Tag: Voter Adhikar Yatra

  • ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

    ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

    ಪಾಟ್ನಾ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ (Reservation) ಕೋಟಾವನ್ನು 85%ಗೆ ಏರಿಕೆ ಮಾಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಹೇಳಿದ್ದಾರೆ.

    ಬಿಹಾರದ (Bihar) ಮೋತಿಹಾರಿಯಲ್ಲಿ (Motihari) ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯ (Voter Adhikar Yatra) ಅಂಗವಾಗಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ (Samvidhaan Suraksha Samelan) ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು ಎಂದು ಹೇಳಿದರು. ಈಗ ಮತ ಕಳ್ಳತನ, ಮುಂದೆ ಸರ್ಕಾರದ ಕ್ರಮಗಳು ಕ್ರಮೇಣ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಬಹುದು. ಮೊದಲು, ಅವರು ನಿಮ್ಮ ಮತವನ್ನು, ನಂತರ ನಿಮ್ಮ ಪಡಿತರವನ್ನು, ನಂತರ ನಿಮ್ಮ ಪಿಂಚಣಿಯನ್ನು ಮತ್ತು ಅಂತಿಮವಾಗಿ ನಿಮ್ಮ ಆಸ್ತಿಗಳನ್ನು ಕಸಿದುಕೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಸರ್ವಾಧಿಕಾರದಿಂದ ಬದಲಾಯಿಸಲಾಗುತ್ತದೆ ಎಂದರು. ಇದನ್ನೂ ಓದಿ: ಇನ್ಮುಂದೆ ಎಲ್ಲ ಯುದ್ಧ ನೌಕೆಗಳನ್ನು ಭಾರತದಲ್ಲೇ ತಯಾರಿಸಲಾಗುತ್ತದೆ: ರಾಜನಾಥ್ ಸಿಂಗ್

    ಇದೇ ವೇಳೆ ಮೀಸಲಾತಿ ಸೌಲಭ್ಯಗಳನ್ನು ಹೆಚ್ಚಿಸುವ ತಮ್ಮ ಪಕ್ಷದ ಭರವಸೆಯನ್ನು ಪುನರುಚ್ಛರಿಸಿದ ತೇಜಸ್ವಿ ಯಾದವ್, ‘ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುತ್ತೇವೆ ಎಂದರು. ಅಂತೆಯೇ ಜನರ ಹಕ್ಕುಗಳ ಅಡಿಪಾಯ ಸಂವಿಧಾನ ಎಂದು ಕರೆದ ತೇಜಸ್ವಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸಿದರೆ ಅಧಿಕಾರದಲ್ಲಿರುವವರನ್ನು ತೆಗೆದುಹಾಕುವಂತೆ ನಾಗರಿಕರನ್ನು ಒತ್ತಾಯಿಸಿದರು. ಇದನ್ನೂ ಓದಿ: ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

    ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ಅವರು, ಚಾಚಾ ಸಿಲುಕಿಕೊಂಡಿದ್ದಾರೆ. ಅವರು ಮೊದಲಿನಂತೆಯೇ ಇಲ್ಲ. ಅವರು ಇನ್ನು ಮುಂದೆ ಮುಖ್ಯಮಂತ್ರಿಯಾಗುವುದಿಲ್ಲ ಎಂದರು. ಇದೇ ವೇಳೆ, ಇವರು ನನ್ನ ದೇಹದಲ್ಲೂ ಹರಿಯುತ್ತಿರುವುದು ಲಾಲೂ ಪ್ರಸಾದ್ ಯಾದವ್ ಅವರ ರಕ್ತ ಎಂಬುದನ್ನು ಮರೆತಿದ್ದಾರೆ. ಲಾಲೂ ಜಿ ಸಕ್ರಿಯವಾಗಿಲ್ಲದಿದ್ದರೂ ಅವರ ಪರವಾಗಿ ನಾನು ಹೋರಾಡುತ್ತೇನೆ. ಲಾಲೂ ಪ್ರಸಾದ್ ಯಾದವ್ ತಗ್ಗಿರಬಹುದು. ಅವರ ಮಕ್ಕಳಾದ ನಾವು ಎದ್ದಿದ್ದೇವೆ. ನಾವು ಹೋರಾಟಗಾರರು. ಎಲ್ಲರೂ ಒಂದಾಗಿ. ಇಲ್ಲದಿದ್ದರೆ, ಅವರು ನಿಮ್ಮ ಅಸ್ತಿತ್ವವನ್ನು ಕೊನೆಗೊಳಿಸುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

  • ಪಾಟ್ನಾದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ

    ಪಾಟ್ನಾದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ

    ಪಾಟ್ನಾ: ಬಿಹಾರ ಚುನಾವಣಾ ಕಣ ರಣಾಂಗಣವಾಗಿ ಮಾರ್ಪಟ್ಟಿದೆ. ರಾಹುಲ್ ಗಾಂಧಿಯ ಮತದಾರರ ಅಧಿಕಾರ ಯಾತ್ರೆಯಲ್ಲಿ (Voter Adhikar Yatra) ಪ್ರಧಾನಿ ಮೋದಿಯವ್ರನ್ನು (PM Modi) ನಿಂದಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ.

    ರಸ್ತೆಯಲ್ಲೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಬಿಜೆಪಿಯ ಪ್ರತಿಭಟನಾ (BJP Protest Rally) ಮೆರವಣಿಗೆ ಬಿಹಾರ ಕಾಂಗ್ರೆಸ್ ಕಚೇರಿ ಸದಾಕತ್ ಆಶ್ರಮ ಬಳಿ ಸಾಗುವಾಗ ನಡುವೆ ಘರ್ಷಣೆ ಸಂಭವಿಸಿದೆ. ಇದನ್ನೂ ಓದಿ: ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    ಮೊದಲು ವಾಗ್ವಾದ ಏರ್ಪಟ್ಟಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿ ಪರಸ್ಪರ ಕೋಲಿನಿಂದ ಹೊಡೆದುಕೊಂಡಿದ್ದಾರೆ. ನಂತರ ಕಲ್ಲು ತೂರಾಟ ಕೂಡ ನಡೆದಿದೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ; ರಾಜಣ್ಣನಂತೆ ವಜಾ ಮಾಡ್ತೀರಾ – ರಾಗಾಗೆ ಅಶೋಕ್ ಸವಾಲ್

    ಕಾಂಗ್ರೆಸ್ ಕಚೇರಿಯ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು ಎಂದು ಬಿಜೆಪಿ ಕಾರ್ಯಕರ್ತರು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನೂ ಓದಿ: SITಯಿಂದ ತಿಮರೋಡಿ, ಚಿನ್ನಯ್ಯ ವಿಚಾರಣೆ – ಸಮೀರ್ ಆದಾಯ ಮೂಲ ಕೆದಕಿದ ಖಾಕಿ, ಇನ್ನಷ್ಟು ರಹಸ್ಯ ಬಯಲು!

  • ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ.ಶಿವಕುಮಾರ್

    ಬಿಹಾರದ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ.ಶಿವಕುಮಾರ್

    ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ‘ವೋಟ್ ಅಧಿಕಾರ ಯಾತ್ರೆ’ ದೇಶದ ಪಾಲಿನ ಗೇಮ್ ಚೇಂಜರ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ್ಣಿಸಿದರು.

    ಬಿಹಾರದ ಅರಾರಿಯಾದಲ್ಲಿ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಬಿಹಾರದ ವರೆಗೆ ಧ್ವನಿ ಎತ್ತಿರುವ ವಿಚಾರದ ಬಗ್ಗೆ ಇಡೀ ದೇಶವೇ ಚರ್ಚಿಸುತ್ತಿದೆ. ರಾಹುಲ್ ಗಾಂಧಿ ಅವರು ತಮಗಾಗಿ ಈ ಹೋರಾಟ ಮಾಡುತ್ತಿಲ್ಲ. ಸಂವಿಧಾನದತ್ತವಾಗಿ ದೇಶದ ಜನಸಾಮಾನ್ಯರಿಗೆ ಸಿಕ್ಕಿರುವ ಹಕ್ಕಿನ ರಕ್ಷಣೆಗೆ ಹೋರಾಡುತ್ತಿದ್ದಾರೆ ಎಂದು ತಿಳಿಸಿದರು.

    ನಮ್ಮ ರಾಜ್ಯದಲ್ಲಿ ಏನಾಗಿದೆ ಎಂದು ನನಗೆ ಗೊತ್ತಿದೆ. ಮತದಾರರು ತಮ್ಮ ಹಕ್ಕನ್ನು ಪಡೆಯಲು ಅವಕಾಶ ಮಾಡಿಕೊಟ್ಟಿರುವ ಸುಪ್ರೀಂ ಕೋರ್ಟ್ ಬಗ್ಗೆ ನನಗೆ ಹೆಮ್ಮೆ ಇದೆ. ಬಿಹಾರದ ಜನ ಬದಲಾವಣೆ ಬಯಸಿದ್ದಾರೆ. ಮಹಾಘಟಬಂಧನ ಬಯಸಿದ್ದಾರೆ. ಇಲ್ಲಿನ ಯುವಕರು ಕೂಡ ಬೀದಿಗಿಳಿದು ಬೆಂಬಲ ನೀಡುತ್ತಿದ್ದಾರೆ. ಯುವಕರು ಬಹು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುತ್ತಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

    ನಮ್ಮ ಮಹಾಘಟಬಂಧನ ನೀಡಿರುವ ಗ್ಯಾರಂಟಿಗಳು ಜನರಿಗೆ ನೆರವಾಗಲಿದ್ದು, ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. ನಾವು ಅಧಿಕಾರಕ್ಕೆ ಬಂದ ಎಲ್ಲಾ ರಾಜ್ಯಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಕಳೆದ ಬಾರಿ ಮಹಾಘಟಬಂಧನ ಅಲ್ಪ ಅಂತರದಲ್ಲಿ ಸೋತಿತ್ತು. ಈ ಬಾರಿ ಗೆದ್ದೇ ಗೆಲ್ಲುವ ವಿಶ್ವಾಸ ನನಗಿದೆ. ಈ ಬಾರಿ ಬಿಹಾರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಜಕೀಯ
    ಧರ್ಮಸ್ಥಳದ ವಿಚಾರವಾಗಿ ಕೇಳಿದಾಗ, ಈ ವಿಚಾರವಾಗಿ ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ. ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಅವರು ಬಾಯಿ ಮುಚ್ಚಿಕೊಳ್ಳಬೇಕು. ಬಿಜೆಪಿಯಲ್ಲಿ ಎರಡು ಬಣಗಳಿವೆ. ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ. ಅವರು ತಮ್ಮ ವೈಫಲ್ಯಗಳನ್ನು ನಮ್ಮ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಸತ್ಯಾಂಶವನ್ನು ಜನರ ಮುಂದಿಡುತ್ತಿದ್ದೇವೆ ಎಂದು ಹೇಳಿದರು.