Tag: Wages

  • ವೇತನಕ್ಕೆ ಆಗ್ರಹಿಸಿ ಖಾಸಗಿ ಐಟಿಐ ಒಕ್ಕೂಟದಿಂದ ಬೆಂಗಳೂರಿಗೆ ಪಾದಯಾತ್ರೆ

    ವೇತನಕ್ಕೆ ಆಗ್ರಹಿಸಿ ಖಾಸಗಿ ಐಟಿಐ ಒಕ್ಕೂಟದಿಂದ ಬೆಂಗಳೂರಿಗೆ ಪಾದಯಾತ್ರೆ

    ಹುಬ್ಬಳ್ಳಿ: ಸಿಬ್ಬಂದಿ ವೇತನ ಅನುದಾನಕ್ಕೆ ಒತ್ತಾಯಿಸಿ ಖಾಸಗಿ ಐಟಿಐ ಸಂಘಟನೆಯಿಂದ ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ.

    ಸಂಘಟನೆ ನೂರಾರು ಸದಸ್ಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ನಗರದ ಮೂರುಸಾವಿರ ಮಠದಿಂದ ಆರಂಭಗೊಂಡಿರುವ ಈ ಪಾದಯಾತ್ರೆ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಮಾರ್ಗ ಮಧ್ಯೆ ವಿವಿಧ ಜಿಲ್ಲೆಯ ಸಿಬ್ಬಂದಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

    ಈ ಬಗ್ಗೆ ಮಾತನಾಡಿದ ಒಕ್ಕೂಟದ ರಾಜ್ಯ ಸಂಚಾಲಕ ಪ್ರದೀಪ್, ಸರ್ಕಾರ ಈ ಹಿಂದೆ ಐಟಿಐ ಕಾಲೇಜುಗಳಿಗೆ ಹಾಗೂ ಸಿಬ್ಬಂದಿಗೆ ನೀಡುತ್ತಿದ್ದ ಅನುದಾನವನ್ನು ನಿಲ್ಲಿಸಿದೆ. ಇದರಿಂದ ನೂರಾರು ಕುಟುಂಬಗಳು ಬೀದಿಗೆ ಬಂದಿವೆ. ಈ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗಾಗಿ ಸರ್ಕಾರ ನಮ್ಮ ಬೇಡಿಕೆಯನ್ನು ಪೂರೈಸಬೇಕು. ಇಲ್ಲದಿದ್ದರೆ ಬೆಂಗಳೂರಿನಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಕ್ರೋಸಾಫ್ಟ್ ಸಿಇಒ ಪುತ್ರ ನಿಧನ!

  • ಶಾಸಕರನ್ನ ಖರೀದಿಸಿ ಸರ್ಕಾರ ನಡೆಸಲಾಗುತ್ತೆ, ಸಿಬ್ಬಂದಿ ವೇತನ ನೀಡಲು ಆಗಲ್ವಾ – ಬಿಸಿಯೂಟ ನೌಕರರ ಪ್ರತಿಭಟನೆ

    ಶಾಸಕರನ್ನ ಖರೀದಿಸಿ ಸರ್ಕಾರ ನಡೆಸಲಾಗುತ್ತೆ, ಸಿಬ್ಬಂದಿ ವೇತನ ನೀಡಲು ಆಗಲ್ವಾ – ಬಿಸಿಯೂಟ ನೌಕರರ ಪ್ರತಿಭಟನೆ

    ಶಿವಮೊಗ್ಗ: ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಜಿಲ್ಲೆಯಲ್ಲಿ ಇಂದು ಪ್ರತಿಭಟನೆ ನಡೆಸಿದರು.

    ನಗರದ ಕೋರ್ಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಸಿಬ್ಬಂದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಬಂದ ದಿನದಿಂದ ಬಿಸಿಯೂಟ ಸಿಬ್ಬಂದಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಬಿಸಿಯೂಟ ಸಿಬ್ಬಂದಿಗೆ ವೇತನ ನೀಡುವಂತೆ ಹಲವು ದಿನದಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಅಲ್ಲದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಆದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದೆ ಎಂದರು.

    ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಿಲ್ಲ ಎಂದಾದರೆ ಸರ್ಕಾರ ಏಕೆ ನಡೆಸುತ್ತೀರಾ? ಶಾಸಕರುಗಳನ್ನು ಖರೀದಿ ಮಾಡಲು ಹಣವಿದೆ ಸಿಬ್ಬಂದಿಗೆ ವೇತನ ನೀಡಲು ನಿಮ್ಮ ಬಳಿ ಹಣ ಇಲ್ಲವೇ? ಎಂದು ಪ್ರಶ್ನಿಸಿದರು.

    ಇನ್ನಾದರೂ ಬಿಸಿಯೂಟ ಸಿಬ್ಬಂದಿಗೆ ವೇತನ ನೀಡಲು ಕ್ರಮ ಕೈಗೊಳ್ಳಿ. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಬಿಸಿಯೂಟದ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.

  • ತಾಯಿಯ ವೇತನ ಕೇಳಲು ಬಂದಿದ್ದ ಮಗನಿಗೆ ಬೆಂಕಿ ಇಟ್ಟು ಕೊಂದ್ರು!

    ತಾಯಿಯ ವೇತನ ಕೇಳಲು ಬಂದಿದ್ದ ಮಗನಿಗೆ ಬೆಂಕಿ ಇಟ್ಟು ಕೊಂದ್ರು!

    ರಾಂಚಿ: ತಾಯಿಯ ವೇತನ ಕೇಳಲು ಬಂದಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ.

    ಪನ್ನೂಲಾಲ್ ಸಾವೋ (38) ಕೊಲೆಯಾದ ವ್ಯಕ್ತಿ. ರವೀಂದ್ರ ಕುಮಾರ್ ಮೆಹ್ತಾ ಕೊಲೆ ಮಾಡಿದ ಆರೋಪಿ. ಡುಮರಾನ್ ಗ್ರಾಮದಲ್ಲಿ ಗುರುವಾರ ಘಟನೆ ನಡೆದಿದೆ.

    ಆರೋಪಿ ರವೀಂದ್ರ ಕುಮಾರ್ ಮೆಹ್ತಾ ಒಡೆತನದ ಸಿಜುವಾ-ಹದಾರಿ ಕಲ್ಲಿನ ಕ್ರಷರ್ ಘಟಕದಲ್ಲಿ ಪನ್ನೂಲಾಲ್ ತಾಯಿ ಕೆಲಸ ಮಾಡುತ್ತಿದ್ದಳು. ಆದರೆ ಕೆಲ ದಿನಗಳಿಂದ ಕೂಲಿ ನೀಡಿರಲಿಲ್ಲ. ಹೀಗಾಗಿ ಪನ್ನೂಲಾಲ್ ಕೂಲಿಯ ಹಣವನ್ನು ಕೊಡುವಂತೆ ಕೇಳಲು ಹೋಗಿದ್ದ.

    ರವೀಂದ್ರ ಹಾಗೂ ಪನ್ನೂಲಾಲ್ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಕೋಪಗೊಂಡ ರವೀಂದ್ರ, ಪನ್ನೂಲಾಲ್ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಆತನನ್ನು ಸಮೀಪದ ಬೇಲಿಯಲ್ಲಿ ಎಸೆದಿದ್ದಾರೆ ಎಂದು ಹಜಾರಿಬಾಗ್‍ನ ಗ್ರಾಮೀಣ ಪೊಲೀಸ್ ಉಪ ಅಧೀಕ್ಷಕ ವಿವೇಕಾನಂದ್ ತಿಳಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಪನ್ನೂಲಾಲ್ ನೋಡಿದ ಕೆಲ ಸ್ಥಳೀಯರು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪನ್ನೂಲಾಲ್ ಮೃತಪಟ್ಟಿದ್ದಾನೆ.

    ಮೃತನ ಸಂಬಂಧಿಕರು ನೀಡಿದ ದೂರಿನಲ್ಲಿ ರವೀಂದ್ರ ಸೇರಿದಂತೆ ಮೂವರು ಪನ್ನೂಲಾಲ್‍ನನ್ನು ಕಟ್ಟಿ ಹಾಕಿ ಬಳಿಕ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಕೂಲಿ ಕೇಳಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ- ಸಾವು ಬದುಕಿನ ಮಧ್ಯೆ ಕಾರ್ಮಿಕ ಹೋರಾಟ

    ಕೂಲಿ ಕೇಳಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ- ಸಾವು ಬದುಕಿನ ಮಧ್ಯೆ ಕಾರ್ಮಿಕ ಹೋರಾಟ

    ಬೆಂಗಳೂರು: ಟ್ರ್ಯಾಕ್ಟರ್ ಕೆಲಸದ ಕೂಲಿ ಕೇಳಲು ಹೋದ ಕಾರ್ಮಿಕನ ಮೇಲೆ ತೋಟದ ಮಾಲೀಕ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಗಿರೀಶ್ ಹಲ್ಲೆಗೊಳಗಾದ ವ್ಯಕ್ತಿ. ತೋಟದ ಮನೆಯಲ್ಲಿ ಕೂಡಿ ಹಾಕಿ ಮಾಲೀಕ ರಮ್‍ನಾಯಕ್ ಮತ್ತು ಆತನ ಚೇಲಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಗಿರೀಶ್ ಶನಿವಾರ ಬೆಂಗಳೂರಿನ ಕಗ್ಗಲಿಪುರದ ಬಾದೆಕಟ್ಟೆಯ ತೋಟದ ಮನೆಗೆ ಹೋಗಿದ್ದರು. ಆದರೆ ಶನಿವಾರ ಮತ್ತೆ ಮನೆಗೆ ವಾಪ್ಸಾಗಿರಲಿಲ್ಲ. ಜೊತೆಗೆ ಫೋನ್ ಸ್ವಿಚ್ ಆಫ್ ಆಗಿತ್ತು. ಈ ವೇಳೆ ಸಂಶಯಗೊಂಡ ಕುಟುಂಬಸ್ಥರು ಬಾದೆಕಟ್ಟೆ ಗ್ರಾಮದ ತೋಟದ ಮನೆಗೆ ಹೋಗಿ ನೋಡಿದಾಗ ಗಿರೀಶ್ ಸಾವು ಬದುಕಿನ ನಡುವೆ ನರಳಾಡುತ್ತಿದ್ದರು. ಕೂಡಲೇ ಗಿರೀಶ್ ನನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಈ ಸಂಬಂಧ ಬೆಂಗಳೂರು ಹೊರವಲಯದ ಕಗ್ಗಲೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇತ್ತ ಮಾಲೀಕನ ಮತ್ತವನ ಬಂಟರ ವಿರುದ್ಧ ದೂರು ಕೊಟ್ಟರು ಕೇವಲ ಸ್ಟೇಷನ್‍ಗೆ ಕರೆಸಿ ಬಿಟ್ಟು ಕಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಾತ್ರವಲ್ಲದೇ ಆರೋಪಿಗಳನ್ನು ಬಂಧಿಸುವಂತೆ ಗಿರೀಶ್ ಕಡೆಯವರು ಶನಿವಾರ ರಾತ್ರಿ ರಸ್ತೆ ತಡೆದು ಪ್ರತಿಭಟಿಸಿದ್ದರು.