Tag: Volodymyr Zelenskyy

  • ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

    ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

    ಕೈವ್‌: ಉಕ್ರೇನ್‌ನ (Ukraine) ಸುಮಿಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಕೈವ್‌ಗೆ ಹೋಗುವ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ (Russia) ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ 30 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ತಿಳಿಸಿದ್ದಾರೆ.

    ರಷ್ಯಾ ದಾಳಿಯ ವೀಡಿಯೋವನ್ನು ಝೆಲೆನ್ಸ್ಕಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೋದಲ್ಲಿ ಹಾನಿಗೊಳಗಾದ ರೈಲಿನಲ್ಲಿ ಬೆಂಕಿಯ ಜ್ಯಾಲೆಗಳು ಬರುತ್ತಿರುವುದು ಸೆರೆಯಾಗಿದೆ. ಘಟನಾ ಸ್ಥಳದಲ್ಲಿ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯವರೆಗೆ, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    ರಷ್ಯಾದೊಂದಿಗಿನ ಶಾಂತಿ ಮಾತುಕತೆ ವಿಫಲದಿಂದ ಹತಾಶೆಗೊಳಗಾಗಿರುವ ಝೆಲೆನ್ಸ್ಕಿ, ರಷ್ಯಾ ವಿರುದ್ಧ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ರಷ್ಯನ್ನರಿಗೆ ತಾವು ನಾಗರಿಕರನ್ನು ಕೊಲ್ಲುತ್ತಿದ್ದೇವೆ ಎಂದು ತಿಳಿದಿರಲು ಸಾಧ್ಯವಿಲ್ಲ. ಪ್ರತಿದಿನ ರಷ್ಯಾ ಮುಗ್ದ ಜನರ ಜೀವಗಳನ್ನು ತೆಗೆದುಕೊಳ್ಳುತ್ತಿದೆ. ಇದನ್ನು ಜಗತ್ತು ನಿರ್ಲಕ್ಷಿಸಬಾರದು, ಇದೊಂದು ಭಯೋತ್ಪಾದನಾ ಕೃತ್ಯ ಎಂದು ಕರೆದಿದ್ದಾರೆ.

    ಗವರ್ನರ್ ಹ್ರೈಹೊರೊವ್ ಎಕ್ಸ್‌ನಲ್ಲಿ ಉರಿಯುತ್ತಿರುವ ರೈಲು ಬೋಗಿಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ವೈದ್ಯರು ಮತ್ತು ರಕ್ಷಣಾ ಅಧಿಕಾರಿಗಳು ಇದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ರಷ್ಯಾ ದಾಳಿಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ರೇನ್‌ನೊಂದಿಗೆ ಯುರೋಪಿಯನ್ ಕಮಿಷನ್ ನಿಂತಿದೆ. ರಷ್ಯಾ ಅಂತಿಮವಾಗಿ ಶಾಶ್ವತ ಶಾಂತಿಯನ್ನು ಒಪ್ಪುವವರೆಗೂ ಅದರ ಮೇಲೆ ಒತ್ತಡವನ್ನು ಹೆಚ್ಚಿಸುವುದನ್ನು ಮುಂದುವರಿಸಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಕೌಂಟರ್‌ ಅಟ್ಯಾಕ್‌ – ರಷ್ಯಾದ ಆಯಿಲ್‌ ಪೈಪ್‌ಲೈನ್‌ ಮೇಲೆ ದಾಳಿ

  • ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ – ಚೀನಾದಲ್ಲಿ ಪುಟಿನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಝಲೆನ್ಸ್ಕಿ ಕರೆ

    ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ – ಚೀನಾದಲ್ಲಿ ಪುಟಿನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಝಲೆನ್ಸ್ಕಿ ಕರೆ

    ಬೀಜಿಂಗ್‌: 7 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಚೀನಾಕ್ಕೆ ಭೇಟಿ ನೀಡಿದ್ದಾರೆ. ಚೀನಾದ ಟಿಯಾಂಜಿನ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೋದಿಗೆ ಭವ್ಯ ಸ್ವಾಗತ ನೀಡಲಾಯಿತು.

    ಪ್ರಧಾನಿ ಮೋದಿ 2018ರಲ್ಲಿ ಕೊನೆಯ ಬಾರಿ ಚೀನಾ (China) ಪ್ರವಾಸ ಕೈಗೊಂಡಿದ್ದರು. ಆದ್ರೆ 2020ರ ಗಲ್ವಾನ್‌ ಘರ್ಷಣೆಯ ಬಳಿಕ ಪರಸ್ಪರ ದೂರ ಸರಿದಿದ್ದ ಭಾರತ ಮತ್ತು ಚೀನಾ ಭವಿಷ್ಯದ ಭೌಗೋಳಿಕ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಈಗ ಮತ್ತೆ ಹತ್ತಿರವಾಗಲು ಮುಂದಾಗಿವೆ. ಇಡೀ ಜಗತ್ತು ಅಚ್ಚರಿಗೊಳ್ಳುವ ರೀತಿಯಲ್ಲಿ ಭಾರತ-ಚೀನಾ (India China) ಸಂಬಂಧ ಸುಧಾರಣೆ ಕಾಣುತ್ತಿದೆ. ಇದನ್ನೂ ಓದಿ: 7 ವರ್ಷಗಳ ನಂತರ ಚೀನಾಗೆ ಪ್ರಧಾನಿ ಮೋದಿ ಭೇಟಿ

    ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ (Xi Jinping) ಅವರ ಆಹ್ವಾನದ ಮೇರೆಗೆ ಭೇಟಿ ನೀಡಿರುವ ಮೋದಿ ಶಾಂಘೈ ಸಹಕಾರ ಮಂಡಳಿ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 25ನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಆ.31ರಂದು ಸಭೆಯ ಔತಣಕೂಟದಲ್ಲಿ ಭಾಗಿಯಾಗಲಿದ್ದು, ಸೆ.1ರಂದು ಮುಖ್ಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಮಯದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್‌ರನ್ನೂ ಭೇಟಿಯಾಗಲಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ ಕೆಲವು ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.  ಇದನ್ನೂ ಓದಿ: ಜಪಾನ್‌ ಪ್ರಧಾನಿ, ಅವರ ಪತ್ನಿಗೆ ವಿಶೇಷ ಗಿಫ್ಟ್‌ ಕೊಟ್ಟ ಮೋದಿ – ಚಂದ್ರಶಿಲೆಯ ಬಟ್ಟಲು, ಪಶ್ಮಿನಾ ಶಾಲಿನ ವಿಶೇಷತೆ ಏನು?

    ಪುಟಿನ್‌ ಭೇಟಿಗೂ ಮುನ್ನವೇ ಝಲೆನ್ಸ್ಕಿ ಕರೆ
    ಆಗಸ್ಟ್‌ 31ರಂದು ಟಿಯಾನ್‌ಜಿನ್‌ನಲ್ಲಿ ನಡೆಯುವ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಚೀನಾ ಅಧ್ಯಕ್ಷ ಕ್ಷಿ, ರಷ್ಯಾ ಅಧ್ಯಕ್ಷ ಪುಟೀನ್ ಜೊತೆ ಚರ್ಚೆ ನಡೆಸಲಿದ್ದಾರೆ. ಅಮೆರಿಕದ 50% ಸುಂಕದ ಬಗ್ಗೆ ಗಂಭೀರ ಮಾತುಕತೆ ನಡೆಸಲಿದ್ದಾರೆ. ಆದ್ರೆ ತ್ರಿಮೂರ್ತಿಗಳ ಭೇಟಿಗೂ ಮುನ್ನವೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಉಕ್ರೇನ್‌ನಲ್ಲಿನ ಯುದ್ಧ ಹಾಗೂ ಶಾಂತಿ ನಿರೀಕ್ಷೆಯ ಕುರಿತು ಮಾತುಕತೆ ನಡೆಸಿದ್ದಾರೆ. ಬಳಿಕ ಚೀನಾದಲ್ಲಿ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾರತವು ʻರಷ್ಯಾ ಮತ್ತು ಇತರ ನಾಯಕರಿಗೆ ಸೂಕ್ತ ಸಂದೇಶʼ ನೀಡಲು ಸಿದ್ಧವಾಗಿದೆ ಝಲೆನ್ಸ್ಕಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಇದನ್ನೂ ಓದಿ: ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಸವಾರಿ

    ಟ್ರಂಪ್‌ ಸುಂಕ ಸಮರಕ್ಕೆ ಕೌಂಟರ್‌ ಕೊಡಲು ಸಜ್ಜು
    ಇದಕ್ಕೂ ಮುನ್ನ ಚೀನಾ ದ್ವಿಪಕ್ಷೀಯ ಸಂಬಂಧ ಬಗ್ಗೆ ಮಾತನಾಡಿರುವ ಮೋದಿ, ಆರ್ಥಿಕ ಸ್ಥಿರತೆ ಕಾಯ್ದುಕೊಳ್ಳಲು ಭಾರತ-ಚೀನಾ ಒಟ್ಟಾಗಿ ಕೆಲಸ ಮಾಡಬೇಕು. ಪರಸ್ಪರ ಗೌರವ, ಆಸಕ್ತಿ, ಸೂಕ್ಷ್ಮ ಮಾತುಕತೆಯ ಆಧಾರದ ಮೇಲೆ ದೀರ್ಘಕಾಲಿನ ದೃಷ್ಟಿಕೋನದಿಂದ ದ್ವಿಪಕ್ಷೀಯ ಸಂಬಂಧಗಳನ್ನು ಮುನ್ನಡೆಸಲು ನಾವು ಸಿದ್ಧರಿದ್ದೇವೆ. 2 ನೆರೆಹೊರೆಯ ಮತ್ತು ಜಗತ್ತಿನ ದೊಡ್ಡ ರಾಷ್ಟ್ರಗಳಾಗಿ ಭಾರತ ಮತ್ತು ಚೀನಾ ನಡುವಿನ ಸೌಹಾರ್ದಯುತ ಸಂಬಂಧ ಜಾಗತಿಕ ಶಾಂತಿ, ಸಮೃದ್ಧಿ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ ಅಂತ ಮೋದಿ ಪ್ರತಿಪಾದಿಸಿದ್ದಾರೆ.

  • ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ವರ್ಷಾಂತ್ಯದಲ್ಲಿ ಭಾರತಕ್ಕೆ ಪುಟಿನ್‌, ಝೆಲೆನ್ಸ್ಕಿ ಭೇಟಿ – ಅಮೆರಿಕ ತೈಲ ವಾರ್‌ ನಡ್ವೆ ಹೆಚ್ಚಾಯ್ತು ಭಾರತದ ಪ್ರಾಬಲ್ಯ

    ನವದೆಹಲಿ/ಕೈವ್‌: ಭಾರತ ಮತ್ತು ರಷ್ಯಾ (India Russia) ನಡುವಿನ ಸ್ನೇಹ ಇಡೀ ವಿಶ್ವಕ್ಕೆ ಗೊತ್ತಿದೆ. ಅಮೆರಿಕ ಭಾರತದ ಮೇಲೆ ಶಕ್ತಿ ಪ್ರದರ್ಶನಕ್ಕೆ ಮುಂದಾದಾಗಲೆಲ್ಲ ರಷ್ಯಾ, ನಮ್ಮ ದೇಶದ ಜೊತೆಗೆ ನಿಂತಿರೋದಕ್ಕೆ ಹಲವು ಉದಾಹರಣೆಗಳಿವೆ. ಅದೇ ಸಮಯದಲ್ಲಿ ಭಾರತ-ಉಕ್ರೇನ್‌ ಜೊತೆಗೂ ಸ್ನೇಹದಲ್ಲಿ ಸಮತೋಲನ ಕಾಯ್ದುಕೊಂಡಿದೆ. ಈ ವರ್ಷಾಂತ್ಯಕ್ಕೆ ಇಬ್ಬರೂ ವಿಶ್ವನಾಯಕರು ಭಾರತಕ್ಕೆ ಭೇಟಿ ನೀಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಹೌದು. ಪ್ರಧಾನಿ ನರೇಂದ್ರ ಮೋದಿ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಅವರನ್ನ ಭಾರತಕ್ಕೆ ಭೇಟಿ ನೀಡಲು ಆಹ್ವಾನಿಸಿದ್ದಾರೆ. ಈ ವರ್ಷಾಂತ್ಯದ ವೇಳೆಗೆ ರಷ್ಯಾ ಅಧ್ಯಕ್ಷ ಪುಟಿನ್‌ ಸಹ ಭಾರತಕ್ಕೆ ಭೇಟಿ ನೀಡುವುದು ಖಚಿತವಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಾಬಲ್ಯ ಹೆಚ್ಚಾಗುತ್ತಿರುವುದಕ್ಕೆ ಹಿಡಿದ ಕನ್ನಡಿಯಾಗಿದೆ.

    ಈ ಕುರಿತು ಉಕ್ರೇನಿಯನ್ ರಾಯಭಾರಿ ಓಲೆಕ್ಸಾಂಡರ್ ಪೋಲಿಷ್‌ಚುಕ್ ಮಾತನಾಡಿ, ಭಾರತ ಮತ್ತು ಉಕ್ರೇನ್‌ ನಡುವಿನ ಭವಿಷ್ಯದ ಕಾರ್ಯತಂತ್ರಗಳು ವೇಗವಾಗಿ ಸಾಗುತ್ತಿವೆ. ಪ್ರಧಾನಿ ಮೋದಿ ಅವರು ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಇದಕ್ಕೆ ಝಲೆನ್ಸ್ಕಿ ಸಹ ಒಪ್ಪಿದ್ದು, ದಿನಾಂಕವನ್ನು ನಿಗದಿಪಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಝೆಲೆನ್ಸ್ಕಿ ಅವರ ಭಾರತ ಭೇಟಿಯು ಉಭಯ ದೇಶಗಳ ನಡುವಿನ ಸಂಬಂಧಕ್ಕೆ ಪ್ರಮುಖ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ.

    ವರ್ಷಾಂತ್ಯದಲ್ಲಿ ಪುಟಿನ್ ಕೂಡ
    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ದೃಢಪಡಿಸಿದರು. ರಷ್ಯಾದ ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ಕೂಡ ಇದನ್ನು ಖಚಿತಪಡಿಸಿದೆ.

    ಸುಂಕದಿಂದ ಸಿಗುತ್ತಾ ರಿಲೀಫ್‌?
    ಟ್ರಂಪ್‌ ಎಚ್ಚರಿಕೆ ಬಳಿಕವೂ ಭಾರತ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಿದೆ. ಹೀಗಾಗಿ ಭಾರತದ ಮೇಲೆ ಶೇ.25 ವಿಧಿಸಿದ್ದ ಸುಂಕದ ಪ್ರಮಾಣವನ್ನು 50%ಗೆ ಟ್ರಂಪ್‌ ಹೆಚ್ಚಿದ್ದಾರೆ. ಇದು ಆ.27ರಿಂದ ಅನ್ವಯವಾಗಲಿದೆ. ಅಷ್ಟರಲ್ಲಿ ಭಾರತಕ್ಕೆ ರಿಲೀಫ್‌ ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

  • ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ಪುಟಿನ್‌-ಝೆಲೆನ್ಸ್ಕಿ ಮೊದಲು ನೇರ ಮಾತುಕತೆ ನಡೆಸಬೇಕು – ಬ್ರೋಕರ್‌ ಕೆಲಸದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧಾರ

    ವಾಷಿಂಗ್ಟನ್‌: ರಷ್ಯಾ-ಉಕ್ರೇನ್‌ ಯುದ್ಧ (Russia Ukraine War) ಕೊನೆಗೊಳಿಸಲು ಶತಪ್ರಯತ್ನ ನಡೆಸುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈಗ‌ ಇದ್ದಕ್ಕಿದ್ದಂತೆ ಯೂಟರ್ನ್‌ ಹೊಡೆದಿದ್ದಾರೆ. ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ನೇರ ಹಸ್ತಕ್ಷೇಪದಿಂದ ಹಿಂದೆ ಸರಿಯಲು ಟ್ರಂಪ್‌ ನಿರ್ಧರಿಸಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಇಲ್ಲದೇ ಪುಟಿನ್‌ – ಝಲೆನ್ಸ್ಕಿ ಮೊದಲು ಮುಖಾಮುಖಿ ಭೇಟಿಯಾಗಬೇಕು, ನೇರ ಮಾತುಕತೆ ನಡೆಸಬೇಕು ಎಂದು ಹೇಳಿದ್ದಾರೆ.

    ಶ್ವೇತಭವನದ (White House) ಆಡಳಿತಾಧಿಕಾರಿಗಳು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದಾರೆ. ಮುಂದಿನ ಹಂತದ ಶಾಂತಿ ಮಾತುಕತೆಗಳಲ್ಲಿ ಟ್ರಂಪ್‌ ನೇರವಾಗಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ಬದಲಾಗಿ ರಷ್ಯಾ ಅಧ್ಯಕ್ಷ ಪುಟಿನ್‌, ಉಕ್ರೇನ್‌ ಅಧ್ಯಕ್ಷ ಝಲೆನ್ಸ್ಕಿ (Volodymyr Zelenskyy) ಮೊದಲು ಪರಸ್ಪರ ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಮೇಲೆ ಒತ್ತಡ ಹೇರಲು ಭಾರತದ ಮೇಲೆ ಸುಂಕ – ವೈಟ್‌ ಹೌಸ್‌

    ಟ್ರಂಪ್‌ ದೃಷ್ಟಿಕೋನದಲ್ಲಿ ಯುದ್ಧ ಕೊನೆಗೊಳಿಸುವ ಮುಂದಿನ ಹೆಜ್ಜೆ ಪುಟಿನ್‌, ಝಲೆನ್ಸ್ಕಿ ನಡುವಿನ ದ್ವಿಪಕ್ಷೀಯ ಸಭೆ. ಈ ಸಭೆ ನಿಜವಾಗ್ಲೂ ನಡೆಯುತ್ತದೆಯೋ, ಇಲ್ಲವೋ? ಅನ್ನೋದು ಖಚಿತವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ

    ಟ್ರಂಪ್‌ ಉತ್ತರವೇನು?
    ರೇಡಿಯೋವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಖುದ್ದು ಮಾತನಾಡಿದ ಟ್ರಂಪ್‌, ಇಬ್ಬರೂ ಮಾತುಕತೆಗೆ ತಯಾರಿ ನಡೆಸುತ್ತಿದ್ದಾರೆ. ದ್ವಿಪಕ್ಷೀಯ ಸಭೆಯಲ್ಲಿ ಏನಾಗುತ್ತದೆ ಎಂಬುದನ್ನು ನಾನು ಕಾದು ನೋಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

    ಶ್ವೇತಭವನದಲ್ಲಿ ಏನಾಗಿತ್ತು?
    ಇತ್ತೀಚೆಗಷ್ಟೇ ಶ್ವೇತಭವನದಲ್ಲಿ ಉಕ್ರೇನ್‌ ಮತ್ತು ಯುರೋಪಿಯನ್‌ ಒಕ್ಕೂಟದ ನಾಯಕರ ಜೊತೆ ಟ್ರಂಪ್‌ ಸಭೆ ನಡೆಸಿದ್ದರು. ಸಭೆ ಮುಗಿದ ಬಳಿಕ ಟ್ರಂಪ್‌ ಈ ಎಲ್ಲಾ ನಾಯಕರನ್ನು ತನ್ನ ಓವಲ್ ಕಚೇರಿಯ ಕ್ಯಾಬಿನ್‌ಗೆ ಕರೆಸಿ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ನೇರವಾಗಿ ಕರೆ ಮಾಡಿದ್ದರು. ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನೇರ ಮಾತುಕತೆಗಳನ್ನು ಮುಂದುವರಿಸಲು ಪುಟಿನ್‌ಗೆ ಕರೆ ನೀಡಿದ್ದರು. ಇಬ್ಬರು ನಾಯಕರ ಮಧ್ಯೆ ಒಟ್ಟು 40 ನಿಮಿಷಗಳ ಮಾತುಕತೆ ನಡೆದಿತ್ತು. ಈ ವೇಳೆ ಇತ್ತೀಚಿನ ಅಲಾಸ್ಕಾ ಭೇಟಿಯ ಸಮಯದಲ್ಲಿ ಟ್ರಂಪ್ ನೀಡಿದ ಆತಿಥ್ಯ ಮತ್ತು ಅಲಾಸ್ಕಾದಲ್ಲಿ ನಡೆದ ಶೃಂಗಸಭೆಯಲ್ಲಿ ಸಾಧಿಸಿದ ಪ್ರಗತಿಗೆ ಪುಟಿನ್‌ ಟ್ರಂಪ್‌ಗೆ ಧನ್ಯವಾದ ಹೇಳಿದರು. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್‌ – ಬ್ರೋಕರ್‌ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್‌

  • ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

    ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

    ಕೀವ್: ರಷ್ಯಾ ವಿರುದ್ಧದ ಯುದ್ಧದ ನಡುವೆ ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ ನೀಡಿದ್ದಾರೆ.

    ಉಕ್ರೇನ್ ಮೇಲಿನ ಯುದ್ಧ 50 ದಿನಗಳಲ್ಲಿ ಪರಿಹರಿಸದಿದ್ದರೆ, ಮಾಸ್ಕೋದ ಉಳಿದ ವ್ಯಾಪಾರ ಪಾಲುದಾರರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

    ಉಕ್ರೇನಿಯನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಹೇಳಿದ್ದಾರೆ. ಈ ವಾರದ ಕೊನೆಯಲ್ಲಿ ನಡೆಯಲಿರುವ ಪ್ರಮುಖ ಸರ್ಕಾರಿ ಪುನರ್ರಚನೆಗೆ ಇದು ನಾಂದಿ ಹಾಡಿದೆ.

    ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್‌ನ ನಾಯಕತ್ವದ ತಂಡದಲ್ಲಿ ವ್ಯಾಪಕವಾದ ಬದಲಾವಣೆಯನ್ನು ಪ್ರಸ್ತಾಪಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ. ಶ್ಮಿಹಾಲ್ ಅವರ ನಂತರ ಪ್ರಧಾನಿಯಾಗಿ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಆರ್ಥಿಕ ಸಚಿವೆ ಯೂಲಿಯಾ ಸ್ವೈರಿಡೆಂಕೊ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

    2020ರ ಮಾರ್ಚ್ನಲ್ಲಿ ಪ್ರಧಾನಿ ಹುದ್ದೆಯನ್ನು ಶ್ಮಿಹಾಲ್ ಅಲಂಕರಿಸಿದ್ದರು. 1991 ರಲ್ಲಿ ದೇಶದ ಸ್ವಾತಂತ್ರ‍್ಯದ ನಂತರ ಉಕ್ರೇನ್‌ನಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

  • ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

    ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

    ಇಸ್ತಾನ್‌ಬುಲ್‌: ಯುದ್ಧಪೀಡಿತ ರಷ್ಯಾ-ಉಕ್ರೇನ್‌ ನಡುವೆ 2022ರ ಬಳಿಕ 2ನೇ ಸುತ್ತಿನ ಶಾಂತಿ ಮಾತುಕತೆ ಸೋಮವಾರ ಟರ್ಕಿಯ ರಾಜಧಾನಿ ಇಸ್ತಾನ್‌ಬುಲ್‌ನಲ್ಲಿ ನಡೆಯಿತು. ಸಭೆಯು ನಿಗದಿತ ಸಮಯಕ್ಕಿಂತ 2 ಗಂಟೆ ತಡವಾಗಿ ಶುರುವಾದ್ರೂ ಒಂದು ಗಂಟೆಗೆ ಮಾತುಕತೆ ಮುಕ್ತಾಯಗೊಂಡಿತು. ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಕಂಡುಬಂದಿತು.

    ಸಭೆಯ ಆರಂಭದಲ್ಲೇ ಉಕ್ರೇನ್‌ ನಡೆಸಿದ ಡ್ರೋನ್‌ ದಾಳಿ ವಿಚಾರ ಬಲವಾಗಿ ವಿರೋಧಿಸಿದ ರಷ್ಯಾ ಪ್ರತಿನಿಧಿಗಳು, ಉಕ್ರೇನ್‌ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾನುವಾರದ ದಾಳಿಗೆ ತಿರುಗೇಟು ನೀಡುವ ಶಕ್ತಿ ನಮಗೂ ಇದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆಂದು ಚೀನಾದಂಥ ಮಿತ್ರರಾಷ್ಟ್ರಗಳು ನಿರೀಕ್ಷಸಲ್ಲ: ಪಾಕ್‌ ಪ್ರಧಾನಿ

    ರಷ್ಯಾ ಮೇಲೆ ಉಕ್ರೇನ್ ನಡೆಸಿದ ಭೀಕರ ಡ್ರೋನ್ ದಾಳಿಯೇ ಎಲ್ಲದಕ್ಕೂ ಕಾರಣ. ರಷ್ಯಾ ಪ್ರತಿನಿಧಿಗಳು ಉಕ್ರೇನ್‌ನ ಈ ದಾಳಿಯನ್ನು ಬಲವಾಗಿ ವಿರೋಧಿಸಿ, ಷರತ್ತುರಹಿತ ಕದನ ವಿರಾಮ ಮಾತುಕತೆಯನ್ನ ತಿರಸ್ಕರಿಸಿದರು. ʻಆಪರೇಷನ್ ಸ್ಪೈಡರ್ಸ್ ವೆಬ್ʼ ಎಂದು ಹೆಸರಿಸಲಾದ ಈ ರಹಸ್ಯ ಕಾರ್ಯಾಚರಣೆಯಲ್ಲಿ, ಉಕ್ರೇನ್ ಒಂದೂವರೆ ವರ್ಷದಿಂದ ಯೋಜನೆ ರೂಪಿಸಿತ್ತು. ಹೀಗಾಗಿ ಇಸ್ತಾನ್‌ಬುಲ್‌ನಲ್ಲಿ ನಡೆದ ಉಕ್ರೇನ್‌ನೊಂದಿಗಿನ ಶಾಂತಿ ಮಾತುಕತೆಯ ಸಮಯದಲ್ಲಿ ರಷ್ಯಾ ಬೇಷರತ್‌ ಕದನ ವಿರಾಮಕ್ಕೆ ಒಪ್ಪಿಕೊಳ್ಳಲು ನಿರಾಕರಿಸಿದೆ ಎಂದು ಕೈವ್ ಸಂಧಾನಕಾರರು ತಿಳಿಸಿದ್ದಾರೆ.

    ಸೇನಾ ದಾಳಿಯ ವಿಚಾರವಾಗಿ ಉಭಯ ದೇಶಗಳ ಪ್ರತಿನಿಧಿಗಳ ನಡುವಿನ ವಾಗ್ವಾದದಿಂದ ಸಭೆ ಅಪೂರ್ಣಗೊಂಡಿತು. ‘ಕದನ ವಿರಾಮ ಸಂಬಂಧ ಉಭಯ ದೇಶದ ಪ್ರತಿನಿಧಿಗಳ ನಡುವೆ ಮಾತುಕತೆ ನಡೆದಿದೆ. ಸಂಘರ್ಷ ಪರಿಸ್ಥಿತಿಯ ಬಗ್ಗೆ ಮೌಲ್ಯಮಾಪನ ಮಾಡಲಾಗಿದೆ. ಯುದ್ಧ ಕೈದಿಗಳ ಹಸ್ತಾಂತರದ ಬಗ್ಗೆಯೂ ಚರ್ಚಿಸಲಾಗಿದೆ. ಆದರೆ, ಸಂಘರ್ಷ ಕೊನೆಗೊಳಿಸುವ ವಿಷಯವಾಗಿ ಅಂತಿಮ ನಿರ್ಧಾರಕ್ಕೆ ಬಂದಿಲ್ಲ ಎಂದು ಟರ್ಕಿ ವಿದೇಶಾಂಗ ಸಚಿವ ಹಕನ್‌ ಫಿಡಾನ್‌ ತಿಳಿಸಿದ್ದಾರೆ. ಇದನ್ನೂ ಓದಿ: America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

    ಚರ್ಚೆ ವೇಳೆ ರಷ್ಯಾ ಪ್ರತಿನಿಧಿ ಮೆಡಿನ್ಸ್ಕಿ ಅವರು, ಯುದ್ಧದಲ್ಲಿ ಕೊಲಲ್ಪಟ್ಟ 6,000 ಉಕ್ರೇನಿಯನ್ ಸೈನಿಕರ ಶವಗಳನ್ನ ಹಿಂದಿರುಗಿಸುವುದಾಗಿ ತಿಳಿಸಿದರು. ಹಾಗಾಗಿ 2-3 ದಿನಗಳ ಸೀಮಿತ ಕದನ ವಿರಾಮ ಪ್ರಸ್ತಾಪಿಸಲಾಗಿದೆ. ಇದು ಸೈನಿಕರ ಮೃತದೇಹಗಳನ್ನು ಹಸ್ತಾಂತರಿಸುವ ಉದ್ದೇಶ ಮಾತ್ರ ಹೊಂದಿದೆ ಎಂದು ತಿಳಿಸಿದರು.

    ಪರಸ್ಪರ 1,000 ಯುದ್ಧ ಕೈದಿಗಳ ವಿನಿಮಯ ಒಪ್ಪಂದ
    ಉಕ್ರೇನ್‌ ಮತ್ತು ರಷ್ಯಾ ನಡುವೆ ತಲಾ 1,000 ಯುದ್ಧ ಕೈದಿಗಳ ವಿನಿಮಯದ ಕುರಿತು ರಷ್ಯಾ ಮತ್ತು ಉಕ್ರೇನ್ ಒಪ್ಪಂದಕ್ಕೆ ಬಂದಿವೆ. ಮುಂದುವರಿದು… ಯುದ್ಧ ಕೈದಿಗಳ ವಿನಿಮಯಕ್ಕಾಗಿ ಶಾಶ್ವತ ಸಮಿತಿ ರಚನೆಯ ಕುರಿತು ಒಪ್ಪಂದಕ್ಕೆ ಬರಲಾಗಿದೆ. ಇದರಿಂದ ಭವಿಷ್ಯದಲ್ಲಿ ಯುದ್ಧ ಕೈದಿಗಳ ಪ್ರಕ್ರಿಯೆಯನ್ನು ತ್ವರಿತವಾಗಿ ಮತ್ತು ಸರಾಗವಾಗಿ ಪೂರ್ಣಗೊಳಿಸಬಹುದು ಎಂದು ರಷ್ಯಾ ಪ್ರತಿನಿಧಿ ತಿಳಿಸಿದ್ರು.

    ಅಲ್ಲದೇ, ಕ್ರೈಮಿಯಾ, ಡಾನ್‌ಬಾಸ್, ಖೆರ್ಸನ್ ಮತ್ತು ಜಪೊರೊಝೈಗಳನ್ನು ರಷ್ಯಾದ ಪ್ರದೇಶವೆಂದು ಅಂತಾರಾಷ್ಟ್ರೀಯವಾಗಿ ಗುರುತಿಸಬೇಕೆಂದು ಒತ್ತಾಯಿಸಿ ರಷ್ಯಾ ಉಕ್ರೇನ್‌ಗೆ ಶಾಂತಿ ಜ್ಞಾಪಕ ಪತ್ರವನ್ನ ಪ್ರಸ್ತಾಪಿಸಿದೆ ಎಂದು ತಿಳಿದುಬಂದಿದೆ. ಈ ನಡುವೆ ಎರಡೂ ದೇಶಗಳು ಹೊಸ ಕೈದಿಗಳ ವಿನಿಮಯಕ್ಕಾಗಿ ಒಪ್ಪಿಕೊಂಡಿರುವುದಾಗಿ ಹೇಳಿದರು. ಇದನ್ನೂ ಓದಿ: ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

  • ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

    ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

    – ಡ್ರೋನ್ ದಾಳಿ ಖಚಿತಪಡಿಸಿದ ರಷ್ಯಾ

    ಕೀವ್: ರಷ್ಯಾದ 4 ವಾಯುನೆಲೆ (Russia Airbase) ಮೇಲೆ ಭಾನುವಾರ ಉಕ್ರೇನ್ ಡ್ರೋನ್ ದಾಳಿ (Ukraine Drone Attack) ನಡೆಸಿದ್ದನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ್ದಾರೆ.

    ರಷ್ಯಾದಲ್ಲಿ ಉಕ್ರೇನ್ ಡ್ರೋನ್ ದಾಳಿ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಷ್ಯಾದ ಮೇಲೆ ನಡೆಸಿದ ಬೃಹತ್ ಡ್ರೋನ್ ದಾಳಿಯ ಹಿಂದಿನ ಕಾರಣಗಳು ಮತ್ತು ಗುರಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!

    ಈ ದಾಳಿ ರಷ್ಯಾದ ಯುದ್ಧ ಸಾಮರ್ಥ್ಯವನ್ನು ಕುಗ್ಗಿಸುವ ಮತ್ತು ಯುದ್ಧದ ಪರಿಣಾಮಗಳನ್ನು ರಷ್ಯಾ ಕೂಡ ಅನುಭವಿಸುವಂತೆ ಮಾಡುವ ಉದ್ದೇಶವನ್ನು ಹೊಂದಿತ್ತು. ‘ಉಕ್ರೇನ್ ಸ್ಪೈಡರ್ ವೆಬ್’ ಕಾರ್ಯಾಚರಣೆಯಲ್ಲಿ 117 ಡ್ರೋನ್‌ಗಳನ್ನು ಬಳಕೆ ಮಾಡಲಾಗಿದೆ. ಉಕ್ರೇನ್ ನಡೆಸಿದ ಭೀಕರ ಡ್ರೋನ್ ದಾಳಿಯಲ್ಲಿ ರಷ್ಯಾದ 40ಕ್ಕೂ ಹೆಚ್ಚು ಸೇನಾ ವಿಮಾನಗಳು ನಾಶಗೊಂಡಿವೆ. ಉಕ್ರೇನ್‌ನ ಭದ್ರತಾ ಸೇವೆ ಮತ್ತು ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

    ಕಾರ್ಯಾಚರಣೆಯ ಸಿದ್ಧತೆ ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ನಡೆಯಿತು ಮತ್ತು ಯೋಜನೆ, ಸಂಘಟನೆ ಮತ್ತು ಪ್ರತಿಯೊಂದು ವಿವರವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲಾಗಿದೆ. ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಮತ್ತು ರಷ್ಯಾದ ಆಕ್ರಮಣವನ್ನು ಎದುರಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಝೆಲೆನ್ಸ್ಕಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

  • ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಮುಂದಾದ ಉಕ್ರೇನ್

    ಬ್ಲೂ ಫಿಲ್ಮ್ ವೀಕ್ಷಣೆ, ಚಿತ್ರೀಕರಣ ಕಾನೂನುಬದ್ಧಗೊಳಿಸಲು ಮುಂದಾದ ಉಕ್ರೇನ್

    ಕೀವ್: ಕಳೆದ 3 ವರ್ಷಗಳಿಂದ ರಷ್ಯಾ (Russia) ಜೊತೆಗೆ ಉಕ್ರೇನ್ (Ukraine) ಯುದ್ಧದಲ್ಲಿ ತೊಡಗಿಕೊಂಡಿದೆ. ಹೀಗಾಗಿ ತನ್ನ ಸೇನೆಯ ಖರ್ಚು ಸೇರಿ ಯುದ್ಧದ ವೆಚ್ಚ ಭರಿಸಲು ನೀಲಿ ಚಿತ್ರಕ್ಕೆ (Blue Film) ಕಾನೂನು ಮಾನ್ಯತೆ ನೀಡಲು ಉಕ್ರೇನ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ತನ್ನ ದೇಶದಲ್ಲಿ ನೀಲಿ ಚಿತ್ರ ಚಿತ್ರೀಕರಣ, ಪ್ರಸಾರ ಮತ್ತು ವೀಕ್ಷಣೆಗೆ ಕಾನೂನು ಮಾನ್ಯತೆ ನೀಡಲು ಉಕ್ರೇನ್ ಮುಂದಾಗಿದ್ದು, ಈ ಹಿನ್ನೆಲೆ ಕಾನೂನು ತಿದ್ದುಪಡಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.ಇದನ್ನೂ ಓದಿ: ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್

    ಒಂದು ವೇಳೆ ನೀಲಿ ಚಿತ್ರಕ್ಕೆ ಕಾನೂನು ಮಾನ್ಯತೆ ಸಿಕ್ಕರೆ, ಇದರಿಂದ ಬರುವ ಆದಾಯವನ್ನು ಸೇನೆಯ ಖರ್ಚು, ವೆಚ್ಚವನ್ನು ನೋಡಿಕೊಳ್ಳಲು ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆದರೆ ಕಳೆದ ವರ್ಷ ಈ ಕಾನೂನಿನಡಿ 1,400 ಕೇಸುಗಳು ದಾಖಲಾಗಿದ್ದವು.

    ಆದರೆ ದೇಶದಲ್ಲಿ ಈ ಕಾನೂನು ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಕಾನೂನು ಮಾನ್ಯತೆ ಸಿಕ್ಕಲ್ಲಿ ಉಕ್ರೇನ್‌ಗೆ ವಾರ್ಷಿಕ ನೂರಾರು ಕೋಟಿ ರೂ. ಆದಾಯ ಹರಿದುಬರಲಿದೆ ಎಂದು ಅಂದಾಜಿಸಲಾಗಿದೆ. ಈ ಮೊತ್ತದಿಂದ 24,000 ಮಾನವ ಬಳಕೆ ಡ್ರೋನ್‌ಗಳನ್ನು ಖರೀದಿಸಬಹುದಾಗಿದೆ ಎಂದು ವರದಿಗಳು ತಿಳಿಸಿದೆ.ಇದನ್ನೂ ಓದಿ: ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

  • ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್‌ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು

    ಝೆಲೆನ್ಸ್ಕಿ ತವರೂರು ಕ್ರಿವಿ ರಿಹ್‌ ಮೇಲೆ ರಷ್ಯಾ ದಾಳಿ – 18 ಮಂದಿ ಸಾವು

    ಕೀವ್: ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ (Volodymyr Zelenskyy) ತವರೂರು ಕ್ರಿವಿ ರಿಹ್‌ನ (Kryvyi Rih) ವಸತಿ ಪ್ರದೇಶದ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ. ಇದು ಈ ವರ್ಷದ ಮಾಸ್ಕೋದ ಅತ್ಯಂತ ಮಾರಕ ದಾಳಿಗಳಲ್ಲಿ ಒಂದಾಗಿದೆ.

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿರುವ ಹೊತ್ತಿನಲ್ಲೇ ಈ ದಾಳಿ ನಡೆದಿದೆ. ಅಧ್ಯಕ್ಷ ಝೆಲೆನ್ಸ್ಕಿ ಅವರ ತವರು ನಗರದ ಮೇಲೆ ಶುಕ್ರವಾರ ನಡೆದ ದಾಳಿಯು ವಸತಿ ಬ್ಲಾಕ್‌ಗಳನ್ನು ಹಾನಿಗೊಳಿಸಿದ್ದು, ಭಾರೀ ಬೆಂಕಿಗೆ ಕಾರಣವಾಯಿತು ಎಂದು ಡ್ನಿಪ್ರೊಪೆಟ್ರೋವ್ಸ್ಕ್ ಗವರ್ನರ್ ಸೆರ್ಹಿ ಲೈಸಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಏ.10ರಿಂದ ಅಮೆರಿಕದ ಸರಕುಗಳ ಮೇಲೆ 34% ಆಮದು ಸುಂಕ – ಚೀನಾ ಪ್ರತೀಕಾರದ ಸುಂಕಕ್ಕೆ ದೊಡ್ಡಣ್ಣ ಗರಂ

    ಕನಿಷ್ಠ 50 ಜನರು ಗಾಯಗೊಂಡಿದ್ದಾರೆ ಎಂದು ತುರ್ತು ಸೇವೆಗಳು ತಿಳಿಸಿವೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ಮೂರು ತಿಂಗಳ ಮಗು ಸೇರಿದಂತೆ 30 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲೈಸಾಕ್ ಮಾಹಿತಿ ನೀಡಿದ್ದಾರೆ.

    ಮಾನವ ಹಕ್ಕುಗಳ ತನಿಖಾಧಿಕಾರಿ ಡಿಮಿಟ್ರೋ ಲುಬಿನೆಟ್ಸ್ ಅವರ ಪ್ರಕಾರ, ರಷ್ಯಾದ ಪಡೆಗಳು ದಾಳಿಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಬಳಸಿವೆ. ಅಂತಹ ಶಸ್ತ್ರಾಸ್ತ್ರಗಳು ತಮ್ಮ ಗುರಿಗಳನ್ನು ತಲುಪಲು ಕೆಲವೇ ನಿಮಿಷಗಳನ್ನು ತೆಗೆದುಕೊಳ್ಳುತ್ತವೆ. ಉನ್ನತ ಮಟ್ಟದ ವಾಯು ರಕ್ಷಣೆಯನ್ನು ಹೊರತುಪಡಿಸಿ ಉಳಿದೆಲ್ಲವನ್ನೂ ಹೊಡೆದುರುಳಿಸುವುದು ಕಷ್ಟ. ಇದನ್ನೂ ಓದಿ: ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ – ಉತ್ತರ ಭಾರತದಲ್ಲೂ ಎಫೆಕ್ಟ್‌

  • ರಷ್ಯಾ ವೈಮಾನಿಕ ದಾಳಿಗೆ ಪ್ರತಿಯಾಗಿ ಉಕ್ರೇನ್‌ ಡ್ರೋನ್ ದಾಳಿ – ಮಾಸ್ಕೋದಲ್ಲಿ 3 ಸಾವು, 17 ಮಂದಿಗೆ ಗಾಯ

    ರಷ್ಯಾ ವೈಮಾನಿಕ ದಾಳಿಗೆ ಪ್ರತಿಯಾಗಿ ಉಕ್ರೇನ್‌ ಡ್ರೋನ್ ದಾಳಿ – ಮಾಸ್ಕೋದಲ್ಲಿ 3 ಸಾವು, 17 ಮಂದಿಗೆ ಗಾಯ

    • ಸೌದಿ ದೊರೆ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಭೇಟಿಯಾದ ಝೆಲೆನ್ಸ್ಕಿ

    ಮಾಸ್ಕೋ: ರಷ್ಯಾ (Russia) ವಿರುದ್ಧ ಯುದ್ಧ ಮಾಡುತ್ತಿರುವ ಉಕ್ರೇನ್‍ಗೆ (Ukraine) ಅಮೆರಿಕ ಮಿಲಿಟರಿ ನೆರವು ಸ್ಥಗಿತಗೊಳಿಸಿದೆ. ಈ ಹೊತ್ತಲ್ಲೇ ಉಕ್ರೇನ್‍ಗೆ ರಷ್ಯಾ ಶಾಕ್ ನೀಡಿದೆ. ಉಕ್ರೇನ್‍ನ ವೈಮಾನಿಕ ರಕ್ಷಣಾ ವ್ಯವಸ್ಥೆಯನ್ನು ಟಾರ್ಗೆಟ್ ಮಾಡಿಕೊಂಡು ರಷ್ಯಾ ವೈಮಾನಿಕ ದಾಳಿ ನಡೆಸಿದೆ.

    ಕೀವ್ ಸುತ್ತಮುತ್ತ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ರಷ್ಯಾ ಹಾರಿಸಿದೆ. ಇದಕ್ಕೆ ಉಕ್ರೇನ್ ಕೂಡ ರಷ್ಯಾ ಮೇಲೆ ಪ್ರತಿದಾಳಿಗೆ ಯತ್ನಿಸಿದೆ. ಮಾಸ್ಕೋ ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಇದರಿಂದ ಮಾಸ್ಕೋದ ಹಲವು ಕಟ್ಟಡಗಳಿಗೆ ಹಾನಿಯಾಗಿದೆ. ಕನಿಷ್ಠ ಮೂವರು ಸಾವನ್ನಪ್ಪಿದ್ದು, 17 ಮಂದಿಗಾಯಗೊಂಡಿದ್ದಾರೆ. ಮಾಸ್ಕೋದಲ್ಲಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. 91 ಡ್ರೋನ್ ಹೊಡೆದುರುಳಿಸಿದ್ದೇವೆ ಎಂದು ರಷ್ಯಾ ಹೇಳಿಕೊಂಡಿದೆ.

    ಈ ಬೆಳವಣಿಗೆಗಳ ನಡುವೆ, ಶಾಂತಿ ಪ್ರಯತ್ನಗಳು ನಡೆಯುತ್ತಿವೆ. ಉಕ್ರೇನ್ ಶಾಂತಿ ಒಪ್ಪಂದಕ್ಕಾಗಿ ಭೂಮಿಯನ್ನು ಬಿಡಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಮೂಲಕ ರಷ್ಯಾ ಪರವೇ ನಿಲ್ಲುವ ಸೂಚನೆಯನ್ನು ಅಮೆರಿಕ ನೀಡಿದೆ. ಇನ್ನೂ ಟ್ರಂಪ್ ಕ್ರಮಗಳಿಂದ ನಾವೇನು ಉಬ್ಬಿ ಹೋಗಿಲ್ಲ ಎಂದು ರಷ್ಯಾ ಹೇಳಿಕೊಂಡಿದೆ.

    ಇದರ ನಡುವೆ ಅಮೆರಿಕ ಜೊತೆಗಿನ ಸಂಬಂಧ ಸರಿಪಡಿಸಲು ಮತ್ತು ರಷ್ಯಾದೊಂದಿಗಿನ ನಡೆಯುತ್ತಿರುವ ಯುದ್ಧಕ್ಕೆ ಅನುಕೂಲಕರ ಪರಿಹಾರವನ್ನು ಪಡೆಯಲು, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸೋಮವಾರ (ಮಾರ್ಚ್ 10) ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ಭೇಟಿಯಾಗಿದ್ದರು.

    ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಶ್ವತ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಷರತ್ತುಗಳ ಬಗ್ಗೆ ಅವರು ಚರ್ಚಿಸಿದ್ದಾರೆ. ಇನ್ನೂ ಚರ್ಚೆಯ ಸಮಯದಲ್ಲಿ ಕೈದಿಗಳ ಬಿಡುಗಡೆ ಬಗ್ಗೆ ಝೆಲೆನ್ಸ್ಕಿ ಒತ್ತಿ ಹೇಳಿದ್ದಾರೆ.