Tag: voter data

  • ಚಿಲುಮೆ ವಿರುದ್ಧ ಕೇಸ್‌: ತನಿಖೆ ನಡೆಸಲು ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಚುನಾವಣಾ ಆಯೋಗ

    ಚಿಲುಮೆ ವಿರುದ್ಧ ಕೇಸ್‌: ತನಿಖೆ ನಡೆಸಲು ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಚುನಾವಣಾ ಆಯೋಗ

    ಬೆಂಗಳೂರು: ವೋಟರ್ ಐಡಿ ಹಗರಣಕ್ಕೆ(Voter Data Theft Case) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ(Karnataka Government) ಯಾವುದೇ ತನಿಖೆಗೆ ಆದೇಶ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

    ಚಿಲುಮೆ(Chilume) ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಚುನಾವಣಾ ಆಯೋಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಏನೇ ಅಕ್ರಮ ನಡೆದರೂ ಚುನಾವಣಾ ಆಯೋಗಕ್ಕೆ(Election Commission) ಮಾತ್ರ ತನಿಖೆ ನಡೆಸುವ ಅಧಿಕಾರ ಇದೆ ಎಂದು ಹೇಳಿದೆ.

    ಹೇಳಿಕೆಯಲ್ಲಿ ಏನಿದೆ?
    ಸರ್ಕಾರ ಮತದಾರರ ಮಾಹಿತಿ ಕಲೆ ಹಾಕಿದ ಖಾಸಗಿ ಸಂಸ್ಥೆ ವಿರುದ್ಧ ತನಿಖೆಗ ಆದೇಶಿಸಿದ್ದು ಕಾಡುಗೋಡಿ ಮತ್ತು ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ. ಭಾರತದ ಚುನಾವಣಾ ಆಯೋಗ ಸ್ವತಂತ್ರ ಅಂಗವಾಗಿದ್ದು ಮತದಾರರ ಪಟ್ಟಿಗಳ ತಯಾರಿ, ಪ್ರಕಟಣೆ ಮತ್ತು ಪರಿಷ್ಕರಣೆ ಕೈಗೊಳ್ಳುತ್ತದೆ.  ಇದನ್ನೂ ಓದಿ: ಚಿಲುಮೆ ಅಕ್ರಮ ಪ್ರಕರಣ – ಪ್ರಮುಖ ಆರೋಪಿ ರವಿಕುಮಾರ್ ಬಂಧನ

    ಭಾರತದ ಚುನಾವಣಾ ಆಯೋಗದ ನಿರ್ದೇಶನದೊಂದಿಗೆ ಎಲ್ಲಾ ಚಟುವಟಿಕೆಗಳನ್ನು ನೇರವಾಗಿ ಅಧೀಕ್ಷಕರ ಅಡಿಯಲ್ಲಿ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಯಾವುದೇ ಪಾತ್ರವನ್ನು ಹೊಂದಿಲ್ಲ.

    ಮತದಾರರ ಪಟ್ಟಿಗಳ ನಿರ್ವಹಣೆ, ಚುನಾವಣೆಗಳನ್ನು ನಡೆಸುವುದು, ಚುನಾವಣಾ ವಿಷಯಗಳಲ್ಲಿ ಅಕ್ರಮ ಆರೋಪ ಬಂದಾಗ ತನಿಖೆ ನಡೆಸಲು ಚುನಾವಣಾ ಆಯೋಗಕ್ಕೆ ಮಾತ್ರ ಅಧಿಕಾರವಿದೆ ಹೊರತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವೋಟರ್‌ ಡೇಟಾ ಹಗರಣ ಆರೋಪ – ಕಾಂಗ್ರೆಸ್‌ ವಿರುದ್ಧ ರಾಜ್ಯ ಮುಖ್ಯಚುನಾವಣಾಧಿಕಾರಿ ಬಿಜೆಪಿ ದೂರು

    ವೋಟರ್‌ ಡೇಟಾ ಹಗರಣ ಆರೋಪ – ಕಾಂಗ್ರೆಸ್‌ ವಿರುದ್ಧ ರಾಜ್ಯ ಮುಖ್ಯಚುನಾವಣಾಧಿಕಾರಿ ಬಿಜೆಪಿ ದೂರು

    ಬೆಂಗಳೂರು: ವೋಟರ್‌ ಡೇಟಾ (Voter Data) ಹಗರಣ ನಡೆದಿದೆ ಎಂದು ಕಾಂಗ್ರೆಸ್‌ (Congress) ಮಾಡಿದ್ದ ಆರೋಪವನ್ನು ಅಲ್ಲಗಳೆದಿರುವ ಬಿಜೆಪಿ (BJP), ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರಿಗೆ ದೂರು ನೀಡಿದೆ.

    ಕಾಂಗ್ರೆಸ್‌ ಆರೋಪಗಳು ದುರುದ್ದೇಶಪೂರಿತವಾಗಿವೆ. ಚುನಾವಣಾ ಆಯೋಗವು 2013 ರಿಂದಲೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಚುನಾವಣಾಧಿಕಾರಿಗೆ ಬಿಜೆಪಿ ಮನವಿ ಮಾಡಿದೆ. ಇದನ್ನೂ ಓದಿ: ವೋಟರ್ ಡೇಟಾ ಹಗರಣ ಆರೋಪ- ಸರ್ಕಾರಕ್ಕೆ ಸಿದ್ದರಾಮಯ್ಯ ವಾರ್ನಿಂಗ್

    ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದು ಕಾಂಗ್ರೆಸ್. 2017-18ರಲ್ಲಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಅವಧಿಯಲ್ಲಿ ಅನುಮತಿ ಕೊಡಲಾಗಿತ್ತು. ಪ್ರಕರಣವನ್ನು ಕಾಂಗ್ರೆಸ್ ದಿಕ್ಕು ತಪ್ಪಿಸುತ್ತಿದೆ. ಏನೇ ಲೋಪ ನಡೆದಿದ್ದರೂ, ಆಯೋಗದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಬಿಜೆಪಿ ಒತ್ತಾಯಿಸಿದೆ.

    ವೋಟರ್‌ ಡೇಟಾ ಹಗರಣ ನಡೆಸಲಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಗಂಭೀರ ಆರೋಪ ಮಾಡಿದೆ. ಬಿಬಿಎಂಪಿ ಅಧಿಕಾರಿಗಳು ಎಂದು ಹೇಳಿಕೊಂಡು ಮತದಾರರಿಂದ ವೈಯಕ್ತಿಕ ಮಾಹಿತಿ ಪಡೆಯಲಾಗಿದೆ ಎಂದು ಆರೋಪಿಸಿತ್ತು. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಇದನ್ನೂ ಓದಿ: ಬ್ಲಾಕ್ ಮನಿಯನ್ನು ವೈಟ್ ಮಾಡಿತಾ ಚಿಲುಮೆ..?- ಡಿಕೆಶಿ ಹೊಸ ಬಾಂಬ್

    Live Tv
    [brid partner=56869869 player=32851 video=960834 autoplay=true]