Tag: Voter ID Scam

  • ಚಿಲುಮೆ ಡೇಟಾ ಅಕ್ರಮ ಪ್ರಕರಣ – ಆರೋಪಿಗಳಾದ IAS ಅಧಿಕಾರಿಗಳ ಅಮಾನತು ಕ್ರಮ ಹಿಂಪಡೆದ ಸರ್ಕಾರ

    ಚಿಲುಮೆ ಡೇಟಾ ಅಕ್ರಮ ಪ್ರಕರಣ – ಆರೋಪಿಗಳಾದ IAS ಅಧಿಕಾರಿಗಳ ಅಮಾನತು ಕ್ರಮ ಹಿಂಪಡೆದ ಸರ್ಕಾರ

    ಬೆಂಗಳೂರು: ಚಿಲುಮೆ ಡೇಟಾ (Chilume) ಅಕ್ರಮ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಐಎಎಸ್ ಅಧಿಕಾರಿಗಳ (IAS Officers) ಅಮಾನತು ಕ್ರಮವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿದೆ.

    ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳಾದ ಶ್ರೀನಿವಾಸ್ ಮತ್ತು ರಂಗಪ್ಪ ಅವರ ಹೆಸರು ಕೇಳಿಬಂದಿತ್ತು. ಇಬ್ಬರ ವಿಚಾರಣೆಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆಗ ಸರ್ಕಾರ ಸೇವೆಯಿಂದ ಅಮಾನತು ಮಾಡಿತ್ತು. ಇದನ್ನೂ ಓದಿ: ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಬೊಮ್ಮಾಯಿ

    ಬಳಿಕ ಸರ್ಕಾರದ ಕ್ರಮವನ್ನು ಇಬ್ಬರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಇದೀಗ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನು ಸೇವೆಗೆ ಹೊಸ ಸ್ಥಾನಗಳಿಗೆ ನಿಯೋಜನೆ ಮಾಡಿದೆ.

    ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಶ್ರೀನಿವಾಸ್‌ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಇನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ – ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಮತದಾರ ಪಟ್ಟಿಯಿಂದ ಪಾಲಿಕೆ ನಿವೃತ್ತ ಆಯುಕ್ತರ ಹೆಸರೇ ಮಾಯ – ಬದುಕಿದ್ರೂ ಸತ್ತಿದ್ದಾರೆಂದು ದಾಖಲು

    ಮತದಾರ ಪಟ್ಟಿಯಿಂದ ಪಾಲಿಕೆ ನಿವೃತ್ತ ಆಯುಕ್ತರ ಹೆಸರೇ ಮಾಯ – ಬದುಕಿದ್ರೂ ಸತ್ತಿದ್ದಾರೆಂದು ದಾಖಲು

    ಧಾರವಾಡ: ಮತದಾರ ಪಟ್ಟಿಯಲ್ಲಿ (Voter Id Scam) ಬಳ್ಳಾರಿ ಮಹಾನಗರ ಪಾಲಿಕೆಯ ನಿವೃತ್ತ ಆಯುಕ್ತರ ಹೆಸರನ್ನೇ ಕೈಬಿಟ್ಟಿರುವ ಅಚ್ಚರಿದಾಯಕ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಅಷ್ಟೇ ಅಲ್ಲ ಅವರನ್ನು ಸತ್ತಿದ್ದಾರೆಂದು ದಾಖಲಿಸಲಾಗಿದೆ.

    ಡಾ.ಚೆನ್ನಬಸವರಾಜ ಶಿರಗುಪ್ಪಿ (Chennabasavaraja Shiraguppi) ಎಂಬವರ ಹೆಸರೇ ಇದೀಗ ಮತದಾರ ಪಟ್ಟಿಯಿಂದ ಡಿಲೀಟ್ ಆಗಿದೆ. ಶಿರಗುಪ್ಪಿ ಅವರು ಬಳ್ಳಾರಿಯ ಮಹಾನಗರ ಪಾಲಿಕೆ ಆಯುಕ್ತರಾಗಿ ಕೆಲಸ ಮಾಡಿ ನಿವೃತ್ತಿ ಹೊಂದಿದವರು. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ಹೋದ ಶಿರಗುಪ್ಪಿ ಅವರಿಗೆ, ಮಹಾನಗರ ಪಾಲಿಕೆ ಸಿಬ್ಬಂದಿ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರೇ ಇಲ್ಲ ಎಂದು ಹೇಳಿದ್ದಾರಂತೆ. ಸರ್ವೆ ಮಾಡಲು ಬಂದಾಗ ಶಿರಗುಪ್ಪಿ ಅವರು ಇಲ್ಲ ಎಂದು ಹೇಳಿದ ಒಂದೇ ಒಂದು ಕಾರಣಕ್ಕೆ ಅವರ ಹೆಸರನ್ನೇ ಮತದಾರ ಪಟ್ಟಿಯಿಂದ ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: PFI ಸೇರಿ ಪೋಸ್ಟರ್ – ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಬೊಮ್ಮಾಯಿ

    ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಸದ್ಯ 15 ಸಾವಿರ ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಇದರಲ್ಲಿ ಶಾಸಕ ಅರವಿಂದ ಬೆಲ್ಲದ ಅವರೂ ಶಾಮೀಲಾಗಿದ್ದಾರೆ. ಶಾಸಕ ಅರವಿಂದ ಬೆಲ್ಲದ ಅವರಿಗೆ ಸರ್ವೇ ಮಾಡಿಸಲು ಅಧಿಕಾರ ಕೊಟ್ಟವರಾದರೂ ಯಾರು? ಕಾಂಗ್ರೆಸ್ ಕಾರ್ಪೊರೇಟರ್‌ ಇರುವ ಏರಿಯಾದಲ್ಲೇ ಮತದಾರರ ಹೆಸರು ಡಿಲೀಟ್ ಆಗುತ್ತಿವೆ ಎಂಬ ಆರೋಪವನ್ನು ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಮಾಡಿದ್ದಾರೆ.

    ಮತದಾರ ಪಟ್ಟಿಯಲ್ಲಿ ಇತ್ತೀಚೆಗೆ ಸಾಕಷ್ಟು ಗೋಲ್‌ಮಾಲ್ ನಡೆಯುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ (Congress) ಮಾಡುತ್ತಲೇ ಬಂದಿದೆ. ಅಷ್ಟೇ ಏಕೆ ಆಡಳಿತಾರೂಢ ಬಿಜೆಪಿ (BJP) ಪಕ್ಷದ ಶಾಸಕರೇ ಆದ ಅರವಿಂದ ಬೆಲ್ಲದ (Arvind Bellad) ಅವರೇ ಮತದಾರ ಪಟ್ಟಿಯಲ್ಲಿ ಹೆಸರುಗಳು ಡಿಲೀಟ್ ಆಗಿವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಡಿಲೀಟ್ ಆಗುವುದು ಒತ್ತೊಟ್ಟಿಗಿರಲಿ. ಆದರೆ ಜೀವಂತವಾಗಿರುವವರನ್ನೇ ಅವರು ಜೀವಂತವಾಗಿಲ್ಲ ಎಂದು ಮತದಾರರ ಪಟ್ಟಿಯಿಂದ ಹೆಸರನ್ನೇ ತೆಗೆದು ಹಾಕಿರುವ ಪ್ರಕರಣ ಧಾರವಾಡದಲ್ಲಿ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿವಾದ- ಮುನಿಯಪ್ಪ, ರಮೇಶ್ ಕುಮಾರ್ ವಿರುದ್ಧ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    BJP ಸರ್ಕಾರ ಕರ್ನಾಟಕಕ್ಕೆ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ – ಡಿಕೆಶಿ

    ಬೆಂಗಳೂರು: ಐಟಿ-ಬಿಟಿ (ITBT), ಕೆಂಪೇಗೌಡರ ನಾಡು ಅಂತಾ ಕರೆಯುತ್ತಿದ್ದ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ `ಕಳಂಕಿತ ರಾಜ್ಯ’ ಅನ್ನೋ ಬಿರುದು ತಂದುಕೊಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕಿಡಿಕಾರಿದ್ದಾರೆ.

    ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ನಿರ್ಧಾರ ಕುರಿತು ಕೆಪಿಸಿಸಿ (KPCC) ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಜನ ನನ್ನ ಸೋಲಿಸಿಬಿಟ್ರು: ಎಂಟಿಬಿ ನಾಗರಾಜ್

    ಐಟಿ-ಬಿಟಿ, ಕೆಂಪೇಗೌಡರ ನಾಡು ಎಂದೇ ಕರೆಯುತ್ತಿದ್ದ ಕರ್ನಾಟಕಕ್ಕೆ ಕಳಂಕಿತ ರಾಜ್ಯ ಅನ್ನೋ ಬಿರುದನ್ನು ಬಿಜೆಪಿ ಸರ್ಕಾರ (BJP Government) ತಂದುಕೊಟ್ಟಿದೆ. ಪ್ರತಿಯೊಂದರಲ್ಲೂ ಭ್ರಷ್ಟ ರಾಜ್ಯ ಆಗಿದೆ. ಜನರು ತಮ್ಮ ಮತದಾನದ ಹಕ್ಕನ್ನಾದರೂ ಉಳಿಸಿಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ವೈಷ್ಣವಿ ಹಾಗೂ ವಿದ್ಯಾಭರಣ್ ಪರಿಚಯವಾಗಿದ್ದು 2017ರಲ್ಲಿ: ಚಾಕೋಲೇಟ್ ಬಾಯ್ ಸ್ಟೋರಿ

    ಕೇಂದ್ರ ಚುನಾವಣಾ ಆಯೋಗಕ್ಕೆ (Election Commission Of India) ವೋಟರ್ ಐಡಿ (Voter ID) ದುರುಪಯೋಗ ಮಾಡಿಕೊಂಡಿದ್ದಾರೆ ಅಂತ ದೆಹಲಿಯಲ್ಲಿ ದೂರು ನೀಡಿದ್ದೇವೆ. ಅದರಂತೆ ಉಪ ಆಯುಕ್ತರೇ ಇಲ್ಲಿ ಬಂದು, ಕ್ರಮ ತೆಗೆದುಕೊಂಡಿರುವುದು ಸ್ವಾಗತಾರ್ಹ. ಸರ್ಕಾರ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಕೆಲ ಅಧಿಕಾರಗಳನ್ನ ಅಮಾನತು ಮಾಡಿದ್ದಾರೆ. ಚುನಾವಣಾ ಆಯೋಗದ ಕ್ರಮವನ್ನ ಸ್ವಾಗತ ಮಾಡ್ತೇವೆ ಎಂದು ಹೇಳಿದ್ದಾರೆ.

    ಅಕ್ರಮ ಡೇಟಾ ವಾಪಸ್ ಪಡೆಯಬೇಕು ಅಂತ ಹೇಳಿದ್ದಾರೆ. ಡೇಟಾ ಈಗಾಗಲೇ ಬಿಜೆಪಿ (BJP) ನಾಯಕನ ಬಳಿ ಇದೆ. ಇದೊಂದು ಕ್ರಿಮಿನಲ್ ಕೆಲಸ. ಬಿಜೆಪಿ ಕೆಲ ಶಾಸಕರು ಇದರಲ್ಲಿ ಶಾಮೀಲಾಗಿದ್ದಾರೆ. ಇದಕ್ಕೆ ದಾಖಲೆಗಳು ಕೂಡಾ ಇವೆ. ಇಂತಹ ಅಕ್ರಮ ಬೊಮ್ಮಾಯಿ (Basavaraj Bommai) ಸರ್ಕಾರದ ಅವಧಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಆಗಿದೆ. ಯಾವ ನಾಯಕರು ಯಾರ ಸಂಪರ್ಕದಲ್ಲಿದ್ದಾರೆ ಅಂತಾ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    ಅಂಕಪಟ್ಟಿ ಸೇರಿದಂತೆ ಎಲ್ಲ ಮಾಹಿತಿ ಕಳವು ಮಾಡಲಾಗಿದೆ. ಈಗ ವೋಟ್‌ಗಳನ್ನು ಕದ್ದು ದುರ್ಬಳಕೆ ಮಾಡಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಳಂಕಿತ ರಾಜ್ಯ ಅಂತ ಹೆಸರು ಈ ಸರ್ಕಾರ ಕೊಟ್ಟಿದೆ. ರಾಜ್ಯದ ಜನರು ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಬೆಂಗಳೂರಿನ ಮೂರು ಕ್ಷೇತ್ರ ಮಾತ್ರವಲ್ಲ, 28 ಕ್ಷೇತ್ರ ಮತ್ತು ರಾಜ್ಯದ 224 ಕ್ಷೇತ್ರದ ಮತಗಳು ಕೂಡಾ ಸರಿ ಮಾಡೋ ಕೆಲಸ ಆಗಬೇಕು. ಅಕ್ರಮದಲ್ಲಿ ಭಾಗಿಯಾಗಿರೋ ರಾಜಕಾರಣಿ, ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳ ಹೆಸರು ಬಹಿರಂಗ ಆಗಬೇಕು. ನಮ್ಮ ಕಾಲದಲ್ಲಿ ಅಕ್ರಮ ಆಗಿದ್ದರೆ ನಮ್ಮ ಮೇಲೂ ದೂರು ಕೊಡಿ, ಕ್ರಮ ಆಗಲಿ ಎಂದು ಆಗ್ರಹಿಸಿದ್ದಾರೆ.

    ಅಕ್ರಮದಲ್ಲಿ ಬೊಮ್ಮಾಯಿ ಕಿಂಗ್‌ಪಿನ್: ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ವೋಟರ್ ಐಡಿ ಅಕ್ರಮದಲ್ಲಿ ಕಿಂಗ್‌ಪಿನ್ ಸಿಎಂ ಬೊಮ್ಮಾಯಿ ಆಗಿದ್ದಾರೆ. ಕೂಡಲೇ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

    ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ ಹೊಸ ಪಟ್ಟಿ ಆಗಬೇಕು. ನಿಷ್ಪಕ್ಷಪಾತವಾಗಿ ಚುನಾವಣಾ ಆಯೋಗ ತನಿಖೆ ಮಾಡಬೇಕು. ಜನರು ಯಾರನ್ನ ಬೇಕಾದ್ರೂ ಗೆಲ್ಲಿಸಲಿ. ಆದರೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಈ ಅಕ್ರಮ ತನಿಖೆ ಆಗಬೇಕು. ಅಕ್ರಮ ಮಾಡಿರೋ ಫ್ರಾಡ್‌ಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೋಟರ್‌ ಗೇಟ್‌ ಹಗರಣ – 3 ಕ್ಷೇತ್ರ ಉಸ್ತುವಾರಿಗಳ ಅಮಾನತುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ

    ವೋಟರ್‌ ಗೇಟ್‌ ಹಗರಣ – 3 ಕ್ಷೇತ್ರ ಉಸ್ತುವಾರಿಗಳ ಅಮಾನತುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ

    ಬೆಂಗಳೂರು: ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಪಟ್ಟಿಗೆ (Voter ID Scam) ಕನ್ನ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ (Election Commission of India) ಮಹತ್ವದ ನಿರ್ದೇಶನಗಳನ್ನು ನೀಡಿದೆ. ಕಾಂಗ್ರೆಸ್ ನಾಯಕರ ದೂರಿನ ಬಳಿಕ ರಾಜ್ಯ ಚುನಾವಣಾ ಆಯೋಗ (Election Commission of Karnataka) ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೆಲವು ಸೂಚನೆಗಳನ್ನು ರವಾನಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ನಿರ್ದೇಶಿಸಿದೆ.

    ವಿವಾದಿತ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹಾದೇವಪುರದಲ್ಲಿ ಮತದಾರರ ಪಟ್ಟಿ ಬಗ್ಗೆ ಪರಿಶೀಲನೆ ನಡೆಸಬೇಕು, ಮತದಾರರ ಸೇರ್ಪಡೆ ಮತ್ತು ಕೈ ಬಿಟ್ಟಿರುವ ಬಗ್ಗೆ 100% ಪರಿಶೀಲನೆಗೆ ಒಳಪಡಿಸಬೇಕು, ಈ ಕ್ಷೇತ್ರಗಳಲ್ಲಿ ಡಿಸೆಂಬರ್24 ರವರೆಗೂ ಮತದಾರರ ಪರಿಷ್ಕರಣೆಗೆ ಅವಧಿ ವಿಸ್ತರಿಸಬೇಕು ಎಂದು ಆಯೋಗ ಹೇಳಿದೆ. ಅಕ್ರಮದಲ್ಲಿ ಭಾಗಿಯಾದ ಆರೋಪದಲ್ಲಿ ಬಿಬಿಎಂಪಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಎಸ್.ರಂಗಪ್ಪ, ಶಿವಾಜಿನಗರ ಚಿಕ್ಕಪೇಟೆ ಕ್ಷೇತ್ರಗಳ ಉಸ್ತುವಾರಿ ಕೆ. ಶ್ರೀನಿವಾಸ್, ಮಹದೇವಪುರ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಉಪ ಆಯುಕ್ತರ ಅಮಾನತಿಗೆ ನಿರ್ದೇಶನ ನೀಡಿದ್ದು ಇಲಾಖೆ ತನಿಖೆಗೆ ನಿರ್ದೇಶಿಸಿದೆ. ಇದನ್ನೂ ಓದಿ: ಒಂದೇ ದಿನದಲ್ಲಿ ಮಹಿಳಾ ಆಯೋಗದ ದೂರುಗಳ ತನಿಖೆ ಪ್ರಾರಂಭಿಸಲು ಸೂಚನೆ: ಸಿಎಂ

    ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಬಿಎಂಪಿ ಹೊರಗಿನ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ. ಆರ್.ವಿಶಾಲ್, ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷಣಗೆ ಜವಾಬ್ದಾರಿ ‌ನೀಡಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಮೇಲ್ವಿಚಾರಣೆಗಾಗಿ, ಬಿಬಿಎಂಪಿ ಕೇಂದ್ರ ಭಾಗಕ್ಕೆ ಉಜ್ವಲ್ ಘೋಷ್, ಬಿಬಿಎಂಪಿ ಉತ್ತರಕ್ಕೆ ರಾಮಚಂದ್ರನ್ ಆರ್, ಬಿಬಿಎಂಪಿ ದಕ್ಷಿಣಕ್ಕೆ ಪಿ. ರಾಜೇಂದ್ರ ಚೋಳನ್, ಬೆಂಗಳೂರು ನಗರ ಭಾಗದ ಉಸ್ತುವಾರಿಯಾಗಿ ಡಾ.ಎನ್.ಮಂಜುಳಾಗೆ ಜವಾಬ್ದಾರಿ ನೀಡಿದೆ.

    ಈ ಎಲ್ಲ ಚಟುವಟಿಕೆಗಳ ಸಮನ್ವಯ ಮತ್ತು ಮೇಲುಸ್ತುವಾರಿಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಆಮ್ಲನ್ ಬಿಸ್ವಾಸ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ. ಇದರ ಜೊತೆಗೆ SSR ಚಟುವಟಿಕೆಗಳಲ್ಲಿ ಮಾನ್ಯತೆ ಹೊಂದಿದ ಪಕ್ಷಗಳ ಪ್ರತಿನಿಧಿಗಳ ಭಾಗಿಯಾಗಿಸಿಕೊಳ್ಳಲು ಸಿಇಓಗಳಿಗೆ ಆಯೋಗ ಸೂಚನೆ ನೀಡಿದೆ. ಇದನ್ನೂ ಓದಿ: ಓಲಾ, ಉಬರ್‌ ಆಟೋಗಳಿಗೆ ಶೇ.5 ಕಮಿಷನ್‌ ದರ ನಿಗದಿ

    Live Tv
    [brid partner=56869869 player=32851 video=960834 autoplay=true]

  • ವೋಟರ್ ಲಿಸ್ಟ್ ಹಗರಣ – ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್ ಬಂಧನ

    ವೋಟರ್ ಲಿಸ್ಟ್ ಹಗರಣ – ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್ ಬಂಧನ

    ಬೆಂಗಳೂರು: ನಗರದಲ್ಲಿ ಬಯಲಿಗೆ ಬಂದ ವೋಟರ್‌ಗೇಟ್‌ ಹಗರಣ (Voter ID Scam) ದಿನಕ್ಕೊಂದು ತಿರುವು ಪಡೆಯುತ್ತಿದೆ. ನಟೋರಿಯಸ್ ಚಿಲುಮೆ ಸಂಸ್ಥೆಯ ಸಿಬ್ಬಂದಿ ಒಬ್ಬೊಬ್ಬರಾಗಿ ಅಂದರ್ ಆಗುತ್ತಿದ್ದಾರೆ. ಇದೀಗ ಮುಖ್ಯ ಆರೋಪಿ ರವಿಕುಮಾರ್ ಆಪ್ತ ಲೋಕೇಶ್‌ನನ್ನು (Lokesh) ಪೊಲೀಸರು ಬಂಧಿಸಿದ್ದಾರೆ.

    ಚಿಲುಮೆ (Chilume) ಸಂಸ್ಥೆಯಿಂದ ಮತದಾರರ ದತ್ತಾಂಶ ಕಳವು ಪ್ರಕರಣದಲ್ಲಿ ಲೊಕೇಶ್ ಎರಡನೇ ಆರೋಪಿ ಆಗಿದ್ದು, ಕೇಸ್ ದಾಖಲಾದ ಬಳಿಕ ನಾಪತ್ತೆಯಾಗಿದ್ದ. ಇಂದು ಹಲಸೂರು ಗೇಟ್ ಪೊಲೀಸರು ಲೋಕೇಶ್‌ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ವೋಟರ್‌ಗೇಟ್‌ ಹಗರಣಕ್ಕೆ ಅಡ್ಡ ಆಗಿತ್ತಾ ಪ್ರಭಾವಿ ಶಾಸಕರ ಕಚೇರಿ?

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದೀವಿ. ಕಾಡುಗೋಡಿ ಮತ್ತು ಹಲಸೂರ್ ಗೇಟ್‍ನಲ್ಲಿ ದಾಖಲಾದ ಎರಡೂ ಎಫ್‍ಐಆರ್‌ನಲ್ಲಿ (FRI) ಲೋಕೇಶ್ ಹೆಸರು ಉಲ್ಲೇಖ ಆಗಿತ್ತು. ಲೋಕೇಶ್‍ನನ್ನು ಬಂಧಿಸಿ ಒಂದು ರೌಂಡ್ ವಿಚಾರಣೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆ ಮಾಡಲಾಗ್ತಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಾನ, ಮರ್ಯಾದೆ ಇದ್ದರೆ ಡಿಕೆಶಿ ರಾಜೀನಾಮೆ ನೀಡಲಿ: ಈಶ್ವರಪ್ಪ

    ಪ್ರಕರಣದ ಪ್ರಮುಖ ಆರೋಪಿ ಬಂಧಿತ ಕಿಂಗ್‍ಪಿನ್ ರವಿಕುಮಾರ್ ವಿಚಾರಣೆ ತೀವ್ರಗೊಂಡಿದೆ. ಚಿಲುಮೆಯ ಕೆಂಪೇಗೌಡ, ಧರ್ಮೇಶ್‍ನನ್ನು ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿವೆ. ಈ ವೇಳೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಚಿಲುಮೆ ಸಂಸ್ಥೆಯ ಕರಾರು ಪತ್ರಗಳು ಲಭ್ಯವಾಗಿವೆ. ಆರ್‌ಓಗಳ ಮೂಲಕವೇ ಮತಪಟ್ಟಿ ಪರಿಷ್ಕರಣೆಯಲ್ಲಿ ಚಿಲುಮೆ ಕೈಯಾಡಿಸಿರುವ ಶಂಕೆ ವ್ಯಕ್ತವಾಗುತ್ತಿದೆ. ಚಿಲುಮೆ ಮಾಹಿತಿ ಆಧರಿಸಿಯೇ ಆರ್‌ಓಗಳು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ. ಆದ್ರೂ ಈವರೆಗೂ ಕೇವಲ ಮೂವರು ಆರ್‌ಓಗಳನ್ನು ಸಸ್ಪೆಂಡ್ ಅಷ್ಟೇ ಮಾಡಲಾಗಿದೆ. ಅವರನ್ನು ಬಂಧಿಸಿ ವಿಚಾರಣೆ ನಡೆಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಎಲ್‍ಓ ಕಾರ್ಡ್ ಮಾಡಿಕೊಡದ ಆರ್‌ಓಗಳ ಮೇಲೆ ಸ್ಥಳೀಯ ಕಾರ್ಪೋರೇಟರ್‌ಗಳು ಮತ್ತು ಶಾಸಕರಿಂದ ಒತ್ತಡ ಹಾಕಿಸ್ತಿದ್ವಿ ಎಂಬ ವಿಚಾರವನ್ನು ರವಿಕುಮಾರ್ ವಿಚಾರಣೆ ವೇಳೆ ತಿಳಿದುಬಂದಿದೆ. ಬರೀ ಶಾಸಕರಷ್ಟೇ ಅಲ್ಲ, ಕಾರ್ಪೋರೆಷನ್ ಚುನಾವಣೆಗೆ ನಿಲ್ಲಲು ಬಯಸಿದ್ದ ಹಲವು ರಾಜಕಾರಣಿಗಳು ಕೂಡ ಚಿಲುಮೆಯಿಂದ ಮತ ಮಾಹಿತಿ ಖರೀದಿ ಮಾಡ್ತಿದ್ವು ಎಂಬ ಸ್ಫೋಟಕ ಸತ್ಯ ಬಯಲಾಗಿದೆ.

    Live Tv
    [brid partner=56869869 player=32851 video=960834 autoplay=true]