಕೆಲಸಕ್ಕೆ ಕಳುಹಿಸುತ್ತೇವೆ. ಅಲ್ಲದೆ ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ ಓದಲು ಅವಕಾಶ ನೀಡುತ್ತೇವೆ ಎಂದಿತ್ತು. ಆದರೆ ತಾಲಿಬಾನ್ ತನ್ನ ಭರವಸೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ.

    ಹಿಂದಿನ ಅಧಿಕಾರಾವಧಿಯಲ್ಲಿ ತಾಲಿಬಾನ್ ಮಹಿಳೆಯರನ್ನು ಕಠಿಣವಾಗಿ ನಡೆಸಿಕೊಳ್ಳಲು ಹೆಸರುವಾಸಿಯಾಗಿತ್ತು. ಮಹಿಳೆಯರು ತಮ್ಮ ಮನೆಗಳಿಂದ ಹೊರ ಬರಬೇಕಾದಲ್ಲಿ ತಲೆ ಸಂಪೂರ್ಣವಾಗಿ ಮುಚ್ಚಿಕೊಂಡು ಹಾಗೂ ಕುಟುಂಬದ ಪುರುಷರೊಬ್ಬರು ಜೊತೆಯಾಗಿರಬೇಕು ಎಂದು ಹೇಳಿತ್ತು.

    ಅಫ್ಘಾನಿಸ್ತಾನದಲ್ಲಿ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಹೀಗಿರುವಾಗ ಜನಪ್ರಿಯ ಹಾಡುಗಾರ ಫವಾದ್ ಕಿಶನಾಬಾದ್ ಅವರನ್ನು ಉಗ್ರರು ಹತ್ಯೆ ಗೈದಿದ್ದಾರೆ. ಅಫ್ಘಾನಿಸ್ತಾನದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದನ್ನು ತಾಲಿಬಾನಿಗಳು ನಿಷೇಧಿಸಿದ್ದಾರೆ. ಹಾಡುಗಾರ ಫವಾದ್ ಕಿಶನಾಬಾದ್ ತಾಲಿಬಾನ್‍ಗೆ ವಿರುದ್ಧವಾಗಿ ಹಾಡುಗಳನ್ನು ಕಟ್ಟಿ ಹಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಯಲ್ಲಿ ತಾಲಿಬಾನಿಗಳು ಫವಾದ್‍ರನ್ನು ಹುಡುಕಿ ಹತ್ಯೆ ಮಾಡಿದ್ದಾರೆ.

    ಅಂದ್ರಾಬ್ ಪ್ರದೇಶದ ಗಾಯಕನನ್ನು ತಾಲಿಬಾನಿಗಳು ಕೊಂದಿದ್ದನ್ನು ಸ್ಥಳೀಯ ಮಾಧ್ಯಮ ದೃಢಪಡಿಸಿದೆ. ಮಾಜಿ ಆಂತರಿಕ ವ್ಯವಹಾರಗಳ ಸಚಿವ ಮಸೂದ್ ಅಂದರಾಬಿ ಹೇಳಿದ್ದಾಗಿ ಉಲ್ಲೇಖಿಸಿದೆ.

  • ಜಾರಕಿಹೊಳಿ ಸಿಡಿ ಕೇಸ್‍ಗೆ ಹೊಸ ಟ್ವಿಸ್ಟ್- ಚಿಕ್ಕಮಗಳೂರು ವ್ಯಕ್ತಿಯ ಧ್ವನಿ ಪರೀಕ್ಷೆ..!

    ಜಾರಕಿಹೊಳಿ ಸಿಡಿ ಕೇಸ್‍ಗೆ ಹೊಸ ಟ್ವಿಸ್ಟ್- ಚಿಕ್ಕಮಗಳೂರು ವ್ಯಕ್ತಿಯ ಧ್ವನಿ ಪರೀಕ್ಷೆ..!

    ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್‍ಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಸಂಬಂಧ ಆ ವ್ಯಕ್ತಿಯ ಧ್ವನಿ ಪರೀಕ್ಷೆ ನಡೆಸಲಾಗುತ್ತಿದೆ.

    ವಿಡೀಯೋದಲ್ಲಿರುವ ಹಿನ್ನೆಲೆ ಧ್ವನಿ ಚಿಕ್ಕಮಗಳೂರು ವ್ಯಕ್ತಿಯದ್ದು ಎನ್ನುವ ಶಂಕೆ ವ್ಯಕ್ತವಾಗಿದ್ದರಿಂದ 10 ನಿಮಿಷಗಳ ಧ್ವನಿಯನ್ನು ಪೊಲೀಸರು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಧ್ವನಿ ಪರೀಕ್ಷೆಯಿಂದ ಜಾರಕಿಹೊಳಿ ಸಿಡಿ ಸತ್ಯ ಹೊರಬರುತ್ತಾ ಎಂಬ ಪ್ರಶ್ನೆ ಮೂಡಿದೆ.

    ವೀಡೀಯೋದಲ್ಲಿರುವ ಆ ವ್ಯಕ್ತಿಯ ಹಿನ್ನೆಲೆಯಲ್ಲಿ ಧ್ವನಿಯ ಪರೀಕ್ಷೆ ನಡೆಸಲಾಗುತ್ತದೆ. ವೀಡಿಯೋ ಎಡಿಟಿಂಗ್ ವೇಳೆ ಹಿನ್ನೆಲೆ ಧ್ವನಿ ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಎಸ್‍ಎಲ್ ಮೂಲಕ ಸಿಡಿಕೋರನ ಧ್ವನಿ ಪರೀಕ್ಷೆ ನಡೆಸಲಾಗುತ್ತಿದೆ.

    ಜಾರಕಿಹೊಳಿ ಸಿಡಿಯಲ್ಲಿದ್ದ ಆ ಧ್ವನಿಗೆ ಆ ವ್ಯಕ್ತಿಗೆ ಕಂಟಕ ಎದುರಾಗಲಿದೆ. ಸಿಡಿಕೋರನ ಆ ಮೂಲ ಧ್ವನಿಗೂ ವೀಡಿಯೋದಲ್ಲಿರುವ ಧ್ವನಿಗೂ ಸಾಮ್ಯತೆ ಇದೆಯಾ ಅಥವಾ ವಿಧಿವಿಜ್ಞಾನ ಪ್ರಯೋಗ ವೇಳೆ ಹಿನ್ನೆಲೆ ಧ್ವನಿಗೂ-ಮೂಲ ಧ್ವನಿಗೂ ಸಾಮ್ಯತೆ ಇದೆಯಾ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮೂಲದ ‘ಆ’ ಸಿಡಿಕೋರನ ಬಂಧನವಾಗುವ ಸಾಧ್ಯತೆ ಇದೆ.

  • ಬ್ಯಾಂಕ್ ಸಿಬ್ಬಂದಿ ಮೇಲೆ ರೇಪ್- ಧ್ವನಿ ಮೂಲಕ ಕಾಮುಕನನ್ನ ಬಂಧಿಸಿದ ಪೊಲೀಸರು

    ಬ್ಯಾಂಕ್ ಸಿಬ್ಬಂದಿ ಮೇಲೆ ರೇಪ್- ಧ್ವನಿ ಮೂಲಕ ಕಾಮುಕನನ್ನ ಬಂಧಿಸಿದ ಪೊಲೀಸರು

    -ಕೊರೊನಾ ಕಂಟೈನ್‍ಮೆಂಟ್ ಝೋನ್‍ನಲ್ಲಿ ಕುಳಿತಿದ್ದ
    -ಸಿಮ್ ಎಸೆದು, ಮೊಬೈಲ್ ಇಟ್ಕೊಂಡು ಸಿಕ್ಕ

    ಭೋಪಾಲ್: ದೃಷ್ಟಿ ವಿಶೇಷ ಚೇತನ ಬ್ಯಾಂಕ್ ವ್ಯವಸ್ಥಾಪಕಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಬಂಧಿಸುವಲ್ಲಿ ಭೋಪಾಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಧ್ವನಿಯ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಏಪ್ರಿಲ್ ಎರಡನೇ ವಾರದಲ್ಲಿ ಮಧ್ಯಪ್ರದೇಶದ ಶಹಪುರದಲ್ಲಿ ಈ ಘಟನೆ ನಡೆದಿತ್ತು.

    ಆರೋಪಿ ಎಷ್ಟೇ ಚಾಣಕ್ಷನಾಗಿದ್ದರೂ ಒಂದಿಲ್ಲೊಂದು ಸುಳಿವುನ್ನು ಘಟನಾ ಸ್ಥಳದಲ್ಲಿ ಬಿಟ್ಟು ಹೋಗಿರುತ್ತಾನೆ ಎಂಬುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ದೃಷ್ಟಿ ವಿಶೇಷ ಚೇತನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ರೆ ತನ್ನನ್ನು ಯಾರೂ ಗುರುತಿಸಲಾರ ಎಂದು ಅಡಗಿ ಕುಳಿತವನನ್ನು ಪೊಲೀಸರ ಬಂಧಿಸಿ ಕಂಬಿ ಎಣಿಸುವಂತೆ ಮಾಡಿದ್ದಾರೆ.

    53 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿ ಮನೆಯಲ್ಲಿದ್ದ ಆಭರಣ, ಮೊಬೈಲ್ ಮತ್ತು ನಗದು ಜೊತೆ ಪರಾರಿಯಾಗಿದ್ದನು. ಆದ್ರೆ ಈ ವೇಳೆ ಆರೋಪಿ ಮಹಿಳೆಗೆ ಹಲವು ಬಾರಿ ಬೆದರಿಕೆ ಹಾಕಿದ್ದನು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದರು ಎಂದು ಎಎಸ್‍ಪಿ ಸಂಜಯ್ ಸಾಹು ಮಾಹಿತಿ ನೀಡಿದ್ದಾರೆ.

    ಶಂಕಿತರ ಧ್ವನಿ ಸಂಗ್ರಹ: ಮಹಿಳೆ ನೀಡಿದ ಮಾಹಿತಿ ಮತ್ತು ಮೊಬೈಲ್ ನೆಟ್‍ವರ್ಕ್ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು ಶಂಕೆಯ ಮೇಲೆ ಸುಮಾರು 20 ಜನರನ್ನು ವಶಕ್ಕೆ ಪಡೆದುಕೊಂಡಿದ್ದರು. ಆದ್ರೆ ಸಂತ್ರಸ್ತೆ ಅಂಧೆಯಾಗಿದ್ದರಿಂದ ಯಾರನ್ನು ಗುರುತಿಸಲು ಸಾಧ್ಯವಿರಲಿಲ್ಲ. ಹಾಗಾಗಿ ದೂರಿನಲ್ಲಿ ಹೇಳಿದಂತೆ ಆರೋಪಿ ಮಹಿಳೆಗೆ ಹಲವು ಬಾರಿ ಬೆದರಿಕೆ ಹಾಕಿದ್ದನು. ಅದೇ ರೀತಿ 20 ಜನರಿಂದಲೂ ಬೆದರಿಕೆ ಹಾಕುವಂತೆ ಹೇಳಿ ಪೊಲೀಸರು ಎಲ್ಲರ ಧ್ವನಿಯನ್ನು ರೆಕಾರ್ಡ್ ಮಾಡಿಕೊಂಡಿದ್ದರು. ಈ 20 ಧ್ವನಿಗಳಲ್ಲಿ ಒಂದು ಧ್ವನಿ ಅವನದ್ದೇ ಎಂದು ಸಂತ್ರಸ್ತೆ ಗುರುತಿಸಿ ಪೊಲೀಸರಿಗೆ ತಿಳಿಸಿದ್ದಾರೆ.

    ಆರಂಭದಲ್ಲಿ ತನ್ನ ತಪ್ಪನ್ನು ಆರೋಪಿ ಒಪ್ಪಿಕೊಂಡಿರಲಿಲ್ಲ. ಆತನ ಬಳಿಯಲ್ಲಿದ್ದ ಮೊಬೈಲ್ ಪತ್ತೆ ಮಾಡಿದಾಗ ತಪ್ಪು ಒಪ್ಪಿಕೊಂಡನು. ಮಹಿಳೆ ಅಂಧರ ಸುರಕ್ಷತೆಗಾಗಿರುವ ಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದರು. ಸಿಮ್ ಎಸೆದ ಆರೋಪಿ ಆ್ಯಪ್ ಬಗ್ಗೆ ಗಮನ ನೀಡಿರಲಿಲ್ಲ ಎಂದು ಸಂಜಯ್ ಸಾಹು ಹೇಳಿದ್ದಾರೆ.

    ಕಂಟೈನ್‍ಮೆಂಟ್ ಝೋನ್‍ನಲ್ಲಿ ಕುಳಿತಿದ್ದ: ಘಟನೆ ಬಳಿಕ ಆರೋಪಿ ಕಂಟೈನ್‍ಮೆಂಟ್ ವಲಯದಲ್ಲಿ ಅಡಗಿ ಕುಳಿತಿದ್ದನು. ಮಹಿಳೆ ಸಿಮ್ ಸಹ ಅದೇ ಏರಿಯಾದಲ್ಲಿ ಸಂಪರ್ಕ ಕಡಿತಗೊಂಡಿತ್ತು. ಹೀಗಾಗಿ ಪೊಲೀಸರು ಪಿಪಿಇ ಕಿಟ್ ಧರಿಸಿ ಅನುಮಾನಸ್ಪಾದ ಮೇಲೆ 20 ಜನರನ್ನು ವಶಕ್ಕೆ ಪಡೆದು ಠಾಣೆಗೆ ತಂದಿದ್ದರು.

    ಏನಿದು ಪ್ರಕರಣ?: ಸಂತ್ರಸ್ತೆಯ ಪತಿ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ತನ್ನ ಗ್ರಾಮಕ್ಕೆ ಹೋಗಿದ್ದರು. ಆದರೆ ಕೊರೊನಾದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದರಿಂದ ಪತಿ ಅಲ್ಲಿಯೇ ಉಳಿದುಕೊಂಡಿದ್ದರು. ಹೀಗಾಗಿ ಸಂತ್ರಸ್ತೆ ಮೂರು ಮಹಡಿಯನ್ನು ಹೊಂದಿರುವ ಫ್ಲಾಟ್‍ನಲ್ಲಿ ಎರಡನೇ ಮಹಡಿಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಮಹಿಳೆ ತುಂಬಾ ಸೆಕೆಯಾಗುತ್ತಿದೆ ಎಂದು ಬಾಲ್ಕನಿಯ ಬಾಗಿಲುಗಳನ್ನು ತೆರೆದಿಟ್ಟು ಮಲಗಿದ್ದರು. ಈ ವೇಳೆ ಶಂಕಿತ ಮೆಟ್ಟಿಲಿನಿಂದ ಎರಡನೇ ಮಹಡಿಗೆ ನಡೆದುಕೊಂಡು ಹೋಗಿದ್ದು, ಅಲ್ಲಿ ಬಾಗಿಲು ತೆರೆದಿದ್ದ ಬಾಲ್ಕನಿಯಿಂದ ಫ್ಲಾಟ್‍ಗೆ ನುಗ್ಗಿ ಅತ್ಯಾಚಾರ ಎಸಗಿ ಆಭರಣ, ಹಣದಿಂದ ಪರಾರಿಯಾಗಿದ್ದನು.

  • `ಪ್ರಾರಂಭ’ ಚಿತ್ರದ ಟೀಸರ್‌‍ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ

    `ಪ್ರಾರಂಭ’ ಚಿತ್ರದ ಟೀಸರ್‌‍ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ

    ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಚಿತ್ರದ ಟೀಸರ್‌‍ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿ ಶುಭ ಕೋರಿದ್ದಾರೆ. ಇದೇ ತಿಂಗಳ 25ರಂದು ಪ್ರಾರಂಭ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ.

    ಚಿತ್ರದ ಚಿತ್ರೀಕರಣ ಹಾಗೂ ಚಿತ್ರೀಕರಣ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರಕ್ಕೆ 50ದಿನಗಳ ಚಿತ್ರೀಕರಣ ನಡೆದಿದೆ. ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.


    ಪ್ರಾರಂಭ ಒಂದು ಅದ್ಭುತ ಕಥಾಹಂದರವಿರುವ ಚಿತ್ರ. ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.
    5 ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೇಶಗಳಿದ್ದು, ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಯ್ ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

    ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ, ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಹಿಂದೆ ಉಪ್ಪು ಹುಳಿ ಖಾರ ಚಿತ್ರಕ್ಕೆ ಸಂಗೀತ ನೀಡಿದ್ದ, ಪ್ರಜ್ವಲ್ ಪೈ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

  • ಸ್ಯಾಂಡಲ್‍ವುಡ್ ಸ್ಟಾರ್ ನಟನಿಗೆ ಧ್ವನಿಯಾದ ಸಂಜಿತ್ ಹೆಗ್ಡೆ

    ಸ್ಯಾಂಡಲ್‍ವುಡ್ ಸ್ಟಾರ್ ನಟನಿಗೆ ಧ್ವನಿಯಾದ ಸಂಜಿತ್ ಹೆಗ್ಡೆ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಶೋ ಮೂಲಕ ಖ್ಯಾತರಾಗಿರುವ ಗಾಯಕ ಸಂಜಿತ್ ಹೆಗ್ಡೆ ಈಗ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಧ್ವನಿಯಾಗಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ಸಂಜಿತ್ ಹೆಗ್ಡೆ ಒಂದರ ಹಿಂದೆ ಒಂದು ಸೂಪರ್ ಹಿಟ್ ಹಾಡುಗಳನ್ನು ನೀಡುತ್ತಿದ್ದಾರೆ. ಸದ್ಯ ಈಗ ಸಂಜಿತ್, ಪುನೀತ್ ರಾಜ್‍ಕುಮಾರ್ ನಟನೆಯ ‘ನಟಸಾರ್ವಭಮ’ ಚಿತ್ರದ ಇಂಟ್ರೋಡಕ್ಷನ್ ಹಾಡನ್ನು ಹಾಡಿದ್ದಾರೆ.

    ಇತ್ತೀಚೆಗೆ ಸಂಜಿತ್ ಹೆಗ್ಡೆ ಲೂಸ್ ಮಾದ ಯೋಗೀಶ್ ಅಭಿನಯಿಸಿದ ‘ಲಂಬೋದರ’ ಚಿತ್ರಕ್ಕೆ ಹಾಡನ್ನು ಹಾಡಿದ್ದರು. ಈ ಚಿತ್ರದ ಆಡಿಯೋವನ್ನು ಪುನೀತ್ ರಾಜ್‍ಕುಮಾರ್ ರಿಲೀಸ್ ಮಾಡಿದ್ದರು. ಸದ್ಯ ಸಂಜಿತ್ ಹಾಡಿಗೆ ಶಿವಣ್ಣ ಹಾಗೂ ಪುನೀತ್ ಇಬ್ಬರು ಫಿದಾ ಆಗಿದ್ದಾರೆ.

    ನಟಸಾರ್ವಭೌಮ ಚಿತ್ರದ ಇಂಟ್ರೊಡಕ್ಷನ್ ಹಾಡಿಗೆ ಸಂಜಿತ್ ಹೆಗ್ಡೆ ಧ್ವನಿ ನೀಡಿದ್ದು, ಜೊತೆಗೆ ‘ಟಗರು’ ಖ್ಯಾತಿಯ ಆಂಟೋನಿ ದಾಸ್ ಅವರು ಕೂಡ ಈ ಚಿತ್ರಕ್ಕೆ ಹಾಡನ್ನು ಹಾಡಿದ್ದಾರೆ. ಈ ಚಿತ್ರಕ್ಕೆ ಡಿ. ಇಮ್ರಾನ್ ಸಂಗೀತಾ ನೀಡಿದ್ದಾರೆ.

    ಈ ಚಿತ್ರದ ಹಾಡಿಗಾಗಿ ಅದ್ಧೂರಿ ಸೆಟ್ ನಿರ್ಮಿಸಿ ಅಲ್ಲಿ ಶೂಟಿಂಗ್ ನಡೆಸುತ್ತಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ಪವನ್ ಒಡೆಯರ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಪುನೀತ್‍ಗೆ ನಾಯಕಿಯರಾಗಿ ಡಿಂಪಲ್ ಬೆಡಗಿ ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ನಟಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews