ಮಾಸ್ಕೋ: ರಷ್ಯಾ-ಉಕ್ರೇನ್ (Russia-Ukraine Conflict) ಸಂಘರ್ಷದಲ್ಲಿ ಕದನ ವಿರಾಮದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಕ್ಕೆ ಟ್ರಂಪ್ ಮತ್ತು ಮೋದಿ ಅವರಿಗೆ ಧನ್ಯವಾದ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕೃತಜ್ಞತೆ ಸಲ್ಲಿಸಿದ್ದಾರೆ.
ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ವಾಷಿಂಗ್ಟನ್‌ನ ಯೋಜನೆಯ ಕುರಿತು ಪುಟಿನ್ ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ಉಕ್ರೇನ್ ಸಂಘರ್ಷದ ಬಗ್ಗೆ ಗಮನ ಹರಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಇತರೆ ರಾಷ್ಟ್ರಗಳ ಮುಖ್ಯಸ್ಥರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ; ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ರಷ್ಯಾ ಒಪ್ಪಿಗೆ
ಮೊದಲನೆಯದಾಗಿ, ಉಕ್ರೇನ್ ಸಂಘರ್ಷ ಇತ್ಯರ್ಥಕ್ಕೆ ಇಷ್ಟೊಂದು ಗಮನ ನೀಡಿದ್ದಕ್ಕಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ತಮ್ಮದೇ ದೇಶಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕೆಲಗಳಿವೆ. ಈ ನಡುವೆಯೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರು, ಭಾರತದ ಪ್ರಧಾನಿ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಗಣರಾಜ್ಯದ ಅಧ್ಯಕ್ಷರು ನಮ್ಮ ವಿಷಯಕ್ಕೆ ಸಾಕಷ್ಟು ಸಮಯ ನೀಡಿದ್ದಾರೆ. ಅವರಿಗೆ ನಾನು ಆಭಾರಿ. ಏಕೆಂದರೆ, ಇದೆಲ್ಲವೂ ಯುದ್ಧವನ್ನು ನಿಲ್ಲಿಸುವ ಮತ್ತು ಮಾನವ ಸಾವು-ನೋವುಗಳನ್ನು ತಡೆಗಟ್ಟುವ ಉದಾತ್ತ ಯೋಜನೆಯಾಗಿದೆ ಎಂದು ಪುಟಿನ್ ಹೇಳಿದ್ದಾರೆ.
ಕಳೆದ ತಿಂಗಳು ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗಿನ ಸಭೆಯಲ್ಲಿ ಪ್ರಧಾನಿ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ ಎಂದು ಒತ್ತಿ ಹೇಳಿದ್ದರು. ಭಾರತ ತಟಸ್ಥವಾಗಿಲ್ಲ. ಭಾರತ ಶಾಂತಿಯ ಪರವಾಗಿ ನಿಂತಿದೆ. ಇದು ಯುದ್ಧದ ಯುಗವಲ್ಲ ಎಂದು ನಾನು ಈಗಾಗಲೇ ಅಧ್ಯಕ್ಷ ಪುಟಿನ್ ಅವರಿಗೆ ಹೇಳಿದ್ದೇನೆ. ಈ ವಿಚಾರದಲ್ಲಿ ಟ್ರಂಪ್ ನಿಲುವಿಗೆ ನನ್ನ ಬೆಂಬಲ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ರಷ್ಯಾ ಜೊತೆ ಅಮೆರಿಕ ಮಾತುಕತೆಗೆ ಸಿದ್ಧರೆ – ಈಗಾಗಲೇ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವ ಉಕ್ರೇನ್
ಈ ಮಧ್ಯೆ, ಯಾವುದೇ ಷರತ್ತುಗಳಿಲ್ಲದೆ ಕದನ ವಿರಾಮ ಪ್ರಸ್ತಾವನೆಗೆ ರಷ್ಯಾ ಒಪ್ಪಿಗೆ ನೀಡಬೇಕೆಂದು ಅಮೆರಿಕ ಒತ್ತಾಯಿಸಿತ್ತು. ಆದಾಗ್ಯೂ, ಕೆಲವು ಷರತ್ತುಗಳೊಂದಿಗೆ ಕದನ ವಿರಾಮಕ್ಕೆ ಪುಟಿನ್ ಒಪ್ಪಿಗೆ ಸೂಚಿಸಿದ್ದಾರೆ.
ಮಾಸ್ಕೋ: ಉಕ್ರೇನ್ (Russia-Ukraine War) ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾವು ಅಮೆರಿಕದ (America) ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದೆ.
ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin), ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ.
ಕದನ ವಿರಾಮವು ಶಾಶ್ವತ ಶಾಂತಿಗೆ ಕಾರಣವಾಗಬೇಕು. ಸಂಘರ್ಷದ ಮೂಲ ಕಾರಣಗಳನ್ನು ಪರಿಹರಿಸಬೇಕು. ಯುದ್ಧ ವಿರಾಮ ಉಕ್ರೇನ್ ಮತ್ತೆ ಸಶಸ್ತ್ರೀಕರಣಗೊಳ್ಳಲು ಅವಕಾಶ ನೀಡಬಹುದು. ತನ್ನ ಸೇನೆಯನ್ನು ಮತ್ತೆ ಸಜ್ಜುಗೊಳಿಸಲು ಸಹಕಾರಿಯಾಗಬಹುದು ಎಂದು ಪುಟಿನ್ ಬೇಡಿಕೆ ಮುಂದಿಟ್ಟಿದ್ದಾರೆ.
ರಷ್ಯಾದ 2,000 ಕಿಲೋಮೀಟರ್ ವ್ಯಾಪ್ತಿಯಲ್ಲಿ ಉಕ್ರೇನ್ ಸೇನೆ ಸಾಕಷ್ಟು ನಷ್ಟ ಮಾಡಿದೆ. ಬಂಧಿತ ಸೈನಿಕರನ್ನು ಹಾಗೇ ಹೋಗಲು ಬಿಡಬೇಕೇ? ಉಕ್ರೇನ್ ಅವರಿಗೆ ಶರಣಾಗಲು ಸೂಚಿಸುತ್ತದೆಯೇ? ಅಮೆರಿಕದ ಅಧಿಕಾರಿಗಳು ಅಥವಾ ಟ್ರಂಪ್ ಜೊತೆಗೆ ಮಾತುಕತೆಗೆ ಸಿದ್ಧ. ಸಂಘರ್ಷವನ್ನು ಶಾಂತಿಯುತವಾಗಿ ಕೊನೆಗೊಳಿಸಲು ನಾವು ಸಿದ್ಧ ಎಂದು ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸುತ್ತಲೇ ರಷ್ಯಾ ಹಲವು ಬೇಡಿಕೆಗಳನ್ನು ಮುಂದಿಟ್ಟಿದೆ.
ಕೀವ್/ಮಾಸ್ಕೋ: 2022ರ ಫೆಬ್ರವರಿ 24ರಂದು ಆರಂಭವಾದ ರಷ್ಯಾ-ಉಕ್ರೇನ್ ಯುದ್ಧ (Russia Ukraine War) ಸದ್ದು ಮಾಡುತ್ತಲೇ ಇದೆ. ಯುದ್ಧ ಆರಂಭವಾಗಿ ವರ್ಷ ಕಳೆದರೂ, ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡರೂ, ವಿಶ್ವದ ಅನೇಕ ರಾಷ್ಟ್ರಗಳು ಶಾಂತಿ ಕಾಪಾಡುವಂತೆ ಸಲಹೆ ನೀಡಿದರೂ ಡೋಂಟ್‌ಕೇರ್ ಎನ್ನುವಂತೆ ರಷ್ಯಾ ಉಕ್ರೇನ್ ಮೇಲಿನ ದಾಳಿಯನ್ನ ಮುಂದುವರಿಸಿದೆ.
ಗುರುವಾರವೂ ಸಹ ರಷ್ಯಾ ಸೇನೆಯು ಉಕ್ರೇನ್‌ನ ಖಾರ್ಕೀವ್ ಪೂರ್ವ ಪ್ರದೇಶದ ದಿನಸಿ ಅಂಗಡಿ ಹಾಗೂ ಕೆಫೆಯೊಂದರ ಮೇಲೆ ದಾಳಿ (Russian Rocket Strike) ನಡೆಸಿದ್ದು, ಸುಮಾರು 49 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಗ್ರೋಜಾ ಗ್ರಾಮದಲ್ಲಿ ಮಧ್ಯಾಹ್ನ 1:15ರ (ಭಾರತೀಯ ಕಾಲಮಾನ) ವೇಳೆಗೆ ದಾಳಿ ನಡೆದಿರುವುದಾಗಿ ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ತಿಳಿಸಿದ್ದಾರೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodimir Zelensky) ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: P-8I Poseidon: ಹಿಂದೂ ಮಹಾಸಾಗರದ ಕಾವಲುಗಾರ – ಬೋಯಿಂಗ್ P-8I ವಿಮಾನ
ರಷ್ಯಾ ಸೇನೆ ನಡೆಸಿದ ರಾಕೆಟ್ ದಾಳಿಯಲ್ಲಿ ಗುರುವಾರ ಉಕ್ರೇನಿನ 49 ಮಂದಿ ಸಾವನ್ನಪ್ಪಿದ್ದಾರೆ. ಇದು ರಷ್ಯಾದ ಉದ್ದೇಶಿದ ಭಯೋತ್ಪಾದಕ ದಾಳಿ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಆರೋಪಿಸಿದ್ದಾರೆ. ಘಟನೆ ನಂತರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: 2 ಲಕ್ಷ ಬಹುಮಾನಕ್ಕಾಗಿ 10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು
ಕೀವ್: ಯುದ್ಧಕಾಲದ ರಕ್ಷಣಾ ಸಚಿವ ಓಲೆಕ್ಸಿ ರೆಜ್ನಿಕೋವ್ (Oleksii Reznik) ಅವರನ್ನು ವಜಾಗೊಳಿಸಿ, ಅವರ ಸ್ಥಾನಕ್ಕೆ ರುಸ್ಟೆಮ್ ಉಮೆರೋವ್ ಅವರನ್ನು ನಾಮನಿರ್ದೇಶನ ಮಾಡಿ ಉಕ್ರೇನ್ (Ukraine) ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodimir Zelensky) ಆದೇಶ ಹೊರಡಿಸಿದ್ದಾರೆ.
ಹೊಸ ರಕ್ಷಣಾ ಸಚಿವರಾಗಲು ಉಕ್ರೇನ್‌ನ ಮಾಜಿ ಪೀಪಲ್ಸ್ ಡೆಪ್ಯೂಟಿ ರುಸ್ಟೆಮ್ ಉಮೆರೊವ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಝೆಲೆನ್ಸ್ಕಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ವೀಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಈಗ ರುಸ್ಟೆಮ್ ಉಮೆರೋವ್ ಸಚಿವಾಲಯವನ್ನು ಮುನ್ನಡೆಸಬೇಕು. ಉಕ್ರೇನ್‌ನ ವರ್ಕೋವ್ನಾ ರಾಡಾ (ಶಾಸಕಾಂಗ) ಈ ವ್ಯಕ್ತಿಯನ್ನು ಚೆನ್ನಾಗಿ ಬಲ್ಲವರಾಗಿದ್ದಾರೆ. ಉಮೆರೋವ್‌ಗೆ ಯಾವುದೇ ಹೆಚ್ಚುವರಿ ಪರಿಚಯಗಳ ಅಗತ್ಯವಿಲ್ಲ. ಸಂಸತ್ತು ಈ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಉಕ್ರೇನ್ ಅಧ್ಯಕ್ಷ ಹೇಳಿದ್ದಾರೆ.
ಫೆಬ್ರವರಿ 24, 2022 ರಂದು ರಷ್ಯಾ-ಉಕ್ರೇನ್ ಯುದ್ಧದ ಆರಂಭದಿಂದಲೂ ರೆಜ್ನಿಕೋವ್ ರಕ್ಷಣಾ ಸಚಿವರಾಗಿ ಕೆಲಸ ಮಾಡಿದ್ದರು. ಯುದ್ಧವು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿದೆ. ಈಗಲೂ ಎರಡು ರಾಷ್ಟ್ರಗಳ ನಡುವೆ ಯುದ್ಧವು ಉಲ್ಬಣಗೊಳ್ಳುತ್ತಲೇ ಇದೆ.
ಅದು 2022, ಫೆಬ್ರವರಿ 24ರ ಸಂದರ್ಭ. ಇಡೀ ಜಗತ್ತೇ ಬೆಚ್ಚಿ ಬೀಳುವಂತಹ ಘೋಷಣೆಯೊಂದನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Volodymyr Zelensky) ಮಾಡಿದರು. ಉಕ್ರೇನ್ ಮೇಲೆ ಯುದ್ಧ ನಡೆಸುವುದಾಗಿ ಘೋಷಿಸಿ ಬಿಟ್ಟರು. ಎರಡು ಮಹಾಯುದ್ಧಗಳ ಭೀಕರತೆಗೆ ನಲುಗಿ ಶಾಂತಿಯ ಮಂತ್ರ ಜಪಿಸುತ್ತಿದ್ದ ವಿಶ್ವಕ್ಕೆ, ಈ ಘೋಷಣೆ ನಿಜಕ್ಕೂ ನುಂಗಲಾರದ ತುತ್ತಾಯಿತು. ವಿಶ್ವಯುದ್ಧಗಳಿಂದಾದ ಸಾವು-ನೋವು, ಆರ್ಥಿಕ ಪ್ರಕ್ಷುಬ್ಧತೆ, ದೇಶ ದೇಶಗಳ ನಡುವಿನ ಕಂದಕ, ವೈಮನಸ್ಸಿನ ಗಾಯದ ಗುರುತು ಇನ್ನೂ ಮಾಡಿಲ್ಲ. ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸೆಯುತ್ತಲೇ ಇದ್ದಾರೆ. ಇಂತಹ ಹೊತ್ತಿನಲ್ಲಿ ಪುಟಿನ್ (Vladimir Putin) ನಿರ್ಧಾರ ಭೂವಾಸಿಗಳಿಗೆ ಮತ್ತೆ ಸಂಕಷ್ಟ ತಂದಿಟ್ಟಿದೆ.
ಉಕ್ರೇನ್ ಮೇಲೆ ರಷ್ಯಾ (Ukraine-Russia) ನಡೆಸುತ್ತಿರುವ ಯುದ್ಧಕ್ಕೆ 18 ತಿಂಗಳು ತುಂಬಿದೆ. ರಷ್ಯಾದ ಆಕ್ರಮಣದಿಂದ ಹತ್ತಾರು ಸಾವಿರ ಜನರ ಮಾರಣಹೋಮವಾಗಿದೆ. ಲಕ್ಷಾಂತರ ಜನರು ಗಂಟುಮೂಟೆ ಕಟ್ಟಿಕೊಂಡು ನೆಲೆ ಇಲ್ಲದಂತೆ ಅಲೆಮಾರಿಗಳಾಗಿದ್ದಾರೆ. ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದ ಪ್ರಪಂಚದಾದ್ಯಂತ ಆರ್ಥಿಕ ಪ್ರಕ್ಷುಬ್ಧತೆ ತಲೆದೋರಿದೆ. 2ನೇ ಮಹಾಯುದ್ಧದ (World War 2) ನಂತರ ಯೂರೋಪ್‌ನಲ್ಲಿ ಎಂದೂ ಕಂಡಿರದ ಮಟ್ಟದಲ್ಲಿ ಅಪಾರ ಸಾವು-ನೋವು ಈ ಯುದ್ಧದಲ್ಲಿ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಯಾವ ಪ್ರಧಾನಿಯೂ 5 ವರ್ಷ ಪೂರೈಸಿಲ್ಲ – ಕಾರಣಗಳೇನು?
ಎರಡನೇ ಮಹಾಯುದ್ಧದ ಭೀಕರತೆ
1939ರಿಂದ 1945 ರ ವರೆಗೆ ನಡೆದ ಜಾಗತಿಕ ಅನೇಕ ದೇಶಗಳನ್ನೊಳಗೊಂಡ ಯುದ್ಧ ಎರಡನೇ ಮಹಾಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆದ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ (ಜರ್ಮನಿ, ರಷ್ಯಾ, ಇಂಗ್ಲೆಂಡ್ ಮತ್ತು ಅಮೆರಿಕ) ಹಾಗೂ ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಬರೋಬ್ಬರಿ 70 ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ್ದ ಈ ಯುದ್ಧದಲ್ಲಿ 6 ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಮನುಕುಲದ ಇತಿಹಾಸದಲ್ಲೇ ಇದು ಅತಿ ಹೆಚ್ಚು ಸಾವು-ನೋವಾದ ಯುದ್ಧ.
ಯುದ್ಧದಿಂದ ರಷ್ಯಾ ಮತ್ತು ಉಕ್ರೇನ್ ಎರಡೂ ರಾಷ್ಟ್ರಗಳಲ್ಲಿ ಎಷ್ಟು ಸಾವು-ನೋವಾಗಿದೆ? ಯುದ್ಧದಲ್ಲಿ ಮನೆ ಕಳೆದುಕೊಂಡು ಎಷ್ಟು ಜನ ವಲಸೆ ಹೋಗಿದ್ದಾರೆ? ಉಕ್ರೇನ್ ಹಾಗೂ ರಷ್ಯಾದ ಮೇಲೆ ಯುದ್ಧ ಯಾವ ರೀತಿಯ ಪರಿಣಾಮ ಬೀರಿದೆ? ಈ ಯುದ್ಧದಿಂದ ಜಾಗತಿಕವಾಗಿ ಉಂಟಾದ ಬಿಕ್ಕಟ್ಟೇನು? ಉಕ್ರೇನ್‌ಗೆ ಒದಗಿ ಬಂದ ನೆರವು ಮೊದಲಾದ ವಿಷಯಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಡಿದವರೆಷ್ಟು?
ಎರಡನೆಯ ಮಹಾಯುದ್ಧದ ನಂತರ ಯೂರೋಪ್‌ನಲ್ಲಿ ಕಂಡುಬರದ ಮಟ್ಟದಲ್ಲಿ ಈ ಯುದ್ಧವು ಸಾವನ್ನು ಉಂಟುಮಾಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ (OHCHR) ಪ್ರಕಾರ, ಜುಲೈ ಅಂತ್ಯದ ವೇಳೆಗೆ 9,000 ಕ್ಕೂ ಹೆಚ್ಚು ನಾಗರಿಕರು ಹತ್ಯೆಯಾಗಿದ್ದಾರೆ. 16,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಾವು-ನೋವಾಗಿದೆ. ಆ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಯುದ್ಧದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಸಂಖ್ಯೆ ಎರಡೂ ಸೇರಿ 5,00,000 ದಷ್ಟಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇದನ್ನೂ ಓದಿ: AsiaCup ಟೂರ್ನಿಯಲ್ಲಿ ಭಾರತದ್ದೇ ಮೇಲುಗೈ – ಗೆದ್ದವರು, ಬಿದ್ದವರ ಕಥೆ
1,12,000 ರಷ್ಯಾದ ಸೈನಿಕರು ಸಾವಿಗೀಡಾಗಿದ್ದಾರೆ. 1,70,000 ದಿಂದ 1,80,000 ವರೆಗೆ ಸೈನಿಕರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಬೆಂಬಲಿಸುವ ಯುನೈಟೆಡ್ ಸ್ಟೇಟ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಕ್ರೇನ್‌ನಲ್ಲಿ 70,000 ದಿಂದ 1,00,000 ವರೆಗೆ ಸೈನಿಕರು ಹತರಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಮೆರಿಕದ ಅಂಕಿ ಅಂಶಗಳನ್ನು ರಷ್ಯಾ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ. ಅಂಕಿಅಂಶದಲ್ಲಿ ಹೆಚ್ಚಿನ ಸಂಖ್ಯೆಯನ್ನು ತೋರಿಸಲಾಗಿದೆ. ಪ್ರಚಾರಕ್ಕಾಗಿ ಯುಎಸ್ ಹೀಗೆ ಮಾಡುತ್ತಿದೆ ಎಂದು ರಷ್ಯಾ ಅಧಿಕಾರಿಗಳು ಆರೋಪಿಸಿದ್ದಾರೆ.
ಸ್ಥಳಾಂತರ ಆದವರೆಷ್ಟು?
2022 ರ ಆಕ್ರಮಣದಿಂದ, ಲಕ್ಷಾಂತರ ಉಕ್ರೇನಿಯನ್ನರು ತಮ್ಮ ಮನೆಗಳಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. 4.1 ಕೋಟಿಯಷ್ಟು ಜನಸಂಖ್ಯೆಯನ್ನು ಉಕ್ರೇನ್ ರಾಷ್ಟ್ರ ಹೊಂದಿದೆ. 1.7 ಕೋಟಿಯಷ್ಟು ಜನರಿಗೆ ತುರ್ತು ಮಾನವೀಯ ನೆರವಿನ ಅಗತ್ಯವಿದೆ. 50 ಲಕ್ಷಕ್ಕೂ ಹೆಚ್ಚು ಮಂದಿ ಉಕ್ರೇನ್ ನಿರಾಶ್ರಿತರು ಯೂರೋಪ್‌ನಾದ್ಯಂತ ಆಶ್ರಯ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಉಕ್ರೇನ್ ಪರಿಸ್ಥಿತಿ ಹೇಗಿದೆ?
ಯುದ್ಧ ಪ್ರಾರಂಭವಾದಾಗಿನಿಂದಲೂ ರಷ್ಯಾವು ಉಕ್ರೇನ್‌ನ 11 ಪ್ರತಿಶತದಷ್ಟು ಭೂಪ್ರದೇಶವನ್ನು ವಶಪಡಿಸಿಕೊಂಡಿದೆ. ಈ ಭೂಪ್ರದೇಶದ ಅಮೆರಿಕದ ರಾಜ್ಯಗಳಾದ ಮೆಸ್ಸಾಚುಸೆಟ್ಸ್, ನ್ಯೂ ಹ್ಯಾಂಪ್‌ಶೈರ್ ಮತ್ತು ಕನೆಕ್ಟಿಕಟ್‌ಗೆ ಸಮಾನವಾಗಿದೆ ಎಂದು ಹಾರ್ವರ್ಡ್ ಕೆನಡಿ ಸ್ಕೂಲ್‌ನಲ್ಲಿರುವ ಬೆಲ್ಫರ್ ಸೆಂಟರ್ ವರದಿಯಲ್ಲಿ ತಿಳಿಸಿದೆ. 2014 ರಲ್ಲಿ ಉಕ್ರೇನ್‌ನಿಂದ ಕ್ರಿಮಿಯಾವನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿತ್ತು. ಒಟ್ಟಾರೆ ರಷ್ಯಾ ಈಗ ಉಕ್ರೇನ್‌ನ ಸುಮಾರು 17.5% ಭೂಭಾಗವನ್ನು ನಿಯಂತ್ರಿಸುತ್ತಿದೆ. ಇದು ಸುಮಾರು 41,000 ಚದರ ಮೈಲಿಗಳು (106,000 ಚದರ ಕಿಮೀ) ಇದೆ. ಇದನ್ನೂ ಓದಿ: Chandrayaan-3: ‘ಸ್ಮೈಲ್ ಪ್ಲೀಸ್’ – ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್
ಉಕ್ರೇನ್ ತನ್ನ ಕರಾವಳಿಯ ಒಂದು ಭಾಗವನ್ನು ಕಳೆದುಕೊಂಡಿದೆ. ಅದರ ಆರ್ಥಿಕತೆಯು ದುರ್ಬಲಗೊಂಡಿದೆ. ಹೋರಾಟದಿಂದ ಕೆಲವು ನಗರಗಳು ಪಾಳುಭೂಮಿಗಳಾಗಿ ಮಾರ್ಪಟ್ಟಿವೆ. ಉಕ್ರೇನ್‌ನ ಆರ್ಥಿಕತೆಯು 2022 ರಲ್ಲಿ 30% ರಷ್ಟು ಕುಸಿತ ಕಂಡಿದೆ. ಈ ವರ್ಷ 1% ರಿಂದ 3% ರಷ್ಟು ಬೆಳೆಯುವ ಮುನ್ಸೂಚನೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ವಿಶ್ಲೇಷಿಸಿದೆ.
ರಷ್ಯಾದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ?
ಉಕ್ರೇನ್ ಮೇಲೆ ಆಕ್ರಮಣ ನಡೆಸಿರುವ ರಷ್ಯಾ ವಿರುದ್ಧ ಪಾಶ್ಚಿಮಾತ್ಯ ರಾಷ್ಟ್ರಗಳು ನಿರ್ಬಂಧದ ಅಸ್ತ್ರವನ್ನು ಹೂಡಿವೆ. ಇದರಿಂದ ರಷ್ಯಾದ ಆರ್ಥಿಕತೆಗೆ ದೊಡ್ಡ ಪೆಟ್ಟು ಕೊಟ್ಟಂತಾಗಿದೆ. ರಷ್ಯಾವು ಮಿಲಿಟರಿಗೆ ಹೆಚ್ಚಿನ ಹಣ ವಿನಿಯೋಗಿಸುತ್ತಿದೆ. ಇದರಿಂದ ಇತರೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. 2022 ರಲ್ಲಿ ರಷ್ಯಾ ಆರ್ಥಿಕತೆಯು 2.1% ನಷ್ಟು ಕುಸಿತ ಕಂಡಿತ್ತು. ಈ ವರ್ಷ 1.5% ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ವರದಿ ಮಾಡಿದೆ.
ಯುದ್ಧದ ಮಧ್ಯಾವಧಿಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ನಿರ್ಗಮನ, ಮಾನವ ಬಂಡವಾಳದ ನಷ್ಟ, ಜಾಗತಿಕ ಹಣಕಾಸು ಮಾರುಕಟ್ಟೆಗಳಿಂದ ಸಂಪರ್ಕ ಕಡಿತದಿಂದ ರಷ್ಯಾದ ಆರ್ಥಿಕತೆಯು ಕುಂಠಿತಗೊಂಡಿದೆ ಎಂದು IMF ವಕ್ತಾರ ಜೂಲಿ ಕೊಜಾಕ್ ಕಳೆದ ತಿಂಗಳು ಹೇಳಿದ್ದರು. ಈ ಅವಧಿಯಲ್ಲಿ ರಷ್ಯಾದಲ್ಲಿ ಉತ್ಪಾದನೆಯು ಯುದ್ಧ ಪೂರ್ವದಲ್ಲಿದ್ದ ಪ್ರಮಾಣಕ್ಕಿಂತ 7 ಪ್ರತಿಶತದಷ್ಟು ಕಡಿಮೆಯಾಗಿದೆ ಎನ್ನಲಾಗಿದೆ. ರಷ್ಯಾ ತನ್ನ 2023 ರ ರಕ್ಷಣಾ ವೆಚ್ಚದ ಗುರಿಯನ್ನು 100 ಶತಕೋಟಿ ಡಾಲರ್‌ಗಿಂತ ಹೆಚ್ಚು ಹೊಂದಿದೆ. ಎಲ್ಲಾ ಸಾರ್ವಜನಿಕ ವೆಚ್ಚದ ಮೂರನೇ ಒಂದು ಭಾಗವನ್ನು ಮಿಲಿಟರಿಗಾಗಿಯೇ ವಿನಿಯೋಗಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಇದನ್ನೂ ಓದಿ: ಅದಾನಿ ಷೇರು ಶಾರ್ಟ್ ಸೆಲ್ಲಿಂಗ್, 16 ಕಂಪನಿಗಳಿಗೆ ಭಾರೀ ಲಾಭ – ಇಡಿ ತನಿಖಾ ವರದಿಯಲ್ಲಿ ಏನಿದೆ?
ಜಾಗತಿಕ ಹಣದುಬ್ಬರ, ಆಹಾರ ಬಿಕ್ಕಟ್ಟು
ರಷ್ಯಾದ ಆಕ್ರಮಣ ಮತ್ತು ಪಾಶ್ಚಿಮಾತ್ಯ ನಿರ್ಬಂಧಗಳು ಗೊಬ್ಬರ, ಗೋಧಿ, ಲೋಹಗಳ ಬೆಲೆಗಳಲ್ಲಿ ಏರಿಕೆಗೆ ಕಾರಣವಾಯಿತು. ಈ ಯುದ್ಧವು ಹಣದುಬ್ಬರದ ಅಲೆ ಮತ್ತು ಜಾಗತಿಕ ಆಹಾರ ಬಿಕ್ಕಟ್ಟನ್ನು ಉತ್ತೇಜಿಸಿತು. ಸೌದಿ ಅರೇಬಿಯಾದ ನಂತರ ರಷ್ಯಾ ವಿಶ್ವದ ಎರಡನೇ ಅತಿದೊಡ್ಡ ತೈಲ ರಫ್ತುದಾರ. ಅಷ್ಟೇ ಅಲ್ಲ ನೈಸರ್ಗಿಕ ಅನಿಲ, ಗೋಧಿ, ಸಾರಜನಕ ಗೊಬ್ಬರ ಮತ್ತು ಪಲ್ಲಾಡಿಯಂನ ರಫ್ತುದಾರ ಕೂಡ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ಸ್ವಲ್ಪ ಕಾಲದ ನಂತರ, ಅಂತಾರಾಷ್ಟ್ರೀಯ ತೈಲ ಬೆಲೆಗಳು 2008 ರ ದಾಖಲೆಗಳನ್ನೂ ಮೀರಿ ಗರಿಷ್ಠ ಮಟ್ಟಕ್ಕೆ ಏರಿತು.
ಪಾಶ್ಚಾತ್ಯ ರಾಷ್ಟ್ರಗಳಿಂದ ಉಕ್ರೇನ್‌ಗೆ ಒದಗಿಬಂದ ನೆರವು
ಯುನೈಟೆಡ್ ಸ್ಟೇಟ್ಸ್ ಉಕ್ರೇನ್‌ಗೆ ಇದುವರೆಗೆ 43 ಶತಕೋಟಿಗೂ ಹೆಚ್ಚು ಡಾಲರ್ ಭದ್ರತಾ ನೆರವನ್ನು ನೀಡಿದೆ. ಇದರಲ್ಲಿ ಸ್ಟಿಂಗರ್ ವಿಮಾನ-ವಿರೋಧಿ ವ್ಯವಸ್ಥೆಗಳು, ಜಾವೆಲಿನ್ ಆಂಟಿ-ಆರ್ಮರ್ ಸಿಸ್ಟಮ್‌ಗಳು, 155mm ಹೊವಿಟ್ಜರ್‌ಗಳು ಮತ್ತು ರಾಸಾಯನಿಕ, ಜೈವಿಕ, ವಿಕಿರಣಶಾಸ್ತ್ರ ಮತ್ತು ಪರಮಾಣು ದಾಳಿಯಿಂದ ರಕ್ಷಿಸುವ ಉಪಕರಣಗಳು ಸೇರಿವೆ. ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಒಕ್ಕೂಟ, ಬ್ರಿಟನ್, ಜರ್ಮನಿ ಮತ್ತು ಜಪಾನ್ ದೇಶಗಳು ಉಕ್ರೇನ್‌ಗೆ ಅಪಾರ ಬೆಂಬಲ ನೀಡಿವೆ. ಪಾಶ್ಚಿಮಾತ್ಯ ರಾಷ್ಟ್ರಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಸುತ್ತಿರುವುದರಿಂದ ಯುದ್ಧ ಮತ್ತಷ್ಟು ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ರಷ್ಯಾ ಆರೋಪಿಸಿದೆ.
ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ದಾಳಿ ಮಾಡಿದಂತೆ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮಗಳಲ್ಲೆಲ್ಲಾ ಹರಿದಾಡಿ ಸುದ್ದಿಯಾದರು. ಇದೀಗ ಪಂಜಾಬ್‌ನಲ್ಲಿ ಚುನಾವಣೆ ಗೆಲ್ಲುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿ(ಎಎಪಿ) ಅಭ್ಯರ್ಥಿ ಭಗವಂತ್ ಮಾನ್ ಪಂಜಾಬ್‌ನ ಝೆಲೆನ್ಸ್ಕಿ ಎಂದೇ ಟ್ರೆಂಡ್ ಆಗುತ್ತಿದ್ದಾರೆ.
ಹೌದು, ರಷ್ಯಾ ಉಕ್ರೇನ್ ಯುದ್ಧಕ್ಕೂ ಮೊದಲು ಝೆಲೆನ್ಸ್ಕಿ ಹೆಸರನ್ನೂ ಕೇಳಿರದವರು ಆತ ಒಬ್ಬ ಹಾಸ್ಯ ನಟನಾಗಿ ಬಳಿಕ ರಾಜಕೀಯಕ್ಕೆ ಪ್ರವೆಶಿಸಿದ್ದ ವಿಷಯ ತಿಳಿದುಕೊಂಡರು. ಈ ವಿಚಾರವಾಗಿ ಭೀಕರ ಯುದ್ಧದ ಮಧ್ಯೆಯೂ ಝೆಲೆನ್ಸ್ಕಿ ಟ್ರೆಂಡ್ ಆಗಿದ್ದರು. ಇದೀಗ ಭಗವಂತ್ ಮಾನ್ ಅವರ ಸರದಿ.
ಭಗವಂತ್ ಮಾನ್ ಸಹ ರಾಜಕೀಯ ಸೇರುವ ಮೊದಲು ಪಂಜಾಬ್‌ನ ಹಾಗೂ ರಾಷ್ಟ್ರೀಯ ಚ್ಯಾನೆಲ್‌ಗಳಲ್ಲಿ ಹಾಸ್ಯ ಕಾರ್ಯಕ್ರಮವನ್ನು ನೀಡುತ್ತಿದ್ದರು. ಈ ಮೂಲಕ ಜನಪ್ರಿಯತೆ ಗಳಿಸಿ ಮಾನ್ ಬಳಿಕ ರಾಜಕೀಯ ಪ್ರವೇಶಿಸಿದರು. ಇದನ್ನೂ ಓದಿ: ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ
A comedian is about to become CM of Punjab. What a day!
ಇದೀಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಭಗವಂತ್ ಮಾನ್ ಇಬ್ಬರೂ ಒಂದೇ ಹಿನ್ನೆಲೆಯಿಂದ ರಾಜಕೀಯ ಪ್ರವೆಶಿಸಿರುವುದಾಗಿ ಭಾರೀ ಸುದ್ದಿಯಾಗುತ್ತಿದ್ದಾರೆ. ಪಂಜಾಬ್‌ನ ಚುನಾವಣೆಯಲ್ಲಿ ಭಗವಂತ್ ಮಾನ್ ಭರ್ಜರಿ ಗೆಲುವು ಸಾಧಿಸಿ ಪಂಜಾಬ್‌ನ ಝೆಲೆನ್ಸ್ಕಿ ಎನಿಸಿಕೊಂಡಿದ್ದಾರೆ.
ಕೀವ್: ನೀವು ನಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ, ಕತ್ತಲಿನ ವಿರುದ್ಧ ಬೆಳಕು ಜಯ ಸಾಧಿಸುತ್ತೆ ಎಂದು ಯೂರೋಪ್ ರಾಷ್ಟ್ರಗಳ ನಾಯಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಭಾವಾವೇಷದಲ್ಲಿ ಕರೆ ನೀಡಿದ್ದಾರೆ.
ಯೂರೋಪ್ ನಾಯಕರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ ಅವರು, ನಾವು ನಮ್ಮ ನೆಲಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ನಮ್ಮ ದೇಶದ ಎಲ್ಲಾ ದೊಡ್ಡ ನಗರಗಳನ್ನು ಈಗ ನಿರ್ಬಂಧಿಸಲಾಗಿದೆ. ನೀವು ನಮ್ಮೊಂದಿಗಿದ್ದೀರಿ ಎಂಬುದನ್ನು ಸಾಬೀತುಪಡಿಸಿ. ನಮ್ಮನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದು ನೀವು ಸಾಬೀತುಪಡಿಸಿ. ನೀವು ನಿಜವಾಗಿಯೂ ಯುರೋಪಿಯನ್ನರು ಎಂದು ತೋರಿಸಿ. ಜೀವನವು ಸಾವಿನ ವಿರುದ್ಧ ಹಾಗೂ ಬೆಳಕು ಕತ್ತಲೆಯ ವಿರುದ್ಧ ಗೆಲ್ಲುತ್ತದೆ ಎಂದು ಭಾವುಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್ ಕಾರ್ಡ್ ಬ್ಲಾಕ್ – ATMಗಳ ಮುಂದೆ ರಷ್ಯನ್ನರ ದಂಡು
ಇಂದು ನಾವು ನಿಮ್ಮೆಲ್ಲರನ್ನೂ, ಯೂರೋಪಿಯನ್ ಒಕ್ಕೂಟದ ದೇಶಗಳನ್ನು ಒಗ್ಗೂಡಿಸಿದ್ದೇವೆ. ಇದು ನನಗೆ ಖುಷಿಯ ವಿಚಾರ. ಆದರೆ ಇದಕ್ಕಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕು ಎಂದು ನನಗೆ ತಿಳಿದಿರಲಿಲ್ಲ. ರಷ್ಯಾ ಆಕ್ರಮಣ ನನಗೆ, ಪ್ರತಿಯೊಬ್ಬ ಉಕ್ರೇನಿಯನ್ನರಿಗೆ ಮತ್ತು ದೇಶಕ್ಕೆ ದೊಡ್ಡ ದುರಂತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇಂದು ನಾವು ಮೌಲ್ಯಗಳಿಗಾಗಿ, ಹಕ್ಕುಗಳಿಗಾಗಿ, ಸ್ವಾತಂತ್ರ್ಯಕ್ಕಾಗಿ, ಸಮಾನವಾಗಿರಬೇಕೆಂಬ ಬಯಕೆಗಾಗಿ ಹೋರಾಡುತ್ತಿದ್ದೇವೆ. ರಷ್ಯಾ ಭಯೋತ್ಪಾದಕ ರಾಷ್ಟ್ರವಾಗಿದೆ. ಇದನ್ನು ಯಾರೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?
ಕೀವ್: ರಷ್ಯಾದ ವಿರುದ್ಧ ಹೋರಾಡಲು ಮಿಲಿಟರಿ ಅನುಭವ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಘೋಷಣೆ ಮಾಡಿದ್ದಾರೆ.
ಉಲ್ಬಣಗೊಳ್ಳುತ್ತಿರುವ ಯುದ್ಧದ ಪರಿಸ್ಥಿತಿಯ ಮಧ್ಯೆ, ಅವರು ಸೋಮವಾರ (ಫೆಬ್ರವರಿ 28) ರಷ್ಯಾದೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳಲು ಸಿದ್ಧರಿದ್ದರೆ ಹಿಂದಿನ ಮಿಲಿಟರಿ ಅನುಭವ ಹೊಂದಿರುವ ಕೈದಿಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
Ukraine’s President Volodymyr Zelensky says Ukraine will release prisoners with military experience if willing to join fight against Russia: Reuters #RussiaUkraineConflictpic.twitter.com/Ezhb1lviVs