Tag: vote

  • ಸ್ವಗ್ರಾಮದ ರೇಷ್ಮೆ ಬೆಳೆಗಾರರ ಸಹಕಾರ ಸಂಘ ಚುನಾವಣೆಯಲ್ಲಿ ಡಿಕೆಶಿ ಮತದಾನ

    ಸ್ವಗ್ರಾಮದ ರೇಷ್ಮೆ ಬೆಳೆಗಾರರ ಸಹಕಾರ ಸಂಘ ಚುನಾವಣೆಯಲ್ಲಿ ಡಿಕೆಶಿ ಮತದಾನ

    ರಾಮನಗರ: ಸ್ವಗ್ರಾಮ ಕನಕಪುರ (Kanakapura) ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ರೇಷ್ಮೆ  (Sericulture) ಬೆಳೆಗಾರರ ರೈತ ಸೇವಾ ಸಹಕಾರ ಬ್ಯಾಂಕ್ ಚುನಾವಣೆಗೆ ಡಿಸಿಎಂ ಡಿಕೆಶಿ (DK Shivakumar) ಮತ ಚಲಾವಣೆ ಮಾಡಿದ್ದಾರೆ.

    ರೇಷ್ಮೆ ಬೆಳೆಗಾರರ ಸಾಲಗಾರರಲ್ಲದ ಕ್ಷೇತ್ರಕ್ಕೆ ಸರತಿ ಸಾಲಿನಲ್ಲಿ ನಿಂತು ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಮತ ಚಲಾಯಿಸಿದ್ದಾರೆ. ಇದನ್ನೂ ಓದಿ:  WPL ನಿಂದ ಆರ್‌ಸಿಬಿ ಟಗರು ಪುಟ್ಟಿ ಶ್ರೇಯಾಂಕ ಹೊರಕ್ಕೆ?

    ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮೂರಲ್ಲಿ 40 ವರ್ಷಗಳ ಬಳಿಕ ರೇಷ್ಮೆ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ಕಾರ್ಯಕರ್ತರು ನಮಗೋಸ್ಕರ ದುಡಿದಿದ್ದಾರೆ. ಇವರೆಲ್ಲ ನಮಗೆ ಚುನಾವಣೆ ಮಾಡಿದ್ದರು. ಈಗ ನಾವು ಅವರಿಗೆ ಚುನಾವಣೆ ಮಾಡೋಕೆ ಬಂದಿದ್ದೇವೆ. ನಮ್ಮೂರಿಗೆ ಬಂದು ಮತ ಚಲಾವಣೆ ಮಾಡಿದ್ದೇನೆ. ಸಹಕಾರ ಸಂಘಗಳು ಬೆಳೆಯಬೇಕು, ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೂವರು ಆಪ್‌ ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ – ದೆಹಲಿಯಲ್ಲಿ ಟ್ರಿಪಲ್‌ ಎಂಜಿನ್‌ ಸರ್ಕಾರ ಬರುತ್ತಾ?

  • ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಬರಲು ಸಾಧ್ಯವಿಲ್ಲ – ಪೊಲೀಸರಿಗೆ ಚಂದ್ರಶೇಖರ ಶ್ರೀ ಪತ್ರ

    ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಬರಲು ಸಾಧ್ಯವಿಲ್ಲ – ಪೊಲೀಸರಿಗೆ ಚಂದ್ರಶೇಖರ ಶ್ರೀ ಪತ್ರ

    ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಪಡೆದಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು (Chandrashekar Swamiji) ಅನಾರೋಗ್ಯದ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ.

    ಶ್ರಿಗಳು ಉಪ್ಪಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಬರೆದ ಪತ್ರದಲ್ಲಿ, ನಾನು ಮಾರಕ ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ. ವೈದ್ಯರು 10 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ. ಡಿ.18ರಂದು ವಿಚಾರಣೆಗೆ ಹಾಜರಾಗಲು ಸಿದ್ಧನಿದ್ದೇನೆ. ಅಷ್ಟರೊಳಗೆ ವಿಚಾರಣೆ ನಡೆಸುವುದು ಅವಶ್ಯವೆನಿಸಿದಲ್ಲಿ ಮಠಕ್ಕೆ ಬರಬಹುದು. ಮಠಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಲು ಅಭ್ಯಂತರವಿಲ್ಲ. ಇಂದು (ಸೋಮವಾರ) ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಲಾಗಿದೆ.

    ಚಂದ್ರಶೇಖರ ಸ್ವಾಮೀಜಿ ಹೇಳಿದ್ದೇನು?
    ನಗರದ ಫ್ರೀಡಂ ಪಾರ್ಕ್‍ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ (Muslims) ಮತದಾನ (Vote) ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ ಎಂದಿದ್ದರು.

    ದೇಶದಲ್ಲಿ ವಕ್ಫ್ ಮಂಡಳಿಯೇ (Waqf Board) ಇಲ್ಲದಂತೆ ಮಾಡಬೇಕು. ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

    ಈ ವಿಚಾರವಾಗಿ ಸೈಯ್ಯದ್ ಅಬ್ಬಾಸ್ ಎಂಬವರು ಸ್ವಾಮೀಜಿ ಹೇಳಿಕೆಯನ್ನು ಖಂಡಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಎನ್‍ಎಸ್ ಸೆಕ್ಷನ್ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

  • ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ – ಚಂದ್ರಶೇಖರ ಸ್ವಾಮೀಜಿ ಯೂಟರ್ನ್‌

    ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ – ಚಂದ್ರಶೇಖರ ಸ್ವಾಮೀಜಿ ಯೂಟರ್ನ್‌

    – ವಕ್ಫ್‌ ಬ್ಯಾನ್‌ ಮಾಡಿ ಅಂದೇ ಇಲ್ಲ
    – ಸ್ವಾಮೀಜಿ ಬೆನ್ನಿಗೆ ನಿಂತ ಬಿಜೆಪಿ

    ಬೆಂಗಳೂರು: ಭಾರತ ಸರ್ವಧರ್ಮಗಳ ದೇಶ. ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಸಮುದಾಯದ ಮದುವೆಗಳಿಗೆ ಹೋಗ್ತಿನಿ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekar Swamiji) ಯೂಟರ್ನ್‌ ಹೊಡೆದಿದ್ದಾರೆ.

    ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಶೇಖರ ಸ್ವಾಮೀಜಿಗೆ ಉಪ್ಪಾರಪೇಟೆ ಪೊಲೀಸರಿಂದ ನೊಟೀಸ್ ಹೊರಡಿಸಿದ್ದಾರೆ. ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದ್ದಾರೆ. ಈ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಸ್ವಾಮೀಜಿ ಮಾತನಾಡಿದ್ದಾರೆ. ಇದನ್ನೂ ಓದಿ: Cyclone Fengal | ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು

    ಜೈಲಿಗೆ ಹಾಕ್ತರಾ? ಹಾಕ್ಲಿ ಬಿಡಿ, ಅಲ್ಲೇ ಇರ್ತಿನಿ. ದೇವರ ಮೇಲೆ ಬರ ಹಾಕಿದ್ದೀನಿ, ರೈತರ ಪರ ಹೋರಾಟದಲ್ಲಿ ಭಾಗಿಯಾಗಿದ್ದೆ. ರೈತರು ಭೂಮಿ ಕಳೆದುಕೊಳ್ಳದಕ್ಕೆ ವಿರೋಧಿಸಿ ಮಾತಾನಾಡಿದ್ದೆ. ಮಾತಿನ ಭರಾಟೆಯಲ್ಲಿ ಮುಸ್ಲಿಮರ ಮತದಾನದ ಬಗ್ಗೆ ಹೇಳಿದ್ದೆ. ಅದು ಉದ್ದೇಶ ಪೂರ್ವಕವಾಗಿ ಹೇಳಿದ ಮಾತಲ್ಲ. ಆ ಬಗ್ಗೆ ಮರುದಿನವೇ ಪತ್ರಿಕಾ ಹೇಳಿಕೆ ನೀಡಿದ್ದೆ. ಇದನ್ನ ಇಲ್ಲಿಗೆ ಬಿಟ್ಟು ಬಿಡಿ, ಭಾರತ ಎಲ್ಲ ಧರ್ಮದವರ ದೇಶ. ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನು ಸಹ ಮುಸ್ಲಿಂ ಸಮುದಾಯದ ಮದುವೆಗಳಿಗೆ ಹೋಗ್ತಿನಿ. ಇದಾದ್ಮೇಲೆ ಯಾಕೇ ದೂರು ದಾಖಲಿಸಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಯೂಟರ್ನ್‌ ಹೊಡೆದಿದ್ದಾರೆ.

    ವಿಚಾರಣೆಗೆ ಹೋಗಲ್ಲ, ಅವ್ರೇ ಇಲ್ಲಿಗೆ ಬರಲಿ:
    ನೋಟಿಸ್ ನೀಡಿರೋದು ಗೊತ್ತಿಲ್ಲ, ನನಗೆ ಆರೋಗ್ಯ ಸರಿಯಿಲ್ಲ, ನಾನು ವಿಶ್ರಾಂತಿಯಲ್ಲಿದ್ದೆ. ನಿನ್ನೆ ಕೆಲ ನಾಯಕರು ಬಂದು ನಾವಿದ್ದೇವೆ ಅಂತಾ ಹೇಳಿದ್ರು. ನಾನು ಯಾವುದರ ಬಗ್ಗೆಯೂ ಚಿಂತೆ ಮಾಡ್ತಿಲ್ಲ. ವಕ್ಫ್‌ ಬ್ಯಾನ್‌ ಮಾಡಿ ಅಂತ ನಾನು ಹೇಳೇ ಇಲ್ಲ. ರೈತರ ಭೂಮಿ ರೈತರಿಗೆ ನೀಡಿ ಅಂತಾ ಹೇಳಿದ್ದೇನೆ. ಸರ್ಕಾರ ಯಾಕೇ ಹೀಗೆ ಮಾಡ್ತಿದೆ? ಒಂದು ಸಮುದಾಯದವರನ್ನ ಓಲೈಕೆ ಮಾಡೋದು ಸರಿಯಲ್ಲ. ವಿಚಾರಣೆಗೆ ಹೋಗಲು ಆಗೋಲ್ಲ, ಅವ್ರೇ ಇಲ್ಲೇ ಬಂದ್ರೇ ನನ್ನ ಹೇಳಿಕೆಗೆ ಸ್ಪಷ್ಟನೆ ನೀಡ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವಾರಣಾಸಿ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಬಳಿ ಆಕಸ್ಮಿಕ ಬೆಂಕಿ – 200 ದ್ವಿಚಕ್ರ ವಾಹನಗಳು ಭಸ್ಮ

    ನನಗಿಂತ ಮೊದಲು ಇತಂಹ ಅನೇಕ ಹೇಳಿಕೆಗಳು ಬಂದಿದೆ. ನಾನು ಹೇಳಿದ ಕೂಡ್ಲೇ ಮತದಾನದಿಂದ ಹಿಂದೆ ಸರಿಸೋಕೆ ಆಗುತ್ತಾ? ಅದಕ್ಕೆ ಅಂತಾ ಸಂವಿಧಾನವಿದೆ. ರೈತರಿಗೆ ಒಳ್ಳೆಯದು ಆಗಬೇಕು ಅನ್ನೋದಷ್ಟೇ ನನ್ನ ಉದ್ದೇಶ. ನನ್ನ ಆರೋಗ್ಯ ಸರಿಯಿಲ್ಲ. ಆರ್‌. ಅಶೋಕ್, ಅಶ್ವಥ್ ನಾರಾಯಣ್‌ ಬಂದಿದ್ರು, ನಿಮ್ಮ ಪರವಾಗಿ ಇದ್ದೇವೆ ಅಂತ ಹೇಳಿದ್ರು. ಕಾನೂನಿನಲ್ಲಿ ಏನ್ ಆಗಿತ್ತೋ ನೋಡೋಣ. ಯಾಕ್ ಹೀಗೆ ಮಾಡ್ತಿದ್ದಾರೆ ಗೊತ್ತಿಲ್ಲ. ಮುಂದೇನಾಗುತ್ತೋ, ಆ ದೇವರು ನಡೆಸಿದಂತೆ ಆಗುತ್ತೆ ಎಂದು ನುಡಿದಿದ್ದಾರೆ.

  • ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡ್ಬೇಕು ಅಂದಿದ್ದ ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್‌

    ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡ್ಬೇಕು ಅಂದಿದ್ದ ಚಂದ್ರಶೇಖರ ಸ್ವಾಮೀಜಿಗೆ ನೋಟಿಸ್‌

    – ಡಿ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಗೆ (Chandrashekar Swamiji) ಉಪ್ಪಾರಪೇಟೆ ಪೊಲೀಸರಿಂದ ನೊಟೀಸ್ ಹೊರಡಿಸಿದ್ದಾರೆ. ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದ್ದಾರೆ.

    ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ಹೇಳಿಕೆಯನ್ನು ಖಂಡಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    ದೂರಿನಲ್ಲಿ ಏನಿದೆ?
    ಭಾರತ ದೇಶದ ಪ್ರಜೆಗಳಾದ ನಾವು, ಸಂವಿಧಾನ ಬದ್ದರಾಗಿ ಈ ದೇಶದಲ್ಲಿ ಜೀವನ ಮಾಡುತ್ತಿದ್ದೇವೆ. ಆದರೆ ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದರು. ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

    ಚಂದ್ರಶೇಖರ ಸ್ವಾಮೀಜಿ ಹೇಳಿದ್ದು ಏನು?
    ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ (Vote) ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ. ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು.

    ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ‌ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

  • ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

    ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

     

    ದೂರಿನಲ್ಲಿ ಏನಿದೆ?
    ಭಾರತ ದೇಶದ ಪ್ರಜೆಗಳಾದ ನಾವು, ಸಂವಿಧಾನ ಬದ್ದರಾಗಿ ಈ ದೇಶದಲ್ಲಿ ಜೀವನ ಮಾಡುತ್ತಿದ್ದೇವೆ. ಆದರೆ ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ

    ಚಂದ್ರಶೇಖರ ಸ್ವಾಮೀಜಿ ಹೇಳಿದ್ದು ಏನು?
    ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ(Vote) ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ.

    ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯವಾಗಲಿದೆ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ‌ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

  • ಮತಗಟ್ಟೆ ದತ್ತಾಂಶ ಅಪ್ಲೋಡ್ ಮಾಡುವುದು ಕಷ್ಟ – ಸುಪ್ರೀಂ ಕೋರ್ಟ್‌

    ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಸಂದರ್ಭದಲ್ಲಿ ಚುನಾವಣಾ ಆಯೋಗವು (Election Commission) ತನ್ನ ವೆಬ್‌ಸೈಟ್‌ನಲ್ಲಿ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ಅಪ್‌ಲೋಡ್ ಮಾಡಲು ನಿರ್ದೇಶನಗಳನ್ನು ನೀಡುವಂತೆ ಕೋರಿ ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.

    ಚುನಾವಣಾ ಸಮಿತಿಗೆ ದೊಡ್ಡ ಪ್ರಮಾಣದಲ್ಲಿ ಮಾನವ ಸಂಪನ್ಮೂಲ ಸಜ್ಜುಗೊಳಿಸಲು ಕಷ್ಟವಾಗುತ್ತದೆ. ಐದು ಹಂತದ ಮತದಾನ (Vote) ಮುಕ್ತಾಯವಾಗಿದ್ದು, ಎರಡು ಹಂತಗಳು ಬಾಕಿಯಿರುವುದರಿಂದ ಸದ್ಯಕ್ಕೆ ಅಂತಹ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾ. ದೀಪಂಕರ್ ದತ್ತಾ ನೇತೃತ್ವದ ದ್ವಿಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ:   ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಪ್ರತಿ ಹಂತದ ಲೋಕಸಭೆ ಚುನಾವಣೆ ಮತದಾನ ಮುಕ್ತಾಯದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎಡಿಆರ್‌ ಸಲ್ಲಿಸಿದ ಮನವಿಗೆ ಒಂದು ವಾರದೊಳಗೆ ಉತ್ತರಿಸುವಂತೆ ಕೋರಿ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್ ಜಾರಿ ಮಾಡಿತ್ತು.

    ಅಫಿಡವಿಟ್‌ ಸಲ್ಲಿಸಿದ್ದ ಆಯೋಗ:
    ಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಮತಗಟ್ಟೆವಾರು ಮತದಾನ ಪ್ರಮಾಣವನ್ನು ವೆಬ್‌ಸೈಟ್‌ನಲ್ಲಿ ನಮೂದಿಸಿದರೆ ಅದು ಗೊಂದಲ ಸ್ಥಿತಿಯನ್ನು ನಿರ್ಮಾಣವಾಗಬಹುದು ಎಂದು ಹೇಳಿದ ಆಯೋಗ ಗುರುವಾರ 225 ಪುಟಗಳ ಅಫಿಡವಿಟ್ ಸಲ್ಲಿಸಿತ್ತು. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    ಪ್ರತಿ ಮತಗಟ್ಟೆಯಲ್ಲಿ ಬಿದ್ದ ಮತಗಳ ಸಂಖ್ಯೆಯನ್ನು ತಿಳಿಸುವ ಫಾರಂ 17ಸಿ ಪತ್ರವನ್ನು ಬಹಿರಂಗ ಮಾಡುವಂತೆ ಎಲ್ಲಿಯೂ ನಿಯಮಗಳಿಲ್ಲ. ಸದ್ಯ ಈ 17ಸಿ ಮೂಲ ಫಾರಂಗಳನ್ನು ಸ್ಟ್ರಾಂಗ್‌ ರೂಂನಲ್ಲಿ ಇಡಲಾಗಿದೆ. ಕೇವಲ ಮತಗಟ್ಟೆ ಏಜೆಂಟ್‌ಗೆ ಇದರ ಕಾಪಿಯನ್ನು ಪಡೆಯಲು ಅನುಮತಿ ಇದೆ. ಅರ್ಜಿದಾರ ಕೋರಿದಂತೆ ಮತಗಟ್ಟೆವಾರು ಪೋಲಿಂಗ್ ಪ್ರಮಾಣವನ್ನು ಬಹಿರಂಗಪಡಿಸಿದರೆ ಅದು ದುರ್ಬಳಕೆಯಾಗುವ ಸಂಭವ ಇದೆ. ದತ್ತಾಂಶವನ್ನು ತಿರುಚುವ ಸಂಭವ ಇದೆ. ಇದರಿಂದ ಗೊಂದಲ ಉಂಟಾಗಿ ಇಡೀ ಚುನಾವಣೆ ಪ್ರಕ್ರಿಯೆ ಮೇಲೆ ಜನರಲ್ಲಿ ಅಪನಂಬಿಕೆ ಮೂಡಬಹದು ಎಂಬ ಆತಂಕವನ್ನು ಆಯೋಗ ವ್ಯಕ್ತಪಡಿಸಿತ್ತು.

     

  • ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ!

    ಮತ ಚಲಾಯಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ – ಹಕ್ಕು ಚಲಾಯಿಸಿದ ಮುಕೇಶ್‌ ಅಂಬಾನಿ ಕುಟುಂಬ!

    ಜೈಪುರ: ರಿಲಯನ್ಸ್‌ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರಿಂದು ಕುಟುಂಬಸ್ಥರೊಂದಿಗೆ ಮತಚಲಾಯಿಸಿದರು. ಮುಂಬೈನ ಮಲಬಾರ್ ಹಿಲ್ ಮತಗಟ್ಟೆಯಲ್ಲಿ ಪತ್ನಿ ನೀತಾ ಅಂಬಾನಿ, ಪುತ್ರ ಆಕಾಶ್‌ ಅಂಬಾನಿಯೊಂದಿಗೆ (Akash Ambani) ಬಂದು ಹಕ್ಕು ಚಲಾಯಿಸಿದರು.

    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಕೇಶ್‌ ಅಂಬಾನಿ, ಭಾರತೀಯ ಪ್ರಜೆಯಾಗಿ ಮತದಾನ ಮಾಡಬೇಕಾದದ್ದು ನಮ್ಮ ಕರ್ತವ್ಯ. ಇದು ಪ್ರಜಾಪ್ರಭುತ್ವ ದೇಶ, ಪ್ರತಿಯೊಬ್ಬ ಭಾರತೀಯನೂ ವೋಟ್‌ (Vote) ಮಾಡಬೇಕು ಎಂಬುದು ನನ್ನ ಮನವಿ ಎಂದು ನುಡಿದರು. ಇದೇ ವೇಳೆ, ಭಾರತೀಯ ಪ್ರಜೆಯಾಗಿ ಮತದಾನ ಮಾಡುವುದು ಮುಖ್ಯ. ಏಕೆಂದರೆ ಇದು ನಮ್ಮ ಹಕ್ಕು ಮತ್ತು ಕರ್ತವ್ಯ ಎಂದು ಪತ್ನಿ ನೀತಾ ಅಂಬಾನಿ (Nita Ambani) ಮತದಾನಕ್ಕೆ ಕರೆ ಕೊಟ್ಟರು.

    ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು (ಸೋಮವಾರ) ನಡೆದಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ವರೆಗೂ ಮತದಾನ ನಡೆದಿದೆ. ಇನ್ನೂ 2 ಹಂತದ ಚುನಾವಣೆ ಬಾಕಿಯಿದ್ದು, ಮೇ 25 ರಂದು 6ನೇ ಹಂತ ಹಾಗೂ ಜೂನ್‌ 1ರಂದು 7ನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಜೂನ್‌ 4ರಂದು 7 ಹಂತಗಳ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

    ಮತದಾನ ನಡೆದ ಪ್ರಮುಖ ಕ್ಷೇತ್ರಗಳು:
    ಲಕ್ನೋ, ರಾಯ್ ಬರೇಲಿ, ಅಮೇಥಿ, ಫತೇಪುರ್, ಫೈಜಾಬಾದ್, ಕೈಸರ್‌ಗಂಜ್, ನಾಸಿಕ್, ಪಾಲ್ಘರ್, ಕಲ್ಯಾಣ್, ಥಾಣೆ, ಮುಂಬೈ ಉತ್ತರ ಮತ್ತು ಮಹಾರಾಷ್ಟ್ರದ ಮುಂಬೈ ದಕ್ಷಿಣ, ಬಂಗಾವ್, ಬ್ಯಾರಕ್‌ಪೋರ್, ಹೌರಾ ಮತ್ತು ಪಶ್ಚಿಮ ಬಂಗಾಳದ ಹೂಗ್ಲಿ, ಬಿಹಾರದ ಮುಜಾಫರ್‌ಪುರ, ಸರನ್ ಮತ್ತು ಹಾಜಿಪುರ, ಸುಂದರ್‌ಗಢ, ಒಡಿಶಾದ ಬೋಲಂಗೀರ್ ಮತ್ತು ಕಂಧಮಾಲ್, ಜಾರ್ಖಂಡ್‌ನ ಕೋಡರ್ಮಾ ಮತ್ತು ಹಜಾರಿಬಾಗ್, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ.

    ಚುನಾವಣಾ ಕಣದಲ್ಲಿದ್ದವರು:
    ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ಪಿಯೂಷ್ ಗೋಯಲ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ, ಸಜ್ಜದ್ ಗನಿ ಲೋನ್, ಸಾಧ್ವಿ ನಿರಂಜನ್ ಜ್ಯೋತಿ, ಲಲ್ಲು ಸಿಂಗ್, ಕರಣ್ ಭೂಷಣ್ ಸಿಂಗ್, ಕೀರ್ತಿ ವರ್ಧನ್ ಸಿಂಗ್, ತನುಜ್ ಪೂಧನ್ ಸಿಂಗ್, ನರೇಶ್ ಉತ್ತಮ್ ಪಟೇಲ್, ಉಜ್ವಲ್ ನಿಕಮ್, ರಾಹುಲ್ ಶೆವಾಲೆ, ಅನಿಲ್ ದೇಸಾಯಿ, ವರ್ಷ ಗಾಯಕ್ವಾಡ್, ಸಂಜಯ್ ದಿನ ಪಾಟೀಲ್, ರವೀಂದ್ರ ವೈಕರ್, ಶ್ರೀಕಾಂತ್ ಶಿಂಧೆ, ಹೇಮಂತ್ ಗೋಡ್ಸೆ, ಭಾರತಿ ಪವಾರ್, ಕಪಿಲ್ ಮೊರೇಶ್ವರ್ ಪಾಟೀಲ್, ಸುಭಾಷ್ ರಾಮರಾವ್ ಭಮ್ರೆ, ಶಾಂತನು ಠಾಕೂರ್, ಅರ್ಜುನ್ ಸಿಂಗ್, ಪ್ರಸೂನೆಟ್ ಚಟರ್ಜಿ, ಕಲ್ಯಾಣ್ ಬ್ಯಾನರ್ಜಿ, ದೇವೇಶ್ ಚಂದ್ರ ಠಾಕೂರ್, ಅಲಿ ಅಶ್ರಫ್ ಫಾತ್ಮಿ, ಅಜಯ್ ನಿಶಾದ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಚಿರಾಗ್ ಪಾಸ್ವಾನ್, ಜುಯಲ್ ಓರಮ್, ದಿಲೀಪ್ ಟಿರ್ಕಿ, ಅಚ್ಯುತ ಸಮಂತಾ, ಸಂಗೀತಾ ಕುಮಾರಿ ಸಿಂಗ್ ಡಿಯೋ, ಅನ್ನಪೂರ್ಣ ದೇವಿ ಮತ್ತು ಜೈ ಪ್ರಕಾಶ್ ಭಾಯಿ ಪಟೇಲ್ ಸೇರಿದಂತೆ ಹಲವಾರು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದರು.

  • ಲೋಕಸಭೆಗೆ ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್

    ಲೋಕಸಭೆಗೆ ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್

    ನವದೆಹಲಿ: ಇಂದು ಲೋಕಸಭೆಗೆ ಐದನೇ ಹಂತದಲ್ಲಿ (Loksabha Elections 2024) ಮತದಾನ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

    ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ.

    ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ 2024: 5ನೇ ಹಂತದಲ್ಲಿರುವ ಪ್ರಮುಖ ಅಭ್ಯರ್ಥಿಗಳು

    ಪ್ರಮುಖ ನಾಯಕರು, ನಟರಿಂದ ಮತದಾನ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್, ರಾಯ್ ಬರೇಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್, ಮುಂಬೈ ಉತ್ತರ ಬಿಜೆಪಿ ಅಭ್ಯರ್ಥಿ ಪಿಯೂಷ್ ಗೊಯೇಲ್, ಅಮಿರ್ ಪುರ್ ನಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹಾಗೂ ಕೈಸರಗಂಜ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಈಗಾಗಲೇ ಮತದಾನ ಮಾಡಿದ್ದಾರೆ. ಇನ್ನು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಕುಟುಂಬ ಸಮೇತರಾಗಿ ಮುಂಬೈನಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

  • ವೀಡಿಯೋ: ಕಾಲಿನ ಮೂಲಕ ಮತಚಲಾಯಿಸಿ ಮಾದರಿಯಾದ ಯುವಕ!

    ವೀಡಿಯೋ: ಕಾಲಿನ ಮೂಲಕ ಮತಚಲಾಯಿಸಿ ಮಾದರಿಯಾದ ಯುವಕ!

    ಗಾಂಧಿನಗರ: ಏಳು ಹಂತಗಳ ಲೋಕಸಭಾ ಚುನಾವಣೆಯ (Loksabha Elections 2024) ಮೂರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಲು ಆಗಮಿಸಿದ ಸ್ಫೂರ್ತಿಯ ಪ್ರಸಂಗವೊಂದು ಎಲ್ಲರ ಗಮನ ಸೆಳೆದಿದೆ.

    ಯುವಕ ಅಂಕಿತ್‌ ಸೋನಿಯವರು (Ankit Soni) ಮಂಗಳವಾರ ನಡೆದ ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ದೇಶಾದ್ಯಂತ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಮತದಾರರು ಹೊರಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದರು.

    ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್‌ ಶಾಕ್‌ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದೆ. ಜೊತೆಗೆ ಕಂಪ್ಯೂಟರ್‌ ಸೈನ್ಸ್‌ ಕೋರ್ಸ್‌ ಮಾಡಿ MBA ಮಾಡಿದೆ. ಕಳೆದ ಹಲವು ವರ್ಷಗಳಿಂದ ನಾನು ಹೀಗೆಯೇ ಮತ ಚಲಾಯಿಸುತ್ತಿದ್ದೇನೆ. ಜನರು ಹೊರಗೆ ಬಂದು ತಮ್ಮ ಅಮೂಲ್ಯವಾದ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಂತ್ರಸ್ತೆಯನ್ನು ತೋಟದ ಮನೆಯಿಂದ ರಕ್ಷಿಸಿದ್ದು ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ಮೂರನೇ ಹಂತದ ಲೋಕಸಭೆ ಚುನಾವಣೆಯು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ನಡೆಯುತ್ತಿದೆ.

  • ಎರಡನೇ ಹಂತದ ಚುನಾವಣೆ – ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಜೊತೆಗೆ ಬಿಎಂಟಿಸಿ ನಿಯೋಜನೆ

    ಎರಡನೇ ಹಂತದ ಚುನಾವಣೆ – ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ಜೊತೆಗೆ ಬಿಎಂಟಿಸಿ ನಿಯೋಜನೆ

    – ನೈರುತ್ಯ ರೈಲ್ವೆಯಿಂದ 5 ವಿಶೇಷ ರೈಲುಗಳ ಓಡಾಟ

    ಬೆಂಗಳೂರು: ಮಂಗಳವಾರ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ (Lok Sabha Election 2024) ನಡೆಯುವ ಹಿನ್ನೆಲೆ ಉತ್ತರ ಕರ್ನಾಟಕ ಭಾಗಗಳಿಗೆ ಕೆಎಸ್‌ಆರ್‌ಟಿಸಿ (KSRTC) ಹೆಚ್ಚುವರಿ ಬಸ್‌ಗಳ ಜೊತೆಗೆ ಬಿಎಂಟಿಸಿ (BMTC) ಬಸ್‌ಗಳನ್ನು ನಿಯೋಜಿಸಿದ್ದು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದೆ.

    ಮತದಾನ (Vote) ಮಾಡುವ ಸಲುವಾಗಿ ಸೋಮವಾರ ಬೆಳಗ್ಗೆಯಿಂದಲೇ ಪ್ರಯಾಣಿಕರು ತಮ್ಮ ಊರುಗಳತ್ತ ತೆರಳುತ್ತಿದ್ದು, ಭಾನುವಾರವೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸಾಕಷ್ಟು ಜನ ತೆರಳಿದ್ದಾರೆ. ಈ ಹಿನ್ನೆಲೆ ಮತದಾರರ ಅನುಕೂಲಕ್ಕಾಗಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲಾಗಿದೆ. ಇದನ್ನೂ ಓದಿ: ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು – ಸಂತ್ರಸ್ತೆಯ ಆರೋಪ ಏನು?

    ಮೆಜೆಸ್ಟಿಕ್ (Mejestic) ಸುತ್ತಮುತ್ತ ಇಂದು ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇದ್ದು, ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಇಂದು ಸಂಜೆಯ ವೇಳೆಗೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಇಂದು ಸಹ ಬಹಳಷ್ಟು ಜನ ಮತದಾನಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಂಟ್ವಾಳದಲ್ಲಿ ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

    ಮತದಾನಕ್ಕೆ ಒಳಪಡುವ ಜಿಲ್ಲೆಗಳಿಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ಕಲ್ಪಿಸಲಾಗಿದೆ. ವಿಜಯಪುರ, ಹೊಸಪೇಟೆ, ಹುಬ್ಬಳ್ಳಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಿಗೆ ವಿಶೇಷ ರೈಲು (Train) ಸಂಚರಿಸಲಿದ್ದು, ನೈರುತ್ಯ ರೈಲ್ವೆಯಿಂದ ಒಟ್ಟು 5 ವಿಶೇಷ ರೈಲುಗಳು ಓಡಾಟ ನಡೆಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸಂಚಾರ ಕಲ್ಪಿಸಲಾಗಿದೆ. ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ