Tag: voilence

  • ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್

    ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್

    ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬಳು ತನ್ನ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದಕ್ಕೆ ಶಿಕ್ಷಕರ ಚಿತ್ರಹಿಂಸೆಯೇ ಕಾರಣ ಎಂದು ಆರೋಪಿಸಿದ ಡೆತ್‌ನೋಟ್ ಪತ್ತೆಯಾಗಿತ್ತು. ಮರೋಣತ್ತರ ಪರೀಕ್ಷೆಯಲ್ಲೂ ಹಲವು ಗಾಯದ ಗುರುತುಗಳು, ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಫೋಟೋ – ಕೆಲಸದಿಂದ ಪೌರಕಾರ್ಮಿಕ ವಜಾ

    ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಹಾಗೂ ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಶಾಲಾ ಪ್ರಾಂಶುಪಾಲರು, ಕಾರ್ಯದರ್ಶಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸೆ.3ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣೆ ಕೇಂದ್ರ ಉದ್ಘಾಟಿಸಲಿರುವ ಯೋಗಿ

    ಘಟನೆ ಏನು?
    ಚಿನ್ನ ಸೇಲಂ ಸಮೀಪದ ಕಣಿಯಮೂರ್‌ನಲ್ಲಿರುವ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಬುಧವಾರ, 12ನೇ ತರಗತಿ ಶವವಾಗಿ ಪತ್ತೆಯಾಗಿದ್ದಳು. ಶಾಲೆಯ ಆಡಳಿತಾಧಿಕಾರಿಗಳು ಸಾವಿನ ಕುರಿತು ಮಾಹಿತಿ ನೀಡಿದ ಬಳಿಕ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಲ್ಲಕುರಿಚಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದರು. ಶಾಲೆಯ ಶಿಕ್ಷಕರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಉಲ್ಲೇಖಿಸಿರುವ ಸೂಸೈಡ್ ನೋಟ್ ಸಹ ಪತ್ತೆಯಾಗಿತ್ತು. ಇದನ್ನೂ ಓದಿ: ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್

    ವರದಿಗಳ ಪ್ರಕಾರ ಘಟನೆ ನಡೆದಿರುವ ಶಾಲೆ ಹಾಗೂ ವಸತಿ ನಿಲಯದ ಬಳಿ 2,000ಕ್ಕೂ ಹೆಚ್ಚಿನ ಪ್ರತಿಭಟನಾಕಾರರು ಜಮಾಯಿಸಿದ್ದರು. ನಿನ್ನೆ ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಪ್ರಾರಂಭವಾದ ಪ್ರತಿಭಟನೆ ಕೆಲವೇ ನಿಮಿಷಗಳಲ್ಲಿ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ಶಾಲಾ ಕಟ್ಟಡ, ತರಗತಿ ಕೊಠಡಿಗಳು ಹಾಗೂ ಪ್ರಾಂಶುಪಾಲರ ಕ್ಯಾಬಿನ್ ಅನ್ನು ಧ್ವಂಸಗೊಳಿಸಿದರು. ಶಾಲಾ ಕ್ಯಾಂಪಸ್‌ನಲ್ಲಿದ್ದ ಬಸ್‌ಗಳಿಗೆ ಬೆಂಕಿ ಹಚ್ಚಿದರು. ಟ್ರ‍್ಯಾಕ್ಟರ್‌ಗಳ ಮೂಲಕ ಶಾಲಾ ಬಸ್‌ಗಳಿಗೆ ಗುದ್ದಿಸಿ, ಆಯುಧಗಳಿಂದ ವಾಹನಗಳ ಗಾಜನ್ನು ಒಡೆದು ಹಾಕಿದರು. ಮಾತ್ರವಲ್ಲದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶಾಲೆಯ ಪ್ರಾಂಶುಪಾಲರು ಸೇರಿ ಮೂವರನ್ನು ಬಂಧಿಸಿದ್ದರು. ಇಂದು ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು

    ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಳಾದ ಕೋಲ್ಕತಾ ಉತ್ತರ ಭಾಗದ ಭಟ್ಪರಾದಲ್ಲಿ ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.

    ಈ ಕುರಿತು ತುರ್ತು ಸಭೆ ನಡೆಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪೊಲೀಸ್ ಕಮಿಷನರ್ ಹಾಗೂ ಇತರ ಪ್ರಮುಖ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯಿಂದ ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವನನ್ನು 17 ವರ್ಷದ ಪಾನಿಪೂರಿ ಮಾರುವ ಯುವಕನೆಂದು ಗುರುತಿಸಲಾಗಿದೆ. ತೀವ್ರ ಗಾಯಗಳಾಗಿದ್ದರಿಂದ ಆಸ್ಪತ್ರೆಗೆ ಸಾಗಿಸುವಾಗ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾನೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

    ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯನ್ನು ಎದುರಿಸಲು ಪೊಲೀಸರು ಅಶ್ರುವಾಯು ಹಾಗೂ ಗುಂಡಿನ ದಾಳಿ ನಡೆಸುತ್ತಿದ್ದಾರೆ. ನಾರ್ಥ್ 24 ಪರಗಣ ಜಿಲ್ಲೆಯಲ್ಲಿ ಸ್ಥಳೀಯ ಪೊಲೀಸರಿಗಾಗಿ ಭಟ್ಪರದಲ್ಲಿ ನಿರ್ಮಿಸಲಾಗಿದ್ದ ಪೊಲೀಸ್ ಠಾಣೆಯ ಹೊಸ ಕಟ್ಟಡವನ್ನು ಉದ್ಘಾಟಿಸಲು ಡಿಜಿಪಿ ಬರುವುದಕ್ಕೂ ಒಂದು ಗಂಟೆಯ ಮೊದಲು ಈ ಘರ್ಷಣೆ ಸಂಭವಿಸಿದೆ. ಘಟನೆ ಸಂಭವಿಸುತ್ತಿದ್ದಂತೆ ಡಿಜಿಪಿ ಸೇರಿದಂತೆ ಎಲ್ಲರೂ ಕೋಲ್ಕತ್ತಾಗೆ ಮರಳಿದ್ದು, ಪೊಲೀಸ್ ಠಾಣೆಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

    ಲೋಕಸಭಾ ಚುನಾವಣೆಯ ನಂತರ ಭಟ್ಪರಾದಲ್ಲಿ ಇತ್ತೀಚೆಗೆ ಈ ಘರ್ಷಣೆ ನಡೆದಿದ್ದು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಟ್ಪರಾದಲ್ಲಿ ವಿಪರೀತ ಹಿಂಸಾಚಾರದ ಘರ್ಷಣೆಗಳು ನಡೆದಿದ್ದವು. ಕೆಲವು ಸಂಘರ್ಷಗಳು ಕೋಮುವಾದಿ ಸ್ವರೂಪವನ್ನು ಪಡೆದಿದ್ದವು. ಇದೀಗ ಮತ್ತೆ ಬೃಹತ್ ಘರ್ಷಣೆಯೊಂದು ನಡೆದಿದ್ದು, ಇಬ್ಬರನ್ನು ಬಲಿಪಡೆದಿದೆ.

    ಪೊಲೀಸ್ ತಂಡ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದು, ಘಟನಾ ಸ್ಥಳದಲ್ಲಿ ರ್ಯಾಪಿಡ್ ಆಕ್ಷನ್ ಫೊರ್ಸ್(ಆರ್‍ಎಎಫ್) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗಡಿ ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಸೇರಿದಂತೆ ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ತಬ್ಧವಾಗಿವೆ. ಭಟ್ಪರಾ ಹಾಗೂ ಪಕ್ಕದ ಕಂಕಿನಾರ ನಗರಗಳು ಚುನಾವಣೆಗೆ ಸಂಬಂಧಿಸಿದ ಹಿಂಸಾಚಾರಕ್ಕೆ ಗುರಿಯಾಗಿದ್ದವು. ಮೇ 19ರಂದು ನಡೆದ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸಂದರ್ಭದಿಂದಲೂ ಭಟ್ಪರಾ ಸಾಲು ಸಾಲು ಹಿಂಸಾಚಾರಗಳಿಗೆ ಸಾಕ್ಷಿಯಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]