Tag: Vokkaligas

  • ದುಬೈನಲ್ಲಿ ಗೌಡರ ಗೌಜಿ ಗಮ್ಮತ್ತು-2024 – ಒಕ್ಕಲಿಗ ಸಮುದಾಯಗಳ ಕುಟುಂಬ ಸಮಾಗಮ

    ದುಬೈನಲ್ಲಿ ಗೌಡರ ಗೌಜಿ ಗಮ್ಮತ್ತು-2024 – ಒಕ್ಕಲಿಗ ಸಮುದಾಯಗಳ ಕುಟುಂಬ ಸಮಾಗಮ

    ಅಬುಧಾಬಿ: ದುಬೈನ ಒಕ್ಕಲಿಗ ಸಂಘದಿಂದ (Vokkaliga Organisation) ಇತ್ತೀಚೆಗೆ ನಡೆದ ಒಕ್ಕಲಿಗರ ವಿಶೇಷ ವಿಹಾರ ಕೂಟವು ಕಣ್ಮನ ಸೆಳೆಯಿತು.

    ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಒಕ್ಕಲಿಗ ಕುಟುಂಬಗಳ ಸಮಾಗಮವಾಯಿತು. ದುಬೈ (Dubai) ಒಕ್ಕಲಿಗ ಸಂಘದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಘದ ಅಧ್ಯಕ್ಷರಾದ ಕಿರಣ್ ಗೌಡ ಆವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದವರು (Vokkaliga Community) ಪಾಲ್ಗೊಂಡಿದ್ದರು.

    ಮಹಿಳೆಯರು ಮಕ್ಕಳು ಸೇರಿದಂತೆ ನೂರಾರು ಮಂದಿ ಒಂದೆಡೆ ಸೇರಿ ವಿವಿಧ ಆಟೋಟ ಸ್ಪರ್ಧೆಗಳಲ್ಲೂ ಪಾಲ್ಗೊಂಡಿದ್ದರು. ಮಕ್ಕಳು ಮತ್ತು ಹಿರಿಯರಿಗೆ ವಿಶೇಷ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದನ್ನೂ ಓದಿ: ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್

    ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಸಮಿತಿಯ ಸದ್ಯಸರಿಗೆ ಅಭಿನಂದನೆ ಸಲ್ಲಿಸಲಾಯ್ತು. ಇದೇ ವೇಳೆ ಗೌಡರ ಶೈಲಿಯ ಊಟೋಪಚಾರಗಳೊಂದಿಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಕಣ್ಮನ ಸೆಳೆದವು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಷರೀಫ್‌ ಪುತ್ರಿ ಆಯ್ಕೆ

  • ಸುಮಲತಾ ಕೂಡ ಬಿಜೆಪಿ ಅಸೋಸಿಯೇಟ್‌ ಮೆಂಬರ್ – ಡಿಕೆಶಿ ವ್ಯಂಗ್ಯ

    ಸುಮಲತಾ ಕೂಡ ಬಿಜೆಪಿ ಅಸೋಸಿಯೇಟ್‌ ಮೆಂಬರ್ – ಡಿಕೆಶಿ ವ್ಯಂಗ್ಯ

    ಹುಬ್ಬಳ್ಳಿ: ಬಿಜೆಪಿಯವರದ್ದು (BJP) ಸುಳ್ಳಿನ ಯುನಿವರ್ಸಿಟಿ. ರಾಜ್ಯದಲ್ಲಿ 26 ಸಂಸದರು ಬಿಜೆಪಿಯವರಿದ್ದಾರೆ. ಸುಮಲತಾ (Sumalatha) ಕೂಡ ಬಿಜೆಪಿ ಅಸೋಸಿಯೇಟ್ ಮೆಂಬರ್‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ವ್ಯಂಗ್ಯವಾಡಿದ್ದಾರೆ.

    ಮೂರು ವರ್ಷದಿಂದ ಮಹದಾಯಿ ಯೋಜನೆ (Mahadayi Project) ಜಾರಿಗೊಳಿಸಲು ಆಗಿಲ್ಲ. ಮೂರು ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ. ಯೋಜನೆ ಜಾರಿ ಮಾಡಲು ಆಗಿಲ್ಲ. ಈಗ ನಾವು ಮತ್ತು ರೈತರು ಸೇರಿ ಹೋರಾಟ ಮಾಡಿ ಒಂದು ಹಂತಕ್ಕೆ ತಂದಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2D ಮೀಸಲಾತಿ – ಸಂಪುಟ ಸಭೆಯಲ್ಲಿ ನಿರ್ಧಾರ

    ಸುಪ್ರೀಂ ಕೋರ್ಟ್ (Supreme Court) ತೀರ್ಪಿಗೆ ಒಳಪಟ್ಟು, ಕಾಮಗಾರಿ ಆರಂಭಿಸಿ ಎಂದು ಪತ್ರ ಸಿದ್ಧಪಡಿಸಿದ್ದಾರೆ. ಗೋವಾ (Goa) ಮಂತ್ರಿಯೊಬ್ಬ ರಾಜೀನಾಮೆ ಕೊಡ್ತಾರಂತೆ, ಕೊಡಲಿ ಬಿಡಿ. ರಾಜ್ಯದಲ್ಲಿ 26 ಸಂಸದರು ಬಿಜಪಿಯವರಿದ್ದಾರೆ. ಮಹದಾಯಿಗೆ ಇವರೆಲ್ಲ ಸೇರಿ ಪ್ರಧಾನಮಂತ್ರಿಗಳ ಬಳಿ ಒಮ್ಮೆಯೂ ಮಾತನಾಡಿಲ್ಲ. ನೀರು ಹರಿಸುವ ಮುನ್ನ ಕಾಮಗಾರಿಯಾದ್ರು ಪೂರ್ಣಗೊಳಿಸಬೇಕಿತ್ತು. ಪ್ರಹ್ಲಾದ್ ಜೋಶಿ (Pralhad Joshi) ಎಷ್ಟೊಂದು ಅಪ್ಡೇಟ್ ಇದ್ದಾರೆ ಅನ್ನೋದು, ಪತ್ರ ಓದಲಿ ಗೊತ್ತಾಗುತ್ತೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಪತ್ರದಲ್ಲಿ ಕಂಡಿಷನ್ ಹಾಕಿದ್ದಾರೆ. ನಾವೆಲ್ಲ ಸತ್ತ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ಬರುತ್ತಾ? ಕೊಡ್ರಿ ನಮಗೆ ಅಧಿಕಾರನಾ, ಆರು ತಿಂಗಳಲ್ಲಿ ಆ ಯೋಜನೆಯನ್ನು ಬಡಿದುಹಾಕ್ತೀನಿ ಎಂದು ಹೇಳಿದ್ದಾರೆ.

    ಪಂಚಮಸಾಲಿ (Panchamasali), ಒಕ್ಕಲಿಗ (Vokkaliga) ಸಮುದಾಯಗಳ ಮೀಸಲಾತಿ ವಿಚಾರ ಕುರಿತು ಮಾತನಾಡಿ, ಸರ್ಕಾರ ಮೂಗಿಗಲ್ಲ, ತಲೆಗೆ ತುಪ್ಪ ಸವರಿದೆ. ಮೂಗಿಗೆ ಸವರಿದ್ದರೆ ಕನಿಷ್ಟಪಕ್ಷ ವಾಸನೆಯನ್ನಾದ್ರು ನೋಡಬಹುದಿತ್ತು. ಬೊಮ್ಮಾಯಿ ಸರ್ಕಾರ ತೆಲೆಗೆ ತಪ್ಪು ಸವರಿದೆ. ಅದನ್ನು ಹೇಗೆ ತಿನ್ನೋದು? ಜಯಮೃತ್ಯುಂಜಯ ಸ್ವಾಮೀಜಿ ಸರಿಯಾಗಿ ಹೇಳಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಸರ್ಕಾರಕ್ಕೆ ಟಾಂಗ್‌ ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ? 

    ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ನೀಡಿದ ಮೀಸಲಾತಿಯಲ್ಲಿ ಸೇರಿಸುವುದಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ ಇದನ್ನು ಹೇಗೆ ಒಪ್ಪುತ್ತೆ? ಸಂಪುಟದ ತೀರ್ಮಾನ, ಅದೇಶದ ಬಳಿಕ ಯಾರಾದರೂ ಕೋರ್ಟಿಗೆ ಹೋದರೆ ಮುಗಿತು. ಮೀಸಲಾತಿ ಜಾರಿ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

    ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ರೂ ಮುಂದೆ ಜಾರಿ ಆಗಿಲ್ಲ. ಕೇಂದ್ರಕ್ಕೆ‌ ಕಳಿಸಿ ಸಂಸತ್ತಿನಲ್ಲಿ ಮಾಡಿಸಬೇಕಿತ್ತು. ಆದ್ರೆ ಕೇಂದ್ರಕ್ಕೆ ಕಳಿಸಲೇ ಇಲ್ಲ. ಇನ್ನು 90 ದಿನದಲ್ಲಿ ಸರ್ಕಾರವೇ ಇರಲ್ಲ. ಇವರ ಕೈಯಲ್ಲಿ ಅಧಿಕಾರನೇ ಇರುವುದಿಲ್ಲ, ಇನ್ನೂ ಮೀಸಲಾತಿ ಹ್ಯಾಗೆ ಜಾರಿ‌ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.

    ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನು ಅಲ್ಲ. ಪಂಚಮಸಾಲಿ ನಾಯಕರು ಅನ್ನೋರು ಎಲ್ಲಿ ಹೋದ್ರು. ಸರ್ಕಾರದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ್ ಯಾಕೆ ಮಾತನಾಡುತ್ತಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಸರ್ವರಿಗೆ ಸಮಪಾಲು-ಸಮ ಬಾಳು ಎಂದು ಭರವಸೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಕ್ಕಲಿಗರ ಮತಗಳು ಬಿಜೆಪಿಗೆ ವಾಲುತ್ತಿರುವುದು ಹೆಚ್‌ಡಿಕೆಗೆ ಆತಂಕ ಹೆಚ್ಚಿಸಿದೆ – ಸಿ.ಪಿ.ಯೋಗೇಶ್ವರ್

    ಒಕ್ಕಲಿಗರ ಮತಗಳು ಬಿಜೆಪಿಗೆ ವಾಲುತ್ತಿರುವುದು ಹೆಚ್‌ಡಿಕೆಗೆ ಆತಂಕ ಹೆಚ್ಚಿಸಿದೆ – ಸಿ.ಪಿ.ಯೋಗೇಶ್ವರ್

    ರಾಮನಗರ: ಕೆಂಪೇಗೌಡರ ಪ್ರತಿಮೆ (Kempegowda Statue) ಬಗ್ಗೆ ರಾಜಕೀಯ ಚರ್ಚೆ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ವಿರುದ್ಧ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್‌ (C.P.Yogeshwara) ಕಿಡಿಕಾರಿದ್ದಾರೆ.

    ಕೆಂಪೇಗೌಡರ ಪ್ರತಿಮೆ ಜಾತಿ, ಪಕ್ಷಕ್ಕೆ ಮೀರಿದ ವಿಚಾರ. ಚುನಾವಣಾ ವರ್ಷ ಆಗಿರುವುದರಿಂದ ಕಾಂಗ್ರೆಸ್-ಜೆಡಿಎಸ್ (Congress-JDS) ಈ ರೀತಿ ಚರ್ಚೆ ಮಾಡ್ತಿದ್ದಾರೆ. ನಾವು ಮಾಡದ ಕೆಲಸವನ್ನ ಬಿಜೆಪಿ ಮಾಡಿದೆ ಎಂಬ ಕೀಳರಿಮೆ ಅವರಿಗಿದೆ ಎಂದು ಯೋಗೇಶ್ವರ್‌ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರಿನ ಭದ್ರಕೋಟೆ ಗಟ್ಟಿ ಮಾಡಲು ಎಚ್‌ಡಿಕೆ ಪ್ಲಾನ್‌

    ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನೂ ಆಹ್ವಾನಿಸಲಾಗಿದೆ. ಸ್ವತಃ ಅಶ್ವತ್ಥ ನಾರಾಯಣ ಅವರೇ ಹೋಗಿ ಆಹ್ವಾನ‌ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಕರೆ ಮಾಡಿ ಆಹ್ವಾನಿಸಿದ್ದಾರೆ. ಆದರೆ ಕುಮಾರಸ್ವಾಮಿಗೆ ರಾಜಕೀಯ ಆತಂಕ ಇದೆ. ಒಕ್ಕಲಿಗರ ಮತಗಳು ಬಿಜೆಪಿಗೆ ವಾಲುತ್ತಿರುವ ಆತಂಕ ಹೆಚ್ಚಾಗಿದೆ. ಒಕ್ಕಲಿಗರ ಮತ ಬ್ಯಾಂಕ್‌ ಅನ್ನು ಯಾರೂ ಜೆಡಿಎಸ್‌ಗೆ ಗುತ್ತಿಗೆ ಕೊಟ್ಟಿಲ್ಲ. ಬಿಜೆಪಿ ಕೂಡ ಕೆಂಪೇಗೌಡರ ದೂರದೃಷ್ಟಿಯಂತೆ ಆಡಳಿತ ನೀಡುತ್ತಿದೆ ಎಂದಿದ್ದಾರೆ.‌

    ಹೆಚ್‌.ಡಿ.ಕುಮಾರಸ್ವಾಮಿ ಎರಡು ಬಾರಿ ವಿಫಲವಾಗಿರುವ ನಾಯಕ. ಕುಮಾರಸ್ವಾಮಿಯವರನ್ನು ಜನ ತಿರಸ್ಕಾರ ಮಾಡ್ತಿದ್ದಾರೆ. ಆ ಪ್ರಕ್ರಿಯೆ 2023ಕ್ಕೂ ಮುಂದುವರಿಯಲಿದೆ‌. ಅವರು ಅಧಿಕಾರ ಇದ್ದಾಗ ಕೆಲಸ ಮಾಡಲಿಲ್ಲ. ಕೇವಲ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡ್ತಿದ್ದಾರೆ. ಹಾಗಾಗಿ ಒಕ್ಕಲಿಗ ಸಮಾಜ ಕೂಡ ಬಿಜೆಪಿ ಪರ ಒಲವು ತೋರಿದೆ. ಜೆಡಿಎಸ್ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಡಿಪೆಂಡ್ ಆಗಿದೆ. ಬೇರೆ ಸಮುದಾಯದ ಸಪೋರ್ಟ್ ಸಿಗ್ತಿಲ್ಲ. ಅವರು 2023ಕ್ಕೂ ಸಕ್ಸಸ್ ಆಗೋದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲ್ಲುವ ವಿಶ್ವಾಸ ಇಲ್ಲದೆ ಸಿದ್ದರಾಮಯ್ಯ ಜಾಗ ಹುಡುಕಾಟ: ಯಡಿಯೂರಪ್ಪ ವ್ಯಂಗ್ಯ

    Live Tv
    [brid partner=56869869 player=32851 video=960834 autoplay=true]

  • ಒಕ್ಕಲಿಗರಿಗೆ ರಾಮ-ಕೃಷ್ಣರಂತೆ ಬದುಕುವುದು ಗೊತ್ತು ಉಗ್ರ ನರಸಿಂಹನ ಅವತಾರ ತಾಳುವುದು ಗೊತ್ತು: ನಂಜಾವಧೂತ ಶ್ರೀ

    ಒಕ್ಕಲಿಗರಿಗೆ ರಾಮ-ಕೃಷ್ಣರಂತೆ ಬದುಕುವುದು ಗೊತ್ತು ಉಗ್ರ ನರಸಿಂಹನ ಅವತಾರ ತಾಳುವುದು ಗೊತ್ತು: ನಂಜಾವಧೂತ ಶ್ರೀ

    ಮಂಡ್ಯ: ಒಕ್ಕಲಿಗರ (Vokkaliga) ತಾಳ್ಮೆ ಪರೀಕ್ಷೆ ಮಾಡಬೇಡಿ, ನಮಗೆ ರಾಮ-ಕೃಷ್ಣರಂತೆ ಬದುಕುವುದು ಗೊತ್ತು ಉಗ್ರ ನರಸಿಂಹನ ಅವತಾರ ತಾಳುವುದು ಗೊತ್ತು ಎಂದು ಸರ್ಕಾರಕ್ಕೆ, ಸ್ಫಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಶ್ರೀ (Nanjavadutha swamiji) ಎಚ್ಚರಿಕೆ ನೀಡಿದ್ದಾರೆ.

    ಮಂಡ್ಯದ (Mandya) ಮದ್ದೂರಿನಲ್ಲಿ ಒಕ್ಕಲಿಗರ ಮೀಸಲಾತಿ (Reservation) ಹೋರಾಟದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಇದೀಗ ಹೋರಾಟ ಆರಂಭವಾಗಿದೆ. ಮಂಡ್ಯದ ಮದ್ದೂರಿನಲ್ಲಿ ನಮ್ಮ ಹೋರಾಟಕ್ಕೆ ಚಾಲನೆ ಸಿಕ್ಕಿದೆ. ನಮ್ಮದು 30 ವರ್ಷಗಳ ಹಿಂದಿನ ಬೇಡಿಕೆ. ಎಲ್ಲಾ ಸಮುದಾಯಗಳ ಹಿತ ಬಯಸುವವರು ಒಕ್ಕಲಿಗರು. ಆದರೆ ಒಕ್ಕಲಿಗರಿಗೆ ಮೀಸಲಾತಿ ತಾರತಮ್ಯ ಆಗಿದೆ. ನಾವು 16% ಜನಸಂಖ್ಯೆ ಇದ್ದರೂ ತಾರತಮ್ಯವಾಗಿದೆ. ಮೂವತ್ತರಡಿ 4% ನೀಡಿದ್ದಾರೆ. ಆದರೆ ಮೂವತ್ತರಡಿ ಅಡಿ ಬೇರೆ ಸಮುದಾಯಗಳನ್ನು ಸೇರಿಸಲಾಗಿದೆ. ಆ 4% ಕೂಡ ಒಕ್ಕಲಿಗರು ಬಳಸಿಕೊಳ್ಳಲು ಆಗುತ್ತಿಲ್ಲ. ಶೈಕ್ಷಣಿಕ, ಉದ್ಯೋಗಿಕವಾಗಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. 3ಎ ಮೀಸಲಾತಿ 4% ರಿಂದ 12% ಹೆಚ್ಚಿಸಿ. ನಗರಪ್ರದೇಶದಲ್ಲಿರುವ ಒಕ್ಕಲಿಗರಿಗೆ OBC ಮೀಸಲಾತಿ ನೀಡಬೇಕು. ಬೇರೆ ಬೇರೆ ಸಮುದಾಯಕ್ಕೆ ಮೀಸಲಾತಿ ಸ್ವಾಗತಾರ್ಹ, ಆದರೆ ನಮಗೂ ನಮ್ಮ ಪಾಲು ನೀಡಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಂಚಿಟಿಗ ಸಮುದಾಯಕ್ಕೆ ಕೇಂದ್ರ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಟಿ.ಬಿ ಜಯಚಂದ್ರ ಮನವಿ

    ಒಕ್ಕಲಿಗರಲ್ಲಿ ಎಲ್ಲಾ ದೇವರ ಅಂಶವಿದೆ, ನಮಗೆ ರಾಮ-ಕೃಷ್ಣ ರಂತೆ ಬದುಕುವುದು ಗೊತ್ತು. ಉಗ್ರ ನರಸಿಂಹ ಅವತಾರ ತಾಳುವುದು ಗೊತ್ತು ಸರ್ಕಾರ ನಮ್ಮನ್ನು ಯಾವ ರೀತಿ ನಡೆಸಿಕೊಳ್ಳುತ್ತೋ ಆ ರೀತಿ ನಡೆಯುತ್ತೇವೆ. ನಮ್ಮ ತಾಳ್ಮೆ ಪರೀಕ್ಷೆ ಮಾಡಬೇಡಿ. ಮುಂದಿನ ದಿನಗಳ ಹೋರಾಟ ಯಾವ ರೂಪ ಬೇಕಾದರೂ ತಾಳಬಹುದು. ಚುನಾವಣೆಗೂ ಈ ಹೋರಾಟಕ್ಕೂ ಸಂಬಂಧ ಇಲ್ಲ. ಎಲ್ಲಾ ಪಕ್ಷಗಳಿಗೂ ಒಕ್ಕಲಿಗ ಸಮುದಾಯ ಒತ್ತು ನೀಡಿದೆ. ಎಲ್ಲರೂ ಒಟ್ಟಾಗಿ ಸಮಸ್ಯೆ ಬಗೆಹರಿಸಬೇಕು. ಒಕ್ಕಲಿಗರು ಶಾಂತಸಾಗರ ಯಾವಾಗ ಬೇಕಾದರೂ ಅಲೆಗಳು ಎದ್ದೇಳಬಹುದು ಎಂದು ಸರ್ಕಾರಕ್ಕೆ ಶ್ರೀಗಳು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ನಾನು ಛೀ, ಥೂ ಅನ್ನಿಸಿಕೊಂಡು ಅಧಿಕಾರ ಮಾಡಿಲ್ಲ – ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]